Breaking News

ಬೆಳಗಾವಿ

ಬೆಳಗಾವಿಯಲ್ಲಿ ಮತ್ತೆ ಚಿರತೆ ಪ್ರತ್ಯಕ್ಷ ವಿಡಿಯೋ ವೈರಲ್; ಶಾಲೆಗಳಿಗೆ ರಜೆ ಘೋಷಣೆ

ಬೆಳಗಾವಿ: ಬೆಳಗಾವಿಯಲ್ಲಿ ಮತ್ತೆ ಚಿರತೆ ಪ್ರತ್ಯಕ್ಷವಾಗಿದ್ದು, ಈ ಕುರಿತ ವಿಡಿಯೋ ವೈರಲ್ ಆದ ಬೆನ್ನಲ್ಲೇ ಜಿಲ್ಲಾಡಳಿತ ಮುಂಜಾಗ್ರತಾ ಕ್ರಮವಾಗಿ ಸಮೀಪದ ಶಾಲೆಗಳಿಗೆ ರಜೆ ಘೋಷಣೆ ಮಾಡಿದೆ. ಬೆಳಗಾವಿಯ ಗಾಲ್ಫ್ ಮೈದಾನ ಸಮೀಪದಲ್ಲಿ ಮತ್ತೆ ಚಿರತೆ ಕಾಣಿಸಿಕೊಳ್ಳುವ ಮೂಲಕ ಸಾರ್ವಜನಿಕರ ಆತಂಕ ಹೆಚ್ಚಿಸಿದೆ. ಈಗ್ಗೆ 20 ದಿನಗಳ ಹಿಂದೆ ಜಾಧವ ನಗರದಲ್ಲಿ ಕಟ್ಟಡ ಕಾರ್ಮಿಕನ ಮೇಲೆ ದಾಳಿ ನಡೆಸಿ ಚಿರತೆ ಪರಾರಿಯಾಗಿತ್ತು. ಇದೀಗ ಸೋಮವಾರ ಹಿಂಡಲಗಾ ರಸ್ತೆಯ ಮಹಾತ್ಮ ಗಾಂಧೀ ವೃತ್ತ ಬಳಿ …

Read More »

ಮುಖ್ಯಮಂತ್ರಿ ಸಿದ್ದರಾಮಯ್ಯ ಕಾರಿಗೆ ಮೊಟ್ಟೆ ಎಸೆದ ಘಟನೆ ಖಂಡಿಸಿ: ಕಾಂಗ್ರೆಸ್ ಪಕ್ಷದಿಂದ ಪ್ರತಿಭಟನೆ

  ಗೋಕಾಕ: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕಾರಿಗೆ ಮೊಟ್ಟೆ ಎಸೆದ ಘಟನೆ ಖಂಡಿಸಿ ಗೋಕಾಕ ನಗರದ ಬಸವೇಶ್ವರ ವೃತ್ತದಲ್ಲಿ ಕಾಂಗ್ರೆಸ್ ಪಕ್ಷದಿಂದ ಪ್ರತಿಭಟನೆ ನಡೆಸಿದರು. ಈ ಸಂದರ್ಭದಲ್ಲಿ ಕಾಂಗ್ರೆಸ್ ಮುಖಂಡರಾದ ಅಶೋಕ ಪೂಜಾರಿ, ಸಿದ್ದಲಿಂಗ ದಳವಾಯಿ, ವಿವೇಕ್ ಜತ್ತಿ, ಮಂಜುಳಾ ರಾಮಾನಗಟ್ಟಿ, ಹಾಗೂ ಅನೇಕರು ಉಪಸ್ಥಿತರಿದ್ದರು

Read More »

ಹಿಂಡಲಗಾ ನಡು ರಸ್ತೆಯಲ್ಲೇ ಚಿರತೆ ದಾಟುತ್ತಿರುವ ದೃಶ್ಯ ಮೊಬೈಲ್ ಕ್ಯಾಮರಾದಲ್ಲಿ

ಬೆಳಗಾವಿ: ಹಿಂಡಲಗಾ ಡಬಲ್ ರಸ್ತೆಯ ಮಧ್ಯೆ ಇಂದು ಬೆಳಿಗ್ಗೆ ಚಿರತೆ ಮತ್ತೆ ಪ್ರತ್ಯಕ್ಷವಾದ ಹಿನ್ನೆಲೆಯಲ್ಲಿ ನಗರ ಹಾಗೂ ಗ್ರಾಮಿಣ ಭಾಗದ 22 ಶಾಲೆಗಳಿಗೆ ಇಂದು (ಸೋಮವಾರ 22/8/2022) ಮತ್ತೆ ರಜೆ ನೀಡಲಾಗಿದೆ. ಕಳೆದ ವಾರವೂ ಈ ಭಾಗದ ಶಾಲೆಗಳಿಗೆ ರಜೆ ನೀಡಲಾಗಿತ್ತು. ಆದರೆ ತೀವ್ರ ಶೋಧ ಕಾರ್ಯಾಚರಣೆಗಳ ನಂತರವೂ ಚಿರತೆ ಕಾಣಿಸದೆ ಇದ್ದಾಗ ಮತ್ತೆ ಶಾಲೆಗಳನ್ನು ಆರಂಭಿಸಲಾಗಿತ್ತು.     ಬಸ್ ಚಾಲಕರೊಬ್ಬರು ನಡು ರಸ್ತೆಯಲ್ಲೇ ಚಿರತೆ ದಾಟುತ್ತಿರುವ ದೃಶ್ಯವನ್ನು ಮೊಬೈಲ್ …

Read More »

ರಾಯಚೂರು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿಯನ್ನಾಗಿ ಶಶಿಧರಕುರೇರ ನೇಮಕ

ಬೆಳಗಾವಿ – ಐಎಎಸ್ ಅಧಿಕಾರಿಯಾಗಿ ಈಚೆಗಷ್ಟೆ ಭಡ್ತಿ ಪಡೆದಿರುವ ಬೆಳಗಾವಿಯ ಮಲಪ್ರಭಾ, ಘಟಪ್ರಭಾ ಅಚ್ಚುಕಟ್ಟು ಪ್ರದೇಶಾಭಿವೃದ್ಧಿ ಪ್ರಾಧಿಕಾರದ(ಕಾಡಾ) ಆಡಳಿತಾಧಿಕಾರಿ ಶಶಿಧರ ಕುರೇರ ಅವರನ್ನು ವರ್ಗಾವಣೆ ಮಾಡಲಾಗಿದೆ. ರಾಯಚೂರು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿಯನ್ನಾಗಿ ಕುರೇರ ಅವರನ್ನು ನೇಮಕ ಮಾಡಿ ಸರಕಾರ ಆದೇಶ ಹೊರಡಿಸಿದೆ. ರಾಯಚೂರು ಜಿಲ್ಲಾ ಪಂಚಾಯಿತಿ ಹಾಲಿ ಸಿಇಒ ಚಂದ್ರಶೇಖರ ನಾಯಕ ಅವರ ಸ್ಥಾನದಲ್ಲಿ ಕುರೇರ ಅವರು ನೇಮಕವಾಗಿದ್ದು, ಇದು ಐಎಎಸ್ ಅಧಿಕಾರಿಯಾಗಿ ಅವರ ಮೊದಲ ಹುದ್ದೆಯಾಗಿದೆ. ಕುರೇರ ಅವರು …

Read More »

ಜಿಲ್ಲೆಯ ಎರಡು ಕಡೆಗಳಲ್ಲಿ ಪೊಲೀಸರು ಹಾಗೂ ಆಹಾರ ಇಲಾಖೆಯವರು ಜಂಟಿ ದಾಳಿ ನಡೆಸಿ ಭಾರೀ ಪ್ರಮಾಣದ ಅಕ್ಕಿ ಅಕ್ರಮ ಬಯಲು

ಬೆಳಗಾವಿ: ಜಿಲ್ಲೆಯ ಎರಡು ಕಡೆಗಳಲ್ಲಿ ಪೊಲೀಸರು ಹಾಗೂ ಆಹಾರ ಇಲಾಖೆಯವರು ಜಂಟಿ ದಾಳಿ ನಡೆಸಿ ಭಾರೀ ಪ್ರಮಾಣದ ಅಕ್ಕಿ ಅಕ್ರಮ ಬಯಲು ಮಾಡಿದ್ದಾರೆ. ಹಾರೂಗೇರಿ ಪೊಲೀಸರು ಹಿಡಕಲ್ ಬಳಿ ದಾಳಿ ನಡೆಸಿ ಕ್ಯಾಂಟರ್ ಲಾರಿಯೊಂದರಲ್ಲಿ ಅಕ್ರಮವಾಗಿ ಸಾಗಾಟವಾಗುತ್ತಿದ್ದ 11.520 ಟನ್ ಅಕ್ರಮ ಅಕ್ಕಿ ವಶಪಡಿಸಿಕೊಂಡಿದ್ದಾರೆ. 384 ಚೀಲಗಳಲ್ಲಿ ಸಾಗಿಸಲಾಗುತ್ತಿದ್ದ ಈ ಅಕ್ಕಿ ಮೌಲ್ಯ 2,53, 440 ರೂ. ಆಗಿದೆ. ಈ ಸಂಬಂಧ ಲಾರಿ ಮಾಲೀಕ ಹಾಗೂ ಚಾಲಕ, ಮೂಡಲಗಿಯ ಸಂಗನಕೇರಿ …

Read More »

ಗೋಕಾಕದಲ್ಲಿ ರಾಯಣ್ಣ ಭಾವಚಿತ್ರ ಹರಿದ ಕಿಡಿಗೇಡಿಗಳು

ಬೆಳಗಾವಿ: ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಭಾವಚಿತ್ರವನ್ನು ಯಾರೋ ಕಿಡಿಗೇಡಿಗಳು ಹರಿದು ಹಾಕಿರುವ ಘಟನೆ ಗೋಕಾಕ ತಾಲೂಕಿನ ‌ಖನಗಾಂವ ಗ್ರಾಮದಲ್ಲಿ ನಡೆದಿದೆ. ಅಹಿತಕರ ಘಟನೆಗಳು ನಡೆಯದಂತೆ ಮುಂಜಾಗ್ರತಾ ‌ಕ್ರಮವಾಗಿ ಗ್ರಾಮದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ನಿಯೋಜಿಸಲಾಗಿದೆ‌. ಬೆಳಗಾವಿ ಜಿಲ್ಲೆಯ ಗೋಕಾಕ ತಾಲೂಕಿನ ಖನಗಾಂವ ಗ್ರಾಮದಲ್ಲಿ ಕ್ರಾಂತಿವೀರ ಸಂಗೋಳ್ಳಿ ರಾಯಣ್ಣ ಭಾವಚಿತ್ರವನ್ನು ಕಿಡಿಗೇಡಿಗಳು ಹರಿದು ಹಾಕಿದ್ದಾರೆ. ಗ್ರಾಮದ ರಸ್ತೆಗೆ ರಾಯಣ್ಣ ಸರ್ಕಲ್ ಎಂದು ನಾಮಕರಣ ಮಾಡಲಾಗಿತ್ತು. ನಾಮಕರಣ ಮಾಡಿ ರಾಯಣ್ಣ ಭಾವಚಿತ್ರದ ಫ್ಲೆಕ್ಸ್ ಬೋರ್ಡ್ …

Read More »

ಶಾಲಾ ಬಸ್ -ಕ್ಯಾಂಟರ್ ಅಪಘಾತ :ಇಬ್ಬರು ಚಾಲಕರು ಸಾವು, 20ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಗಾಯ

ಬೆಳಗಾವಿ : ಶಾಲಾ ಬಸ್ ಮತ್ತು ಕ್ಯಾಂಟರ್ ನಡುವೆ ಢಿಕ್ಕಿ ಸಂಭವಿಸಿ ಎರಡೂ ವಾಹನಗಳ ಚಾಲಕರು ಮೃತಪಟ್ಟ ದಾರುಣ ಘಟನೆ ಬೆಳಗಾವಿ ಜಿಲ್ಲೆಯ ಅಥಣಿಯಲ್ಲಿ ಶನಿವಾರ ಬೆಳಿಗ್ಗೆ ನಡೆದಿದೆ. ಶಾಲಾ ಬಸ್ ನಲ್ಲಿದ್ದ 20 ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಸಣ್ಣಪುಟ್ಟ ಗಾಯಗಳಾಗಿವೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಂಜೀವ ಪಾಟೀಲ ತಿಳಿಸಿದ್ದಾರೆ.   ಸುದ್ದಿ ತಿಳಿದ ತಕ್ಷಣ ಸ್ಥಳಕ್ಕೆ ಭೇಟಿ ನೀಡಿದ ಅಥಣಿ ಪೊಲೀಸರು ವಿದ್ಯಾರ್ಥಿಗಳಿಗೆ ಚಿಕಿತ್ಸೆ ಕೊಡಿಸಲು ನೆರವಾದರು. ಅಥಣಿ …

Read More »

ಆನ್ ಲೈನ್‌ನಲ್ಲಿ ಸುಲಭವಾಗಿ ವೋಟರ್ ಐಡಿಗೆ ಆಧಾರ್ ಲಿಂಕ್ ಮಾಡಿ

ಕೇಂದ್ರ ಚುನಾವಣಾ ಆಯೋಗದ ಆದೇಶದಂತೆ ಬೆಳಗಾವಿಯ ಉತ್ತರ ಹಾಗೂ ದಕ್ಷಿಣ ಮತಕ್ಷೇತ್ರಗಳಲ್ಲಿ ಮತದಾರರ ಗುರುತಿನ ಚೀಟಿ ಸಂಖ್ಯೆಗೆ ಆದಾರ್ ಸಂಖ್ಯೆಯನ್ನು ಜೋಡಣೆ ಮಾಡಲು ನಿರ್ಧರಿಸಿದ್ದು ಕೂಡಲೇ ಎಲ್ಲಾ ಮತದಾರರು ಮತದಾರರ ಗುರುತಿನ ಚೀಟಿಗೆ ಆಧಾರ್‌ಕಾರ್ಡ್ ಸಂಖ್ಯೆಯನ್ನು ಲಿಂಕ್ ಮಾಡಿಕೊಳ್ಳುವಂತೆ ಮಹಾನಗರ ಪಾಲಿಕೆ ಅಧಿಕಾರಿಗಳು ಕೋರಿದ್ದಾರೆ. ಕೇಂದ್ರ ಚುನಾವಣಾ ಆಯೋಗದ ಆದೇಶದಂತೆ ಬೆಳಗಾವಿಯ ಉತ್ತರ ಹಾಗೂ ದಕ್ಷಿಣ ಮತಕ್ಷೇತ್ರಗಳಲ್ಲಿ ಮತದಾರರ ಗುರುತಿನ ಚೀಟಿ ಸಂಖ್ಯೆಗೆ ಆದಾರ್ ಸಂಖ್ಯೆಯನ್ನು ಜೋಡಣೆ ಮಾಡಲು ನಿರ್ಧರಿಸಿದ್ದು …

Read More »

ಯಮಕನಮರ್ಡಿ ಕ್ಷೇತ್ರದಲ್ಲಿ ನಮ್ಮವರೇ ನನ್ನ ವಿರುದ್ಧ ಹಣ ಹಂಚಿದ್ದರಿಂದ ಲೀಡ ಕಡಿಮೆ: ಸತೀಶ್ ಜಾರಕಿಹೊಳಿ

ಯಮಕನಮರ್ಡಿ ಕ್ಷೇತ್ರದಲ್ಲಿ ನಮ್ಮವರೇ ನನ್ನ ವಿರುದ್ಧ ಹಣ ಹಂಚಿದ್ದರಿಂದ ನನ್ನ ಗೆಲುವಿನ ಅಂತರ ಕಡಿಮೆಯಾಗಲು ಕಾರಣವಾಯಿತು. ಎಂದು ಅಚ್ಚರಿ ಹೇಳಿಕೆಯನ್ನು ನೀಡಿದ್ದು ಸಧ್ಯ ಸತೀಶ್ ಜಾರಕಿಹೊಳಿ ವಿರುದ್ಧ ಹಣ ಹಂಚಿದ ಕಾಂಗ್ರೆಸ್ ನಾಯಕರು ಯಾರು ಎನ್ನುವ ಚರ್ಚೆ ರಾಜ್ಯ ರಾಜಕಾರಣದಲ್ಲೀಗ ಪ್ರಾರಂಭವಾಗಿದೆ. ಬೆಳಗಾವಿ ನಗರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಶಾಸಕ ಸತೀಶ್ ಜಾರಕಿಹೊಳಿರವರು, ಇದೇ ವೇಳೆ ಕಳೆದ ಬಾರಿ ಚುನಾವಣೆಯಲ್ಲಿ ಸತೀಶ್ ಜಾರಕಿಹೊಳಿ ಗೆಲುವಿನ ಅಂತರ ಕಡಿಮೆಯಾದ ಕುರಿತಂತೆ ಮಾಧ್ಯಮಗಳ ಪ್ರಶ್ನೆಗೆ …

Read More »

ಮಹಿಳೆಯರು ಮತ್ತಷ್ಟು ಸಾಧನೆ ಮಾಡಬೇಕಿದೆ”: ಯುವ ನಾಯಕ ರಾಹುಲ ಜಾರಕಿಹೊಳಿ

ಯಾವುದೇ ದೇಶದ ಏಳಿಗೆ ಆ ದೇಶದ ಮಹಿಳೆಯರ ಪ್ರಗತಿಯನ್ನು ಅವಲಂಬಿಸಿದೆ. ಹೀಗಾಗಿ ಶೈಕ್ಷಣಿಕವಾಗಿ, ಆರ್ಥಿಕವಾಗಿ ಹಾಗೂ ಸಾಮಾಜಿಕವಾಗಿ ಹೀಗೆ ಎಲ್ಲ ರಂಗಗಳಲ್ಲಿ ಮಹಿಳೆಯರು ಮತ್ತಷ್ಟು ಸಾಧನೆ ಮಾಡಬೇಕಿದೆ” ಎಂದು ಯುವ ನಾಯಕ ರಾಹುಲ ಜಾರಕಿಹೊಳಿ ಅಭಿಪ್ರಾಯ ಪಟ್ಟರು. ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬೆಳಗಾವಿ ವಲಯದ ಕಾಕತಿ, ಗೌಂಡವಾಡ, ಮುತ್ಯಾನ ಹಟ್ಟಿ ಗ್ರಾಮದ ಸ್ವ ಸಹಾಯ ಸಂಘಗಳ ಸಂಯುಕ್ತ ಆಶ್ರಯದಲ್ಲಿ ಗೌಡವಾಡದ ಮೋನಿಕ ಸಮುದಾಯ ಭವನದಲ್ಲಿ ಜರುಗಿದ ಸಾಮೂಹಿಕ ವರಮಹಾಲಕ್ಷ್ಮಿ ಪೂಜಾ, …

Read More »