Breaking News

ಬೆಳಗಾವಿ

ಬೆಳಗಾವಿ: 8 ವರ್ಷಗಳಿಂದ ಡಯಟ್‌ನಲ್ಲಿ ಶೂನ್ಯ ಪ್ರವೇಶಾತಿ

ಬೆಳಗಾವಿ: ತಾಲ್ಲೂಕಿನ ಮಣ್ಣೂರಿನಲ್ಲಿರುವ ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆಯಲ್ಲಿ (ಡಯಟ್‌) ಕಳೆದ ಎಂಟು ವರ್ಷಗಳಿಂದ ಡಿ.ಇಡಿ ಕೋರ್ಸ್‌ಗೆ ಒಬ್ಬರೂ ಪ್ರವೇಶ ಪಡೆದಿಲ್ಲ. 2022-23ನೇ ಸಾಲಿನ ಪ್ರವೇಶ ಪ್ರಕ್ರಿಯೆ ಆರಂಭವಾಗಲಿದ್ದು, ಈ ಬಾರಿಯೂ ‍ಪ್ರಶಿಕ್ಷಣಾರ್ಥಿಗಳು ಪ್ರವೇಶ ಪಡೆಯುವುದು ಅನುಮಾನ.   1994-95ರಲ್ಲಿ ಮಣ್ಣೂರಿನಲ್ಲಿ ಡಯಟ್‌ ತಲೆಎತ್ತಿದೆ. ನಿಯಮಿತವಾಗಿ ಪ‍್ರಾಥಮಿಕ ಶಾಲಾ ಶಿಕ್ಷಕರ ನೇಮಕಾತಿ ನಡೆದಿದ್ದರಿಂದ ಇದಕ್ಕೆ ಹೆಚ್ಚಿನ ಬೇಡಿಕೆ ಬಂದಿತ್ತು. 2011-12ನೇ ಸಾಲಿನವರೆಗೂ ಇಲ್ಲಿ ಪ್ರವೇಶ ಗಿಟ್ಟಿಸಿಕೊಳ್ಳಲು ಹರಸಾಹಸ ಮಾಡಬೇಕಾಗಿತ್ತು. ವಿವಿಧ …

Read More »

ಹಳ್ಳಿಗಳಿಗೆ ಸಂಪರ್ಕ ಕಲ್ಪಿಸುವ ರಸ್ತೆಗಳು ಎಲ್ಲೆಂದರಲ್ಲಿ ತಗ್ಗು ,ಅಪಾಯಕ್ಕೆ ಆಹ್ವಾನ

ಬೆಳಗಾವಿ: ಮತ್ತೊಂದು ಮಳೆಗಾಲ ಬಂದರೂ ಹಳ್ಳಿಗಳ ಸಂಪರ್ಕ ರಸ್ತೆಗಳು ಮಾತ್ರ ಇನ್ನೂ ದುರಸ್ತಿ ಕಂಡಿಲ್ಲ. ಕಳೆದ ಬಾರಿಯ ಅತಿವೃಷ್ಟಿ ಹಾಗೂ ಪ್ರವಾಹ ಪ್ರಭಾವದಿಂದ ಹಳ್ಳಿಗಳಿಗೆ ಸಂಪರ್ಕ ಕಲ್ಪಿಸುವ ರಸ್ತೆಗಳು ಎಲ್ಲೆಂದರಲ್ಲಿ ತಗ್ಗು ಬಿದ್ದಿದ್ದವು. ಅವುಗಳಲ್ಲಿ ಕೆಲವನ್ನು ತೇಪೆ ಹಚ್ಚಿ ದುರಸ್ತಿ ಮಾಡಲಾಗಿದೆ. ಮತ್ತೆ ಕೆಲವು ಇನ್ನೂ ಹಾಗೇ ಇವೆ. ಹೀಗಾಗಿ, ಹಳ್ಳಿ ಮತ್ತು ನಗರಗಳ ಮಧ್ಯೆ ಸಂಚಾರ ಕೊಂಡಿಯಾದ ರಸ್ತೆಗಳೇ ಈಗ ಸಂಚಕಾರ ತರುವಂತಾಗಿವೆ. ಅತಿಯಾಗಿ ಮಳೆ ಬಿದ್ದ ಬೆಳಗಾವಿ ತಾಲ್ಲೂಕು, …

Read More »

ಬೆಳಗಾವಿಯಲ್ಲಿ ರುಂಡ ಇಲ್ಲದ ದೇಹ ತೇಲುತ್ತಿರುವುದು ಕಂಡು ಗ್ರಾಮಸ್ಥರು ದಿಗ್ಭ್ರಮೆ

ಬೆಳಗಾವಿ: ತಾಲೂಕಿನ ಮುತಗಾ ಗ್ರಾಮದ ಬಾವಿಯಲ್ಲಿ ರುಂಡ ಇಲ್ಲದ ದೇಹ ಪತ್ತೆಯಾಗಿ ಆತಂಕಕ್ಕೆ ಕಾರಣವಾಗಿದ್ದು, ಮಂಗಳವಾರ ದೇಹ ತೇಲುತ್ತಿರುವುದು ಕಂಡು ಗ್ರಾಮಸ್ಥರು ದಿಗ್ಭ್ರಮೆಯಾಗಿದ್ದಾರೆ. ಸುಮಾರು 30 ವರ್ಷದ ಯುವಕನನ್ನು ಶಿರಚ್ಛೇದ ಮಾಡಿ ಕೊಲೆಗೈದು ರುಂಡ ಬೇರ್ಪಡಿಸಿ ದೇಹವನ್ನು ದುಷ್ಕರ್ಮಿಗಳು ಬಾವಿಯಲ್ಲಿ ಎಸೆದು ಹೋಗಿದ್ದಾರೆ. ಬೆಳಗ್ಗೆ ಹೊಲಕ್ಕೆ ಹೋದ ಗ್ರಾಮಸ್ಥರು ಇದನ್ನು ಕಂಡು ಆತಂಕಗೊಂಡಿದ್ದಾರೆ.   ತಾಲೂಕು ಪಂಚಾಯಿತಿ ಮಾಜಿ ಸದಸ್ಯ ಸುನೀಲ ಅಷ್ಟೇಕರ ಎಂಬವರ ಹೊಲದ ಬಾವಿಯಲ್ಲಿ ರುಂಡ ಇಲ್ಲದ …

Read More »

ಯಮಕನಮರಡಿ ಮತಕ್ಷೇತ್ರದಲ್ಲಿ ಜೀವನ ಯೋಜನೆ ಅಂಗನವಾಡಿ ಶಾಲಾ ಕೊಠಡಿಯನ್ನು ಸತೀಶ್ ಜಾರಕಿಹೊಳಿಯವರು ಉದ್ಘಾಟನೆ ಮಾಡಿದ

ದಿನಾಂಕ 04-07-2022 ರಂದು ಕಲ್ಯಾಣ ಕರ್ನಾಟಕ ಕನಸುಗಾರ ಕೆಪಿಸಿಸಿ ಕಾರ್ಯಾಧ್ಯಕ್ಷರು ಜನಪ್ರಿಯ ಯಮಕನಮರಡಿ ಶಾಸಕರಾದ ಶ್ರೀ ಸತೀಶ್ ಅಣ್ಣಾ ಜಾರಕಿಹೊಳಿಯವರು ಅವರ ಶಾಸಕ ಅನುದಾನದಲ್ಲಿ ಯಮಕನಮರಡಿ ಮತಕ್ಷೇತ್ರದಲ್ಲಿ ಬರುವ ರಾಮದುರ್ಗ (ಉಕ್ಕಡ) ಗ್ರಾಮದಲ್ಲಿ ಜಲ ಜೀವನ ಯೋಜನೆ ಒಟ್ಟು 54 ಲಕ್ಷ ಕಾಮಗಾರಿಗೆ ಗುದ್ದಲಿ ಪೂಜೆ ಮಾಡಿ ನಂತರ 16 ಲಕ್ಷದ ಅವರ ಅನುದಾನದಲ್ಲಿ ನಿರ್ಮಾಣಗೊಂಡ ನೂತನ ಅಂಗನವಾಡಿ ಶಾಲಾ ಕೊಠಡಿಯನ್ನು ಉದ್ಘಾಟನೆ ಮಾಡಿದರು ಈ ಸಂದರ್ಭದಲ್ಲಿ ಕಾಂಗ್ರೆಸ್ ಮುಖಂಡರು …

Read More »

ಲಕ್ಷ್ಮೀ ತಾಯಿ ಫೌಂಡೇಶನ್ ವತಿಯಿಂದ 30 ಡೆಸ್ಕ್ ಗಳನ್ನು ವಿತರಿಸಿದರ ಚನ್ನರಾಜ ಹಟ್ಟಿಹೊಳಿ

ಬೆಳಗಾವಿ: ನಗರ ಪ್ರದೇಶದ ಶೈಕ್ಷಣಿಕ ವ್ಯವಸ್ಥೆಗೆ ಸರಿಸಮಾನ ಸೌಕರ್ಯಗಳನ್ನು ಗ್ರಾಮೀಣ ಭಾಗದ ಶಾಲೆಗಳೂ ಹೊಂದಿದಾಗ ವಿದ್ಯಾರ್ಥಿಗಳಲ್ಲಿ ಕೀಳರಿಮೆ ಹೋಗಿ ಸ್ಪರ್ಧಾತ್ಮಕ ಮನೋಭಾವ ಹೆಚ್ಚುತ್ತದೆ ಎಂದು ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಹೇಳಿದರು. ಬೆಳಗಾವಿ ಗ್ರಾಮೀಣ ಕ್ಷೇತ್ರದ ಹಿರೇಬಾಗೇವಾಡಿ ಗ್ರಾಮದ ಸರ್ಕಾರಿ ಉರ್ದು ಪ್ರಾಥಮಿಕ ಶಾಲೆಗೆ ಲಕ್ಷ್ಮೀ ತಾಯಿ ಫೌಂಡೇಶನ್ ವತಿಯಿಂದ 30 ಡೆಸ್ಕ್ ಗಳನ್ನು ವಿತರಿಸಿ ಅವರು ಮಾತನಾಡಿದರು. ಆಧುನಿಕ ಯುಗದಲ್ಲಿ ಶೈಕ್ಷಣಿಕ ವ್ಯವಸ್ಥೆಗಳನ್ನು ಸಬಲೀಕರಿಸಬೇಕಾದುದು ಅತ್ಯಗತ್ಯ. ಈ …

Read More »

ಜನವರಿ ನಂತರ ಸವದತ್ತಿಯಲ್ಲಿ ಯಾರು ಸ್ಪರ್ಧಿಸುತ್ತಾರೆ ಎಂಬ ಬಗ್ಗೆ ಸ್ಪಷ್ಟ ನಿರ್ಧಾರ: ಸತೀಶ ಜಾರಕಿಹೊಳಿ

ಸವದತ್ತಿಯಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಸ್ಪರ್ಧೆ ಬಗ್ಗೆ ಹೇಳಲು ಆಗಲ್ಲ. ಜನವರಿ ನಂತರ ಯಾರು ಸ್ಪರ್ಧೆ ಮಾಡುತ್ತಾರೆ ಎಂಬುದು ಸ್ಪಷ್ಟವಾಗಲಿದೆ. ಜನವರಿ ನಂತರ ರಾಜ್ಯದಲ್ಲಿ ಬದಲಾವಣೆ ಪರ್ವ ಆರಂಭವಾಗಲಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಹೊಸ ಬಾಂಬ್ ಸಿಡಿಸಿದ್ದಾರೆ. ಬೆಳಗಾವಿಯ ಡಿಸಿ ಕಚೇರಿ ಬಳಿ ಮಾಧ್ಯಮಗಳ ಜೊತೆಗೆ ಮಾತನಾಡಿದ ಸತೀಶ ಜಾರಕಿಹೊಳಿ ಸವದತ್ತಿಯಲ್ಲಿ ಯಾವುದೇ ಗೊಂದಲ ಇಲ್ಲ, ಎಲ್ಲಾ ಕ್ಲಿಯರ್ ಇದೆ. ಸವದತ್ತಿಯಲ್ಲಿ ಗ್ರೌಂಡ್ ಸಿದ್ಧಪಡಿಸುತ್ತಿದ್ದೇವೆ. ಸ್ಥಳೀಯರು ಮತ್ತು …

Read More »

51.46 ಲಕ್ಷ ರೂಗಳ ಸಮುದಾಯ ಭವನ ಕಾಮಗಾರಿಗೆ ಶಾಸಕ ಕುಮಠಳ್ಳಿ ಚಾಲನೆ

ಯಾವುದೇ ಒಂದು ಕೆಲಸದ ಹಿಂದೆ ಹಲವಾರು ಜನರ ಪ್ರತ್ಯಕ್ಷ, ಅಪ್ರತ್ಯಕ್ಷ ಶ್ರಮವು ಇರುತ್ತದೆ, ಎಲ್ಲರ ಶ್ರಮದಿಂದ ಯಲಿಹಡಲಗಿ ಗ್ರಾಮದಲ್ಲಿ ಆದಿಬಣಜಿಗ ಸಮಾಜದ ಈ ಬೃಹತ್ ಸಮುದಾಯ ಭವನ ನಿರ್ಮಾಣವಾಗುತ್ತಿರುವುದು ಹೆಮ್ಮೆಯ ವಿಷಯ ಎಂದು ಅಥಣಿ ಶಾಸಕ ಮಹೇಶ ಕುಮಠಳ್ಳಿ ಅವರು ಹೇಳಿದರು. ಅವರು ತಾಲೂಕಿನ ಯಲಿಹಡಲಗಿ ಗ್ರಾಮದಲ್ಲಿ ಸುಮಾರು 51.46 ಲಕ್ಷ ರೂಗಳ ಆದಿ ಬಣಜಿಗ ಸಮಾಜದ ಸಮುದಾಯ ಭವನದ ಭೂಮಿಪೂಜೆಯನ್ನು ನೆರವೇರಿಸಿ ಮಾತನಾಡುತ್ತಾ ಆದಿ ಬಣಜಿಗ ಸಮಾಜದ ಜೊತೆ …

Read More »

ರಾಮದುರ್ಗ ಪಟ್ಟಣದ ಹಳೇ ಬಸ್ ನಿಲ್ದಾಣದಲ್ಲಿಕೊಠಡಿಗೆ ನುಗ್ಗಿ ನಿಯಂತ್ರಣಾಧಿಕಾರಿ ಮೇಲೆ ಹಲ್ಲೆ

ಬೆಳಗಾವಿ: ಬಸ್ ನಿಲ್ದಾಣದ ನಿಯಂತ್ರಣಾಧಿಕಾರಿ ಕೊಠಡಿಗೆ ನುಗ್ಗಿದ ಪ್ರಯಾಣಿಕನೊಬ್ಬ ಬಸ್ ಸಂಚಾರ ನಿಯಂತ್ರಣಾಧಿಕಾರಿ ಮೇಲೆ ಹಲ್ಲೆ ನಡೆಸಿ ಕರ್ತವ್ಯಕ್ಕೆ ಅಡ್ಡಿಪಡಿಸಿದ ಘಟನೆ ಬೆಳಗಾವಿ ಜಿಲ್ಲೆಯ ರಾಮದುರ್ಗ ಪಟ್ಟಣದ ಹಳೇ ಬಸ್ ನಿಲ್ದಾಣದಲ್ಲಿ ನಡೆದಿದೆ. ಬಸ್ ವಿಚಾರಣೆ ವಿಷಯಕ್ಕೆ ಸಂಬಂಧಿಸಿದಂತೆ ಅಧಿಕಾರಿ ಮತ್ತು ಪ್ರಯಾಣಿಕನ ನಡುವೆ ಮಾತಿನ ಚಕಮಕಿ‌ ನಡೆದಿದೆ. ಬಳಿಕ ಗಲಾಟೆ ವಿಕೋಪಕ್ಕೆ ತಿರುಗಿ ಅಧಿಕಾರಿ ಮತ್ತು ಪ್ರಯಾಣಿಕ ಒಬ್ಬರ ಮೇಲೊಬ್ಬರು ಹಲ್ಲೆ ಮಾಡಿದ್ದಾರೆ. ಈ ವೇಳೆ ಸ್ಥಳದಲ್ಲಿದ್ದ ಸಾರಿಗೆ …

Read More »

ಬೆಳಗಾವಿ ಅತೀ ದೊಡ್ಡ ಜಿಲ್ಲೆಯಾಗಿರೋದರಿಂದ ನನಗೆ ಇಲ್ಲಿ ಸೇವೆ ಮಾಡಿದ್ದು ತೃಪ್ತಿ: S,P,ಲಕ್ಷ್ಮಣ್ ನಿಂಬರಗಿ

ಬೆಳಗಾವಿಯಲ್ಲಿ ನಿರ್ವಹಿಸಿದ ಸೇವೆ ನನಗೆ ನಿಜಕ್ಕೂ ಸಂತೋಷವನ್ನು ತಂದಿದೆ. ಈ ವೇಳೆ ಕಾನೂನು ಸುವ್ಯವಸ್ಥೆಯನ್ನು ಕಾಪಾಡುವ ನಿಟ್ಟಿನಲ್ಲಿ ಸಹಕರಿಸಿದ ಎಲ್ಲರಿಗೂ ವಿಶೇಷವಾಗಿ ಧನ್ಯವಾದಗಳನ್ನು ಸಲ್ಲಿಸುತ್ತೇನೆ ಎಂದು ಬೆಳಗಾವಿ ನಿರ್ಗಮಿತ ಎಸ್‍ಪಿ ಲಕ್ಷ್ಮಣ್ ನಿಂಬರಗಿ ಹೇಳಿದ್ದಾರೆ. ಬೆಳಗಾವಿಯಿಂದ ವರ್ಗಾವಣೆಗೊಂಡ ಎಸ್‍ಪಿ ಲಕ್ಷ್ಮಣ್ ನಿಂಬರಗಿ ನೂತನ ಎಸ್‍ಪಿಯಾಗಿ ಅಧಿಕಾರ ಸ್ವೀಕಾರ ಮಾಡಿದ ಡಾ. ಸಂಜೀವ್ ಪಾಟೀಲ್‍ಗೆ ಅಧಿಕಾರ ಹಸ್ತಾಂತರ ಮಾಡಿದರು. ಈ ವೇಳೆ ಮಾಧ್ಯಮಗಳನ್ನು ಉದ್ದೇಶಿಸಿ ಮಾತನಾಡಿದ ಅವರು, ಕಳೆದ ಮೂರು ವರ್ಷಗಳಿಂದ …

Read More »

ನೂತನ ಬೆಳಗಾವಿ ಎಸ್‍ಪಿ ಡಾ.ಸಂಜೀವ್ ಪಾಟೀಲ್ ರಿಗೆ ಅಧಿಕಾರ ಹಸ್ತಾಂತರಿಸಿದರ ಲಕ್ಷ್ಮಣ ನಿಂಬರಗಿ

ನೂತನ ಬೆಳಗಾವಿ ಎಸ್‍ಪಿ ಡಾ.ಸಂಜೀವ್ ಪಾಟೀಲ್ ಅವರಿಗೆ ನಿರ್ಗಮಿತ ಎಸ್‍ಪಿ ಲಕ್ಷ್ಮಣ ನಿಂಬರಗಿ ಅಧಿಕಾರ ಹಸ್ತಾಂತರಿಸಿದರು. ಹೌದು ನಾಲ್ಕು ದಿನಗಳ ಹಿಂದೆ ಡಾ.ಸಂಜೀವ್ ಪಾಟೀಲ ಅವರನ್ನು ಬೆಳಗಾವಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯನ್ನಾಗಿ ರಾಜ್ಯ ಸರ್ಕಾರ ನೇಮಕ ಮಾಡಿ ಆದೇಶ ಹೊರಡಿಸಿತ್ತು. ಹೀಗಾಗಿ ನಿಕಟಪೂರ್ವ ಎಸ್‍ಪಿ ಲಕ್ಷ್ಮಣ ನಿಂಬರಗಿ ಅವರು ನೂತನ ಎಸ್‍ಪಿ ಡಾ.ಸಂಜೀವ್ ಪಾಟೀಲ್ ಅವರಿಗೆ ಹೂಗುಚ್ಛ ನೀಡಿ ಅಧಿಕಾರ ಹಸ್ತಾಂತರಿಸಿದರು. ಬೆಂಗಳೂರು ಪಶ್ಚಿಮ ಡಿಸಿಪಿ ಆಗಿದ್ದ ಡಾ. ಸಂಜೀವ್ …

Read More »