ಹುಬ್ಬಳ್ಳಿ: ತಮ್ಮ ಹಳೆ ಸ್ನೇಹಿತರು ಸಂಬಂಧಿಕರನ್ನು ನೋಡಿ ಭಾವುಕಾರದ ಸಿಎಂ ಬಸವರಾಜ ಬೊಮ್ಮಾಯಿ ತಮ್ಮ ಹುಟ್ಟೂರಿನಲ್ಲಿ ಕಣ್ಣೀರು ಹಾಕಿದರು. ಧಾರವಾಡ ಜಿಲ್ಲೆಯ ಕುಂದಗೋಳ ತಾಲೂಕಿನಲ್ಲಿರುವ ತಮ್ಮ ತಂದೆ ತಾಯಿ ಜನಿಸಿದ ಬಾಳಿ ಬದುಕಿದ ಕಮಡೊಳ್ಳಿ ಗ್ರಾಮಕ್ಕೆ ಭೇಟಿ ನೀಡಿದ್ದು ಆ ಸಂದರ್ಭ ತಮ್ಮ ಬಾಲ್ಯದ ನೆನಪು ಮೆಲುಕು ಹಾಕಿ ಕಣ್ಣೀರಿಟ್ಟರು. ಇದೇ ಸಂದರ್ಭ ಅವರು ಸಿಎಂ ಹುದ್ದೆಗೆ ಏರಲು ಸ್ನೇಹಿತರ ಸಹಾಯವನ್ನು ಸಿಎಂ ಬೊಮ್ಮಾಯಿ ನೆನೆದರು. ಇದೇ ಸಂದರ್ಭ ಮುಖ್ಯಮಂತ್ರಿ ಬೊಮ್ಮಾಯಿ …
Read More »ಕಾಡುಕೋಣ ಬೇಟೆಯಾಡಿ ಮಾಂಸ ಸಾಗಾಟ ಮಾಡುತ್ತಿದ್ದ ಇಬ್ಬರನ್ನು ಅರಣ್ಯ ಇಲಾಖೆ ತಂಡ ಬಂಧಿಸಿದೆ.
ಖಾನಾಪುರ: ತಾಲೂಕಿನ ನಂದಗಡದಲ್ಲಿ ಕಾಡುಕೋಣ ಬೇಟೆಯಾಡಿ ಮಾಂಸ ಸಾಗಾಟ ಮಾಡುತ್ತಿದ್ದ ಇಬ್ಬರನ್ನು ಅರಣ್ಯ ಇಲಾಖೆ ತಂಡ ಬಂಧಿಸಿದೆ. ಡೆವಿಡ್ ಫಿಗೇರ್ ಮತ್ತು ಹಸನ್ ಬೇಪಾರಿ ಬಂಧಿತರು. ಇವರಿಂದ 11 ಕೆಜಿ ಕಾಡುಕೋಣದ ಮಾಂಸ, ಕೃತ್ಯಕ್ಕೆ ಬಳಸಿದ ದ್ವಿಚಕ್ರ ವಾಹನ, ೆರಡು ಮೊಬೈಲ್ ಫೋನ್ ಗಳನ್ನು ವಶಪಡಿಸಿಕೊಳ್ಳಲಾಗಿದೆ. ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಬೆಳಗಾವಿ ವೃತ್ತದ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಮಂಜುನಾಥ ಚವ್ಹಾಣ ಅವರ …
Read More »ಬೆಳಗಾವಿ ನಗರದ ಕ್ಲಬ್ ರೋಡ್ ನಲ್ಲಿರುವ ಸಿಪಿಇಡಿ ಗ್ರೌಂಡ್‌ನಲ್ಲಿ17ರಂದು ಅಪ್ಪು ಜನ್ಮದಿನೋತ್ಸವ
ಬೆಳಗಾವಿ: ಡಾ. ಪುನೀತ್ ರಾಜಕುಮಾರ್ ಅವರ ಹುಟ್ಟು ಹಬ್ಬದ ಪ್ರಯುಕ್ತ ಮಾರ್ಚ್ 17ರಂದು ‘ಅಪ್ಪು ಜನ್ಮದಿನೋತ್ಸವ’ ಕಾರ್ಯಕ್ರಮ ಆಯೋಜಿಸಲಾಗಿದೆ. ನಗರದ ಕ್ಲಬ್ ರೋಡ್ ನಲ್ಲಿರುವ ಸಿಪಿಇಡಿ ಗ್ರೌಂಡ್‌ನಲ್ಲಿ ಅದ್ಧೂರಿ ಸಮಾರಂಭವನ್ನು ಅಪ್ಪು ಅಭಿಮಾನಿ ಬಳಗ ಅಯೋಜಿಸಿದೆ. ಅಂದು ಸಂಜೆ 4.30ರಿಂದ ಕಾರ್ಯಕ್ರಮಗಳು ಆರಂಭವಾಗಲಿದ್ದು, ಈ ಶುಭ ಸಂದರ್ಭದಲ್ಲಿ ಮಮತ ಕ್ರಿಯೇಷನ್ ಬ್ಯಾನರ್‌ನಲ್ಲಿ ನಿರ್ಮಾಣವಾಗಿರುವ ಪರ್ಯಾಯ ಕನ್ನಡ ಚಲನಚಿತ್ರದ ಫಸ್ಟ್ ಲುಕ್ ಪೋಸ್ಟರ್ ಬಿಡುಗಡೆ ಮಾಡಲಾಗುವುದು ಎಂದು ಅಪ್ಪು ಜನ್ಮದಿನೋತ್ಸವ ದ ಸಂಘಟಕ …
Read More »ಮಾ.20ರಂದುಬೆಳಗಾವಿಗೆ ಆಗಮಿಸಲಿದ್ದಾರೆ ರಾಹುಲ್ ಗಾಂಧಿ
ಬೆಳಗಾವಿ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮಾ.20ರಂದು ಬೆಳಗಾವಿಗೆ ಆಗಮಿಸಲಿದ್ದಾರೆ. ಕರ್ನಾಟಕ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ರಾಹುಲ್ ಗಾಂಧಿ ಆಗಮಿಸುತ್ತಿದ್ದಾರೆ. ರಾಹುಲ್ ಗಾಂಧಿ ಭೇಟಿ ಹಿನ್ನೆಲೆಯಲ್ಲಿ, ಈ ಕಾರ್ಯಕ್ರಮವನ್ನು ಯಶಸ್ವಿಗೊಳಿಸಲು ದಿನಾಂಕ 16-03-2023 ರಂದು ಬೆಳಿಗ್ಗೆ 10 ಗಂಟೆಗೆ ಬೆಳಗಾವಿ ಜಿಲ್ಲಾ ಕಾಂಗ್ರೆಸ್ ಸಮಿತಿ ಕಚೇರಿಯಲ್ಲಿ ಬೆಳಗಾವಿ ವಿಭಾಗದ ಕಾಂಗ್ರೆಸ್ ಮುಖಂಡರುಗಳ ಪೂರ್ವಭಾವಿ ಸಭೆಯನ್ನು ಆಯೋಜಿಸಲಾಗಿದೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ ಈ ಸಭೆಯನ್ನು ಕರೆದಿದ್ದಾರೆ. ಈ ಸಭೆಯಲ್ಲಿ ಚಿಕ್ಕೋಡಿ, ಬೆಳಗಾವಿ …
Read More »ಚುನಾವಣಾ ಆಯೋಗದ ಮಾರ್ಗಸೂಚಿಯನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು.
ಬೆಳಗಾವಿ: ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಈಗಾಗಲೇ ರಚಿಸಲಾಗಿರುವ ತಂಡಗಳು ಕಾರ್ಯೋನ್ಮುಖರಾಗಿ ಚುರುಕಿನಿಂದ ಕೆಲಸ ಮಾಡಬೇಕು ಎಂದು ಜಿಲ್ಲಾ ಚುನಾವಣಾಧಿಕಾರಿಯೂ ಆಗಿರುವ ಜಿಲ್ಲಾಧಿಕಾರಿ ನಿತೇಶ್ ಪಾಟೀಲ ತಿಳಿಸಿದರು. ಮುಂಬರುವ ವಿಧಾನಸಭಾ ಚುನಾವಣಾ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ಸೋಮವಾರ (ಮಾ.13) ನಡೆದ ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಗಡಿಭಾಗದ ಚೆಕ್ ಪೋಸ್ಟ್ ಗಳಲ್ಲಿ ಈಗಾಗಲೇ ನಿಯೋಜಿಸಲಾಗಿರುವ ತಂಡಗಳು ಪ್ರತಿಯೊಂದು ವಾಹನಗಳ ಮೇಲೆ ನಿಗಾ ವಹಿಸಬೇಕು. ಪ್ರತಿಯೊಂದು ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ …
Read More »ಮಾ.16ರಂದು ಶಿವಚರಿತ್ರ’ ಉದ್ಘಾಟನಾ ಸಮಾರಂಭ
ಬೆಳಗಾವಿ: ಇಲ್ಲಿನ ಶಹಾಪುರದ ಛತ್ರಪತಿ ಶಿವಾಜಿ ಉದ್ಯಾನವನ ಬಳಿ ಮಾ.16ರಂದು ಬೆಳಗಾವಿ ದಕ್ಷಿಣ ಕ್ಷೇತ್ರದ ಶಾಸಕ ಅಭಯ ಪಾಟೀಲ ಅವರ ಕನಸಿನ ಕೂಸಾದ ‘ಶಿವಚರಿತ್ರ’ ಉದ್ಘಾಟನಾ ಸಮಾರಂಭ ನಡೆಯಲಿದೆ. ಸಂಜೆ 5.30ಕ್ಕೆ ಕೇಂದ್ರ ಸಚಿವೆ ಸ್ಮೃತಿ ಇರಾನಿ ಹಾಗೂ ಶಾಸಕ ಬಸನಗೌಡ ಪಾಟೀಲ ಯತ್ನಾಳ ಉದ್ಘಾಟಿಸಲಿದ್ದಾರೆ. ಇನ್ನೂ ಹಲವು ಗಣ್ಯರು ಕಾರ್ಯಕ್ರಮದಲ್ಲಿ ಉಪಸ್ಥಿತರಿರುವರು ಎಂದು ಪ್ರಕಟಣೆ ತಿಳಿಸಿದೆ.
Read More »ನಮ್ಮ ಪಕ್ಷಕ್ಕೆ ಬರ್ತಿಯೋ ಇಲ್ಲ ಸಿಡಿ ಬಿಡಲೋ ಎಂದು ಡಿ.ಕೆ.ಶಿ. ಸಚಿವರೊಬ್ಬರನ್ನು ಬೆದರಿಸುತ್ತಿದ್ದಾರೆ:. ರಮೇಶ್ ಜಾರಕಿಹೊಳಿ
ಬೆಳಗಾವಿ: ಮಾಜಿ ಸಚಿವ ರಮೇಶ್ ಜಾರಕಿಹೊಳಿ ಕೆ.ಪಿ.ಸಿ.ಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ವಿರುದ್ಧ ಮತ್ತೊಂದು ಗಂಭೀರ ಆರೋಪ ಮಾಡಿದ್ದು, ಮಂತ್ರಿಯೋರ್ವರಿಗೆ ಡಿ.ಕೆ.ಶಿ ಕಾಂಗ್ರೆಸ್ ಸೇರ್ತಿಯಾ ಇಲ್ಲ ಸಿಡಿ ಬಿಡುಗಡೆ ಮಾಡ್ಲಾ ಎಂದು ಬೆದರಿಕೆ ಹಾಕಿದ್ದಾರೆ ಎಂದು ಆರೋಪಿಸಿದ್ದಾರೆ. ಡಿ.ಕೆ.ಶಿವಕುಮಾರ್ ಸಚಿವರೊಬ್ಬರನ್ನು ಬೆದರಿಸುತ್ತಿದ್ದಾರೆ. ನಮ್ಮ ಪಕ್ಷಕ್ಕೆ ಬರ್ತಿಯೋ ಇಲ್ಲ ಸಿಡಿ ಬಿಡಲೋ ಎಂದು ಹೇಳುತ್ತಿದ್ದಾರೆ ಎಂದು ಆರೋಪಿಸುವ ಮೂಲಕ ರಾಜ್ಯದಲ್ಲಿ ಮತ್ತೆ ಸಿಡಿ ರಾಜಕಾರಣ ಪ್ರಸ್ತಾಪಿಸಿದ್ದಾರೆ. ನಾವು ಯುದ್ಧ ಮಾಡುವವರು ಹೊರತು ಷಡ್ಯಂತ್ರ ಮಾಡುವವರಲ್ಲ. …
Read More »ಪ್ರಜಾಧ್ವನಿ ಯಾತ್ರೆ15ರಂದು:ಸತೀಶ ಜಾರಕಿಹೊಳಿ
ಗೋಕಾಕ (ಬೆಳಗಾವಿ ಜಿಲ್ಲೆ): ‘ನಾನು ಪಕ್ಷದ ಸಿದ್ಧಾಂತರ ತಳಹದಿ ಮೇಲೆ ಚುನಾವಣೆಗೆ ಹೋಗುತ್ತೇನೆ ಹೊರತು; ಕೌಟುಂಬಿಕ ವಿಚಾರಗಳನ್ನು ಅನುಸರಿಸುವುದಿಲ್ಲ’ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ, ಯಮಕನಮರಡಿ ಶಾಸಕ ಸತೀಶ ಜಾರಕಿಹೊಳಿ ಹೇಳಿದರು. ‘ಯಮಕನಮರಡಿ ಕ್ಷೇತ್ರದಲ್ಲಿ ಬಿಜೆಪಿಯಿಂದ ರಮೇಶ ಜಾರಕಿಹೊಳಿ ಅವರನ್ನು ಕಣಕ್ಕಿಳಿಸುವ ಯತ್ನ ನಡೆದಿದೆ’ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ‘ಕಾಂಗ್ರೆಸ್ ಪಕ್ಷದ ಸಿದ್ಧಾಂತಗಳೇ ನನಗೆ ಮುಖ್ಯ. ಯಮಕನಮರಡಿ, ಗೋಕಾಕ ಕ್ಷೇತ್ರದಲ್ಲಿ ಯಾರು ಯಾರ ವಿರುದ್ಧ ಸ್ಪರ್ಧಿಸುತ್ತಾರೆ, ನನ್ನ ವಿರುದ್ಧ ಯಾರು …
Read More »ಮಾರ್ವಲಸ್ ಬೆಳಗಾಂ ಅಡ್ಮಿನ್ ರಾಖೇಶ್ ನಂದಗಡಕರ್&ಸಿಬ್ಬಂದಿ ಮೇಲೆ ಹಲ್ಲೆ ನಡೆಸಿದ ವಿಶಾಲ ಕಂಟ್ರಿ ಸೈಡ್ ಹೊಟೆಲ್ ಸಿಬ್ಬಂದಿ
ಬೆಳಗಾವಿ: ಊಟ ಮಾಡಲು ಹೋದ ತಮ್ಮ ತಂಡದ ಮೇಲೆ ಹೊಟೆಲ್ ಸಿಬ್ಬಂದಿ ತೀವ್ರತರವಾಗಿ ಹಲ್ಲೆ ನಡೆಸಿದ್ದಾರೆ ಎಂದು ಬೆಳಗಾವಿಯ ಸೋಶಿಯಲ್ ಮೀಡಿಯಾ ಮಾರ್ವಲಸ್ ಬೆಳಗಾಂ ಅಡ್ಮಿನ್ ರಾಖೇಶ್ ನಂದಗಡಕರ್ ಪೊಲೀಸ್ ದೂರು ದಾಖಲಿಸಿದ್ದಾರೆ. ಸುಳಗಾದ ವಿಶಾಲ ಕಂಟ್ರಿ ಸೈಡ್ ಎನ್ನುವ ಹೊಟೆಲ್ ಗೆ ಮಾರ್ಚ್ 9ರ ರಾತ್ರಿ ತಾವು ಸುಮಾರು 25 ಜನರು ಊಟಕ್ಕೆ ತೆರಳಿದ್ದಾಗಿಯೂ, ಆ ವೇಳೆ ಅಲ್ಲಿನ ಸಿಬ್ಬಂದಿ ಅತ್ಯಂತ ಕೆಟ್ಟದಾಗಿ ನಡೆದುಕೊಂಡಿದ್ದಲ್ಲದೆ, ಜಗಳ ಮಾಡಿ ಹೊಟೆಲ್ ಪಾತ್ರೆಗಳಿಂದ …
Read More »ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಅನ್ನದಾಸೋಹ ಕಾರ್ಯಕ್ರಮ
ಶ್ರೇಷ್ಠ ಫೌಂಡೇಶನ್ ವತಿಯಿಂದ ಅನ್ನಸಂತರ್ಪಣೆ ಕಾರ್ಯಕ್ರಮ ಸವದತ್ತಿ : ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಚೇರಮನ್ ರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಅನ್ನದಾಸೋಹ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಪ್ರತಿ ಶನಿವಾರ ಶ್ರೇಷ್ಠ ಫೌಂಡೇಶನ್ ವತಿಯಿಂದ ವಿವಿಧ ಕಡೆಗಳಲ್ಲಿ ಅನ್ನ ಸಂತರ್ಪಣೆ ಕಾರ್ಯಕ್ರಮವನ್ನು ಸಂತೋಷ ಜಾರಕಿಹೊಳಿ ಅವರು ಹಮ್ಮಿಕೊಂಡಿದ್ದು ಈ ಶನಿವಾರ ಸವದತ್ತಿ ತಾಲೂಕಿನ ಹಿರೇಬೂದನೂರ ಗ್ರಾಮದಲ್ಲಿ ಶ್ರೀ ಡೆಂಗಿ ಸಿದ್ದೇಶ್ವರ ದೇವಸ್ಥಾನದ ಆವರಣದಲ್ಲಿ ಅನ್ನ ಸಂತರ್ಪಣೆ …
Read More »