Breaking News

ಬೆಳಗಾವಿ

ಬೆಳಗಾವಿ ರಾಜ್ಯದ ಅತಿ ಹೆಚ್ಚು ವಿಸ್ತೀರ್ಣ ಹೊಂದಿದ ದೊಡ್ಡ ಜಿಲ್ಲೆ ಷ್ಟಾಚಾರ ಮುಕ್ತ ಜಿಲ್ಲೆಯಾಗಿಸುವ ನಿಟ್ಟಿನಲ್ಲಿ ಎಲ್ಲ ಅಧಿಕಾರಿಗಳು ಪ್ರಾಮಾಣಿಕವಾಗಿ ಕಾರ್ಯ ನಿರ್ವಹಿಸಬೇಕು: ಲೋಕಾಯುಕ್ತ ನ್ಯಾಯಮೂರ್ತಿ

ಬೆಳಗಾವಿ ರಾಜ್ಯದ ಅತಿ ಹೆಚ್ಚು ವಿಸ್ತೀರ್ಣ ಹೊಂದಿದ ದೊಡ್ಡ ಜಿಲ್ಲೆಯಾಗಿದ್ದು, ಆಡಳಿತಾತ್ಮಕವಾಗಿ ಸುಧೀರ್ಘವಾದ ಕ್ಷೇತ್ರವಾಗಿದೆ. ಜಿಲ್ಲೆಯನ್ನು ಮಾದರಿ, ಭ್ರಷ್ಟಾಚಾರ ಮುಕ್ತ ಜಿಲ್ಲೆಯಾಗಿಸುವ ನಿಟ್ಟಿನಲ್ಲಿ ಎಲ್ಲ ಅಧಿಕಾರಿಗಳು ಪ್ರಾಮಾಣಿಕವಾಗಿ ಕಾರ್ಯ ನಿರ್ವಹಿಸಬೇಕು ಎಂದು ಗೌರವಾನ್ವಿತ ಲೋಕಾಯುಕ್ತ ನ್ಯಾಯಮೂರ್ತಿಗಳಾದ ಬಿ.ಎಸ್.ಪಾಟೀಲ ಅವರು ನುಡಿದರು. ಸುವರ್ಣ ವಿಧಾನ ಸೌಧದ ಸೆಂಟ್ರಲ್ ಹಾಲ್ ನಲ್ಲಿ ಬುಧವಾರ (ಆ.06) ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ಲೋಕಾಯುಕ್ತ ಪ್ರಕರಣಗಳ ವಿಲೇವಾರಿ ಕುರಿತು ನಡೆದ ಪ್ರಗತಿ ಪರಿಶೀಲನಾ ಸಭೆಯ …

Read More »

ಬೆಳಗಾವಿ – ಬೆಂಗಳೂರು ವಂದೇ ಭಾರತಕ್ಕೆ ಮುಹೂರ್ತ ಫಿಕ್ಸ್ ; ಎಲ್ಲೆಲ್ಲಿ ನಿಲುಗಡೆ? ಹೀಗಿದೆ ವೇಳಾಪಟ್ಟಿ

ಬೆಳಗಾವಿ : ಬೆಳಗಾವಿ ಭಾಗದ ಜನರ ಬಹುದಿನದ ಬೇಡಿಕೆಯಾಗಿದ್ದ ಬೆಳಗಾವಿ – ಬೆಂಗಳೂರು ‘ವಂದೇ ಭಾರತ್’ ರೈಲು ಸಂಚರಿಸುವುದಕ್ಕೆ ಮುಹೂರ್ತ ಫಿಕ್ಸ್ ಆಗಿದ್ದು, ಇದೇ ಆಗಸ್ಟ್ 10 ರಂದು ಭಾನುವಾರ ಪ್ರಧಾನಿ ನರೇಂದ್ರ ಮೋದಿ ಅವರು ಬೆಂಗಳೂರಿನಿಂದ ಚಾಲನೆ ನೀಡಲಿದ್ದಾರೆ ಎಂದು ಸಂಸದ ಜಗದೀಶ ಶೆಟ್ಟರ್ ಮಾಹಿತಿ ನೀಡಿದ್ದಾರೆ. ಆಗಸ್ಟ್​ 10 ರಂದೇ ಮೋದಿ ಅವರಿಂದ ಗ್ರೀನ್​ ಸಿಗ್ನಲ್: ಈ ಕುರಿತು ಜಗದೀಶ ಶೆಟ್ಟರ್ ಅವರನ್ನು  ಪ್ರತಿನಿಧಿ ಸಂಪರ್ಕಿಸಿದಾಗ, ನಿನ್ನೆಯಷ್ಟೇ ದೆಹಲಿಯಲ್ಲಿ …

Read More »

ಬೆಳಗಾವಿ ಜನತೆಗೆ ತಟ್ಟಿದ ಸಾರಿಗೆ ನೌಕರರ ಮುಷ್ಕರದ ಬಿಸಿ

ಬೆಳಗಾವಿ: ರಾಜ್ಯದಲ್ಲಿ ಸಾರಿಗೆ ನೌಕರರ ಮುಷ್ಕರ ಹಿನ್ನೆಲೆಯಲ್ಲಿ ಗಡಿ ಜಿಲ್ಲೆ ಬೆಳಗಾವಿಯಲ್ಲಿ ಮುಷ್ಕರದ ಬಿಸಿ ತಟ್ಟಿದ್ದು, ಬೆಳಗಾವಿ ಕೇಂದ್ರ ಬಸ್ ನಿಲ್ದಾಣದಲ್ಲಿ ಬಸ್ ಸಂಚಾರ ವ್ಯತ್ಯಯವಾಗಿದೆ. ಶೇ.30ರಷ್ಟು ಬಸ್​ಗಳು ಮಾತ್ರ ಕಾರ್ಯಾಚರಣೆ ಮಾಡುತ್ತಿವೆ. ಕರ್ನಾಟಕ, ಗೋವಾ ಮತ್ತು ಮಹಾರಾಷ್ಟ್ರ ರಾಜ್ಯಗಳ ಸಂಪರ್ಕ ಕೊಂಡಿಯಾಗಿರುವ ಬೆಳಗಾವಿಯಲ್ಲಿ ಸಾರಿಗೆ ನೌಕರರ ಮುಷ್ಕರದಿಂದಾಗಿ ಬಹಳಷ್ಟು ಸಾರಿಗೆ ನೌಕರರು ಕರ್ತವ್ಯಕ್ಕೆ ಹಾಜರಾಗಿಲ್ಲ. ಬೆಳಿಗ್ಗೆ 7 ಗಂಟೆ ಸುಮಾರಿಗೆ ಶೇ.10ರಷ್ಟು ಬಸ್​ಗಳು ಮಾತ್ರ ಕಾರ್ಯಾಚರಣೆ ಮಾಡುತ್ತಿದ್ದವು. ಸಾರಿಗೆ ವಿಭಾಗೀಯ …

Read More »

ಬೆಳಗಾವಿಯಿಂದ ರೈಲು ಪ್ರಯಾಣಿಕರ ಸಂಖ್ಯೆ ಶೇ.20ರಷ್ಟು ಏರಿಕೆ:

ಬೆಳಗಾವಿ: ದ್ವಿಪಥ​​​​​​​, ವಿದ್ಯುತ್‌ಚಾಲಿತ ಇಂಜಿನ್​​, ರೈಲ್ವೆ ನಿಲ್ದಾಣದ ಆಧುನೀಕರಣ ಸೇರಿ ಮತ್ತಿತರ ಕಾರಣಗಳಿಂದ ಬೆಳಗಾವಿಯಿಂದ ರೈಲಿನಲ್ಲಿ ಪ್ರಯಾಣಿಸುವವರ ಸಂಖ್ಯೆ ಅಧಿಕವಾಗಿದೆ. ಬಡ ಮತ್ತು ಮಧ್ಯಮ ವರ್ಗಕ್ಕೆ ಕೈಗೆಟುಕುವ ದರದಲ್ಲಿ ರೈಲ್ವೆ ಸೇವೆ ಸಿಗುತ್ತದೆ. ಇದರಿಂದಾಗಿ ಅತೀ ಹೆಚ್ಚು ಜನರು ರೈಲನ್ನೇ ಅವಲಂಬಿಸಿದ್ದಾರೆ. ಈ ಮೊದಲು ಸಿಂಗಲ್ ಲೈನ್ ಮತ್ತು ವಿದ್ಯುತ್‌ಚಾಲಿತ ಇಂಜಿನ್ ಇಲ್ಲದಿದ್ದುದರಿಂದ ಪ್ರಯಾಣಿಕರು ತಮ್ಮ ಸ್ಥಳ ತಲುಪಲು ಸಾಕಷ್ಟು ವಿಳಂಬವಾಗುತ್ತಿತ್ತು. ಆದರೆ, ಈಗ ಎರಡೂ ವ್ಯವಸ್ಥೆ ಕಲ್ಪಿಸಲಾಗಿದೆ. ಬೆಂಗಳೂರಿನಿಂದ ಮಿರಜ್​ವರೆಗೆ …

Read More »

ಗೋಕಾಕ ನಗರದ ಲಕ್ಷ್ಮೀ ಚಿತ್ರಮಂದಿರದಲ್ಲಿ ಇಂದು ಗೋಕಾಕಿನ ಸುಪ್ರಸಿದ್ಧ ಹಾಸ್ಯ ಕಲಾವಿದ ಲಪಂಗ ರಾಜು ಅವರ ಚೊಚ್ಚಲ ಸಿನಿಮಾ ‘ಕಿಡ್ನಾಪ್ ಕಾವ್ಯಾ’ ಬಿಡುಗಡೆ

ಗೋಕಾಕ ನಗರದ ಲಕ್ಷ್ಮೀ ಚಿತ್ರಮಂದಿರದಲ್ಲಿ ಇಂದು ಗೋಕಾಕಿನ ಸುಪ್ರಸಿದ್ಧ ಹಾಸ್ಯ ಕಲಾವಿದ ಲಪಂಗ ರಾಜು ಅವರ ಚೊಚ್ಚಲ ಸಿನಿಮಾ ‘ಕಿಡ್ನಾಪ್ ಕಾವ್ಯಾ’ ಬಿಡುಗಡೆ ಮಾಡಲಾಯಿತು. ಸ್ಥಳೀಯ ಕಲಾವಿದರಿಗೆ ಪ್ರೋತ್ಸಾಹ ನೀಡುವುದು ನಮ್ಮೆಲ್ಲರ ಕರ್ತವ್ಯ. ಈ ಚಿತ್ರವು ಯಶಸ್ವಿಯಾಗಲಿ ಎಂದು ಶುಭ ಹಾರೈಸುತ್ತೇನೆ. ಈ ವೇಳೆ ಶ್ರೀ ಸರ್ವೋತ್ತಮ‌ ಜಾರಕಿಹೊಳಿ ಅವರು ಹಾಗೂ ಚಿತ್ರತಂಡದ ಸದಸ್ಯರು ಉಪಸ್ಥಿತರಿದ್ದರು.

Read More »

ನಂದಗಡದಲ್ಲಿ ಬಸ್ಸಿಗಾಗಿ ನರಕ ಯಾತನೆ… ವಿದ್ಯಾರ್ಥಿಗಳ-ಸಾರ್ವಜನಿಕರ ಗೋಳು ಕೇಳುವವರ್ಯಾರು?…

ಖಾನಾಪೂರ ತಾಲೂಕಿನ ನಂದಗಡದಲ್ಲಿ ವಿದ್ಯಾರ್ಥಿಗಳು ಮತ್ತು ಸಾರ್ವಜನಿಕರು ಬಸ್ಸಿಗಾಗಿ ನರಕ ಯಾತನೆಯನ್ನು ಅನುಭವಿಸುತ್ತಿದ್ದು, ಇವರ ಕಷ್ಟ ಕೇಳುವವರ್ಯಾರು ಎಂಬ ಪರಿಸ್ಥಿತಿ ನಿರ್ಮಾಣವಾಗಿದೆ. ಸಾರಿಗೆ ಸಂಸ್ಥೆಯ ದುರ್ಲಕ್ಷ್ಯಕ್ಕೆ ಜನರು ಅಸಮಾಧಾನ ವ್ಯಕ್ತಪಡಿಸುತ್ತಿದ್ದಾರೆ. ಖಾನಾಪೂರ ತಾಲೂಕಿನ ನಂದಗಡ ಗ್ರಾಮದಲ್ಲಿ ಸಾರ್ವಜನಿಕರು ಮತ್ತು ವಿದ್ಯಾರ್ಥಿಗಳು ಪ್ರತಿದಿನವೂ ಬಸ್ ಸಮಸ್ಯೆಯಿಂದ ನರಕಯಾತನೆ ಅನುಭವಿಸುತ್ತಿರುವುದು ಈಗ ಸಾಮಾನ್ಯ ದೃಶ್ಯವಾಗಿದೆ. ತಮ್ಮ ವಿದ್ಯಾಭ್ಯಾಸಕ್ಕಾಗಿ ಖಾನಾಪೂರ, ಬೆಳಗಾವಿ ಹಾಗೂ ಹಳಿಯಾಳದತ್ತ ಪ್ರಯಾಣಿಸುವ ವಿದ್ಯಾರ್ಥಿಗಳು ಮತ್ತು ಸಾರ್ವಜನಿಕರೊಂದಿಗೆ ಅಪಾಯದ ಹಾದಿಯಲ್ಲಿ ಪ್ರಯಾಣಿಸುವಂತಾಗಿದೆ. …

Read More »

ಗೋಕಾಕ- ಮನ್ನಿಕೇರಿ ಗ್ರಾಮದ ಸಾರ್ವಜನಿಕರಿಗೆ ಅನುಕೂಲವಾಗಲು ಕೆರೆಗೆ ನೀರು ತುಂಬಿಸುವ ಯೋಜನೆ

ಗೋಕಾಕ- ಮನ್ನಿಕೇರಿ ಗ್ರಾಮದ ಸಾರ್ವಜನಿಕರಿಗೆ ಅನುಕೂಲವಾಗಲು ಕೆರೆಗೆ ನೀರು ತುಂಬಿಸುವ ಯೋಜನೆಯನ್ನು ಹಮ್ಮಿಕೊಂಡಿದ್ದು, ಮುಂದಿನ‌ ದಿನಗಳಲ್ಲಿ ಈ ಯೋಜನೆಯಿಂದ ರೈತರಿಗೆ ಎಲ್ಲ ರೀತಿಯಿಂದ ಅನುಕೂಲವಾಗಲಿದೆ ಎಂದು ಅರಭಾವಿ ಶಾಸಕ, ಬೆಮುಲ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಹೇಳಿದರು. ಈಚೆಗೆ ಮನ್ನಿಕೇರಿ ಗ್ರಾಮದಲ್ಲಿ ನೂತನವಾಗಿ ನಿರ್ಮಿಸಿರುವ ಲಕ್ಷ್ಮೀದೇವಿ ದೇವಸ್ಥಾನವನ್ನು ಉದ್ಘಾಟಿಸಿ ಮಾತನಾಡಿದರು. ಈಗಾಗಲೇ ಈ ಭಾಗಕ್ಕೆ ಕಲ್ಮಡ್ಡಿ ಏತ ನೀರಾವರಿ ಯೋಜನೆಯನ್ನು ಜಾರಿ ಮಾಡಲಾಗಿದೆ. ಇನ್ನೂ ಹೆಚ್ಚಿನ ಪ್ರಮಾಣದಲ್ಲಿ ರೈತರಿಗೆ ಅನುಕೂಲ …

Read More »

ತುಂಬಿದ ಕೃಷ್ಣಾ ನದಿ: ಕುಡಚಿ ಉಗಾರ ಸೇತುವೆ ಮುಳುಗಡೆ, ಸಂಚಾರ ಬಂದ್

ಚಿಕ್ಕೋಡಿ (ಬೆಳಗಾವಿ): ಮಹಾರಾಷ್ಟ್ರ ಪಶ್ಚಿಮ ಘಟ್ಟದಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆಯಿಂದಾಗಿ ಕೊಯ್ನಾ ಜಲಾಶಯದಿಂದ ನೀರು ಬಿಡುಗಡೆ ಮಾಡಿದ್ದರಿಂದ ಕೃಷ್ಣಾ ನದಿಯಲ್ಲಿ ಒಳಹರಿವು ಹೆಚ್ಚಳ ಆಗಿದೆ. ಪರಿಣಾಮ ಮಹಾರಾಷ್ಟ್ರ ಮತ್ತು ಕರ್ನಾಟಕ್ಕೆ ಸಂಪರ್ಕ ಕಲ್ಪಿಸುವ ಕುಡಚಿ ಉಗಾರ ಸೇತುವೆ ಮುಳುಗಡೆಯಾಗಿದ್ದು, ಗಡಿಭಾಗದ ಪ್ರಮುಖ ಸಂಪರ್ಕ ಸೇತುವೆ ಬಂದ್ ಆಗಿದೆ. ಕುಡಚಿ ಉಗಾರ ಸೇತುವೆ ಮುಳುಗಡೆ: ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನ ಕುಡಚಿ ಪಟ್ಟಣದ ಸಮೀಪದಲ್ಲಿರುವ ಕೃಷ್ಣಾ ನದಿಗೆ ಅಡ್ಡಲಾಗಿರುವ ಕುಡಚಿ – ಉಗಾರ ಸೇತುವೆ …

Read More »

ಆರ್ಡಿಪಿಆರ್ ಇಲಾಖೆಯಿಂದ ರಸ್ತೆ ಸುಧಾರಣಾ ಕಾಮಗಾರಿಗಳಿಗಾಗಿ ೧೦ ಕೋಟಿ ರೂಪಾಯಿ ಅನುದಾನ ಬಿಡುಗಡೆಯಾಗಿದೆ ಎಂದು ಶಾಸಕ ಮತ್ತು ಬೆಮುಲ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು

ಗೋಕಾಕ- ಆರ್ಡಿಪಿಆರ್ ಇಲಾಖೆಯಿಂದ ರಸ್ತೆ ಸುಧಾರಣಾ ಕಾಮಗಾರಿಗಳಿಗಾಗಿ ೧೦ ಕೋಟಿ ರೂಪಾಯಿ ಅನುದಾನ ಬಿಡುಗಡೆಯಾಗಿದೆ ಎಂದು ಶಾಸಕ ಮತ್ತು ಬೆಮುಲ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಹೇಳಿದರು. ಮಂಗಳವಾರದಂದು ೧.೨೦ ಕೋಟಿ ರೂಪಾಯಿ ವೆಚ್ಚದ ತಾಲ್ಲೂಕಿನ ಕೌಜಲಗಿ- ಹೊನಕುಪ್ಪಿ ರಸ್ತೆ ಸುಧಾರಣೆಗೆ ಗುದ್ದಲಿ ಪೂಜೆ ನೆರವೇರಿಸಿ ಮಾತನಾಡಿದರು. ಯಾದವಾಡ ಮುಖ್ಯ ರಸ್ತೆಯಿಂದ ಕುಲಗೋಡ ಹಣಮಂತ ದೇವಸ್ಥಾನ ಹೊಸಟ್ಟಿ ಕೂಡು ರಸ್ತೆಗೆ ೬೦ ಲಕ್ಷ ರೂಪಾಯಿ, ಮುನ್ಯಾಳ ಲಕ್ಷ್ಮೀದೇವಿ ಗುಡಿಯಿಂದ ರಂಗಾಪೂರ …

Read More »

ಚಲಿಸುತ್ತಿದ್ದ ಟ್ರ್ಯಾಕ್ಟರ್ ಮೇಲೆ ಬಿದ್ದ ಮರ.. ಚಾಲಕನಿಗೆ ಗಾಯ, ತಪ್ಪಿದ ಅನಾಹುತ

ಚಲಿಸುತ್ತಿದ್ದ ಟ್ರ್ಯಾಕ್ಟರ್ ಮೇಲೆ ಬಿದ್ದ ಮರ.. ಚಾಲಕನಿಗೆ ಗಾಯ, ತಪ್ಪಿದ ಅನಾಹುತ ಚಲಿಸುತ್ತಿದ್ದ ಟ್ರ್ಯಾಕ್ಟರ್ ಮೇಲೆ ಮರ ಬಿದ್ದ ಪರಿಣಾಮ ಟ್ರ್ಯಾಕ್ಟರ್ ಚಾಲಕ ಗಾಯಗೊಂಡ ಘಟನೆ ಧಾರವಾಡದ ಎಸ್‌ಪಿ ಕಚೇರಿ ಬಳಿ ಸಂಭವಿಸಿದ್ದು, ಅನಾಹುತವೊಂದು ತಪ್ಪಿದೆ. ಎಸ್‌ಪಿ ಕಚೇರಿಯ ಮುಂಭಾಗದ ರಸ್ತೆ ಮೂಲಕ ಹಾದು ಹೊರಟಿದ್ದ ಟ್ರ್ಯಾಕ್ಟರ್ ಮೇಲೆ ರಸ್ತೆ ಬದಿ ಇದ್ದ ಮರ ಗಾಳಿಗೆ ಏಕಾಏಕಿ ಬಿದ್ದಿದೆ. ಇದರಿಂದ ಟ್ರ್ಯಾಕ್ಟರ್ ಚಾಲಕನಿಗೆ ಗಾಯವಾಗಿತ್ತು. ಆತನನ್ನು ಜಿಲ್ಲಾಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಗಿದೆ. …

Read More »