Breaking News

ಬೆಳಗಾವಿ

ಹುಣಶಿಕಟ್ಟಿ-ಉಳವಿ ಪಾದಯಾತ್ರೆಗೆ ಚಾಲನೆ

ಬೆಳಗಾವಿ: ಜಿಲ್ಲೆಯ ಹುಣಶಿಕಟ್ಟಿಯಿಂದ ಯಳವಿವರೆಗೆ ಕೈಗೊಂಡ ಪಾದಯಾತ್ರೆಗೆ ಗ್ರಾಮದಲ್ಲಿ ಶುಕ್ರವಾರ ಚಾಲನೆ ನೀಡಲಾಯಿತು. ಗ್ರಾಮದ ಕಲ್ಮೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ಗ್ರಾಮಸ್ಥರು ಹಾಗೂ ಭಜನಾ ಮಂಡಳಿಯವರು ಪಾದಯಾತ್ರೆಗೆ ಮುಂದಾದರು.   ಮುಖಂಡರಾದ ಬಸವರಾಜ ಹೊಳಿ, ಕಲ್ಮೇಶ ಮರಡಿ, ಗಂಗಪ್ಪ ನಾಡಗೌಡ್ರ, ಮಹಾಂತೇಶ ಉಪ್ಪಿನ, ವಿರೂಪಾಕ್ಷಿ ಹಿರೇಮಠ, ಉಮೇಶ ಹೊಸಮನಿ, ಬಸವರಾಜ ತುರುಮರಿ, ಸಂಗಯ್ಯ ಹಿರೇಮಠ, ಉಮೇಶ ಹೊಸಮನಿ, ಅಶೋಕ ಯರಗೊಪ್ಪ, ಕಲ್ಮೇಶ ತುರಮರಿ, ಕಲ್ಲಯ್ಯ ಪತ್ರಿ, ಬಸವಂತಪ್ಪ ಹುಬ್ಬಳ್ಳಿ ನೇತೃತ್ವ …

Read More »

ಹುಕ್ಕೇರಿ, ಸವದತ್ತಿ ವಿಧಾನಸಭೆ ಕ್ಷೇತ್ರಗಳಿಗೆ ಬೈ ಎಲೆಕ್ಷನ್ ಇಲ್ಲ

ಬೆಳಗಾವಿ ಜಿಲ್ಲೆಯ ಹುಕ್ಕೇರಿ ಮತ್ತು ಸವದತ್ತಿ ವಿಧಾನಸಭಾ ಕ್ಷೇತ್ರಗಳಿಗೆ ಕೇಂದ್ರ ಚುನಾವಣಾ ಆಯೋಗವು ಉಪಚುನಾವಣೆ ಘೋಷಣೆ ಮಾಡಿಲ್ಲ. ವಿಧಾನಸಭಾ ಚುನಾವಣೆಗೆ ಏಳು ತಿಂಗಳುಗಳು ಬಾಕಿ ಇರುವುದರಿಂದ ಉಪಚುನಾವಣೆ ಘೋಷಣೆ ಮಾಡಿಲ್ಲ ಎಂದು ಹೇಳಲಾಗಿದೆ.   ಬೆಂಗಳೂರು : ಬೆಳಗಾವಿ ಜಿಲ್ಲೆಯ ಹುಕ್ಕೇರಿ ಮತ್ತು ಸವದತ್ತಿ ಯಲ್ಲಮ್ಮ ವಿಧಾನಸಭೆ ಕ್ಷೇತ್ರಗಳಿಗೆ ಉಪ ಚುನಾವಣೆ ನಡೆಸದಿರಲು ಕೇಂದ್ರ ಚುನಾವಣೆ ಆಯೋಗ ನಿರ್ಧರಿಸಿದಂತಿದೆ. ಬರುವ ವರ್ಷದ ಮೇ ತಿಂಗಳಲ್ಲಿ ರಾಜ್ಯ ವಿಧಾನಸಭೆಗೆ ” ಸಾರ್ವತ್ರಿಕ …

Read More »

ಸರ್ಕಾರಿ ನೌಕರರಿಗೆ ಸಮಾನ ವೇತನ ನೀಡಿ

ಬೆಳಗಾವಿ : ಸರ್ಕಾರಿ ನೌಕರರಿಗೆ ಸಮಾನ ವೇತನ ನೀಡುವುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ರಾಜ್ಯ ರಸ್ತೆ ಸಾರಿಗೆ ನೌಕರರ ಕೂಟದ ಪದಾಧಿಕಾರಿಗಳು ನಗರದಲ್ಲಿ ಶನಿವಾರ ಪ್ರತಿಭಟನೆ ನಡೆಸಿದರು. ಇಲ್ಲಿನ ಕೇಂದ್ರೀಯ ಬಸ್‌ ನಿಲ್ದಾಣದಿಂದ ಜಿಲ್ಲಾಧಿಕಾರಿ ಕಚೇರಿಯ ವರೆಗೆ ಸೈಕಲ್‌ ರ್‍ಯಾಲಿ ನಡೆಸಿದ ಸಾರಿಗೆ ನೌಕರರು, ತಮ್ಮ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಹೆಚ್ಚುವರಿ ಜಿಲ್ಲಾಧಿಕಾರಿ ಅಶೋಕ ದುಡಗುಂಟಿ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಿದರು. ಕೂಟದ ಅಧ್ಯಕ್ಷ ಆರ್‌. …

Read More »

ಅಭಿವೃದ್ಧಿಯಲ್ಲಿ ಉತ್ತರ ಕರ್ನಾಟಕಕ್ಕೆ ಹೆಚ್ಚು ಅನ್ಯಾಯ: ಪ್ರಭಾಕರ ಕೋರೆ

ಚಿಕ್ಕೋಡಿ(ನ.05): ಅಖಂಡ ಕರ್ನಾಟಕವಾಗಬೇಕೆಂದು ಕನಸು ಕಂಡವರು ಉತ್ತರ ಕರ್ನಾಟಕದ ಜನ. ಆದರೆ ಅಭಿವೃದ್ಧಿ ದೃಷ್ಟಿಯಿಂದ ಉತ್ತರ ಕರ್ನಾಟಕ ಹೆಚ್ಚು ಅನ್ಯಾಯಕ್ಕೆ ಒಳಗಾಗಿದೆ ಎಂದು ಕೆಎಲ್‌ಇ ಸಂಸ್ಥೆಯ ಕಾರ್ಯಾಧ್ಯಕ್ಷ ಡಾ. ಪ್ರಭಾಕರ ಕೋರೆ ಹೇಳಿದರು. ಅವರು ಬುಧವಾರ ತಾಲೂಕಿನ ಚಿಂಚಣಿ ಗ್ರಾಮದ ಗಡಿ ಕನ್ನಡಿಗರ ಬಳಗದಿಂದ ಶ್ರೀಅಲ್ಲಮಪ್ರಭು ಸಿದ್ದಸಂಸ್ಥಾನಮಠದಲ್ಲಿ ನಡೆದ ಕನ್ನಡ ರಾಜ್ಯೋತ್ಸವ ಮತ್ತು ಕನ್ನಡರತ್ನ ಡಾ.ಪ್ರಭಾಕರ ಕೋರೆ ಹಾಗೂ ನನ್ನ ಸಂಗೀತ ವ್ಯಾಸಂಗ ಗ್ರಂಥಗಳ ಬಿಡುಗಡೆ ಸಮಾರಂಭದಲ್ಲಿ ಪಾಲ್ಗೊಂಡು ಮಾತನಾಡಿ, …

Read More »

ಅರಣ್ಯ ಇಲಾಖೆ ಕಾರ್ಯಾಚರಣೆ: ಸೆರೆಸಿಕ್ಕ ಕತ್ತೆ ಕಿರುಬ

ಚಿಕ್ಕೋಡಿ: ಇಂದು ಬೆಳಿಗ್ಗೆ 07 ಗಂಟೆಗೆ ಬೆಳಗಾವಿ ಜಿಲ್ಲೆಯ ಅಥಣಿ‌ ಪಟ್ಟಣದ ಹೊರವಲಯದಲ್ಲಿ ಇರುವ ಶಿವಯೋಗಿ‌ ನಗರದ, ಕುಮಠಳ್ಳಿ ಫಾರ್ಮಹೌಸ್ ನಲ್ಲಿ ಕತ್ತೆ ಕಿರುಬ ಒಂದು ಕಾಣಿಸಿಕೊಂಡು ಸಾರ್ವಜನಿಕರಲ್ಲಿ ಭಯದ ವಾತಾವರಣ ಮೂಡಿಸಿತ್ತು, ಕತ್ತೆ ಕಿರುಬವನ್ನ ದೂರದಿಂದ ನೋಡಿದ ಸಾರ್ವಜನಿಕರು ಚಿರತೆ ಬಂದಿದೆ ಎಂದು ವದಂತಿ ಹಬ್ಬಿಸಿದ್ದು, ಅಥಣಿ ಪ್ರಾದೇಶಿಕ ಅರಣ್ಯ ಇಲಾಖೆಯ ಸಿಬ್ಬಂದಿಗಳು ಸ್ಥಳಿಯರ ಸಹಕಾರದಿಂದ ಕಾರ್ಯಾಚರಣೆ ನಡೆಸಿ ಬೋನಿಗೆ ಬೀಳಿಸುವಲ್ಲಿ ಯಶಸ್ವಿಯಾದರು. ಬೆಳಗಾವಿಯಲ್ಲಿ ಚಿರತೆ ಕಾರ್ಯಾಚರಣೆ ವಿಫಲಗೊಳ್ಳುತ್ತಿದ್ದಂತೆ …

Read More »

ಕಿತ್ತೂರಿನಲ್ಲಿ ವಿನಯೋತ್ಸವ: ಶಾಸಕ ಅಮೃತ್ ದೇಸಾಯಿಗೆ ಟಕ್ಕರ್ ಕೊಡಲು ವಿನಯ್ ಕುಲಕರ್ಣಿ ಶಕ್ತಿ ಪ್ರದರ್ಶನ

ಬೆಳಗಾವಿ ಜಿಲ್ಲೆಯ ಕಿತ್ತೂರಿನಲ್ಲಿ ಇದೇ 7 ರಂದು ಮಾಜಿ ಸಚಿವ ವಿನಯ್ ಕುಲಕರ್ಣಿ ಜನ್ಮದಿನದ ಅಂಗವಾಗಿ ವಿನಯೋತ್ಸವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಧಾರವಾಡ: ಮುಂಬರುವ ವಿಧಾನಸಭೆ ಚುನಾವಣೆಗೆ ಧಾರವಾಡ ಗ್ರಾಮೀಣ ಕ್ಷೇತ್ರದಲ್ಲಿ ಈಗಿನಿಂದಲೇ ಪೈಪೋಟಿ ಶುರುವಾಗಿದೆ. ಶಾಸಕ ಅಮೃತ್ ದೇಸಾಯಿಗೆ ಮಾಜಿ ಸಚಿವ ವಿನಯ್ ಕುಲಕರ್ಣಿ ಟಕ್ಕರ್ ಕೊಡಲು ಮುಂದಾಗಿದ್ದಾರೆ.   ಹೌದು, ಶಾಸಕ ‌ಅಮೃತ ದೇಸಾಯಿ ವಿರುದ್ಧ ಶಕ್ತಿ ಪ್ರದರ್ಶನಕ್ಕೆ ಕುಲಕರ್ಣಿ ಸಜ್ಜಾಗಿದ್ದಾರೆ. ಬೆಳಗಾವಿ ಜಿಲ್ಲೆಯ ಕಿತ್ತೂರಿನಲ್ಲಿ ಇದೇ 7 …

Read More »

ಸತೀಶ ಜಾರಕಿಹೊಳಿ ಫೌಂಡೇಶನ್ ನಿರಂತರ ಸಹಕಾರ ನೀಡಲಿದೆ ಎಂದು ರಾಹುಲ್‌ ಜಾರಕಿಹೊಳಿ

ಗೋಕಾಕ: ಮದುವೆ, ಸಭೆ -ಸಮಾರಂಭ ಅನುಕೂಲಕ್ಕಾಗಿ ಸಮುದಾಯಗಳಿಗೆ ಕುರ್ಚಿ ಮತ್ತು ಸೌಂಡ್ ಸಿಸ್ಟಮ್ ಗಳನ್ನು ವಿತರಣೆ ಮಾಡಲಾಗುತ್ತಿದೆ. ಸಮಾಜ ಸೇವೆಗಾಗಿ ಸತೀಶ ಜಾರಕಿಹೊಳಿ ಫೌಂಡೇಶನ್ ನಿರಂತರ ಸಹಕಾರ ನೀಡಲಿದೆ ಎಂದು ಯುವ ನಾಯಕ ರಾಹುಲ್‌ ಜಾರಕಿಹೊಳಿ ಅವರು ಹೇಳಿದರು. ಇಲ್ಲಿನ ಹಿಲ್‌ ಗಾಡರ್ನ್‌ ಕಚೇರಿಯಲ್ಲಿ ಸತೀಶ ಜಾರಕಿಹೊಳಿ ಫೌಂಡೇಶನ್ ವತಿಯಿಂದ ಅರಭಾವಿ ಕ್ಷೇತ್ರದ ದೇವಸ್ಥಾನ, ಮಸ್ಜಿದ್ ,ಚರ್ಚ್, ಟ್ರಸ್ಟಿಗಳಿಗೆ ಕುರ್ಚಿ ಮತ್ತು ಸೌಂಡ್ ಸಿಸ್ಟಮ್ ಗಳನ್ನು ಯುವ ನಾಯಕ ರಾಹುಲ್ …

Read More »

ಸಂತೋಷ್ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಅನ್ನ ಸಂತರ್ಪಣೆ!*

    ಸವದತ್ತಿ : ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಚೇರಮನ್ ರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಅನ್ನದಾಸೋಹ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.   ಪ್ರತಿ ಶನಿವಾರ ಶ್ರೇಷ್ಠ ಫೌಂಡೇಶನ್ ವತಿಯಿಂದ ವಿವಿಧ ಕಡೆಗಳಲ್ಲಿ ಅನ್ನ ಸಂತರ್ಪಣೆ ಕಾರ್ಯಕ್ರಮವನ್ನು ಸಂತೋಷ ಜಾರಕಿಹೊಳಿ ಅವರು ಹಮ್ಮಿಕೊಂಡಿದ್ದು ಈ ಶನಿವಾರ ಸವದತ್ತಿ ತಾಲೂಕಿನ ಆಲದಕಟ್ಟಿ ಗ್ರಾಮದ ಶಿವಯೋಗೇಶ್ವರ ದೇವಸ್ಥಾನದ ಮುಂಭಾಗದಲ್ಲಿ ಅನ್ನ ಸಂತರ್ಪಣೆ ಹಮ್ಮಿಕೊಂಡಿದ್ದರು.   ಈ ಸಂದರ್ಭದಲ್ಲಿ ವಿಶಾಲ ಹಿರೇಮಠ್ …

Read More »

ಬೆಳಗಾವಿ: ಪ್ರೋತ್ಸಾಹಕ್ಕಾಗಿ ಕತೆ, ಚಿತ್ರಕಲೆ ಸ್ಪರ್ಧೆ

ಬೆಳಗಾವಿ: ಇಲ್ಲಿನ ಸಪ್ನಾ ಬುಕ್‌ಹೌಸ್‌ ಹಾಗೂ ರೋಷ್ಟ್ರಮ್‌ ಡಯರೀಸ್‌ ಸಂಘಟನೆ ಆಶ್ರಯದಲ್ಲಿ, ಈ ಭಾಗದ ಕಲಾವಿದರು- ಯುವ ಸಾಹಿತಿಗಳನ್ನು ಪ್ರೋತ್ಸಾಹಿಸುವ ಉದ್ದೇಶದಿಂದ ಕತೆ ಹಾಗೂ ಚಿತ್ರಕಲೆ ಸ್ಪರ್ಧೆ ಆಯೋಜಿಸಲಾಗಿದೆ ಎಂದು ಸಂಘಟನೆ ಸಂಸ್ಥಾಪಕ ಅಧ್ಯಕ್ಷ ಅಭಿಷೇಕ ಬೆಂಡಿಗೇರಿ ಹೇಳಿದರು. ಚಿತ್ರಕಲೆ ಸ್ಪರ್ಧೆ 16 ವರ್ಷ ಕೆಳಗಿನ ಹಾಗೂ ಮೇಲ್ಪಟ್ಟವರಿಗೆ ಪ್ರತ್ಯೇಕವಾಗಿ ನಡೆಯಲಿದೆ. ಎಲ್ಲಿಯ ಕಲಾವಿದರೂ ಪಾಲ್ಗೊಳ್ಳಬಹುದು. ‘ಬೆಳಗಾವಿ’ ವಿಷಯದ ಬಗ್ಗೆ ಮಾತ್ರ ಪೇಂಟಿಂಗ್‌ ಬಿಡಿಸಬೇಕು. ನ. 30ರೊಳಗೆ ಸಪ್ನಾ ಬುಕ್‌ಹೌಸ್‌ನಲ್ಲಿ …

Read More »

ಪ್ರಧಾನಿ ಮೋದಿ ಸೂಚನೆ ಮೇರೆಗೆ ಕರ್ನಾಟಕ – ಮಹಾರಾಷ್ಟ್ರ ರಾಜ್ಯಪಾಲರ ಸಭೆ

ಬೆಳಗಾವಿ: ಕರ್ನಾಟಕ ಮತ್ತು ಮಹಾರಾಷ್ಟ್ರದ ಗಡಿಭಾಗದಲ್ಲಿನ ಸಮಸ್ಯೆಗಳನ್ನು ಬಗೆಹರಿಸಲು ಇಂದು ಕೊಲಾಪುರದಲ್ಲಿ ಉಭಯ ರಾಜ್ಯಗಳ ರಾಜ್ಯಪಾಲರ ಸಭೆ ನಡೆಯುತ್ತಿದ್ದು, ರಾಜ್ಯದ ಜನರಲ್ಲಿ ಕುತೂಹಲ ಮೂಡಿಸಿದೆ. ಪ್ರಧಾನಿ ನರೇಂದ್ರ ಮೋದಿ ಅವರ ಸೂಚನೆ ಮೇರೆಗೆ ಈ ಸಭೆ ನಡೆಯುತ್ತಿರುವುದು ಇನ್ನಷ್ಟು ಕುತೂಹಲಕ್ಕೆ ಕಾರಣವಾಗಿದೆ. ಕೊಲ್ಲಾಪುರಕ್ಕೆ ಆಗಮಿಸಿದ ರಾಜ್ಯಪಾಲ ಥಾವರಚಂದ್ ಗೆಹ್ಲೋಟ್ ಅವರನ್ನು ಮಹಾರಾಷ್ಟ್ರ ರಾಜ್ಯಪಾಲ ಭಗತ್ ಸಿಂಗ್ ಕೋಶಾಯರಿ ಸ್ವಾಗತಿಸಿದರು. ಕೊಲ್ಲಾಪುರ ನಗರದ ಛತ್ರಪತಿ ಶಿವಾಜಿ ವಿಶ್ವವಿದ್ಯಾಲಯದ ಆವರಣದಲ್ಲಿ ಶುಕ್ರವಾರ ಬೆಳಗ್ಗೆ …

Read More »