Breaking News

ಬೆಳಗಾವಿ

ಜನನ, ಮರಣ ನೋಂದಣಿ ಕಾಯ್ದೆತಿದ್ದುಪಡಿ ರದ್ದುಗೊಳಿಸಲು ಆಗ್ರಹ

ಬೈಲಹೊಂಗಲ: ಜನನ ಮತ್ತು ಮರಣ ನೋಂದಣಿ ಕಾಯ್ದೆ ತಿದ್ದುಪಡಿಗೆ ಸಂಬಂಧಿಸಿದ ನ್ಯಾಯಾಂಗದ ವ್ಯಾಪ್ತಿಯನ್ನು ಬದಲಾವಣೆ ಮಾಡಿರುವುದನ್ನು ರದ್ದುಗೊಳಿಸಿ ಮೊದಲಿನಂತೆ ಜೆ.ಎಂ.ಎಫ್.ಸಿ. ನ್ಯಾಯಾಲಯದಲ್ಲಿ ಮುಂದುವರಿಸಬೇಕು ಎಂದು ಒತ್ತಾಯಿಸಿ ತಾಲ್ಲೂಕು ವಕೀಲರ ಸಂಘದಿಂದ ಪ್ರತಿಭಟನೆ ನಡೆಯಿತು. ತಹಶೀಲ್ದಾರ್ ಬಸವರಾಜ ನಾಗರಾಳ ಅವರಿಗೆ ವಕೀಲರು ಸೋಮವಾರ ಮನವಿ ಸಲ್ಲಿಸಿದರು. ವಕೀಲರ ಸಂಘದ ಉಪಾಧ್ಯಕ್ಷ ಎಂ.ಆರ್. ಸೋಮಣ್ಣವರ, ವಕೀಲರ ಸಂಘದ ಕಾರ್ಯದರ್ಶಿ ಸಂತೋಷ ಭಾವಿ ಮಾತನಾಡಿ, ‘ಜನನ ಮತ್ತು ಮರಣ ನೋಂದಣಿ ಕಾಯ್ದೆಗೆ ಸಂಬಂಧಿಸಿದ ವಿಷಯಗಳು …

Read More »

ಮೂರು ತಲೆಮಾರಿನಿಂದ ಈ ಕುಟುಂಬ ದೇಶ ಸೇವೆಗೆ ತಮ್ಮನ್ನು ತಾವು ಅರ್ಪಣೆ ಮಾಡಿಕೊಂಡಿದ್ದಾರೆ.

ಕಾರ್ಗಿಲ್‌ ಯುದ್ಧ ಎನ್ನುತ್ತಲೇ ಎಂಥವರ ಮನದಲ್ಲೂ ರೋಮಾಂಚನ ಮೂಡುತ್ತದೆ. ಎದುರಾಳಿಗಳೊಂದಿಗೆ ನಮ್ಮ ಸೈನಿಕರು ಧೈರ್ಯದಿಂದ ಸೆಣಸುವ, ಎದುರಾಳಿಗಳನ್ನು ಸದೆಬಡಿಯುವ ದೃಶ್ಯಗಳು ಕಣ್ಣೆದುರು ಬಂದುನಿಲ್ಲುತ್ತದೆ. ತಮ್ಮ ಕುಟುಂಬದ ಹಿತ ಬದಿಗೊತ್ತಿ ಕಾರ್ಗಿಲ್ ಯುದ್ಧದಲ್ಲಿ ಪಾಲ್ಗೊಂಡು ದೇಶಕ್ಕಾಗಿ ಪ್ರಾಣವನ್ನೇ ತೆತ್ತ ಸೈನಿಕರು ನಮ್ಮ ನಾಡಿನಲ್ಲಿದ್ದಾರೆ. ಅಂತಹವರಲ್ಲಿ ಬೆಳಗಾವಿಯ ಕುಟುಂಬವೂ ಒಂದಿದೆ.ಸುಮಾರು ಮೂರು ತಲೆಮಾರಿನವರೆಗೆ ದೇಶ ಸೇವೆ ಮಾಡುತ್ತಿದೆ. ಇತ್ತ ಕಾಗ್ರಿಲ್ ಯುದ್ಧದಲ್ಲಿ ಮಗನನ್ನು ಕಳೆದುಕೊಂಡ ತಾಯಿ ಹೇಳೊದಾದರೂ ಏನು  ಭಾರತೀಯ ಸೇನೆಯಲ್ಲಿ ಸುಧೀರ್ಘವಾಗಿ …

Read More »

ನೂರಾರು ಮಂದಿ ದೇವಿಯ ಮಂದಿರದ ಮೇಲೆ ಕೋಳಿ ಮರಿಗಳನ್ನು ಎಸೆದು ಹರಕೆ ತೀರಿಸಿದ್ದು ವಿಶೇಷವಾಗಿತ್ತು. ಪ್ರತಿ ವರ್ಷವೂ ಆμÁಢ ಮಾಸದಲ್ಲಿ ಹುಣ್ಣಿಮೆಯ ನಂತರ ಬರುವ ಮಂಗಳವಾರದಂದೇ ಈ ಜಾತ್ರೆ ನಡೆಯುತ್ತದೆ. ವಡಗಾವಿಯ ವಿಷ್ಣು ಗಲ್ಲಿ, ಪಾಟೀಲ ಗಲ್ಲಿ ಮೊದಲಾದ ಕಡೆಗಳಲ್ಲಿ ಮಾರಾಟಕ್ಕಿಟ್ಟಿದ್ದ ಕೋಳಿ ಮರಿಗಳನ್ನು ಖರೀದಿಸಿದ ಭಕ್ತರು, ಅವುಗಳನ್ನು ಮಂದಿರದ ಮೇಲೆ ಎಸೆದು, ಹಾರಿಸಿ ತಮ್ಮ ಭಕ್ತಿ ಸಮರ್ಪಿಸಿದರು. ಚಿಕ್ಕ ಮಕ್ಕಳು ಕೂಡ ಸಣ್ಣ ಕೋಳಿ ಮರಿಗಳನ್ನು ಹಾರಿಸಿದ್ದು ವಿಶೇಷವಾಗಿತ್ತು. ಹರಕೆ ಈಡೇರಿದ ಖುಷಿಯಲ್ಲಿ ಈ ಆಚರಣೆ ಮಾಡುವುದು ಹಿಂದಿನಿಂದಲೂ ನಡೆದುಕೊಂಡು ಬಂದಿದೆ. ಕೆಲವು ಭಕ್ತರು ಕುರಿ ಬಲಿ ನೀಡುವುದಾಗಿಯೂ ಹರಕೆ ಹೊತ್ತುಕೊಳ್ಳುವುದು ಸಂಪ್ರದಾಯವಾಗಿದೆ.ಇನ್ನು ಬೆಳಿಗ್ಗೆ 10 ಗಂಟೆಗೆ ಮಂಗಾಯಿ ದೇವಿಗೆ ವಿಶೇಷ ಪೂಜೆ ಸಲ್ಲಿಸಲಾಯಿತು. ನಂತರ 12 ಗಂಟೆಗೆ ದೇವಿಗೆ ಎರಡನೇ ಆರತಿ ಬೆಳಗಿದರು. ಕ್ಷಣ ಕ್ಷಣಕ್ಕೂ ಜಾತ್ರೆಯಲ್ಲಿ ಭಕ್ತರ ಸಂಖ್ಯೆ ಹೆಚ್ಚಾಗುತ್ತಿದೆ. ಈ ವೇಳೆ ಮಾತನಾಡಿದ ಭಕ್ತರು ನಾವು ಬಹಳ ವರ್ಷದಿಂದ ಜಾತ್ರೆ ಬರುತ್ತಿದ್ದೇವೆ. ಕಳೆದ ಮೂರು ವರ್ಷಗಳಿಂದ ಕೊರೊನಾದಿಂದ ಜಾತ್ರೆ ಆಗಿರಲಿಲ್ಲ. ಈ ಬಾರಿ ಬಾಳ ಜೋರ ಜಾತ್ರೆ ನಡೆದಿದೆ ಎಂದು ಹರ್ಷ ವ್ಯಕ್ತಪಡಿಸಿದರು.

ಬೆಳಗಾವಿಯ ವಡಗಾವಿಯ ಆರಾಧ್ಯದೇವತೆ ಶ್ರೀ ಮಂಗಾಯಿದೇವಿ ಜಾತ್ರೆ ಇಂದಿನಿಂದ ಆರಂಭವಾಗಿದ್ದು, ಅದ್ಧೂರಿಯಾಗಿ ಐದು ದಿನಗಳ ಕಾಲ ಜಾತ್ರಾ ಮಹೋತ್ಸವ ನೆರವೇರಲಿದೆ.ಹೌದು ವಡಗಾವಿಯ ಮಂಗಾಯಿದೇವಿ ಜಾತ್ರೆಗೆ ನೂರಾರು ವರ್ಷಗಳ ಇತಿಹಾಸವಿದೆ. ಗ್ರಾಮೀಣ ಸೊಗಡಿನ ಈ ಜಾತ್ರೆ ಸಾವಿರಾರು ಭಕ್ತರು ತನ್ನ ಆಕರ್ಷಿಸುತ್ತದೆ. ವಡಗಾವಿಯ ಮಂಗಾಯಿ ದೇವಸ್ಥಾನ ಆವರಣ ಭಕ್ತರಿಂದ ಕಿಕ್ಕಿರಿದು ತುಂಬಿ ಹೋಗಿತ್ತು. ಸ್ಥಳೀಯರು, ಗೋವಾ, ಮಹಾರಾಷ್ಟ್ರ ಮೊದಲಾದ ಕಡೆಗಳಿಂದ ಬಂದಿದ್ದ ಸಾವಿರಾರು ಭಕ್ತರು ದೇವಿ ದರ್ಶನ ಪಡೆದು ಪುನೀತರಾದರು. ನೂರಾರು …

Read More »

ಗಣೇಶೋತ್ಸವದಲ್ಲಿ ಬೆಳಗಾವಿ ಜಿಲ್ಲೆಯಾದ್ಯಂತ ಡಿ.ಜೆ ಬಳಕೆ ನಿಷೇಧ

ಬೆಳಗಾವಿ: ‘ಆಗಸ್ಟ್ 31ರಿಂದ ಸೆಪ್ಟೆಂಬರ್ 9 ರವರೆಗೆ ನಗರ ಹಾಗೂ ಜಿಲ್ಲೆಯಲ್ಲಿ ನಡೆಯುವ ಗಣೇಶೋತ್ಸವ ಸಂದರ್ಭದಲ್ಲಿ ಡಿ.ಜೆ ಬಳಕೆ ಮಾಡುವಂತಿಲ್ಲ’ ಎಂದು ಜಿಲ್ಲಾಧಿಕಾರಿ ನಿತೇಶ್‌ ಪಾಟೀಲ ತಾಕೀತು ಮಾಡಿದರು. ಗಣೇಶೋತ್ಸವ ಅಂಗವಾಗಿ ನಗರದಲ್ಲಿ ಸೋಮವಾರ ನಡೆದ ಗಣೇಶೋತ್ಸವ ಮಂಡಳಿಗಳ ಮುಖಂಡರ ಸಭೆಯಲ್ಲಿ ಮಾತನಾಡಿದ ಅವರು, ‘ಸುಪ್ರೀಂ ಕೋರ್ಟ್‌ ನಿರ್ದೇಶನ ಹಾಗೂ ರಾಜ್ಯ ಸರ್ಕಾರ ಹೊರಡಿಸಿದ ಮಾರ್ಗಸೂಚಿಗಳ ಪ್ರಕಾರವೇ ಉತ್ಸವಕ್ಕೆ ಅವಕಾಶ ಕಲ್ಪಿಸಲಾಗುವುದು’ ಎಂದರು.   ‘ಉತ್ಸವದಲ್ಲಿ ಹಿಂದೆ ದೊಡ್ಡ ಶಬ್ದದ …

Read More »

ಟ್ಯಾಬ್ಲೆಟ್ ಸೇವಿಸಿ ಸುಮಾರು 55 ವಿದ್ಯಾರ್ಥಿಗಳು ಅಸ್ವಸ್ಥ

ಬೆಳಗಾವಿ: ಅನಿಮಿಯ ಮುಕ್ತ ಭಾರತ್ ಯೋಜನೆಯಡಿ ಶಾಲಾ ವಿದ್ಯಾರ್ಥಿಗಳಿಗೆ ನೀಡಲಾಗುವ ಕಬ್ಬಿಣದ ಅಂಶದ ಮಾತ್ರೆ ಅಂದರೆ ಐರನ್ ಟ್ಯಾಬ್ಲೆಟ್ ಸೇವಿಸಿ ಸುಮಾರು 55 ವಿದ್ಯಾರ್ಥಿಗಳು ಅಸ್ವಸ್ಥರಾಗಿರುವ ಘಟನೆ ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನ ಬಸಿಡೋಣಿ ಗ್ರಾಮದಲ್ಲಿ ನಡೆದಿದೆ.   ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನ ಬಸಿಡೋಣಿ ಗ್ರಾಮದಸರ್ಕಾರಿ ಶಾಲೆಯ 239 ಮಕ್ಕಳಿಗೆ ಫಾಲಿಕ್ ಆಸಿಡ್ ಮಾತ್ರೆ ನೀಡಲಾಗಿತ್ತು. ಮಾತ್ರೆ ಸೇವಿಸಿದ ಕೆಲ ಹೊತ್ತಿನಲ್ಲೇ ಕೆಲವು ವಿದ್ಯಾರ್ಥಿಗಳು ಹೊಟ್ಟೆ ನೋವಿನ ಬಗ್ಗೆ ದೂರು …

Read More »

ರಾಜಕುಮಾರ ಟಾಕಳೆಗೆ ಶಿಕ್ಷೆಯಾಗುವಂತೆ ಮಾಡುತ್ತೇನೆ-: ನವ್ಯಶ್ರೀ

ನವ್ಯಶ್ರೀ ರಾವ್ ಅಶ್ಲೀಲ ವೀಡಿಯೋ ವೈರಲ್ ಪ್ರಕರಣಕ್ಕೆ ಸಂಬoಧಿಸಿದoತೆ ನವ್ಯಶ್ರೀ ರಾವ್ ವಿರುದ್ಧ ರಾಜ್‌ಕುಮಾರ್ ಟಾಕಳೆ ದೂರನ್ನು ದಾಖಲಿಸಿದ್ದರು. ಈ ಹಿನ್ನೆಲೆಯಲ್ಲಿ ನವ್ಯಶ್ರೀ ರಾವ್ ಇಂದು ವಿಚಾರಣೆಗೆ ಎಪಿಎಂಸಿ ಠಾಣೆಗೆ ಹಾಜರಾಗಿದ್ದಾರೆ.  ಕೆಲ ದಿನಗಳ ಹಿಂದೆ ಕೈ ನಾಯಕಿ ನವ್ಯಶ್ರೀ ರಾವ್‌ರವರ ಅಶ್ಲೀಲ ವೀಡಿಯೋ ಹಾಗೂ ಕಾಂಗ್ರೆಸ್ ನಾಯಕರೊಂದಿಗೆ ಇದ್ದ ಫೊಟೊ ವೈರಲ್ ಆಗಿದ್ದವು. ಈ ಕುರಿತಂತೆ ತೋಟಗಾರಿಕೆ ಇಲಾಖೆ ಸಹಾಯಕ ನಿರ್ದೇಶಕ ರಾಜಕುಮಾರ ಟಾಕಳೆ ನವ್ಯಶ್ರೀ ವಿರುದ್ಧ ಜುಲೈ …

Read More »

ಗಣೇಶೋತ್ಸವ ಆಚರಣೆ ಹಿನ್ನೆಲೆ ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ಸಭೆ

ಬೆಳಗಾವಿಯಲ್ಲಿ ಮುಂಬರುವ ಗಣೇಶೋತ್ಸವ ಆಚರಣೆ ಹಿನ್ನೆಲೆ ಜಿಲ್ಲೆಯಲ್ಲಿ ಮಾಡಿಕೊಳ್ಳಬೇಕಾದ ಸಿದ್ಧತೆಗಳನ್ನು ಕುರಿತಂತೆ ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ಸಬೇಯನ್ನು ಹಮ್ಮಿಕೊಳ್ಳಲಾಗಿತ್ತು. ಹೌದು ಇಂದು ಬೆಳಗಾವಿಯ ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ಬೆಳಗಾವಿ ಜಿಲ್ಲೆಯಲ್ಲಿ ಗಣೇಶೋತ್ಸವ ಆಚರಣೆ ಕುರಿತಂತೆ ಪೂರ್ವಭಾವಿ ಸಭೆಯನ್ನು ಹಮ್ಮಿಕೊಳ್ಳಲಾಗಿತ್ತು. ಈ ವೇಳೆ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಜಿಲ್ಲಾಧಿಕಾರಿಗಳು, ಗಣೇಶೋತ್ಸವ ಆಚರಣೆ ಕುರಿತಂತೆ ಈಗ ಅನುಮತಿ ಇದೆ. ಆದರೆ ಮುಂಬರುವ ದಿನಗಳಲ್ಲಿ ಸರಕಾರ ಹಾಗೂ ನ್ಯಾಯಾಲಯಗಳು ಏನು ಆದೇಶಗಳನ್ನು ಹೊರಡಿಸುತ್ತವೆಯೋ ಅದನ್ನು ಕಟ್ಟುನಿಟ್ಟಾಗಿ …

Read More »

ಚೈನ ಸ್ನ್ಯಾಚರ ಹಾಗೂ ಬೈಕ ಕಡಿಯುತ್ತಿದ್ದ ಕಳ್ಳರನ್ನು ಹೆಡೆ ಮೂರಿ ಕಟ್ಟಿದ ಗೋಕಾಕ ಪೊಲೀಸರು

ಗೋಕಾಕ ಶಹರ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಕಳೆದ ಕೆಲವು ತಿಂಗಳುಗಳಿಂದ ಚೈನ್ ಸ್ಟ್ಯಾಚಿಂಗ ಹಾಗೂ ಮೋಟಾರ ಸೈಕಲಗಳು ಕಳ್ಳತನವಾಗುತ್ತಿದ್ದು ಈ ಬಗ್ಗೆ ಪ್ರಕರಣಗಳು ದಾಖಲಾಗಿದ್ದು ಅವುಗಳ ಪತ್ತೆಗಾಗಿ ಮಾನ್ಯ ಶ್ರೀ ಸಂಜೀವ ಪಾಟೀಲ ಆರಕ್ಷಕ ಅಧೀಕ್ಷಕರು ಬೆಳಗಾವಿ, ಹಾಗೂ ಮಾನ್ಯ ಶ್ರೀ ಮಹಾನಿಂಗ ನಂದಗಾವಿ ಹೆಚ್ಚುವರಿ ಎಸ್ ಪಿ ಬೆಳಗಾವಿ ರವರು ಮತ್ತು ಶ್ರೀ ಮನೋಜಕುಮಾರ ನಾಯಿಕ ಡಿಎಸ್‌ಪಿ ಗೋಕಾಕ ರವರ ಮಾರ್ಗದರ್ಶನದಲ್ಲಿ, ಗೋಕಾಕ ವೃತ್ತದ ಸಿಪಿಐ ಶ್ರೀ ಗೋಪಾಲ …

Read More »

ರಾಯಬಾಗ ತಾಲೂಕಿನ ಹಾರೂಗೇರಿಯಲ್ಲಿ ಅಪರೂಪದ ಮದುವೆ

ಮದುವೆಗಳು ಸ್ವರ್ಗದಲ್ಲೇ ನಿಶ್ಚಯವಾಗಿರುತ್ತವೆ ಅಂತಾರೆ. ಯಾರ‌್ಯಾರ ಬಾಳಲ್ಲಿ ಯಾರ‌್ಯಾರು ಸಂಗಾತಿಯಾಗಬೇಕು ಅಂತಾ ಸ್ವರ್ಗದಲ್ಲೇ ನಿಶ್ಚಯ ಆಗಿರುತ್ತಂತೆ. ಆದ್ರೆ ಇಲ್ಲಿ ಎರಡು ಕುಟುಂಬಗಳು ತಮ್ಮ ಮೂಗ – ಕಿವುಡ ಮಕ್ಕಳ ಮದುವೆ ಆಗುತ್ತೋ ಇಲ್ವೋ ಅಂತಾ ಚಿಂತೆಯಲ್ಲಿದ್ದಾಗ ಮೂಗನೊಬ್ಬ ಆಪತ್ಬಾಂಧವನಾಗಿ ಬಂದಿದ್ದಾನೆ.     ಬೆಳಗಾವಿ ಜಿಲ್ಲೆ ರಾಯಬಾಗ ತಾಲೂಕಿನ ಹಾರೂಗೇರಿಯಲ್ಲಿ ಅಪರೂಪದ ಮದುವೆಯೊಂದು ನಡೆದಿದೆ. ರಾಯಬಾಗ ತಾಲೂಕಿನ ಹಾರೂಗೇರಿ ನಿವಾಸಿ ಜ್ಯೋತೆಪ್ಪ ಉಮರಾಣಿ ನೆಚ್ಚಿನ ಮಗಳಾದ ಸ್ವಾತಿ ಮದುವೆ ಮಾಡಲು ಆಗದೇ …

Read More »

ತಲ್ವಾರ್‌ನಿಂದ ಕೇಕ್ ಕಟ್ ಮಾಡಿ ಹುಟ್ಟುಹಬ್ಬ ಆಚರಣೆ

ಯುವಕರಿಬ್ಬರು ಸಾರ್ವಜನಿಕವಾಗಿ ಹುಟ್ಟುಹಬ್ಬವನ್ನು ಆಚರಣೆ ಮಾಡಿಕೊಳ್ಳುವ ಸಂದರ್ಭದಲ್ಲಿ ತಲ್ವಾರ್‌ನಿಂದ ಕೇಕ್ ಕತ್ತರಿಸಿ ಹುಟ್ಟುಹಬ್ಬವನ್ನು ಆಚರಣೆ ಮಾಡಿಕೊಂಡ ಘಟನೆ ಬೆಳಗಾವಿ ಜಿಲ್ಲೆಯ ಮೂಡಲಗಿ ತಾಲೂಕಿನ ಸಂಗನಕೇರಿ ಗ್ರಾಮದಲ್ಲಿ ನಡೆದಿದೆ. ಈ ಘಟನೆ ಜುಲೈ ೨೩ ರಂದು ನಡೆದ ಘಟನೆಯಾಗಿದ್ದು ತಡವಾಗಿ ಬೆಳಕಿಗೆ ಬಂದಿದೆ. ಬೆಳಗಾವಿ ಜಿಲ್ಲೆಯ ಮೂಡಲಗಿ ತಾಲೂಕಿನ ಸಂಗನಕೇರಿ ಗ್ರಾಮದಲ್ಲಿ ಮಲ್ಲಿಕ್ ನದಾಫ್, ಅಶೋಕ ಗಾಡಿವಡ್ಡರ ಎಂಬ ಇಬ್ಬರು ಯುವಕರ ಹುಟ್ಟುಹಬ್ಬವಿತ್ತು. ಈ ವೇಳೆ ಸಾರ್ವಜನಿಕವಾಗಿ ಈ ಯುವಕರು ತಲ್ವಾರ್‌ನಿಂದ …

Read More »