Breaking News

ಬೆಳಗಾವಿ

ಬಿಜೆಪಿ ನಿದ್ದೆ ಕೆಡಿಸಿದ ಶರದ್ ಪವಾರ್-ಎಂಇಎಸ್ ನಾಯಕರ ಭೇಟಿ

ಬೆಳಗಾವಿ: ಇತ್ತೀಚೆಗೆ ನಡೆದ ಚುನಾವಣೆಗಳಲ್ಲಿ ಬೆಳಗಾವಿ ಗಡಿ ಪ್ರದೇಶದಲ್ಲಿರುವ 7 ಏಳು ವಿಧಾನಸಭಾ ಕ್ಷೇತ್ರಗಳಲ್ಲಿ ಬಹುಸಂಖ್ಯಾತ ಮರಾಠಿ ಮತದಾರರ ಮೇಲೆ ಹಿಡಿತ ಸಾಧಿಸಿ ಯಶಸ್ವಿಯಾಗಿದ್ದ ಬಿಜೆಪಿಗೆ ಇದೀಗ ಶರದ್ ಪವಾರ್-ಎಂಇಎಸ್ ನಾಯಕರ ಭೇಟಿ ಚಿಂತೆಗೀಡಾಗುವಂತೆ ಮಾಡಿದೆ.   2023ರ ರಾಜ್ಯ ವಿಧಾನಸಭೆ ಚುನಾವಣೆ ಹತ್ತಿರದಲ್ಲಿದ್ದು, ಅಥಣಿ, ನಿಪಾಣಿ, ಕಾಗವಾಡ, ಖಾನಾಪುರ, ಬೆಳಗಾವಿ ಗ್ರಾಮಾಂತರ, ಬೆಳಗಾವಿ ದಕ್ಷಿಣ ಮತ್ತು ಬೆಳಗಾವಿ ಉತ್ತರ — ಅಂತರರಾಜ್ಯ ಗಡಿ ಭಾಗದ ಏಳು ವಿಧಾನಸಭಾ ಕ್ಷೇತ್ರಗಳಲ್ಲಿ …

Read More »

ಜಾತ್ರೆಗಳು ನಮ್ಮ ಭವ್ಯ ಪರಂಪರೆಯನ್ನು ಬಿಂಬಿಸುತ್ತವೆ- ಶಾಸಕ ಬಾಲಚಂದ್ರ ಜಾರಕಿಹೊಳಿ.

ರಾಜಾಪೂರ- ಗ್ರಾಮ ದೇವತೆ ಜಾತ್ರೆಗೆ ಚಾಲನೆ ನೀಡಿದ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ.     ಮೂಡಲಗಿ- ಜಾತ್ರಾ ಉತ್ಸವಗಳು ನಮ್ಮ ಭಾರತೀಯ ಪರಂಪರೆ, ಇತಿಹಾಸ ವನ್ನು ಬಿಂಬಿಸುತ್ರಿವೆ ಎಂದು ಕೆಎಂಎಫ್ ಅಧ್ಯಕ್ಷ ಮತ್ತು ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಹೇಳಿದರು. ತಾಲ್ಲೂಕಿನ ರಾಜಾಪೂರ ಗ್ರಾಮದಲ್ಲಿ ನಡೆಯುತ್ತಿರುವ ಗ್ರಾಮ ದೇವತೆ ಹಾಗೂ ಚೂನಮ್ಮದೇವಿ ಜಾತ್ರೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಜೊತೆಗೆ ಜಾತ್ರೆಗಳು ನಮ್ಮ ಸಾಂಸ್ಕೃತಿಕ ರಾಯಭಾರಿಯಾಗಿವೆ ಎಂದು ಅವರು ತಿಳಿಸಿದರು. …

Read More »

ಜಿ.ಪಂ., ತಾ.ಪಂ. ಕ್ಷೇತ್ರಗಳ ನಿಗದಿಗೆ ನಿರ್ಣಯ: ಜಿಲ್ಲಾಧಿಕಾರಿ ನಿತೇಶ್ ಪಾಟೀಲ

ಬೆಳಗಾವಿ: ‘ಜಿಲ್ಲೆಯ ಜಿಲ್ಲಾ ಹಾಗೂ ತಾಲ್ಲೂಕು ಪಂಚಾಯ್ತಿಗಳ ಸದಸ್ಯರ ಕ್ಷೇತ್ರಗಳ ಸಂಖ್ಯೆಯನ್ನು ಕರ್ನಾಟಕ ಪಂಚಾಯತ್‌ರಾಜ್ ಸೀಮಾ ನಿರ್ಣಯ ಆಯೋಗವು ನಿಗದಿಪಡಿಸಲು ನಿರ್ಣಯಿಸಿದೆ’ ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ತಿಳಿಸಿದರು.   ‘2011ರ ಜನಗಣತಿಯಂತೆ ಆಯಾ ತಾಲ್ಲೂಕುಗಳ ಗ್ರಾಮೀಣ ಜನಸಂಖ್ಯೆ ಆಧರಿಸಿ ಜಿಲ್ಲಾ ಮತ್ತು ತಾಲ್ಲೂಕು ಪಂಚಾಯತ ಸದಸ್ಯರ ಕ್ಷೇತ್ರಗಳ ಸಂಖ್ಯೆ ನಿಗದಿಪಡಿಸಲಾಗಿದೆ. ಈ ಪ್ರಕಾರ ಆಯೋಗದಿಂದ ಪ್ರತಿ 40ಸಾವಿರ ಜನಸಂಖ್ಯೆಗೆ ಹಾಗೂ ಅದರ ಭಾಗಕ್ಕೆ ಒಬ್ಬರು ಸದಸ್ಯರಂತೆ ಬೆಳಗಾವಿ ಜಿಲ್ಲೆಯ …

Read More »

‘ಯಾವುದೇ ಕಾಯಕವನ್ನು ನಿಷ್ಠೆಯಿಂದ ಮಾಡಿದರೆ ನಿಶ್ಚಿತವಾಗಿ ಸಫಲತೆ ಸಿಗುತ್ತದೆ’ ಎಂದ, ನಾಗನೂರ ರುದ್ರಾಕ್ಷಿಮಠದ ಡಾ.ಅಲ್ಲಮಪ್ರಭು ಸ್ವಾಮೀಜಿ

ಬೆಳಗಾವಿ: ‘ಯಾವುದೇ ಕಾಯಕವನ್ನು ನಿಷ್ಠೆಯಿಂದ ಮಾಡಿದರೆ ನಿಶ್ಚಿತವಾಗಿ ಸಫಲತೆ ಸಿಗುತ್ತದೆ’ ಎಂದು ನಾಗನೂರ ರುದ್ರಾಕ್ಷಿಮಠದ ಡಾ.ಅಲ್ಲಮಪ್ರಭು ಸ್ವಾಮೀಜಿ ಹೇಳಿದರು. ಇಲ್ಲಿನ ಶಿವಬಸವ ನಗರದ ಡಾ.ಎಸ್.ಜಿ.ಬಾಳೇಕುಂದ್ರಿ ಎಂಜಿನಿಯರಿಂಗ್ ಕಾಲೇಜು ಸಭಾಂಗಣದಲ್ಲಿ ಅಂಚೆ ಇಲಾಖೆ ಬೆಳಗಾವಿ ವಿಭಾಗ ಗುರುವಾರ ಏರ್ಪಡಿಸಿದ್ದ ಸಾಧಕರಿಗೆ ಕರ್ಮಯೋಗಿ ಪ್ರಶಸ್ತಿ ಪ್ರದಾನ ಕಾರ್ಯಕ್ರಮದಲ್ಲಿ ಮಾತನಾಡಿದರು.   ‘ಕಾಯಕವೇ ಕೈಲಾಸವೆಂದು ಶರಣರು ಬಣ್ಣಿಸಿದ್ದಾರೆ. ಆದರೆ, ನಮ್ಮ ಕಾಯಕದಲ್ಲಿ ಯಾವುದೇ ಅಪೇಕ್ಷೆ ಇರಬಾರದು. ಕರ್ಮಯೋಗಿಗಳು ನಿಸ್ವಾರ್ಥ ಮನೋಭಾವ ಬೆಳೆಸಿಕೊಳ್ಳಬೇಕು’ ಎಂದ ಅವರು, …

Read More »

ಫಲ-ಪುಷ್ಪ ಕೃಷಿಯಿಂದ ಲಾಭ: ಪೇರಲ, ಮಾವು, ಕರಿಬೇವು ಬೆಳೆಯುವ ಜ್ಯೋತಿ

ಚಿಕ್ಕೋಡಿ: ತಾಲ್ಲೂಕಿನ ಕೇರೂರ ಗ್ರಾಮದ ಜ್ಯೋತಿ ಮಲ್ಲಪ್ಪ ಮಾಳಿ ಎನ್ನುವ ಪ್ರಯೋಗಶೀಲ ರೈತರೊಬ್ಬರು ಮಸಾರಿ ಭೂಮಿಯಲ್ಲಿ ಪೇರಲ ಮತ್ತು ಮಾವು ಜೊತೆ ಮಿಶ್ರ ಬೆಳೆಯಾಗಿ ಹೂವು ಹಾಗೂ ತರಕಾರಿ ಬೆಳೆದು ಆದಾಯ ಕಾಣುತ್ತಿದ್ದಾರೆ. ಸಾಂಪ್ರದಾಯಿಕವಾಗಿ ಕಬ್ಬು ಬೆಳೆಯುತ್ತಿದ್ದ ಅವರು, ಅದರಿಂದ ಹೆಚ್ಚಿನ ಆದಾಯ ಸಿಗದಿದ್ದರಿಂದ ಪರ್ಯಾಯವಾಗಿ ಪೇರಲ ಮತ್ತು ಮಾವು ಬೆಳೆದಿದ್ದಾರೆ. 2 ವರ್ಷಗಳ ಹಿಂದೆ 300 ಪೇರಲ ಮತ್ತು 400 ಮಾವಿನ ಸಸಿಗಳನ್ನು ನೆಟ್ಟಿದ್ದಾರೆ. ನಾಟಿ ಮಾಡಿದ 9ನೇ ತಿಂಗಳಿನಲ್ಲಿಯೇ …

Read More »

ರಾಜಕೀಯ ವಿಶ್ಲೇಷಣೆಯಿಂದ ರಮ್ಯಾ ದೂರ ಉಳಿಯಬೇಕು: ಚನ್ನರಾಜ ಹಟ್ಟಿಹೊಳಿ

ಬೆಳಗಾವಿ: ಮಾಜಿ ಸಂಸದೆ ರಮ್ಯಾ ಅವರು ರಾಜಕೀಯ ವಿಶ್ಲೇಷಣೆಯಿಂದ ದೂರ ಉಳಿಯಬೇಕು ಎಂದು ಕಾಂಗ್ರೆಸ್ ಎಂಎಲ್‍ಸಿ ಚನ್ನರಾಜ ಹಟ್ಟಿಹೊಳಿ ಆಕ್ರೋಶ ಹೊರಹಾಕಿದ್ದಾರೆ. ನಗರದಲ್ಲಿ ಅಶ್ವತ್ಥ್ ನಾರಾಯಣ್ ಹಾಗೂ ಎಂ.ಬಿ.ಪಾಟೀಲ್ ಭೇಟಿ ಬಗ್ಗೆ ಡಿಕೆಶಿ ಹೇಳಿಕೆಗೆ ರಮ್ಯಾ ಪ್ರತಿಕ್ರಿಯೆ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ರಮ್ಯಾ ಅವರು ಬಹಳ ದಿನಗಳಿಂದ ರಾಜಕಾರಣದಿಂದ ದೂರ ಉಳಿದಿದ್ದಾರೆ. ಈಗ ಮತ್ತೆ ಏಕಾಏಕಿ ಬಂದು ಅವರೇಕೆ ಸ್ಟೇಟ್‍ಮೆಂಟ್ ಕೊಡಬೇಕು ಎಂದು ಪ್ರಶ್ನೆ ಮಾಡಿದ್ದಾರೆ.

Read More »

ರಾಣಿ ಚೆನ್ನಮ್ಮಗೆ ಅಪಮಾನ ಚೆನ್ನಮ್ಮ ಅಭಿಮಾನಿಗಳ ಆಕ್ರೋಶಕ್ಕೆ ಕಾರಣ

ಬೆಳಗಾವಿ: ಎನ್‍ಸಿಪಿ ಕಾರ್ಯಕರ್ತರು ಕಿತ್ತೂರು ರಾಣಿ ಚೆನ್ನಮ್ಮಗೆ ಅಪಮಾನ ಮಾಡಿದ ಘಟನೆ ನಗರದ ಚೆನ್ನಮ್ಮ ವೃತ್ತದಲ್ಲಿ ನಡೆದಿದೆ. ಇದೀಗ ಈ ಘಟನೆ ಚೆನ್ನಮ್ಮ ಅಭಿಮಾನಿಗಳ ಆಕ್ರೋಶಕ್ಕೆ ಕಾರಣವಾಗಿದೆ. ಬೆಳಗಾವಿ ಪ್ರವಾಸದಲ್ಲಿರುವ ಎನ್‍ಸಿಪಿ ಮುಖ್ಯಸ್ಥ ಶರದ್ ಪವಾರ್‌ಗೆ ಚೆನ್ನಮ್ಮ ವೃತ್ತದಲ್ಲಿ ಅದ್ಧೂರಿ ಸ್ವಾಗತ ದೊರೆಯಿತು. ಚೆನ್ನಮ್ಮ ವೃತ್ತಕ್ಕೆ ಆಗಮಿಸಿದ್ದ ಎನ್‍ಸಿಪಿ ನಾಯಕ ಶರದ್ ಪವಾರ್‌ಗೆ ಬೃಹದಾಕಾರದ ಹೂವಿನ ಹಾರ ತಂದು ಪಟಾಕಿ, ಸಿಡಿಮದ್ದು ಸಿಡಿಸಿ ಅದ್ಧೂರಿ ಸ್ವಾಗತ ಕೊರಲಾಯಿತು ಶರದ್ ಪವಾರ್ ಎದುರು …

Read More »

ಸತ್ತಿಗೇರಿ ತೋಟದಲ್ಲಿ ಕಿಡಿಗೇಡಿಗಳಿಂದ ಮಸೀದಿ ಮೇಲೆ ಧ್ವಜ.. ಉಭಯ ಸಮುದಾಯಗಳ ಶಾಂತಿ ಸಭೆ ನಡೆಸಿದ ಶಾಸಕ ಬಾಲಚಂದ್ರ ಜಾರಕಿಹೊಳಿ.

  ಗೋಕಾಕ : ಸಮೀಪದ ಅರಭಾವಿ ಸತ್ತಿಗೇರಿ ತೋಟದ ಮಸೀದಿ ಹತ್ತಿರ ಕೆಲ ಕಿಡಗೇಡಿಗಳು ಕಳೆದ ರಾತ್ರಿ ಕೇಸರಿ ಧ್ವಜ ಕಟ್ಟಿದ್ದರಿಂದ ಕೆಲ ಕಾಲ ಪರಿಸ್ಥಿತಿ ಉದ್ವಿಘ್ನಗೊಂಡಿದ್ದು, ಶಾಸಕ ಹಾಗೂ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ತಮ್ಮ ಸಿಬ್ಬಂದಿಗಳ ಮೂಲಕ ಸತ್ತಿಗೇರಿ ತೋಟದ ಉಭಯ ಸಮುದಾಯಗಳ ಸಭೆ ನಡೆಸುವ ಮೂಲಕ ಯಶಸ್ವಿಯಾಗಿ ಸಂಧಾನ ನಡೆಸಿದ್ದಾರೆ.   ಇಲ್ಲಿಯ ಎನ್‌ಎಸ್‌ಎಫ್ ಅತಿಥಿ ಗೃಹದಲ್ಲಿ ಬುಧವಾರದಂದು ಅಲ್ಲಿನ ನಿವಾಸಿಗಳ ಸಭೆ ನಡೆಸಿ …

Read More »

ಶರದ್‌ಪವಾರ್ ಭಾಷಣಕ್ಕೆ ಅಡ್ಡಿಪಡಿಸಿದ ಎಂಇಎಸ್ ಪುಂಡರು

ಬೆಳಗಾವಿ: ಬೆಳಗಾವಿಯಲ್ಲಿ ಮತ್ತೆ ನಾಡದ್ರೋಹಿ ಘೋಷಣೆ ಕೂಗಿದ ಎಂಇಎಸ್ ಪುಂಡರು ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ಶರದ್ ಪವಾರ್ ಎದುರೇ ಪುಂಡಾಟಿಕೆ ಪ್ರದರ್ಶಿಸಿದ ಘಟನೆ ಬೆಳಗಾವಿಯಲ್ಲಿ ನಡೆದಿದೆ. ಬೆಳಗಾವಿಯ ಮರಾಠಾ ಬ್ಯಾಂಕಿನಲ್ಲಿ ನಡೆದ ಕಾರ್ಯಕ್ರಮದಲ್ಲಿ ಶರದ್ ಪವಾರ್ ಭಾಷಣ ಶುರುವಾಗುತ್ತಿದ್ದಂತೆ ಎಂಇಎಸ್ ಪುಂಡರು ನಾಡದ್ರೋಹ ಘೋಷಣೆ ಕೂಗಿದ್ದಾರೆ. ಮರಾಠ ಕೋ ಆಪರೇಟಿವ್ ಬ್ಯಾಂಕ್ ಅಮೃತ ಮಹೋತ್ಸವ ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಆಗಮಿಸಿರುವ ಶರದ್ ಪವಾರ್, ಎಂಇಎಸ್ ಪುಂಡರ ಪೂರ್ವನಿಯೋಜಿತ ಘೋಷಣೆಗಳಿಂದ ತಬ್ಬಿಬ್ಬಾದರು. …

Read More »

850 ರೂಪಾಯಿ ಬೆಲೆಯ ಕಾಸ್ಟ್ಲಿ ನೀರನ್ನ ಕೇಂದ್ರ ಗೃಹ ಸಚಿವರಾದ ಅಮಿತ್ ಶಾ ಕುಡಿಯೋದಂತೆ.

ಒಂದು ನೀರಿನ ಬಾಟಲ್ ಬೆಲೆ ಎಷ್ಟಿರಬಹುದು ಹೇಳಿ ಅಬ್ಬಬ್ಬಾ ಅಂದ್ರೆ 50-100 ರೂಪಾಯಿ. ಯಾರಾದ್ರೂ 850 ರೂಪಾಯಿ ಒಂದು ನೀರಿನ ಬಾಟಲ್ ಬೆಲೆ ಅಂದ್ರೆ ಸಾಕು. ಅದು ನೀರಲ್ಲ ಅಮೃತ ಅಂತ ಹೇಳೋರೆ ಹೆಚ್ಚು. ಅಷ್ಟು ಕಾಸ್ಟ್ಲಿ ನೀರನ್ನ ಕೇಂದ್ರ ಗೃಹ ಸಚಿವರಾದ ಅಮಿತ್ ಶಾ ಕುಡಿಯೋದಂತೆ. ಹೀಗಂತ ಹೇಳಿದ್ದು ಗೋವಾ ಕೃಷಿ ಸಚಿವ ರವಿ ನಾಯ್ಕ್. ಇತ್ತೀಚೆಗೆ ಅಮಿತ್ ಶಾ ಗೋವಾಗೆ ಭೇಟಿ ಕೊಟ್ಟ ವೇಳೆ ಅವರಿಗೆ ಇದೇ …

Read More »