ಬೆಳಗಾವಿ: ಎಸ್ಡಿಎ ರುದ್ರಣ್ಣ ಯಡವಣ್ಣವರ ಆತ್ಮಹತ್ಯೆ ಪ್ರಕರಣದ ಪ್ರಮುಖ ಆರೋಪಿ ತಹಶೀಲ್ದಾರ್ ಬಸವರಾಜ ನಾಗರಾಳ ಶುಕ್ರವಾರ ಕಚೇರಿಗೆ ಬಂದು, ಕೆಲಸಕ್ಕೆ ಹಾಜರಾದರು. ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳಾದ ತಹಶೀಲ್ದಾರ್ ಬಸವರಾಜ ನಾಗರಾಳ, ಎಫ್ಡಿಎ ಅಶೋಕ ಕಬ್ಬಲಿಗೇರ ಹಾಗೂ ಸೋಮು ದೊಡವಾಡಿ ಅವರಿಗೆ ನಿರೀಕ್ಷಣಾ ಜಾಮೀನು ಸಿಕ್ಕಿದೆ. ‘ಯಾವುದೇ ಸರ್ಕಾರಿ ಅಧಿಕಾರಿ 48 ಗಂಟೆ ಜೈಲು ಸೇರಿದ್ದರೆ ಮಾತ್ರ ಅಮಾನತು ಮಾಡಲು ಅವಕಾಶವಿದೆ. ಹೀಗಾಗಿ, ತಹಶೀಲ್ದಾರ್ ಅಮಾನತು ಆಗಿಲ್ಲ. ಪ್ರಕರಣ …
Read More »ಬೆಳಗಾವಿ: ಮಾನವ ಕಳ್ಳ ಸಾಗಾಣಿಕೆ-ಜೀತ ಪದ್ಧತಿ ದೊಡ್ಡ ಸಮಸ್ಯೆ
ಬೆಳಗಾವಿ: ದೇಶದಲ್ಲಿ ಮಾನವ ಕಳ್ಳ ಸಾಗಾಣಿಕೆ ಮತ್ತು ಜೀತ ಪದ್ಧತಿಯಂತಹ ಅನಿಷ್ಠ ಪದ್ಧತಿಗಳಿಗೆ ಬಡತನ, ಅನಕ್ಷರತೆ, ನಿರುದ್ಯೋಗ ಕಾರಣವಾಗಿದೆ. ಜೀತ ಪದ್ಧತಿ ಎಲ್ಲಿದೆ ಎಂಬುದನ್ನು ಗುರುತಿಸಿ ಸಂಬಂಧಪಟ್ಟ ಅಧಿಕಾರಿಗಳಿಗೆ ಮಾಹಿತಿ ನೀಡಿ ನಿರ್ಮೂಲನೆ ಮಾಡಬೇಕು ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಸದಸ್ಯ ಕಾರ್ಯದರ್ಶಿಗಳಾದ ಪಿ. ಮುರಳಿಮೋಹನ್ ರೆಡ್ಡಿ ಹೇಳಿದರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಸ್ಪಂದನ ಸಂಸ್ಥೆ ಸಂಯುಕ್ತಾಶ್ರಯದಲ್ಲಿ ಸುವರ್ಣ ವಿಧಾನಸೌಧದಲ್ಲಿ ಮಾನವ ಕಳ್ಳ …
Read More »ಬೆಳಗಾವಿಯ ವಡ್ಡರವಾಡಿಯಲ್ಲಿ ಬಟ್ಟೆ ಹರಿದು ಮಹಿಳೆ ಮೇಲೆ ಹಲ್ಲೆ
ಬೆಳಗಾವಿ ಜಿಲ್ಲೆಯ ವಂಟಮೂರಿ ಗ್ರಾಮದಲ್ಲಿ ಮಹಿಳೆಯನ್ನು ಅರೆಬೆತ್ತಲೆಗೊಳಿಸಿ ಥಳಿಸಿದ್ದ ಘಟನೆ ಮಾಸುವ ಮುನ್ನವೇ ಅಂತದ್ದೇ ಮತ್ತೊಂದು ಘಟನೆ ಬೆಳಗಾವಿಯಲ್ಲಿ ನಡೆದಿದೆ. ಬೆಳಗಾವಿಯ ವಡ್ಡರವಾಡಿಯಲ್ಲಿ ವೇಶ್ಯಾವಾಟಿಕೆ ಆರೋಪದಲ್ಲಿ ಮಹಿಳೆ ಹಾಗೂ ಆಕೆಯ ಮಗಳ ಮೇಲೆ ಹಲ್ಲೆ ನಡೆಸಿ, ಸಾರ್ವಜನಿಕವಾಗಿ ಆಕೆಯ ಬಟ್ಟೆ ಹರಿದು ಹಾಕಲಾಗಿದೆ. ಪಕ್ಕದ ಮನೆಯವರೇ ಮಹಿಳೆ ಮೇಲೆ ಹಲ್ಲೆ ನಡೆಸಿ ಈ ರೀತಿ ಅಮಾನವೀಯವಾಗಿ ವರ್ತಿಸಿದ್ದಾರೆ. ವಡ್ಡರವಾಡಿ ಮನೆಯಲ್ಲಿ ತಾಯಿ-ಮಗಳು ಸೇರಿ ನಾಲ್ವರು ಮನೆಯೊಂದರಲ್ಲಿ ವಾಸವಾಗಿದ್ದಾರೆ. ಪಕ್ಕದ ಮನೆಯ …
Read More »ಗೋವಾ ಕನ್ನಡಿಗರಿಗೆ ಪುನರ್ವಸತಿ ಕಲ್ಪಿಸುವಂತೆ ಆಗ್ರಹಿಸಿ ತಹಶೀಲ್ದಾರ್ ಡಾ.ಮೋಹನ ಭಸ್ಮೆ ಅವರ ಮುಖಾಂತರ ಮುಖ್ಯಮಂತ್ರಿಗಳಿಗೆ ಮನವಿ
ಗೋಕಾಕ : ಗೋವಾ ಕನ್ನಡಿಗರಿಗೆ ಪುನರ್ವಸತಿ ಕಲ್ಪಿಸುವಂತೆ ಆಗ್ರಹಿಸಿ ಇಲ್ಲಿನ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ಶುಕ್ರವಾರದಂದು ಪ್ರತಿಭಟನೆ ನಡೆಯಿಸಿ ತಹಶೀಲ್ದಾರ್ ಡಾ.ಮೋಹನ ಭಸ್ಮೆ ಅವರ ಮುಖಾಂತರ ಮುಖ್ಯಮಂತ್ರಿಗಳಿಗೆ ಮನವಿ ಅರ್ಪಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಕರವೇ ಅಧ್ಯಕ್ಷ ಬಸವರಾಜ ಖಾನಪ್ಪನವರ ಕಳೆದ ಹಲವಾರು ವರ್ಷಗಳಿಂದ ಗೋವಾದಲ್ಲಿ ವಾಸವಾಗಿರುವ ಕನ್ನಡಿಗರನ್ನು ವಿನಾ ಕಾರಣ ಗೋವಾ ಸರಕಾರ ಮನೆಗಳನ್ನು ತೆರವುಗೊಳಿಸಿ ತೊಂದರೆಯನ್ನು ನೀಡುತ್ತಿರುವುದು ಖಂಡನೀಯವಾಗಿದ್ದು, ಸುಮಾರು 40 ವರ್ಷಗಳಿಂದ ಗೋವಾದ ಮಾಪ್ಸಾದ …
Read More »ನೌಕರರಿಗೆ ಅನ್ಯಾಯ, ಸರ್ಕಾರದ ವಿರುದ್ಧ ಸ್ವಪಕ್ಷ ಶಾಸಕ ರಾಜು ಕಾಗೆ ಅಪಸ್ವರ
ಬೆಂಗಳೂರು, ನವೆಂಬರ್ 15: ಶಕ್ತಿ ಯೋಜನೆಯ ಪರಿಷ್ಕರಣೆ ಮಾಡಲಾಗುತ್ತದೆ, ನಿಲ್ಲಿಸಲಾಗುತ್ತದೆ ಎಂದು ಚರ್ಚೆ ಜೋರಾಗಿತ್ತು. ಇದರ ಮಧ್ಯೆ ರಾಜ್ಯ ಸರ್ಕಾರಿ ನೌಕರರು, ಸಾರಿಗೆ ನೌಕರರಿಗೆ ಆಗುತ್ತಿರುವ ಅನ್ಯಾಯದ ಕುರಿತು ಆಡಳಿತ ಪಕ್ಷ ಕಾಂಗ್ರೆಸ್ನ ಶಾಸಕ ರಾಜು ಕಾಗೆ ಅವರು ಸರ್ಕಾರದ ವಿರುದ್ಧ ಬೇಸರ ವ್ಯಕ್ತಪಡಿಸಿದ್ದಾರೆ. ಶಕ್ತಿ ಯೋಜನೆಗೆ ಬಹಳ ಜನರು ಶಾಪ ಹಾಕುತ್ತಿದ್ದಾರೆ ಎಂದು ತಿಳಿಸಿದ್ದಾರೆ. ಈ ಹಿಂದೆ ರಾಜ್ಯ ಕಾಂಗ್ರೆಸ್ ಸರ್ಕಾರವು ಅಧಿಕಾರಕ್ಕೆ ಬಂದ ಬಳಿಕ ಕರ್ನಾಟಕದಲ್ಲಿ ಯಾವುದೇ …
Read More »ಬೈಲಹೊಂಗಲ | ಬೆಂಕಿ ಅವಘಡ: ಸುಟ್ಟು ಕರಕಲಾದ ಬಣವೆ
ಬೈಲಹೊಂಗಲ: ಆಕಸ್ಮಿಕವಾಗಿ ಬೆಂಕಿ ತಗುಲಿದ್ದರಿಂದ ಸೋಯಾಬೀನ್ ಕಾಳಿನ ಬಣವೆ ಸುಟ್ಟು ಕರಕಲಾದ ಘಟನೆ ತಾಲ್ಲೂಕಿನ ದೊಡವಾಡ ಗ್ರಾಮದ ಬುಧವಾರ ತಡರಾತ್ರಿ ಸಂಭವಿಸಿದೆ. ರೈತ ಸಿದ್ದಪ್ಪ ವೀರಭದ್ರಪ್ಪ ಹುದಲಿ ಅವರಿಗೆ ಸೇರಿದ ಬಣವೆಗೆ ಬೆಂಕಿ ಹೊತ್ತಿಕೊಂಡಿದೆ. ಬೈಲಹೊಂಗಲದ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ, ಬೆಂಕಿ ನಂದಿಸಿದರು. ’11 ಎಕರೆಯಲ್ಲಿ ಬೆಳೆದಿದ್ದ ಸೋಯಾಬೀನ್ ಕಾಯಿಗಳನ್ನು ಒಂದೆಡೆ ರಾಶಿ ಮಾಡಿ ಇಟ್ಟಿದ್ದೆವು. ಇದರಿಂದ ಸುಮಾರು ₹5 ಲಕ್ಷ ಕೈಗೆಟುಕಬಹುದು ಎಂದು ಅಂದಾಜಿಸಿದ್ದೆವು. ಆದರೆ, …
Read More »ಸಮೃದ್ಧ ಕೃಷಿ: ಭರಪೂರ ಆದಾಯ
ಬೆಳಗಾವಿ: ಕೃಷಿ ರಂಗದಲ್ಲಿ ಸದಾ ಪ್ರಯೋಗಶೀಲರಾದ ನಿಪ್ಪಾಣಿ ತಾಲ್ಲೂಕಿನ ಸೌಂದಲಗಾ ಗ್ರಾಮದ ರೈತ ಸಂಜಯ ಶಿಂತ್ರೆ ಅವರ ಹೊಲಕ್ಕೆ ಕಾಲಿಟ್ಟರೆ ಸಾಕು; ಹತ್ತಾರು ಬಗೆಯ ಬೆಳೆಗಳ ದರ್ಶನವಾಗುತ್ತದೆ. ಕಬ್ಬು, ಹೂವು, ಹಣ್ಣು, ಎಲೆಗಳು, ಈರುಳ್ಳಿ ಹೀಗೆ… ಮಾರುಕಟ್ಟೆಯಲ್ಲಿ ಬೇಡಿಕೆ ಇರುವ ವಾಣಿಜ್ಯ ಮತ್ತು ತೋಟಗಾರಿಕೆ ಬೆಳೆಗಳನ್ನು ಬೆಳೆಯುತ್ತ, ಸಮಗ್ರ ಕೃಷಿಯಲ್ಲಿ ಅವರು ಖುಷಿ ಕಾಣುತ್ತಿದ್ದಾರೆ. ಜತೆಗೆ, ತಾಳೆ ಕೃಷಿಯೂ ಉತ್ತಮ ಆದಾಯ ನೀಡುತ್ತಿದೆ. ‘ನಾನು 18 ಎಕರೆ ಜಮೀನು ಹೊಂದಿದ್ದೇನೆ. ಯಾವುದೇ …
Read More »ಕೆಎಲ್ಇ ಸಂಸ್ಥೆಯ 109ನೇ ಸಂಸ್ಥಾಪನಾ ದಿನಾಚರಣೆ
ಬೆಳಗಾವಿ: ‘ಪ್ರಭಾಕರ ಕೋರೆ ಕೆಎಲ್ಇ ಸಂಸ್ಥೆಯ ಕಾರ್ಯಾಧ್ಯಕ್ಷರಾಗಿ ನಾಲ್ಕು ದಶಕಗಳಾಗಿವೆ. ಅವರ ನಿಷ್ಕಲ್ಮಶ ಸೇವೆ ದಕ್ಷಿಣ ಕರ್ನಾಟಕ ಭಾಗಕ್ಕೂ ಗೊತ್ತಾಗಬೇಕು. ಎಲ್ಲ ಶಾಸಕರು, ಜನಪ್ರತಿನಿಧಿಗಳ ನೇತೃತ್ವದಲ್ಲಿ ಫೆಬ್ರುವರಿಯಲ್ಲಿ ಬೆಂಗಳೂರಿನಲ್ಲಿ ಬೃಹತ್ ಸಮಾರಂಭ ಮಾಡಲಾಗುವುದು’ ಎಂದು ರೈಲ್ವೆ ಹಾಗೂ ಜಲಶಕ್ತಿ ರಾಜ್ಯ ಸಚಿವ ವಿ.ಸೋಮಣ್ಣ ಹೇಳಿದರು. ನಗರದಲ್ಲಿ ಗುರುವಾರ ಕೆಎಲ್ಇ ಸಂಸ್ಥೆಯ 109ನೇ ಸಂಸ್ಥಾಪಣಾ ದಿನಾಚರಣೆಯಲ್ಲಿ ಮಾತನಾಡಿದ ಅವರು, ‘ಬಡವರಿಗಾಗಿ ಸರ್ಕಾರಗಳು ಎಷ್ಟು ಕಾಳಜಿ ತೋರುತ್ತವೆಯೋ, ಅಷ್ಟೇ ಕಾಳಜಿ ಕೆಎಲ್ಇ …
Read More »ಎಸ್ಡಿಎ ಆತ್ಮಹತ್ಯೆ; ಆರೋಪಿಗಳಿಗೆ ನಿರೀಕ್ಷಣಾ ಜಾಮೀನು
ಬೆಳಗಾವಿ: ಇಲ್ಲಿನ ತಹಶೀಲ್ದಾರ್ ಕಚೇರಿಯಲ್ಲಿ ನಡೆದ ಎಸ್ಡಿಎ ರುದ್ರಣ್ಣ ಯಡವನ್ಣವರ ಆತ್ಮಹತ್ಯೆ ಪ್ರಕರಣದಲ್ಲಿ, ತಹಶೀಲ್ದಾರ್ ಸೇರಿದಂತೆ ಮೂವರೂ ಆರೋಪಿಗಳಿಗೆ ಗುರುವಾರ ನಿರೀಕ್ಷಣಾ ಜಾಮೀನು ಸಿಕ್ಕಿದೆ. ತಹಶೀಲ್ದಾರ್ ಬಸವರಾಜ ನಾಗರಾಳ, ಎಫ್ಡಿಎ ಅಶೋಕ ಕಬ್ಬಲಿಗೇರ, ಸಚಿವೆ ಲಕ್ಷ್ಮಿ ಹೆಬ್ಬಾಳಕರ ಅವರ ಆಪ್ತ ಸಹಾಯಕ ಸೋಮು ದೊಡವಾಡಿ ಅವರಿಗೆ 10ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ. ರುದ್ರಣ್ಣ ನವೆಂಬರ್ 5ರಂದು ತಹಶೀಲ್ದಾರ್ ಕೋಠಡಿಯಲ್ಲೇ ನೇಣಿಗೆ ಶರಣಾಗಿದ್ದರು. ತಮ್ಮ …
Read More »ಮಕ್ಕಳಿಗೆ ಉತ್ತಮ ಸಂಸ್ಕಾರ ಕಲಿಸಿ: ಸಹಜಾನಂದ ಅವಧೂತರು
ಚಿಕ್ಕೋಡಿ: ‘ಭಾರತ ದೇಶವನ್ನು ಧಾರ್ಮಿಕ, ಸಂಸ್ಕೃತಿಯ ನೆಲೆಗಟ್ಟಿನ ಮೇಲೆ ಕಟ್ಟಲಾಗಿದೆ. ಯುವಕರು ಸಂಸ್ಕಾರವಂತರಾಗಿ ದೇಶದ ಪರಂಪರೆ ಮುಂದುವರಿಸಬೇಕು’ ಎಂದು ಜಮಖಂಡಿಯ ಸಹಜಾನಂದ ಅವಧೂತರು ಹೇಳಿದರು. ತಾಲ್ಲೂಕಿನ ಅಂಕಲಿ ಗ್ರಾಮದ ರುದ್ರಾವಧೂತ ಮಠದ ವಾರ್ಷಿಕೋತ್ಸವ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ‘ಸಂಸ್ಕಾರದ ಕೊರತೆಯಿಂದ ಯುವಕರು ದಾರಿ ತಪ್ಪಿ ದುಶ್ಚಟಗಳಿಗೆ ದಾಸರಾಗುತ್ತಿದ್ದಾರೆ. ಇವುಗಳಿಂದ ಮುಕ್ತರಾಗಬೇಕು. ಪೋಷಕರು ಮಕ್ಕಳಿಗೆ ಉತ್ತಮ ಸಂಸ್ಕಾರ ಕಲಿಸಬೇಕು. ಧಾರ್ಮಿಕ ಚಿಂತನೆಗಳು ಯುವಕರನ್ನು ಸನ್ಮಾರ್ಗದತ್ತ ಕರೆದುಕೊಂಡು ಹೋಗಲು ಸಾಧ್ಯ’ ಎಂದು …
Read More »