ಅಪ್ಪಂದಿರ ದಿನಾಚರಣೆ ನಿಮಿತ್ತ ನನ್ನದೊಂದು ಅನಿಸಿಕೆ.. ಅಪ್ಪ ಎಂದರೆ ರಕ್ಷಣೆ, ಅಮ್ಮ ಎಂದರೆ ವ್ಯಾತ್ಸಲ್ಯ ಎಂದೇ ವ್ಯಾಖ್ಯಾನಿಸಲಾಗುವ ಈ ಸಂಬಂಧದ ಬಗ್ಗೆ ಹೇಳುವುದು ಕಷ್ಟವಾದರೂ ಪ್ರತಿ ಮಗು ಅಪ್ಪನೊಂದಿಗೆ ಹೊಂದಿರುವ ಬಾಂಧವ್ಯವನ್ನು ಅನುಭವಕ್ಕೆ ಮಾತ್ರ ನಿಲುಕುವಂತದ್ದು. ಅಮ್ಮ ಎಂಬ ಪದಕ್ಕಿರುವಷ್ಟೇ ಅನಂತ ವಿಸ್ತಾರ ಅಪ್ಪನೆಂಬ ಪದಕ್ಕೂ ಇದೆ. ಅಪ್ಪನೆಂದರೆ ವಿಶ್ವಾಸ, ಭರವಸೆ. ಜೀವ ಕೊಟ್ಟು, ಜೀವನ ರೂಪಿಸಿದ ಅಪ್ಪ – ಅಮ್ಮಂದಿರ ದಿನ ಒಂದು ದಿನಕ್ಕೆ ಸೀಮಿತವಲ್ಲ. ಈ ಜಗತ್ತು …
Read More »ಬೆಳಗಾವಿಯ ಈ ಏರಿಯಾ ಗಳಲ್ಲಿ ನಾಳೆ ಪವರ್ ಕಟ್
ಬೆಳಗಾವಿಯ 110 ಕೆವಿ ಸುವರ್ಣಸೌಧ ಉಪಕೇಂದ್ರದಲ್ಲಿ ಮೊದಲ ತ್ರೈಮಾಸಿಕ ಹಾಗೀ ಇತರೆ ನಿರ್ವಹನಾ ಕಾರ್ಯಗಳು ನಡೆದಿರುವುದರಿಂದ ಇಲ್ಲಿಂದ ಹೊರಡುವ ಪ್ರದೇಶಗಳಲ್ಲಿ ಭಾನುವಾರ ವಿದ್ಯುತ್ ವ್ಯತ್ಯಯವಾಗಲಿದೆ. ಬೆಳಗಾವಿಯ 110 ಕೆವಿ ಸುವರ್ಣಸೌಧ ಉಪಕೇಂದ್ರದಲ್ಲಿ ಮೊದಲ ತ್ರೈಮಾಸಿಕಹಾಗೂ ಇತರೆ ಕೆಲಸಗಳನ್ನು ನಿರ್ವಹಿಸುವ ಪ್ರಯುಕ್ತ ಸದರಿ ವಿದ್ಯುತ್ ಸ್ಥಿರೀಕರಣ ಕೇಂದ್ರದಿಂದ ವಿದ್ಯುತ್ ಸರಬರಾಜು ಆಗುವ ಸ್ಥಳಗಳಲ್ಲಿ ರವಿವಾರ ದಿನಾಂಕ 19 ಜೂನ್ 2022 ರಂದು ಮುಂಜಾನೆ 9 ಗಂಟೆಯಿಂದ ಸಾಯಂಕಾಲ 5ಗಂಟೆಯ ವರೆಗೆ ವಿದ್ಯುತ್ …
Read More »ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಮೂಡಲಗಿಯ ಭೈರನಟ್ಟಿ ಗ್ರಾಮದಲ್ಲಿ
ಬೆಳಗಾವಿ ನೂತನ ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಅವರು ಜಿಲ್ಲೆಯ ಹೊಸ ತಾಲ್ಲೂಕು ಮೂಡಲಗಿಯ ಭೈರನಟ್ಟಿ ಗ್ರಾಮದಲ್ಲಿ ತಮ್ಮ ಮೊದಲ “ಜಿಲ್ಲಾಧಿಕಾರಿ ನಡೆ ಹಳ್ಳಿಯ ಕಡೆ” ಕಾರ್ಯಕ್ರಮ ನಡೆಸುವ ಮೂಲಕ ಜನರ ಸಮಸ್ಯೆಗಳನ್ನು ಸ್ಥಳದಲ್ಲಿಯೇ ಬಗೆಹರಿಸುವ ಪ್ರಯತ್ನ ನಡೆಸಿದರು. ಹೊಸ ತಾಲ್ಲೂಕಿನ ಸಮಸ್ಯೆಗಳನ್ನು ಅರಿತುಕೊಳ್ಳುವ ನಿಟ್ಟಿನಲ್ಲಿ ತಮ್ಮ ಮೊದಲ ಗ್ರಾಮ ವಾಸ್ತವ್ಯ ಕಾರ್ಯಕ್ರಮಕ್ಕಾಗಿ ಮೂಡಲಗಿ ತಾಲ್ಲೂಕಿನ ಭೈರನಟ್ಟಿ ಗ್ರಾಮವನ್ನು ಆಯ್ಕೆ ಮಾಡಿಕೊಂಡಿರುವುದಾಗಿ ಜಿಲ್ಲಾಧಿಕಾರಿ ನಿತೇಶ್ ಪಾಟೀಲ ತಿಳಿಸಿದರು. ಆಡಳಿತವನ್ನು ಜನರ ಮನೆಬಾಗಿಲಿಗೆ …
Read More »ಮೂಡಲಗಿ ತಾಲೂಕು ಭೂಮಿ ಶಾಖೆಯನ್ನು ಉದ್ಘಾಟಿಸಿದ ಕೆಎಮ್‌ಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ
*ಮೂಡಲಗಿ:* ಮೂಡಲಗಿ ತಾಲೂಕಿನ ರೈತರ ಮತ್ತು ಜನಸಾಮಾನ್ಯರ ಅನುಕೂಲಕ್ಕಾಗಿ ಮೂಡಲಗಿಯಲ್ಲಿ ಹೊಸದಾಗಿ ಭೂಮಿ ಶಾಖೆಯನ್ನು ಆರಂಭಿಸಲಾಗಿದೆ ಎಂದು ಕೆಎಮ್‌ಎಫ್ ಅಧ್ಯಕ್ಷ ಹಾಗೂ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ತಿಳಿಸಿದರು. ಶನಿವಾರದಂದು ಪಟ್ಟಣದ ತಹಶೀಲ್ದಾರ ಕಛೇರಿಯಲ್ಲಿ ನೂತನವಾಗಿ ಮೂಡಲಗಿ ತಾಲೂಕಿನ ಭೂಮಿ ಶಾಖೆಯನ್ನು ಉದ್ಘಾಟಿಸಿ ಮಾತನಾಡಿದ ಅವರು, ಗೋಕಾಕ ತಾಲೂಕಿನಲ್ಲಿದ್ದ ಭೂಮಿ ಶಾಖೆಯನ್ನು ಬೇರ್ಪಡಿಸಿ ಮೂಡಲಗಿ ಹೊಸ ತಾಲೂಕಿಗೆ ಭೂಮಿ ಶಾಖೆಯನ್ನು ತೆರೆದಿದ್ದು, ಮೂಡಲಗಿ ತಾಲೂಕಿನ …
Read More »ಮಳೆ ನೀರು ತೆರವು: ದರ್ಶನಕ್ಕೆ ಅವಕಾಶ
(ಬೆಳಗಾವಿ ಜಿಲ್ಲೆ): ಇಲ್ಲಿನ ಯಲ್ಲಮ್ಮನ ಗುಡ್ಡದಲ್ಲಿ ದೇವಸ್ಥಾನದೊಳಕ್ಕೆ ನುಗ್ಗಿದ್ದ ಮಳೆ ನೀರನ್ನು ಹೊರಹಾಕಿ ಶುಚಿಗೊಳಿಸಲಾಗಿದ್ದು ಶುಕ್ರವಾರ ಭಕ್ತರು ಎಂದಿನಂತೆ ದೇವಿಯ ದರ್ಶನ ಪಡೆದರು. ಗುರುವಾರ ಸಂಜೆ ಸುರಿದ ಧಾರಾ ಕಾರ ಮಳೆಯಿಂದಾಗಿ ಸುತ್ತಲಿನ ಗುಡ್ಡದ ಪ್ರದೇಶದಿಂದ ಅಪಾರ ಪ್ರಮಾಣದ ನೀರು ಹರಿದುಬಂದಿತ್ತು. ಚರಂಡಿಗಳಲ್ಲಿ ಹೂಳು ತುಂಬಿದ್ದರಿಂದ ನೀರು ದೇವಸ್ಥಾನದ ಪ್ರಾಂಗಣಕ್ಕೆ ನುಗ್ಗಿತ್ತು. ಇದರಿಂದ ಭಕ್ತರು ಪರದಾಡಿದ್ದರು. ಎಚ್ಚೆತ್ತುಕೊಂಡ ಅಧಿಕಾರಿಗಳು ರಾತ್ರಿಯೇ ಚರಂಡಿ ಸ್ವಚ್ಛಗೊಳಿಸಿ, ನೀರು ಹರಿದು ಹೋಗಲು ಅನುವು ಮಾಡಿದರು. ನಸುಕಿನಿಂದಲೇ …
Read More »ಖಾನಾಪೂರ ತಾಲೂಕಿನ ಮದುವೆಯಾದ ಏಳೇ ದಿನಕ್ಕೆ ಯುವಕ ನೇಣು ಬಿಗಿದುಕೊಂಡು ಆತ್ಮಹತ್ಯೆ
ಬೆಳಗಾವಿ: ಮದುವೆಯಾದ ಏಳೇ ದಿನಕ್ಕೆ ಯುವಕ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಖಾನಾಪೂರ ತಾಲೂಕಿನ ಲಕ್ಕೇಬೈಲ್ ಗ್ರಾಮದಲ್ಲಿ ನಡೆದಿದೆ. ಖಾನಾಪೂರ ತಾಲೂಕಿನ ಲಕ್ಕೇಬೈಲ್ ಗ್ರಾಮದ ದೇಮಪ್ಪ ಅರ್ಜುನ್ ಸನದಿ (23) ಮೃತ ಯುವಕ. ಮೃತ ದೇಮಪ್ಪ ಕಳೆದ ವಾರವಷ್ಟೇ ತನ್ನ ಸೋದರತ್ತೆಯ ಮಗಳನ್ನು ಮದುವೆಯಾಗಿದ್ದನು. ತನ್ನ ಸಂಬಂಧಿಕರ ಮನೆಗೆ ಹೋಗಿ ರಾತ್ರಿ ಮನೆಗೆ ಮರಳಿದ್ದ ಬಳಿಕ ಮಧ್ಯರಾತ್ರಿ ಮಲಗುವ ಕೊಠಡಿಯಲ್ಲಿ ನೇಣು ಹಾಕಿಕೊಂಡು ಸಾವಿಗೆ ಶರಣಾಗಿದ್ದಾನೆ. ಘಟನೆಯ ಸುದ್ದಿ ತಿಳಿಯುತ್ತಿದ್ದಂತೆ …
Read More »ಕೌಜಲಗಿಯಲ್ಲಿಂದು ಜರುಗಿದ ಗೋಕಾಕ್ ಹಾಗೂ ಮೂಡಲಗಿ ತಾಲ್ಲೂಕು ಮಟ್ಟದ ಅಧಿಕಾರಿಗಳ ಸಭೆ ನಡೆಸಿದ ಬಾಲಚಂದ್ರ ಜಾರಕಿಹೊಳಿ*
ಗೋಕಾಕ್- 2019ಮತ್ತು 2021ನೇ ಸಾಲಿನ ನೆರೆ ಸಂತ್ರಸ್ತರ ಕೆಲವು ಮನೆಗಳು ಬ್ಲಾಕ್ ಆಗುತ್ತಿದ್ದು, ಅಂತಹ ಮನೆಗಳ ಬ್ಲಾಕ್ ತೆರವುಗೊಳಿಸಿ ಸಂತ್ರಸ್ತರಿಗೆ ಅನುಕೂಲ ಕಲ್ಪಿಸಿಕೊಡುವಂತೆ ಕೆಎಂಎಫ್ ಅಧ್ಯಕ್ಷ ಮತ್ತು ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಅಧಿಕಾರಿಗಳಿಗೆ ಸೂಚಿಸಿದರು. ಶುಕ್ರವಾರ ಸಂಜೆ ತಾಲೂಕಿನ ಕೌಜಲಗಿಯ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಜರುಗಿದ ಮೂಡಲಗಿ ಮತ್ತು ಗೋಕಾಕ್ ತಾಲ್ಲೂಕು ಮಟ್ಟದ ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಜನರ ಅಹವಾಲುಗಳಿಗೆ ಸ್ಪಂದಿಸಿ …
Read More »ಬೆಳಗಾವಿ ವಕೀಲರ ಹೋರಾಟಕ್ಕೆ ಮಣಿದ ಸರ್ಕಾರ: ರಾಜ್ಯ ಗ್ರಾಹಕರ ಆಯೋಗ ಪೀಠ ಸ್ಥಾಪನೆಗೆ ಆದೇಶ
ಕರ್ನಾಟಕ ರಾಜ್ಯ ಗ್ರಾಹಕರ ಆಯೋಗದ ಪೀಠವನ್ನು ಬೆಳಗಾವಿಯಲ್ಲಿ ಶೀಘ್ರವೇ ಪ್ರಾರಂಭಿಸುವಂತೆ ಆಗ್ರಹಿಸಿ ಬೆಳಗಾವಿಯ ನ್ಯಾಯವಾದಿಗಳು ನಡೆಸಿದ ಉಪವಾಸ ಸತ್ಯಾಗ್ರಹಕ್ಕೆ ಕೊನೆಗೂ ರಾಜ್ಯ ಸರ್ಕಾರ ಮಣಿದಿದೆ. ಬೆಳಗಾವಿಯಲ್ಲಿ ಪೀಠ ಆರಂಭಿಸಲು ಆದೇಶ ಹೊರಡಿಸಿದೆ. ಹೌದು ಬೆಳಗಾವಿಯಲ್ಲಿ ರಾಜ್ಯ ಗ್ರಾಹಕರ ಆಯೋಗದ ಪೀಠವನ್ನು ಆರಂಭಿಸುವಂತೆ ಆಗ್ರಹಿಸಿ ಬೆಳಗಾವಿಯ ನ್ಯಾಯವಾದಿಗಳು ಉಪವಾಸ ಸತ್ಯಾಗ್ರಹ ಹಮ್ಮಿಕೊಂಡಿದ್ದರು. ನಮ್ಮ ಬೇಡಿಕೆ ಈಡೇರುವವರೆಗೂ ಯಾವುದೇ ಕಾರಣಕ್ಕೂ ಪ್ರತಿಭಟನೆ ವಾಪಸ್ಸು ಪಡೆಯೋದಿಲ್ಲ ಎಂದು ಪಟ್ಟು ಹಿಡಿದಿದ್ದರು. ಇದರಿಂದ ಎಚ್ಚೆತ್ತುಕೊಂಡ ರಾಜ್ಯ …
Read More »ಯುವ ಮೋರ್ಚಾ ಬಿಜೆಪಿ ಪಕ್ಷದ ಬೆನ್ನೆಲುಬಾಗಿದ್ದು, ಪಕ್ಷ ಮತ್ತು ಸಮಾಜದ ನಡುವೆ ಸೇತುವೆಯಾಗಿ ಯುವ ಘಟಕದ ಕಾರ್ಯಕರ್ತರು ಕಾರ್ಯ ನಿರ್ವಹಿಸಬೇಕು ಎಂದು ಯುವ ಮೋರ್ಚಾ ರಾಜ್ಯಾಧ್ಯಕ್ಷ ಡಾ.ಸಂದೀಪ್ ಕುಮಾರ್ ಹೇಳಿದರು.
ಯುವ ಮೋರ್ಚಾ ಬಿಜೆಪಿ ಪಕ್ಷದ ಬೆನ್ನೆಲುಬಾಗಿದ್ದು, ಪಕ್ಷ ಮತ್ತು ಸಮಾಜದ ನಡುವೆ ಸೇತುವೆಯಾಗಿ ಯುವ ಘಟಕದ ಕಾರ್ಯಕರ್ತರು ಕಾರ್ಯ ನಿರ್ವಹಿಸಬೇಕು ಎಂದು ಯುವ ಮೋರ್ಚಾ ರಾಜ್ಯಾಧ್ಯಕ್ಷ ಡಾ.ಸಂದೀಪ್ ಕುಮಾರ್ ಹೇಳಿದರು. ಶುಕ್ರವಾರದಂದು ನಗರದ ಸಮುದಾಯ ಭವನದಲ್ಲಿ ಭಾರತೀಯ ಜನತಾ ಪಾರ್ಟಿ ಯುವ ಮೋರ್ಚಾ ಬೆಳಗಾವಿ ವತಿಯಿಂದ ಹಮ್ಮಿಕೊಂಡ ಗ್ರಾಮಾಂತರ ಜಿಲ್ಲಾ ಕಾರ್ಯಕಾರಿಣಿ ಸಭೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು. ತತ್ವ ಸಿದ್ದಾಂತ ಮತ್ತು ಸಂವಿಧಾನದ ಮೌಲ್ಯಗಳನ್ನು ಎತ್ತಿ ಹಿಡಿಯುವ ಕಾರ್ಯವನ್ನು …
Read More »ಸೋನಿಯಾ-ರಾಹುಲ್‌ಗೆ ಸಮನ್ಸ್; ಬೆಳಗಾವಿಯಲ್ಲಿ ಕಾಂಗ್ರೆಸ್ ಬೃಹತ್ ಪ್ರತಿಭಟನೆ
ಬೆಳಗಾವಿ: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಸಾಂವಿಧಾನಿಕ ಸಂಸ್ಥೆಯಾದ ಇಡಿಯನ್ನು ದುರ್ಬಳಕೆ ಮಾಡಿಕೊಂಡು ಕೃತಕವಾಗಿ ಸೃಷ್ಟಿಸಿದ ಕೇಸ್ ನಲ್ಲಿ ತನಿಖೆ ಕೈಗೆತ್ತಿಕೊಂಡು ಕಾಂಗ್ರೆಸ್ ಪಕ್ಷದ ಗೌರವಾನ್ವಿತ ಅಧ್ಯಕ್ಷೆ ಸೋನಿಯಾ ಗಾಂಧಿ ಹಾಗೂ ಭೂತಪೂರ್ವ ಅಧ್ಯಕ್ಷ ರಾಹುಲ್ ಗಾಂಧಿ ಅವರಿಗೆ ಸಮನ್ಸ್ ನೀಡಿ ವಿನಾಕಾರಣ ಕಿರುಕುಳ ನೀಡುತ್ತಿರುವ ಕ್ರಮ ಸರಿಯಲ್ಲ ಎಂದು ಮಾಜಿ ಸಚಿವ ಆರ್. ಬಿ. ತಿಮ್ಮಾಪುರ ಆಕ್ರೋಶ ವ್ಯಕ್ತಪಡಿಸಿದರು. ಬೆಳಗಾವಿ ಗ್ರಾಮೀಣ ಹಾಗೂ ಬೆಳಗಾವಿ ನಗರ …
Read More »