ಬೆಳಗಾವಿ : ಒಂದೆಡೆ ಸ್ತಬ್ಧಚಿತ್ರಗಳ ಮೆರವಣಿಗೆ, ಮತ್ತೊಂದೆಡೆ ಯುವಜನರ ಹಾಡು- ಕುಣಿತ. ನಗರದಲ್ಲಿ ಮಂಗಳವಾರ ಕಂಡುಬಂದ 67ನೇ ಕರ್ನಾಟಕ ರಾಜ್ಯೋತ್ಸವದ ನೋಟವಿದು. ಮೂರು ವರ್ಷಗಳಿಂದ ಅದುಮಿಟ್ಟಿಗೊಂಡಿದ್ದ ನಾಡಭಕ್ತಿ ಏಕಾಏಕಿ ಅನಾವರಣಗೊಂಡಿತು. ಒತ್ತಕ್ಕಿ ಇಟ್ಟ ಸ್ಪ್ರಿಂಗು ನೆಗೆಯುವಂತೆ ಕನ್ನಡ ಹೃದಯಗಳು ಛಂಗನೆ ನೆಗೆದುಬಂದವು. ಎರಡು ವರ್ಷಗಳಿಂದ ಕೊರೊನಾ ಕಾಟಕ್ಕೆ ಮೆರವಣಿಗೆ ಕೈಬಿಡಲಾಗಿತ್ತು. ಕಳೆದ ವರ್ಷ ನಟ ಪುನೀತ್ ರಾಜ್‌ಕುಮಾರ್ ಅಗಲಿಕೆಯ ನೋವಲ್ಲಿ ಸಾಂಕೇತಿಕವಾಗಿ ಆಚರಿಸಲಾಗಿತ್ತು. ಈ ಬಾರಿ ಎಲ್ಲ ಅಡ್ಡಿಗಳೂ …
Read More »ಬೆಳಗಾವಿ: ಗಡಿಯಲ್ಲಿ ಭೋರ್ಗರೆದ ಕನ್ನಡ ಪ್ರೇಮ
ಬೆಳಗಾವಿ: ಉದ್ದಾನುದ್ದದ ಕನ್ನಡ ಬಾವುಟ. ಕನ್ನಡದ ಹಿರಿಮೆಯನ್ನು ಎತ್ತಿಹಿಡಿದ ಯುವಜನರ ಕೈಗಳು, ಕನ್ನಡಕ್ಕಾಗಿ ಕೈ ಎತ್ತಿ ಕಲ್ಪವೃಕ್ಷವಾದಂತೆ ಭಾಸವಾಗುತ್ತಿತ್ತು. ಜಾನಪದ ಕಲಾವಿದರ ಹೆಜ್ಜೆಗಳೂ ಕನ್ನಡದ ಹಿರಿಮೆಯನ್ನೇ ಮಾತನಾಡುತ್ತಿದ್ದವು. ಎತ್ತ ನೋಡಿದರತ್ತ, ಬೆಳಗಾವಿಯ ನಗರದಲ್ಲಿ ಕನ್ನಡದ ಡಿಂಡಿಮ ಮೊಳಗಿತು. ಮೂರು ವರ್ಷಗಳ ನಂತರ ಮಂಗಳವಾರ ಜರುಗಿದ ಕರ್ನಾಟಕ ರಾಜ್ಯೋತ್ಸವದಲ್ಲಿ ಹರ್ಷೋದ್ಗಾರಗಳು ಮುಗಿಲು ಮುಟ್ಟಿದ್ದರೆ, ಹೆಜ್ಜೆಗಳು ಭುವಿಯನ್ನು ನಡುಗಿಸುತ್ತಿದ್ದವು. ಅನ್ಯ ಭಾಷಿಗರು ಸೊಲ್ಲೆತ್ತದಂತೆ ಕನ್ನಡದ ಧ್ವನಿ ನೆಲ-ಬಾನು ಒಂದು ಮಾಡಿದವು. ನಾಡು, ನುಡಿಯ …
Read More »ರಾಜ್ಯೋತ್ಸವದ ಮೆರವಣಿಗೆಯಲ್ಲಿ ಹೆಜ್ಜೆ ಹಾಕಿದ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ
ಬೆಳಗಾವಿ: ಕನ್ನಡ ರಾಜ್ಯೋತ್ಸವ ಹಿನ್ನೆಲೆಯಲ್ಲಿ ಮಂಗಳವಾರ ಕುಂದಾ ನಗರಿ ಬೆಳಗಾವಿ ಅಕ್ಷರಶಃ ಮದುವಣಗಿತ್ತಿಯಂತೆ ಕಂಗೊಳ್ಳಿಸುತ್ತಿದ್ದು, ಕನ್ನಡ ರಾಜ್ಯೋತ್ಸವದ ಮೆರವಣೆಗೆಯಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ್ ಜಾರಕಿಹೊಳಿ ಅವರು ಅಪಾರ ಅಭಿಮಾನಿಗಳ ಜತೆ ಹೆಜ್ಜೆ ಹಾಕಿ ರಾಜೋತ್ಸವಕ್ಕೆ ಇನ್ನಷ್ಟು ಮೆರಗು ತಂದರು. ನಂತರ ಚೆನ್ನಮ್ಮ ವೃತ್ತದಲ್ಲಿ ಹಾಕಲಾದ ಟೆಂಟ್‌ನಲ್ಲಿ ಕುಳಿತು ರಾಜ್ಯೋತ್ಸವದ ಅದ್ಧೂರಿ ಮೆರವಣಿಗೆಯನ್ನು ವಿಕ್ಷೀಸಿದರು. ಅಪಾರ ಸಂಖ್ಯೆಯ ಯುವಕರು, ಯುವತಿಯರು, ಕನ್ನಡಪರ ಹೋರಾಟಗಾರರು ಶಾಸಕ ಸತೀಶ್ …
Read More »ಗೋಕಾಕ: ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ತಹಶೀಲ್ದಾರ ಪ್ರಕಾಶ ಹೊಳೆಪ್ಪಗೋಳ ಮಾತನಾಡುತ್ತಿರುವದು.
ಗೋಕಾಕ: ಕನ್ನಡ ಭಾಷಿಕ ಪ್ರದೇಶಗಳು ಒಂದಾಗಿ ಅಖಂಡ ಕರ್ನಾಟಕ ರಚನೆಯಾಗಬೇಕು ಎಂಬ ಕನಸು ನನಸಾಗಿ ಇಂದಿಗೆ 66 ವರ್ಷಗಳು ಪೂರ್ಣಗೊಂಡಿದ್ದು, ನಾವೆಲ್ಲರೂ 67ನೇ ರಾಜ್ಯೋತ್ಸವವನ್ನು ಸಡಗರ ಸಂಭ್ರಮದಿಂದ ಆಚರಿಸುತ್ತಿರುವದು ಕರ್ನಾಟಕದ ಇತಿಹಾಸದಲ್ಲಿ ಇದೊಂದು ಐತಿಹಾಸಿಕ ದಿನವಾಗಿದೆ ಎಂದು ತಹಶೀಲ್ದಾರ ಪ್ರಕಾಶ ಹೊಳೆಪ್ಪಗೋಳ ಹೇಳಿದರು. ಮಂಗಳವಾರದಂದು ತಾಲೂಕಾ ಆಡಳಿತ ವತಿಯಿಂದ ನಗರದ ವಾಲ್ಮೀಕಿ ಕ್ರೀಡಾಂಗಣದಲ್ಲಿ 67ನೇ ಕರ್ನಾಟಕ ರಾಜ್ಯೋತ್ಸವ ದಿನಾಚರಣೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿ, ಅಖಂಡ ಕರ್ನಾಟಕ …
Read More »ಮೆಳವಂಕಿ ಸೇತುವೆ ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸಿದ ಸರ್ವೋತ್ತಮ ಜಾರಕಿಹೊಳಿ
ಗೋಕಾಕ : ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ವಿಶೇಷ ಕಾಳಜಿಯಿಂದ ಸಾರ್ವಜನಿಕ ಸಂಚಾರಕ್ಕಾಗಿ ಮೆಳವಂಕಿ ಹತ್ತಿರ ಸೇತುವೆ ನಿರ್ಮಾಣ ಕಾಮಗಾರಿಗೆ 10 ಕೋಟಿ ರೂ. ಅನುದಾನ ಬಿಡುಗಡೆಯಾಗಿದೆ ಎಂದು ಯುವ ಧುರೀಣ ಸರ್ವೋತ್ತಮ ಜಾರಕಿಹೊಳಿ ತಿಳಿಸಿದರು. ಮಂಗಳವಾರದಂದು ತಾಲೂಕಿನ ಮೆಳವಂಕಿ ಗ್ರಾಮದಲ್ಲಿ ಲೋಕೋಪಯೋಗಿ ಇಲಾಖೆಯ ಅನುದಾನದಲ್ಲಿ ಮಂಜೂರಾದ ಸೇತುವೆ ನಿರ್ಮಾಣ ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸಿ ಮಾತನಾಡಿದ ಅವರು, ಈ ಕಾಮಗಾರಿ ಅನುಷ್ಠಾನದಿಂದ ದಂಡಿನಮಾರ್ಗ ಸಾರ್ವಜನಿಕರಿಗೆ ಅನುಕೂಲವಾಗಲಿದೆ ಎಂದು …
Read More »ಕರ್ನಾಟಕದಲ್ಲೇ ಬೆಳಗಾವಿ ಉಳಿಸಲು ಹೋರಾಡಿದ್ದ ನಾಗನೂರು ಶ್ರೀ
ಅಥಣಿ(ನ.01): ದೇಶದ ಸ್ವಾತಂತ್ರ್ಯಕ್ಕಾಗಿ ಶ್ರಮಿಸಿದ ಅಗ್ರಗಣ್ಯರಲ್ಲಿ ಬೆಳಗಾವಿ ರುದ್ರಾಕ್ಷಿ ಮಠದ ನಾಗನೂರಿನ ಡಾ. ಶಿವಬಸವ ಸ್ವಾಮೀಜಿಯೂ ಒಬ್ಬರು. ಅವರು ಸ್ವಾತಂತ್ರ್ಯಕ್ಕೆ ಎಷ್ಟು ಶ್ರಮಿಸಿದ್ದರೋ ಅಷ್ಟೇ ಶ್ರಮವಹಿಸಿ ಗಡಿ ನಾಡುವ ಬೆಳಗಾವಿಯಲ್ಲಿ ಕನ್ನಡ ಕಟ್ಟುವ ಕೆಲಸ ಮಾಡಿದ್ದಾರೆ. ಆಗ ಕನ್ನಡ-ಮರಾಠಿಗರ ಭಾಷಾ ಏಕೀಕರಣ ದನಿ ಮುಗಿಲೆತ್ತರಕ್ಕೆ ಏರಿತ್ತು. ಕೇಂದ್ರ ಸರ್ಕಾರ ಫಜಲ್ ಅಲಿ ಅವರ ಅಧ್ಯಕ್ಷತೆಯಲ್ಲಿ ಒಂದು ಸಮಿತಿ ನೇಮಿಸಿತ್ತು. ಈ ಸಮಿತಿ ಬೆಳಗಾವಿಗೆ ಭೇಟಿ ನೀಡಿದ್ದಾಗ ಸಮಿತಿಯ ಮುಂದೆ ಶಿವಬಸವ …
Read More »ಬೆಳಗಾವಿಯಲ್ಲಿ ಶ್ವಾನಗಳ ಭರ್ಜರಿ ಪ್ರದರ್ಶನ; ದೇಶದ ನಾನಾ ರಾಜ್ಯದಿಂದ ಬಂದ ಶ್ವಾನಗಳು
ಬೆಳಗಾವಿ ನಗರದ ಶಗುನ್ ಗಾರ್ಡನ್ನಲ್ಲಿ 1000ಕ್ಕೂ ಅಧಿಕ ಶ್ವಾನಗಳ ಪ್ರದರ್ಶನ ಭಾನುವಾರ (ಅ.30) ವಿಕೇಂಡ್ ಇದ್ದ ಹಿನ್ನೆಲೆ ಕುಂದಾನಗರಿಯಲ್ಲಿ ಶ್ವಾನಗಳ ಭರ್ಜರಿ ಪ್ರದರ್ಶನ ನಡೆಯಿತು. ವರ್ಷಕ್ಕೊಮ್ಮೆ ನಡೆಯುವ ಈ ಶ್ವಾನಗಳ ಪ್ರದರ್ಶನಕ್ಕೆ ದೇಶದ ನಾನಾ ರಾಜ್ಯಗಳಿಂದ ಶ್ವಾನಗಳು ಬಂದಿರುತ್ತವೆ. ಎರಡು ದಿನದಲ್ಲಿ ಸಾವಿರಕ್ಕೂ ಅಧಿಕ ಶ್ವಾನಗಳು, 43 ವಿವಿಧ ತಳಿಗಳು ಪ್ರದರ್ಶನದಲ್ಲಿ ಭಾಗಿಯಾಗಿ ಟ್ರೋಫಿ ಮುಡಿಗೇರಿಸಿಕೊಂಡಿವೆ. ಅಷ್ಟಕ್ಕೂ ಯಾವೆಲ್ಲಾ ತಳಿಗಳು ಭಾಗಹಿಸಿದ್ದವೂ? ಹೇಗೆ ಶ್ವಾಗಳನ್ನ ಇಲ್ಲಿ ಆಯ್ಕೆ ಮಾಡಿ ಟ್ರೋಫಿ …
Read More »ಬೆಳಗಾವಿ ಕನ್ನಡಿಗರ ಉಸಿರು: ಸಚಿವ ಗೋವಿಂದ ಕಾರಜೋಳ
ಬೆಳಗಾವಿ: ‘ಇತಿಹಾಸದಲ್ಲಿ ‘ವೇಣುಗ್ರಾಮ’ ಎಂದೇ ಹೆಸರಾದ ಬೆಳಗಾವಿಯು ಕನ್ನಡಿಗರ ಉಸಿರು. ಕನ್ನಡಿಗರೇ ಆದ ಕದಂಬರು ಸಮೃದ್ಧ ಸಾಮ್ರಾಜ್ಯ ಕಟ್ಟಿದ್ದೂ ಇದೇ ನೆಲದಲ್ಲಿ. ಕರ್ನಾಟಕ ಏಕೀಕರಣದಲ್ಲೂ ಇಲ್ಲಿನ ಕನ್ನಡಿಗರ ದಿಟ್ಟ ಹೋರಾಟ ಮೈಲಿಗಲ್ಲಾಗಿದೆ’ ಎಂದು ಜಿಲ್ಲಾ ಉಸ್ತುವಾರಿ ಸಚಿವ ಗೋವಿಂದ ಕಾರಜೋಳ ಬಣ್ಣಿಸಿದರು. ಇಲ್ಲಿನ ಜಿಲ್ಲಾ ಕ್ರೀಡಾಂಗಣದಲ್ಲಿ ಮಂಗಳವಾರ ನಡೆದ 67ನೇ ಕರ್ನಾಟಕ ರಾಜ್ಯೋತ್ಸವ ಭಾಷಣ ಮಾಡಿದ ಅವರು, ‘ರಾಜ್ಯದ ಏಕೀಕರಣ ಚಳವಳಿಯಲ್ಲಿ ಜಿಲ್ಲೆಯ ಹಲವಾರು ಮಹನೀಯರು ತ್ಯಾಗ ಮಾಡಿದ್ದಾರೆ. ಬೈಲಹೊಂಗಲದ …
Read More »ರಾಜ್ಯೋತ್ಸವ: ಕುಂದಾನಗರಿ ಸಜ್ಜು
ಬೆಳಗಾವಿ: ‘ಬೆಳಕಿನ ಹಬ್ಬ’ ದೀಪಾವಳಿ ಬೆನ್ನಲ್ಲೇ, ಅದ್ದೂರಿಯಾಗಿ ಕರ್ನಾಟಕ ರಾಜ್ಯೋತ್ಸವ ಆಚರಿಸಲು ಕುಂದಾನಗರಿ ಸಿಂಗಾರಗೊಂಡಿದೆ. ನ.1ರಂದು ನಡೆಯಲಿರುವ ಕನ್ನಡೋತ್ಸವಕ್ಕೆ ಸಾಕ್ಷಿಯಾಗಲು ರಾಜ್ಯದ ವಿವಿಧೆಡೆಯಿಂದ ಸಾವಿರಾರು ಜನರ ದಂಡು ಸೋಮವಾರವೇ ಬೆಳಗಾವಿಯತ್ತ ಮುಖಮಾಡಿದೆ. ನಗರದ ಪ್ರಮುಖ ವೃತ್ತಗಳು, ರಸ್ತೆಗಳಲ್ಲಿ ನಾಡಧ್ವಜಗಳು ಮತ್ತು ಸ್ವಾಗತ ಕಮಾನುಗಳು ರಾರಾಜಿಸುತ್ತಿವೆ. ರಾಜ್ಯೋತ್ಸವಕ್ಕೆ ಶುಭಾಶಯ ಕೋರಿ ಕನ್ನಡ ಪರ ಸಂಘಟನೆಗಳು ಅಲ್ಲಲ್ಲಿ ಫ್ಲೆಕ್ಸ್‌ಗಳನ್ನು ಅಳವಡಿಸಿವೆ. ಇದೇ ಮೊದಲ ಸಲ ರಾಜ್ಯಮಟ್ಟದಲ್ಲಿ ಆಚರಿಸಲಾದ ‘ಕಿತ್ತೂರು ಉತ್ಸವ’ ಅಂಗವಾಗಿ …
Read More »ಬೆಳಗಾವಿ ಪ್ರವೇಶಕ್ಕೆ ಶಿವಸೇನೆ ಕಾರ್ಯಕರ್ತರ ಯತ್ನ: ತಡೆದ ಪೊಲೀಸ್ ಪಡೆ
ನಿಪ್ಪಾಣಿ (ಬೆಳಗಾವಿ ಜಿಲ್ಲೆ): ಗಡಿಭಾಗದಿಂದ ರಾಜ್ಯ ಪ್ರವೇಶಿಸಲು ಯತ್ನಿಸಿದ ಮಹಾರಾಷ್ಟ್ರದ ಶಿವಸೇನೆಯ ಕಾರ್ಯಕರ್ತರನ್ನು ಸೋಮವಾರ ತಾಲ್ಲೂಕಿನ ಕೊಗನೊಳಿ ಚೆಕ್ ಪೋಸ್ಟ್ ಬಳಿ ಪುಣೆ- ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ತಡೆದ ರಾಜ್ಯ ಪೊಲೀಸರು ಅವರನ್ನು ಮರಳಿ ಕಳುಹಿಸಿದ್ದಾರೆ. ಕರ್ನಾಟಕ ರಾಜ್ಯೋತ್ಸವದಂದು ಬೆಳಗಾವಿಯಲ್ಲಿ ರ‍್ಯಾಲಿ ಆಯೋಜಿಸಲಾಗುವುದೆಂದು ಘೋಷಿಸಿ, ರಾಜ್ಯ ಪ್ರವೇಶಿಸಲು ಪ್ರಯತ್ನಿಸುತ್ತಿದ್ದ ಶಿವಸೇನೆಯ ಕೊಲ್ಹಾಪುರ ಜಿಲ್ಲೆಯ ಅಧ್ಯಕ್ಷ ವಿಜಯ ದೇವಣೆ ಮತ್ತು ಕಾರ್ಯಕರ್ತರನ್ನು ಗಡಿಯಲ್ಲಿಯೇ ಪೊಲೀಸರು ತಡೆದರು. ಕೂಡಲೇ ಶಿವಸೇನೆಯ ಕಾರ್ಯಕರ್ತರು ರಾಷ್ಟ್ರೀಯ …
Read More »