Breaking News

ಬೆಳಗಾವಿ

ಬೆಳಿಗ್ಗೆ ಯಿಂದ ಹುಡುಕಿದರೂ ಸಿಗದ ಚಿರತೆ..

ಬೆಳಗಾವಿ: ಇಲ್ಲಿನ ಗಾಲ್ಫ್ ಮೈದಾನಕ್ಕೆ ನುಗ್ಗಿದ ಚಿರತೆ ಸೆರೆಗಾಗಿ ಆನೆಗಳಿಂದ ಕಾರ್ಯಾಚರಣೆ ಆರಂಭಗೊಂಡಿದೆ. ಶಿವಮೊಗ್ಗ ಜಿಲ್ಲೆಯ ಸಕ್ರೇಬೈಲ್ ಶಿಬಿರದಿಂದ ನಗರ ತಲುಪಿರುವ ಅರ್ಜುನ(20) ಮತ್ತು ಆಲೆ(14) ಬೆಳಗ್ಗೆ ವಿಶ್ರಾಂತಿ ಪಡೆದವು. ನಂತರ ಅರಣ್ಯ ಇಲಾಖೆ ಅಧಿಕಾರಿಗಳು ಹಾಗೂ ಪೊಲೀಸರಿಂದ ಕಾರ್ಯಾಚರಣೆ ಆರಂಭವಾಯಿತು. ಮೈದಾನದ ಸುತ್ತಲೂ ಬಲೆ ಅಳವಡಿಸಲಾಗಿದೆ‌. ಸುತ್ತಲಿನ ಪ್ರದೇಶದಲ್ಲಿ ಜನರ ಸುರಕ್ಷತೆ ದೃಷ್ಟಿಯಿಂದ ಕ್ರಮ ವಹಿಸಲಾಗಿದೆ. ಆ.5ರಂದು ಜಾಧವ ನಗರದಲ್ಲಿ ಕಟ್ಟಡ ಕಾರ್ಮಿಕರೊಬ್ಬರ ಮೇಲೆ ಹಲ್ಲೆ ನಡೆಸಿದ ಚಿರತೆ …

Read More »

ಪಲ್ಚಿಯಾದ ಕಾರು: ಪ್ರಯಾಣಿಕರು ಪಾರು

ಬೈಲಹೊಂಗಲ : ಸಮೀಪದ ಚಚಡಿ ಗ್ರಾಮದ ಹೊರವಲಯದಲ್ಲಿ ಬುಧವಾರ ನಸುಕಿನಲ್ಲಿ ಕಾರ್ ಪಲ್ಟಿಯಾಗಿ, ಇಬ್ಬರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಚಚಡಿ ಗ್ರಾಮದಿಂದ ನಯಾನಗರ ಗ್ರಾಮದ ಮಲಪ್ರಭಾ ನದಿ ಸೇತುವೆ ಮಾರ್ಗವಾಗಿ ಚಲಿಸುತ್ತಿದ್ದ ಕಾರ್ ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಪಲ್ಟಿಯಾಯಿತು. ಅಷ್ಟರಲ್ಲಿ ಏರ್ ಬ್ಯಾಗ್ ತೆರೆದುಕೊಂಡಿದ್ದರಿಂದ ಅದರಲ್ಲಿದ್ದವರಿಗೆ ಹೆಚ್ಚಿನ ಗಾಯಗಳಾಗಿಲ್ಲ. ಕಾರ್ ತಲೆ ಕೆಳಗಾಗಿ ಬಿದ್ದರೂ ಪ್ರಯಾಣಿಕರು ಪ್ರಾಣಾಪಾಯದಿಂದ ಬಚಾವಾಗಿದ್ದಾರೆ. ಸಿಪಿಐ ಯು.ಎಚ್.ಸಾತೇನಹಳ್ಳಿ ಹಾಗೂ ಪೊಲೀಸ್ ಸಿಬ್ಬಂದಿ …

Read More »

ರಾಜ್ಯದ ವಿವಿಧೆಡೆ ಎರಡು ದಿನ ಮಳೆ

ಬೆಂಗಳೂರು: ಕರಾವಳಿಯ ಬಹುತೇಕ ಕಡೆ ಬುಧವಾರ ಹಾಗೂ ಗುರುವಾರ ಮಳೆಯಾಗುವ ಸಾಧ್ಯತೆಯಿದೆ. ದಕ್ಷಿಣ ಒಳನಾಡಿನ ಹಲವು ಕಡೆ ಹಾಗೂ ಉತ್ತರ ಒಳನಾಡಿನ ಕೆಲವೆಡೆ ಗುಡುಗು ಸಹಿತ ಮಳೆಯಾಗಲಿದೆ ಎಂದು ಹವಾ ಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿಯ ಎಲ್ಲ ಜಿಲ್ಲೆಗಳು ಹಾಗೂ ದಕ್ಷಿಣ ಒಳನಾಡಿನ ಚಿಕ್ಕಮಗ ಳೂರು, ಹಾಸನ, ಕೊಡಗು ಹಾಗೂ ಶಿವಮೊಗ್ಗ ಜಿಲ್ಲೆಯ ಒಂದೆರಡು ಕಡೆ ಎರಡು ದಿನಗಳು ಭಾರಿ ಮಳೆಯಾ ಗಲಿದೆ. ಕರಾವಳಿ ತೀರದಲ್ಲಿ ಬಿರು ಗಾಳಿಯ …

Read More »

10 ರೂಪಾಯಿ ನಾಣ್ಯ ಚಾಲ್ತಿಯಲ್ಲಿದೆ: ಜಿಲ್ಲಾಧಿಕಾರಿ ನಿತೇಶ್ ಪಾಟೀಲ

ಬೆಳಗಾವಿ:   ಹತ್ತು ರೂಪಾಯಿ ನಾಣ್ಯಗಳು ಚಲಾವಣೆಯಲ್ಲಿವೆ ಎಂದು ಭಾರತೀಯ ರಿಜರ್ವ್ ಬ್ಯಾಂಕು ಈಗಾಗಲೇ ಸ್ಪಷ್ಟಪಡಿಸಿರುವುದರಿಂದ ಸಾರ್ವಜನಿಕರು‌ ಹಾಗೂ ವ್ಯಾಪಾರಸ್ಥರು ಮುಕ್ತವಾಗಿ ಇವುಗಳನ್ನು ಚಲಾವಣೆ ಮಾಡಬಹುದು ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ತಿಳಿಸಿದ್ದಾರೆ. ಬೆಳಗಾವಿ ಜಿಲ್ಲೆಯ ಕೆಲವೆಡೆ ಹತ್ತು ರೂಪಾಯಿ ನಾಣ್ಯವನ್ನು ಸ್ವೀಕರಿಸಲು ಕೆಲವು ವರ್ತಕರು-ವ್ಯಾಪಾರಸ್ಥರು ನಿರಾಕರಿಸುತ್ತಿದ್ದಾರೆ ಎಂಬ ದೂರುಗಳಿವೆ. ಆದರೆ ಈ ನಾಣ್ಯಗಳು ಚಲಾವಣೆಯಲ್ಲಿರುತ್ತವೆ ಎಂದು ನವೆಂಬರ್ 20, 2016 ರಂದು ಭಾರತೀಯ ರಿಜರ್ವ್ ಬ್ಯಾಂಕು ಸ್ಪಷ್ಟಪಡಿಸಿದ್ದು, ಈ ಕುರಿತು …

Read More »

ಬೆಳಗಾವಿ: ಜಿಲ್ಲಾ ವಿಭಜನೆಗೆ ಒತ್ತಾಯಿಸಿ ನಡೆಯುತ್ತಿರುವ ಹೋರಾಟಕ್ಕೆ ಸರಿಸುಮಾರು 30 ವರ್ಷ.

ಬೆಳಗಾವಿ: ಜಿಲ್ಲಾ ವಿಭಜನೆಗೆ ಒತ್ತಾಯಿಸಿ ನಡೆಯುತ್ತಿರುವ ಹೋರಾಟಕ್ಕೆ ಸರಿಸುಮಾರು 30 ವರ್ಷ. ಇನ್ನೊಂದೆಡೆ ಈ ವಿಭಜನೆ ವಿರೋಧಿಸಿ ನಡೆದ ಪ್ರತಿಭಟನೆಗೆ ಆ.22ಕ್ಕೆ ಬರೋಬ್ಬರಿ 25 ವರ್ಷ. ಇದು ಗಡಿ ಜಿಲ್ಲೆ ಬೆಳಗಾವಿ ವಿಭಜನೆ ಹಾಗೂ ಅದಕ್ಕಾಗಿ ನಡೆದಿರುವ ಪರ ಮತ್ತು ವಿರೋಧದ ಹೋರಾಟಗಳ ಕಥೆ. ಎರಡೂವರೆ ದಶಕಗಳ ಈ ಅವಧಿಯಲ್ಲಿ ಸಾಕಷ್ಟು ಬೆಳವಣಿಗೆಗಳಾಗಿವೆ. ಸರ್ಕಾರಗಳು ಬದಲಾಗಿವೆ. ಹೋರಾಟಗಾರರು ಬದಲಾಗಿದ್ದಾರೆ. ಇದಕ್ಕಾಗಿ ಹತ್ತಾರು ಸಂಘಟನೆಗಳು ಹುಟ್ಟಿಕೊಂಡಿವೆ. ಹಲವಾರು ಸಚಿವರು ಮತ್ತು ಶಾಸಕರು ಬಂದು …

Read More »

ಚಿರತೆ ಸೆರೆಗೆ ಬೆಳಗಾವಿಯತ್ತ ಜೋಡಿ ಆನೆ

ಬೆಳಗಾವಿ: ನಗರದ ಗಾಲ್ಫ್‌ ಮೈದಾನದಲ್ಲಿ ಅವಿತುಕೊಂಡ ಚಿರತೆ ಸೆರೆಗೆ ಶಿವಮೊಗ್ಗ ಜಿಲ್ಲೆಯ ಸಕ್ರೆಬೈಲ್‌ ಶಿಬಿರದಿಂದ ಎರಡು ಆನೆಗಳನ್ನು ಕರೆಸಲಾಗುತ್ತಿದೆ. ಮಂಗಳವಾರ ಬೆಳಿಗ್ಗೆಯೇ ಎರಡು ಆನೆ ಹಾಗೂ ಎಂಟು ಪರಿಣತ ಸಿಬ್ಬಂದಿಯ ತಂಡ ಬೆಳಗಾವಿಯತ್ತ ಹೊರಟಿದೆ.   ಸಕ್ರೆಬೈಲ್‌ ಆನೆ ತರಬೇತಿ ಕ್ಯಾಂಪಿನಲ್ಲಿದ್ದ 20 ವರ್ಷ ವಯಸ್ಸಿನ ಅರ್ಜುನ ಹಾಗೂ 14 ವರ್ಷ ಪ್ರಾಯದ ಆಲೆ ಎಂಬ ಆನೆಗಳನ್ನು ಕರೆಸಲಾಗುತ್ತಿದೆ. ಈ ಎರಡೂ ಆನೆಗಳು ಪುಂಡಾನೆಗಳ ಸೆರೆ ಹಿಡಿಯುವ ಕಾರ್ಯಾಚರಣೆಯಲ್ಲಿ ಪಳಗಿವೆ. …

Read More »

ಗಣೇಶ ಮಂಟಪದಲ್ಲಿಬಿಜೆಪಿಯವರು ಸಾವರ್ಕರ್‌ ಭಾವಚಿತ್ರ ಅಳವಡಿಸಿದರೆ, ನಾವೂ ಬಸವಣ್ಣ, ಅಂಬೇಡ್ಕರ್ ಭಾವಚಿತ್ರ ಅಳವಡಿಸುತ್ತೇವೆ’

ಬೆಳಗಾವಿ: ‘ಈ ಬಾರಿ ಸಾರ್ವಜನಿಕ ಗಣೇಶೋತ್ಸವ ಮಂಡಳಿಗಳ ಮಂಟಪದಲ್ಲಿ ಬಿಜೆಪಿಯವರು ಸಾವರ್ಕರ್‌ ಭಾವಚಿತ್ರ ಅಳವಡಿಸಿದರೆ, ನಾವೂ ಬಸವಣ್ಣ, ಅಂಬೇಡ್ಕರ್ ಭಾವಚಿತ್ರ ಅಳವಡಿಸುತ್ತೇವೆ’ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಹೇಳಿದರು.   ಇಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಎಲ್ಲ ಜಾತಿಯವರೂ ಗಣೇಶನ ವಿಗ್ರಹ ಪ್ರತಿಷ್ಠಾಪಿಸುತ್ತಾರೆ. ಆದರೆ, ಧಾರ್ಮಿಕ ವಿಚಾರದಲ್ಲಿ ಯಾರೂ ರಾಜಕೀಯ ಮಾಡಬಾರದು. ಬಿಜೆಪಿಯವರು ರಾಜಕಾರಣ ಮಾಡಲು ಮುಂದಾದರೆ, ನಾವೂ ಮಾಡಬೇಕಿರುವುದು ಅನಿವಾರ್ಯ. ಹಾಗಾಗಿ ಅಂಬೇಡ್ಕರ್, ಬಸವಣ್ಣನವರ ಭಾವಚಿತ್ರ …

Read More »

ಅಂಬೇಡ್ಕರ್ ಟು ಟಿಪ್ಪು ಸುಲ್ತಾನ್ ಸರ್ಕಲ್, ಕಲ್ಲೇಶ್ವರ ಸರ್ಕಲ್ ಟು ಶಿವಬೋಧರಂಗ ಮಠತನಕ ರಸ್ತೆ ಅಭಿವೃದ್ಧಿ ಶೀಘ್ರ : ಶಾಸಕ ಬಾಲಚಂದ್ರ ಜಾರಕಿಹೊಳಿ

    ಮೂಡಲಗಿ: ಮೂಡಲಗಿ ಪಟ್ಟಣದ ಸಾರ್ವಜನಿಕರ ಕೋರಿಕೆಯ ಮೇರೆಗೆ ಪಟ್ಟಣದ ಅಂಬೇಡ್ಕರ ವೃತ್ತದಿಂದ ಟಿಪ್ಪು ಸುಲ್ತಾನ ವೃತ್ತ ಹಾಗೂ ಕಲ್ಮೇಶ್ವರ ವೃತ್ತದಿಂದ ಶಿವಬೋಧರಂಗ ಮಠದವರೆಗೆ ಸ್ವಂತ ವೆಚ್ಚದಲ್ಲಿ ರಸ್ತೆಗಳನ್ನು ನಿರ್ಮಿಸಿಕೊಡುವುದಾಗಿ ಕೆಎಂಎಫ್ ಅಧ್ಯಕ್ಷ ಹಾಗೂ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ತಿಳಿಸಿದ್ದಾರೆ.   ಅಂಬೇಡ್ಕರ ವೃತ್ತದಿಂದ ಟಿಪ್ಪು ಸುಲ್ತಾನ ವೃತ್ತದವರೆಗೆ 9 ಮೀಟರ್ ಅಗಲದ 1 ಕಿ.ಮೀ ವರೆಗಿನ ರಸ್ತೆಯನ್ನು ಇಷ್ಟರಲ್ಲಿಯೇ ಅಭಿವೃದ್ಧಿಪಡಿಸಲಾಗುವುದು. ಕಲ್ಮೇಶ್ವರ ವೃತ್ತದಿಂದ ಮಠದವರೆಗಿನ 500 …

Read More »

K.P.T.C.L. ಪರೀಕ್ಷಾ ಅಕ್ರಮ; 9 ಜನರ ಬಂಧನ

ಬೆಳಗಾವಿ: ಕೆಪಿಟಿಸಿಎಲ್ ಪರೀಕ್ಷಾ ಅಕ್ರಮಕ್ಕೆ ಸಂಬಂಧಿಸಿದಂತೆ ಈವರೆಗೆ 9 ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಬೆಳಗಾವಿ ಎಸ್ ಪಿ ಸಂಜೀವ್ ಪಾಟೀಲ್ ಮಾಹಿತಿ ನೀಡಿದ್ದಾರೆ. ಕೆಪಿಟಿಸಿಎಲ್ ಪರೀಕ್ಷಾ ನೇಮಕಾತಿಯಲ್ಲಿ ಬಂಧಿತ ಅಭ್ಯರ್ಥಿಗಳು ಸ್ಮಾರ್ಟ್ ವಾಚ್ ಬಳಸಿ, ಪ್ರೆಶ್ನೆ ಪತ್ರಿಕೆ ಫೋಟೋ ತೆಗೆದು ಟೆಲಿಗ್ರಾಮ್ ಆಪ್ ಮೂಲಕ ತನ್ನ ಸ್ನೇಹಿತರಿಗೆ ಕಳುಹಿಸಿ ಉತ್ತರ ಪಡೆದಿದ್ದಾಗಿ ಆರೋಪಿಗಳು ವಿಚಾರಣೆ ವೇಳೆ ಬಾಯ್ಬಿಟ್ಟಿದ್ದಾಗಿ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು. ಸಚಿನ್ ಶ್ರೀಧರ ಕಮತರ (32) ಗೋಕಾಕ ಶಹರ ಠಾಣೆಗೆ ಹಾಜರಾಗಿ …

Read More »

ಸಾವರ್‌ಕರ್ ಭಾವಚಿತ್ರಕ್ಕೆ ಅವಮಾನ ಮಾಡಿದರೆ ಹರಿದರೆ ಕೈ ಕತ್ತರಿಸಿ ಬಿಸಾಕುತ್ತೇವೆ : ಪ್ರಮೋದ ಮುತಾಲಿಕ್

ಬೆಳಗಾವಿಯಲ್ಲಿ ಪ್ರತೀ ಗಲ್ಲಿಗಲ್ಲಿಯಲ್ಲಿ ಸಾವರ್‌ಕರ್ ಯಾರು ಎಂದು ತಿಳಿಸುವ ಉದ್ದೇಶದಿಂದ ನಾವು ಪ್ರತೀ ಗಣೇಶ ಮಂಡಳಿಯಲ್ಲಿ ಸಾವರ್‌ಕರ್ ಭಾವಚಿತ್ರವನ್ನು ಅಳವಡಿಸುವಂತೆ ಅಭಿಯಾನವನ್ನು ಮಾಡುತ್ತಿದ್ದೇವೆ. ಈ ವೇಳೆ ಯಾರಾದರೂ ಕಾಂಗ್ರೆಸ್ ಅಥವಾ ಮುಸ್ಲಿಂರು ಸಾವರ್‌ಕರ್ ಭಾವಚಿತ್ರವನ್ನು ಹರಿದರೆ ಕೈ ಕತ್ತರಿಸಿ ಬಿಸಾಕುತ್ತೇವೆ ಎಂದು ಶ್ರೀ ರಾಮಸೇನೆ ಮುಖ್ಯಸ್ಥ ಪ್ರಮೋದ ಮುತಾಲಿಕ್ ಹೇಳಿದ್ದಾರೆ.   ಬೆಳಗಾವಿಯಲ್ಲಿ ಗಣೇಶೋತ್ಸವ ವೇಳೆ ಸಾವರ್‌ಕರ್ ಭಾವಚಿತ್ರ ಅಳವಡಿಸುವ ಆಂದೋಲನಕ್ಕೆ ಇಂದು ಪ್ರಮೋದ ಮುತಾಲಿಕ್ ಬೆಳಗಾವಿಯಲ್ಲಿ ಚಾಲನೆ ನೀಡಿದರು. …

Read More »