Breaking News

ಬೆಳಗಾವಿ

ಐದೇ ದಿನದಲ್ಲಿ 9 ಮಂದಿಗೆ ತಲಾ 20 ವರ್ಷ ಶಿಕ್ಷೆ; ನ್ಯಾಯಾಧೀಶರ ಮಹತ್ವದ ತೀರ್ಪು

ಬೆಳಗಾವಿ: ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ ಎಸಗಿದ ಪ್ರತ್ಯೇಕ ನಾಲ್ಕು ಪ್ರಕರಣಗಳಲ್ಲಿ ಕೇವಲ ಐದು ದಿನಗಳಲ್ಲಿ 9 ಜನ ಆರೋಪಿಗಳಿಗೆ ತಲಾ 20 ವರ್ಷ ಕಠಿಣ ಕಾರಾಗೃಹ ಶಿಕ್ಷೆ ವಿಧಿಸುವ ಮೂಲಕ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ವಿಶೇಷ ಶೀಘ್ರಗತಿ ಫೋಕ್ಸೋ ನ್ಯಾಯಾಲಯದ ನ್ಯಾಯಾಧೀಶರು ಮಹತ್ವದ ತೀರ್ಪು ನೀಡುವ ಮೂಲಕ ಸಮಾಜದಕ್ಕೆ ಉತ್ತಮ ಸಂದೇಶ ನೀಡಿದ್ದಾರೆ.   ಬಾಲಕಿಯರ ಮೇಲೆ ನಡೆದ ದೌರ್ಜನ್ಯ ಪ್ರಕರಣಗಳ ವಿಚಾರಣೆ ನಡೆಸಿದ ನ್ಯಾಯಾಧೀಶರಾದ ಸಿ.ಎಂ. …

Read More »

ಚಂದ್ರ ಬಾಬು ನಾಯಡು ಹೇಳಿಕೆಯಿಂದ ನಂದಿನಿ ತುಪ್ಪಕ್ಕೆ ಭಾರಿ ಡಿಮಾಂಡ್.:ಬಾಲಚಂದ್ರ ಜಾರಕಿಹೊಳಿ

ಬೆಳಗಾವಿ -ತಿರುಪತಿ ಲಡ್ಡು ಬಗ್ಗೆ ಆಂದ್ರಪ್ರದೇಶ ಸಿಎಂ ಚಂದ್ರಬಾಬು ನಾಯ್ಡು ಹೇಳಿಕೆ ನೀಡುವ ಮೂಲಕ ದೇಶದಲ್ಲೇ ನಂದಿನಿ ತುಪ್ಪಕ್ಕೆ ಬಾರೀ ಬೇಡಿಕೆ ಬಂದಿದೆ ಎಂದು ಕೆಎಂಎಫ್‌ ಮಾಜಿ ಅಧ್ಯಕ್ಷ, ಶಾಸಕ ಬಾಲಚಂದ್ರ ಜಾರಕಿಹೊಳಿ ಹೇಳಿದರು. ನಗರದಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನನ್ನ ಅಧಿಕಾರವಧಿಯಲ್ಲಿ 4 ವರ್ಷದ ಹಿಂದೆ ಕೆಎಂಎಫ್‌ನ ನಂದಿನಿ ತುಪ್ಪ ದೇಶದ ದೊಡ್ಡ ದೇವಸ್ಥಾನ ತಿರುಪತಿ ಬಾಲಾಜಿ ಮಂದಿರದ ಲಡ್ಡು ಪ್ರಸಾದಕ್ಕೆ ಪೂರೈಕೆಯಾಗುತ್ತಿತ್ತು. ತಿರುಪತಿ ಬಾಲಾಜಿ ಮಂದಿರದ …

Read More »

ಗೋಕಾಕ ಮಹಾಲಕ್ಷ್ಮೀ ಬ್ಯಾಂಕ್‌ ಅವ್ಯವಹಾರ ಪ್ರಕರಣ: 14 ಆರೋಪಿಗಳ ಆಸ್ತಿ ಜಪ್ತಿ : ಎಸ್ ಪಿ ಗುಳೇದ್

ಗೋಕಾಕ ಮಹಾಲಕ್ಷ್ಮೀ ಬ್ಯಾಂಕ್‌ ಅವ್ಯವಹಾರ ಪ್ರಕರಣ: 14 ಆರೋಪಿಗಳ ಆಸ್ತಿ ಜಪ್ತಿ : ಎಸ್ ಪಿ ಗುಳೇದ್ ಬೆಳಗಾವಿ: ಮಹಾಲಕ್ಷ್ಮೀ ಕೋ ಆಪ್ ರೇಟಿವ್ ಬ್ಯಾಂಕ್ ನ ಅವ್ಯವಹಾರಕ್ಕೆ ಸಂಬಂಧಿಸಿದಂತೆ 14 ಜನರ ಆರೋಪಿಗಳ ಆಸ್ತಿಯನ್ನು ಮುಟ್ಟುಗೋಲು ಹಾಕಿಕೊಳ್ಳಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಭೀಮಾಶಂಕರ ಗುಳೇದ್ ಹೇಳಿದರು. ಸುದ್ದಿಗೋಷ್ಟಿಯಲ್ಲಿ ಮಾಹಿತಿ ತಿಳಿಸಿದ ಅವರು, ಗೋಕಾಕ ಮಹಾಲಕ್ಷ್ಮೀ ಅರ್ಬನ್ ಕೋ ಆಪ್ ಕ್ರೆಡಿಟ್ ಬ್ಯಾಂಕಿನಲ್ಲಿ 74.86 ಕೋಟಿ ಅವ್ಯವಹಾರ ನಡೆದಿರುವ …

Read More »

ಈದ್ ಮಿಲಾದ್ ಮೆರವಣಿಗೆ ಮುಗಿಸಿ ಹೋಗುವಾಗ ತಲವಾರ್ ದಿಂದ ಹೊಡೆದಾಟ: ಮೂವರಿಗೆ ಗಾಯ

ಬೆಳಗಾವಿ: ನಗರದಲ್ಲಿ ಈದ್ ಮಿಲಾದ್ ಮೆರವಣಿಗೆ ಮುಗಿಸಿ ವಾಪಸ್ ಹೋಗುತ್ತಿದ್ದಾಗ ಎರಡು ಗುಂಪುಗಳ ಯುವಕರು ತಲವಾರ್ ದಿಂದ ಹೊಡೆದಾಡಿಕೊಂಡಿದ್ದು, ಮೂವರು ಗಾಯಗೊಂಡ ಘಟನೆ ಇಲ್ಲಿಯ ರುಕ್ಮಿಣಿ ನಗರದಲ್ಲಿ ರವಿವಾರ ರಾತ್ರಿ ನಡೆದಿದೆ. ರುಕ್ಮಿಣಿ ನಗರ ಹಾಗೂ ಉಜ್ವಲ್ ನಗರದ ಯುವಕರ ಮಧ್ಯೆ ಈ ಗಲಾಟೆ ಆಗಿದ್ದು, ಮೆರವಣಿಗೆ ಮುಗಿಸಿಕೊಂಡು ಹೋಗುವಾಗ ಒಬ್ಬರಿಗೊಬ್ಬರು ಸಿಟ್ಟಿನಿಂದ ನೋಡಿದ್ದಕ್ಕೆ ಹೊಡೆದಾಡಿಕೊಂಡಿದ್ದಾರೆ. ತಲ್ವಾರ್ ಹಾಗೂ ಚಾಕುವಿನಿಂದ ಘರ್ಷಣೆ ಹಾಡಿದಿತ್ತು ಘಟನೆಯಲ್ಲಿ ಹೊಟ್ಟೆ ಹಾಗೂ ಕತ್ತಿನ ಭಾಗಕ್ಕೆ ಗಾಯವಾಗಿದೆ. …

Read More »

ಮಳೆ ಮಧ್ಯೆಯೂ ನಗರದಲ್ಲಿ ಭಾನುವಾರ ಈದ್‌-ಮಿಲಾದ್‌ ಹಬ್ಬದ ಮೆರವಣಿಗೆ

ಬೆಳಗಾವಿ: ಮಳೆ ಮಧ್ಯೆಯೂ ನಗರದಲ್ಲಿ ಭಾನುವಾರ ಈದ್‌-ಮಿಲಾದ್‌ ಹಬ್ಬದ ಮೆರವಣಿಗೆ ಸಂಭ್ರಮದಿಂದ ನೆರವೇರಿತು. ಮುಸ್ಲಿಮರೊಂದಿಗೆ ಹಿಂದೂಗಳೂ ಭಾಗವಹಿಸಿ ಭಾವೈಕ್ಯತೆ ಮೆರೆದರು. ನಗರದಲ್ಲಿ ಸೆ.16ರಂದೇ ಈದ್‌-ಮಿಲಾದ್‌ ಹಬ್ಬವನ್ನು ಮುಸ್ಲಿಮರು ಆಚರಿಸಿದ್ದಾರೆ. ಅಂದೇ ಬೆಳಿಗ್ಗೆ ಈದ್‌-ಮಿಲಾದ್‌ ಮೆರವಣಿಗೆ ನಡೆಯಬೇಕಿತ್ತು. ಆದರೆ, ಅದರ ಮಾರನೇ ದಿನವೇ( ಸೆ.17) ಸಾರ್ವಜನಿಕ ಗಣೇಶ ಮೂರ್ತಿಗಳ ವಿಸರ್ಜನೆ ಮೆರವಣಿಗೆ ಇತ್ತು. ಹಾಗಾಗಿ ಗಣೇಶನ ಮೆರವಣಿಗೆ ಮೊದಲು ಅದ್ದೂರಿಯಾಗಿ ನಡೆಯಲಿ ಹಾಗೂ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡಲು ಪೊಲೀಸರಿಗೂ ಅನುಕೂಲವಾಗಲೆಂದು ಮುಸ್ಲಿಮರು …

Read More »

ನಿವೇಶನ ವಿವಾದ: ಎರಡು ಗುಂಪುಗಳ ನಡುವೆ ಗಲಾಟೆ; ಕೊಂಡಸಕೊಪ್ಪದಲ್ಲಿ ಪೊಲೀಸ್‌ ಕಾವಲು

ಬೆಳಗಾವಿ: ತಾಲ್ಲೂಕಿನ ಕೊಂಡಸಕೊಪ್ಪ ಗ್ರಾಮದಲ್ಲಿ ಗುರುವಾರ ನಿವೇಶನ ವಿಚಾರಕ್ಕೆ ನಡೆದ ಜಗಳದಲ್ಲಿ, ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಸೇರಿ ನಾಲ್ವರ ಮೇಲೆ ಹಲ್ಲೆ ಮಾಡಲಾಗಿದೆ. ಬಸ್ತವಾಡ ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ವಿಠ್ಠಲ ಸಾಂಬ್ರೇಕರ್ ಅವರ ತಲೆಗೆ ತೀವ್ರ ಗಾಯವಾಗಿದ್ದು, ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಇವರ ಮೂವರು ಸ್ನೇಹಿತರು ಚಿಕಿತ್ಸೆ ಪಡೆದು ಮರಳಿದ್ದಾರೆ. ಕೊಂಡಸಕೊಪ್ಪದವರಾದ ಪುಂಡಲೀಕ ಕುಡಚೇಕರ, ಭೀಮಾ ದೇಮನ್ನವರ, ನಾಗಪ್ಪ ವಾಳಕೆ, ಗಜು ಡೋಂಗ್ರೆ, ಮೋನಪ್ಪ ಗುಜರಾನಟ್ಟಿ, ಶಂಕರ ಪಾಟೀಲ ಆರೋಪಿಗಳು. ಈಗಾಗಲೇ …

Read More »

74.87 ಕೋಟಿ ವಂಚನೆ: 14 ಸಿಬ್ಬಂದಿ ವಿರುದ್ಧ ದೂರು

ಬೆಳಗಾವಿ: ‘ಗೋಕಾಕದ ಮಹಾಲಕ್ಷ್ಮಿ ಅರ್ಬನ್ ಕೋ-ಆಪ್ ಕ್ರೆಡಿಟ್ ಬ್ಯಾಂಕ್‌ನಲ್ಲಿ ₹74.87 ಕೋಟಿ ವಂಚನೆ ಆಗಿದೆ. ಬ್ಯಾಂಕ್‌ನ ವ್ಯವಸ್ಥಾಪಕ, ಗುಮಾಸ್ತ ಸೇರಿ 14 ಆರೋಪಿಗಳ ವಿರುದ್ಧ ಪ್ರಕರಣ ದಾಖಲಾಗಿದ್ದು, ಅವರ ಬಂಧನಕ್ಕೆ ಮೂರು ತಂಡ ರಚಿಸಲಾಗಿದೆ’ ಎಂದು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಭೀಮಾಶಂಕರ ಗುಳೇದ ತಿಳಿಸಿದರು.   ‘ಪ್ರಕರಣ ಸಂಬಂಧ ಬ್ಯಾಂಕ್‌ನ ಅಧ್ಯಕ್ಷ ಜಿತೇಂದ್ರ ಬಾಳಾಸಾಹೇಬ ಮಾಂಗಳೇಕರ ದೂರು ದಾಖಲಿಸಿದ್ದಾರೆ. ದೊಡ್ಡ ಮೊತ್ತದ ಪ್ರಕರಣವಾದ್ದರಿಂದ ಇದನ್ನು ಸಿಐಡಿಗೆ ಹಸ್ತಾಂತರಿಸಲು ಪತ್ರ ಬರೆಯಲಾಗಿದೆ. …

Read More »

ಬೆಳಗಾವಿಯಲ್ಲಿ ಗಣೇಶೋತ್ಸವ ಮೆರವಣಿಗೆಗೆ ಜನಸಾಗರ

ಬೆಳಗಾವಿಯ ಶ್ಯಾಮಪ್ರಸಾದ್‌ ಮುಖರ್ಜಿ (ಎಸ್‌ಪಿಎಂ) ರಸ್ತೆಯಲ್ಲಿ ಬುಧವಾರ ಸಂಜೆಯೂ ಮುಂದುವರಿದ ಗಣೇಶ ಮೂರ್ತಿಗಳ ವಿಸರ್ಜನಾ ಮೆರವಣಿಗೆಯಲ್ಲಿ ಅಪಾರ ಸಂಖ್ಯೆಯ ಜನ ಸೇರಿದರು. ನಿರಂತರ 30 ತಾಸು ಮೆರವಣಿಗೆ ನಡೆಯಿತು

Read More »

ಗಣೇಶ ವಿಸರ್ಜನೆಯ ಅದ್ದೂರಿ ಮೆರವಣಿಗೆ: ಈದ್‌ ರ‍್ಯಾಲಿ ಮುಂದಕ್ಕೆ

ಬೆಳಗಾವಿ: ಗಣೇಶ ಮೂರ್ತಿಗಳ ವಿಸರ್ಜನೆಯ ಅದ್ದೂರಿ ಮೆರವಣಿಗೆಗೆ ತೊಡಕಾಗದಿರಲಿ ಹಾಗೂ ಕಾನೂನು ಮತ್ತು ಸುವ್ಯವಸ್ಥೆಯು ಸಮಸ್ಯೆ ಆಗದಿರಲಿ ಎಂಬ ಉದ್ದೇಶದಿಂದ ಸೋಮವಾರದ ಈದ್ ಮಿಲಾದ್ ಮೆರವಣಿಗೆಯನ್ನು ಮುಸ್ಲಿಮರು ಸೆಪ್ಟೆಂಬರ್ 22ಕ್ಕೆ ಮುಂದೂಡಿದರು. ಉಳಿದಂತೆ ಇತರ ಧಾರ್ಮಿಕ ಕಾರ್ಯಗಳಲ್ಲಿ ಸಂಭ್ರಮದಿಂದ ಪಾಲ್ಗೊಂಡರು. ‘ಬೆಳಗಾವಿಯ ಗಣೇಶೋತ್ಸವ ದೇಶದಲ್ಲೇ ಪ್ರಸಿದ್ಧ. ಮೊದಲು ಅದು ಸಂಭ್ರಮದಿಂದ ನೆರವೇರಲಿ. ಸೆಪ್ಟೆಂಬರ್ 22ರಂದು ನಾವು ಈದ್‌-ಮಿಲಾದ್‌ ಮೆರವಣಿಗೆ ಮಾಡಲು ಇಸ್ಲಾಂ ಧರ್ಮಗುರುಗಳು ಮತ್ತು ಮುಸ್ಲಿಮರೆಲ್ಲ ಸೇರಿ ನಿರ್ಧರಿಸಿದೆವು. ಗಣೇಶ …

Read More »

ಸೌಭಾಗ್ಯ ಲಕ್ಷ್ಮೀ ಶುಗರ್ಸ್ ಕಾರ್ಖಾನೆಯಲ್ಲಿ ವಿಶ್ವಕರ್ಮ ಜಯಂತ್ಯೋತ್ಸವ ಆಚರಣೆ.

ಗೋಕಾಕ : ಸೌಭಾಗ್ಯ ಲಕ್ಷ್ಮೀ ಶುಗರ್ಸ್ ಕಾರ್ಖಾನೆಯಲ್ಲಿ ವಿಶ್ವಕರ್ಮ ಜಯಂತಿ ಆಚರಿಸಲಾಯಿತು. ದೇವಶಿಲ್ಪಿ ಭಗವಾನ್ ವಿಶ್ವಕರ್ಮ ಜಯಂತಿಯ ಅಂಗವಾಗಿ ಕಾರ್ಖಾನೆಯಲ್ಲಿ ಸೌಭಾಗ್ಯ ಲಕ್ಷ್ಮೀ ಶುಗರ್ಸ್ ಮಾರ್ಗದರ್ಶಕರಾದ ಸಂತೋಷ್ ಜಾರಕಿಹೊಳಿ ಅವರ ಮಾರ್ಗದರ್ಶನದಂತೆ ಆಚರಣೆ ಮಾಡಿದರು. ಸೃಷ್ಟಿಕರ್ತ ಬ್ರಹ್ಮನ ಅಂಶವಾಗಿರುವ ದೇವಶಿಲ್ಪಿ ವಿಶ್ವಕರ್ಮನು ಎಲ್ಲಾ ಕುಶಲಕರ್ಮಿಗಳಿಗೆ ಒಳಿತನ್ನು ತರಲಿ ಎಂದು ವಿಶೇಷ ಪೂಜೆ ಪ್ರಾರ್ಥನೆ ಸಲ್ಲಿಸಿದರು. ಈ ಸಂದರ್ಭದಲ್ಲಿ ಊರಿನ ಮುಖಂಡರು ಹಿರಿಯರು ಯುವಕರು ಕಾರ್ಖಾನೆಯ ಸಿಬ್ಬಂದಿಗಳು ಉಪಸ್ಥಿತರಿದ್ದರು

Read More »