ಬೆಳಗಾವಿ: ” ಖಾಸಗಿ ಮಾರುಕಟ್ಟೆ ನಿರ್ಮಾಣಕ್ಕೆ ಕೆಲವೊಂದು ಅಧಿಕಾರಿಗಳು ಶಾಮೀಲು ಆಗಿದ್ದು, ಇದಕ್ಕೆ ಸರ್ಕಾರವೂ ಸಾಥ್ ನೀಡಿದೆ” ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಅವರು ಹೇಳಿದರು. ನಗರದ ಕೃಷಿ ಉತ್ಪನ್ನ ಮಾರುಕಟ್ಟೆ ಆವರಣದಲ್ಲಿ ಮಾದ್ಯಮರೊಂದಿಗೆ ಮಾತನಾಡಿದ ಅವರು, ರೈತರ ಹಿತದೃಷ್ಟಿಯಿಂದ 50 ಕೋಟಿ ರೂ. ವೆಚ್ಚದಲ್ಲಿ ಕೃಷಿ ಉತ್ಪನ ಮಾರುಕಟ್ಟೆ ನಿರ್ಮಿಸಲಾಗಿದೆ. ಪ್ರಭಾವಿಗಳಿಂದ ಖಾಸಗಿ ಮಾರುಕಟ್ಟೆ ಆರಂಭವಾಗುತ್ತಿದೆ. ಹೀಗಾಗಿ ಎರಡು ಮಾರುಕಟ್ಟೆ ಉಳಿಯುವ ಸಾಧ್ಯತೆ ಕಾಣುತ್ತಿದೆ. …
Read More »ಜಿಲ್ಲಾ ಕಾರ್ಯಾಧ್ಯಕ್ಷರಾಗಿ ವೈಶಾಲಿ ಭರಭರಿ ನೇಮಕ
ಗೋಕಾಕ ಫೆ, 7 :- ರಾಷ್ಟ್ರೀಯ ಮಾನವ ಹಕ್ಕುಗಳ ಮತ್ತು ಸಾಮಾಜಿಕ ನ್ಯಾಯ ಆಯೋಗದ ಬೆಳಗಾವಿ ಜಿಲ್ಲಾ ಕಾರ್ಯಾಧ್ಯಕ್ಷ ಸ್ಥಾನಕ್ಕೆ ಕರದಂಟು ನಾಡು ಗೋಕಾಕದ ವೈಶಾಲಿ ಭರಭರಿ ಅವರು ನೇಮಕಗೊಂಡಿದ್ದಾರೆ. ಕಳೆದ ಐದು ವರ್ಷಗಳಿಂದ ಗೋಕಾಕ ತಾಲೂಕಿನಲ್ಲಿ ಮಾಡುತ್ತಿರುವ ಸಾಮಾಜಿಕ ಸೇವೆಯನ್ನು ಗುರುತಿಸಿ ಬೆಳಗಾವಿ ಜಿಲ್ಲಾಧ್ಯಕ್ಷ ಅಶೋಕ ಕೆಂಗಣ್ಣವರ ಮತ್ತು ರಾಜ್ಯಾಧ್ಯಕ್ಷ ಡಿ.ಶೇಖರರೆಡ್ಡಿ ಅವರ ಶಿಫಾರಸಿನ ಮೇರೆಗೆ ರಾಷ್ಟ್ರೀಯ ಅಧ್ಯಕ್ಷ ಮೆಹತಾಬ ರಾಯ ಆದೇಶ ಹೊರಡಿಸಿದ್ದಾರೆ.
Read More »ಬೆಳಗಾವಿ ಬೆಂಗಳೂರಿಗೆ ಅತಿಹೆಚ್ಚು ಸಚಿವ ಸ್ಥಾನ ನೀಡಿದ್ದಾರೆ: ಅಸಮಾಧಾನ ಹೊರಹಾಕಿದ ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ
ರಾಜ್ಯ ಸರಕಾರ ಮಂತ್ರಿಗಿರಿ ಹಂಚಿಕೆ ವಿಚಾರದಲ್ಲಿ ಭೌಗೋಳಿಕವಾಗಿ ಅಸಮತೋಲನ ಮಾಡಿದೆ ಎಂದು ಮಾಜಿ ಸಚಿವ ಎಂ.ಪಿ ರೇಣುಕಾಚಾರ್ಯ ತಮ್ಮ ಅಸಮಾಧಾನ ಹೊರಹಾಕಿದ್ದಾರೆ. ಬೆಳಗಾವಿ ಹಾಗೂ ಬೆಂಗಳೂರಿಗೆ ಹೆಚ್ಚು ಮಂತ್ರಿ ಸ್ಥಾನಗಳನ್ನು ನೀಡಲಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.ದಾವಣಗೆರೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಮಾಜಿ ಸಚಿವ ರೇಣುಕಾಚಾರ್ಯ, ಸಚಿವ ಸಂಪುಟ ರಚನೆ ಅದು ಮುಖ್ಯಮಂತ್ರಿಗಳ ಪರಮಾಧಿಕಾರ. ಇದು ಅವರ ವಿವೇಚನೆಗೆ ಬಿಟ್ಟಿದ್ದು. ಅದನ್ನು ಪ್ರಶ್ನೆಮಾಡುವ ನೈತಿಕ ಹಕ್ಕು ನನಗಿಲ್ಲ. ಆದರೆ ಭೌಗೋಳಿಕವಾಗಿ ಸಚವ ಸ್ಥಾನ …
Read More »ವಸತಿ ಸಹಿತ ಉದ್ಯಮಶೀಲತಾ ತರಬೇತಿ ನೀಡಲು ಮುಂದಾದ ಸತೀಶ್ ಜಾರಕಿಹೊಳಿ
ಬೆಳಗಾವಿ: ಸತೀಶ್ ಜಾರಕಿಹೊಳಿ ಫೌಂಡೇಷನ್ ನಿಂದ ಬೆಳಗಾವಿ ಜಿಲ್ಲಾ ವ್ಯಾಪ್ತಿಯಲ್ಲಿ ಉದ್ಯೋಗ ಅರಸುತ್ತಿರುವ ಮತ್ತು ಸ್ವಯಂ ಉದ್ಯೋಗ ಮತ್ತು ಉದ್ದಿಮೆ ಸ್ಥಾಪಿಸಲು ಆಸಕ್ತಿ ಇರುವ ನಿರುದ್ಯೋಗಿ ಯುವಕ, ಯುವತಿಯರಿಗೆ ಮೂರು ದಿನಗಳ ಕಾಲ ಉಚಿತ ವಸತಿ ಸಹಿತ ಉದ್ಯಮಶೀಲತಾ ತರಬೇತಿ ಶಿಬಿರವನ್ನು ಇದೇ ಫೆ. 12 ರಿಂದ 14ರವರೆಗೆ ನಡೆಸಲಾಗುವುದು. ಸರ್ಕಾರದ ವಿವಿಧ ಯೋಜನೆಗಳ ಕುರಿತು, ಬ್ಯಾಂಕ್ ಗಳಲ್ಲಿ ಸಿಗುವ ಸಾಲ ಸೌಲಭ್ಯಗಳ ಬಗ್ಗೆ, ಮಾರುಕಟ್ಟೆ ಸಮೀಕ್ಷೆ, ಉದ್ದಿಮೆಯ …
Read More »ಗಾನ ಕೋಗಿಲೆ ಲತಾ ಮಂಗೇಶ್ಕರ್ ನಿಧನಕ್ಕೆ ಕಹಾಮ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಶೋಕ.
ಗೋಕಾಕ್- ಭಾರತ ರತ್ನ, ಗಾನ ಕೋಗಿಲೆ ಲತಾ ಮಂಗೇಶ್ಕರ್ ಅವರ ನಿಧನಕ್ಕೆ ಕಹಾಮ ಅಧ್ಯಕ್ಷ ಹಾಗೂ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಲತಾಜೀ ಅವರು ನಮ್ಮ ದೇಶದ ಅಮೂಲ್ಯ ಆಸ್ತಿಯಾಗಿದ್ದರು. ಸುಮಾರು ಏಳು ದಶಕಗಳಿಂದ ದೇಶದ ವಿವಿಧ ಭಾಷೆಗಳಲ್ಲಿ ಸುಮಾರು ೩೫ ಸಾವಿರಕ್ಕೂ ಅಧಿಕ ಹಾಡುಗಳನ್ನು ತಮ್ಮ ಕಂಠಸಿರಿಯಲ್ಲಿ ನಮಗೆಲ್ಲ ಉಣಬಡಿಸಿದ್ದರು. ಹಿನ್ನೆಲೆ ಗಾಯಕಿಯಾಗಿ ಬಾರತೀಯ ಚಿತ್ರರಂಗಕ್ಕೆ ಅಮೂಲ್ಯ ಸೇವೆ ಸಲ್ಲಿಸಿದ್ದರು. ಇವರ …
Read More »ಗೋಕಾಕ ಆತ್ಮಹತ್ಯೆ ಮಾಡಿಕೊಳ್ಳಲು ಬಂದ ವೃದ್ಧೆಯ ಪ್ರಾಣ ಉಳಿಸಿದ ಗೋಕಾಕ ಪಿಎಸ್‌ಐ ವಾಲೀಕರ
ಗೋಕಾಕ ಫಾಲ್ಸ್ ಆತ್ಮಹತ್ಯೆಗೆ ಪ್ರಯತ್ನಿಸುತ್ತಿದ್ದ ವೃದ್ದೆಯ ಪ್ರಾಣ ಉಳಿಸಿದ ಗೋಕಾಕ ಪಿಎಸ್‌ಐ ಕೆ.ವಾಲೀಕರ ಹಾಗೂ ಪೋಲಿಸ್ ಸಿಬ್ಬಂದಿ ವರ್ಗ ಗಸ್ತಿನಲ್ಲಿದ್ದ ಪೊಲೀಸ್ ಸಿಬ್ಬಂದಿಗೆ ಅನುಮಾನ ಸ್ಪದವಾಗಿ ಆತ್ಮಹತ್ಯೆಗೆ ಪ್ರಯತ್ನಿಸುತ್ತಿದ್ದ ಮಹಿಳೆಯ ಚಲನ ಗಮನಿಸಿ ಬೆನ್ನಿಗೆ ಬಿದ್ದು ಗಮನಿಸಿದಾಗ ವೃದ್ಧ ಮಹಿಳೆ ಆತ್ಮಹತ್ಯೆಗೆ ಪ್ರಯತ್ನಿಸಿದ್ದು ಗಮನಿಸಿ ಪೊಲೀಸ ಹೆಡ್ ಕಾನ್ಸಟೇಬಲ್ ಕಲ್ಮಶ ಹಕ್ಕಾಗೋಳ ಹಾಗೂ ಸಿಬ್ಬಂದಿಗಳು ಕೂಡಲೇ ವೃದ್ಧಿಯನ್ನು ಸುಪರ್ಧಿಗೆ ಪಡೆದು ಪಿಎಸ್‌ಐ ವಾಲಿಕಾರ ಅವರಿಗೆ ವಿಷಯ …
Read More »ರಾಜಕೀಯ ದುರುದ್ದೇಶ ಪ್ರೇರಿತ ಸಿಡಿ ಪ್ರಕರಣ ಸಾಹುಕಾರ ರಮೇಶ ಜಾರಕಿಹೊಳಿ ಆರೋಪ ಮುಕ್ತ.!!
ರಾಜಕೀಯ ಪ್ರೇರಿತ ಸಿಡಿ ಪ್ರಕರಣ ಸಾಹುಕಾರ ಕ್ಲೀನ್ ಚೀಟ್.ರಾಜಕೀಯ ದುರುದ್ದೇಶ ದಿಂದ ಆರೋಪ ಮಾಡಲಾದ ಸಿಡಿ ಪ್ರಕರಣದ ಸುಳಿಯಿಂದ ಹೊರಗಡೆ ಬಂದ ಶಾಸಕರಾದ ರಮೇಶ ಜಾರಕಿಹೊಳಿ ಆರೋಪದಿಂದ ಮುಕ್ತ ಮುಕ್ತ. ಸುಧೀರ್ಘ ಎಂಟು ತಿಂಗಳ ಕಾಲ ನ್ಯಾಯಾಲಯದಲ್ಲಿ ನಡೆದ ಹೋರಾಟ.ಪ್ರಕರಣದಲ್ಲಿ ಸಾಕ್ಷಾಧಾರ ಕೊರತೆ ಹಿನ್ನೆಲೆ ನ್ಯಾಯ ದೇವತೆ ಸಾಹುಕಾರ ರಮೇಶ ಜಾರಕಿಹೊಳಿ ಅವರಿಗೆ ಕ್ಲೀನ್ ಚೀಟ್ ನೀಡಿದೆ.ಎಸ್.ಐ.ಟಿ ಅಂತಿಮ ವರದಿಯನ್ನು ಹೈಕೋರ್ಟ್ ನ್ಯಾಯಮೂರ್ತಿ ಸಂಪೂರ್ಣ ತನಿಖೆಯನ್ನು ಪರಿಗಣಿಸಿ ಎಸ್.ಐ.ಟಿ. ಬಿ-ರಿಪೋರ್ಟ್ …
Read More »ರಾಜ್ಯಕ್ಕೆ ಮತ್ತೆ ಅನ್ಯಾಯ ಮಾಡಿದ ಕೇಂದ್ರ: ಸತೀಶ್ ಜಾರಕಿಹೊಳಿ ಟೀಕೆ
ಬೆಳಗಾವಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮಂಗಳವಾರ ಲೋಕಸಭೆಯಲ್ಲಿ ಮಂಡಿಸಿದ 2022-23ನೇ ಸಾಲಿನ ಬಜೆಟ್ ಶೂನ್ಯ ಬಜೆಟ್ ಆಗಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ್ ಜಾರಕಿಹೊಳಿ ಹೇಳಿದ್ದಾರೆ. ಬಜೆಟ್ ಕುರಿತು ಪ್ರತಿಕ್ರಿಯೆ ನೀಡಿದ ಅವರು, ರಾಜ್ಯದಲ್ಲಿ 25 ಜನ ಬಿಜೆಪಿ ಸಂಸದರಿದ್ದರೂ, ರಾಜ್ಯವನ್ನೇ ಪ್ರತಿನಿಧಿಸಿದ್ದರೂ ಹಣಕಾಸು ಸಚಿವರು, ರಾಜ್ಯದ ಜನರ ನಿರೀಕ್ಷೆ ಹುಸಿಗೊಳಿಸಿದ್ದಾರೆ ಎಂದು ಟೀಕಿಸಿದ್ದಾರೆ. ದೇಶದ ಜನರು ಏಳು ವರ್ಷಗಳಿಂದ …
Read More »ಶೀಘ್ರದಲ್ಲಿಯೇ ಆರಂಭವಾಗಲಿದೆ ಕಛೇರಿ ತಾಲೂಕಿನ ಬಹುದಿನಗಳ ಬೇಡಿಕೆಯನ್ನು ಈಡೇರಿಸಿದ ಶಾಸಕ ಬಾಲಚಂದ್ರ ಜಾರಕಿಹೊಳಿ
ಮೂಡಲಗಿ : ಶಾಸಕ ಹಾಗೂ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರ ವಿಶೇಷ ಅಸ್ಥೆ, ಕಾಳಜಿಯಿಂದ ಮೂಡಲಗಿ ತಾಲೂಕಿಗೆ ಹೊಸ ಉಪ ನೋಂದಣಿ ಕಛೇರಿಯನ್ನು ರಾಜ್ಯ ಸರ್ಕಾರ ಮಂಜೂರು ಮಾಡಿದೆ. ಈ ಮೂಲಕ ಶೀಘ್ರದಲ್ಲಿಯೇ ಮೂಡಲಗಿ ತಾಲೂಕಿನಲ್ಲಿ ಉಪ ನೋಂದಣಿ ಕಛೇರಿ ಆರಂಭಗೊಳ್ಳಲಿದೆ. ಹೊಸದಾಗಿ ಈ ಉಪ ನೋಂದಣಿ ಕಛೇರಿಯನ್ನು ಆರಂಭವಾಗಿರುವುದರಿಂದ ಮೂಡಲಗಿ, ಅರಭಾವಿ ಸೇರಿದಂತೆ ಸುತ್ತಮುತ್ತಲಿನ ಹೋಬಳಿ ಮತ್ತು ಗ್ರಾಮಗಳಲ್ಲಿರುವ ಸಾರ್ವಜನಿಕರಿಗೆ ಬಹಳ ಅನುಕೂಲವಾಗಲಿದೆ. ಈ ಮೊದಲು ಗೋಕಾಕ …
Read More »ಗೋಕಾಕ ಕ್ಷೇತ್ರದ ಅಭಿವೃದ್ಧಿಗಾಗಿ 52 ಕೋಟಿ ರೂ ಬಿಡುಗಡೆ-ಶಾಸಕ ರಮೇಶ ಜಾರಕಿಹೊಳಿ.!
ಗೋಕಾಕ: ಗೋಕಾಕ ಮತಕ್ಷೇತ್ರದ ರಸ್ತೆಗಳ ಅಭಿವೃದ್ಧಿಗಾಗಿ 31 ಕೋಟಿ ರೂ. ಅಂತರ್ಜಲ ಹೆಚ್ಚಳ ಮಾಡಲು ಹಾಗೂ ಜಾನುವಾರುಗಳ ಕುಡಿಯುವ ನೀರಿಗಾಗಿ 19 ಕೋಟಿ ಮತ್ತು ಮಠಗಳ ಅಭಿವೃದ್ಧಿಗಾಗಿ 2 ಕೋಟಿ ರೂ.ಗಳು ಸೇರಿ ಒಟ್ಟು 52 ಕೋಟಿ ರೂ. ವಿಶೇಷ ಅನುದಾನ ಬಿಡುಗಡೆಯಾಗಿದೆ ಎಂದು ಶಾಸಕ ರಮೇಶ ಜಾರಕಿಹೊಳಿ ತಿಳಿಸಿದ್ದಾರೆ. ಕ್ಷೇತ್ರದಲ್ಲಿರುವ ಗ್ರಾಮೀಣ ರಸ್ತೆಗಳ ಸುಧಾರಣೆಗಾಗಿ ಪಂಚಾಯತ ರಾಜ್ಯ ಇಲಾಖೆಯ ಒಟ್ಟು 31 ಕೋಟಿ ರೂ, ಗ್ರಾಮೀಣ ಪ್ರದೇಶದಲ್ಲಿ ಅಂತರ್ಜಲ …
Read More »