Breaking News

ಬೆಳಗಾವಿ

ಹುಕ್ಕೇರಿ ಹಿರೇಮಠದ ಚಂದ್ರಶೇಖರ್ ಶಿವಾಚಾರ್ಯ ಸ್ವಾಮೀಜಿ, ರಾಯಭಾಗ ಶಾಸಕ, ಆದಿ ಜಾಂಭವ ನಿಗಮ ಅಧ್ಯಕ್ಷ ದುರ್ಯೋಧನ ಐಹೊಳೆ ಆಸ್ಪತ್ರೆಗೆ ಭೇಟಿ ನೀಡಿ ಆನಂದ ಮಾಮನಿ‌ ಆರೋಗ್ಯ ವಿಚಾರಿಸಿದ್ದಾರೆ.

ಬೆಳಗಾವಿ: ಡೆಪ್ಯುಟಿ ಸ್ಪೀಕರ್, ಸವದತ್ತಿ ಯಲ್ಲಮ್ಮ ಕ್ಷೇತ್ರದ ಬಿಜೆಪಿ ಶಾಸಕ ಆನಂದ ಮಾಮನಿ(Anand Mamani) ಆರೋಗ್ಯದಲ್ಲಿ ಏರುಪೇರು ಹಿನ್ನೆಲೆ ಚೆನ್ನೈನಿಂದ ಬೆಂಗಳೂರು ಮನಿಪಾಲ ಆಸ್ಪತ್ರೆಗೆ(Manipal Hospital) ಆನಂದ ಮಾಮನಿ ಅವರನ್ನು ಶಿಫ್ಟ್​ ಮಾಡಲಾಗಿದೆ. ‌ಬೆಂಗಳೂರಿನ ಮನಿಪಾಲ್ ಆಸ್ಪತ್ರೆಗೆ ಸ್ವಾಮೀಜಿ, ಶಾಸಕರು ಭೇಟಿ ನೀಡಿ ಆರೋಗ್ಯ ವಿಚಾರಿಸಿದ್ದಾರೆ. ಹುಕ್ಕೇರಿ ಹಿರೇಮಠದ ಚಂದ್ರಶೇಖರ್ ಶಿವಾಚಾರ್ಯ ಸ್ವಾಮೀಜಿ, ರಾಯಭಾಗ ಶಾಸಕ, ಆದಿ ಜಾಂಭವ ನಿಗಮ ಅಧ್ಯಕ್ಷ ದುರ್ಯೋಧನ ಐಹೊಳೆ ಆಸ್ಪತ್ರೆಗೆ ಭೇಟಿ ನೀಡಿ ಆನಂದ …

Read More »

ಬೆಳಗಾವಿಯಲ್ಲಿ‌ ಮಹಿಳೆಯರಿಂದ ಬಿಜೆಪಿ ಶಾಸಕ ಮಹಾದೇವಪ್ಪ ಯಾದವಾಡಗೆ ತರಾಟೆ

ಬೆಳಗಾವಿ: ಕಳೆದ ನಾಲ್ಕು ದಶಕಗಳಿಂದ ಗ್ರಾಮದಲ್ಲಿ ರಸ್ತೆ ಅಭಿವೃದ್ಧಿ ಮಾಡದ ಹಿನ್ನೆಲೆ ರಾಮದುರ್ಗ ಬಿಜೆಪಿ ಶಾಸಕ ಮಹಾದೇವಪ್ಪ ಯಾದವಾಡ ಅವರನ್ನು ಮಹಿಳೆಯರು ತರಾಟೆಗೆ ತೆಗೆದುಕೊಂಡ ಘಟನೆ ನಡೆದಿದೆ. ಮಹಿಳೆಯರ‌ ತರಾಟೆ ತೆಗೆದುಕೊಂಡ ಹಿನ್ನೆಲೆ ಶಾಸಕರು ಸ್ಥಳದಿಂದ ಕಾಲ್ಕಿತ್ತಿದ್ದಾರೆ. ರಾಮದುರ್ಗ ತಾಲೂಕಿನಲ್ಲಿ ನಾಲ್ಕು ದಶಕ ಕಳೆದರೂ ರಸ್ತೆ ಅಭಿವೃದ್ಧಿಗೊಂಡಿಲ್ಲ. ಇದರಿಂದ ಕೊಚ್ಚಿಗೆದ್ದ ಮಹಿಳೆಯರು ಬಿಜೆಪಿ ಶಾಸಕ ಮಹಾದೇವಪ್ಪ ಯಾದವಾಡ‌ಗೆ ತರಾಟೆಗೆ ತೆಗೆದುಕೊಂಡರು. ಈ ಘಟನೆ ರಾಮದುರ್ಗ ‌ತಾಲೂಕಿ‌‌ನ ಚಿಕೊಪ್ಪ ಕೆಎಸ್ ಗ್ರಾಮದಲ್ಲಿ ನಡೆದಿದೆ. …

Read More »

ಡಾ.ಪ್ರಭಾಕರ ಕೋರೆಯವರಿಗೆ ಸ್ಪರ್ಧಾತ್ಮಕ ಪುಸ್ತಕಗಳ ತುಲಾಭಾರ

ಬೆಳಗಾವಿ: 75ನೇ ಜನ್ಮದಿನದ ಅಂಗವಾಗಿ ಕೆಎಲ್ಇ ‌ಕಾರ್ಯಾಧ್ಯಕ್ಷ ಡಾ.ಪ್ರಭಾಕರ ಕೋರೆ ಅವರಿಗೆ ಮಹಾರಾಷ್ಟ್ರದ ಬಾರ್ಸಿಯಲ್ಲಿರುವ ಕೆಎಲ್‍ಇ ಸಿಲ್ವರ್ ಜ್ಯೂಬ್ಲಿ ಹೈಸ್ಕೂಲಿನಲ್ಲಿ ಸ್ಪರ್ಧಾತ್ಮಕ ಪುಸ್ತಕಗಳ ತುಲಾಭಾರ ನೆರವೇರಿಸಲಾಯಿತು. ಸಮಾರಂಭದಲ್ಲಿ ತುಲಾಭಾರ ಸ್ವೀಕರಿಸಿ ಮಾತನಾಡಿದ ಡಾ.ಪ್ರಭಾಕರ ಕೋರೆ, ಹಿತೈಷಿಗಳು ಹಾಗೂ ವಿದ್ಯಾರ್ಥಿಗಳ ಪ್ರೀತಿಗೆ ಬೆಲೆ ಕಟ್ಟಲಾಗದು. ಹಿರಿಯರ ಪುಣ್ಯದ ಫಲವಾಗಿ ನಾನು ಜೀವನದಲ್ಲಿ ಅಪ್ರತಿಮ ಸಾಧನೆ ಮಾಡಲು ಸಾಧ್ಯವಾಯಿತು. ಕೆಎಲ್‍ಇ ಸಪ್ತರ್ಷಿಗಳ ಕನಸುಗಳಿಗೆ ಪಥವಾಗಿ ಮುನ್ನಡೆಯಲು ನನಗೆ ಎಲ್ಲರೂ ಜೊತೆಯಾಗಿದ್ದಾರೆ. ಒಬ್ಬ ವ್ಯಕ್ತಿ ಸಾಧನೆಯನ್ನು …

Read More »

ಭಜನೆ , ಪೂಜೆ, ಮಾಡೋದು ಬಿಟ್ಟು ಬೇರೆ ಏನೂ ಗೊತ್ತಿಲ್ಲ ಬಿಜೆಪಿ ಅವರಿಗೆ: ಸತೀಶ ಜಾರಕಿಹೊಳಿ ಲೇವಡಿ

ಪೂಜೆ, ಭಜನೆ ಮಾಡುವುದು ಬಿಟ್ಟು ಬೇರೆ ಹೆಚ್ಚಿಗೆ ಏನೂ ಬಿಜೆಪಿ ಅವರಿಗೆ ಗೊತ್ತಿಲ್ಲ. ದೇಶದ ಇತಿಹಾಸವನ್ನು ಮೊದಲು ಇವರು ತಿಳಿದುಕೊಳ್ಳಿ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಲೇವಡಿ ಮಾಡಿದ್ದಾರೆ. ಇಂಡಿಯಾ ಪಾಕಿಸ್ತಾನ ಇಬ್ಬಾಗ ಮಾಡಿದ್ದ ಕಾಂಗ್ರೆಸ್‍ನವರು ಇದೀಗ ಭಾರತ್ ಜೋಡೋ ಮಾಡ್ತಿದ್ದಾರೆ ಎಂಬ ಬಿಜೆಪಿ ಟೀಕೆಗೆ ಬೆಳಗಾವಿಯ ಕಾಂಗ್ರೆಸ್ ಭವನದಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಯಿಸಿದ ಸತೀಶ ಜಾರಕಿಹೊಳಿ ಅದು ಕಾಂಗ್ರೆಸ್ ಮಾಡಿದ್ದಲ್ಲ, ಬ್ರಿಟಿಷರೇ ಮಾಡಿದ್ದು. ಈ ಇತಿಹಾಸ ಅವರಿಗೆ ಗೊತ್ತಿಲ್ಲ. …

Read More »

ಪತಿ ಜತೆ ಆಟೋದಲ್ಲಿ ಬಂದವಳು, ಗಂಡ ಬಾಡಿಗೆ ಕೊಡಲು ಚಿಲ್ಲರೆ ತರುವಷ್ಟರಲ್ಲಿ ಮಗನೊಂದಿಗೆ ನಾಪತ್ತೆ!; ಆಗಿದ್ದೇನು?

ಬೆಳಗಾವಿ: ಆಟೋದಲ್ಲಿ ಪತಿ ಜತೆಗೇ ಬಂದಿದ್ದ ಪತ್ನಿ, ಬಳಿಕ ಬಾಡಿಗೆ ಹಣ ಕೊಡಲು ಗಂಡ ಚಿಲ್ಲರೆ ತರಲು ಹೋಗಿ ಬರುವಷ್ಟರಲ್ಲಿ ಆಕೆ ಮಗನೊಂದಿಗೆ ಕಣ್ಮರೆಯಾಗಿದ್ದಾಳೆ. ಇಂಥದ್ದೊಂದು ಪ್ರಕರಣ ಬೆಳಗಾವಿ ಜಿಲ್ಲೆಯಲ್ಲಿ ಸಂಭವಿಸಿದೆ. ಬೆಳಗಾವಿ ಜಿಲ್ಲೆಯ ರಾಮದುರ್ಗ ಪಟ್ಟಣದಲ್ಲಿ ಈ ಪ್ರಕರಣ ನಡೆದಿದ್ದು, ರುದ್ರವ್ವ ಬಸವರಾಜ್ ಬನ್ನೂರು (30) ಮತ್ತು ಆಕೆಯ ಪುತ್ರ ಶಿವಲಿಂಗಪ್ಪ ಬನ್ನೂರ (2) ನಾಪತ್ತೆಯಾದವರು. ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ರುದ್ರವ್ವ ತನ್ನ ಎರಡು ವರ್ಷದ ಪುತ್ರನ ಜೊತೆಗೆ ಇಡಗುಂಡಿಯಲ್ಲಿನ …

Read More »

ಸ್ಪಂದನ ಸೂಪರ್ ಹಾಸ್ಪಿಟಲ್ ವತಿಯಿಂದ ಉಚಿತ ಆರೋಗ್ಯ ತಪಾಸಣೆ

ಇಂದು ದಿನಾಂಕ 17/09/2022 ರಂದು ಜ್ಯೋತಿ ನಗರ, ಗಣೇಶಪೂರ ಬೆಳಗಾವಿ, ಇಲ್ಲಿ ಗೌರವಾನ್ವಿತ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಜಿ ಅವರ ಹುಟ್ಟು ಹಬ್ಬದ ಪ್ರಯುಕ್ತ ಬಿಜೆಪಿ ಬೆಳಗಾವಿ ಗ್ರಾಮೀಣ ಮಂಡಳ ಹಾಗೂ ಸ್ಪಂದನ ಸುಪರ ಸ್ಪೆಶಾಲಿಸ್ಟ ಹಾಸ್ಪಿಟಲ್ ವತಿಯಿಂದ್ ಉಚಿತ್ ಆರೋಗ್ಯ ತಪಾಸಣೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮದ ಉದ್ಘಾಟನೆಯನ್ನು ಬೆಳಗಾವಿಯ ಜಿಲ್ಲಾ ಉಸ್ತುವಾರಿ ಸಚಿವರಾದ ಶ್ರೀ. ಗೋವಿಂದ ಕಾರ್ಜೋಳ ಇವರ ಅಮೃತ ಹಸ್ತದಿಂದ ನೆರೆವೆರಿತು. ಕಾರ್ಯಕ್ರಮದಲ್ಲಿ ಬೆಳಗಾವಿಯ ಸಂಸದರಾದ ಶ್ರೀಮತಿ. …

Read More »

2A ಮೀಸಲಾತಿ ವಿಳಂಬ 5 ಸಾವಿರಕ್ಕೂ ಹೆಚ್ಚು ಜನ ಬೊಮ್ಮಾಯಿನಿವಾಸಕ್ಕೆ ಮುತ್ತಿಗೆ ಹಾಕುತ್ತೇವೆ: ರಮೇಶ್ ಗೌಡ ಪಾಟೀಲ್

  ಅಥಣಿ  :ಪಂಚಮಸಾಲಿ ಸಮಾಜಕ್ಕೆ ೨ಎ ಮೀಸಲಾತಿ ನೀಡುವಂತೆ ಹಲವು ದಶಕಗಳ ಹೋರಾಟ ಇದಾಗಿದೆ, ಆದರೆ ಸರ್ಕಾರಗಳು ಭರವಸೆ ನೀಡುತ್ತಾ ಬಂದಿದೆ, ಇದನ್ನು ಖಂಡಿಸಿ ನಾವು ಬರುವ ದಿನಾಂಕ ಇಪ್ಪತ್ತರಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರ ನಿವಾಸಕ್ಕೆ ಮುತ್ತಿಗೆ ಹಾಕುತ್ತೇವೆ ಎಂದು ಅಥಣಿ ತಾಲೂಕು ಪಂಚಮಸಾಲಿ ಸಂಘಟನೆಯ ಅಧ್ಯಕ್ಷರಾದ ರಮೇಶ್ ಗೌಡ ಪಾಟೀಲ್ ಅವರು ಹೇಳಿದರು. ಅವರು ಬೆಳಗಾವಿ ಜಿಲ್ಲೆಯ ಅಥಣಿ ಪಟ್ಟಣದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡುತ್ತಾ, ಪಂಚಮಸಾಲಿ ಸಮಾಜ …

Read More »

ಮಹಿಳೆಗೆ ಮಂಕುಬೂದಿ ಎರಚಿ ಚಿನ್ನಾಭರಣ ಎಗರಿಸಿ ಪರಾರಿಯಾದ ಕಿರಾತಕರು..!!

ದಾರಿಯಲ್ಲಿ ಹೋಗುತ್ತಿದ್ದ ಮಹಿಳೆಯೊಬ್ಬಳಿಗೆ ಮಂಕುಬೂದಿ ಎರಚಿದ ಕಿರಾತಕರು ಮಹಿಳೆಯಿಂದ ಬಂಗಾರದ ಮಾಗಲ್ಯದ ಸರ ಸೇರಿದಂತೆ ಬಂಗಾರದ ಆಭರಣಗಳನ್ನು ಎಗರಿಸಿ ಪರಾರಿಯಾದ ಘಟನೆ ಬೆಳಗಾವಿಯ ಆಜಾದ್‍ಗಲ್ಲಿಯಲ್ಲಿ ನಡೆದಿದೆ. ಇಂದು ಶನಿವಾರ ಮಧ್ಯಾಹ್ನದ ವೇಳೆ ಆಜಾದ್‍ಗಲ್ಲಿಯಲ್ಲಿ ಮಹಿಳೆಯೊಬ್ಬಳು ಹೋಗುತ್ತಿದ್ದಳು ಈ ವೇಳೆ ಮಹಿಳೆಯನ್ನು ಹಸಿವೆಯಾಗಿದೆ ತಿನ್ನಲು ನಹಣ ಕೊಡುವಂತೆ ಕೇಳಿದ್ದಾರೆ. ಈ ವೇಳೆ ಹಣ ನೀಡಿದ ಮಹಿಳೆಗೆ ಮೈ ಮೇಲೆ ಬಂಗಾರದ ಆಭರಣಗಳನ್ನು ಹಾಕಿಕೊಳ್ಳಬೇಡ. ಕಳ್ಳರು ಕದ್ದುಕೊಂಡು ಹೋಗಬಹುದು. ಹಾಗಾಗಿ ಅವುಗಳನ್ನು ತದುಕೊಡು …

Read More »

ಪ್ರಕೃತಿ ಪ್ರಲಾಪ: ಶೈಕ್ಷಣಿಕ ವ್ಯವಸ್ಥೆಗೆ ಸಂಕಷ್ಟ

ಬೆಳಗಾವಿ: ಈ ವರ್ಷದ ಅತಿಯಾದ ಮಳೆ ಮತ್ತು ನದಿಗಳ ಪ್ರವಾಹ ಗಡಿ ಜಿಲ್ಲೆ ಬೆಳಗಾವಿಯಲ್ಲಿ ಸಾಕಷ್ಟು ಹಾನಿ ಉಂಟುಮಾಡಿದೆ. ಕೃಷಿ ಕ್ಷೇತ್ರದ ಜೊತೆಗೆ ಮೂಲಭೂತ ಸೌಕರ್ಯಗಳಿಗೂ ಇದರ ಪರಿಣಾಮ ಬೀರಿದೆ. ಶೈಕ್ಷಣಿಕ ಕ್ಷೇತ್ರ ಸಹ ಇದರಿಂದ ಹೊರತಾಗಿಲ್ಲ.   ಕಳೆದ ಮೂರು ತಿಂಗಳಿಂದ ಜಿಲ್ಲೆಯಲ್ಲಿ ಸುರಿದ ಮಳೆ ಹಾಗೂ ನದಿಗಳ ಪ್ರವಾಹದಿಂದ ಶಾಲೆಗಳ ಸ್ಥಿತಿ ಶೋಚನೀಯವಾಗಿದೆ. ಮೊದಲೇ ಅನುದಾನದ ಕೊರತೆಯಿಂದ ಬಳಲುತ್ತಿರುವ ಶಾಲೆಗಳು ಈಗ ಕೊಠಡಿಗಳ ದುರಸ್ತಿ ವಿಷಯದಲ್ಲಿ ಮತ್ತಷ್ಟು ಸಮಸ್ಯೆಗೆ …

Read More »

ಗೋಕಾಕ್: ರಾಜ್ಯ ಹೆದ್ದಾರಿ ಮೇಲೆ ಚಿನ್ನದ ವ್ಯಾಪಾರಿ ಅಡ್ಡಗಟ್ಟಿ ಅರ್ಧ ಕೆ.ಜಿ ಬಂಗಾರ 2.80ಲಕ್ಷ ಹಣ ದರೋಡೆ !

  ಘಟಪ್ರಭಾ :ಚಿನ್ನದ ವ್ಯಾಪಾರಿಗಳಿಬ್ಬರು ಗೋಕಾಕದಿಂದ ಬೈಕ್ ಮೇಲೆ ಶಿಂಧಿಕುರಬೇಟ ಗ್ರಾಮಕ್ಕೆ ಬರುತ್ತಿರುವಾಗ 8 ಜನರು ಡಕಾಯಿತರ ತಂಡ ವ್ಯಾಪಾರಿಗಳನ್ನು ರಾಜ್ಯ ಹೆದ್ದಾರಿ ಮೇಲೆ ಅಡ್ಡಗಟ್ಟಿ ಹಲ್ಲೆ ಮಾಡಿ ಅರ್ಧ ಕೆ.ಜಿ ಬಂಗಾರ ಹಾಗೂ 2.80ಲಕ್ಷ ನಗದು ಹಣ ದರೋಡೆ ಮಾಡಿ ಪರಾರಿಯಾದ ಘಟನೆ ಶುಕ್ರವಾರ ರಾತ್ರಿ 8.30ರ ಸುಮಾರಿಗೆ ಘಟಪ್ರಭಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಈ ಬಗ್ಗೆ ಘಟಪ್ರಭಾ ಪೊಲೀಸ್ ಠಾಣೆಯಲ್ಲಿ ಶುಕ್ರವಾರ ಮಧ್ಯರಾತ್ರಿಯೇ ಪ್ರಕರಣ ದಾಖಲಾಗಿದ್ದು …

Read More »