ಸಹಾಯಧನ ಚೇಕ್ ವಿತರಿಸಿದ ಶಾಸಕ ರಮೇಶ ಜಾರಕಿಹೊಳಿ.! ಗೋಕಾಕ: ಆಕಸ್ಮೀಕ ಸಿಡಿಲು ಬಡಿದು ಮೃತಪಟ್ಟ ಜಾನುವಾರು ಮಾಲಕಿ ನಾಗವ್ವ ಪರಸನ್ನವರ ಅವರಿಗೆ ಶಾಸಕ ರಮೇಶ ಜಾರಕಿಹೊಳಿ ಬುಧವಾರದಂದು ತಮ್ಮ ಗೃಹ ಕಚೇರಿಯಲ್ಲಿ ೩೦ಸಾವಿರ ರೂಗಳ ಚೇಕ್ ವಿತರಣೆ ಮಾಡಿದರು. ಈ ಸಂದರ್ಭದಲ್ಲಿ ತಹಶೀಲ್ದಾರ ಪ್ರಕಾಶ ಹೊಳೆಪ್ಪಗೋಳ, ಮಾಜಿ ಜಿಪಂ ಸದಸ್ಯ ಟಿ ಆರ್ ಕಾಗಲ, ಗ್ರಾಮ ಲೆಕ್ಕಾಧಿಗಳು ಇದ್ದರು.
Read More »ಬೆಳಗಾವಿಯಲ್ಲಿ ಕಾರ್ಯನಿರತ ಪತ್ರಕರ್ತರ ಸಂಘ ಹಾಗೂ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಿಂದ ಪತ್ರಿಕಾ ದಿನಾಚರಣೆ
ಬೆಳಗಾವಿಯಲ್ಲಿ ಕಾರ್ಯನಿರತ ಪತ್ರಕರ್ತರ ಸಂಘ ಹಾಗೂ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಿಂದ ಪತ್ರಿಕಾ ದಿನಾಚರಣೆ ಹಾಗೂ ಗುರುವಂದನಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು ನಗರದ ಜೀರಗೆ ಹಾಲ್‍ನಲ್ಲಿ ಕರ್ನಾಟಕ ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾ ಘಟಕ ಹಾಗು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಬೆಳಗಾವಿ ಇವರ ಸಂಯುಕ್ತ ಆಶ್ರಯದಲ್ಲಿ ಪತ್ರಿಕಾ ದಿನಾಚರಣೆ ಹಾಗೂ ಗುರುವಂದನಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಈ ವೇಳೆ ದೀಪವನ್ನು ಬೆಳಗಿಸುವ ಮೂಲಕ ಕಾರ್ಯಕ್ರಮಕ್ಕೆ ಗಣ್ಯರು ಚಾಲನೆ …
Read More »ಬೆಳಗಾವಿ: ಜಿಲ್ಲೆಯ ಎಲ್ಲೆಡೆ ಉತ್ತಮ ಮಳೆ
ಬೆಳಗಾವಿ: ನಗರವೂ ಸೇರಿದಂತೆ ಜಿಲ್ಲೆಯ ಬಹುಪಾಲು ಕಡೆಗಳಲ್ಲಿ ಸೋಮವಾರ ಧಾರಾಕಾರ ಮಳೆ ಸುರಿಯಿತು. ಬೆಳಗಾವಿ ನಗರದಲ್ಲಿ ಭಾನುವಾರ ಸಾಧಾರಣ ಮಳೆ ಸುರಿದಿತ್ತು. ಸೋಮವಾರ ಬೆಳಿಗ್ಗೆಯಿಂದ ತುಸು ಬಿರುಸು ಪಡೆಯಿತು. ತಾಲ್ಲೂಕಿನಲ್ಲಿ ಕೂಡ ಮಧ್ಯಾಹ್ನ 12ರಿಂದ ಧಾರಾಕಾರವಾಗಿ ಸುರಿಯುತ್ತಿದೆ. ಇದರಿಂದ ಶಾಲೆ, ಕಾಲೇಜಿಗೆ, ಕಚೇರಿ, ಹೊಲಗಳಿಗೆ ತೆರಳುವವರೆಲ್ಲ ರೇನ್ ಕೋರ್ಟ್, ಕೊಡೆಗಳ ಆಶ್ರಯ ಪಡೆದರು. ಇನ್ನೊಂದೆಡೆ ಮಲಪ್ರಭಾ, ಘಟಪ್ರಭಾ ಜಲಾನಯನ ಪ್ರದೇಶದಲ್ಲಿ ಕೂಡ ಉತ್ತಮ ಮಳೆಯಾದ ಕಾರಣ ಒಳಹರಿವು ಹೆಚ್ಚಾಗಿದೆ. …
Read More »ಯಲ್ಲಮ್ಮನಗುಡ್ಡಕ್ಕೆ ಹರಿದುಬರುತ್ತಿದೆ ಭಕ್ತರ ದಂಡು
ಉಗರಗೋಳ: ಸವದತ್ತಿ ತಾಲ್ಲೂಕಿನ ಉಗರಗೋಳದ ಯಲ್ಲಮ್ಮನ ಗುಡ್ಡಕ್ಕೆ ಭಕ್ತರ ದಂಡೇ ಹರಿದುಬರುತ್ತಿದ್ದು, ಮೂರು ತಿಂಗಳಲ್ಲಿ ₹ 2.15 ಕೋಟಿ ದೇಣಿಗೆ ಸಂಗ್ರಹವಾಗಿದೆ. ಯಲ್ಲಮ್ಮನ ಗುಡ್ಡದಲ್ಲಿ ಸೋಮವಾರ ಎರಡನೇ ಹಂತದ ಹುಂಡಿ ಎಣಿಕೆ ನಡೆಯಿತು. ₹ 33.44 ಲಕ್ಷ ನಗದು, ₹ 5.11 ಲಕ್ಷ ಮೌಲ್ಯದ ಚಿನ್ನಾಭರಣ ಹಾಗೂ ₹ 62,390 ಮೌಲ್ಯದ ಬೆಳ್ಳಿ ಆಭರಣಗಳು ಸಂಗ್ರಹವಾಗಿವೆ. ಕೊರೂನಾ ನಂತರ ಆದಾಯ ಉತ್ತಮ: ದಕ್ಷಿಣ ಭಾರತದ ಪ್ರಸಿದ್ಧ ಧಾರ್ಮಿಕ ಕ್ಷೇತ್ರಗಳಲ್ಲಿ ಒಂದಾದ …
Read More »ಸರ್ಕಾರಿ ಶಾಲೆ ಬಿಸಿಯೂಟ ಸೇವಿಸಿ ಕಳಪೆ ಮಟ್ಟದ ಆಹಾರ ಇದೆ ಎಂದು B.E.O.ಗೆ ತರಾಟೆಗೆ ತೆಗೆದುಕೊಂಡ ಅಭಯ ಪಾಟೀಲ
ಸರ್ಕಾರಿ ಶಾಲಾ ಮಕ್ಕಳ ಜೊತೆಗೆ ಬಿಸಿಯೂಟ ಸೇವಿಸುವ ಮೂಲಕ ಬೆಳಗಾವಿಯ ದಕ್ಷಿಣ ಶಾಸಕ ಅಭಯ್ ಪಾಟೀಲ್ ತಮ್ಮ ಸರಳತೆ ಮೆರೆದಿದ್ದಾರೆ. ಹೌದು ಶಾಹಪುರದ ಅಳವಾನ್ ಗಲ್ಲಿಯ ಸರ್ಕಾರಿ ಶಾಲೆಗೆ ಇಂದು ದಿಢೀರ್ ಅಂತಾ ಭೇಟಿ ನೀಡಿದ ಶಾಸಕ ಅಭಯ್ ಪಾಟೀಲ್ ಮಧ್ಯಾಹ್ನದ ಬಿಸಿಯೂಟವನ್ನು ಪರೀಕ್ಷಿಸಿದರು. ಇದೇ ವೇಳೆ ಮಕ್ಕಳ ಜೊತೆಗೆ ಕುಳಿತುಕೊಂಡು ಬಿಸಿಯೂಟ ಸವಿದ ಅಭಯ್ ಪಾಟೀಲ್, ಗುಣಮಟ್ಟದ ಬೇಳೆ ಮತ್ತು ಅಕ್ಕಿಯನ್ನು ಊಟದಲ್ಲಿ ಯಾಕೆ ಬಳಸುತ್ತಿಲ್ಲ ಎಂದು ಬಿಇಓ …
Read More »ಬೆಳಗಾವಿಯಲ್ಲಿ ಬಿಟ್ಟು ಬಿಡದೇ ಸುರಿಯುತ್ತಿರುವ ಮಳೆ ಡ್ರೈನೇಜ್ ನೀರು ರಸ್ತೆ ಮೇಲೆ
ಬೆಳಗಾವಿಯಲ್ಲಿ ಬಿಟ್ಟು ಬಿಡದೇ ಸುರಿಯುತ್ತಿರುವ ಮಳೆ ಅವಾಂತರವನ್ನೇ ಸೃಷ್ಟಿ ಮಾಡಿದೆ. ಚರಂಡಿ ನೀರು ಓವರ್ ಫ್ಲೋ ಆಗಿ ಡ್ರೈನೇಜ್ ನೀರು ರಸ್ತೆ ಮೇಲೆ ಹರಿದಿದೆ. ಹೌದು ಬೆಳಗಾವಿ ನಗರ ಹಾಗೂ ಗ್ರಾಮೀಣ ಭಾಗದಲ್ಲಿ ಮಳೆರಾಯ ಅಕ್ಷರಶಃ ಅಬ್ಬರಿಸಿ ಬೊಬ್ಬಿರಿಯುತ್ತಿದ್ದಾನೆ. ಕಳೆದ ಎರಡು ದಿನಗಳಿಂದ ನಿರಂತರವಾಗಿ ಮಳೆಯಾಗುತ್ತಿದೆ. ಇದರಿಂದ ಬೆಳಗಾವಿಯ ಹಳೆ ಪಿಬಿ ರೋಡ್‍ನಲ್ಲಿ ಚರಂಡಿಯಲ್ಲಿ ಮಳೆ ನೀರು ಹೆಚ್ಚಾಗಿ ಓವರ್ ಫ್ಲೋ ಆಗಿ ಡ್ರೈನೇಜ್ ನೀರು ರಸ್ತೆಯ ಮೇಲೆ ಹರಿಯುತ್ತಿದೆ. …
Read More »ವಿದ್ಯುತ್ ತಗುಲಿ ಶಾಲಾ ಬಾಲಕಿ ಸಾವು
ನಿಪ್ಪಾಣಿ: ತಾಲೂಕಿನ ಡೋಣೆವಾಡಿ ಗ್ರಾಮದ ಪ್ರಾಥಮಿಕ ಮರಾಠಿ ಶಾಲೆಯಲ್ಲಿ 3ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ಅನುಷ್ಕಾ ಸದಾಶಿವ ಭೇಂಡೆ(9) ವಿದ್ಯುತ್ ಸ್ಪರ್ಶದಿಂದ ಸ್ಥಳದಲ್ಲೆ ಮೃತಪಟ್ಟಿದ್ದಾಳೆ. ವಿಷಯ ತಿಳಿದು ಸದಲಗಾ ಠಾಣೆಯ ಪೊಲೀಸರು ಹಾಗೂ ಭೋಜ ಹೆಸ್ಕಾಂ ಅಧಿಕಾರಿಗಳು ಬಂದು ಪಂಚನಾಮೆ ನಡೆಸಿದರು. ಸ್ಥಳೀಯ ಕ್ಷೇತ್ರ ಶಿಕ್ಷಣಾಧಿಕಾರಿ ರೇವತಿ ಮಠದ ಶಿಕ್ಷಣ ಇಲಾಖೆಯಿಂದ ಪೋಷಕರಿಗೆ ಪರಿಹಾರ ನೀಡುವುದಾಗಿ ತಿಳಿಸಿದ್ದಾರೆ. ಈ ಘಟನೆಯಿಂದ ಆಕ್ರೋಶಗೊಂಡ ಪೋಷಕರು ಹಾಗೂ ಸ್ಥಳೀಯರು ಶಾಲೆಯ ಮುಖ್ಯಶಿಕ್ಷಕರನ್ನು ವಜಾಗೊಳಿಸಬೇಕು …
Read More »ಖಾನಾಪುರದಲ್ಲಿ ಉತ್ತಮ ವರ್ಷಧಾರೆ
ಖಾನಾಪುರ: ಪಟ್ಟಣ ಸೇರಿದಂತೆ ತಾಲ್ಲೂಕಿನ ಅರಣ್ಯ ಪ್ರದೇಶದಲ್ಲಿ ಕಳೆದ 24 ಗಂಟೆಗಳ ಅವಧಿಯಲ್ಲಿ ಉತ್ತಮ ಪ್ರಮಾಣದ ಮಳೆಯಾಗಿದೆ. ಸೋಮವಾರ ಇಡೀ ದಿನ ತಾಲ್ಲೂಕಿನ ದೇವಲತ್ತಿ, ಪಾರಿಶ್ವಾಡ, ನಂದಗಡ, ಬೀಡಿ, ಹಲಸಿ, ಲೋಂಡಾ, ಕಕ್ಕೇರಿ, ಜಾಂಬೋಟಿ, ಕಣಕುಂಬಿ ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ಮಳೆ ಸುರಿದಿದೆ. ಕರ್ನಾಟಕ-ಗೋವಾ ಗಡಿಯ ಘಟ್ಟ ಪ್ರದೇಶದಲ್ಲಿ ಮಳೆ ಸತತವಾಗಿ ಸುರಿಯುತ್ತಿದೆ. ಕಣಕುಂಬಿಯಲ್ಲಿ 4 ಸೆಂ.ಮೀ, ಲೋಂಡಾದಲ್ಲಿ 3.8 ಸೆಂ.ಮೀ, ಜಾಂಬೋಟಿ ಮತ್ತು ಕಕ್ಕೇರಿಯಲ್ಲಿ 2 ಸೆಂ.ಮೀ, …
Read More »ಬೆಳಗಾವಿ: ಮಹಿಳೆಯೊಬ್ಬರ ಮಿದುಳಿನ ರಕ್ತದ ಗಂಟಿಗೆ ಯಶಸ್ವಿ ಶಸ್ತ್ರಚಿಕಿತ್ಸೆ
ಬೆಳಗಾವಿ: ಮಹಿಳೆಯೊಬ್ಬರ ಮಿದುಳಿನಲ್ಲಿ ಉಂಟಾಗಿದ್ದ ಅತ್ಯಂತ ಅಪಾಯಕಾರಿ ರಕ್ತದ ಗಂಟನ್ನು ‘ಬೈಪಾಸ್ ಶಸ್ತ್ರಚಿಕಿತ್ಸೆ’ ಮೂಲಕ ಹೊರತೆಗೆಯುವಲ್ಲಿ, ಮಹಾರಾಷ್ಟ್ರದ ಕೊಲ್ಹಾಪುರ ತಾಲ್ಲೂಕಿನ ಕನೇರಿ ಮಠದ ಸಿದ್ಧಗಿರಿ ಆಸ್ಪತ್ರೆ ಹಾಗೂ ಸಂಶೋಧನಾ ಕೇಂದ್ರದ ವೈದ್ಯರು ಯಶಸ್ವಿಯಾಗಿದ್ದಾರೆ. 49 ವರ್ಷ ವಯಸ್ಸಿನ ಮಹಿಳೆಯ ಮಿದುಳಿಗೆ ರಕ್ತ ಪೂರೈಸುವ ಪ್ರಮುಖ ನಾಳದಲ್ಲಿ ಈ ಗಂಟು ಬೆಳೆದಿತ್ತು. ಹೃದಯದಿಂದ ಪಂಪ್ ಆಗಿ ಚಿಮ್ಮುವ ರಕ್ತವು ಮಿದುಳಿಗೆ ತಲುಪುತ್ತಿರಲಿಲ್ಲ. ಸಾಮಾನ್ಯವಾಗಿ ಮಿದುಳಿನ ರಕ್ತನಾಳಗಳಲ್ಲಿ 6ರಿಂದ 7 ಮಿ.ಮೀ …
Read More »ಮಹಾನಗರ ಪಾಲಿಕೆಗೆ ಮೇಯರ್, ಉಪ ಮೇಯರ್ ಚುನಾವಣೆಗೆ ನ್ಯಾಯಾಲಯದಲ್ಲಿ ತಡೆ
ಬೆಳಗಾವಿ: ಇಲ್ಲಿನ ಮಹಾನಗರ ಪಾಲಿಕೆಯ ಸಭಾಂಗಣದಲ್ಲಿ ಸೋಮವಾರ ಆಯೋಜಿಸಿದ್ದ ನೂತನ ಸದಸ್ಯರ ಪರಿಚಯಾತ್ಮಕ ಕಾರ್ಯಕ್ರಮವು, ಸಮಸ್ಯೆಗಳನ್ನು ಹೇಳಿಕೊಳ್ಳುವ ಸಭೆಯಾಗಿ ಮಾರ್ಪಟ್ಟಿತು. ಮಹಾನಗರ ಪಾಲಿಕೆಗೆ ಸದಸ್ಯರು ಆಯ್ಕೆಗೊಂಡು 10 ತಿಂಗಳಾಗಿದೆ. ಆದರೆ, ಮೇಯರ್, ಉಪ ಮೇಯರ್ ಚುನಾವಣೆಗೆ ನ್ಯಾಯಾಲಯದಲ್ಲಿ ತಡೆಬಿದ್ದಿದೆ. ಹೀಗಾಗಿ, ಇದೂವರೆಗೂ ಪಾಲಿಕೆ ಸದಸ್ಯರು ಪ್ರಮಾನ ವಚನ ಸ್ವೀಕರಿಸಿಲ್ಲ. ಹೀಗಾಗಿ, ತವು ಜನರಿಂದ ಆಯ್ಕೆಯಾಗಿದ್ದರೂ ಅವರ ಸಮಸ್ಯೆಗೆ ಸ್ಪಂದಿಸಲು ಆಗುತ್ತಿಲ್ಲ ಎಂದು ಬಹುಪಾಲು ಸದಸ್ಯರು ಗೋಳು ಹೇಳಿಕೊಂಡರು. ಕೆಎಂಸಿ ಕಾಯ್ದೆ ಪ್ರಕಾರ …
Read More »