ಬೆಳಗಾವಿ: ಹರ್ ಘರ್ ತಿರಂಗಾ, ಮನೆಮನೆಗೂ ಕನ್ನಡ ಧ್ವಜ ಅಭಿಯಾನ ಆಯ್ತು. ಇದೀಗ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಅವರು ಮನೆ ಮನೆಗೆ ಬುದ್ಧ ಬಸವ ಅಂಬೇಡ್ಕರ್ ಕಾರ್ಯಕ್ರಮ ಆಯೋಜಿಸಿದ್ದಾರೆ. ಇದೇ ನ. 6ರಂದು ಬೆಳಗಾವಿ ಜಿಲ್ಲೆಯ ನಿಪ್ಪಾಣಿ ಪಟ್ಟಣದಲ್ಲಿ ಸಮಾವೇಶ ಮಾಡಿ ಮನೆ ಮನೆಗೆ ಬುದ್ಧ ಬಸವ ಅಂಬೇಡ್ಕರ್ ಕಾರ್ಯಕ್ರಮಕ್ಕೆ ಚಾಲನೆ ದೊರೆಯಲಿದೆ. ಇನ್ನು ಈ ಬಗ್ಗೆ ಇಂದು(ನ.02) ನಿಪ್ಪಾಣಿ ಪಟ್ಟಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, …
Read More »ಗೋಕಾಕ: ನಗರದ ಸರಕಾರಿ ಪದವಿ ಪೂರ್ವ ಮಹಾವಿದ್ಯಾಲಯದ ಉಪಪ್ರಾಚಾರ್ಯ ಎಮ್ ಬಿ ಬಳಗಾರ ಮಾತನಾಡುತ್ತಿರುವದು.
ಗೋಕಾಕ: ಪ್ರತಿ ಮನೆ ಮನೆಯಲ್ಲಿ ಕನ್ನಡ ಭಾಷೆಯನ್ನು ಬಳಸುವ ಮೂಲಕ ಕನ್ನಡ ಭಾಷೆಯನ್ನು ಉಳಿಸಿ ಬೆಳೆಸಲು ನಾವೆಲ್ಲ ಕಾರ್ಯಪ್ರವೃತ್ತರಾಗಬೇಕೆಂದು ನಗರದ ಸರಕಾರಿ ಪದವಿ ಪೂರ್ವ ಮಹಾವಿದ್ಯಾಲಯದ ಉಪ ಪ್ರಾಚಾರ್ಯ ಎಮ್ ಬಿ ಬಳಗಾರ ಹೇಳಿದರು. ಅವರು, ಮಂಗಳವಾರದಂದು ಸಂಜೆ ನಗರದ ಬಸವ ಮಂದಿರದಲ್ಲಿ ಕನ್ನಡ ಸಾಹಿತ್ಯ ಪರಿಷತ ತಾಲೂಕ ಘಟಕ ಮತ್ತು ಭಾವಯಾನ ಮಹಿಳಾ ಸಾಹಿತ್ಯ ಮತ್ತು ಸಂಸ್ಕøತಿಕ ವೇದಿಕೆ ಇವುಗಳ ಸಂಯುಕ್ತ ಆಶ್ರಯದಲ್ಲಿ ಹಮ್ಮಿಕೊಂಡ ಕರ್ನಾಟಕ ರಾಜ್ಯೋತ್ಸವ ಕಾರ್ಯಕ್ರಮವನ್ನು …
Read More »ಕಲ್ಲೋಳಿಯಲ್ಲಿ ಬಂಡಿಗಣಿ ಮಠದ ಸದ್ಬಕ್ತರ ಸತ್ಕಾರ ಸ್ವೀಕರಿಸಿದ ಬಾಲಚಂದ್ರ ಜಾರಕಿಹೊಳಿ
ಮೂಡಲಗಿ : ಕರ್ನಾಟಕವಲ್ಲದೇ ನೆರೆಯ ಮಹಾರಾಷ್ಟ್ರ, ಆಂಧ್ರಪ್ರದೇಶ ರಾಜ್ಯಗಳಲ್ಲಿ ಅಸಂಖ್ಯೆ ಭಕ್ತರಿಗೆ ಅನ್ನಪ್ರಸಾದ ಮಾಡುತ್ತಿರುವ ಬಂಡಿಗಣಿಯ ದಾಸೋಹ ಚಕ್ರವರ್ತಿ ದಾನೇಶ್ವರ ಮಹಾರಾಜರ ಕಾರ್ಯ ಶ್ಲಾಘನೀಯವಾದದ್ದು ಎಂದು ಶಾಸಕ, ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಪ್ರಶಂಸೆ ವ್ಯಕ್ತಪಡಿಸಿದರು. ತಾಲೂಕಿನ ಕಲ್ಲೋಳಿ ಪಟ್ಟಣದಲ್ಲಿ ಮಂಗಳವಾರ ಸಂಜೆ ಬಂಡಿಗಣಿ ಮಹಾರಾಜರ ಭಕ್ತರು ಹಮ್ಮಿಕೊಂಡ ಸತ್ಕಾರವನ್ನು ಸ್ವೀಕರಿಸಿ ಮಾತನಾಡಿದ ಅವರು, ಧಾರ್ಮಿಕ-ಶೈಕ್ಷಣಿಕ ಕ್ಷೇತ್ರಗಳಲ್ಲಿ ಕೈಗೊಳ್ಳುತ್ತಿರುವ ಶ್ರೀಗಳ ಕಾರ್ಯಗಳನ್ನು ಮುಕ್ತ ಕಂಠದಿಂದ ಶ್ಲಾಘಿಸಿದರು. ಕಳೆದ ಹಲವಾರು …
Read More »ಗೋಕಾಕ: ಸಾಧಕರನ್ನು ಸತ್ಕರಿಸುತ್ತಿರುವದು
ಗೋಕಾಕ: ಕನ್ನಡವನ್ನು ಉಳಿಸಿ ಬೆಳೆಸುವ ಜವಾಬ್ದಾರಿ ಎಲ್ಲ ಕನ್ನಡಿಗರ ಮೇಲಿದೆ ಎಂದು ಶಿಕ್ಷಣ ಇಲಾಖೆಯ ವಿಷಯ ಪರಿವೀಕ್ಷಕ ಅರಿಹಂತ ಬಿರಾದಾರ ಪಾಟೀಲ ಹೇಳಿದರು. ಅವರು, ಮಂಗಳವಾರದಂದು ಸಂಜೆ ನಗರದ ಕೆಎಲ್‍ಇ ಶಾಲೆಯ ಆವರಣದಲ್ಲಿ ಅಖಿಲ ಭಾರತೀಯ ಸಾಹಿತ್ಯ ಪರಿಷತ ಹಾಗೂ ಸಿರಿಗನ್ನಡ ಮಹಿಳಾ ವೇದಿಕೆ ಇವರ ಸಂಯುಕ್ತ ಆಶ್ರಯದಲ್ಲಿ ಹಮ್ಮಿಕೊಂಡ 67ನೇ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಸಾವಿರಾರು ವರ್ಷಗಳ ಇತಿಹಾಸ ಹೊಂದಿ, ಎಂಟು ಜ್ಞಾನಪೀಠ ಪ್ರಶಸ್ತಿಯನ್ನು ಪಡೆದ …
Read More »ಬೆಳಗಾವಿ: ಸಮಾಜ ಘಾತುಕ ಕೃತ್ಯಗಳಲ್ಲಿ ಭಾಗಿಯಾಗಿದ್ದ 12 ಮಂದಿ ಆರೋಪಿಗಳನ್ನ ಗಡಿಪಾರು ಮಾಡಲಾಗಿದೆ. ಇವರ ವಿರುದ್ಧ 132 ಪ್ರಕರಣಗಳಿವೆ ಎಂದು ಬೆಳಗಾವಿ ಎಸ್ಪಿ ಡಾ.ಸಂಜೀವ್ ಪಾಟೀಲ ಮಾಹಿತಿ ನೀಡಿದರು.
ಬೆಳಗಾವಿ: ಸಮಾಜ ಘಾತುಕ ಕೃತ್ಯಗಳಲ್ಲಿ ಭಾಗಿಯಾಗಿದ್ದ 12 ಮಂದಿ ಆರೋಪಿಗಳನ್ನ ಗಡಿಪಾರು ಮಾಡಲಾಗಿದೆ. ಇವರ ವಿರುದ್ಧ 132 ಪ್ರಕರಣಗಳಿವೆ ಎಂದು ಬೆಳಗಾವಿ ಎಸ್ಪಿ ಡಾ.ಸಂಜೀವ್ ಪಾಟೀಲ ಮಾಹಿತಿ ನೀಡಿದರು. ಬೆಳಗಾವಿ ಜಿಲ್ಲೆಯ ಅಥಣಿ ಉಪವಿಭಾಗದಲ್ಲಿ ಮದಬಾವಿ ಗ್ರಾಮದ ಮೀರಸಾಬ್ ಬಾಗಡಿ, ರಡ್ಡೇರಹಟ್ಟಿ ಗ್ರಾಮದ ಸದಾಶಿವ ಗೊಡಮಾಲೆ, ಉಗಾರ ಬಿ.ಕೆ.ಗ್ರಾಮದ ಮಹಾದೇವ ಕಾಂಬಳೆ, ಕೋಹಳಿ ಗ್ರಾಮದ ರವಿ ಶಿಂಗೆ, ಹಾಲಳ್ಳಿ ಗ್ರಾಮದ ಕಾಶಪ್ಪ ಕಾರಿಕೊಳ್ಳ, …
Read More »1 ಕೋಟಿ 40 ಲಕ್ಷ ರೂ. ವೆಚ್ಚದ ರಸ್ತೆ ಕಾಮಗಾರಿಗೆ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಚಾಲನೆ
ಯಮಕನಮರಡಿ: ಕ್ಷೇತ್ರದಲ್ಲಿ ನಡೆಯುತ್ತಿರುವ ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ರಾಜಿ ಮಾಡಿಕೊಳ್ಳದೇ ಗುಣಮಟ್ಟ ಕಾಯ್ದುಕೊಳ್ಳಿ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ್ ಜಾರಕಿಹೊಳಿ ಅವರು ಹೇಳಿದರು. ಹೆಬ್ಬಾಳ ಜಿಲ್ಲಾ ಪಂಚಾಯತ್ ವ್ಯಾಪ್ತಿಯ ಉಳ್ಳಾಗಡಿ ಖಾನಾಪುರದಿಂದ ರಾಷ್ಟ್ರೀಯ ಹೆದ್ದಾರಿ NH 4 ವರೆಗಿನ 1 ಲೋಕೋಪಯೋಗಿ ಇಲಾಖೆ ವತಿಯಿಂದ ಮಂಜೂರಾದ 1 ಕೋಟಿ 40 ಲಕ್ಷ ರೂ. ವೆಚ್ಚದ ರಸ್ತೆ ಕಾಮಗಾರಿಗೆ ಚಾಲನೆ ನೀಡಿ ಅವರು ಮಾತನಾಡಿದರು. ಇದೇ …
Read More »ಬೆಳಗಾವಿ: ಮುಮ್ಮಡಿಗೊಂಡ ಕನ್ನಡಿಗರ ಸಂಭ್ರಮ
ಬೆಳಗಾವಿ : ಒಂದೆಡೆ ಸ್ತಬ್ಧಚಿತ್ರಗಳ ಮೆರವಣಿಗೆ, ಮತ್ತೊಂದೆಡೆ ಯುವಜನರ ಹಾಡು- ಕುಣಿತ. ನಗರದಲ್ಲಿ ಮಂಗಳವಾರ ಕಂಡುಬಂದ 67ನೇ ಕರ್ನಾಟಕ ರಾಜ್ಯೋತ್ಸವದ ನೋಟವಿದು. ಮೂರು ವರ್ಷಗಳಿಂದ ಅದುಮಿಟ್ಟಿಗೊಂಡಿದ್ದ ನಾಡಭಕ್ತಿ ಏಕಾಏಕಿ ಅನಾವರಣಗೊಂಡಿತು. ಒತ್ತಕ್ಕಿ ಇಟ್ಟ ಸ್ಪ್ರಿಂಗು ನೆಗೆಯುವಂತೆ ಕನ್ನಡ ಹೃದಯಗಳು ಛಂಗನೆ ನೆಗೆದುಬಂದವು. ಎರಡು ವರ್ಷಗಳಿಂದ ಕೊರೊನಾ ಕಾಟಕ್ಕೆ ಮೆರವಣಿಗೆ ಕೈಬಿಡಲಾಗಿತ್ತು. ಕಳೆದ ವರ್ಷ ನಟ ಪುನೀತ್ ರಾಜ್‌ಕುಮಾರ್ ಅಗಲಿಕೆಯ ನೋವಲ್ಲಿ ಸಾಂಕೇತಿಕವಾಗಿ ಆಚರಿಸಲಾಗಿತ್ತು. ಈ ಬಾರಿ ಎಲ್ಲ ಅಡ್ಡಿಗಳೂ …
Read More »ಬೆಳಗಾವಿ: ಗಡಿಯಲ್ಲಿ ಭೋರ್ಗರೆದ ಕನ್ನಡ ಪ್ರೇಮ
ಬೆಳಗಾವಿ: ಉದ್ದಾನುದ್ದದ ಕನ್ನಡ ಬಾವುಟ. ಕನ್ನಡದ ಹಿರಿಮೆಯನ್ನು ಎತ್ತಿಹಿಡಿದ ಯುವಜನರ ಕೈಗಳು, ಕನ್ನಡಕ್ಕಾಗಿ ಕೈ ಎತ್ತಿ ಕಲ್ಪವೃಕ್ಷವಾದಂತೆ ಭಾಸವಾಗುತ್ತಿತ್ತು. ಜಾನಪದ ಕಲಾವಿದರ ಹೆಜ್ಜೆಗಳೂ ಕನ್ನಡದ ಹಿರಿಮೆಯನ್ನೇ ಮಾತನಾಡುತ್ತಿದ್ದವು. ಎತ್ತ ನೋಡಿದರತ್ತ, ಬೆಳಗಾವಿಯ ನಗರದಲ್ಲಿ ಕನ್ನಡದ ಡಿಂಡಿಮ ಮೊಳಗಿತು. ಮೂರು ವರ್ಷಗಳ ನಂತರ ಮಂಗಳವಾರ ಜರುಗಿದ ಕರ್ನಾಟಕ ರಾಜ್ಯೋತ್ಸವದಲ್ಲಿ ಹರ್ಷೋದ್ಗಾರಗಳು ಮುಗಿಲು ಮುಟ್ಟಿದ್ದರೆ, ಹೆಜ್ಜೆಗಳು ಭುವಿಯನ್ನು ನಡುಗಿಸುತ್ತಿದ್ದವು. ಅನ್ಯ ಭಾಷಿಗರು ಸೊಲ್ಲೆತ್ತದಂತೆ ಕನ್ನಡದ ಧ್ವನಿ ನೆಲ-ಬಾನು ಒಂದು ಮಾಡಿದವು. ನಾಡು, ನುಡಿಯ …
Read More »ರಾಜ್ಯೋತ್ಸವದ ಮೆರವಣಿಗೆಯಲ್ಲಿ ಹೆಜ್ಜೆ ಹಾಕಿದ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ
ಬೆಳಗಾವಿ: ಕನ್ನಡ ರಾಜ್ಯೋತ್ಸವ ಹಿನ್ನೆಲೆಯಲ್ಲಿ ಮಂಗಳವಾರ ಕುಂದಾ ನಗರಿ ಬೆಳಗಾವಿ ಅಕ್ಷರಶಃ ಮದುವಣಗಿತ್ತಿಯಂತೆ ಕಂಗೊಳ್ಳಿಸುತ್ತಿದ್ದು, ಕನ್ನಡ ರಾಜ್ಯೋತ್ಸವದ ಮೆರವಣೆಗೆಯಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ್ ಜಾರಕಿಹೊಳಿ ಅವರು ಅಪಾರ ಅಭಿಮಾನಿಗಳ ಜತೆ ಹೆಜ್ಜೆ ಹಾಕಿ ರಾಜೋತ್ಸವಕ್ಕೆ ಇನ್ನಷ್ಟು ಮೆರಗು ತಂದರು. ನಂತರ ಚೆನ್ನಮ್ಮ ವೃತ್ತದಲ್ಲಿ ಹಾಕಲಾದ ಟೆಂಟ್‌ನಲ್ಲಿ ಕುಳಿತು ರಾಜ್ಯೋತ್ಸವದ ಅದ್ಧೂರಿ ಮೆರವಣಿಗೆಯನ್ನು ವಿಕ್ಷೀಸಿದರು. ಅಪಾರ ಸಂಖ್ಯೆಯ ಯುವಕರು, ಯುವತಿಯರು, ಕನ್ನಡಪರ ಹೋರಾಟಗಾರರು ಶಾಸಕ ಸತೀಶ್ …
Read More »ಗೋಕಾಕ: ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ತಹಶೀಲ್ದಾರ ಪ್ರಕಾಶ ಹೊಳೆಪ್ಪಗೋಳ ಮಾತನಾಡುತ್ತಿರುವದು.
ಗೋಕಾಕ: ಕನ್ನಡ ಭಾಷಿಕ ಪ್ರದೇಶಗಳು ಒಂದಾಗಿ ಅಖಂಡ ಕರ್ನಾಟಕ ರಚನೆಯಾಗಬೇಕು ಎಂಬ ಕನಸು ನನಸಾಗಿ ಇಂದಿಗೆ 66 ವರ್ಷಗಳು ಪೂರ್ಣಗೊಂಡಿದ್ದು, ನಾವೆಲ್ಲರೂ 67ನೇ ರಾಜ್ಯೋತ್ಸವವನ್ನು ಸಡಗರ ಸಂಭ್ರಮದಿಂದ ಆಚರಿಸುತ್ತಿರುವದು ಕರ್ನಾಟಕದ ಇತಿಹಾಸದಲ್ಲಿ ಇದೊಂದು ಐತಿಹಾಸಿಕ ದಿನವಾಗಿದೆ ಎಂದು ತಹಶೀಲ್ದಾರ ಪ್ರಕಾಶ ಹೊಳೆಪ್ಪಗೋಳ ಹೇಳಿದರು. ಮಂಗಳವಾರದಂದು ತಾಲೂಕಾ ಆಡಳಿತ ವತಿಯಿಂದ ನಗರದ ವಾಲ್ಮೀಕಿ ಕ್ರೀಡಾಂಗಣದಲ್ಲಿ 67ನೇ ಕರ್ನಾಟಕ ರಾಜ್ಯೋತ್ಸವ ದಿನಾಚರಣೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿ, ಅಖಂಡ ಕರ್ನಾಟಕ …
Read More »