Breaking News

ಬೆಳಗಾವಿ

ತಿಂಗಳಾ ಸರಿಯಾಗಿ ಪಗಾರ್ ಕೊಡರಿ. ಆಶಾ ಕಾರ್ಯಕರ್ತೆಯರು ಬೃಹತ್ ಪ್ರತಿಭಟನೆ.!

ಆನ್‍ಲೈನ್ ಕೆಲಸ ಸೇರಿದಂತೆ ವಿವಿಧ ಕೆಲಸ ಮಾಡುವಂತೆ ಒತ್ತಡ ಹೇರುತ್ತಿರುವ ಸರ್ಕಾರದ ಧೋರಣೆ ಖಂಡಿಸಿ ಬೆಳಗಾವಿಯಲ್ಲಿ ಆಶಾ ಕಾರ್ಯಕರ್ತೆಯರು ಬೃಹತ್ ಪ್ರತಿಭಟನೆ ನಡೆಸಿದರು. ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘ ಎಐಯುಟಿಯುಸಿ ಬೆಳಗಾವಿ ಜಿಲ್ಲಾ ಸಮಿತಿ ವತಿಯಿಂದ ಬೃಹತ್ ಪ್ರತಿಭಟನಾ ರ್ಯಾಲಿಯನ್ನು ಹಮ್ಮಿಕೊಳ್ಳಲಾಗಿತ್ತು. ನಗರದ ಸರ್ದಾರ್ ಮೈದಾನದಿಂದ ಆರಂಭವಾದ ಈ ರ್ಯಾಲಿಯು ಜಿಲ್ಲಾಧಿಕಾರಿ ಕಚೇರಿವರೆಗೂ ನಡೆಯಿತು. ಈ ವೇಳೆ ರಾಜ್ಯ ಮತ್ತು ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗಿ …

Read More »

ರೈಲ್ವೇ ಇಲಾಖೆಯ ಅಧಿಕಾರಿಗಳ ಮೇಲೆ ಶಾಸಕ ಅಭಯ್ ಪಾಟೀಲ್ ಗರಂ

ಬೆಳಗಾವಿ ನಗರದಲ್ಲಿ ರೈಲ್ವೇ ಮೇಲ್ಸೇತುವೆಯನ್ನು ನಿರ್ಮಾಣ ಮಾಡಲು ನಾಲ್ಕು ವರ್ಷಗಳನ್ನು ತೆಗೆದಿಕೊಂಡ ರೈಲ್ವೇ ಇಲಾಖೆಯ ಅಧಿಕಾರಿಗಳ ಮೇಲೆ ಶಾಸಕ ಅಭಯ್ ಪಾಟೀಲ್ ಗರಂ ಆಗಿದ್ದಾರೆ. ನೀವು ಕಾಮಗಾರಿಯನ್ನು ವಿಳಂಬ ಮಾಡಿದ್ದರಿಂದ ಜನ ನಮ್ಮನ್ನು ಬಯ್ಯುವಂತಾಗಿದೆ ಎಂದು ಆಕ್ರೋಶ ಹೊರಹಾಕಿದ್ದಾರೆ. ಬೆಳಗಾವಿ ನಗರದಲ್ಲಿ ಟಿಳಕವಾಡಿಯ ಮೂರನೇ ರೈಲ್ವೇ ಗೇಟ್‌ಬಳಿಯ ರೈಲ್ವೇ ಮೇಲ್ಸೇತುವೆಯ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಶಾಸಕ ಅಭಯ್ ಪಾಟೀಲ್ ಭಾಗಿಯಾಗಿದ್ದರು. ಈ ವೇಳೆ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಅವರು, ಬರಂಗವಾಗಿಯೇ ರೈಲ್ವೆ …

Read More »

ಬ್ರೇಕ್ ಫೇಲ್ ಆಗಿ ಕಬ್ಬಿನ ಗದ್ದೆಗೆ ನುಗ್ಗಿದ KSRTC ಬಸ್

ಬೆಳಗಾವಿ : ಜಿಲ್ಲೆಯ ಯರಗಟ್ಟಿ ತಾಲೂಕಿನ ತಲ್ಲೂರು ಗ್ರಾಮದ ಬಳಿ ಕೆಎಸ್‌ಆರ್‌ಟಿಸಿ ಸಾರಿಗೆ ಬಸ್​ನ ಬ್ರೇಕ್ ಫೇಲ್ ಆದ ಹಿನ್ನೆಲೆ ಕಬ್ಬಿನ ಗದ್ದೆಗೆ ನುಗ್ಗಿರುವ ಘಟನೆ ನಡೆದಿದೆ. ಅದೃಷ್ಟವಶಾತ್ ಈ ಅವಘಡದಲ್ಲಿ ಯಾವುದೇ ರೀತಿಯ ಪ್ರಾಣಾಪಾಯ ಸಂಭವಿಸಿಲ್ಲ. ಜಿಲ್ಲೆಯ ‌ಯರಗಟ್ಟಿ ತಾಲೂಕಿನ ಸೋಮಾಪುರ ಗ್ರಾಮದಿಂದ ತಲ್ಲೂರು ಗ್ರಾಮಕ್ಕೆ ಬರುತ್ತಿದ್ದ ಸಂದರ್ಭದಲ್ಲಿ ಈ ಅವಘಡ ಸಂಭವಿಸಿದೆ. ಬಳಿಕ ನಿಯಂತ್ರಣ ತಪ್ಪಿ ತಲ್ಲೂರ ಗ್ರಾಮದ ಬಾಬು ಪಕಾಲಿ ಎಂಬುವವರಿಗೆ ಸೇರಿದ ಕಬ್ಬಿನ ಗದ್ದೆಗೆ …

Read More »

ಭೋರ್ಗರೆವ ಹಳ್ಳದಲ್ಲೇ ಹಾಲಸಿದ್ಧನಾಥನ ಪಲ್ಲಕ್ಕಿ ಹೊತ್ತು ಸಾಗಿದ ಭಕ್ತರು

ಬೆಳಗಾವಿ: ಭೋರ್ಗರೆಯುತ್ತಿರುವ ಹಳ್ಳದಲ್ಲೇ ಸಾವಿರಾರು ಭಕ್ತರು ಹಾಲಸಿದ್ಧನಾಥನ ಪಲ್ಲಕ್ಕಿ ಹೊತ್ತು ಬೆಳಗಾವಿ ಜಿಲ್ಲೆಯ ನಿಪ್ಪಾಣಿ ತಾಲೂಕಿನ ಕುರ್ಲಿ ಗ್ರಾಮದಿಂದ ಅಪ್ಪಾಚಿವಾಡಿ ಗ್ರಾಮಕ್ಕೆ ಸಾಗಿದರು. ಪ್ರತಿ ವರ್ಷ ಹಾಲಸಿದ್ಧನಾಥ ಜಾತ್ರೆ ವೇಳೆ ಅಪ್ಪಾಚಿವಾಡಿಗೆ ಕುರ್ಲಿ ಗ್ರಾಮದಿಂದ ಪಲ್ಲಕ್ಕಿ ಸಾಗಿಸಲಾಗುತ್ತದೆ. ಬಳಿಕ ಎರಡೂ ಗ್ರಾಮದ ಜನರು ಸೇರಿ ಐದು ದಿನಗಳ ಕಾಲ ಅದ್ಧೂರಿಯಾಗಿ ಜಾತ್ರೆ ಮಾಡುತ್ತಾರೆ. ಈ ಎರಡು ಗ್ರಾಮದ ಮಧ್ಯೆ ಗುಮ್ಮಟ ಹಳ್ಳ ಹರಿಯುತ್ತದೆ. ಈ ಹಳ್ಳ ವೇದಗಂಗಾ ನದಿಯ ಸಮೀಪವಿದೆ. …

Read More »

2012-13ನೇ ಸಾಲಿನ ಪ್ರೌಢ ಶಾಲಾ ಶಿಕ್ಷಕರ ನೇಮಕಾತಿಯಲ್ಲೂ ಗೋಲ್​ ಮಾಲ್​: ಅಭ್ಯರ್ಥಿಯ ಆರೋಪ

ಬೆಳಗಾವಿ: 2012-13ನೇ ಸಾಲಿನಲ್ಲಿ ನಡೆದ ಪ್ರೌಢ ಶಾಲಾ ಶಿಕ್ಷಕರ ನೇಮಕಾತಿಯಲ್ಲಿ ಗೋಲ್ ಮಾಲ್ ನಡೆದಿದೆ ಎಂದು ನೇಮಕಾತಿ ವಂಚಿತ ಅಭ್ಯರ್ಥಿ ಮಹಾಂತೇಶ ರುದ್ರಪ್ಪ ಬೆಣ್ಣಿ ಆರೋಪಿಸಿದ್ದಾರೆ. ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, 2012 ಜುಲೈ 15ರಂದು ಜನರಲ್, 17ರಂದು ಕನ್ನಡ ಭಾಷಾ ಪರೀಕ್ಷೆ ನಡೆದಿತ್ತು. ಪರೀಕ್ಷೆಯಲ್ಲಿ ಪ್ರತಿಶತ 71. 26 ಅಂಕ 89 ರ‍್ಯಾಂಕ್ ಪಡೆದಿದ್ದೇನೆ. 89 ರ್ಯಾಂಕ್ ಪಡೆದು ಆಯ್ಕೆ ಆದರೂ ನಾನು ನೇಮಕಗೊಂಡಿಲ್ಲ. ಆದರೆ, 70.93 ಅಂಕಗಳೊಂದಿಗೆ 97 …

Read More »

2012-13ನೇ ಸಾಲಿನ ಪ್ರೌಢ ಶಾಲಾ ಶಿಕ್ಷಕರ ನೇಮಕಾತಿಯಲ್ಲೂ ಗೋಲ್​ ಮಾಲ್​: ಅಭ್ಯರ್ಥಿಯ ಆರೋಪ

ಬೆಳಗಾವಿ: 2012-13ನೇ ಸಾಲಿನಲ್ಲಿ ನಡೆದ ಪ್ರೌಢ ಶಾಲಾ ಶಿಕ್ಷಕರ ನೇಮಕಾತಿಯಲ್ಲಿ ಗೋಲ್ ಮಾಲ್ ನಡೆದಿದೆ ಎಂದು ನೇಮಕಾತಿ ವಂಚಿತ ಅಭ್ಯರ್ಥಿ ಮಹಾಂತೇಶ ರುದ್ರಪ್ಪ ಬೆಣ್ಣಿ ಆರೋಪಿಸಿದ್ದಾರೆ. ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, 2012 ಜುಲೈ 15ರಂದು ಜನರಲ್, 17ರಂದು ಕನ್ನಡ ಭಾಷಾ ಪರೀಕ್ಷೆ ನಡೆದಿತ್ತು. ಪರೀಕ್ಷೆಯಲ್ಲಿ ಪ್ರತಿಶತ 71. 26 ಅಂಕ 89 ರ‍್ಯಾಂಕ್ ಪಡೆದಿದ್ದೇನೆ. 89 ರ್ಯಾಂಕ್ ಪಡೆದು ಆಯ್ಕೆ ಆದರೂ ನಾನು ನೇಮಕಗೊಂಡಿಲ್ಲ. ಆದರೆ, 70.93 ಅಂಕಗಳೊಂದಿಗೆ 97 …

Read More »

ಮೂರು ಹೆಣ್ಣು ಮಕ್ಕಳ ಜೊತೆ ತಾಯಿ ಆತ್ಮಹತ್ಯೆ

ಅಥಣಿ (ಬೆಳಗಾವಿ): ಪಕ್ಕದ ಮಹಾರಾಷ್ಟ್ರ ರಾಜ್ಯದ ಸಾಂಗ್ಲಿ ಜಿಲ್ಲೆಯ ಜತ್ ತಾಲೂಕಿನ ಬಿಳ್ಳೂರ ಗ್ರಾಮದ ಹೊರವಲಯದಲ್ಲಿ ತಾಯಿ ಮತ್ತು ಮೂರು ಹೆಣ್ಣು ಮಕ್ಕಳು ಆತ್ಮಹತ್ಯೆ ಮಾಡಿಕೊಂಡ ಹೃದಯವಿದ್ರಾವಕ ಘಟನೆ ಸೋಮವಾರ ನಡೆದಿದೆ. ಮೃತ ಮಹಿಳೆ ಬೆಳಗಾವಿ ಮೂಲದವರಾಗಿದ್ದು, ಮಹಾರಾಷ್ಟ್ರ ವ್ಯಕ್ತಿಯನ್ನು ಮದುವೆಯಾಗಿದ್ದರು. ಮೂರು ಹೆಣ್ಣು ಮಕ್ಕಳ ಜೊತೆ ತಾಯಿ ಆತ್ಮಹತ್ಯೆ: ಮೃತಪಟ್ಟವರನ್ನು ತಾಯಿ ಸುನೀತಾ ತುಕಾರಾಮ ಮಾಳಿ (27), ಮಕ್ಕಳಾದ ಅಮೃತಾ ತುಕಾರಾಮ ಮಾಳಿ (13), ಅಂಕಿತ ತುಕಾರಾಮ ಮಾಳಿ (10) ಮತ್ತು …

Read More »

ಎಟಿಎಂ ಎಕ್ಸಚೆಂಜ್ ಮಾಡಿ ಹಣ ಕದ್ದಿದ್ದ ಆರೋಪಿ ಅಂದರ್

ಎಟಿಎಂಗೆ ಹೋದ ಮಹಿಳೆಗೆ ಸಹಾಯ ಮಾಡುವ ನೆಪದಲ್ಲಿ ಪಾಸವರ್ಡ ತಿಳಿದುಕೊಂಡು 37,500 ರೂಪಾಯಿ ಹಣ ದೋಚಿದ್ದ ಆರೋಪಿಯನ್ನು ಬಂಧಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಸಂಜೀವ ಪಾಟೀಲ್ ಮಾಹಿತಿ ನೀಡಿದ್ದಾರೆ. ಮಂಗಳವಾರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಚೇರಿಯಲ್ಲಿ ಮಾಧ್ಯಮಗಳ ಜೊತೆಗೆ ಮಾತನಾಡಿದ ಎಸ್‍ಪಿ ಡಾ.ಸಂಜೀವ್ ಪಾಟೀಲ್ ಚಿಕ್ಕೋಡಿ ತಾಲೂಕಿನ ಹಾಲಟ್ಟಿ ಗ್ರಾಮದ ವಿಜಯಾ ರಾನಪ್ಪ ಎಂಬ ಮಹಿಳೆ ಅ.3ರಂದು ಎಟಿಎಂನಲ್ಲಿ ಹಣ ತೆಗೆದುಕೊಳ್ಳಲು ಹೋದಾಗ, ಯಾವುದೋ ಒಬ್ಬ ವ್ಯಕ್ತಿ ಸಹಾಯ …

Read More »

ಮಳೆರಾಯನ ಅಬ್ಬರ: ಬೆಳೆ ಹಾನಿ ಭೀತಿಯಲ್ಲಿ ರೈತರು

ಕಳೆದ ಎರಡ್ಮೂರು ದಿನಗಳಿಂದ ಬೆಳಗಾವಿ ನಗರ ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ಭಾರಿ ಮಳೆಯಾಗುತ್ತಿರುವ ಹಿನ್ನೆಲೆ ಕಷ್ಟ ಪಟ್ಟು ಬೆಳೆದ ವಿವಿಧ ಬೆಳೆಗಳ ಹಾನಿಯಾಗುವ ಭೀತಿಯನ್ನು ರೈತರು ಅನುಭವಿಸುತ್ತಿದ್ದಾರೆ. ಹೌದು ಹಲಗಾ ಸೇರಿದಂತೆ ಸುತ್ತಮುತ್ತಲಿನ ಗ್ರಾಮಗಳಲ್ಲಿ ಭಾರಿ ಮಳೆಯಿಂದ ಬೆಳೆ ಹಾನಿ ಸಾಧ್ಯತೆಯಿದೆ. ಆಲೂಗಡ್ಡೆ, ಸೋಯಾಬೀನ್, ಬಾಸ್ಮತಿ ಭತ್ತ ಸೇರಿ ಇನ್ನಿತರ ಬೆಳೆಗಳು ಕಟಾವಿಗೆ ಬಂದಿವೆ. ಆದರೆ ಇದೀಗ ಬಿಟ್ಟು ಬಿಡದೇ ಮಳೆಯಾಗುತ್ತಿರುವ ಹಿನ್ನೆಲೆ ಕೈಯಿಗೆ ಬಂದ ತುತ್ತು ಬಾಯಿಗೆ ಬಾರದ …

Read More »

ಈದ್ ಮಿಲಾದ್ ಸಂಭ್ರಮಾಚರಣೆಯಲ್ಲಿ ಲಾಂಗ್ ಹಿಡಿದು ಕುಣಿದ ಯುವಕರು ಅರೆಸ್ಟ್

ಈದ್ ಮಿಲಾದ್ ಹಬ್ಬದಂದು ಕ್ಷುಲ್ಲಕ ಕಾರಣಕ್ಕೆ ಎರಡು ಗುಂಪುಗಳ ಮಧ್ಯೆ ಗಲಾಟೆ ನಡೆದು ಪರಸ್ಪರ ಹೊಟೆದಾಡಿಕೊಂಡಿದ್ದರು. ಪ್ರಕರಣ ಸಂಬಂಧ ದೂರು ಪ್ರತಿ ದೂರು ದಾಖಲಾಗಿತ್ತು. ಬೆಳಗಾವಿ: ರಾಮದುರ್ಗದಲ್ಲಿ ಈದ್ ಮಿಲಾದ್ ಹಬ್ಬದಂದು ಹಿಂದೂ ಯುವಕರ ಮೇಲೆ ಹಲ್ಲೆಗೈದಿದ್ದ ಇಬ್ಬರು ಅಪ್ರಾಪ್ತರು ಸೇರಿ ಮೂವರನ್ನು ಪೊಲೀಸರು ಬಂಧಿಸಿದ್ದಾರೆ. ಬೆಳಗಾವಿ ಜಿಲ್ಲೆಯ ರಾಮದುರ್ಗ ‌ಪಟ್ಟಣದಲ್ಲಿ ಎರಡು ದಿನಗಳ ಹಿಂದೆ ಈದ್ ಮಿಲಾದ್ ಹಬ್ಬದಂದು ಕ್ಷುಲ್ಲಕ ಕಾರಣಕ್ಕೆ ಎರಡು ಗುಂಪುಗಳ ಮಧ್ಯೆ ಗಲಾಟೆ ನಡೆದು …

Read More »