ಬೆಳಗಾವಿ ಗ್ರಾಮೀಣ ಕ್ಷೇತ್ರದಲ್ಲಿ ಈಗಿನಿಂದಲೇ ಡಬ್ಬಿ ಹಂಚುವ ಕೆಲಸ ಶುರುವಾಗಿದೆ. ಆ ಡಬ್ಬಿ ಖಾಲಿ ಇದೆಯೋ..? ತುಂಬಿದೆಯೋ..? ಗೊತ್ತಿಲ್ಲ ಎಂದು ಬೆಳಗಾವಿ ಗ್ರಾಮಾಂತರ ಜಿಲ್ಲಾ ಬಿಜೆಪಿ ಅಧ್ಯಕ್ಷ ಸಂಜಯ ಪಾಟೀಲ ಲೇವಡಿ ಮಾಡಿದ್ದಾರೆ. ಬೆಳಗಾವಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಮಾಜಿ ಶಾಸಕ ಸಂಜಯ್ ಪಾಟೀಲ್ ನಾನು ಬಿಜೆಪಿ ಜಿಲ್ಲಾಧ್ಯಕ್ಷನಾಗಿ ಪಕ್ಷದ ಸಂಘಟನೆ ಮಾಡುತ್ತಿದ್ದೇನೆ. ನಾನು 10 ವರ್ಷ ಶಾಸಕನಾಗಿ ಕೆಲಸ ಮಾಡಿದ್ದೇನೆ. ಮುಂದೆಯೂ ಶಾಸಕನಾಗಬೇಕು ಎಂಬ ಆಸೆಯಿದೆ. ಆ ಪ್ರಕಾರ …
Read More »ಸರ್ಕಾರದ ಸೌಲಭ್ಯ ಸದುಪಯೋಗ ಪಡಿಸಿಕೊಳ್ಳಿ: ವಿಧಾನ ಪರಿಷತ್ ಸದಸ್ಯ ಲಖನ್ ಜಾಕಿರಹೊಳಿ
ಗೋಕಾಕ: ” ಬಡ ಮಕ್ಕಳ ವಿದ್ಯಾಭ್ಯಾಸಕ್ಕಾಗಿ ಸರ್ಕಾರ ಅನೇಕ ಸೌಲಭ್ಯಗಳನ್ನು ಕಲ್ಪಿಸಿದ್ದು, ಇದರ ಸದುಪಯೋಗ ಪಡೆದುಕೊಂಡು ಜೀವನ ಯಶಸ್ಸು ಕಾಣಬೇಕು” ಎಂದು ವಿಧಾನ ಪರಿಷತ್ ಸದಸ್ಯ ಲಖನ್ ಜಾಕಿರಹೊಳಿ ಅವರು ಹೇಳಿದರು. ನಗರದ ಗೃಹ ಕಚೇರಿಯಲ್ಲಿ ವಿಧಾನ ಪರಿಷತ್ ಸದಸ್ಯ ಲಖನ್ ಜಾಕಿರಹೊಳಿ ಅವರು ಕಟ್ಟಡ ಕಾರ್ಮಿಕ ಬಡಮಕ್ಕಳಿಗೆ ಸಹಾಯಧನ ಚೆಕ್ ವಿತರಿಸಿ, ಮಾತನಾಡಿದ ಅವರು, ಕೂಲಿ ಕಾರ್ಮಿಕರ ಮಕ್ಕಳು ಇನ್ನು ಹೆಚ್ಚಿನ ಉನ್ನತ ಮಟ್ಟದಲ್ಲಿ ವಿದ್ಯಾಭ್ಯಾಸ …
Read More »ಉಮೇಶ ಕತ್ತಿ ನಿವಾಸಕ್ಕೆ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ*
*ಗೋಕಾಕ:* ಅರಣ್ಯ ಹಾಗೂ ಆಹಾರ ಸಚಿವರಾಗಿದ್ದ ಉಮೇಶ ಕತ್ತಿ ಅವರ ನಿಧನದ ಹಿನ್ನೆಲೆಯಲ್ಲಿ ಕೆಎಂಎಫ್ ಅಧ್ಯಕ್ಷ ಮತ್ತು ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಕತ್ತಿಯವರ ಬೆಲ್ಲದ ಬಾಗೇವಾಡಿ ನಿವಾಸಕ್ಕೆ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು. ಗುರುವಾರದಂದು ಹುಕ್ಕೇರಿ ತಾಲೂಕಿನ ಬೆಲ್ಲದ ಬಾಗೇವಾಡಿ ಗ್ರಾಮದಲ್ಲಿರುವ ನಿವಾಸದಲ್ಲಿ ದಿ.ಉಮೇಶ ಕತ್ತಿ ಅವರ ಭಾವಚಿತ್ರಕ್ಕೆ ನಮನ ಸಲ್ಲಿಸಿದ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಮೃತ ಉಮೇಶ ಕತ್ತಿ ಸಹೋದರ ರಮೇಶ ಕತ್ತಿ, …
Read More »ಬೆಳಗಾವಿ: ತಾಯಿಗೆ ಹೊಡೆದು ಗಾಯಗೊಳಿಸಿದ ತಂದೆಯನ್ನು ಮಚ್ಚಿನಿಂದ ಕೊಲೆಗೈದ ಪುತ್ರ
ಬೆಳಗಾವಿ: ತಾಯಿಯ ಮೇಲೆ ಮನಬಂದಂತೆ ಥಳಿಸಿ ಗಾಯಗೊಳಿಸಿದ ತಂದೆಯನ್ನು ಮಗ ಮಚ್ಚಿನಿಂದ ಕೊಲೆ ಮಾಡಿರುವ ಘಟನೆ ಬೈಲಹೊಂಗಲ ಪಟ್ಟಣದ ಶಿವಾನಂದ ಭಾರತಿ ನಗರದ ಸತ್ಯ ಮಾರ್ಗದಲ್ಲಿ ನಡೆದಿದೆ. ಬೈಲಹೊಂಗಲ ಪಟ್ಟಣದ ರುದ್ರಪ್ಪ ತಳವಾರ (55) ಕೊಲೆಯಾದ ವ್ಯಕ್ತಿ. ಸಂತೋಷ ರುದ್ರಪ್ಪ ತಳವಾರ (30) ಆರೋಪಿಯಾಗಿದ್ದಾನೆ. ಕ್ಷುಲ್ಲಕ ಕಾರಣಗಳಿಗಾಗಿ ಪತ್ನಿಯೊಂದಿಗೆ ಜಗಳವಾಡಿದ್ದ ರುದ್ರಪ್ಪ, ಪತ್ನಿ ಮಹಾದೇವಿ ಮೇಲೆ ಮನಬಂದಂತೆ ಹಲ್ಲೆಗೈದು ಗಾಯಗೊಳಿಸಿದ್ದಾನೆ. ತಂದೆ-ತಾಯಿ ಜಗಳ ಕೇಳಿ ಹೊರಹೋಗಿದ್ದ ಮಗ ಸಂತೋಷ ಮನೆಗೆ ಬಂದಿದ್ದಾನೆ. …
Read More »ರಾಜಹಂಸಗಡದಲ್ಲಿ ಬೋಟಿಂಗ್ ಸ್ಪರ್ಧೆ
ಮಳೆಯಿಂದಾಗಿ ತುಂಬಿ ಹರಿಯುತ್ತಿದ್ದ ರಾಜಹಂಸಗಡ ಗ್ರಾಮದ ಕೆರೆಯಲ್ಲಿ ಮನರಂಜನಾ ಉದ್ದೇಶದಿಂದ ಗಣೇಶೋತ್ಸವ ಹಿನ್ನೆಲೆಯಲ್ಲಿ ಬೋಟ್ ಕಾಂಪಿಟೇಶನ್‌ನ್ನು ಹಮ್ಮಿಕೊಳ್ಳಲಾಗಿತ್ತು. ಹೌದು ಮಳೆಯಿಂದಾಗಿ ತುಂಬಿ ಹರಿಯುತ್ತಿದ್ದ ರಾಜಹಂಸಗಡ ಗ್ರಾಮದ ಕೆರೆಯಲ್ಲಿ ಮನರಂಜನಾ ಉದ್ದೇಶದಿಂದ ಗಣೇಶೋತ್ಸವ ಹಿನ್ನೆಲೆಯಲ್ಲಿ ಬೋಟ್ ಕಾಂಪಿಟೇಶನ್‌ನ್ನು ಹಮ್ಮಿಕೊಳ್ಳಲಾಗಿತ್ತು. ಈ ವೇಳೆ ಗ್ರಾಮದ ಉತ್ಸಾಹಿ ಯುವಕರು ಭಾಗಿಯಾಗಿದ್ದರು. ಈ ಬೋಟ್ ಕಾಂಪಿಟೇಶನ್‌ನಲ್ಲಿ ಯುವತಿಯರು ಭಾಗಿಯಾಗಿದ್ದು ವಿಶೇಷವಾಗಿದ್ದರು. ಈ ವೇಳೆ ಸ್ಪರ್ಧೆಯಲ್ಲಿ ೭೦ ವರ್ಷದ ಪರಶುರಾಮ್ ಹಲಗೇಕರ್, ಹಾಗೂ ನರ್ಮದಾ ಕಡೋಲ್ಕರ್ ಭಾಗಿಯಾಗಿದ್ದು …
Read More »ಗುಣಮಟ್ಟದ ಶಿಕ್ಷಣದಿಂದ ದೇಶದ ಪ್ರಗತಿ: ಬಾಗೇವಾಡಿ
ಬೆಳಗಾವಿ: ಒಂದು ದೇಶದ ಪ್ರಗತಿ ಅಲ್ಲಿಯ ಶಿಕ್ಷಣದ ಗುಣಮಟ್ಟದ ಮೇಲೆ ನಿಂತಿದೆ. ಗುಣಮಟ್ಟದ ಶಿಕ್ಷಣ ಸಾಕಾರಗೊಳ್ಳಲು ಅಲ್ಲಿಯ ಶಿಕ್ಷಕರ ವೃತ್ತಿಗೌರವಕ್ಕೆ ಧಕ್ಕೆ ಬಾರದಂತೆ ನೋಡಿಕೊಳ್ಳುವ ಮುಖೇನ ಅವರಿಗೆ ವೃತ್ತಿ ಸ್ವಾತಂತ್ರ್ಯ ನೀಡಿದರೆ ಭಾರತದ ಉಜ್ವಲ ಭವಿಷ್ಯ ಬರೆಯಬಲ್ಲ ಮಕ್ಕಳನ್ನು ತಯಾರು ಮಾಡಬಲ್ಲ ಸಾಮರ್ಥ್ಯ ಶಿಕ್ಷಕರಿಗಿದೆ ಎಂದು ಶ್ರೀ ರವಿಶಂಕರ ವಿದ್ಯಾವರ್ಧಕ ಸಂಸ್ಥೆಯ ಸಂಸ್ಥಾಪಕ ಶಂಕರ ಬಾಗೇವಾಡಿ ಅಭಿಪ್ರಾಯ ಪಟ್ಟರು. ನಗರದ ಹೊರವಲಯದ ಕಣಬರಗಿಯ ಸಮತಾ ಶಾಲೆಯಲ್ಲಿ ಜರುಗಿದ ಶಿಕ್ಷಕರ ದಿನಾಚರಣೆ …
Read More »ನನಗೆ ಬಯ್ಯಲಾದರೂ ದೊಡ್ಡಪ್ಪ ಬರಲಿ ಎಂದು ಕಾಯುತ್ತಿದ್ದೇನೆ: ಉಮೇಶ್ ಕತ್ತಿ ಸಹೋದರ ಪುತ್ರ ಪೃಥ್ವಿ ಕಣ್ಣೀರು
ಆಹಾರ ಸಚಿವ ಉಮೇಶ್ ಕತ್ತಿ ಕಳೆದ ರಾತ್ರಿ ವಿಧಿವಶರಾಗಿದ್ದು, ಅವರ ಈ ಸಾವು ಕುಟುಂಬಸ್ಥರನ್ನು ಮಾತ್ರವಲ್ಲದೆ ರಾಜ್ಯದ ಜನತೆಯನ್ನು ದಿಗ್ಬ್ರಾಂತರನ್ನಾಗಿಸಿದೆ. ರಾತ್ರಿಯವರೆಗೆ ಲವಲವಿಕೆಯಿಂದ ಇದ್ದ ಉಮೇಶ್ ಕತ್ತಿ ಮರುಕ್ಷಣವೇ ಇಲ್ಲ ಎಂಬ ಸತ್ಯವನ್ನು ಅರಗಿಸಿಕೊಳ್ಳಲು ಯಾರಿಗೂ ಸಾಧ್ಯವಾಗುತ್ತಿಲ್ಲ. ಉಮೇಶ್ ಕತ್ತಿ ಅವರ ಹುಟ್ಟೂರು ಬೆಳಗಾವಿ ಜಿಲ್ಲೆ ಹುಕ್ಕೇರಿ ತಾಲೂಕಿನ ಬೆಲ್ಲದ ಬಾಗೇವಾಡಿಯಲ್ಲಿ ನೀರವ ಮೌನ ಆವರಿಸಿದ್ದು, ಊರಿನ ಜನತೆ ತಮ್ಮ ಅಂಗಡಿ ಮುಂಗಟ್ಟುಗಳನ್ನು ಮುಚ್ಚಿ ಸ್ವಯಂ ಬಂದ್ ಆಚರಿಸುತ್ತಿದ್ದಾರೆ. …
Read More »ಹಿರಿಯ ಸಚಿವ ಉಮೇಶ ಕತ್ತಿ ಅಗಲಿಕೆಯಿಂದ ಇಡೀ ರಾಜ್ಯಕ್ಕೆ ದೊಡ್ಡ ನಷ್ಠ : ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ
ಹಿರಿಯ ಸಚಿವ ಉಮೇಶ ಕತ್ತಿ ಅಗಲಿಕೆಯಿಂದ ಇಡೀ ರಾಜ್ಯಕ್ಕೆ ದೊಡ್ಡ ನಷ್ಠ : ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ತಮ್ಮ ಗೃಹ ಕಛೇರಿಯಲ್ಲಿ ಉಮೇಶ ಕತ್ತಿಗೆ ಶೃದ್ಧಾಂಜಲಿ ಸಲ್ಲಿಸಿದ ಬಾಲಚಂದ್ರ ಜಾರಕಿಹೊಳಿ ಗೋಕಾಕ: ಸದಾ ಅಭಿವೃದ್ಧಿಯ ಬಗ್ಗೆ ಚಿಂತಿಸುತ್ತಿದ್ದ ನಾಡಿನ ಹಿರಿಯ ರಾಜಕಾರಣಿ, ಸಚಿವ ಉಮೇಶ ಕತ್ತಿ ಅವರ ನಿಧನದಿಂದ ಇಡೀ ರಾಜ್ಯಕ್ಕೆ ಅಪಾರ ಹಾನಿಯಾಗಿದೆ ಎಂದು ಕೆಎಂಎಫ್ ಅಧ್ಯಕ್ಷ, ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಸಂತಾಪ ಸೂಚಿಸಿದರು. ಇಲ್ಲಿಯ …
Read More »ಉಮೇಶ ಕತ್ತಿ ನಿಧನ: ಸ್ವಯಂ ಪ್ರೇರಿತ ಬಂದ್, ಮೃತದೇಹ ಒಯ್ಯಲು ಅಲಂಕೃತ ಸೇನಾ ವಾಹನ
ಬೆಳಗಾವಿ: ಉಮೇಶ ಕತ್ತಿ ಅವರ ಮೃತದೇಹವನ್ನು ಇಲ್ಲಿನ ಸಾಂಬ್ರಾ ವಿಮಾನ ನಿಲ್ದಾಣದಿಂದ ಅವರ ಹುಟ್ಟೂರಾದ, ಹುಕ್ಕೇರಿ ತಾಲ್ಲೂಕಿನ ಬೆಲ್ಲದ ಬಾಗೇವಾಡಿಗೆ ತೆಗೆದುಕೊಂಡು ಹೋಗಲು ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ. ಅಲಂಕೃತ ಸೇನಾ ವಾಹನದಲ್ಲಿ ಮೆರವಣಿಗೆ ಮೂಲಕ ತೆಗೆದುಕೊಂಡು ಹೋಗಲು ತಯಾರಿ ನಡೆದಿದೆ. ಮೈನಸ್ 4 (-4) ಸೆಂಟಿಗ್ರೇಡ್ ಉಷ್ಣಾಂಶದ ಪೆಟ್ಟಿಗೆಯನ್ನು ಈ ಸೇನಾ ವಾಹನದಲ್ಲಿ ಈಗಾಗಲೇ ಇಡಲಾಗಿದೆ. ಮೂರು ಕ್ವಿಂಟಲ್ ಹೂವುಗಳಿಂದ ವಾಹನವನ್ನು ಅಲಂಕಾರ ಮಾಡಲಾಗಿದೆ. ಸಂಚರಿಸುವ ಮಾರ್ಗ: ಸಾಂಬ್ರಾ …
Read More »ರಾಜ್ಯದಲ್ಲಿ 3 ದಿನ ಶೋಕಾಚರಣೆ: ಸಿ.ಎಂ ಬೊಮ್ಮಾಯಿ
ಬೆಳಗಾವಿ: ‘ಅರಣ್ಯ ಸಚಿವ ಸಚಿವ ಉಮೇಶ ಕತ್ತಿ ಅವರ ಅಗಲಿಕೆಯಿಂದ ರಾಜ್ಯಕ್ಕೆ ತುಂಬಲಾರದ ನಷ್ಟವಾಗಿದೆ. ರಾಜ್ಯದಲ್ಲಿ ಬುಧವಾರದಿಂದ ಮೂರು ದಿನ ಶೋಕಾಚಾರಣೆ ಮಾಡಲಾಗುವುದು’ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ತಾಲ್ಲೂಕಿನ ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ ನಡೆಸಲಾಗವುದು’ ಎಂದರು. ‘ರಾಜ್ಯದಲ್ಲಿ ಪ್ರವಾಹ ನಿರ್ವಹಣೆ ಕಾರ್ಯಾಚರಣೆ ಮುಂದುವರಿಸಲಾಗುತ್ತಿದೆ. ಶೋಕಾಚರಣೆ ಕಾರಣ ಉಳಿದ ಚಟುವಟಿಕೆಗಳು ನಡೆಯುವುದಿಲ್ಲ’ ಎಂದು ತಿಳಿಸಿದರು. ‘ದೊಡ್ಡಬಳ್ಳಾಪುರದಲ್ಲಿ ಸೆ.8ರಂದು …
Read More »