ಬೆಳಗಾವಿ: ಜಿಲ್ಲೆಯ ಎಂಟು ಸಕ್ಕರೆ ಕಾರ್ಖಾನೆಗಳ ಮೇಲೆ ಬುಧವಾರ ದಾಳಿ ನಡೆಸಲಾಗಿದ್ದು, ಯಾವುದೇ ಕಾರ್ಖಾನೆಯಲ್ಲಿ ತೂಕದಲ್ಲಿ ವ್ಯತ್ಯಾಸ ಕಂಡುಬಂದಿಲ್ಲ ಎಂದು ಕಬ್ಬು ಅಭಿವೃದ್ಧಿ ಹಾಗೂ ಸಕ್ಕರೆ ನಿರ್ದೇಶನಾಲಯದ ಆಯುಕ್ತ ಶಿವಾನಂದ ಕಲಕೇರಿ ತಿಳಿಸಿದ್ದಾರೆ. ‘ತೂಕದಲ್ಲಿ ಮೋಸ ಮಾಡಲಾಗುತ್ತಿದೆ ಎಂದು ರೈತರು ನೀಡಿದ ದೂರಿನ ಹಿನ್ನೆಲೆಯಲ್ಲಿ ಬುಧವಾರ ದಾಳಿ ಮಾಡಲಾಗಿದೆ. ಬೀದರ್‌ನಿಂದ ಕಾರವಾರವರೆಗೆ ಒಟ್ಟು 21 ಸಕ್ಕರೆ ಕಾರ್ಖಾನೆಗಳ ಮೇಲೆ ದಾಳಿ ನಡೆದಿದೆ. ಇದರಲ್ಲಿ ಬೆಳಗಾವಿ ಜಿಲ್ಲೆಯ ಎಂಟು ಕಾರ್ಖಾನೆಗಳಲ್ಲಿ ಯಾವುದೇ …
Read More »ರೋಹಿತ್ ಪವಾರ್ ಗೋಪ್ಯ ಸಭೆ
ಬೆಳಗಾವಿ: ಎನ್‌ಸಿಪಿ ಮುಖಂಡ ಶರದ್ ಪವಾರ್ ಅವರ ಸಹೋದರ ಸಂಬಂಧಿ, ಮಹಾರಾಷ್ಟ್ರದ ಶಾಸಕ ರೋಹಿತ್ ಪವಾರ್ ಅವರು ಮಂಗಳವಾರ ಬೆಳಗಾವಿಯ ಎಂಇಎಸ್ ಮುಖಂಡರ ಜತೆ ಗೋಪ್ಯ ಸಭೆ ನಡೆಸಿದರು. ‘ಗಡಿ ವಿಚಾರವಾಗಿ ನಡೆದ ಬೆಳವಣಿಗೆಗಳ ಮಾಹಿತಿ ಪಡೆಯಲು, ಮಹಾ ವಿಕಾಸ ಅಘಾಡಿ ನಾಯಕರ ಸೂಚನೆ ಮೇರೆಗೆ ರೋಹಿತ್ ಅವರು ಸೋಮವಾರ ಸಂಜೆ ಬೆಳೆಗಾವಿಗೆ ಬಂದರು. ಇಲ್ಲಿನ ಮರಾಠಿಗರ ಸ್ಥಿತಿಗತಿಗಳ ಮಾಹಿತಿ ಪಡೆದರು’ ಎಂದು ಎಂಇಎಸ್‌ನ ಮುಖಂಡರು ತಿಳಿಸಿದ್ದಾರೆ. ಮಂಗಳವಾರ ಸಮೀಪದ ಹಿಂಡಲಗಾ …
Read More »ಕೆಪಿಟಿಸಿಎಲ್ ಪರೀಕ್ಷೆ ಮತ್ತೊಬ್ಬ ಪರಾರಿಯಾದ ಆರೋಪಿ ಅಂದರ್
ಗೋಕಾಕ ಶಹರ ಪೊಲೀಸ್ ಠಾಣೆ ಪ್ರಕರಣದಲ್ಲಿ ತನಿಖಾಧಿಕಾರಿ ಶ್ರೀ ವೀರೇಶ್ ತಿ ದೊಡಮನಿ DYSP DCRB ಇವರು ತನಿಖೆ ಮುಂದುವರೆಸಿ ದಿನಾಂಕ 14-12-2022 ರಂದು ಈ ಕೇಸಿನಲ್ಲಿಯ ಪರಾರಿ ಇದ್ದ ಇನ್ನೊಬ್ಬ ಪ್ರಮುಖ ಆರೋಪಿ ಸೋಮನಗೌಡ ಶಂಕರಗೌಡ ಪಾಟೀಲ ಬಂಧಿಸಿದ್ದಾರೆ ವಯಸ್ಸು 36 ವರ್ಷ ರಾಯಭಾಗ ಇವನಿಗೆ ದಸ್ತಗೀರ ಮಾಡಿದ್ದು ಈತನು ದಿನಾಂಕ 07-08-2022 ರಂದು ನಡೆದ ಕೆಪಿಟಿಸಿಎಲ್ ಜ್ಯೂನಿಯರ್ ಅಸಿಸ್ಟಂಟ್ ಹುದ್ದೆಗೆ ನೇಮಕಾತಿ ನಡೆದ ಪರೀಕ್ಷೆಯ ಕಾಲಕ್ಕೆ ಗದಗ …
Read More »ಕನ್ನಡದಲ್ಲಿ ಮಾತನಾಡಿದ ರಾಜ್ಯ ಸಭಾ ಸದಸ್ಯ ಕಡಾಡಿ
ಬೆಳಗಾವಿ ರಾಜ್ಯ ಸಭಾ ಸದಸ್ಯ ಈರಣ್ಣಾ ಕಡಾಡಿ ಸಂಸತ್ತಿನಲ್ಲಿ ಕನ್ನಡದಲ್ಲಿ ಮಾತನಾಡುತ್ತಾ ಸೇನೆಯಲ್ಲಿ ಕರ್ನಾಟಕ ಹೆಸರಿನ ರೆಜಿಮೆಂಟ್ ಸ್ಥಾಪನೆ ಮಾಡುವಂತೆ ಒತ್ತಾಯಿಸಿದ್ದಾರೆ. ದೇಶದ ಜನ ಸ್ವಾತಂತ್ರ್ಯದ ಅಮೃತ ಮಹೋತ್ಸವ ಆಚರಿಸುತ್ತಿರುವ ಸಂದರ್ಭದಲ್ಲಿ ಕರ್ನಾಟಕದ ಎಲ್ಲ ವೀರ ಯೋಧರ ತ್ಯಾಗ, ಬಲಿದಾನಗಳ ಸ್ಮರಣೆಗಾಗಿ ಹಾಗೂ ಸೇನೆಯಲ್ಲಿ ಯೋಗದಾನ ನೀಡುತ್ತಿರುವ ನಮ್ಮೆಲ್ಲ ಸೈನಿಕರ ಗೌರವಾರ್ಥವಾಗಿ ಸೇನೆಯಲ್ಲಿ ಕರ್ನಾಟಕ ಹೆಸರಿನ ರೆಜಿಮೆಂಟ್ ಸ್ಥಾಪಿಸಲು ಆಗ್ರಹಿಸಿದರು. ಕಡಾಡಿ ಮಾತನಾಡುತ್ತಿರುವಾಗ ಸದನದವು ಗದ್ದಲ ಗೂಡಾಗಿತ್ತು.
Read More »ವ್ಯಾಪಾರಿ ಅಪಹರಿಸಿ ಹಣ ಲೂಟಿ: ಏಳು ಮಂದಿ ಬಂಧನ
ಬೆಳಗಾವಿ: ಹೋಟೆಲ್ ವ್ಯಾಪಾರಿಯೊಬ್ಬರನ್ನು ಅಪಹರಣ ಮಾಡಿ ₹ 1 ಲಕ್ಷ ವಸೂಲಿ ಮಾಡಿದ್ದ ಏಳು ಆರೋಪಿಗಳನ್ನು ಮುರಗೋಡ ಠಾಣೆ ಪೊಲೀಸರು ಶುಕ್ರವಾರ ಬಂಧಿಸಿದ್ದಾರೆ. ಬಾಳೇಶ ಹೊಂಡಪ್ಪನವರ, ಶ್ರೀಶೈಲ ಹೊಂಡಪ್ಪನವರ, ಬಂದೇನವಾಜ್ ಅತ್ತಾರ್, ರಮೇಶ ಚಂದರಗಿ, ಮಲ್ಲಪ್ಪ ಕೋಮರ್, ಇಮ್ರಾನ್ ಮುಲ್ಲಾ, ನಾಗಪ್ಪ ರಂಗಣ್ಣನವರ ಬಂಧಿತರು. ಜಿಲ್ಲೆಯ ಯರಗಟ್ಟಿ ತಾಲ್ಲೂಕಿನ ಸೊಪ್ಪಾಡ್ಲ ಗ್ರಾಮದ ಸಾಬಣ್ಣ ಮೆಗಾಡಿ ಅವರನ್ನು ವಾರದ ಹಿಂದೆ ಸಾಬಣ್ಣ ಅವರನ್ನು ಯರಗಟ್ಟಿಯಲ್ಲಿ ಅಪಹರಿಸಿದ ಆರೋಪಿಗಳು, ಬೈಲಹೊಂಗಲ ತಾಲ್ಲೂಕಿನ ನೇಸರಗಿಗೆ …
Read More »ಖಾನಾಪುರ | ಕಾಡಾನೆ ಹಿಂಡು ದಾಳಿ: ಅಪಾರ ಬೆಳೆ ಹಾನಿ
ಖಾನಾಪುರ: ತಾಲ್ಲೂಕಿನ ಭೂರಣಕಿ ಮತ್ತು ಕರೀಕಟ್ಟಿ ಗ್ರಾಮಗಳ ಸುತ್ತಲಿನ ಕೃಷಿ ಜಮೀನುಗಳಲ್ಲಿ ಶನಿವಾರ ನಸುಕಿನಜಾವ 16 ಕಾಡಾನೆಗಳ ಹಿಂಡು ದಾಳಿ ಮಾಡಿದ್ದು, ಅಪಾರ ಪ್ರಮಾಣದ ಬೆಳೆ ತಿಂದು, ತುಳಿದು ನಾಶ ಮಾಡಿವೆ. ಇದರಿಂದ ಗ್ರಾಮಗಳಲ್ಲಿ ಆತಂಕದ ವಾತಾವರಣ ಮನೆ ಮಾಡಿದೆ. ಶುಕ್ರವಾರ ರಾತ್ರಿಯೇ ದಾಂಡೇಲಿ ಅರಣ್ಯದಿಂದ ಬಂದ ನಾಲ್ಕು ಮರಿ ಹಾಗೂ 12 ದೊಡ್ಡ ಆನೆಗಳು ತಾವರಗಟ್ಟಿ, ಚುಂಚವಾಡ ಮಾರ್ಗವಾಗಿ ಭೂರಣಕಿ ಗ್ರಾಮದ ಕಡೆ ಬಂದವು. ಮಧ್ಯರಾತ್ರಿಯಿಂದ ಶನಿವಾರ ನಸುಕಿನಜಾವದವರೆಗೆ …
Read More »ಶಿವಣಗಿ ಪೂರ್ವ ಪ್ರಾಥಮಿಕ ಶಾಲೆಯಲ್ಲಿ ಆಹಾರ, ಉಡುಗೆ – ತೋಡುಗೆಯಲ್ಲಿ ವಿನೂತನ ಕಲಿಕಾ ಶೈಲಿ….
ಬೆಳಗಾವಿ ಶನಿವಾರ ದಿನಾಂಕ 10/12/22 ರಂದು ನಗರದ ಪೋರ್ಟ್ ರಸ್ತೆಯಲ್ಲಿ ಇರುವ ವಿಟ್ಟಲಾಚಾರ್ಯ ಶಿವಣಗಿ ಪೂರ್ವ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳಿಗೆ ವಿಶೇಷ ಕಲಿಕಾ ಕಾರ್ಯಕ್ರಮದ ಕೊನೆಯ ದಿನವಾಗಿತ್ತು… ಶಾಲೆಯ ಎಲ್ ಕೆಜಿ ಹಾಗೂ ಯುಕೆಜಿ ವರ್ಗದ ವಿದ್ಯಾರ್ಥಿಗಳಿಗೆ ವಿಶೇಷವಾಗಿ ಆರು ದಿನಗಳ ಕಾಲ ಆರು ಬಣ್ಣಗಳ ಉಡುಗೆ ತೊಟ್ಟು ಬರುವಂತೆ ಹೇಳಲಾಗಿತ್ತು, ಅದೇರೀತಿ, ಅದೇ ಬಣ್ಣದ ಆಹಾರ ತರುವುದನ್ನು ಹೇಳಲಾಗಿತ್ತು, ಆ ಪ್ರಕಾರ ಪೋಷಕರ ಸಹಾಯದಿಂದ ಮಕ್ಕಳೆಲ್ಲ ಅದೇ ಬಣ್ಣಗಳ …
Read More »ಡಿಸೆಂಬರ್ 19ರ ಒಳಗೆ ಮೀಸಲಾತಿ ಸಿಗದಿದ್ದರೆ, 22 ಕ್ಕೆ ಸುವರ್ಣ ಸೌಧಕ್ಕೆ ಮುತ್ತಿಗೆ
ಬೆಳಗಾವಿ: ಡಿ.19 ರ ಒಳಗಾಗಿ ಲಿಂಗಾಯತ ಪಂಚಮಸಾಲಿ ಸಮುದಾಯಕ್ಕೆ 2ಎ ಮಿಸಲಾತಿ ನೀಡಬೇಕು. ಸರ್ಕಾರ ತಾನೇ ಕೊಟ್ಟ ಗಡುವಿನ ಪ್ರಕಾರ ಮೀಸಲಾತಿ ನೀಡಬೇಕು. ಇಲ್ಲದಿದ್ದರೆ ಡಿ.22 ನೇ ತಾರಿಕು ಸುವರ್ಣಸೌದದ ಎದುರು ಪಂಚಮಸಾಲಿ ವಿರಾಠ ಪಂಚಮ ಶಕ್ತಿ ಪ್ರದರ್ಶನ ಮಾಡಿ 25 ಲಕ್ಷ ಜನ ಸೇರಿಸುತ್ತೇವೆ ಎಂದು ಬಸವ ಶ್ರೀ ಜಯಮೃತ್ಯುಂಜಯ ಸ್ವಾಮಿ ಹೇಳಿದರು. ನಗರದ ಗಾಂಧಿ ಭವನದಲ್ಲಿ 2 ಮೀಸಲಾತಿಗಾಗಿ ನಡೆಸಿದ ಸಭೆ ಬಳಿಕ ಮಾದ್ಯಮಗೋಷ್ಠಿ ನಡೆಸಿ …
Read More »ಸುವರ್ಣಸೌಧದಲ್ಲಿ ಚಳಿಗಾಲದ ಅಧಿವೇಶನ: ಅಧಿಕಾರಿಗಳ ಜತೆ ಕಾಗೇರಿ ಸಭೆ
ಬೆಳಗಾವಿ: ಸುವರ್ಣ ವಿಧಾನಸೌಧದಲ್ಲಿ ಡಿ.19 ರಿಂದ 30 ರವರೆಗೆ ವಿಧಾನ ಮಂಡಲ ಚಳಿಗಾಲ ಅಧಿವೇಶನ ನಡೆಯಲಿದೆ. ಈ ಅವಧಿಯಲ್ಲಿ ವಸತಿ, ಊಟೋಪಾಹಾರ, ಸಾರಿಗೆ ಮತ್ತಿತರ ವ್ಯವಸ್ಥೆಯು ಪ್ರತಿ ಬಾರಿಯಂತೆ ಅಚ್ಚುಕಟ್ಟಾಗಿ ವ್ಯವಸ್ಥೆ ಮಾಡಬೇಕು ಎಂದು ವಿಧಾನಸಭೆ ಸಭಾಧ್ಯಕ್ಷರಾದ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ವಿಧಾನಮಂಡಲದ ಚಳಿಗಾಲ ಅಧಿವೇಶನದ ಹಿನ್ನೆಲೆಯಲ್ಲಿ ಸುವರ್ಣ ವಿಧಾನಸೌಧದಲ್ಲಿ ಸೋಮವಾರ ನಡೆದ ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ವಸತಿ, ಊಟ, …
Read More »ಗೋಕಾಕ ತಹಶಿಲ್ದಾರ ಪ್ರಕಾಶ ಹೊಳೆಪ್ಪಗೋಳ ಅವರ ಮನೆಯಲ್ಲಿ ಕಳ್ಳತನ
ಬೆಳಗಾವಿ: ತಹಶೀಲ್ದಾರರೊಬ್ಬರು ಚುನಾವಣಾ ಕರ್ತವ್ಯಕ್ಕೆ ತೆರಳಿದ್ದನ್ನು ತಿಳಿದು ಮನೆಗೆ ಹೊಕ್ಕಿದ್ದ ಕಳ್ಳರು 25 ತೊಲ ಚಿನ್ನ ಮಾತ್ರವಲ್ಲದೆ ಇತರ ವಸ್ತುಗಳನ್ನು ಕಳವು ಮಾಡಿದ್ದಾರೆ. ಬೆಳಗಾವಿ ಜಿಲ್ಲೆಯಲ್ಲಿ ಈ ಕಳ್ಳತನ ನಡೆದಿದೆ. ಗೋಕಾಕ ತಹಶಿಲ್ದಾರ ಪ್ರಕಾಶ ಹೊಳೆಪ್ಪಗೋಳ ಅವರ ಮನೆಯಲ್ಲಿ ಈ ಕಳ್ಳತನ ನಡೆದಿದೆ. ಚುನಾವಣೆ ಕರ್ತವ್ಯ ನಿಮಿತ್ತ ಅವರು ಮನೆಗೆ ಬೀಗ ಹಾಕಿ ತೆರಳಿದ್ದನ್ನು ತಿಳಿದ ಕಳ್ಳರು ಮನೆಗೆ ಹೊಕ್ಕಿದ್ದರು. ತಡರಾತ್ರಿಯಲ್ಲಿ ಕಳ್ಳರು ಬೀಗ ಒಡೆದು ಒಳಹೊಕ್ಕಿದ್ದರು. ಗೋಕಾಕದ ಲೋಕೋಪಯೋಗಿ ಇಲಾಖೆಯ …
Read More »