Breaking News
Home / ಜಿಲ್ಲೆ / ಬೆಳಗಾವಿ (page 29)

ಬೆಳಗಾವಿ

ಶ್ರೇಷ್ಠ ಫೌಂಡೇಶನ್ ವತಿಯಿಂದ ಅನ್ನಸಂತರ್ಪಣೆ ಕಾರ್ಯಕ್ರಮ

ಮೂಡಲಗಿ : ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಚೇರಮನ್ ರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಅನ್ನದಾಸೋಹ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.   ಪ್ರತಿ ಶನಿವಾರ ಶ್ರೇಷ್ಠ ಫೌಂಡೇಶನ್ ವತಿಯಿಂದ ವಿವಿಧ ಕಡೆಗಳಲ್ಲಿ ಅನ್ನ ಸಂತರ್ಪಣೆ ಕಾರ್ಯಕ್ರಮವನ್ನು ಸಂತೋಷ ಜಾರಕಿಹೊಳಿ ಅವರು ಹಮ್ಮಿಕೊಂಡಿದ್ದು ಈ ಶನಿವಾರ ಮೂಡಲಗಿ ತಾಲೂಕಿನ ಸಂಗನಕೇರಿ ಗ್ರಾಮದಲ್ಲಿ ಶ್ರೀ ಹನುಮಂತೆಶ್ವರ ದೇವಸ್ಥಾನದ ಆವರಣದಲ್ಲಿ ಅನ್ನ ಸಂತರ್ಪಣೆ ಹಮ್ಮಿಕೊಂಡಿದ್ದರು.   ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಚೇರಮನ್ ರಾದ …

Read More »

ಬೆಳಗಾವಿ: ಆಸ್ತಿಗಾಗಿ ಉಪ್ಪಿಟ್ಟಿನಲ್ಲಿ ಗಂಡನಿಗೆ ವಿಷ ಹಾಕಿದ ಪತ್ನಿ; ಪತಿ ಐಸಿಯುಗೆ, ನಾಯಿ-ಬೆಕ್ಕು ಸಾವು

ಬೆಳಗಾವಿ: ಎರಡು ಎಕರೆ ಜಮೀನನ್ನು ತಮ್ಮ ಹೆಸರಿಗೆ ಮಾಡಿಸಿಕೊಳ್ಳುವ ಉದ್ದೇಶದಿಂದ ಮಹಿಳೆಯೊಬ್ಬಳು, ತನ್ನ ಪತಿಗೆ ಉಪ್ಪಿಟ್ಟಿನಲ್ಲಿ ವಿಷ ಹಾಕಿ ಕೊಲೆಗೆ ಯತ್ನಿಸಿದ ಪ್ರಕರಣ ಪತ್ತೆ ಹಚ್ಚುವಲ್ಲಿ ಸವದತ್ತಿ ಪೊಲೀಸರು ಯಶಸ್ವಿಯಾಗಿದ್ದಾರೆ.   ವಿಷಪೂರಿತ ಉಪ್ಪಿಟ್ಟು ಸೇವಿಸಿ ಅಸ್ವಸ್ಥರಾಗಿದ್ದ ಸವದತ್ತಿ ತಾಲೂಕಿನ ಗೋರಾಬಾಳ ಗ್ರಾಮದ ನಿಂಗಪ್ಪ ಫಕೀರಪ್ಪ ಹಮಾನಿ (35) ಅವರನ್ನು ಹುಬ್ಬಳ್ಳಿಯ ಕಿಮ್ಸ್‌ ಆಸ್ಪತ್ರೆಗೆ ದಾಖಲಿಸಲಾಗಿದೆ. ಪತ್ನಿ ಸಾವಕ್ಕ (32) ಹಾಗೂ ಇವರ ಸಹೋದರ ಫಕೀರಪ್ಪ ಲಕ್ಷ್ಮಣ ಸಿಂಧೋಗಿ (30) ಕೊಲೆಗೆ …

Read More »

ಬಿಜೆಪಿಯಲ್ಲಿ ಕಿರುಕುಳ ಅನುಭವಿಸುವವರು ಕಾಂಗ್ರೆಸ್​ಗೆ ಬರಬಹುದು: ಗೃಹ ಸಚಿವ

ಬೆಳಗಾವಿ: ನಮ್ಮಲ್ಲಿಂದ ಹೋಗಿರುವ ಶಾಸಕರಿಗೆ ಬಿಜೆಪಿಯಲ್ಲಿ ಕಿರುಕುಳ ಇರೋದು ಸತ್ಯವಾದರೆ, ಕಾಂಗ್ರೆಸ್ ಪಕ್ಷದ ಸಿದ್ಧಾಂತ ಒಪ್ಪಿ ಬಂದರೆ ಸ್ವಾಗತ ಎಂದು ಗೃಹ ಸಚಿವ ಜಿ ಪರಮೇಶ್ವರ ತಿಳಿಸಿದ್ದಾರೆ. ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಮಾಧ್ಯಮಗಳ ಜತೆಗೆ ಮಾತನಾಡಿದ ಅವರು, ನಾವು ಯಾರಿಗೂ ಬರಬೇಡಿ ಅಂತ ಹೇಳಿಲ್ಲ. ನಮ್ಮ ಸಿದ್ಧಾಂತ ಒಪ್ಪಿ ಬರೋದಾದರೆ ಬರಲಿ ಅವರನ್ನು ಸ್ವಾಗತ ಮಾಡುತ್ತೇವೆ. ಯಾವ ಶಾಸಕರು ಬರ್ತಾರೆ ಅಂತ ನನಗೆ ಗೊತ್ತಿಲ್ಲ. ಆದರೆ, ಬರ್ತಾರೆ ಎನ್ನುವ ಮಾತಿದೆ …

Read More »

ರೈತರ ಪಂಪ್​ಸೆಟ್​ಗಳಿಗೆ ಸಮರ್ಪಕ ವಿದ್ಯುತ್ ಪೂರೈಕೆಯಾಗದಿದ್ದರೆ ಉಗ್ರ ಪ್ರತಿಭಟನೆ:ಕಡಾಡಿ

ಬೆಳಗಾವಿ: ಲೋಡ್ ಶೆಡ್ಡಿಂಗ್ ಪರಿಣಾಮವಾಗಿ ರೈತರ ಬೆಳೆಗಳು ನೀರಿಲ್ಲದೆ ಒಣಗುವ ಪರಿಸ್ಥಿತಿಗೆ ತಲುಪಿದ್ದು, ಪಂಪ್‌ಸೆಟ್​ಗಳಿಗೆ ಸಮರ್ಪಕ ವಿದ್ಯುತ್ ಪೂರೈಕೆಗೆ ತಕ್ಷಣ ಕ್ರಮ ಕೈಗೊಳ್ಳಬೇಕು. ಇಲ್ಲದಿದ್ದರೆ ರೈತರೊಂದಿಗೆ ಸೇರಿ ಬಿಜೆಪಿ ರೈತ ಮೋರ್ಚಾ ವತಿಯಿಂದ ಉಗ್ರ ಪ್ರತಿಭಟನೆ ಮಾಡಬೇಕಾಗುತ್ತದೆ ಎಂದು ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ಹೇಳಿದ್ದಾರೆ. ನಗರದಲ್ಲಿಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಐಪಿ ಸೆಟ್​ಗಳಿಗೆ ಸರಿಯಾಗಿ ವಿದ್ಯುತ್ ಪೂರೈಕೆ ಮಾಡದಿದ್ದರೆ ಈಗ ಬಿತ್ತಿರುವ ಶೇ.80ರಷ್ಟು ಬೆಳೆಗಳು ಒಣಗಿ, ಜಿಲ್ಲೆಯಲ್ಲಿ ಆಹಾರ …

Read More »

ಶ್ರಾವಣ ಮಾಸದ ನಿಮಿತ್ತ ಆಗಸ್ಟ್ 17ರಿಂದ ಸೆಪ್ಟೆಂಬರ್ 14ರ ವರೆಗೆ ಯಲ್ಲಮ್ಮನ ಗುಡ್ಡದಲ್ಲಿ‌ ವಿಶೇಷ ಪೂಜೆ

ಬೆಳಗಾವಿ: ಉತ್ತರ ಕರ್ನಾಟಕ‌ದ ಶಕ್ತಿದೇವತೆ ಸವದತ್ತಿಯ ಶ್ರೀ ರೇಣುಕಾ ಯಲ್ಲಮ್ಮ ದೇವಸ್ಥಾನಕ್ಕೆ ಶ್ರಾವಣ ಮಾಸದ ಮೊದಲ ದಿನ ಭಕ್ತಸಾಗರವೇ ಹರಿದುಬಂತು. ಬೆಳಗ್ಗೆ ಸರತಿ ಸಾಲಿನಲ್ಲಿ ನಿಂತು ಭಕ್ತರು ದೇವಿಯ ದರ್ಶನ ಪಡೆದು ಪುನೀತರಾದರು. ಆಗಸ್ಟ್ 17ರಿಂದ ಸೆಪ್ಟೆಂಬರ್ 14ರ ವರೆಗೆ ಯಲ್ಲಮ್ಮಗುಡ್ಡದಲ್ಲಿ‌ ವಿಶೇಷ ಪೂಜೆ ಹಮ್ಮಿಕೊಳ್ಳಲಾಗಿದೆ. ಇಂದು ರಾತ್ರಿ 2 ಗಂಟೆಗೆ ವಿಶೇಷ ಪೂಜೆ ನೆರವೇರಿದ್ದು, ಬೆಳಗ್ಗೆ 4 ಗಂಟೆಯಿಂದ ದೇವಿಯ ದರ್ಶನಕ್ಕೆ ಭಕ್ತರಿಗೆ ಅವಕಾಶ ನೀಡಲಾಯಿತು. ಬೆಳಗ್ಗೆ ಸಾವಿರಾರು …

Read More »

ನಾವು ಬೆಳಗಾವಿ ಜಿಲ್ಲೆಯ ಎರಡು ಲೋಕಸಭಾ ಸ್ಥಾನವನ್ನು ಗೆಲ್ಲುತ್ತೇವೆ: ಸತೀಶ್ ಜಾರಕಿಹೊಳಿ

ಚಿಕ್ಕೋಡಿ (ಬೆಳಗಾವಿ): “ಲೋಕಸಭಾ ಚುನಾವಣೆಗೆ ಇನ್ನು ತುಂಬಾ ಸಮಯವಿದೆ. ಯಾರು ಸ್ಪರ್ಧೆ ಮಾಡಬೇಕೆಂಬುದು ಇನ್ನೂ ಅಂತಿಮವಾಗಿಲ್ಲ. ಪಕ್ಷ ಯಾರನ್ನು ಗುರುತಿಸುತ್ತದೋ ಅವರು ಸ್ಪರ್ಧೆ ಮಾಡುತ್ತಾರೆ. ನಾವು ಬೆಳಗಾವಿ ಜಿಲ್ಲೆಯ ಎರಡು ಲೋಕಸಭಾ ಸ್ಥಾನವನ್ನು ಗೆಲ್ಲುತ್ತೇವೆ” ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ವಿಶ್ವಾಸ ವ್ಯಕ್ತಪಡಿಸಿದರು. ಜಿಲ್ಲೆಯ ಹುಕ್ಕೇರಿ ತಾಲೂಕಿನ ಹುನ್ನೂರು ಪ್ರವಾಸ ಮಂದಿರದಲ್ಲಿ ಇಂದು ಮಾಧ್ಯಮದವರೊಂದಿಗೆ ಅವರು ಮಾತನಾಡಿದರು. ಎರಡೂವರೆ ವರ್ಷದ ಬಳಿಕ ಹಿರಿಯ ಸಚಿವರು ಬೇರೆಯವರಿಗೆ ಅವಕಾಶ ನೀಡಬೇಕು ಎಂಬ …

Read More »

ಕಪಿಲೇಶ್ವರ ಮಂದಿರದ ಆವರಣದ ಹೊಂಡದಲ್ಲಿ ಜೋಡಿ ಶವಗಳು ಪತ್ತೆ

ಬೆಳಗಾವಿ: ಇಲ್ಲಿನ ಕಪಿಲೇಶ್ವರ ಮಂದಿರದ ಆವರಣದ ಹೊಂಡದಲ್ಲಿ ಬೆಳ್ಳಂ ಬೆಳಗ್ಗೆ ಅಪರಿಚಿತ ಜೋಡಿ ಶವಗಳು ಪತ್ತೆಯಾಗಿರುವ ಘಟನೆ ನಡೆದಿದೆ. ಘಟನೆಯಿಂದ ನಗರದ ಜನತೆ ಬೆಚ್ಚಿ ಬಿದ್ದಿದ್ದಾರೆ. ಒಂದು ಪುರುಷ ಶವವಾಗಿದ್ದು, ಮತ್ತೊಂದು ಮಹಿಳೆಯದ್ದಾಗಿದೆ. ಬೆಳಗ್ಗೆ ಇಲ್ಲಿ ವಾಕಿಂಗ್ ಮಾಡುತ್ತಿದ್ದ ಸ್ಥಳೀಯರು ಹೊಂಡದಲ್ಲಿ ಎರಡು ಹೆಣಗಳು ತೇಲುತ್ತಿರುವುದನ್ನು ಗಮನಿಸಿ, ತಕ್ಷಣ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಶವಗಳು ಗುರುತು ಇನ್ನೂ ಪತ್ತೆಯಾಗಿಲ್ಲ. ಸಾವಿನ ಸುತ್ತ ಅನುಮಾನದ ಹುತ್ತ: ಘಟನಾ ಸ್ಥಳಕ್ಕೆ ಪೊಲೀಸರು ದೌಡಾಯಿಸಿದ್ದು, ಶವಗಳನ್ನು ಹೊಂಡದಿಂದ …

Read More »

ಇತಿಹಾಸ ಸಾರುವ ಬೆಳಗಾವಿ ವೀರಸೌಧ; ಹಿರಿಯ ಸ್ವಾತಂತ್ರ್ಯ ಹೋರಾಟಗಾರ ರಾಜೇಂದ್ರ ಕಲಘಟಗಿ ಹೇಳಿದ್ದೇನು?

ಬೆಳಗಾವಿ : ಭಾರತ ದೇಶ ತನ್ನ 77ನೇ ಸ್ವಾತಂತ್ರ್ಯೋತ್ಸವದ ಸಂಭ್ರದಲ್ಲಿದೆ. ಇನ್ನೊಂದೆಡೆ ದೇಶಕ್ಕೆ ಸ್ವಾತಂತ್ರ್ಯ ತಂದು ಕೊಡುವಲ್ಲಿ ಪ್ರಮುಖ ಪಾತ್ರವಹಿದ್ದ ಬೆಳಗಾವಿ ವೀರಸೌಧದಲ್ಲಿ ಪ್ರತಿ ವರ್ಷ ಆಗಸ್ಟ್ 15ರಂದು ಬೆಳಿಗ್ಗೆ 7 ಗಂಟೆಗೆ ಸ್ವಾತಂತ್ರ್ಯೋತ್ಸವ ಆಚರಿಸಲಾಗುತ್ತದೆ. ಅಲ್ಲದೇ ಬೆಳಗಾವಿಗೆ ಬರುವ ಎಲ್ಲ ಮಹನೀಯರು ಈ ಸೌಧಕ್ಕೆ ಭೇಟಿ ನೀಡುತ್ತಾರೆ. ಏಕೆಂದರೇ ಸ್ವಾತಂತ್ರ್ಯ ಹೋರಾಟದಲ್ಲಿ ಬೆಳಗಾವಿ ಇತಿಹಾಸ ತನ್ನದೇಯಾದ ಛಾಪು ಮೂಡಿಸಿದೆ. ಹೌದು, ಸ್ವಾತಂತ್ರ್ಯ ಹೋರಾಟದಲ್ಲಿ ಬೆಳಗಾವಿ ಮಣ್ಣಿಗೆ ವಿಶೇಷ ನಂಟಿದ್ದು, ಹಲವು …

Read More »

ವಿಮಲ್ ಫೌಂಡೇಶನ್ ದತ್ತಿ ಸಂಸ್ಥೆಯ ಸಹಯೋಗದಲ್ಲಿ ವಿದ್ಯಾರ್ಥಿಗಳಿಗೆ 76 ನೇ ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಕಿರುಪುಸ್ತಕ ಹಾಗೂ ತ್ರಿವರ್ಣ ಧ್ವಜಗಳನ್ನು ವಿತರಿಸಲಾಯಿತು.

ಬೆಳಗಾವಿಯ ಬಬನ್ ಬೋಬೆ ಮಿತ್ರ ಮಂಡಳದ ವತಿಯಿಂದ ವಿಮಲ್ ಫೌಂಡೇಶನ್ ದತ್ತಿ ಸಂಸ್ಥೆಯ ಸಹಯೋಗದಲ್ಲಿ ವಿದ್ಯಾರ್ಥಿಗಳಿಗೆ 76 ನೇ ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಕಿರುಪುಸ್ತಕ ಹಾಗೂ ತ್ರಿವರ್ಣ ಧ್ವಜಗಳನ್ನು ವಿತರಿಸಲಾಯಿತು. ವಿಮಲ್ ಫೌಂಡೇಶನ್ ಅಧ್ಯಕ್ಷ, ಸಕಲ ಮರಾಠಾ ಸಮಾಜದ ಮುಖಂಡ ಹಾಗೂ ಬಿಜೆಪಿ ರಾಜ್ಯ ಒಬಿಸಿ ಮೋರ್ಚಾದ ಪ್ರಧಾನ ಕಾರ್ಯದರ್ಶಿ ಕಿರಣ ಜಾಧವ ಅವರು ವಿದ್ಯಾರ್ಥಿಗಳಿಗೆ ಕಿರುಪುಸ್ತಕ ಮತ್ತು ತ್ರಿವರ್ಣ ಧ್ವಜಗಳನ್ನು ವಿತರಿಸಿ ಮಾತನಾಡಿ, ವಿದ್ಯಾರ್ಥಿಗಳು ವಿದ್ಯಾವಂತರಾಗಿ, ಸಂಸ್ಕಾರವಂತರಾಗಿ ಭಾರತದ …

Read More »

ಅನೈತಿಕ ಸಂಬಂಧದಿಂದ ಹೆತ್ತ ಮಗನನ್ನು ಬಾವಿಯಲ್ಲಿ ದೂಡಿ ಕೊಲೆ,ಜೀವಾವಧಿ ಶಿಕ್ಷೆ ಮತ್ತು ೭ ಸಾವಿರ ದಂಡ ವಿಧಿಸಿ ಚಿಕ್ಕೋಡಿ ಏಳನೆ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ತೀರ್ಪು

ಚಿಕ್ಕೋಡಿ: ಅನೈತಿಕ ಸಂಬಂಧದಿಂದ ಹೆತ್ತ ಮಗನನ್ನು ಬಾವಿಯಲ್ಲಿ ದೂಡಿ ಕೊಲೆ ಮಾಡಿದ ಆರೋಪದ ಹಿನ್ನಲ್ಲೆಯಲ್ಲಿ ಹುಕ್ಕೇರಿ ತಾಲೂಕಿನ ಬೆಲ್ಲದ ಬಾಗೇವಾಡಿ ಗ್ರಾಮದ ಶ್ರೀಮತಿ ಸುಧಾ ಸುರೇಶ ಕರಿಗಾರ(೩೧) ಇತಳಿಗೆ ಜೀವಾವಧಿ ಶಿಕ್ಷೆ ಮತ್ತು ೭ ಸಾವಿರ ದಂಡ ವಿಧಿಸಿ ಚಿಕ್ಕೋಡಿ ಏಳನೆ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ತೀರ್ಪು ನೀಡಿದೆ. ಹುಕ್ಕೇರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಕಳೆದ ೨೨-೧೦-೨೦೧೯ರಲ್ಲಿ ನಡೆದ ಪ್ರಕರಣದ ವಿಚಾರಣೆ ನಡೆಸಿದ ಚಿಕ್ಕೋಡಿ ಏಳನೆ ಹೆಚ್ಚುವರಿ …

Read More »