ಹಿರಿಯ ಸಚಿವ ಉಮೇಶ ಕತ್ತಿ ಅಗಲಿಕೆಯಿಂದ ಇಡೀ ರಾಜ್ಯಕ್ಕೆ ದೊಡ್ಡ ನಷ್ಠ : ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ತಮ್ಮ ಗೃಹ ಕಛೇರಿಯಲ್ಲಿ ಉಮೇಶ ಕತ್ತಿಗೆ ಶೃದ್ಧಾಂಜಲಿ ಸಲ್ಲಿಸಿದ ಬಾಲಚಂದ್ರ ಜಾರಕಿಹೊಳಿ ಗೋಕಾಕ: ಸದಾ ಅಭಿವೃದ್ಧಿಯ ಬಗ್ಗೆ ಚಿಂತಿಸುತ್ತಿದ್ದ ನಾಡಿನ ಹಿರಿಯ ರಾಜಕಾರಣಿ, ಸಚಿವ ಉಮೇಶ ಕತ್ತಿ ಅವರ ನಿಧನದಿಂದ ಇಡೀ ರಾಜ್ಯಕ್ಕೆ ಅಪಾರ ಹಾನಿಯಾಗಿದೆ ಎಂದು ಕೆಎಂಎಫ್ ಅಧ್ಯಕ್ಷ, ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಸಂತಾಪ ಸೂಚಿಸಿದರು. ಇಲ್ಲಿಯ …
Read More »ಉಮೇಶ ಕತ್ತಿ ನಿಧನ: ಸ್ವಯಂ ಪ್ರೇರಿತ ಬಂದ್, ಮೃತದೇಹ ಒಯ್ಯಲು ಅಲಂಕೃತ ಸೇನಾ ವಾಹನ
ಬೆಳಗಾವಿ: ಉಮೇಶ ಕತ್ತಿ ಅವರ ಮೃತದೇಹವನ್ನು ಇಲ್ಲಿನ ಸಾಂಬ್ರಾ ವಿಮಾನ ನಿಲ್ದಾಣದಿಂದ ಅವರ ಹುಟ್ಟೂರಾದ, ಹುಕ್ಕೇರಿ ತಾಲ್ಲೂಕಿನ ಬೆಲ್ಲದ ಬಾಗೇವಾಡಿಗೆ ತೆಗೆದುಕೊಂಡು ಹೋಗಲು ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ. ಅಲಂಕೃತ ಸೇನಾ ವಾಹನದಲ್ಲಿ ಮೆರವಣಿಗೆ ಮೂಲಕ ತೆಗೆದುಕೊಂಡು ಹೋಗಲು ತಯಾರಿ ನಡೆದಿದೆ. ಮೈನಸ್ 4 (-4) ಸೆಂಟಿಗ್ರೇಡ್ ಉಷ್ಣಾಂಶದ ಪೆಟ್ಟಿಗೆಯನ್ನು ಈ ಸೇನಾ ವಾಹನದಲ್ಲಿ ಈಗಾಗಲೇ ಇಡಲಾಗಿದೆ. ಮೂರು ಕ್ವಿಂಟಲ್ ಹೂವುಗಳಿಂದ ವಾಹನವನ್ನು ಅಲಂಕಾರ ಮಾಡಲಾಗಿದೆ. ಸಂಚರಿಸುವ ಮಾರ್ಗ: ಸಾಂಬ್ರಾ …
Read More »ರಾಜ್ಯದಲ್ಲಿ 3 ದಿನ ಶೋಕಾಚರಣೆ: ಸಿ.ಎಂ ಬೊಮ್ಮಾಯಿ
ಬೆಳಗಾವಿ: ‘ಅರಣ್ಯ ಸಚಿವ ಸಚಿವ ಉಮೇಶ ಕತ್ತಿ ಅವರ ಅಗಲಿಕೆಯಿಂದ ರಾಜ್ಯಕ್ಕೆ ತುಂಬಲಾರದ ನಷ್ಟವಾಗಿದೆ. ರಾಜ್ಯದಲ್ಲಿ ಬುಧವಾರದಿಂದ ಮೂರು ದಿನ ಶೋಕಾಚಾರಣೆ ಮಾಡಲಾಗುವುದು’ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ತಾಲ್ಲೂಕಿನ ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ ನಡೆಸಲಾಗವುದು’ ಎಂದರು. ‘ರಾಜ್ಯದಲ್ಲಿ ಪ್ರವಾಹ ನಿರ್ವಹಣೆ ಕಾರ್ಯಾಚರಣೆ ಮುಂದುವರಿಸಲಾಗುತ್ತಿದೆ. ಶೋಕಾಚರಣೆ ಕಾರಣ ಉಳಿದ ಚಟುವಟಿಕೆಗಳು ನಡೆಯುವುದಿಲ್ಲ’ ಎಂದು ತಿಳಿಸಿದರು. ‘ದೊಡ್ಡಬಳ್ಳಾಪುರದಲ್ಲಿ ಸೆ.8ರಂದು …
Read More »ಆಪ್ತ ಸ್ನೇಹಿತನ ಅಗಲಿಕೆಗೆ ಶಾಸಕ ಬಾಲಚಂದ್ರ ಜಾರಕಿಹೊಳಿ ಕಂಬನಿ*
ಗೋಕಾಕ್- ರಾಜ್ಯದ ಹಿರಿಯ ಶಾಸಕ, ಆಹಾರ ಮತ್ತು ಅರಣ್ಯ ಸಚಿವ ಉಮೇಶ್ ಕತ್ತಿ ಅವರ ಅಕಾಲಿಕ ನಿಧನಕ್ಕೆ ಅರಭಾವಿ ಶಾಸಕ, ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ತೀವ್ರ ಸಂತಾಪ ಸೂಚಿಸಿದ್ದಾರೆ. ಕತ್ತಿ ಅವರ ನಿಧನದಿಂದ ಮುತ್ಸದ್ದಿ, ಕ್ರಿಯಾಶೀಲ ವ್ಯಕ್ತಿತ್ವದ ಆಪ್ತ ಸ್ನೇಹಿತನೊಬ್ಬನನ್ನು ಕಳೆದುಕೊಂಡಿದ್ದೇನೆ. ನನ್ನ ಮತ್ತು ಕತ್ತಿ ಅವರ ಮಧ್ಯೆ ಸುಮಾರು ೨ ದಶಕದ ಒಡನಾಟವೂ ಎಂದೂ ಮರೆಯದ ಘಟನೆ ಎಂದೂ ಅವರು ತಿಳಿಸಿದ್ದಾರೆ. ಉತ್ತಮ ಹೃದಯವಂತಿಕೆಯ …
Read More »ಐಸ್ಕ್ರೀಮ್ ಮಾರಾಟದ ಸೋಗಿನಲ್ಲಿ ಬಂದ ಮಕ್ಕಳ ಕಳ್ಳ; ಬಾಲಕನನ್ನು ಕದ್ದೊಯ್ಯಲು ಮುಂದಾದಾಗ ಸಿಕ್ಕಿಬಿದ್ದ..
ಬೆಳಗಾವಿ: ಮಕ್ಕಳ ಕಳವಿಗೆ ಯತ್ನಿಸಿದವನೊಬ್ಬ ಸಾರ್ವಜನಿಕರ ಕೈಗೆ ಸಿಕ್ಕಿಹಾಕಿಕೊಂಡು ಏಟು ಬೀಳುತ್ತಿದ್ದಂತೆ ತಪ್ಪಿಸಿಕೊಂಡು ಪರಾರಿಯಾದ ಪ್ರಕರಣವೊಂದು ನಡೆದಿದೆ. ಬೆಳಗಾವಿ ಜಿಲ್ಲೆಯ ಬೈಲಹೊಂಗಲ ಪಟ್ಟಣದಲ್ಲಿ ಮಕ್ಕಳ ಕಳ್ಳರು ಕಾಣಿಸಿಕೊಂಡಿದ್ದು, ಜನತೆಯಲ್ಲಿ ಆತಂಕ ಮೂಡಿದೆ. ಸೋಮವಾರ ಮಧ್ಯಾಹ್ನ ವೇಳೆ ಪಟ್ಟಣದ ಪಿಂಜಾರ ಗಲ್ಲಿಯಲ್ಲಿ ಮಕ್ಕಳ ಕಳ್ಳನೋರ್ವ ಚಿಕ್ಕ ಬಾಲಕನನ್ನು ಕಳ್ಳತನ ಮಾಡಿ ಕರೆದೊಯ್ಯುವಾಗ ಗಲ್ಲಿಯ ಜನತೆಯಿಂದ ಧರ್ಮದೇಟು ತಿಂದು ಪರಾರಿಯಾದ ಘಟನೆ ನಡೆದಿದೆ. ಸ್ವಯಂ ಸತೀಶ ಅರವಳ್ಳಿ ಎಂಬ ನಾಲ್ಕು ವರ್ಷದ ಬಾಲಕನು …
Read More »ಸ್ತಬ್ಧವಾಯ್ತು ‘ಉತ್ತರ’ದ ಧ್ವನಿ: ಉತ್ತರ ಕರ್ನಾಟಕದ ಜನಪರ ಧ್ವನಿಯೂ ನಿಂತುಹೋಗಿದೆ.
ಬೆಂಗಳೂರು: ರಾಜ್ಯ ಕಂಡ ಅಪರೂಪದ ರಾಜಕಾರಣಿ, ಜನತಾ ಪರಿವಾರ ಮೂಲದ ಹಿರಿಯ ಮುತ್ಸದ್ಧಿ ಉಮೇಶ್ ಕತ್ತಿ (61) ಹೃದಯಾಘಾತದಿಂದ ನಿಧನರಾಗಿದ್ದಾರೆ. ಈ ಮೂಲಕ ಉತ್ತರ ಕರ್ನಾಟಕದ ಜನಪರ ಧ್ವನಿಯೂ ನಿಂತುಹೋಗಿದೆ. 1961ರ ಮಾರ್ಚ್ 14 ರಂದು ಬೆಳಗಾವಿ ಜಿಲ್ಲೆ ಹುಕ್ಕೇರಿಯ ಬೆಲ್ಲದ ಬಾಗೇವಾಡಿಯಲ್ಲಿ ಉಮೇಶ್ ಕತ್ತಿ ಜನಿಸಿದರು. ತಂದೆ ವಿಶ್ವನಾಥ್ ಕತ್ತಿ ಅವರ ಅಕಾಲಿಕ ನಿಧನದಿಂದ ಹುಕ್ಕೇರಿ ವಿಧಾನಸಭಾ ಕ್ಷೇತ್ರ ಖಾಲಿಯಾಗಿತ್ತು. 1985ರಲ್ಲಿ ಉಮೇಶ್ ಕತ್ತಿ, ಜನತಾ ಪಕ್ಷದಿಂದ ಶಾಸಕರಾಗಿ …
Read More »ಸಚಿವ ಉಮೇಶ್ ಕತ್ತಿ(61) ಹೃದಯಾಘಾತದಿಂದ ನಿಧನ
ಬೆಂಗಳೂರು(ಸೆ.06): ಸಚಿವ ಉಮೇಶ್ ಕತ್ತಿ(61) ಹೃದಯಾಘಾತದಿಂದ ನಿಧನರಾಗಿದ್ದಾರೆ. ಇಂದು(ಮಂಗಳವಾರ) ರಾತ್ರಿ ನಗರದ ಡಾಲರ್ಸ್ ಕಾಲೋನಿಯ ನಿವಾಸದಲ್ಲಿ ಉಮೇಶ್ ಕತ್ತಿ ಅವರಿಗೆ ಹೃದಯಾಘಾತವಾಗಿದ್ದರಿಂದ ತಕ್ಷಣ ಅವರನ್ನ ಎಂ.ಎಸ್. ರಾಮಯ್ಯ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಉಮೇಶ್ ಕತ್ತಿ ನಿಧನರಾಗಿದ್ದಾರೆ.
Read More »ಮಳೆ ನಿರ್ವಹಣೆಗೆ 300 ಕೋಟಿ ರೂ.ಗಳನ್ನು ಒದಗಿಸಲಾಗುವುದು:C.M. ಬೊಮ್ಮಾಯಿ
ಇಡೀ ರಾಜ್ಯದಲ್ಲಿ ಮಳೆ ನಿರ್ವಹಣೆಗೆ 300 ಕೋಟಿ ರೂ.ಗಳನ್ನು ಒದಗಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಮೈಸೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ಬೆಂಗಳೂರಿನಲ್ಲಿ 90 ವರ್ಷ ಆಗದಿರುವ ಮಳೆಯಾಗಿದೆ. ಇಡೀ ಬೆಂಗಳೂರು ಮುಳುಗಿಲ್ಲ. ಆ ರೀತಿ ಬಿಂಬಿಸುವ ಅವಶ್ಯಕತೆ ಇಲ್ಲ. ಬೆಂಗಳೂರಿನಲ್ಲಿ 8 ವಲಯಗಳಿವೆ. ಅವುಗಳಲ್ಲಿ 2 ವಲಯಗಳಲ್ಲಿ ತೊಂದರೆಯಾಗಿದೆ. ಅದರಲ್ಲಿ ಬೊಮ್ಮನಹಳ್ಳಿ ವಲಯ ಸಂಪೂರ್ಣ ನಿಯಂತ್ರಣದಲ್ಲಿದೆ. ಮತ್ತೊಂದು ವಲಯದಲ್ಲಿ 69 ಕೆರೆಗಳಿದ್ದು, …
Read More »ಗೋಕಾಕ್‌ನಲ್ಲಿ ಪ್ರವಾಹದಲ್ಲಿ ಸಿಲುಕಿದ್ದ 12 ದಿನದ ಹಸುಗೂಸು, ಬಾಣಂತಿಯ ರಕ್ಷಣೆಯೇ ರೋಚಕ!
ಬೆಳಗಾವಿ: ಗೋಕಾಕ್ ತಾಲೂಕು ಸೇರಿದಂತೆ ವಿವಿಧಡೆ ಭಾರಿ ಮಳೆ ಸುರಿಯುತ್ತಿದೆ. ರಣಮಳೆಯಿಂದ ಹಲವೆಡೆ ಪ್ರವಾಹ ಉಂಟಾಗಿದ್ದು ಹಲವರು ಸಿಲುಕಿಕೊಂಡಿದ್ದಾರೆ. ಇಂದು ಪ್ರವಾಹದಲ್ಲಿ ಸಿಲುಕಿದ್ದ 12 ದಿನದ ಹಸುಗೂಸು ಮತ್ತು ಬಾಣಂತಿಯನ್ನು ರಕ್ಷಣೆ ಮಾಡಿದ ಪ್ರಸಂಗವೂ ಕೂಡ ಮಳೆಯ ಪ್ರಮಾಣಕ್ಕೆ ಸಾಕ್ಷಿಯಾಯಿತು. ಸ್ಥಳೀಯ ಯುವಕರೆಲ್ಲ ಸೇರಿ ಹರಸಾಹಪಟ್ಟು ಹಸುಗೂಸು ಮತ್ತು ತಾಯಿಯನ್ನು ರಕ್ಷಿಸಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಯುವಕರ ಮನಮಿಡಿಯೂವ ಕಾರ್ಯ ಮೆಚ್ಚುಗೆಗೆ ಪಾತ್ರವಾಗಿದೆ. ಗೋಕಾಕ್ ತಾಲೂಕಿನ ಮಾಣಿಕವಾಡಿ ಗ್ರಾಮದಲ್ಲಿ …
Read More »ಬೆಳಗಾವಿ: ಹೈ ವೋಲ್ಟೇಜ್ ವಿದ್ಯುತ್ ತಂತಿ ಸ್ಪರ್ಶಿಸಿ ಇಬ್ಬರು ದುರ್ಮರಣ
ಬೆಳಗಾವಿ: ಹೈ ವೋಲ್ಟೇಜ್ ವಿದ್ಯುತ್ ತಂತಿ ಸ್ಪರ್ಶಿಸಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೆಳಗಾವಿ ತಾಲೂಕಿನ ಸುಳಗಾ ಗ್ರಾಮದಲ್ಲಿ ನಡೆಯಿತು. ಗ್ರಾಮದ ವಿನಾಯಕ್ ಕಲ್ಕಾಂಬಕರ್ (24), ಗೋಪಾಲ್ ಅಗಸಗೇಕರ್ (52) ಮೃತರು. ಮತ್ತೋರ್ವನಿಗೆ ಗಂಭೀರ ಗಾಯವಾಗಿವೆ. ಗಾಯಾಳುವನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಮುಂದುವರೆದಿದೆ. ಮನೆಯ ಮೇಲೆ ಸ್ಟೀಲ್ಶೀಟ್ ಅಳವಡಿಸುವಾಗ ವಿದ್ಯುತ್ ತಂತಿ ಸ್ಪರ್ಶಿಸಿ ದುರ್ಘಟನೆ ಸಂಭವಿಸಿದೆ. ಹೆಸ್ಕಾಂ ಅಧಿಕಾರಿಗಳು, ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ. ಕಾಕತಿ ಪೊಲೀಸ್ ಠಾಣೆಯಲ್ಲಿ …
Read More »