ಬೆಳಗಾವಿ ಮಹಾನಗರ ಪಾಲಿಕೆಯ ಮೇಯರ್ ಮತ್ತು ಉಪಮೇಯರ್ ಮೀಸಲಾತಿ ಘೋಷಣೆ ಆಗಿದೆ:ಮೇಯರ ಸ್ಥಾನವು ಸಾಮಾನ್ಯ ಮಹಿಳೆಗೆ ಮೀಸಲಾಗಿದ್ದರೆ, ಉಪಮೇಯರ್ ಸ್ಥಾನ ಹಿಂದುಳಿಗ ವರ್ಗ ಬ ಮಹಿಳೆಗೆ ಮೀಸಲಾಗಿದ್ದು. ಪಾಲಿಕೆ ಚುನಾವಣೆ ಮುಗಿದ ಹಲವು ತಿಂಗಳು ಕಳೆದರೂ ಮೇಯರ್, ಉಪಮೇಯರ್ ಆಯ್ಕೆಗೆ ಮುಹೂರ್ತ ಕೂಡಿ ಬಂದಿರಲಿಲ್ಲ. ಆದರೆ ಇದೀಗ ಮೀಸಲಾತಿ ಘೋಷಣೆ ಆಗಿದ್ದು. ಬಿಜೆಪಿಯಲ್ಲಿಯೇ ಯಾರಿಗೆ ಮೇಯರ್, ಉಪಮೇಯರ್ ಭಾಗ್ಯ ಸಿಗುತ್ತದೆ ಎಂದು ಕಾದು ನೋಡಬೇಕಿದೆ.
Read More »ರಮೇಶ್ ಜಾರಕಿಹೊಳಿಯವರು ಒಬ್ಬ ಪವರ್ ಫುಲ್ ನಾಯಕರು ಎಷ್ಟು ಶಾಸಕರನ್ನು ಬೇಕಾದರೂ ಬಿಜೆಪಿಗೆ ಕರೆತರಬಹುದು- ಗೋವಿಂದ್ ಕಾರಜೋಳ್
ರಮೇಶ್ ಜಾರಕಿಹೊಳಿ ಒಬ್ಬ ಸಮರ್ಥ ನಾಯಕರು. ಅವರು ಬಿಜೆಪಿಗೆ ಎಷ್ಟು ಜನರನ್ನು ಬೇಕಾದರೂ ಕರೆ ತರಬಹುದು. ಅವರಲ್ಲಿ ಆ ಶಕ್ತಿ ಇದೆ. ಅವರು ಎಷ್ಟು ಜನ ಶಾಸಕರನ್ನು ಬೇಕಾದರೂ ಕರೆತರಬಹುದು ಎಂದು ಸಚಿವ ಗೋವಿಂದ ಕಾರಜೋಳ ಹೇಳಿದ್ದಾರೆ.ಬೆಳಗಾವಿಯಲ್ಲಿ ಗಣರಾಜ್ಯೋತ್ಸವ ಸಂಬರ್ಭದಲ್ಲಿ ಧ್ವಜಾರೋಹಣದ ನೆರವೇರಿಸಿದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಜಿಲ್ಲಾ ಉಸ್ತುವಾರಿ ಸಚಿವ ಗೋವಿಂದ ಕಾರಜೋಳರವರು, ರಮೇಶ್ ಜಾರಕಿಹೊಳಿ ಒಬ್ಬ ಹಿರಿಯ ರಾಜಕಾರಣಿಗಳು. ಮಾಜಿ ಮಂತ್ರಿ ಹಾಗೂ ಅನುಭವಿ ರಾಜಕಾರಣಿ. ಅವರ …
Read More »ಮಕ್ಕಳಿಗಾಗಿ 882 ಹಾಸಿಗೆಗಳನ್ನು ಮೀಸಲು
ಬೆಳಗಾವಿ: ಕೋವಿಡ್ 3ನೇ ಅಲೆ ವ್ಯಾಪಿಸುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಮಕ್ಕಳಿಗಾಗಿ 882 ಹಾಸಿಗೆಗಳನ್ನು ಮೀಸಲಿಡಲಾಗಿದೆ. ಔಷಧಿಗಳೂ ಲಭ್ಯ ಇವೆ’ ಎಂದು ಜಿಲ್ಲಾ ಉಸ್ತುವಾರಿ ಸಚಿವ ಗೋವಿಂದ ಕಾರಜೋಳ ತಿಳಿಸಿದರು. ಇಲ್ಲಿನ ಪ್ರವಾಸಿ ಮಂದಿರದಲ್ಲಿ ಮಂಗಳವಾರ ಅಧಿಕಾರಿಗಳ ಸಭೆ ನಡೆಸಿದ ನಂತರ ಪತ್ರಕರ್ತರೊಂದಿಗೆ ಅವರು ಮಾತನಾಡಿದರು. ‘ಜ.1ರಿಂದ ಆರಂಭವಾದ ಅಲೆ ವೇಗವಾಗಿ ಹರಡುತ್ತಿದೆ. ನಿಯಂತ್ರಣಕ್ಕೆ ತಜ್ಞರ ಸಲಹೆ ಪಡೆದು ಕ್ರಮ ಕೈಗೊಳ್ಳಲಾಗಿದೆ. ಜಿಲ್ಲೆಯಲ್ಲಿ 1,05,233 ಮಂದಿಯ ಗಂಟಲು ದ್ರವ ಮಾದರಿ ಸಂಗ್ರಹಿಸಿ …
Read More »ಬೆಳಗಾವಿ ಜಿಲ್ಲೆಯಲ್ಲಿ ಸಿಡಿದ ಕೊರೊನಾ ಬಾಂಬ್: ಇಂದು 977 ಪಾಸಿಟಿವ್, 4 ಸಾವು
ಬೆಳಗಾವಿ ಜಿಲ್ಲೆಯಲ್ಲಿ ಇಂದು ಮಹಾಮಾರಿ ಕೊರೊನಾ ಮತ್ತೆ ತನ್ನ ಅಟ್ಟಹಾಸ ಮೆರೆದಿದೆ. ಇಂದು ಹೊಸದಾಗಿ 977 ಹೊಸ ಕೊರೊನಾ ಕೇಸ್‍ಗಳು ಪತ್ತೆಯಾಗಿವೆ. ಅದೇ ರೀತಿ ನಾಲ್ವರು ಸಾವನ್ನಪ್ಪಿದ್ದಾರೆ.ಮಂಗಳವಾರ ಬೆಳಗಾವಿ ಜಿಲ್ಲಾ ಆರೋಗ್ಯ ಇಲಾಖೆ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹೊರಡಿಸಿದ ಹೆಲ್ತ್ ಬುಲೆಟಿನ್‍ನಲ್ಲಿ ಜಿಲ್ಲೆಯಲ್ಲಿ 977 ಹೊಸ ಕೇಸ್‍ಗಳು ಕಾಣಿಸಿಕೊಂಡಿವೆ. ಅದೇ ರೀತಿ ಇಂದು ನಾಲ್ವರು ಕೊರೊನಾದಿಂದ ಸಾವನ್ನಪ್ಪಿದ್ದಾರೆ. ಬೆಳಗಾವಿಯ 36 ವರ್ಷ ವ್ಯಕ್ತಿ, 64 ವರ್ಷದ ವೃದ್ಧ, 73 …
Read More »ನಾನು ಯಾವ ಕಡೆ ಇಲ್ಲ: ಬಿಜೆಪಿ ಪಕ್ಷದ ಪರವಾಗಿ ಇದ್ದೇನೆ: ದುರ್ಯೋಧನ ಐಹೊಳೆ
ನಾನಂತು ಸಚಿವಗಿರಿಗಾಗಿ ಗುಂಪುಗಾರಿಕೆ, ಜಗಳ ಮಾಡಲ್ಲ. ಸಚಿವ ಸ್ಥಾನ ಕರೆದು ಕೊಟ್ಟರೇ ನಿಭಾಯಿಸುತ್ತೇವೆ. ಸಚಿವ ಸ್ಥಾನ ಬೇಕು ಎಂದು ಹಠ ಮಾಡಲ್ಲ. ನಮ್ಮ ನಾಯಕರಾದ ಗೋವಿಂದ ಕಾರಜೋಳ ಅವರು ಇರೋ ತನ ನಾವು ಮಂತ್ರಿ ಸ್ಥಾನ ಕೇಳುವುದಿಲ್ಲ ಎಂದು ಬಿಜೆಪಿ ಶಾಸಕ ದುರ್ಯೋಧನ ಐಹೊಳೆ ತಮ್ಮ ಅಭಿಪ್ರಾಯ ತಿಳಿಸಿದ್ದಾರೆ. ಬೆಳಗಾವಿಯ ಪ್ರವಾಸಿ ಮಂದಿರದಲ್ಲಿ ಮಾಧ್ಯಮಗಳ ಜೊತೆಗೆ ಮಾತನಾಡಿದ ಶಾಸಕ ದುರ್ಯೋಧನ ಐಹೊಳೆ ಬಿಜೆಪಿ ಪಕ್ಷದ ಚಿಹ್ನೆ ಮೇಲೆ ಮೂರು ಬಾರಿ …
Read More »ಮೂಡಲಗಿ ತಾಲೂಕಿನ ಸಾರ್ವಜನಿಕರ ಬಹು ನಿರೀಕ್ಷೆಯ ಉಪ ನೋಂದಣಾಧಿಕಾರಿಗಳ ಕಛೇರಿ ಆರಂಭಕ್ಕೆ ಹಣಕಾಸು ಇಲಾಖೆಯಿಂದ ಅನುಮೋದನೆ ದೊರೆತಿದೆ ಎಂದು ಕೆಎಂಎಫ್ ಅಧ್ಯಕ್ಷ ಮತ್ತು ಶಾಸಕ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು.
ಮೂಡಲಗಿ : ಮೂಡಲಗಿ ತಾಲೂಕಿನ ಸಾರ್ವಜನಿಕರ ಬಹು ನಿರೀಕ್ಷೆಯ ಉಪ ನೋಂದಣಾಧಿಕಾರಿಗಳ ಕಛೇರಿ ಆರಂಭಕ್ಕೆ ಹಣಕಾಸು ಇಲಾಖೆಯಿಂದ ಅನುಮೋದನೆ ದೊರೆತಿದೆ ಎಂದು ಕೆಎಂಎಫ್ ಅಧ್ಯಕ್ಷ ಮತ್ತು ಶಾಸಕ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು. ಮೂಡಲಗಿಯಲ್ಲಿ ಹೊಸದಾಗಿ ಉಪನೋಂದಣಾಧಿಕಾರಿಗಳ ಕಛೇರಿಯನ್ನು ಫೆಬ್ರುವರಿ ತಿಂಗಳೊಳಗೆ ಆರಂಭಿಸಲಾಗುವುದು ಎಂದು ಅವರು ಹೇಳಿದರು. ಸತತವಾಗಿ ಎರಡು ವರ್ಷಗಳಿಂದ ಕೋವಿಡ್ ಹಿನ್ನೆಲೆಯಲ್ಲಿ ಕಛೇರಿ ಆರಂಭಕ್ಕೆ ಹಣಕಾಸು ಇಲಾಖೆಯು ನಮ್ಮ ಪ್ರಸ್ತಾವಣೆಯನ್ನು ವಿಳಂಬ ಮಾಡಿತ್ತು. ಆದರೂ ಹಲವು …
Read More »ಬೆಳಗಾವಿ ಪಾಲಿಕೆಗೆ ಇನ್ನೂ ಇಲ್ಲ ಮೇಯರ್ ಭಾಗ್ಯ! ಮೇಯರ್ ಆಯ್ಕೆ ವಿಳಂಬದ ಹಿಂದಿದ್ಯಾ ಕಮಲ ಶಾಸಕರ ಕೈವಾಡ?
ಬೆಳಗಾವಿ ಮಹಾನಗರ ಪಾಲಿಕೆ ಚುನಾವಣೆ ನಡೆದು ನಾಲ್ಕು ತಿಂಗಳು ಕಳೆದಿವೆ.. ಆದ್ರೂ, ಇನ್ನೂ ನೂತನ ಸದಸ್ಯರಿಗೆ ಪ್ರಮಾಣ ವಚನ ಸ್ವೀಕರಿಸುವ ಭಾಗ್ಯ ಸಿಕ್ಕಿಲ್ಲ.. ಮೇಯರ್-ಉಪಮೇಯರ್ ಆಯ್ಕೆಯಾಗಿಲ್ಲ.. ಈವರೆಗೂ ಒಂದೇ ಒಂದು ಸಭೆಯೂ ನಡೆದಿಲ್ಲ.. ಇದ್ರಿಂದ ಬೆಳಗಾವಿ ಅಭಿವೃದ್ಧಿಗೆ ಗೃಹಣ ಹಿಡಿದಿದೆ. ಬೆಳಗಾವಿ ಪಾಲಿಕೆ 4 ತಿಂಗಳಾದ್ರೂ ಅತಂತ್ರವಾಗಿಯೇ ಇದೆ! ಮೇಯರ್-ಉಪಮೇಯರ್ ಆಯ್ಕೆಯಾಗದೆ ನಗರದ ಅಭಿವೃದ್ಧಿ ಕುಂಠಿತಗೊಂಡಿದೆ. ಬೆಳಗಾವಿ ಮಹಾನಗರ ಪಾಲಿಕೆಯ ಇತಿಹಾಸದಲ್ಲೇ ಮೊದಲ ಬಾರಿಗೆ ಬಿಜೆಪಿ ಬಹುಮತ ಪಡೆದಿದೆ. 58 …
Read More »ಶೈಕ್ಷಣಿಕ ಪ್ರಗತಿಗಾಗಿ 56,856 ಎಸ್ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಪುಸ್ತಕ ವಿತರಣೆ: ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ
ಬೆಳಗಾವಿ: ಜಿಲ್ಲೆಯ 915 ಪ್ರೌಢ ಶಾಲೆಗಳ 56,856 ಎಸ್ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಪರೀಕ್ಷೆಗೆ ಅನುಕೂಲವಾಗುವ ದೃಷ್ಟಿಯಿಂದ 13 ಲಕ್ಷ ರೂ. ಮೊತ್ತದಲ್ಲಿ 15,000 ಪ್ರತಿಗಳನ್ನು ವಿದ್ಯಾರ್ಥಿಗಳಿಗೆ ನೀಡಲಾಗುತ್ತಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ್ ಜಾರಕಿಹೊಳಿ ಹೇಳಿದರು. ನಗರದ ಸಂಕಮ್ ಹೊಟೇಲ್‌ನಲ್ಲಿ ಸತೀಶ್ ಜಾರಕಿಹೊಳಿ ಫೌಂಡೇಶನ್ ವತಿಯಿಂದ ಹಮ್ಮಿಕೊಂಡಿದ್ದ ಬೆಳಗಾವಿ ಹಾಗೂ ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಗಳ ಎಸ್ಎಸ್‌ಎಲ್‌ಸಿ ವಿದ್ಯಾರ್ಥಿಗಳ ಪರೀಕ್ಷಾ ಸಿದ್ದತೆಗಾಗಿ “ಗೆಲುವಿನ ನತ್ತ ನಮ್ಮ ಪಯಣ” …
Read More »ಕಾರಜೋಳಗೆ ಜಿಲ್ಲಾ ಉಸ್ತುವಾರಿ : ಶಾಸಕ ಬಾಲಚಂದ್ರ ಜಾರಕಿಹೊಳಿ ಹರ್ಷ
ಗೋಕಾಕ : ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ಅವರನ್ನು ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವರಾಗಿ ಮುಂದುವರೆಸಿರುವುದಕ್ಕೆ ಕೆಎಂಎಫ್ ಅಧ್ಯಕ್ಷ ಹಾಗೂ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಹರ್ಷ ವ್ಯಕ್ತಪಡಿಸಿದ್ದಾರೆ. ಗೋವಿಂದ ಕಾರಜೋಳ ಅವರು ಉಸ್ತುವಾರಿ ಸಚಿವರಾಗಿ ಜಿಲ್ಲೆಯಲ್ಲಿ ಉತ್ತಮವಾಗಿ ಕೆಲಸ ನಿರ್ವಹಿಸುತ್ತಿದ್ದಾರೆ. ಮುಂಬರುವ ತಾಪಂ, ಜಿಪಂ ಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಯ್ಕೆಯಾಗಲು ಎಲ್ಲರೂ ಶ್ರಮಿಸಬೇಕು. ಜಿಲ್ಲೆಯನ್ನು ಇನ್ನಷ್ಟು ಹೆಚ್ಚಿನ ಪ್ರಮಾಣದಲ್ಲಿ ಅಭಿವೃದ್ಧಿ ಕಾರ್ಯಗಳು ನೆರವೇರಲಿಕ್ಕೆ ಕಾರಜೋಳ …
Read More »ಬೆಳಗಾವಿ ಜಿಲ್ಲೆಯ ಸೋಮವಾರದ ಕೊರೋನಾ ಮಾಹಿತಿ; ಸವದತ್ತಿಯ ವ್ಯಕ್ತಿ ಬಲಿ
ಬೆಳಗಾವಿ – ಬೆಳಗಾವಿ ಜಿಲ್ಲೆಯಲ್ಲಿ ಸೋಮವಾರ 625 ಜನರಿಗೆ ಕೊರೋನಾ ಸೋಂಕು ದೃಢಪಟ್ಟಿದೆ. ಬೆಳಗಾವಿ ನಗರದಲ್ಲಿ 325, ಸವದತ್ತಿಯಲ್ಲಿ 59, ರಾಮದುರ್ಗದಲ್ಲಿ 47, ಚಿಕ್ಕೋಡಿಯಲ್ಲಿ 43, ರಾಯಬಾಗದಲ್ಲಿ 35, ಬೈಲಹೊಂಗಲದಲ್ಲಿ 32, ಅಥಣಿಯಲ್ಲಿ 27, ಗೋಕಾಕಲ್ಲಿ 24, ಖಾನಾಪುರದಲ್ಲಿ 20 ಜನರಿಗೆ ಸೋಂಕು ಪತ್ತೆಯಾಗಿದೆ. ಸವದತ್ತಿಯ 49 ವರ್ಷದ ವ್ಯಕ್ತಿ ಕೊರೋನಾಕ್ಕೆ ಬಲಿಯಾಗಿದ್ದಾರೆ. ಅವರು ಮನೆಯಲ್ಲೇ ಚಿಕಿತ್ಸೆ ಪಡೆಯುತ್ತಿದ್ದರು. ಜಿಲ್ಲೆಯಲ್ಲಿ ಇನ್ನೂ 1144 ಜನರು ಕೊರೋನಾ …
Read More »