Breaking News

ಬೆಳಗಾವಿ

ಗ್ರಾಮದ ಪ್ರತಿಯೊಬ್ಬ ಪ್ರಜೆಯೂ ಸ್ವಚ್ಛತೆ ಬಗ್ಗೆ ಕಾಳಜಿ ವಹಿಸಿ

ಘಟಪ್ರಭಾ: ಗ್ರಾಮದ ಪ್ರತಿಯೊಬ್ಬ ಪ್ರಜೆಯೂ ಸ್ವಚ್ಛತೆ ಬಗ್ಗೆ ಕಾಳಜಿ ವಹಿಸಿ ಗ್ರಾಮವನ್ನು ಮಾದರಿ ಗ್ರಾಮವನ್ನಾಗಿ ಮಾಡಲು ಶ್ರಮಿಸಬೇಕು ಎಂದು ಶ್ರೀ ಸಿದ್ದರಾಮೇಶ್ವರ ಆದರ್ಶ ಕನ್ನಡ ಹಿರಿಯ ಅನುದಾನಿತ ಪ್ರಾಥಮಿಕ ಶಾಲೆಯ ಅಧ್ಯಕ್ಷ ಜ್ಯೋತ್ತೇಪ್ಪ ಬಂತಿ ಹೇಳಿದರು. ಅವರು ಸಮೀಪದ ಶಿಂದಿಕುರಬೇಟ ಗ್ರಾಮದಲ್ಲಿ ನೆಹರು ಯುವ ಕೇಂದ್ರ ಬೆಳಗಾವಿ, ಶ್ರೀ ಶಿವಶರಣ ಹರಳಯ್ಯ ಯುವಕ ಸಂಘ, ಕರ್ನಾಟಕ ರಕ್ಷಣಾ ವೇದಿಕೆ ಗಜಸೇನೆ ಗೋಕಾಕ ಶ್ರೀ ಸಿದ್ದರಾಮೇಶ್ವರ ಆದರ್ಶ ಕನ್ನಡ ಹಿರಿಯ ಅನುದಾನಿತ …

Read More »

ಹಳಿಯಾಳದಲ್ಲಿ ಫುಟ್ ಪಾತ್ ಮೇಲೆ ಇರುವ ಅಂಗಡಿಗಳ ತೆರವು ಕಾರ್ಯಾಚರಣೆ

ಹಳಿಯಾಳ: ಪಟ್ಟಣದ ಬಸ್ ನಿಲ್ದಾಣದ ಪ್ರದೇಶದಲ್ಲಿ ರಸ್ತೆಯುದ್ದಕ್ಕೂ ವ್ಯಾಪಾರಿಗಳು ತಮ್ಮ ಮಳಿಗೆಗಳ ಎದುರು ರಸ್ತೆ ಹಾಗೂ ಗಟಾರ ಅತಿಕ್ರಮಿಸಿ ನಿರ್ಮಿಸಿದ್ದ ಗುಡುಂಗಡಿಗಳ ತೆರವು ಕಾರ್ಯಾಚರಣೆ ಮಂಗಳವಾರ ಪೋಲಿಸ್ ಬಿಗಿ ಬಂದೋಬಸ್ತನಲ್ಲಿ ನಡೆಯಿತು. ಕೆಎಸ್ ಆರ್ ಟಿಸಿ ಕಂಪೌಂಡ್‍ಗೆ ತಾಗಿ ನಿರ್ಮಿಸಲಾದ ವ್ಯಾಪಾರ ಮಳಿಗೆಗಳನ್ನು ಪಡೆದ ವ್ಯಾಪಾರಸ್ಥರು ಎದುರಿನ ಚರಂಡಿ ಹಾಗೂ ಫುಟ್ ಪಾತ್ ಅತಿಕ್ರಮಿಸಿಕೊಂಡು ಗೂಡಂಗಡಿಗಳನ್ನು ಇಟ್ಟು ವ್ಯಾಪಾರ ವಹಿವಾಟು ನಡೆಸುತ್ತಿರುವುದರಿಂದ ಸಂಚಾರಕ್ಕೆ ಸಾಕಷ್ಟು ತೊಂದರೆ ಆಗುತ್ತಿದ್ದ ಬಗ್ಗೆ ಬಂದ …

Read More »

ಬೆಳಗಾವಿ, ಹುಬ್ಬಳ್ಳಿ -ಧಾರವಾಡ ಹಾಗೂ ಕಲಬುರಗಿ ಪಾಲಿಕೆಗಳ ಚುನಾವಣೆ ದಿನಾಂಕ ಘೋಷಣೆ

ಬೆಂಗಳೂರು – ಬೆಳಗಾವಿ ಸೇರಿದಂತೆ 3 ಮಹಾನಗರ ಪಾಲಿಕೆಗಳ ಚುನಾವಣೆ ಘೋಷಣೆಯಾಗಿದೆ. ಬೆಳಗಾವಿ, ಹುಬ್ಬಳ್ಳಿ -ಧಾರವಾಡ ಹಾಗೂ ಕಲಬುರಗಿ ಪಾಲಿಕೆಗಳ ಚುನಾವಣೆ ದಿನಾಂಕ ಘೋಷಣೆಯಾಗಿದೆ. ಸೆಪ್ಟಂಬರ್ 3ರಂದು ಚುನಾವಣೆ ನಡೆಯಲಿದ್ದು, ಸೆಪ್ಟಂಬರ್ 6ರಂದು ಫಲಿತಾಂಶ ಪ್ರಕಟವಾಗಲಿದೆ.

Read More »

ಜೊಲ್ಲೆ ನನ್ನ ಸಿಸ್ಟರ್ ಇದ್ದ ಹಾಗೆ, ಅವರ ಬಗ್ಗೆ ತನಿಖೆ ಅಗತ್ಯವಿಲ್ಲ ಎಂದ ಈಶ್ವರಪ್ಪ

ಬೆಳಗಾವಿ – ಶಶಿಕಲಾ ಜೊಲ್ಲೆ ನನ್ನ ಸಿಸ್ಟರ್ ಇದ್ದಹಾಗೆ. ಅವರ ಬಗ್ಗೆ ನೂರಕ್ಕೆ ನೂರು ವಿಶ್ವಾಸವಿದೆ. ಯಾರೋ ಹೇಳಿದ ತಕ್ಷಣ ಅದನ್ನೆಲ್ಲ ತನಿಖೆ ಮಾಡುವುದಕ್ಕಾಗುವುದಿಲ್ಲ. ಅವರ ಬಗ್ಗೆ ತನಿಖೆ ಅಗತ್ಯವಿಲ್ಲ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯಿತಿ ರಾಜ್ ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದ್ದಾರೆ.     ಬೆಳಗಾವಿಯಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಜೊಲ್ಲೆಯವರ ಬಗ್ಗೆ ಬಂದಿರುವ ಆರೋಪಗಳಲ್ಲಿ ಹುರುಳಿಲ್ಲ. ಅದಕ್ಕೆ ಯಾವುದೇ ಸಾಕ್ಷ್ಯಾಧಾರಗಳಿಲ್ಲ. ಸುಮ್ಮನೇ ಯಾರೋ ಹೇಳುತ್ತಾರೆಂದು ಎಲ್ಲವನ್ನೂ ತನಿಖೆಗೊಳಪಡಿಸಲು ಸಾಧ್ಯವಿಲ್ಲ. …

Read More »

ಕೊಲೆ ಪ್ರಕರಣ : ಎಂಟು ಜನರಿಗೆ ಜೀವಾವಧಿ ಶಿಕ್ಷೆ.

ಗೋಕಾಕ : ಎರಡು ಕುಟುಂಬಗಳ ನಡುವಿನ ಭೂ ವಿವಾದದ ವೈಷಮ್ಯದ ಹಿನ್ನೆಲೆಯಲ್ಲಿ ಗೋಕಾಕ ತಾಲ್ಲೂಕಿನ ಕುಂದರಗಿ ಗ್ರಾಮದಲ್ಲಿ ನಡೆದಿದ್ದ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ 8 ಮಂದಿಗೆ ಜೀವಾವಧಿ ಶಿಕ್ಷೆ ಮತ್ತು ತಲಾ 25 ಸಾವಿರ ರೂಪಾಯಿ ದಂಡ ವಿಧಿಸಿ ಇಲ್ಲಿನ 12ನೇ ಹೆಚ್ಚುವರಿ ಜಿಲ್ಲಾ ನ್ಯಾಯಾಲಯ ಮಂಗಳವಾರ ತೀರ್ಪು ನೀಡಿದೆ. ಆರೋಪಿಗಳೆಲ್ಲರೂ ಕುಂದರಗಿ ಗ್ರಾಮದವರಾಗಿದ್ದಾರೆ. ಮಹಮ್ಮದಹನೀಪ ದೇಸಾಯಿ(50) ಸಹೋದರರಾದ ಮೆಹಬೂಬ ದೇಸಾಯಿ(47) ಹಾಗೂ ಹಸನಸಾಬ ದೇಸಾಯಿ(57), ಪುತ್ರ ಸೋಹೆಲ್ ದೇಸಾಯಿ(21), …

Read More »

ಕಾಂಗ್ರೆಸ್ ನಾಯಕರ ವಿರುದ್ಧ ಕೆ.ಎಸ್.ಈಶ್ವರಪ್ಪ ಅವಾಚ್ಯ ಶಬ್ದ ಬಳಕೆ ವಿಚಾರ. laxminews

ಬೆಳಗಾವಿ: ಕಾಂಗ್ರೆಸ್ ನಾಯಕರ ವಿರುದ್ಧ ಸಿಟ್ಟಿನ ಭರದಲ್ಲಿ ಆಡಿದ್ದ ‘ಆ ಮಾತನ್ನು’ ವಾಪಸ್ ಪಡೆದಿದ್ದೇನೆ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ. ಎಸ್.ಈಶ್ವರಪ್ಪ ತಿಳಿಸಿದ್ದಾರೆ. ಸಿಟ್ಟಿನ ಭರದಲ್ಲಿ ನಾನು ಆ ರೀತಿಯಾಗಿ ಹೇಳಿಕೆ ನೀಡಿದ್ದೇನೆ. ನಾನು ಆ ಪದವನ್ನು ವಾಪಸ್ ಪಡೆಯುತ್ತೇನೆ ಎಂದು ಅವರು ಬೆಳಗಾವಿಯಲ್ಲಿ ತಿಳಿಸಿದರು.   ಇತ್ತೀಚೆಗಷ್ಟೇ ಬಿಜೆಪಿಯ ಒಬ್ಬನೇ ಒಬ್ಬ ಕಾರ್ಯಕರ್ತನ ಮೈಮುಟ್ಟಿ ನೋಡಲಿ, ಅದರ ಪರಿಣಾಮವೇ ಬೇರೆ ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದ ಸಚಿವ ಕೆ …

Read More »

ಪಿಯುಸಿ ಪಾಸಾದರೂ ಕೇದನೂರ ಯುವಕ ಆತ್ಮಹತ್ಯೆ ..! ಆತ್ಮಹತ್ಯೆಗೆ ಬೇರೊಂದು ಕಾರಣದ ವಾಸನೆ..?

ಬೆಳಗಾವಿ: ಬೆಳಗಾವಿ ತಾಲೂಕಿನ ಕೇದನೂರ ಗ್ರಾಮದ ಹೊರವಲಯದಲ್ಲಿರುವ ರಾಜಾಯಿ ಗಲ್ಲಿಯ 19 ವರ್ಷದ ಯುವಕ ಆತ್ಮಹತ್ಯೆಗೆ ಶರಣಾಗಿದ್ದಾನೆ. ವಿಶಾಲ ಮುರಾರಿ ರಾಜಾಯಿ ಆತ್ಮಹತ್ಯೆ ಮಾಡಿಕೊಂಡ ಯುವಕ. ಒಬ್ಬನೇ ಗಂಡು ಮಗನಾಗಿದ್ದ ವಿಶಾಲ ಇತ್ತೀಚಿಗೆ ಪಿಯುಸಿ ಪಾಸಾಗಿದ್ದನು. ಮುಂದಿನ ವಿದ್ಯಾಭ್ಯಾಸಕ್ಕಾಗಿ ತಯಾರಿ ನಡೆಸಿದ್ದನು. ಆದರೆ ಈ ಮದ್ಯೆ ಹಲವು ದಿನಗಳಿಂದ ಏಕಾಂಗಿಯಾಗಿ ಇರುತ್ತಿದ್ದ. ಆತ್ಮಹತ್ಯೆಗೆ ಖಿನ್ನತೆಯೇ ಕಾರಣವೇಂದು ಮೃತರ ತಂದೆ ಕಾಕತಿ ಪೋಲೀಸರಿಗೆ ನೀಡಿರುವ ದೂರದಲ್ಲಿ ತಿಳಿಸಿದ್ದಾರೆ. ಆದರೆ ಆತ್ಮಹತ್ಯೆಗೆ ಬೇರಾವುದೋ …

Read More »

ಸುಲಭ ಶೌಚಾಲಯಗಳಿಗೆ ಪ್ರಧಾನಿ ನರೇಂದ್ರ ಮೋದಿ ಅವರ ಹೆಸರಿಡಬೇಕು ಎಂದು ಕಾಂಗ್ರೆಸ್ ನಾಯಕ ಬಿ.ಕೆ. ಹರಿಪ್ರಸಾದ್ ಹೇಳಿಕೆಯಿಂದ ನನಗೆ ಸಿಟ್ಟು ಬಂತು.

ಬೆಳಗಾವಿ: ‘ಸುಲಭ ಶೌಚಾಲಯಗಳಿಗೆ ಪ್ರಧಾನಿ ನರೇಂದ್ರ ಮೋದಿ ಅವರ ಹೆಸರಿಡಬೇಕು ಎಂದು ಕಾಂಗ್ರೆಸ್ ನಾಯಕ ಬಿ.ಕೆ. ಹರಿಪ್ರಸಾದ್ ಹೇಳಿಕೆಯಿಂದ ನನಗೆ ಸಿಟ್ಟು ಬಂತು. ಅದರ ಭರದಲ್ಲಿ ‘ಆ ಪದ’ ಬಳಸಿದ್ದು ತಪ್ಪೇ. ಕೂಡಲೇ ಆ ಮಾತನ್ನು ಹಿಂಪಡೆದಿದ್ದೇನೆ’ ಎಂದು ಪಂಚಾಯತ್‌ರಾಜ್‌ ಮತ್ತು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್. ಈಶ್ವರಪ್ಪ ಹೇಳಿದರು.   ಇಲ್ಲಿನ ಪ್ರವಾಸಿ ಮಂದಿರದಲ್ಲಿ ಮಂಗಳವಾರ ಮಾತನಾಡಿದ ಅವರು, ‘ಹರಿಪ್ರಸಾದ್ ಹೇಳಿಕೆಯನ್ನು ಕಾಂಗ್ರೆಸ್‌ನವರು ಒಪ್ಪುತ್ತಾರೆಯೇ?’ ಎಂದು ಕೇಳಿದರು.   ‘ನನ್ನ …

Read More »

ಜನರ ಕಷ್ಟಗಳಿಗೆ ಸ್ಪಂದಿಸುತ್ತಿದ್ದ ಸುರೇಶ ಅಂಗಡಿ ಅವರ ಸಮಾಧಿ ನಿರ್ಮಾಣ ಕಾರ್ಯದಲ್ಲಿ ಕೈ ಜೋಡಿಸಿ

ಬೆಳಗಾವಿ: ನವದೆಹಲಿಯ ದ್ವಾರಕಾ ನಗರದಲ್ಲಿರುವ ವೀರಶೈವ ಲಿಂಗಾಯತ ರುದ್ರಭೂಮಿಯಲ್ಲಿ ಕೇಂದ್ರ ಸಚಿವರಾಗಿದ್ದ ದಿ| ಸುರೇಶ ಅಂಗಡಿ ಅವರ ಸಮಾಧಿ ಸ್ಥಳದಲ್ಲಿ ನಿರ್ಮಿಸಲಾದ ಅಂಗಡಿ ಅವರ ಪ್ರತಿಮೆಯನ್ನು ಬೆಳಗಾವಿ ಲೋಕಸಭಾ ಸದಸ್ಯೆ ಮಂಗಲಾ ಅಂಗಡಿ ಮಂಗಳವಾರ ಕುಟುಂಬದ ಸದಸ್ಯರ ಉಪಸ್ಥಿತಿಯಲ್ಲಿ ಅನಾವರಣಗೊಳಿಸಿ ನಮನ ಸಲ್ಲಿಸಿದರು. ಜನರ ಕಷ್ಟಗಳಿಗೆ ಸ್ಪಂದಿಸುತ್ತಿದ್ದ ಸುರೇಶ ಅಂಗಡಿ ಅವರ ಸಮಾಧಿ ನಿರ್ಮಾಣ ಕಾರ್ಯದಲ್ಲಿ ಕೈ ಜೋಡಿಸಿ ಎಲ್ಲ ರೀತಿಯ ಸಹಕಾರ ನೀಡಿದ ಮಾಜಿ ಸಿಎಂ ಯಡಿಯೂರಪ್ಪ ಹಾಗೂ …

Read More »

ಲೋಳಸೂರ ಕೆಳಗಿನ ಸೇತುವೆ ಸಾರ್ವಜನಿಕ ಸಂಚಾರಕ್ಕೆ ಮುಕ್ತ : ಶಾಸಕ ಬಾಲಚಂದ್ರ ಜಾರಕಿಹೊಳಿ

  ಗೋಕಾಕ : ನಿರಂತರ ಮಳೆ ಹಾಗೂ ಪ್ರವಾಹದಿಂದಾಗಿ ಸ್ಥಗಿತಗೊಂಡಿದ್ದ ಜತ್ತ-ಜಾಂಬೋಟಿ (ರಾಹೆ-31) ರಸ್ತೆಯ ಲೋಳಸೂರ ಸೇತುವೆ ಮಾರ್ಗದ ಬದಲಿ ರಸ್ತೆಯನ್ನು ಇಂದಿನಿಂದ ಸಾರ್ವಜನಿಕ ಸಂಚಾರಕ್ಕೆ ಅನುವು ಮಾಡಿಕೊಡಲಾಗಿದೆ ಎಂದು ಅರಭಾವಿ ಶಾಸಕ ಹಾಗೂ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು. ಸಾರ್ವಜನಿಕ ಸುಗಮ ಸಂಚಾರಕ್ಕಾಗಿ ಲೋಳಸೂರ ಸೇತುವೆಯ ಪಕ್ಕದಲ್ಲಿರುವ ಹಳೆಯ ಸೇತುವೆ ಮಾರ್ಗದಲ್ಲಿ ಅನುಕೂಲ ಕಲ್ಪಿಸಿಕೊಡಲಾಗಿದ್ದು, ಕಾರು, ಬೈಕ್‍ಗಳ ಸಂಚಾರಕ್ಕೆ ಮಾತ್ರ ರಸ್ತೆ ಸಂಚಾರವನ್ನು ಆರಂಭಿಸಲಾಗಿದೆ ಎಂದು ಹೇಳಿದರು. …

Read More »