Breaking News

ಬೆಳಗಾವಿ

ಕೊಲೆ ಪ್ರಕರಣ: ಎರಡು ವಿಶೇಷ ತಂಡ ರಚನೆ

ಬೆಳಗಾವಿ: ತಾಲ್ಲೂಕಿನ ಕರ್ಲೆ ಬಳಿ ವ್ಯಕ್ತಿಯೊಬ್ಬರ ಕೊಲೆ ಮಾಡಿದ ಪ್ರಕರಣದ ತನಿಖೆಗಾಗಿ ಎರಡು ವಿಶೇಷ ತಂಡ ರಚಿಸಲಾಗಿದೆ. ಕರ್ಲೆ-ಬಾದರವಾಡಿ ರಸ್ತೆಯಲ್ಲಿ ಸೋಮವಾರ ಹೊರಟಿದ್ದ ಮೋಹನ ತಳವಾರ(55) ಅವರನ್ನು ದುಷ್ಕರ್ಮಿಗಳು ತಡೆದು, ಮಾರಕಾಸ್ತ್ರಗಳಿಂದ ಹೊಡೆದು ಹಲ್ಲೆ ಮಾಡಿದ್ದರು. ಗಂಭೀರವಾಗಿ ಗಾಯಗೊಂಡಿದ್ದ ಅವರು ಚಿಕಿತ್ಸೆಗೆ ಸ್ಪಂದಿಸದೆ ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟಿದ್ದರು. ‘ಮೋಹನ ಕೊಲೆ ಯಾವ ಕಾರಣಕ್ಕೆ ನಡೆದಿದೆ ಎಂಬುದು ತಿಳಿದುಬಂದಿಲ್ಲ. ಎರಡು ವಿಶೇಷ ತಂಡಗಳು ವಿವಿಧ ಆಯಾಮಗಳಲ್ಲಿ ತನಿಖೆ ನಡೆಸುತ್ತಿದ್ದು, ಆರೋಪಿಗಳ ಬಂಧನಕ್ಕೆ ಜಾಲ ಬೀಸಲಾಗಿದೆ’ …

Read More »

200 ನೇ ಕಿತ್ತೂರು ವಿಜಯೋತ್ಸವಕ್ಕೆ 40 ಕೋಟಿ ರೂ.ಅನುದಾನ

ಚನ್ನಮ್ಮನ ಕಿತ್ತೂರು: 2024 ನೇ ಸಾಲಿನ ಚನ್ನಮ್ಮನ ಕಿತ್ತೂರು ವಿಜಯೋತ್ಸವವನ್ನು ಸಂಭ್ರಮದಿಂದ ಅದ್ಧೂರಿಯಾಗಿ ಆಚರಿಸುವ ನಿಟ್ಟಿನಲ್ಲಿ ಸೋಮವಾರ(ಆ19) ಬೆಂಗಳೂರಿನ ವಿಕಾಸ ಸೌಧದಲ್ಲಿ ಕಂದಾಯ ಸಚಿವ ಹಾಗೂ ಕಿತ್ತೂರು ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಕೃಷ್ಣ ಬೈರೇಗೌಡ ಅವರ ಅಧ್ಯಕ್ಷತೆಯಲ್ಲಿ ಪೂರ್ವಭಾವಿ ಸಭೆ ಜರುಗಿತು.   200ನೇ ಕಿತ್ತೂರು ವಿಜಯೋತ್ಸವದ ಉತ್ಸವಕ್ಕೆ ಚನ್ನಮ್ಮನ ಕಿತ್ತೂರು ಕೋಟೆ ಆವರಣದಲ್ಲಿ ಥೀಮ್ ಪಾರ್ಕ್ ನಿರ್ಮಾಣ ಮಾಡಲು 35 ಕೋಟಿ ರೂ. ಹಾಗೂ ಉತ್ಸವಕ್ಕೆ ರೂ 5 ಕೋಟಿ …

Read More »

ಸಂಗೊಳ್ಳಿ ರಾಯಣ್ಣನ ದೇಶಪ್ರೇಮ ಇಂದಿಗೂ, ಎಂದೆಂದಿಗೂ ಅಮರ: ಬಾಲಚಂದ್ರ ಜಾರಕಿಹೊಳಿ

ಮೂಡಲಗಿ- ನಮ್ಮ ರಾಷ್ಟ್ರೀಯ ಹಬ್ಬ ಸ್ವಾತಂತ್ರ್ಯೋತ್ಸವದ ದಿನದಂದು ಹುಟ್ಟಿ, ಗಣ ರಾಜ್ಯೋತ್ಸವದಂದು ಮರಣ ಹೊಂದಿದ ಸಂಗೊಳ್ಳಿ ರಾಯಣ್ಣನ ದೇಶಪ್ರೇಮ ಇಂದಿಗೂ, ಎಂದೆಂದಿಗೂ ಅಮರ ಎಂದು ಶಾಸಕ ಮತ್ತು ಬೆಮ್ಯುಲ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಹೇಳಿದರು. ಗುರುವಾರದಂದು ತಾಲ್ಲೂಕಿನ ಕಲ್ಲೊಳ್ಳಿ ಪ.ಪಂ ಕಚೇರಿಯ ಹತ್ತಿರ ನಿರ್ಮಾಣಗೊಂಡ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನ ಪುತ್ಥಳಿಯನ್ನು ಅನಾವರಣಗೊಳಿಸಿ ಮಾತನಾಡಿದ ಅವರು, ರಾಯಣ್ಣನಂತಹ ಕೆಚ್ಚದೆಯ ಶೂರರ ಜೀವನವು ಪ್ರತಿಯೊಬ್ಬ ವ್ಯಕ್ತಿಗೂ ಮಾದರಿಯಾಗಿದೆ ಎಂದು ತಿಳಿಸಿದರು. ಕಿತ್ತೂರು …

Read More »

ಚಿಕ್ಕೋಡಿ: ಈ ಊರಿನ ಹೆಸರೇ ‘ಸೈನಿಕ ಮಲಿಕವಾಡ’; ಪ್ರತಿ ಮನೆಯಲ್ಲೂ ಇದ್ದಾರೆ ಸೈನಿಕ

ಚಿಕ್ಕೋಡಿ (ಬೆಳಗಾವಿ ಜಿಲ್ಲೆ): ತಾಲ್ಲೂಕಿನ ಮಲಿಕವಾಡ ಗ್ರಾಮವು ‘ಸೈನಿಕ ಮಲಿಕವಾಡ’ ಎಂದೇ ಹೆಸರಾಗಿದೆ. ಈ ಊರಿನ ಪ್ರತಿಯೊಂದು ಕುಟುಂಬದಲ್ಲೂ ಕನಿಷ್ಠ ಒಬ್ಬರು ಭಾರತೀಯ ಸೇನೆಯಲ್ಲಿದ್ದಾರೆ. ಸಿಆರ್‌ಪಿಎಫ್, ಬಿಎಸ್‍ಎಫ್, ಸಿಐಎಸ್‍ಎಫ್, ಎಸ್‍ಎಸ್‍ಬಿ ಸೇರಿ ವಾಯುಪಡೆ, ಭೂಸೇನೆ, ನೌಕಾಪಡೆಯಲ್ಲಿ ಇದ್ದಾರೆ.   ಏಳು ದಶಕಗಳಿಂದ ಹೀಗೆ ಸೇನೆ ಸೇರಿದವರ ಸಂಖ್ಯೆ ಬಹಳ ದೊಡ್ಡದು. ಈಗಲೂ 150ಕ್ಕೂ ಹೆಚ್ಚು ಯುವಕರು ಸೇನೆಯಲ್ಲಿದ್ದಾರೆ. 1965ರಲ್ಲಿ ಭಾರತ-ಚೀನಾ ಯುದ್ಧ, 1971ರಲ್ಲಿ ಭಾರತ- ಬಾಂಗ್ಲಾದೇಶ ಯುದ್ಧ ಮತ್ತು 1999ರಲ್ಲಿ ಕಾರ್ಗಿಲ್ …

Read More »

ಬೈಲಹೊಂಗಲದ ಬಳಿ ಕ್ಯಾಂಟರ್ ಪಲ್ಟಿ: ಮೂರು ಕರು ಸಾವು

ಬೈಲಹೊಂಗಲ: ತಾಲ್ಲೂಕಿನ ಚಿಕ್ಕಬಾಗೇವಾಡಿ ಗ್ರಾಮದ ಹೆದ್ದಾರಿಯಲ್ಲಿ ಗುರುವಾರ ಗೋವುಗಳನ್ನು ಅಕ್ರಮವಾಗಿ ಸಾಗಿಸುತ್ತಿದ್ದ ಕ್ಯಾಂಟರ್ ಪಲ್ಟಿಯಾಗಿ, ಮೂರು ಕರುಗಳು ಮೃತಪಟ್ಟಿವೆ. ಮಹಾರಾಷ್ಟ್ರ ನೋಂದಣಿ ಹೊಂದಿದ ಕ್ಯಾಂಟರ್‌ನಲ್ಲಿ 12 ಗೋವುಗಳನ್ನು ತುಂಬಿಕೊಂಡು ಸಾಗುವಾಗ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಚಾಲಕ ಪರಾರಿಯಾಗಿದ್ದಾನೆ. ಘಟನೆಯಲ್ಲಿ 3 ಕರುಗಳು ಮೃತಪಟ್ಟಿದ್ದು, ಎರಡು ಹಸುಗಳ ಸ್ಥಿತಿ ಗಂಭೀರವಾಗಿವೆ.‌ ಏಳು ಹಸುಗಳಿಗೆ ಸಣ್ಣಪುಟ್ಟ ಗಾಯಗಳಾಗಿವೆ.ವಿಷಯ ತಿಳಿದು ಸ್ಥಳಕ್ಕೆ ಬಂದ ಪೊಲೀಸರು, ಹಿಂದೂಪರ ಸಂಘಟನೆಗಳ ಕಾರ್ಯಕರ್ತರು ಕ್ಯಾಂಟರ್‌ನಲ್ಲಿ ಸಿಲುಕಿದ್ದ ಹಸುಗಳನ್ನು …

Read More »

ಬೆಳಗಾವಿಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿಯಿಂದ ಧ್ವಜಾರೋಹಣ

78ನೇ ಸ್ವಾತಂತ್ರ್ಯ ದಿನಾಚರಣೆ; ಬೆಳಗಾವಿಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿಯಿಂದ ಧ್ವಜಾರೋಹಣ ಬೆಳಗಾವಿ ಜಿಲ್ಲಾ ಕ್ರೀಡಾಂಗಣದಲ್ಲಿ ಧ್ವಜಾರೋಹಣ ನೇರವೇರಿಸಿದ ಸಚಿವರು, ಮಹಾತ್ಮಗಾಂಧಿ, ಡಾ.ಬಿ.ಆರ್‌.ಅಂಬೇಡ್ಕರ್ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ, ಧ್ವಜಾರೋಹಣದ ಬಳಿಕ ಆಕರ್ಷಕ ಪರೇಡ್ ಪರಿವೀಕ್ಷಣೆ ಮಾಡಿದರು. ಧ್ವಜಾರೋಹಣದಲ್ಲಿ ಸಂಸದ ಜಗದೀಶ್ ಶೆಟ್ಟರ್, ಶಾಸಕ ಆಶೀಫ್ ಸೇಠ್, ಮೇಯರ್ ಸವಿತಾ ಕಾಂಬಳೆ, ಡಿಸಿ ಮೊಹಮ್ಮದ್ ರೋಷನ್, ಪೊಲೀಸ್ ಕಮೀಷನರ್ ಯಡಾ ಮಾರ್ಟಿನ್, ಎಸ್ಪಿ ಡಾ.ಭೀಮಾಶಂಕರ ಗುಳೇದ್, ಜಿಪಂ ಸಿಇಒ ರಾಹುಲ್ …

Read More »

ಬೈಲಹೊಂಗಲ ಸಮೀಪದ ಬೆನಕಟ್ಟಿ ಗ್ರಾಮದಲ್ಲಿ ವ್ಯಕ್ತಿಯ ಕೊಲೆ

ಬೈಲಹೊಂಗಲ: ಸಮೀಪದ ಬೆನಕಟ್ಟಿ ಗ್ರಾಮದಲ್ಲಿ ವ್ಯಕ್ತಿಯೊಬ್ಬನನ್ನು ಕೊಲೆ ಮಾಡಿದ ಘಟನೆ ಶನಿವಾರ ನಡೆದಿದೆ. ಸವದತ್ತಿ ತಾಲೂಕಿನ ಬೆನಕಟ್ಟಿ ಗ್ರಾಮದ ಕಾಡಪ್ಪ ರುದ್ರಪ್ಪ ಶಿರಸಂಗಿ(42) ಕೊಲೆಯಾದ ವ್ಯಕ್ತಿ. ಮಬನೂರ ಗ್ರಾಮದ ಲಕ್ಷ್ಮಣ ದೇವೇಂದ್ರಪ್ಪ ಹೂಲಿ(21), ಜೀವಾಪುರ ಗ್ರಾಮದ ಸತೀಶ ಯಮನಪ್ಪ ಅರಿಬೆಚ್ಚಿ(28) ಬಂಧಿತ ಆರೋಪಿಗಳು. ಮುರಗೋಡ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸಿದ್ದಾರೆ.

Read More »

ವಿದ್ಯಾರ್ಥಿಗಳ ಬದುಕಿಗೆ ‘ನಿರ್ಮಾಣ’ ಆಸರೆ

ಚಿಕ್ಕೋಡಿ: ತಾಲ್ಲೂಕಿನ ಕೇರೂರು ಗ್ರಾಮದಲ್ಲಿ 15-20 ಜನ ಯುವಕ-ಯುವತಿಯರ ಗುಂಪು ಸೇರಿ ಸ್ಥಾಪಿಸಿದ ಉಚಿತ ಗ್ರಂಥಾಲಯ ಹಲವು ವಿದ್ಯಾರ್ಥಿಗಳ ಭವಿಷ್ಯ ನಿರ್ಮಾಣಗೊಳ್ಳಲು ಸಹಕಾರಿಯಾಗಿದೆ. ಕಳೆದ 6 ವರ್ಷಗಳ ಹಿಂದೆ ಸ್ಥಾಪಿಸಿದ ಉಚಿತ ಗ್ರಂಥಾಲಯ ಸೇವೆಯಿಂದ ಸ್ಪರ್ಧಾತ್ಮಕ ಪರೀಕ್ಷೆ ಬರೆಯಲು ಅನುಕೂಲವಾಗುತ್ತಿದೆ. ಪ್ರತಿ ದಿನವೂ ಗ್ರಂಥಾಲಯದಲ್ಲಿ ಓದಬಹುದು. ಮನೆಗೆ ಪುಸ್ತಕಗಳನ್ನು ಎರವಲು ಪಡೆದು ಓದಬಹುದಾಗಿದೆ. ಆದರೆ ಎಲ್ಲವೂ ಇಲ್ಲಿ ಉಚಿತ. ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಗ್ರಾಮೀಣ ಭಾಗದ ಮಕ್ಕಳಿಗೆ ಅನುಕೂಲವಾಗಬೇಕೆಂಬ ಕಾರಣದಿಂದ ಸ್ಪರ್ಧಾತ್ಮಕ …

Read More »

160ಕ್ಕೂ ಹೆಚ್ಚು ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳು ಕಾಳಜಿ ಕೇಂದ್ರಗಳಲ್ಲಿ ಆಶ್ರಯ

ಗೋಕಾಕ: ಇಲ್ಲಿನ ಹಳೆ ದನಗಳ ಪೇಟೆ, ದಾಳಂಬ್ರಿ ತೋಟ, ಮಟನ್ ಮಾರ್ಕೆಟ್, ಉಪ್ಪಾರ ಓಣಿ, ಬೋಜಗರ ಓಣಿ, ಕುಂಬಾರ ಓಣಿ, ಡೋರ ಗಲ್ಲಿ ಮುಂತಾದ ಪ್ರದೇಶಗಳ ಪ್ರತಿ ವರ್ಷ ಘಟಪ್ರಭೆ ಪ್ರವಾಹದಲ್ಲಿ ಮುಳುಗುತ್ತವೆ. ಮಹರ್ಷಿ ಭಗಿರಥ ಸರ್ಕಲ್‌ ಅಂತೂ ಮೊದಲ ಮಳೆಗೇ ಜಲಾವೃತವಾಗುತ್ತದೆ. ಮೂರು ತಲೆಮಾರುಗಳಿಂದಲೂ ಜನ ಒಂದೇ ರೀತಿಯ ಸಮಸ್ಯೆ ಎದುರಿಸುತ್ತಿದ್ದಾರೆ. ನೆರೆ ಬಂದಾಗ ಜನಜೀವನ ಮಾತ್ರ ಅಸ್ತವ್ಯಸ್ತ ಆಗುವುದಿಲ್ಲ. ಇಲ್ಲಿನ ಶಾಲೆ- ಕಾಲೇಜು ಮಕ್ಕಳ ಶಿಕ್ಷಣದ ಮೇಲೂ …

Read More »

ಬಿಪಿಎಲ್ ಪಡಿತರ ಚೀಟಿಯನ್ನು ಹೊಂದಿರುವ ಮಹಿಳೆಯರಿಗಾಗಿ ಕ್ಷೀರ ಸಂಜೀವಿನಿ ಯೋಜನೆ

ಗೋಕಾಕ- ಆರ್ಥಿಕವಾಗಿ ಹಿಂದುಳಿದ, ಅದರಲ್ಲೂ ಬಿಪಿಎಲ್ ಪಡಿತರ ಚೀಟಿಯನ್ನು ಹೊಂದಿರುವ ಮಹಿಳೆಯರಿಗಾಗಿ ಕ್ಷೀರ ಸಂಜೀವಿನಿ ಯೋಜನೆಯನ್ನು ಜಾರಿಗೊಳಿಸಿದ್ದು 4 ರ ಹಂತದಲ್ಲಿ ಈ ಯೋಜನೆಯನ್ನು ಅನುಷ್ಟಾನ ಮಾಡಲಾಗಿದೆ ಎಂದು ಜಿಲ್ಲಾ ಹಾಲು ಉತ್ಪಾದಕರ ಸಂಘಗಳ ಒಕ್ಕೂಟದ ಅಧ್ಯಕ್ಷರೂ ಆಗಿರುವ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ತಿಳಿಸಿದರು. ರವಿವಾರ ಸಂಜೆ ನಗರದ ತಮ್ಮ ಗೃಹ ಕಚೇರಿಯಲ್ಲಿ ಜಿಲ್ಲಾ ಹಾಲು ಉತ್ಪಾದಕರ ಸಂಘದಿಂದ ಜರುಗಿದ ಕಾರ್ಯಕ್ರಮದಲ್ಲಿ ಒಟ್ಟು 14.38 ಲಕ್ಷ ರೂಪಾಯಿಗಳ …

Read More »