ಕೃಷ್ಣಾ ನದಿಗೆ 4 ಅಡಿಯಷ್ಟು ನೀರು ಏರಿಕೆ ಚಿಕ್ಕೋಡಿ:ಬಿಸಿಲಿನ ಧಗೆ ಹಾಗೂ ನೀರಿನ ಕೊರತೆಯಿಂದಾಗಿ ಬೇಸತ್ತಿದ್ದ ಗಡಿಭಾಗದ ಜನತೆಗೆ ಕೃತ್ತಿಕಾ ಮಳೆ ಕೈ ಹಿಡಿದಿದೆ. ನೆರೆಯ ಮಹಾರಾಷ್ಟ್ರದ ಕೊಲ್ಲಾಪುರ, ಸಾಂಗಲಿ ಮತ್ತು ಸಾತಾರಾ ಜಿಲ್ಲೆಯಲ್ಲಿ ಹಾಗೂ ಚಿಕ್ಕೋಡಿ ಮತ್ತು ನಿಪ್ಪಾಣಿ ತಾಲೂಕಿನಲ್ಲಿ ಸುರಿದ ಮಳೆಯಿಂದಾಗಿ ಗಡಿಯ ಕೃಷ್ಣಾ, ದೂಧಗಂಗಾ ಮತ್ತು ವೇದಗಂಗಾ ನದಿಗಳಿಗೆ 4 ಅಡಿಯಷ್ಟು ನೀರಿನ ಮಟ್ಟ ದಿಢೀರ್ ಏರಿಕೆಯಾಗಿದೆ. ಬರಿದಾಗಿದ್ದ ಕೃಷ್ಣಾ ಮತ್ತು ಉಪ ನದಿಗಳಿಗೆ ಜೀವಕಳೆ …
Read More »ಎಸ್ಸೆಸ್ಸೆಲ್ಸಿ ಪರೀಕ್ಷೆಯ ಮರುಮೌಲ್ಯಮಾಪನ… 624 ಅಂಕಗಳು ಬಂದ ಹಿನ್ನೆಲೆ ಕುಂದಾನಗರಿಯ ಕುವರಿಯ ಹರ್ಷ
ಎಸ್ಸೆಸ್ಸೆಲ್ಸಿ ಪರೀಕ್ಷೆಯ ಮರುಮೌಲ್ಯಮಾಪನ… 624 ಅಂಕಗಳು ಬಂದ ಹಿನ್ನೆಲೆ ಕುಂದಾನಗರಿಯ ಕುವರಿಯ ಹರ್ಷ ಇಷ್ಟವಾದುದ್ದನ್ನೇ ಆಯ್ಕೆ ಮಾಡಿಕೊಂಡು ಸಾಧನೆ ಮಾಡುವಂತೆ ಕರೆ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಬರೆದ್ದಿದ್ದಕ್ಕಿಂತ ಕಡಿಮೆ ಅಂಕಗಳು ಬಂದ ಹಿನ್ನೆಲೆ ಮತ್ತೇ ಮರು ಮೌಲ್ಯಮಾಪನಕ್ಕೆ ಹಾಕಿ 624 ಅಂಕ ಪಡೆದ ಬೆಳಗಾವಿಯ ವಿದ್ಯಾರ್ಥಿನಿ ಸಂತಸವನ್ನು ವ್ಯಕ್ತಪಡಿಸಿದ್ದು, ವಿದ್ಯಾರ್ಥಿಗಳಿಗೆ ಎಲ್ಲ ಕ್ಷೇತ್ರಗಳಲ್ಲಿಯೂ ಅವಕಾಶವಿದೆ. ಬೇರೆಯವರು ಹೇಳಿದ್ದನ್ನು ಆಯ್ಕೆ ಮಾಡಿಕೊಳ್ಳುವ ಬದಲೂ ತಮಗೆ ಇಷ್ಟವಾದುದ್ದನ್ನು ಆಯ್ಕೆ ಮಾಡಿಕೊಂಡು ಸಾಧನೆ ಮಾಡಬೇಕೆಂದು ಕರೆ …
Read More »ಗ್ಯಾರಂಟಿ ಯೋಜನೆಗಳಿಂದ ಅಭಿವೃದ್ಧಿ ಕಾರ್ಯಗಳಿಗೆ ಅನುದಾನದ ಕೊರತೆ:ಬಾಲಚಂದ್ರ ಜಾರಕಿಹೊಳಿ
ಅರಭಾವಿ – ಗ್ಯಾರಂಟಿ ಯೋಜನೆಗಳಿಂದ ಅಭಿವೃದ್ಧಿ ಕಾರ್ಯಗಳಿಗೆ ಅನುದಾನದ ಕೊರತೆ ಉಂಟಾಗುತ್ತಿದ್ದು, ಅರಭಾವಿ ಪಟ್ಟಣದ ಅಭಿವೃದ್ಧಿಗಾಗಿ ನಗರೋತ್ಥಾನ ಯೋಜನೆಯಡಿ ಅನುದಾನ ತರಲು ಪ್ರಯತ್ನ ಮಾಡುವುದಾಗಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಭರವಸೆ ನೀಡಿದರು. ಪಟ್ಟಣದ ಆಂಜನೇಯ ದೇವಸ್ಥಾನದ ಹತ್ತಿರ ಈಚೆಗೆ ಪ.ಜಾ / ಪ.ಪಂ. ಮತ್ತು ಇತರೆ ಬಡ ಜನಾಂಗದವರಿಗೆ ಹೊಲಿಗೆ ಯಂತ್ರಗಳನ್ನು ವಿತರಿಸಿ ಮಾತನಾಡಿದ ಅವರು, ರಾಜ್ಯ ಸರ್ಕಾರವು ತನ್ನ ಪಂಚ ಭಾಗ್ಯಗಳಿಗೆ ಅನುದಾನ ನೀಡುತ್ತಿರುವುದರಿಂದ ನಮ್ಮ ಕ್ಷೇತ್ರದ …
Read More »ಯಾರೇ ತಿಪ್ಪರಲಾಗ ಹಾಕಿದರು ಗೋಕಾಕ ಜಿಲ್ಲೆ ಆಗೇ ಆಗುತ್ತದೆ:ಈರಣ್ಣ ಕಡಾಡಿ
ಘಟಪ್ರಭಾ: ಯಾರೇ ತಿಪ್ಪರಲಾಗ ಹಾಕಿದರು ಮುಂದೊAದು ದಿನ ಗೋಕಾಕ ಜಿಲ್ಲೆ ಆಗೇ ಆಗುತ್ತದೆ ಜಿಲ್ಲಾ ಕೇಂದ್ರದ ಘೋಷಣೆಗೆ ಗೋಕಾಕ ರೋಡ್ ರೈಲು ನಿಲ್ದಾಣ ಹೆಚ್ಚಿನ ಬಲ ತುಂಬಲಿದೆ ಎಂದು ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ಹೇಳಿದರು. ಗುರುವಾರ ಮೇ 22 ರಂದು ಅಮೃತ ಭಾರತ ರೈಲು ನಿಲ್ದಾಣ ಯೋಜನೆಯಡಿ 17 ಕೋಟಿ ರೂ.ಗಳ ವೆಚ್ಚದಲ್ಲಿ ಪುನರಾಭಿವೃದ್ದಿಗೊಂಡ ಗೋಕಾಕ ರೋಡ್ ರೈಲ್ವೆ ನಿಲ್ದಾಣದ ಲೋಕಾರ್ಪಣೆ ಕಾರ್ಯಕ್ರಮವನ್ನು ಜ್ಯೋತಿ ಬೆಳಗಿಸುವ ಮೂಲಕ ಉದ್ಘಾಟಿಸಿ …
Read More »ಪತ್ರಕರ್ತರು ನಿರ್ಭಯ, ನಿರ್ಭೀತೆಯಿಂದ ಕರ್ತವ್ಯ ನಿರ್ವಹಿಸಿ:- ರಾಹುಲ್ ಜಾರಕಿಹೊಳಿ
ಪತ್ರಕರ್ತರು ನಿರ್ಭಯ, ನಿರ್ಭೀತೆಯಿಂದ ಕರ್ತವ್ಯ ನಿರ್ವಹಿಸಿ:- ರಾಹುಲ್ ಜಾರಕಿಹೊಳಿ ಹುಕ್ಕೇರಿ* : ಪ್ರಜಾಪ್ರಭುತ್ವದ ನಾಲ್ಕನೇ ಅಂಗ ಎನಿಸಿರುವ ಪತ್ರಿಕಾರಂಗದಿಂದ ವಾಸ್ತವ ವಿಚಾರಗಳ ಮೇಲೆ ಬೆಳಕು ಚೆಲ್ಲುವ ಕಾರ್ಯವಾಗಬೇಕು. ಈ ನಿಟ್ಟಿನಲ್ಲಿ ಪತ್ರಕರ್ತರು ಸತ್ಯ ಸಂಗತಿಗಳನ್ನು ಹೊರತರುವಲ್ಲಿ ನಿರ್ಭೀತೆಯಿಂದ ಕೆಲಸ ಮಾಡಬೇಕು ಎಂದು ಕೆಪಿಸಿಸಿ ರಾಜ್ಯ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ರಾಹುಲ್ ಜಾರಕಿಹೊಳಿ ಕಿವಿಮಾತು ಹೇಳಿದರು. ಪಟ್ಟಣದ ಹೊರವಲಯದ ಎಸ್.ಎಸ್.ಕನ್ವೆನ್ಷನ್ ಹಾಲ್‌ನಲ್ಲಿ ಗುರುವಾರ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಜಿಲ್ಲಾ …
Read More »ಶಿವಾನುಭವ ಸಮುದಾಯ ಭವನದ ಲೋಕಾರ್ಪಣೆ
ಶಿವಾನುಭವ ಸಮುದಾಯ ಭವನದ ಲೋಕಾರ್ಪಣೆ ವಿಜಯಪುರ ನಗರದ ಶತಮಾನ ಕಂಡ ಶ್ರೀ ಸಿದ್ದೇಶ್ವರ ಸಂಸ್ಥೆಯ ಶಿವಾನುಭವ ಸಮುದಾಯ ಭವನದ ಲೋಕಾರ್ಪಣೆಯು ಹುಬ್ಬಳ್ಳಿಯ ಮೂರುಸಾವಿರ ಮಠದ ಶ್ರೀ ಮನ್ಮಹಾರಾಜ ಜಗದ್ಗುರು ಡಾ.ಗುರುಸಿದ್ಧ ರಾಜಯೋಗೀಂದ್ರ ಸ್ವಾಮೀಜಿಗಳು ಹಾಗೂ ಕೊಪ್ಪಳ ಗವಿಮಠದ ಅಭಿನವ ಗವಿಸಿದ್ದೇಶ್ವರ ಸ್ವಾಮೀಜಿಗಳ ದಿವ್ಯ ಸಾನ್ನಿಧ್ಯದಲ್ಲಿ, ಮಾಜಿ ಕೇಂದ್ರ ಸಚಿವರು, ವಿಜಯಪುರ ನಗರ ಶಾಸಕರು ಹಾಗೂ ಸಿದ್ದೇಶ್ವರ ಸಂಸ್ಥೆ ಅಧ್ಯಕ್ಷ ಬಸನಗೌಡ ಪಾಟೀಲ ಯತ್ನಾಳರವರ ಅಧ್ಯಕ್ಷತೆಯಲ್ಲಿ ಬುಧವಾರ ಸಾಯಂಕಾಲ ಜರುಗಿತು. ಜಿಲ್ಲಾ …
Read More »ಬೆಳಗಾವಿ ಹೊರ ವಲಯದ ರೆಸಾರ್ಟ್ ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ
ಬೆಳಗಾವಿ: ಬಾಲಕಿಯನ್ನು ಪುಸಲಾಯಿಸಿ, ಬೆಳಗಾವಿ ಹೊರವಲಯದ ರೆಸಾರ್ಟ್ ಗೆ ಕರೆದೊಯ್ದ ಮೂವರು ಬಾಲಕರು, ಪಾರ್ಟಿ ಮಾಡಿದ ಬಳಿಕ ಸಾಮೂಹಿಕ ಅತ್ಯಾಚಾರ ಎಸಗಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಘಟನೆಯ ವಿವರ: ಮೇ 6ರಂದು ನಡೆದ ಘಟನೆ ಇದು. ಮೇ 12ರಂದು ಸೋಮವಾರ ಬಾಲಕಿಯ ಪೋಷಕರು ಟಿಳಕವಾಡಿ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ. ಪೊಲೀಸರು ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಕಾನೂನು ಸಂಘರ್ಷಕ್ಕೆ ಒಳಪಟ್ಟ ಮೂವರು ಆರೋಪಿಗಳ ಪೈಕಿ ಇಬ್ಬರನ್ನು ಪೊಲೀಸರು ವಶಕ್ಕೆ ಪಡೆದು …
Read More »ಡ್ನಿ ವೈಫಲ್ಯದಿಂದ ಬಳಲುತ್ತಿರುವ ಬಡ ರೋಗಿಗಳಿಗೆ ಅನುಕೂಲವಾಗಲು ಡಯಾಲಿಸಿಸ್ ಕೇಂದ್ರ:ಬಾಲಚಂದ್ರ ಜಾರಕಿಹೊಳಿ
ಮೂಡಲಗಿ – ಕಿಡ್ನಿ ವೈಫಲ್ಯದಿಂದ ಬಳಲುತ್ತಿರುವ ಬಡ ರೋಗಿಗಳಿಗೆ ಅನುಕೂಲವಾಗಲು ಡಯಾಲಿಸಿಸ್ ಕೇಂದ್ರದ ಸದ್ಭಳಕೆ ಮಾಡಿಕೊಳ್ಳುವಂತೆ ಶಾಸಕ ಮತ್ತು ಜಿಲ್ಲಾ ಹಾಲು ಒಕ್ಕೂಟದ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಹೇಳಿದರು. ಮಂಗಳವಾರದಂದು ಪಟ್ಟಣದ ಸರ್ಕಾರಿ ಆಸ್ಪತ್ರೆಯಲ್ಲಿ ಆರಂಭಿಸಲಾದ ಎರಡು ಹಾಸಿಗೆಯ ಸಾಮರ್ಥ್ಯದ ಹೊಸ ಡಯಾಲಿಸಿಸ್ ಕೇಂದ್ರವನ್ನು ಉದ್ಘಾಟಿಸಿ ಮಾತನಾಡಿದ ಅವರು, ಇದರಿಂದ ಬಡ ರೋಗಿಗಳಿಗೆ ಅನುಕೂಲವಾಗಲಿದೆ ಎಂದು ಅವರು ತಿಳಿಸಿದರು. ಪ್ರತಿ ತಾಲ್ಲೂಕಿಗೆ ರಾಜ್ಯ ಸರ್ಕಾರವು ಕೇಂದ್ರ ಸರ್ಕಾರದ …
Read More »ಬೈಲಹೊಂಗಲ ತಾ.ನವಲಗಟ್ಟಿ ಗ್ರಾಮದ ಶ್ರೀ ಮಾರುತಿ ದೇವಸ್ಥಾನ….
ಬೈಲಹೊಂಗಲ ತಾ.ನವಲಗಟ್ಟಿ ಗ್ರಾಮದ ಶ್ರೀ ಮಾರುತಿ ದೇವಸ್ಥಾನ…. 50 ವರ್ಷಗಳಿಂದ ಬಾಡದ ಹೂ…… ಭಕ್ತಾದಿಗಳಲ್ಲಿ ಮೂಡಿದ ವಿಸ್ಮಯ…… ಸಾಮಾನ್ಯವಾಗಿ ಹೂವುಗಳು ಎರಡು ಅಥವಾ ಮೂರು ದಿನಗಳಲ್ಲಿ ಬಾಡಿ ಹೋಗುವುದನ್ನು ನಾವು ನೋಡಿದ್ದೇವೆ. ಆದರೆ ಸುಮಾರು ಐವತ್ತು ವರ್ಷಗಳ ಹಿಂದಿನ ಹೂವು ಬಾಡದಿರುವುದನ್ನು ಕಂಡು ಗ್ರಾಮಸ್ಥರು ಅಚ್ಚರಿ ಪಡುವಂತಾಗಿದೆ. ಹೌದು ಇಂತಹ ವಿಸ್ಮಯ ಬೈಲಹೊಂಗಲ ತಾಲೂಕಿನ ನಾವಲಗಟ್ಟಿ ಗ್ರಾಮದ ಶ್ರೀ ಮಾರುತಿ ದೇವರ ದೇವಸ್ಥಾನದಲ್ಲಿ ಕಂಡು ಬಂದಿದೆ. ಬಹಳ ಹಳೆಯದಾಗಿರುವ ದೇವಸ್ಥಾನವನ್ನು …
Read More »ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ನೇತೃತ್ವ ಮೂಡಲಗಿಯಲ್ಲಿ ಯಶಸ್ವಿಯಾದ ನೂರು ಮೀಟರ್ ಉದ್ದದ ತಿರಂಗಾ ಯಾತ್ರೆ
ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ನೇತೃತ್ವ ಮೂಡಲಗಿಯಲ್ಲಿ ಯಶಸ್ವಿಯಾದ ನೂರು ಮೀಟರ್ ಉದ್ದದ ತಿರಂಗಾ ಯಾತ್ರೆ ಸೈನಿಕರಿಗೆ ಆತ್ಮ ಸ್ಥೈರ್ಯ ತುಂಬಿದ ಮೂಡಲಗಿ ತಾಲೂಕಿನ ದೇಶ ಪ್ರೇಮಿಗಳು ದೇಶವನ್ನು ಭಯೋತ್ಪಾದಕರಿಂದ ರಕ್ಷಣೆ ಮಾಡುತ್ತಿರುವ ನಮ್ಮ ಸೈನಿಕರಿಗೊಂದು ಸಲಾಂ ಎಂದ ಬಾಲಚಂದ್ರ ಜಾರಕಿಹೊಳಿ ಮೂಡಲಗಿ – ದೇಶದ ಹೆಮ್ಮೆಯ ಸೈನಿಕರಿಗೆ ಶಕ್ತಿ ತುಂಬುವ, ಆಪರೇಷನ್ ಸಿಂಧೂರ ಯಶಸ್ಸಿನ ಹಿನ್ನೆಲೆಯಲ್ಲಿ ಪಟ್ಟಣದಲ್ಲಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ನೇತೃತ್ವದಲ್ಲಿ ಮಂಗಳವಾರದಂದು ತಿರಂಗಾ ಯಾತ್ರೆಯು …
Read More »
Laxmi News 24×7