Breaking News

ಬೆಳಗಾವಿ

ಧಾರವಾಡ ಯುವತಿಯ ಹೃದಯ ಬೆಳಗಾವಿ ಯುವಕನಿಗೆ ಕಸಿ

ಬೆಳಗಾವಿ: ಮಿದುಳು ನಿಷ್ಕ್ರಿಯವಾದ ಯುವತಿಯೊಬ್ಬರ ಹೃದಯವನ್ನು ಧಾರವಾಡದಿಂದ ಬೆಳಗಾವಿಗೆ ಝೀರೊ ಟ್ರಾಫಿಕ್ ನಲ್ಲಿ ಸಾಗಿಸಲು ಕ್ಷಿಪ್ರ ಸಿದ್ಧತೆ ನಡೆಸಲಾಗಿದೆ. ಅಪಘಾತದಿಂದ ಗಾಯಗೊಂಡ ಯುವತಿಯೊಬ್ಬರು ಧಾರವಾಡ ಎಸ್.ಡಿ.ಎಂ ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ. ಅವರ ಮಿದುಳು ನಿಷ್ಕ್ರಿಯವಾಗಿದ್ದು, ಹೃದಯ ಬಡಿದುಕೊಳ್ಳುತ್ತಿದೆ. ಇದೇ ಕಾಲಕ್ಕೆ ಹೃದ್ರೋಗದಿಂದ ಬಳಲುತ್ತಿರುವ ಯುವಕ ಬೆಳಗಾವಿಯ ಕೆಎಲ್‌ಇಎಸ್‌ ಆಸ್ಪತ್ರೆಯಲ್ಲಿ ದಾಖಲಾಗಿದ್ದಾನೆ. ಯುವಕನಿಗೆ ಹೃದಯ ಕಸಿ ಮಾಡಬೇಕಾಗಿದೆ. ಹೀಗಾಗಿ, ಧಾರವಾಡದ ಯುವತಿಯ ಹೃದಯವನ್ನೇ ಬೆಳಗಾವಿಯ ಯುವಕನಿಗೆ ಕಸಿ ಮಾಡಲು ಯುವತಿ ಪಾಲಕರು ಸಮ್ಮತಿಸಿದ್ದಾರೆ. …

Read More »

ಬೆಳಗಾವಿ: ಜಿಲ್ಲೆಯಲ್ಲಿ ಸದ್ಯಕ್ಕೆ ಪ್ರವಾಹದ ಭೀತಿ ಇಲ್ಲ.: ಗೋವಿಂದ ಕಾರಜೋಳ

ಬೆಳಗಾವಿ: ಜಿಲ್ಲೆಯಲ್ಲಿ ಸದ್ಯಕ್ಕೆ ಪ್ರವಾಹದ ಭೀತಿ ಇಲ್ಲ. ಆದರೂ ಮುಂಜಾಗ್ರತಾ ಕ್ರಮವಾಗಿ ಪ್ರವಾಹ ನಿರ್ವಹಣೆಗೆ ಅಗತ್ಯ ಕ್ರಮ ಕೈಗೊಳ್ಳಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಗೋವಿಂದ ಕಾರಜೋಳ ಹೇಳಿದ್ದಾರೆ. ಮಹಾರಾಷ್ಟ್ರದ ಕೊಯ್ನಾ ಜಲಾಶಯಕ್ಕೆ ಒಳಹರಿವು ಪ್ರಮಾಣ ತುಂಬಾ ಕಡಿಮೆ ಇದೆ. ಎರಡು ದಿನಗಳ ಹಿಂದೆ 30 ಟಿಎಂಸಿ ಅಡಿಯಷ್ಟು ನೀರು ಅಲ್ಲಿ ಸಂಗ್ರಹವಾಗಿದೆ. ಅದರ ಸಂಗ್ರಹಣಾ ಸಾಮರ್ಥ್ಯ ಒಟ್ಟು 105 ಟಿಎಂಸಿ ಅಡಿ. ಅದು ಸಂಪೂರ್ಣ ತುಂಬುವವರೆಗೆ ನೀರನ್ನು ಹೊರ ಬಿಡುವುದಿಲ್ಲ. …

Read More »

ಸುರಿಯುತ್ತಿರುವ ಮಳೆ ಮಾಣಿಕಬಾಗ್ ಸರ್ವೀಸ್ ರಸ್ತೆ ಕುಸಿದಿದ್ದು ಟ್ರಕ್‍ನ ಚಕ್ರಗಳು ಸಿಲುಕಿಹಾಕಿಕೊಂಡಿವೆ.

ಬೆಳಗಾವಿಯಲ್ಲಿ ಹಳೆಯ ಪುನಾ ಬೆಂಗಳೂರು ರಸ್ತೆಯ ಬ್ರಿಡ್ಜ್ ಕೆಳಗಡೆ ಇರುವ ಮಾಣಿಕಬಾಗ್ ಸರ್ವೀಸ್ ರಸ್ತೆ ಕುಸಿದಿದ್ದು ಭಾರೀ ಟ್ರಕ್‍ನ ಚಕ್ರಗಳು ರಸ್ತೆ ಕುಸಿತದಲ್ಲಿ ಸಿಲುಕಿಹಾಕಿಕೊಂಡಿತ್ತು. ಹೌದು ಬೆಳಗಾವಿ ನಗರದಲ್ಲಿ ಸುರಿಯುತ್ತಿರುವ ಮಳೆಯಿಂದಾಗಿ ರಸ್ತೆಗಳು ಕುಸಿಯುತ್ತಿವೆ. ಬೆಳಗಾವಿಯ ಹಳೆಯ ಪುನಾ ಬೆಂಗಳೂರು ರಸ್ತೆಯ ಬ್ರಿಡ್ಜ್ ಕೆಳಗಡೆ ಇರುವ ಮಾಣಿಕಬಾಗ್ ಸರ್ವೀಸ್ ರಸ್ತೆ ಕುಸಿದಿದ್ದು ಟ್ರಕ್‍ನ ಚಕ್ರಗಳು ಸಿಲುಕಿಹಾಕಿಕೊಂಡಿವೆ. ಭಾರೀ ಲೋಡ್‍ನ್ನು ಹೊತ್ತು ಸಾಗುತ್ತಿದ್ದ ಟ್ರಕ್‍ನ ಹಿಂದಿನ ಚಕ್ರಗಳು ರಸ್ತೆ ಕುಸಿದು ಸಿಲುಕಿಹಾಕಿಕೊಂಡಿತ್ತು …

Read More »

12 ಕ್ವಿಂಟಾಲ್ ರೇಶನ್ ಅಕ್ಕಿ ಜಪ್ತಿ ವಶಕ್ಕೆ ಪಡೆದುಕೊಳ್ಳುವಲ್ಲಿ ಹುಕ್ಕೇರಿ ತಾಲೂಕಿನ ಸಂಕೇಶ್ವರ ಠಾಣೆ ಪೊಲೀಸರು ಯಶಸ್ವಿ

ಟ್ರಕ್‍ನಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ ಅಪಾರ ಪ್ರಮಾಣದ ರೇಶನ್ ಅಕ್ಕಿಯನ್ನು ವಶಕ್ಕೆ ಪಡೆದುಕೊಳ್ಳುವಲ್ಲಿ ಹುಕ್ಕೇರಿ ತಾಲೂಕಿನ ಸಂಕೇಶ್ವರ ಠಾಣೆ ಪೊಲೀಸರು ಯಶಸ್ವಿಯಾಗಿದ್ದಾರೆ. ಬೆಳಗಾವಿಯ ಗಾಂಧಿನಗರದಿಂದ ಕೊಲ್ಲಾಪುರಕ್ಕೆ ರೇಶನ್ ಅಕ್ಕಿಯನ್ನು ಸಾಗಿಸಲಾಗುತ್ತಿತ್ತು. ಈ ಬಗ್ಗೆ ಖಚಿತ ಮಾಹಿತಿ ಮೇರೆಗೆ ದಾಳಿ ಮಾಡಿದ ಸಂಕೇಶ್ವರ ಠಾಣೆ ಪಿಎಸ್‍ಐ ಮತ್ತು ಸಿಬ್ಬಂದಿಗಳು 12 ಕ್ವಿಂಟಾಲ್ ಅಕ್ಕಿಯನ್ನು ಟ್ರಕ್ ಸಮೇತ ಜಪ್ತಿ ಮಾಡಿದ್ದಾರೆ. ಏಂ 24 1751 ಅಶೋಕ್ ಲೈಲೆಂಡ್ ಟ್ರಕ್ ಇದಾಗಿದೆ. ಬೆಳಗಾವಿ ತಾಲೂಕಿನ ಬಸವಣ್ಣ ಕುಡಚಿ …

Read More »

ಪ್ರವಾಸೀ ತಾಣಗಳಿಗೆ ಬಂದಾಗ ಸಾರ್ವಜನಿಕರು ತುಂಬಾ ಎಚ್ಚರಿಕೆಯಿಂದ ವರ್ತಿಸಬೇಕು: S.P. ಸಂಜೀವ್ ಪಾಟೀಲ್

ಪ್ರವಾಸೀ ತಾಣಗಳಿಗೆ ಬಂದಾಗ ಸಾರ್ವಜನಿಕರು ತುಂಬಾ ಎಚ್ಚರಿಕೆಯಿಂದ ವರ್ತಿಸಬೇಕು. ತಮ್ಮ ಹಾಗೂ ತಮ್ಮ ಜೊತೆ ಬಂದವರ ಕುರಿತಂತೆ ಕಾಳಜಿ ವಹಿಸಬೇಕೆಂದು ಬೆಳಗಾವಿ ಎಸ್‍ಪಿ ಡಾ. ಸಂಜೀವ್ ಪಾಟೀಲ್ ಹೇಳಿದ್ದಾರೆ. ಹೌದು ಬೆಳಗಾವಿ ಜಿಲ್ಲೆಯಲ್ಲಿ ಮಳೆಯಾಗುತ್ತಿದ್ದರು ಜನಪ್ರಿಯ ಪ್ರವಾಸಿ ತಾಣಗಳಿಗೆ ಪ್ರವಾಸಿಗರು ಭೇಟಿ ನಿಡುತ್ತಿದ್ದಾರೆ. ಇನ್ನು ಅವರ ಸುರಕ್ಷತೆಯನ್ನು ಸ್ವತಃ ಪ್ರವಾಸಿಗರೇ ಮಾಡಿಕೊಳ್ಳಬೇಕು. ಈ ಹಿನ್ನೆಲೆಯಲ್ಲಿ ಇಂದು ಎಸ್‍ಪಿ ಡಾ. ಸಂಜೀವ್ ಪಾಟೀಲ್ ಬೆಳಗಾವಿ ಜಿಲ್ಲೆಯ ಗೋಕಾಕ್ ಫಾಲ್ಸ್‍ಗೆ ಭೇಟಿ ನೀಡಿ …

Read More »

ಬೋಟ್ ಮೂಲಕ ವಾಹದ ಪರಿಸ್ಥಿತಿಯನ್ನು ಅವಲೋಕಿಸಿದ ತಹಶೀಲ್ದಾರ ಸಿ.ಎಸ್.ಕುಲಕರ್ಣಿ

ಕೃಷ್ಣಾ ಹಾಗೂ ಉಪನದಿಗಳಿಗೆ ಪ್ರವಾಹ ಭೀತಿ ಹಿನ್ನಲೆಯಲ್ಲಿ ಬೋಟ್ ಮೂಲಕ ತಹಶೀಲ್ದಾರ ಸಿ.ಎಸ್.ಕುಲಕರ್ಣಿಯವರು ಪ್ರವಾಹದ ಪರಿಸ್ಥಿತಿಯನ್ನು ಅವಲೋಕಿಸಿದರು. ಹೌದು ಮಹಾರಾಷ್ಟ್ರದ ಕೊಂಕಣ ಪ್ರದೇಶಗಳಲ್ಲಿ ನಿರಂತರವಾಗಿ ಮಳೆ ಸುರಿಯುತ್ತಿರುವುದರಿಂದ ಇತ್ತ ಚಿಕ್ಕೋಡಿ ತಾಲೂಕಿನ ಮಾಂಜರಿ, ಇಂಗಳಿ, ಚಂದೂರ, ಯಡೂರ ಗ್ರಾಮದ ನದಿಗಳಿಗೆ ಪ್ರವಾಹ ಪರಿಸ್ಥಿತಿ ನಿರ್ಮಾಣವಾಗಿದೆ. ಈ ಹಿನ್ನಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಚಿಕ್ಕೋಡಿ ತಹಶೀಲ್ದಾರ ಸಿ.ಎಸ್.ಕುಲಕರ್ಣಿ ಬೋಟ್ ಮೂಲಕ ಪ್ರವಾಹದ ಪರಿಸ್ಥಿತಿಯನ್ನು ಅವಲೋಕಿಸಿದರು. ನಂತರ ನದಿತೀರದ ಜನರ ಜೊತೆಗೆ ತಹಶೀಲ್ದಾರ ಕುಲಕರ್ಣಿ …

Read More »

P.S.I. ನೇಮಕಾತಿ ಪ್ರಕರಣ ಅಕ್ರಮ: ಪೌಲ್ ಡೈರಿಯಲ್ಲಿ ಪ್ರಭಾವಿಗಳ ಹೆಸರು

ಬೆಂಗಳೂರು: ಪಿಎಸ್‌ಐ ನೇಮಕಾತಿ ಅಕ್ರಮ ಪ್ರಕರಣದಲ್ಲಿ ಬಂಧಿಸಲಾಗಿರುವ ಎಡಿಜಿಪಿ ಅಮ್ರಿತ್ ಪೌಲ್‌ ಅವರಿಗೆ ಸೇರಿದ್ದು ಎನ್ನಲಾದ ಡೈರಿಯನ್ನು ಸಿಐಡಿ ಅಧಿಕಾರಿಗಳು ಜಪ್ತಿ ಮಾಡಿದ್ದಾರೆ.   ನೇಮಕಾತಿ ವಿಭಾಗದ ಮುಖ್ಯಸ್ಥರಾಗಿದ್ದ ಎಡಿಜಿಪಿ ಅಮ್ರಿತ್ ಪೌಲ್, ಪಿಎಸ್‌ಐ ನೇಮಕಾತಿ ಪ್ರಕ್ರಿಯೆ ಅಂಶಗಳನ್ನು ಡೈರಿಯಲ್ಲಿ ದಾಖಲಿಸುತ್ತಿದ್ದರೆಂಬ ಮಾಹಿತಿ ಗೊತ್ತಾಗಿದೆ. ಕೆಲವುಅಧಿಕಾರಸ್ಥರು, ರಾಜಕೀಯ ಪಕ್ಷಗಳ ಮುಖಂಡರು, ಐಪಿಎಸ್ ಅಧಿಕಾರಿಗಳು, ಡಿವೈಎಸ್ಪಿಗಳು, ಇನ್‌ಸ್ಪೆಕ್ಟರ್‌ಗಳು ಹಾಗೂ ವಿವಿಧ ಕ್ಷೇತ್ರಗಳ ಪ್ರಭಾವಿಗಳ ಹೆಸರು ಡೈರಿಯಲ್ಲಿರುವುದಾಗಿ ಸಿಐಡಿ ಮೂಲಗಳು ‘ಪ್ರಜಾವಾಣಿ’ಗೆ ತಿಳಿಸಿವೆ. ‘ಪೌಲ್ …

Read More »

U.P.S.C.ಯಲ್ಲಿ 319ನೇ ರ‍್ಯಾಂಕ್ ಪಡೆದ ಗಜಾನನ ಬಾಲೆಗೆ ಜಿಲ್ಲಾಧಿಕಾರಿ ನಿತೇಶ್ ಪಾಟೀಲ್ ಸತ್ಕಾರ

ಯುಪಿಎಸ್‍ಸಿ ಪರೀಕ್ಷೆಯಲ್ಲಿ 319ನೇ ರ್ಯಾಂಕ್ ಪಡೆದ ಬೆಳಗಾವಿ ಜಿಲ್ಲೆಯ ಹೆಮ್ಮೆಯ ಪುತ್ರ ಗಜಾನನ ಶಂಕರ್ ಬಾಲೆ ಅವರಿಗೆ ಜಿಲ್ಲಾಧಿಕಾರಿ ನಿತೇಶ್ ಪಾಟೀಲ್ ಅವರು ಸತ್ಕರಿಸಿ ಗೌರವಿಸಿದರು. ಕೇಂದ್ರ ಲೋಕಸೇವಾ ಆಯೋಗವು 2021ನೇ ಸಾಲಿನಲ್ಲಿ ನಡೆಸಿದ ನಾಗರಿಕ ಸೇವಾ ಪರೀಕ್ಷೆಯಲ್ಲಿ 319ನೇ ಯಾರ್ಂಕ್ ಪಡೆದಿರುವ ಬೆಳಗಾವಿ ಜಿಲ್ಲೆ ರಾಯಬಾಗ ತಾಲ್ಲೂಕಿನ ಕುಡಚಿಯ ಗಜಾನನ ಶಂಕರ್ ಬಾಲೆ ಅವರನ್ನು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಅವರು ಶುಕ್ರವಾರ (ಜು.8) ತಮ್ಮ ಕಚೇರಿಯಲ್ಲಿ ಸನ್ಮಾನಿಸಿ, ಗೌರವಿಸಿದರು. …

Read More »

ಬಕ್ರೀದ್ ನಿಮಿತ್ಯ ಬೆಳಗಾವಿ ನಗರದ ಏರಿಯಾಗಳಲ್ಲಿ ಪೊಲೀಸರಿಂದ ಪಥಸಂಚಲನ

ನಾಳೆ ಬಕ್ರೀದ್ ಹಬ್ಬ ಹಿನ್ನೆಲೆಯಲ್ಲಿ ಬೆಳಗಾವಿ ನಗರದ ಸೂಕ್ಷ್ಮ ಹಾಗೂ ಅತೀ ಸೂಕ್ಷ್ಮ ಏರಿಯಾದಲ್ಲಿ ಬೆಳಗಾವಿ ನಗರ ಪೊಲೀಸರು ಪಥಸಂಚಲನವನ್ನು ನಡೆಸಿ ಜಾಗೃತಿಯನ್ನು ಮೂಡಿಸಿದರು. ಹೌದು ನಾಳೆ ಬಕ್ರೀದ್ ಹಬ್ಬ ಆಚರಣೆ ಹಿನ್ನೆಲೆ ರಾಜ್ಯ ಸರಕಾರ ಯಾವುದೇ ಅಹಿತಕರ ಘಟನೆ ನಡೆಯದಂತೆ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳುವಂತೆ ಪೊಲೀಸ್ ಇಲಾಖೆಗೆ ಸೂಚನೆ ನೀಡಿದೆ. ಹಾಗಾಗಿ ಬೆಳಗಾವಿ ನಗರದಲ್ಲಿಯೂ ಬಕ್ರೀದ್ ಆಚರಣೆ ಹಿನ್ನೆಲೆಯಲ್ಲಿ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳುವ ನಿಟ್ಟಿನಲ್ಲಿ ಇಂದು ಬೆಳಗಾವಿ ನಗರ …

Read More »

ಬೆಳಗಾವಿ ಜಿಲ್ಲೆಯಲ್ಲಿ ಎಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ ಎಂದ ಜಿಲ್ಲಾಧಿಕಾರಿ

ಮಹಾರಾಷ್ಟ್ರದ ಪಶ್ಚಿಮ ಘಟ್ಟದಲ್ಲಿ ಮಳೆರಾಯನ ಆರ್ಭಟ ಮುಂದುವರೆದಿದ್ದು ಇತ್ತ ಗಡಿಜಿಲ್ಲೆ ಬೆಳಗಾವಿಯಲ್ಲೂ ವರ್ಷಧಾರೆ ಮುಂದುವರೆದಿದೆ. ಚಿಕ್ಕೋಡಿ ತಾಲೂಕಿನ ಕೆಳ ಹಂತದ ಯಡೂರು ಕಲ್ಲೋಳ, ಮಲ್ಲಿಕವಾಡ ದತ್ತವಾಡ, ಕಾರದಗಾ ಭೋಜ ಸೇತುವೆಗಳು ಜಲಾವೃತವಾಗಿದ್ದು, ಬೆಳಗಾವಿ ಜಿಲ್ಲೆಯಲ್ಲಿ ಎಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ ಎಂದು ಎಂದು ಜಿಲ್ಲಾಧಿಕಾರಿಗಳಾದ ನಿತೇಶ್ ಪಾಟೀಲ್ ಹೇಳಿದ್ದಾರೆ. ಬೆಳಗಾವಿಯಲ್ಲಿ ತಮ್ಮ ಕಚೇರಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಡಿಸಿ ನಿತೇಶ್ ಪಾಟೀಲ್ ಮಹಾರಾಷ್ಟ್ರ ಪಶ್ಚಿಮ ಘಟ್ಟಗಳಲ್ಲಿ ವರುಣರಾಯನ ಆರ್ಭಟ ಮುಂದುವರೆದಿದೆ. ಮಹಾ …

Read More »