Breaking News

ಬೆಳಗಾವಿ

ಎಂ.ಕೆ.ಹುಬ್ಬಳ್ಳಿಯಲ್ಲಿ ನೀರಿಗಾಗಿ ಹಾಹಾಕಾರ:

ಕಿತ್ತೂರು ತಾಲೂಕಿನ ಎಂ.ಕೆ.ಹುಬ್ಬಳ್ಳಿ ಪಟ್ಟಣದಲ್ಲಿ ನೀರಿಗಾಗಿ ಹಾಹಾಕಾರ ಶುರುವಾಗಿದೆ. ಕಳೆದ 8 ದಿನಗಳಿಂದ ನೀರು ಬಿಡದ ಹಿನ್ನೆಲೆ ಆಕ್ರೋಶಗೊಂಡಿರುವ ಇಲ್ಲಿನ ನಿವಾಸಿಗಳು ಪ್ರತಿಭಟನೆ ನಡೆಸಿದರು. ಹೌದು ಎಂಕೆ ಹುಬ್ಬಳ್ಳಿ ಪಟ್ಟಣದ ವಾರ್ಡ ನಂ.1, 2, 3ರಲ್ಲಿ ಕಳೆದ ಎಂಟು ದಿನಗಳಿಂದ ನೀರು ಬಿಟ್ಟಿಲ್ಲ. ಇಲ್ಲಿನ ಜನ ನೀರಿಗಾಗಿ ಪರಿತಪಿಸುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಇದರಿಂದ ಆಕ್ರೋಶಗೊಂಡಿರುವ ಇಲ್ಲಿನ ನಿವಾಸಿಗಳು ಕೈಯಲ್ಲಿ ಖಾಲಿ ಕೊಡಗಳನ್ನು ಹಿಡಿದುಕೊಂಡು ಪ್ರತಿಭಟನೆ ನಡೆಸಿದರು. ಈ ವೇಳೆ ಪಟ್ಟಣ …

Read More »

ಬೆಳಗಾವಿ ಜಿಲ್ಲೆಯಲ್ಲಿ ಯಾವುದೇ ಕಾರಣಕ್ಕೂ ದಲಿತರಿಗೆ ಅನ್ಯಾಯ ಆಗಲು ಬಿಡೋಲ್ಲ: ಎಸ್‍ಪಿ ಡಾ.ಸಂಜೀವ್ ಪಾಟೀಲ್

ಬೆಳಗಾವಿ ಜಿಲ್ಲೆಯಲ್ಲಿ ಯಾವುದೇ ಕಾರಣಕ್ಕೂ ದಲಿತರಿಗೆ ಅನ್ಯಾಯ ಆಗಲು ಬಿಡೋದಿಲ್ಲ. ನಾನು ಕೂಡ ದಲಿತ ಕೇರಿಗೆ ಬಂದು ನಿಮ್ಮ ಸಮಸ್ಯೆ ಆಲಿಸುತ್ತೇನೆ ಎಂದು ಎಸ್‍ಪಿ ಡಾ.ಸಂಜೀವ್ ಪಾಟೀಲ್ ಭರವಸೆ ನೀಡಿದರು. ಗುರುವಾರ ಬೆಳಗಾವಿಯ ಎಸ್‍ಪಿ ಕಚೇರಿಯಲ್ಲಿ ಜಿಲ್ಲೆಯ ವಿವಿಧ ತಾಲೂಕುಗಳ ದಲಿತ ಮುಖಂಡರ ಜೊತೆಗೆ ಎಸ್‍ಪಿ ಡಾ.ಸಂಜೀವ್ ಪಾಟೀಲ್ ಸಭೆ ನಡೆಸಿದರು. ಈ ವೇಳೆ ದಲಿತ ಮುಖಂಡರು ತಮ್ಮ ವಿವಿಧ ಸಮಸ್ಯೆಗಳ ಬಗ್ಗೆ ಎಸ್‍ಪಿ ಅವರ ಗಮನಕ್ಕೆ ತಂದರು. ಈ …

Read More »

ಗೋಕಾಕ: ರಮೇಶ ಜಾರಕಿಹೊಳಿ, ಹೇಳಿಕೆ

ಗೋಕಾಕ: ಪಂಚಮಸಾಲಿ ಸಮಾಜಕ್ಕೆ 2ಎ ಮೀಸಲಾತಿಗಾಗಿ ಕೂಡಲಸಂಗಮ ಜಯ ಮೃತ್ಯುಂಜಯ ಸ್ವಾಮಿಜಿಗಳ ನೇತೃತ್ವದಲ್ಲಿ ನಡೆಯುತ್ತಿರುವ ಹೋರಾಟಕ್ಕೆ ಎಲ್ಲ ರೀತಿಯ ಸಹಕಾರ ನೀಡುವುದಾಗಿ ಶಾಸಕ ರಮೇಶ ಜಾರಕಿಹೊಳಿ ತಿಳಿಸಿದ್ದಾರೆ. ಗುರುವಾರದಂದು ಪತ್ರಿಕಾ ಪ್ರಕಟನೆಯಲ್ಲಿ ತಿಳಿಸಿರುವ ಅವರು, ಪಂಚಮಸಾಲಿ ಸಮಾಜದ ಹೋರಾಟಕ್ಕೆ ಸಂಪೂರ್ಣ ಬೆಂಬಲ ನೀಡಲಾಗುವುದು, ಕೂಡಲ ಸಂಗಮ ಪೀಠದ ಜಗದ್ಗುರು ಜಯ ಮೃತ್ಯುಂಜಯ ಸ್ವಾಮಿಜಿಯವ ನೇತ್ರತ್ವದಲ್ಲಿ ಪಂಚಮಸಾಲಿ ಸಮಾಜಕ್ಕೆ ಮಕ್ಕಳ ಶಿಕ್ಷಣ ಮತ್ತು ಉದ್ಯೋಗಕ್ಕಾಗಿ 2ಎ ಮೀಸಲಾತಿ ನೀಡಬೇಕೆನ್ನುವ ಅವರ ಹೋರಾಟ …

Read More »

ಮುಚ್ಚಂಡಿ ಗ್ರಾಮದ ಹೊರ ವಲಯದಲ್ಲಿ ಹೈಸ್ಕೂಲ್ ವಿದ್ಯಾರ್ಥಿಯ ಬರ್ಬರ ಹತ್ಯೆ

ಹೈಸ್ಕೂಲ್ ವಿದ್ಯಾರ್ಥಿಯನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಬೆಳಗಾವಿ ತಾಲೂಕಿನ ಮುಚ್ಚಂಡಿ ಗ್ರಾಮದ ಹೊರ ವಲಯದಲ್ಲಿ ನಡೆದಿದೆ. ನಿನ್ನೆ ರಾತ್ರಿ ವಿದ್ಯಾರ್ಥಿಯನ್ನು ಕೊಲೆ ಮಾಡಿ ಮುಚ್ಚಂಡಿ ಗ್ರಾಮದ ಹೊರಭಾಗದಲ್ಲಿ ಹಂತಕರು ಎಸೆದು ಹೋಗಿದ್ದಾರೆ. ಬೆಳಗಾವಿಯ ಛತ್ರಪತಿ ಶಿವಾಜಿ‌ ನಗರದ ಪ್ರಜ್ವಲ್ ಶಿವಾನಂದ ಕರಿಗಾರ ಕೊಲೆಯಾದ ವಿದ್ಯಾರ್ಥಿ. ನಗರದ ಜಿ.ಎ.ಹೈಸ್ಕೂಲ್ ನಲ್ಲಿ ಓದುತ್ತಿದ್ದ ವಿದ್ಯಾರ್ಥಿ. ವಿದ್ಯಾರ್ಥಿಯ ಶಾಲಾ ಸಮವಸ್ತ್ರದಿಂದ ಗುರುತು ಪತ್ತೆಯಾಗಿದೆ. ಬೆಳಗಾವಿಯ ಜಿಎ ಹೈಸ್ಕೂಲಿನಲ್ಲಿ10ನೇ ತರಗತಿಯಲ್ಲಿ ಓದುತ್ತಿರುವ ವಿದ್ಯಾರ್ಥಿ ಎಂದು …

Read More »

ದೆವ್ವ ಕರೆದರೆ ಹೋಗಲು ಆಗುತ್ತಾ? : ಸುಮಲತಾರಿಗೆ ರವೀಂದ್ರ ಶ್ರೀಕಂಠಯ್ಯ ತಿರುಗೇಟು

ಮೈಸೂರು : ”ಅವರು ಕರೆದಾಕ್ಷಣ ಹೋಗಲಾಗುವುದಿಲ್ಲ,ಉತ್ತಮರು ಕರೆದರೇ ಹೋಗಬಹುದು, ದೆವ್ವ ಕರೆದರೆ ಹೋಗಲು ಆಗುತ್ತಾ? ದೆವ್ವದ ಬಾಯಲ್ಲಿ ಭಗವದ್ಗೀತೆ ಕೇಳಲು ಸಾಧ್ಯವೇ?” ಎಂದು ಶ್ರೀರಂಗಪಟ್ಟಣ ಶಾಸಕ ರವೀಂದ್ರ ಶ್ರೀಕಂಠಯ್ಯ ಅವರು ಸಂಸದೆ ಸುಮಲತಾ ಅವರಿಗೆ ತಿರುಗೇಟು ನೀಡಿದ್ದಾರೆ.   ಮಂಡ್ಯ ಜಿಲ್ಲೆಯ ಜೆಡಿಎಸ್ ಶಾಸಕರನ್ನು ಆಣೆ ಪ್ರಮಾಣ ಮಾಡಲು ಬರುವಂತೆ ಸುಮಲತಾ ಅವರು ಆಹ್ವಾನ ನೀಡಿರುವ ವಿಚಾರಕ್ಕೆ ಸಂಬಂಧಿಸಿ ಪ್ರತಿಕ್ರಿಯಿಸಿ, ”ಸುಮಲತಾ ಜತೆಯಲ್ಲಿರುವವರು ಭ್ರಷ್ಟಾತಿಭ್ರಷ್ಟರು.ಮೈಸೂರು ಬೆಂಗಳೂರು ಹೈವೇ ಕಾಮಗಾರಿಯಲ್ಲಿ ನೂರಾರು ಕೋಟಿ …

Read More »

K.P.T.C.L. ಪರೀಕ್ಷೆ ಅಕ್ರಮ ಮತ್ತೊರ್ವ ಆರೋಪಿಯನ್ನು ಬಂಧಿಸುವಲ್ಲಿ ಗೋಕಾಕ್ ನಗರ ಪೊಲೀಸರು ಯಶಸ್ವಿ

ಕೆಪಿಟಿಸಿಎಲ್ ಪರೀಕ್ಷೆ ಅಕ್ರಮ ಪ್ರಕರಣದಲ್ಲಿ ಮತ್ತೊರ್ವ ಆರೋಪಿಯನ್ನು ಬಂಧಿಸುವಲ್ಲಿ ಗೋಕಾಕ್ ನಗರ ಪೊಲೀಸರು ಯಶಸ್ವಿಯಾಗಿದ್ದಾರೆ. ಭೀಮಶಿ(ಭೀಮಪ್ಪ) ಸಿದ್ದಪ್ಪ ಗುದಿಗೊಪ್ಪ ಬಂಧಿತ ಆರೋಪಿ. ಈತ ಇಲೆಕ್ಟ್ರಾನಿಕ್ ಡಿವೈಸ್‍ಗಳನ್ನೂ ವಿದ್ಯಾರ್ಥಿಗಳಿಗೆ ಕೊಟ್ಟವನು ಮತ್ತು ಪ್ರಶ್ನೆ ಪತ್ರಿಕೆ ಸೋರಿಕೆ ಮಾಡಲು ಮತ್ತು ಇಲೆಕ್ಟ್ರಾನಿಕ್ ಡಿವೈಸ್ ಖರೀದಿ ಮಾಡಲು ಹಣ ಕೊಟ್ಟವನು. ಈತನಿಂದ 6 ಮೊಬೈಲ್ ಮತ್ತು ಒಂದು ಲ್ಯಾಪಟಾಪ್ ಮತ್ತು 3 ಇಲೆಕ್ಟ್ರಾನಿಕ್ ಡಿವೈಸ್ ಮತ್ತು ಒಂದು ಕಾರನ್ನು ಜಪ್ತಿ ಮಾಡಲಾಗಿದೆ. ಬಂಧಿತ ಆರೋಪಿಯನ್ನು …

Read More »

ಇದು ಸ್ಮಶಾನವೋ..? ಗಾಡಿ ಪಾರ್ಕಿಂಗ್ ಜಾಗವೋ..? ಮಾಜಿ ಮೇಯರ್ ವಿಜಯ್ ಮೋರೆ

ಈ ಸ್ಮಶಾನ ಭೂಮಿಯನ್ನು ವಿವಿಧ ಸಂಘಟನೆಗಳು ಕೂಡಿಕೊಂಡು ನಂದನವನವಾಗಿ ಅಭಿವೃದ್ಧಿ ಮಾಡಿದ್ದರು. ಆದರೆ ಮಹಾನಗರ ಪಾಲಿಕೆ ಅಧಿಕಾರಿಗಳ ನಿರ್ವಹಣೆ ಕೊರತೆಯಿಂದ ಈ ಸ್ಮಶಾನ ಭೂಮಿ ಹಲವು ಸಮಸ್ಯೆಗಳ ತಾಣವಾಗಿ ಮಾರ್ಪಟ್ಟಿದೆ. ಅಲ್ಲದೇ ಇದು ಸ್ಮಶಾನವೋ..? ಗಾಡಿ ಪಾರ್ಕಿಂಗ್ ಜಾಗವೋ..? ಎಂದು ಜನ ಪ್ರಶ್ನಿಸುತ್ತಿದ್ದಾರೆ.   ಎಲ್ಲಿ ಬೇಕಾದಲ್ಲಿ ನಿಲ್ಲಿಸಿರುವ ಹಳೆಯ ವಾಹನಗಳು, ಕಸ ವಿಲೇವಾರಿ ವಾಹನಗಳು, ಹದಗೆಟ್ಟ ರಸ್ತೆ. ಹೌದು ನೀವು ನೋಡುತ್ತಿರುವ ಈ ದೃಶ್ಯ ಬೆಳಗಾವಿಯ ಪ್ರಸಿದ್ಧ ಸದಾಶಿವ ನಗರ …

Read More »

ಸತೀಶ ಜಾರಕಿಹೊಳಿ ಅವರ ಸೂಚನೆ ಮೇರೆಗೆ ರೈಲ್ವೇ ಗೇಟ್ ಕಳಪೆ ಕಾಮಗಾರಿ ಖಂಡಿಸಿ ಪ್ರತಿಭಟನೆ

ಬೆಳಗಾವಿಯ ಟಿಳಕವಾಡಿ 3ನೇ ರೈಲ್ವೇ ಗೇಟ್‍ನ ಮೇಲ್ಸೇತುವೆಯ ಕಳಪೆ ಕಾಮಗಾರಿ ಖಂಡಿಸಿ ಕಾಂಗ್ರೆಸ್ ಪಕ್ಷದಿಂದ ವಿನೂತನ ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು. ಹೌದು ಬೆಳಗಾವಿ-ಖಾನಾಪುರ ರಸ್ತೆ ಟಿಳಕವಾಡಿಯಲ್ಲಿ ನಿರ್ಮಿಸಲಾಗಿರುವ 3ನೇ ರೈಲ್ವೇ ಗೇಟ್‍ನ ಮೇಲ್ಸೇತುವೆಯನ್ನು ಕಳೆದ ವಾರವಷ್ಟೇ ಸಂಸದೆ ಮಂಗಲಾ ಅಂಗಡಿ ಅವರು ನಗರ ಶಾಸಕರು, ರೈಲ್ವೇ ಅಧಿಕಾರಿಗಳ ಸಮ್ಮುಖದಲ್ಲಿ ಲೋಕಾರ್ಪಣೆಗೊಳಿಸಿದ್ದರು. ಈ ಮೇಲ್ಸೇತುವೆ ಉದ್ಘಾಟನೆಗೊಂಡ ಕೇವಲ 24 ಗಂಟೆಯಲ್ಲಿಯೇ ರಸ್ತೆಯಲ್ಲಿ ತೆಗ್ಗು ಬಿದ್ದಿದ್ದು ತೀವ್ರ ಚರ್ಚೆಗೆ ಗ್ರಾಸವಾಗಿತ್ತು. ಇದೀಗ ಕಳಪೆ ಕಾಮಗಾರಿ …

Read More »

ಕೆಪಿಟಿಸಿಎಲ್‌ ಪರೀಕ್ಷಾ ಅಕ್ರಮ: ಮತ್ತೆ ಇಬ್ಬರ ಬಂಧನ

ಬೆಳಗಾವಿ: ಕೆಪಿಟಿಸಿಎಲ್‌ ಕಿರಿಯ ಸಹಾಯಕರ ನೇಮಕಾತಿ ಪರೀಕ್ಷೆಯಲ್ಲಿ ನಡೆದ ಅಕ್ರಮಕ್ಕೆ ಸಂಬಂಧಿಸಿದಂತೆ, ಮಂಗಳವಾರ ಪೊಲೀಸರು ಮತ್ತೆ ಇಬ್ಬರು ಬಂಧಿಸಿದ್ದಾರೆ. ಇದರೊಂದಿಗೆ ಬಂಧಿತರ ಸಂಖ್ಯೆ 22ಕ್ಕೆ ಏರಿಕೆಯಾಗಿದೆ. ಸೋಮವಾರ 20 ಮಂದಿಗೆ ಜಾಮೀನು ಕೂಡ ಸಿಕ್ಕಿದೆ.   ಗೋಕಾಕ ತಾಲ್ಲೂಕಿನ ಲೋಳಸೂರ ಗ್ರಾಮದ ಯಲ್ಲಪ್ಪ ಮಹದೇವ ರಕ್ಷಿ (26) ಹಾಗೂ ಚಿಕ್ಕೋಡಿ ತಾಲ್ಲೂಕಿನ ಜಾಗನೂರ ಗ್ರಾಮದ ನಾಗಪ್ಪ ಶಿವಪ್ಪ ದೊಡಮನಿ (27) ಬಂಧಿತರು. ನಾಗಪ್ಪ ಪರೀಕ್ಷಾ ಕೇಂದ್ರದೊಳಗೆ ಎಲೆಕ್ಟ್ರಾನಿಕ್ಸ್‌ ಉಪಕರಣ ತೆಗೆದುಕೊಂಡು ಹೋಗಿ …

Read More »

ಕೆಪಿಟಿಸಿಎಲ್ ನೇಮಕಾತಿ ಪರೀಕ್ಷೆ ಅಕ್ರಮ; ಇತ್ತ ಜಾಮೀನು- ಅತ್ತ ಬಂಧನ

ಬೆಳಗಾವಿ: ಕೆಪಿಟಿಸಿಎಲ್ ಕಿರಿಯ ಸಹಾಯಕರ ನೇಮಕಾತಿಯಲ್ಲಿ ಅಕ್ರಮ ಎಸಗಿದ ಪ್ರಕರಣದಲ್ಲಿ ಬಂಧಿತರಾಗಿದ್ದ ಎಲ್ಲ 20 ಮಂದಿಗೂ ಷರತ್ತುಬದ್ಧ ಜಾಮೀನು ಮಂಜೂರಾಗಿದೆ. ಪ್ರಕರಣದ ವಿಚಾರಣೆ ನಡೆಸಿದ ಗೋಕಾಕದ ಎರಡನೇ ಜೆಎಂಎಫ್‌ಸಿ ನ್ಯಾಯಾಲಯದ ನ್ಯಾಯಾಧೀಶ ಜಿ.   ಪ್ರಕರಣದ ವಿಚಾರಣೆ ನಡೆಸಿದ ಗೋಕಾಕದ ಎರಡನೇ ಜೆಎಂಎಫ್‌ಸಿ ನ್ಯಾಯಾಲಯದ ನ್ಯಾಯಾಧೀಶ ಜಿ. ರಾಜೀವ್‌ ಅವರು ಪ್ರಮುಖ ಆರೋಪಿ ಸಂಜೀವ ಭಂಡಾರಿ ಸೇರಿ ಎಲ್ಲರಿಗೂ ಜಾಮೀನು ನೀಡಿದರು. ಗೋಕಾಕ ನಗರದ ಜಿಎಸ್‌ಎಸ್ ಪರೀಕ್ಷಾ ಕೇಂದ್ರದಲ್ಲಿ ಆಗಸ್ಟ್‌ …

Read More »