Breaking News

ಬೆಳಗಾವಿ

ಮರಾಠಾ ಅಭಿವೃದ್ಧಿ ನಿಗಮಕ್ಕೆ ಸಾವಿರ ಕೋಟಿ ರೂ.ಅನುದಾನ ನೀಡಿ: ಕಿರಣ್ ಜಾಧವ್ ಆಗ್ರಹ

ಬೆಳಗಾವಿ : ಕರ್ನಾಟಕ ರಾಜ್ಯದಲ್ಲಿ ಶೈಕ್ಷಣಿಕ ಹಾಗೂ ಆರ್ಥಿಕವಾಗಿ ಹಿಂದುಳಿದಿರುವ ಮರಾಠಾ ಸಮಯದಾಯದ ಸರ್ವತೋಮುಖ ಅಭಿವೃದ್ಧಿಗಾಗಿ ವಿಶೇಷ ಆದ್ಯತೆ ನೀಡುವ ಮೂಲಕ ಕರ್ನಾಟಕ ಮರಾಠಾ ಸಮುದಾಯಗಳ ಅಭಿವೃದ್ಧಿ ನಿಗಮಕ್ಕೆ ಕನಿಷ್ಠ ಸಾವಿರ ಕೋಟಿ ರೂ.ಅನುದಾನ ಮೀಸಲಿಡಬೇಕು ಎಂದು ಮರಾಠಾ ಮುಖಂಡ ಕಿರಣ್ ಜಾಧವ್ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಒತ್ತಾಯಿಸಿದ್ದಾರೆ. ಈ ಬಗ್ಗೆ ಪ್ರಕಟಣೆ ನೀಡಿರುವ ಅವರು, ನಿಗಮಕ್ಕೆ ಪ್ರಸ್ತುತ ನೀಡಲಾಗುತ್ತಿರುವ ಅನುದಾನ ಸಮುದಾಯದ ಅಗತ್ಯಗಳಿಗೆ ತಕ್ಕಂತೆ ಸಾಲುತ್ತಿಲ್ಲ. ಯಾವಾಗಲೂ …

Read More »

ಬೆಳಗಾವಿ:ನಕಲಿ ಪತ್ರಕರ್ತರ ಮೊಬೈಲಲ್ಲಿತ್ತು 100ಕ್ಕೂ ಹೆಚ್ಚು ಬೆತ್ತಲೆ ವಿಡಿಯೋ!

ಬೆಳಗಾವಿ: ಬೆಳಗಾವಿಯಲ್ಲಿ  ಮಹಿಳಾ ಅಧಿಕಾರಿಯ ಮನೆಯಲ್ಲಿ ಹಿಡನ್ ಕ್ಯಾಮರಾ ಅಳವಡಿಸಿ ಖಾಸಗಿ ವಿಡಿಯೋಗಳನ್ನು ಸೆರೆ ಹಿಡಿದು ಬ್ಲ್ಯಾಕ್‌ಮೇಲ್ ಮಾಡುತ್ತಿದ್ದ ಖತರ್ನಾಕ್ ಗ್ಯಾಂಗ್‌ನ ಮತ್ತೊಂದು ಕರಾಳ ಮುಖ ಇದೀಗ ಬಯಲಾಗಿದೆ. ಪ್ರಕರಣ ಸಂಬಂಧ ಬಂಧಿತ ನಕಲಿ ಪತ್ರಕರ್ತರ ಮೊಬೈಲ್‌ಗಳನ್ನು ಪರಿಶೀಲಿಸಿದ ವೇಳೆ 100ಕ್ಕೂ ಹೆಚ್ಚು ಬೆತ್ತಲೆ ಹಾಗೂ ಖಾಸಗಿ ವಿಡಿಯೋಗಳು ಪತ್ತೆಯಾಗಿರುವುದು ಪೊಲೀಸರನ್ನೇ ಬೆಚ್ಚಿಬೀಳಿಸಿದೆ. ಈ ಹಿಂದೆ ಮಹಿಳಾ ಅಧಿಕಾರಿಯ ಮನೆಯಲ್ಲಿ ರಹಸ್ಯ ಕ್ಯಾಮರಾ ಇಟ್ಟು ಖಾಸಗಿ ದೃಶ್ಯಗಳನ್ನು ಸೆರೆ ಹಿಡಿದು 50 …

Read More »

ಫೆ.22 ರಂದು ಬೆಳಗಾವಿಯ ಬಹುತೇಕ ಪ್ರದೇಶದಲ್ಲಿ ಪವರ್ ಕಟ್

ಬೆಳಗಾವಿ; ಕ.ವಿ.ಪ್ರ.ನಿ.ನಿ. ವತಿಯಿಂದ 110 ಕೆ.ವಿ. ಕಣಬರ್ಗಿ ಉಪಕೇಂದ್ರದಲ್ಲಿ ನಾಲ್ಕನೇಯ ತ್ರೈಮಾಸಿಕ ಹಾಗೂ ಇತರೆ ತುರ್ತು ನಿರ್ವಹಣಾ ಕಾರ್ಯಗಳನ್ನು ಕೈಗೊಳ್ಳುತ್ತಿರುವುದರಿಂದ ಫೆ.22 ಭಾನುವಾರ ದಂದು ಬೆಳಗ್ಗೆ 9 ಘಂಟೆಯಿಂದ ಸಂಜೆ 5 ಘಂಟೆಯವರೆಗೆ ಸದರಿ ಉಪಕೇಂದ್ರದಿಂದ ಸರಬರಾಜು ಆಗುವ ಮುಚ್ಚಂಡಿ, ಅಷ್ಟೆ, ಕ್ಯಾಂಪ್‌ಬೆಲ್, ಮಾರಿಹಾಳ, ಕರಡಿಗುದ್ದಿ, ವಂತಬಾಳೇಕುಂದ್ರಿ, ಬಾಳೇಕುಂದ್ರಿ, ಹೊನ್ನಿಹಾಳ, ಮಾವಿನಕಟ್ಟಿ, ತಾರಿಹಾಳ, ಚಂದನ ಹೊಸೂರ ಗ್ರಾಮದಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ. ಅದೇ ರೀತಿಯಲ್ಲಿ ಎಮ್.ಇ.ಎಸ್, ಸಾಂಬ್ರಾ, ಮುತಗಾ, ಸುಳೇಭಾವಿ, ಪಂತ …

Read More »

ಫೆ.22ರಂದು ಯುವ ಜೆಡಿಎಸ್ ಸಮಾವೇಶ

ಬೆಳಗಾವಿ : ಜೆಡಿಎಸ್ ವತಿಯಿಂದ ಫೆ.22ರಂದು ಬೆಳಗ್ಗೆ 11ಕ್ಕೆ ನಗರದ ಗಾಂಧಿ ಭವನದಲ್ಲಿ ಯುವ ಜನತಾದಳದ ಸಮಾವೇಶ ಹಮ್ಮಿಕೊಳ್ಳಲಾಗಿದೆ ಎಂದು ಮಾಜಿ ಶಾಸಕ ವೀರಭದ್ರಪ್ಪ ಹಾಲಹರವಿ ತಿಳಿಸಿದರು. ನಗರದಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬೆಳಗಾವಿ ಭಾಗದಲ್ಲಿ ಪಕ್ಷದ ಪ್ರಾಬಲ್ಯ ಕಡಿಮೆ ಇದೆ ಎಂದು ಹಲವರು ಹೇಳುತ್ತಿದ್ದಾರೆ. ಇದನ್ನೇ ಸವಾಲಾಗಿ ಸ್ವೀಕರಿಸಿ, ಪಕ್ಷ ಸಂಘಟನೆ ಮತ್ತು ಪಕ್ಷವನ್ನು ಬಲವರ್ಧನೆಗೊಳಿಸುವ ಉದ್ದೇಶದಿಂದ ಸಮಾವೇಶ ಹಮ್ಮಿಕೊಂಡಿದ್ದೇವೆ ಎಂದರು. ಜೆಡಿಎಸ್ ಕೋರ್ ಕಮಿಟಿ ಅಧ್ಯಕ್ಷ ಎಂ.ಕೃಷ್ಣಾರೆಡ್ಡಿ, …

Read More »

Job: ಅಗ್ನಿವೀರ ನೇಮಕಾತಿ ಆನ್‌ಲೈನ್ ನೋಂದಣಿ ಪ್ರಾರಂಭ

ಬೆಳಗಾವಿ: ಇಲ್ಲಿನ ಬೆಳಗಾವಿ ಸೇನಾ ನೇಮಕಾತಿ ಕಚೇರಿಯಿಂದ ಫೆ.13ರಿಂದ ಏಪ್ರಿಲ್ 1ರವರೆಗೆ ಬೆಳಗಾವಿ, ಬೀದರ ಕಲಬುರಗಿ, ಕೊಪ್ಪಳ, ರಾಯಚೂರು, ಯಾದಗಿರಿ ಜಿಲ್ಲೆಗಳಲ್ಲಿ ಅಗ್ನಿವೀರ ನೇಮಕಾತಿ ಆನ್‌ಲೈನ್ ನೋಂದಣಿ ಪ್ರಾರಂಭವಾಗಿದೆ. ಅಗ್ನಿವೀರ ಜನರಲ್ ಡ್ಯೂಟಿ, ಟೆಕ್ನಿಕಲ್, ಟ್ರೇಡ್ಸ್‌ಮನ್ 10ನೇ ತರಗತಿ ಪಾಸ್, ಅಗ್ನಿವೀರ ಟ್ರೇಡ್ಸ್‌ಮನ್ 8ನೇ ತರಗತಿ ಪಾಸ್, ಕ್ಲರ್ಕ್, ಸ್ಟೋರ್ ಕೀಪರ್ ಟೆಕ್ನಿಕಲ್ ಹುದ್ದೆಗಳ ದಾಖಲಾತಿಗೆ ನೋಂದಣಿ ಪ್ರಕ್ರಿಯೆ ಚಾಲನೆಯಲ್ಲಿರುತ್ತದೆ. ಅಭ್ಯರ್ಥಿಗಳು ಭಾರತೀಯ ಸೇನೆಯ ವೆಬ್‌ಸೈಟ್‌ನಲ್ಲಿ ಅರ್ಜಿ ಸಲ್ಲಿಸಬಹುದು ಎಂದು ಪ್ರಕಟಣೆಯಲ್ಲಿ …

Read More »

ಮಹಿಳಾ ಅಧಿಕಾರಿಗೆ ಬೆದರಿಕೆ ಪ್ರಕರಣ ಬಂಧಿತರು ಪುನಃ ಪೊಲೀಸ್ ವಶಕ್ಕೆ

ಬೆಳಗಾವಿ: ಮಹಿಳಾ ಅಧಿಕಾರಿ ಮನೆಯಲ್ಲಿ ರಹಸ್ಯ ಕ್ಯಾಮರಾ ಇಟ್ಟು ಖಾಸಗಿ ದೃಶ್ಯ ಸೆರೆಹಿಡಿದು, ವೈರಲ್ ಮಾಡುವ ಬೆದರಿಕೆ ಹಾಕಿ ಹಣಕ್ಕೆ ಬೇಡಿಕೆಯಿಟ್ಟಿದ್ದ ಪ್ರಕರಣದಲ್ಲಿ ಈ ಹಿಂದೆ ಬಂಧಿಸಲಾಗಿದ್ದ ಮೂವರು ಯುಟ್ಯೂಬರ್‌ಗಳನ್ನು ಪುನಃ ವಶಕ್ಕೆ ಪಡೆದಿರುವ ಮಾಳಮಾರುತಿ ಠಾಣೆ ಪೊಲೀಸರು ತೀವ್ರ ವಿಚಾರಣೆ ಕೈಗೊಂಡಿದ್ದಾರೆ. ಸಮೀರ್ ನಿಸಾರ್ ಅಹ್ಮದ್ ಶೇಖ್, ಅಬ್ದುಲ್ ರಶೀದ್ ಮಕಾನದಾರ ಹಾಗೂ ಮೊಹಮ್ಮದ್ ಬಾಳೇಕುಂದ್ರಿ ಅವರನ್ನು ಈ ಹಿಂದೆ ಬಂಧಿಸಲಾಗಿತ್ತು. ಇವರಿಂದ ಮಾಹಿತಿ ಪಡೆದು ಕಳೆದ ವಾರ …

Read More »

ಛತ್ರಪತಿ ಶಿವಾಜಿ ದೇಶಪ್ರೇಮದ ಪ್ರತೀಕ

ಬೆಳಗಾವಿ:ಛತ್ರಪತಿ ಶಿವಾಜಿ ಮಹಾರಾಜರು ಧೈರ್ಯ, ಶಿಸ್ತು ಮತ್ತು ದೇಶಪ್ರೇಮದ ಪ್ರತೀಕ. ಅವರ ಜೀವನ ನಮ್ಮಲ್ಲಿ ಸ್ವಾಭಿಮಾನ ಮತ್ತು ಆತ್ಮವಿಶ್ವಾಸವನ್ನು ಮೂಡಿಸುತ್ತದೆ ಎಂದು ಹಿರಿಯ ಸಾಹಿತಿ ಸಿ.ಕೆ.ಜೋರಾಪುರ ತಿಳಿಸಿದರು . ಜಿಲ್ಲಾಡಳಿತ, ಜಿಪಂ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಮಹಾನಗರ ಪಾಲಿಕೆ ವತಿಯಿಂದ ನಗರದ ಶಿವಾಜಿ ಉದ್ಯಾನದಲ್ಲಿ ಗುರುವಾರ ಏರ್ಪಡಿಸಿದ್ದ ಶಿವಾಜಿ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಬಾಲ್ಯದಲ್ಲೇ ಸ್ವರಾಜ್ಯದ ಮಹಾನ ಕನಸು ಕಂಡ ಶಿವಾಜಿ ತಮ್ಮ ಬುದ್ಧಿವಂತಿಕೆ ಮತ್ತು …

Read More »

ಶಾಹುನಗರದ ಸ್ಮಶಾನ ಭೂಮಿ ಇದನ್ನು ಉಳಿಸಿಕೊಡುವಂತೆ ಡೊಂಬರ ಸಮುದಾಯದ ಆಗ್ರಹ

ಬೆಳಗಾವಿ: ಖಾನಾಪುರ ತಾಲೂಕಿನ ಶಾಹುನಗರದಲ್ಲಿ ಡೊಂಬರ ಸಮುದಾಯದ ಸ್ಮಶಾನ ಭೂಮಿ ಕಬಳಿಸುವ ಹುನ್ನಾರ ನಡೆದಿದ್ದು, ಇದನ್ನು ಉಳಿಸಿಕೊಡುವಂತೆ ಆಗ್ರಹಿಸಿ ನಗರದಲ್ಲಿ ಶುಕ್ರವಾರ ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿಯ ಜಿಲ್ಲಾ ಘಟಕದ ನೇತೃತ್ವದಲ್ಲಿ ಪ್ರತಿಭಟಿಸಲಾಯಿತು. ನಗರದ ಡಾ.ಬಿ.ಆರ್.ಅಂಬೇಡ್ಕರ ಉದ್ಯಾನದಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಪ್ರತಿಭಟನಾ ರ‌್ಯಾಲಿಯಲ್ಲಿ ಆಗಮಿಸಿದ ನಿವಾಸಿಗಳು ತಮ್ಮ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್‌ರಿಗೆ ಮನವಿ ಸಲ್ಲಿಸಿದರು. ಖಾನಾಪುರ ತಾಲೂಕಿನ ಶಾಹುನಗರದ ಸರ್ವೆ ನಂ 39/ಎ1 ರಲ್ಲಿ ಬರುವ …

Read More »

ಮಲ್ಲಮ್ಮ ಉತ್ಸವ ಹಿನ್ನೆಲೆ ಬೆಳವಡಿಯಲ್ಲಿ ಮದ್ಯ ಮಾರಾಟ ನಿಷೇಧ

ಬೆಳಗಾವಿ: ಬೈಲಹೊಂಗಲ ತಾಲೂಕಿನ ಬೆಳವಡಿ ಗ್ರಾಮದಲ್ಲಿ ಫೆ.28ರಿಂದ ಬೆಳವಡಿ ಮಲ್ಲಮ್ಮ ಉತ್ಸವ ಹಮ್ಮಿಕೊಂಡಿರುವ ಹಿನ್ನೆಲೆ ಫೆ.27ರ ಸಂಜೆ 6ರಿಂದ ಮಾ.2ರ ಬೆಳಗ್ಗೆ 6ರವರೆಗೆ ಬೆಳವಡಿ ಗ್ರಾಮದ ವ್ಯಾಪ್ತಿಯಲ್ಲಿರುವ ಎಲ್ಲ ಮದ್ಯ, ಬಾರ್ ಅಂಗಡಿಗಳನ್ನು ಬಂದ್ ಮಾಡಿ ಮದ್ಯ ಮಾರಾಟ ನಿಷೇಧಿಸಿ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಆದೇಶ ಹೊರಡಿಸಿದ್ದಾರೆ.

Read More »

ಕೆಎಲ್‌ಇ ನೂತನ ಚೇರಮನ್‌ರಾಗಿ ಅಮಿತ ಕೋರೆ ಆಯ್ಕೆ

ಬೆಳಗಾವಿ 20 ಫೆ: ಜಾಗತಿಕ ಸುವಿಖ್ಯಾತ ಶಿಕ್ಷಣ ಸಂಸ್ಥೆಯಾದ ಕರ್ನಾಟಕ ಲಿಂಗಾಯತ ಶಿಕ್ಷಣ ಸಂಸ್ಥೆಯ ಆಡಳಿತ ಮಂಡಳಿಯ ನೂತನ ಕಾರ್ಯಾಧ್ಯಕ್ಷರಾಗಿ ಅಮಿತ ಕೋರೆಯವರು ಆಯ್ಕೆಯಾಗಿದ್ದಾರೆ. ಕೆಎಲ್‌ಇ ಪ್ರಧಾನ ಕಚೇರಿಯಲ್ಲಿ ಜರುಗಿದ ನೂತನ ಆಡಳಿತ ಮಂಡಳಿಯ ಸಭೆಯಲ್ಲಿ ಅಮಿತ ಕೋರೆಯವರಿಗೆ ಕೆಎಲ್‌ಇ ಸಂಸ್ಥೆಯ ಸಾರಥ್ಯವನ್ನು ನೀಡಲಾಯಿತು. ಡಾ.ಪ್ರಭಾಕರ ಕೋರೆ ಅವರು ಸುದೀರ್ಘ 42 ವರ್ಷಗಳ ಅವಧಿಗೆ ಚೇರಮನ್‌ರಾಗಿ ಸಂಸ್ಥೆಯನ್ನು ಜಾಗತಿಕವಾಗಿ ವಿಸ್ತರಿಸಿದ್ದರು. ಇಂದು ಆ ಸ್ಥಾನವನ್ನು ಅಮಿತ ಕೋರೆಯವರಿಗೆ ಆಡಳಿತ ಮಂಡಳಿಯು …

Read More »