Breaking News

ಬೆಳಗಾವಿ

ಪ್ರಕಾಶ ಹುಕ್ಕೇರಿ ಗೆಲುವು ಖಚಿತ: ಸತೀಶ ಜಾರಕಿಹೊಳಿ

ಪ್ರಕಾಶ ಹುಕ್ಕೇರಿ ಅವರಿಗೆ 30 ವರ್ಷ ಜನ ಸರ್ಟಿಫಿಕೆಟ್ ಕೊಟ್ಟಿದ್ದಾರೆ. ಪ್ರಕಾಶ ಹುಕ್ಕೇರಿಗೆ ಬಿಜೆಪಿ, ಉಮೇಶ ಕತ್ತಿ, ಲಕ್ಷ್ಮಣ ಸವದಿ ಸರ್ಟಿಫಿಕೆಟ್ ಅವಶ್ಯಕತೆ ಇಲ್ಲ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ತಿರುಗೇಟು ಕೊಟ್ಟಿದ್ದಾರೆ. ಗೋಕಾಕ್‍ನಲ್ಲಿ ಮಾಧ್ಯಮಗಳ ಜೊತೆಗೆ ಮಾತನಾಡಿದ ಸತೀಶ ಜಾರಕಿಹೊಳಿ ಜನ 30 ವರ್ಷ ಸರ್ಟಿಫಿಕೆಟ್ ಕೊಟ್ಟಿದ್ದಾರೆ. ಎಲ್ಲಾ ರಂಗದಲ್ಲಿಯೂ ಪ್ರಕಾಶ ಹುಕ್ಕೇರಿ ಸೇವೆ ಸಲ್ಲಿಸಿದ್ದಾರೆ. ಬಿಜೆಪಿ ವೇದಿಕೆಯಲ್ಲಿ ಪ್ರಕಾಶ ಹುಕ್ಕೇರಿ ಅವರಿಗೆ ವಯಸ್ಸಾಗಿದೆ ಎಂದು ಟೀಕಿಸಿದ್ದಾರೆ. …

Read More »

ಬೆಳಗಾವಿಯಲ್ಲಿ ಕ್ರಿಶ್ಚಿಯನ್ ಸಮುದಾಯದ ವತಿಯಿಂದ ಸೇಂಟ್ ಆಂಥೋನಿ ಹಬ್ಬ ಆಚರಣೆ

ಬೆಳಗಾವಿಯಲ್ಲಿ ಕ್ರಿಶ್ಚಿಯನ್ ಸಮುದಾಯದ ವತಿಯಿಂದ ಸೇಂಟ್ ಆಂಥೋನಿ ಹಬ್ಬವನ್ನು ಆಚರಣೆ ಮಾಡಲಾಯಿತು. ಬೆಳಗಾವಿಯ ಕ್ಯಾಂಪ್‌ನ ಸೇಂಟ್ ಆಂಥೋನಿ ಚರ್ಚನಲ್ಲಿ ಸೇಂಟ್ ಆಂಥೋನಿ ಫೀಸ್ಟ್ ನಿಮಿತ್ಯ ಅನೇಕ ಕಾರ್ಯಕ್ರಮಗಳನ್ನು ಆಯೋಜನೆ ಮಾಡಲಾಗಿತ್ತು. ಇಂದು ರವಿವಾರ ಸಾಯಂಕಾಲ ಚರ್ಚ್ದಲ್ಲಿ ಸಾಮೂಹಿಕ ಪ್ರಾರ್ಥನೆ ಆಯೋಜನೆ ಮಾಡಲಾಗಿತ್ತು. ನಂತರ ಚರ್ಚ್ ಪ್ರಾಂಗಣದಿಂದ ಖಾನಾಪುರ್ ರಸ್ತೆ ಕ್ಯಾಂಪ್ ಮುಖಾಂತರ ಕ್ಯಾಂಪ್‌ನ ಅನೇಕ ರಸ್ತೆಗಳಲ್ಲಿ ಸೇಂಟ್ ಆಂಥೋನಿ ಪ್ರತಿಮೆಯೊಂದಿಗೆ ಸಂಚಾರ ಮಾಡಿದರು. ಈ ವೇಳೆ ಅನೇಕ ಕ್ರಿಶ್ಚಿಯನ್ ಸಮಾಜ …

Read More »

ಬೆಳಗಾವಿಯಲ್ಲಿ ಮನೆ ಮುಂದೆ ನಿಲ್ಲಿಸಿದ ಬೈಕ್ ಗಳಿಗೆ ಬೆಂಕಿ ಇಟ್ಟ ಕಿಡಿಗೇಡಿಗಳು

4 ಬೈಕ್‍ಗಳಿಗೆ ಕಿಡಿಗೇಡಿಗಳು ಬೆಂಕಿ ಹಚ್ಚಿರುವ ಘಟನೆ ಬೆಳಗಾವಿಯ ನೆಹರು ನಗರದಲ್ಲಿ ನಡೆದಿದೆ. ಶನಿವಾರ ರಾತ್ರಿ ಈ ಘಟನೆ ಸಂಭವಿಸಿದ್ದು. ಬೆಳಗಾವಿಯಲ್ಲಿ ಶಾಂತಿ ಕದಡಲು ಕಿಡಿಗೇಡಿಗಳು ಯತ್ನಿಸಿದ್ದು. ನೆಹರು ನಗರದಲ್ಲಿ ಮನೆಗಳ ಮುಂದೆ ನಿಲ್ಲಿಸಿದ್ದ 4 ಬೈಕ್‍ಗಳಿಗೆ ಬೆಂಕಿ ಹಚ್ಚಿದ್ದಾರೆ. ನಾಲ್ಕೂ ಬೈಕ್‍ಗಳು ಬೆಂಕಿಯ ಕೆನ್ನಾಲೆಯಲ್ಲಿ ಸುಟ್ಟು ಕರಕಲಾಗಿವೆ. ಘಟನಾ ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿ ಆಗಮಿಸಿ ಬೆಂಕಿಯನ್ನು ನಂದಿಸಲು ಪ್ರಯತ್ನಿಸಿದರು. ಅದೇ ರೀತಿ ಎಪಿಎಂಸಿ ಠಾಣೆ ಪೊಲೀಸರು ಕೂಡ …

Read More »

ಪ್ರಕಾಶ ಹುಕ್ಕೇರಿ ಪರ ಹಣ ಹಂಚಿಕೆದಾರರು ಸಿಕ್ಕಿ ಬಿದ್ದಿದ್ದಾರೆ. ಒಟ್ಟು 1.70 ಲಕ್ಷ ರೂ.ಪತ್ತೆ

ವಾಯುವ್ಯ ಶಿಕ್ಷಕರ ಹಾಗೂ ಪದವೀಧರ ಚುನಾವಣೆಯ ಮತದಾರರಿಗೆ ಹಣ ಹಂಚಲು ಹೊರಟಿದ್ದ ವಾಹನ ವಿಜಯಪುರ ನಗರದ ಗೋದಾವರಿ ಬಾರ್ ಬಳಿ ಚುನಾವಣೆ ಅಧಿಕಾರಿಗಳಿಗೆ ಸಿಕ್ಕಿದೆ. ವಾಹನದಲ್ಲಿ ಹಣ ತೆಗೆದುಕೊಂಡು ಹೋಗುತ್ತಿರುವಾಗ ಕಾಂಗ್ರೆಸ್ ಅಭ್ಯರ್ಥಿ ಪ್ರಕಾಶ ಹುಕ್ಕೇರಿ ಪರ ಹಣ ಹಂಚಿಕೆದಾರರು ಸಿಕ್ಕಿ ಬಿದ್ದಿದ್ದಾರೆ. ಒಟ್ಟು 1.70 ಲಕ್ಷ ರೂ.ಪತ್ತೆಯಾಗಿದ್ದು, ಒಂದೊಂದು ಪಾಕಿಟ್ ನಲ್ಲೂ10 ಸಾವಿರ ರೂ.ಸಿಕ್ಕಿದೆ. ಸೋಮವಾರ ನಡೆಯಲಿರುವ ವಿಧಾನ ಪರಿಷತ್ತಿನ ವಾಯವ್ಯ ಶಿಕ್ಷಕರ ಮತಕ್ಷೇತ್ರದ ಚುನಾವಣೆಯ ಮತದಾರರಿಗೆ ಹಂಚಲು …

Read More »

ಬೆಳಗಾವಿಯಲ್ಲಿ ಜ್ಯೇಷ್ಠ ಶುದ್ಧ ತ್ರಯೋದಶಿ ಶಕೆ1944ಹಿಂದೂ ತಿಥಿಯನುಸಾರ ಶಿವರಾಜ್ಯಾಭಿಷೇಕ

ಶ್ರೀ ಶಿವಪ್ರತಿಷ್ಠಾನ ಹಿಂದೂಸ್ಥಾನ ಬೆಳಗಾವಿಯ ವತಿಯಿಮದ ಪ್ರತಿವರ್ಷದಂತೆ ಈ ಬಾರಿಯೂ ಜ್ಯೇಷ್ಠ ಶುದ್ಧ ತ್ರಯೋದಶಿ ಶಕೆ ೧೯೪೪ ಹಿಂದೂ ತಿಥಿಯನುಸಾರ ಶಿವರಾಜ್ಯಾಭಿಷೇಕ ಮಾಡಲಾಯಿತು. ಪ್ರೇರಣಾ ಮಂತ್ರದೊಂದಿಗೆ ಶಿವಾಜಿ ಮಹಾರಾಜರ ಮೂರ್ತಿಗೆ ವಿಧಿವತ್ತ ಕ್ಷೀರಾಭಿಷೇಕ, ಜಲಾಭಿಷೇಕ ಮಾಡಲಾಯಿತು. ಮುಖ್ಯ ಅತಿಥಿಗಳಾಗಿ ಶಿರೀಷ್ ಗೋಗಟೆ ಮತ್ತು ಶ್ರೀ ಶಿವಪ್ರತಿಷ್ಠಾನ ಹಿಂದೂಸ್ಥಾನನ ಜಿಲ್ಲಾ ಪ್ರಮುಖ ಕಿರಣ ಗಾವಡೆ ಅವರು ಶಿವಾಜೀ ಮಹಾರಾಜರ ಮೂರ್ತಿಗೆ ಮಾಲಾರ್ಪಣೆ ಮಾಡಿ ಗೌರವ ಸಲ್ಲಿಸಿದರು. ನಂತರ ಮಹಾಆರತಿ ನಡೆಯಿತು. ನಂತರ …

Read More »

ಕೆಎಲ್‍ಇ ಸಂಸ್ಥೆಯ ಕಾರ್ಯಾಧ್ಯಕ್ಷ ಪ್ರಭಾಕರ ಕೋರೆ ನಮ್ಮ ಅಭ್ಯರ್ಥಿಗಳು ಗೆಲ್ಲಲು ಏನು ಬೇಕೋ ಅದನ್ನು ಮಾಡಿದ್ದಾರೆ: ಬೊಮ್ಮಾಯಿ

ಬೆಳಗಾವಿ: ‘ಕೆಎಲ್‍ಇ ಸಂಸ್ಥೆಯ ಕಾರ್ಯಾಧ್ಯಕ್ಷ ಪ್ರಭಾಕರ ಕೋರೆ ಅವರು ಅಮೆರಿಕಕ್ಕೆ ಹೋಗುವುದಾಗಿ ನನಗೆ ಮುಂಚೆಯೇ ಹೇಳಿದ್ದರು. ಆರು ತಿಂಗಳ ಹಿಂದೆಯೇ ಅವರ ಕಾರ್ಯಕ್ರಮ ನಿಗದಿಯಾಗಿದ್ದರಿಂದ, ವಿಧಾನ ಪರಿಷತ್‌ ಚುನಾವಣೆಯ ಪ್ರಚಾರದಲ್ಲಿ ಪಾಲ್ಗೊಳ್ಳಲು ಅವರಿಗೆ ಆಗಿಲ್ಲ. ಆದರೆ, ನಮ್ಮ ಅಭ್ಯರ್ಥಿಗಳು ಗೆಲ್ಲಲು ಏನು ಬೇಕೋ ಅದನ್ನು ಮಾಡಿದ್ದಾರೆ’ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ‘ಕೋರೆ ಅವರು ನಮ್ಮ ಹಿರಿಯರು, ಮಾರ್ಗದರ್ಶಕ. ಅವರ ಕೊಡುಗೆಯನ್ನು ಪಕ್ಷವೂ ಗುರುತಿಸುತ್ತದೆ, ನಾವೂ ಗುರುತಿಸುತ್ತೇವೆ. ಸುದೀರ್ಘ …

Read More »

₹3 ಕೋಟಿ ವೆಚ್ಚದಲ್ಲಿ ನಿರ್ಮಿಸಿದ ಕುಂದಾನಗರಿಯಲ್ಲಿ ಹೈಟೆಕ್‌ ಸರ್ಕಾರಿ ಶಾಲೆ

ಬೆಳಗಾವಿ: ಇಲ್ಲಿ ಎರಡು ಕಂಪ್ಯೂಟರ್‌ ಲ್ಯಾಬ್‌ಗಳಿವೆ. ಮಕ್ಕಳಲ್ಲಿ ಬೆರಗು ಮೂಡಿಸುವಂತಹ ಇ-ಲೈಬ್ರರಿಯಿದೆ. ₹3 ಕೋಟಿ ವೆಚ್ಚದಲ್ಲಿ ನಿರ್ಮಿಸಿದ ಭವ್ಯ ಆಡಿಟೋರಿಯಂ ಎಲ್ಲರನ್ನೂ ತನ್ನತ್ತ ಸೆಳೆಯುತ್ತಿದೆ. ಸಾಲು-ಸಾಲಾಗಿ ಹೈಟೆಕ್‌ ಕಲಿಕಾ ಸೌಲಭ್ಯಗಳೂ ಇಲ್ಲಿವೆ…   ಅಷ್ಟಕ್ಕೂ ಇದು ಯಾವುದೋ ಪ್ರತಿಷ್ಠಿತ ಖಾಸಗಿ ಶಾಲೆ ಅಂದುಕೊಂಡರೆ ಈ ಊಹೆ ತಪ್ಪು. ಇದು ಶತಮಾನ ಕಂಡಿರುವ ಇಲ್ಲಿನ ಶಹಾಪುರದ ಸರ್ಕಾರಿ ಚಿಂತಾಮಣರಾವ್‌ ಪ್ರಾಥಮಿಕ ಮತ್ತು ಪ್ರೌಢಶಾಲೆಯ ಚಿತ್ರಣ. ಗಡಿಭಾಗದಲ್ಲಿ ಸರ್ಕಾರಿ ಶಾಲೆಗಳು ಮುಚ್ಚುತ್ತಿರುವ ಈ ದಿನಗಳಲ್ಲಿ, …

Read More »

ಅಥಣಿ ತಹಶೀಲ್ದಾರ್ ದುಂಡಪ್ಪ ಕೋಮಾರ್ ಅವರನ್ನು ಕೆಲಸದಿಂದ ಅಮಾನತು: ನಿತೇಶ್ ಪಾಟೀಲ್

ಬೆಳಗಾವಿ: ಬೆಳಗಾವಿ ಜಿಲ್ಲೆ ಅಥಣಿ ತಹಶೀಲ್ದಾರ್ ದುಂಡಪ್ಪ ಕೋಮಾರ್ ಅವರನ್ನು ಕೆಲಸದಿಂದ ಅಮಾನತುಗೊಳಿಸಲಾಗಿದೆ. ವಿಧಾನ ಪರಿಷತ್ ಚುನಾವಣೆ ಮುಗಿಯುವವರೆಗೆ ತಹಶೀಲ್ದಾರ್ ದುಂಡಪ್ಪ ಕೋಮಾರ್ ಅವರನ್ನು ಕೆಲಸದಿಂದ ತೆಗೆದು ಹಾಕಿದ್ದು, ಅಲ್ಲಿಯವರೆಗೆ ಕರ್ತವ್ಯ ನಿರ್ವಹಣೆಗೆ ಬೇರೆ ತಹಶೀಲ್ದಾರ್ ಅವರನ್ನು ನೇಮಕ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ್ ತಿಳಿಸಿದ್ದಾರೆ. ಅಥಣಿಯಲ್ಲಿ ಮತದಾರರ ಪಟ್ಟಿಯಲ್ಲಿ ಸೇರಲು ಬಂದಿದ್ದ ಕೆಲ ಅರ್ಜಿಗಳ ಡಾಟಾ ಎಂಟ್ರಿ ಆಗಿರಲಿಲ್ಲ ಎನ್ನುವುದು ವಿಚಾರಣೆ ನಡೆಸಿದಾಗ ತಿಳಿದುಬಂದಿದ್ದು, ಹೀಗಾಗಿ ಅಥಣಿ …

Read More »

ವಿಧಾನಪರಿಷತ್ ಚುನಾವಣೆಯಲ್ಲಿಯೂ ಬಿಜೆಪಿ ನಾಲ್ಕಕ್ಕೆ ನಾಲ್ಕು ಸ್ಥಾನಗಳನ್ನು ಗೆಲ್ಲಲಿದೆ

ನಿನ್ನೆ ಮೂರು ರಾಜ್ಯಸಭೆ ಸ್ಥಾನಗಳನ್ನು ಗೆಲ್ಲುವ ಮೂಲಕ ಬಿಜೆಪಿ ಪ್ರಚಂಡ ವಿಜಯ ಸಾಧಿಸಿದೆ. ಜೂನ್ 13ರಂದು ನಡೆಯಲಿರುವ ವಿಧಾನಪರಿಷತ್ ಚುನಾವಣೆಯಲ್ಲಿಯೂ ಬಿಜೆಪಿ ನಾಲ್ಕಕ್ಕೆ ನಾಲ್ಕು ಸ್ಥಾನಗಳನ್ನು ಗೆಲ್ಲಲಿದೆ ಎಂದು ಸಚಿವ ಗೋವಿಂದ ಕಾರಜೋಳ ವಿಶ್ವಾಸ ವ್ಯಕ್ತಪಡಿಸಿದರು. ಬೆಳಗಾವಿಯಲ್ಲಿ ಮಾಧ್ಯಮಗಳ ಜೊತೆಗೆ ಮಾತನಾಡಿದ ಸಚಿವ ಗೋವಿಂದ ಕಾರಜೋಳ ಅತ್ಯಂತ ಉತ್ಸಾಹದಿಂದ ಪದವೀಧರರು, ಶಿಕ್ಷಕರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ. ಇಡೀ ದೇಶದ ಉದ್ದಗಲಕ್ಕೂ ಬಿಜೆಪಿಯೇ ಅಧಿಕಾರದಲ್ಲಿ ಇರಬೇಕು ಎಂಬ ಆಶಯ ದೇಶದ ವಿದ್ಯಾವಂತರಲ್ಲಿದೆ. ದೇಶದಲ್ಲಿ …

Read More »

ಬೆಳಗಾವಿ ಬಿಜೆಪಿಯಲ್ಲಿ ಯಾವುದೇ ಬಣನೂ ಇಲ್ಲ, ಬಾಣನೂ ಇಲ್ಲ: ಲಕ್ಷ್ಮಣ ಸವದಿ

ಬೆಳಗಾವಿ ಬಿಜೆಪಿಯಲ್ಲಿ ಯಾವುದೇ ಬಣನೂ ಇಲ್ಲ, ಬಾಣನೂ ಇಲ್ಲ ಎಂದು ಮಾಜಿ ಡಿಸಿಎಂ, ವಿಧಾನಪರಿಷತ್ ಸದಸ್ಯ ಲಕ್ಷ್ಮಣ ಸವದಿ ಹೇಳಿಕೆ ನೀಡಿದ್ದಾರೆ. ವಾಯುವ್ಯ ಶಿಕ್ಷಕರ ಕ್ಷೇತ್ರದ ಅಭ್ಯರ್ಥಿ ಅರುಣ ಶಹಾಪುರ ವಿರುದ್ಧ ಕಾರ್ಯಕರ್ತರ ಅಸಮಾಧಾನ ಬಗ್ಗೆ ಮಾಧ್ಯಮಗಳು ಕೇಳಿದ ಪ್ರಶ್ನೆಗೆ ಮಾಧ್ಯಮಗಳ ಮೇಲೆ ಗೂಬೆ ಕೂರಿಸಲು ಲಕ್ಷ್ಮಣ ಸವದಿ ಪ್ರಯತ್ನಿಸಿದರು. ಅದು ಬಹುತೇಕ ನಿಮ್ಮಂತ ಸ್ನೇಹಿತರು ಹುಟ್ಟು ಹಾಕಿದ ಗುಟುಕು ಅಂತಾ ನಾ ತಿಳಿದುಕೊಂಡಿದ್ದೇನೆ ಎಂದರು. ಪ್ರಭಾಕರ್ ಕೋರೆ ಬಿಜೆಪಿ …

Read More »