ಬೆಳಗಾವಿ :ನೆರೆಯ ಮಹಾರಾಷ್ಟ್ರದ ಸಹ್ಯಾದ್ರಿ ಘಟ್ಟ ಪ್ರದೇಶಗಳನ್ನು ಕಳೆದ ಕೆಲವು ದಿನಗಳಿಂದ ಸುರಿಯುತ್ತಿದ್ದ ಮಳೆಯ ಅರ್ಭಟ ಅಲ್ಪಮಟ್ಟದಲ್ಲಿ ಕಡಿಯಾಗಿರುವ ಹಿನ್ನೆಲೆಯಲ್ಲಿ ಹುಕ್ಕೇರಿ ತಾಲೂಕಿನ ಹಿರಣ್ಯಕೇಶಿ ನದಿಯಲ್ಲಿ ಉಂಟಾಗಿದ್ದ ಪ್ರವಾಹದಲ್ಲಿ 2 ಅಡಿ ಇಳಿಮುಖವಾಗಿದೆ. ಈ ನಿಟ್ಟಿನಲ್ಲಿ ತಮ್ಮ ಮನೆ, ಆಸ್ತಿ, ಗೃಹಪಯೋಗಿ ವಸ್ತುಗಳನ್ನು ಕಳೆಕೊಂಡಿದ್ದ ನಿರಾಶ್ರಿತರು ಸ್ವಲ್ಪ ಮಟ್ಟಿಗೆ ನಿಟ್ಟುಸಿರು ಬಿಡುವಂತಾಗಿದೆ. ಕಳೆದ ಒಂದು ವಾರದಿಂದ ನೆರೆಯ ಮಹಾರಾಷ್ಟ್ರದಲ್ಲಿ ಹಾಗೂ ಜಿಲ್ಲೆಯ ಗಡಿ ಭಾಗದಲ್ಲಿ ಸುರಿಯುತ್ತಿರುವ ಮಳೆಯ ಪರಿಣಾಮ ಹಿರಣ್ಯಕೇಶಿ …
Read More »ಭಾರಿ ಮಳೆಗೆ ಉಕ್ಕಿ ಹರಿಯುತ್ತಿರುವ ಹಿರಣ್ಯಕೇಶಿ ನದಿ; ಹೊಸದಾಗಿ ಕಟ್ಟಿಕೊಂಡಿದ್ದ ಮನೆಗಳು ಸಂಪೂರ್ಣ ಜಲಾವೃತ
ಬೆಳಗಾವಿ: ರಾಜ್ಯದಲ್ಲಿ ಮಳೆಯ ಅಬ್ಬರ ಮುಂದುವರಿದಿದೆ. ಭಾರಿ ಮಳೆಯಿಂದ ಹಿರಣ್ಯಕೇಶಿ ನದಿ ಉಕ್ಕಿ ಹರಿಯುತ್ತಿದ್ದು, ಜಿಲ್ಲೆಯ ಹುಕ್ಕೇರಿ ತಾಲೂಕಿನ ಚಿಕ್ಕಾಲಗುಡ್ಡ ಗ್ರಾಮ ನದಿ ನೀರು ನುಗ್ಗಿ ಸಂಪೂರ್ಣ ಜಲಾವೃತವಾಗಿದೆ. ಚಿಕ್ಕಾಲಗುಡ್ಡ ಗ್ರಾಮದಲ್ಲಿ ಹೊಸದಾಗಿ ಕಟ್ಟಿಕೊಂಡಿದ್ದ ಮನೆಗಳು ಸಂಪೂರ್ಣ ಜಲಾವೃತವಾಗಿವೆ. 2019ರಲ್ಲಿ ಬಂದ ಪ್ರವಾಹದಲ್ಲಿ ಗ್ರಾಮಸ್ಥರು ಮನೆ ಕಳೆದುಕೊಂಡಿದ್ದರು. ಹೊಸದಾಗಿ ಕಟ್ಟಿಸಿಕೊಂಡಿದ್ದ ಸುಮಾರು 50ಕ್ಕೂ ಹೆಚ್ಚು ಮನೆಗಳು ಜಲಾವೃತವಾಗಿದ್ದು, ಗ್ರಾಮಸ್ಥರಿಗೆ ಮನೆಗಳನ್ನು ಕಳೆದುಕೊಳ್ಳುವ ಭೀತಿ ಶುರುವಾಗಿದೆ. ಇನ್ನು ಚಿಕ್ಕಮಗಳೂರಿನಲ್ಲೂ ಮಳೆ ಮುಂದುವರಿದಿದೆ. …
Read More »ರಾಜ್ಯದ ಹಲವು ಜಿಲ್ಲೆಗಳಲ್ಲಿ ಪ್ರವಾಹ ಭೀತಿ. ಬೆಳಗಾವಿ ಪರಿಸ್ಥಿತಿ ಹೇಗಿದೆ..?
ಬೆಳಗಾವಿ: ಜಿಲ್ಲೆಯಲ್ಲಿ ಪ್ರಮುಖ ನದಿ ಹಳ್ಳಕೊಳ್ಳ ತುಂಬಿ ಹರಿಯುತ್ತಿರುವ ಹಿನ್ನೆಲೆ ಒಟ್ಟು 5 ತಾಲೂಕುಗಳ 51 ಗ್ರಾಮಗಳು ಜಲಾವೃತವಾಗಿವೆ.. ಮನೆ ಕಳೆದುಕೊಂಡು ನಿರಾಶ್ರಿತರಾದವರಿಗಾಗಿ 26 ಕಾಳಜಿ ಕೇಂದ್ರಗಳನ್ನ ತೆರೆಯಲಾಗಿದ್ದು 2,000 ಜನರಿಗೆ ಆಶ್ರಯ ನೀಡಲಾಗಿದೆ. 5,065ಜನರು, 1,011 ಜಾನುವಾರುಗಳ ರಕ್ಷಣೆ ಮಾಡಲಾಗಿದೆ.. ಬೆಳಗಾವಿ ಪರಿಸ್ಥಿತಿ ಹೇಗಿದೆ..? – ರಾಷ್ಟ್ರೀಯ ಹೆದ್ದಾರಿ, ಜಿಲ್ಲಾ ರಸ್ತೆ ಸೇರಿ 47 ಕಡೆ ರಸ್ತೆ ಸಂಚಾರ ಸ್ಥಗಿತ – 36 ಸೇತುವೆಗಳು ಮುಳುಗಡೆ …
Read More »ಗೋಕಾಕ ಫಾಲ್ಸ್ ವೀಕ್ಷಣೆಗೆ ಜನಸಾಗರ
ಗೋಕಾಕ: ಜಿಲ್ಲೆಯಾದ್ಯಂತ ಭಾರಿ ಮಳೆಯಾಗುತ್ತಿರುವ ಹಿನ್ನಲೆ ಘಟಪ್ರಭೆ ತುಂಬಿ ಹರಿಯುತ್ತಿದ್ದು, ಗೋಕಾಕ ಜಲಪಾತ ವೀಕ್ಷಣೆಗೆ ಸಾವಿರಾರು ಜನರು ಆಗಮಿಸುತ್ತಿದ್ದಾರೆ. ಕಳೆದ ಎರಡ್ಮೂರು ದಿನಗಳಿಂದ ಘಟಪ್ರಭಾ ಜಲಾನಯನ ಪ್ರದೇಶಗಳಲ್ಲಿ ಉತ್ತಮ ಮಳೆಯಾಗುತ್ತಿರುವ ಹಿನ್ನಲೆ ಘಟಪ್ರಭೆ ಧುಮ್ಮಿಕ್ಕಿ ಹರಿಯುತ್ತಿದ್ದು, ಜಿಲ್ಲೆ ಹಾಗೂ ಹೊರ ರಾಜ್ಯಗಳಿಂದ ಸಾವಿರಾರು ಜನರು ಆಗಮಿಸುತ್ತಿದ್ದಾರೆ. ರವಿವಾರ ಹಾಗೂ ಶನಿವಾರ ಗೋಕಾಕ ಜಲಪಾತ ಹಾಗೂ ಜಿಲ್ಲೆಯ ಹಲವು ಪ್ರವಾಸಿ ತಾಣಗಳ ವೀಕ್ಷಣೆಗೆ ಜಿಲ್ಲಾಡಳಿತ ಬ್ರೇಕ್ ಹಾಕಿದ್ದು, ಇನ್ನುಳಿದ ದಿನಗಳಲ್ಲಿ ಹೆಚ್ಚಿನ …
Read More »ಪ್ರವಾಹ ಭೀತಿ ಹಿನ್ನೆಲೆಯಲ್ಲಿ ನದಿ ತೀರದ ಗ್ರಾಮಗಳ ಜನರ ಸುರಕ್ಷತೆಗಾಗಿ ಅಗತ್ಯ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದ ಶಾಸಕ ಬಾಲಚಂದ್ರ ಜಾರಕಿಹೊಳಿ
ಗೋಕಾಕ : ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಘಟಪ್ರಭಾ ನದಿಗೆ ಒಳಹರಿವು ಪ್ರಮಾಣ ಹೆಚ್ಚುತ್ತಿರುವುದರಿಂದ ನದಿ ತೀರದ ಗ್ರಾಮಗಳ ನಾಗರೀಕರ ಸುರಕ್ಷತೆಗಾಗಿ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವಂತೆ ಕೆಎಂಎಫ್ ಅಧ್ಯಕ್ಷ ಮತ್ತು ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಶುಕ್ರವಾರ ಮಧ್ಯಾಹ್ನ ಮಾಧ್ಯಮಗಳಿಗೆ ಹೇಳಿಕೆ ಬಿಡುಗಡೆ ಮಾಡಿರುವ ಅವರು, ಬೆಳಗಾವಿ ಜಿಲ್ಲೆಯೂ ಸೇರಿದಂತೆ ನೆರೆಯ ಮಹಾರಾಷ್ಟ್ರ ಹಾಗೂ ಗೋವಾ ರಾಜ್ಯಗಳಲ್ಲಿ ಧಾರಾಕಾರ ಮಳೆ ಸುರಿಯುತ್ತಿರುವುದರಿಂದ ನಮ್ಮ ಅವಳಿ …
Read More »ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವಂತೆ ಮತ್ತು ಬಾಲಚಂದ್ರ ಜಾರಕಿಹೊಳಿ ಅವರು ಅಧಿಕಾರಿಗಳಿಗೆ ಸೂಚನೆ
ಗೋಕಾಕ : ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಘಟಪ್ರಭಾ ನದಿಗೆ ಒಳಹರಿವು ಪ್ರಮಾಣ ಹೆಚ್ಚುತ್ತಿರುವುದರಿಂದ ನದಿ ತೀರದ ಗ್ರಾಮಗಳ ನಾಗರೀಕರ ಸುರಕ್ಷತೆಗಾಗಿ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವಂತೆ ಕೆಎಂಎಫ್ ಅಧ್ಯಕ್ಷ ಮತ್ತು ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಶುಕ್ರವಾರ ಮಧ್ಯಾಹ್ನ ಮಾಧ್ಯಮಗಳಿಗೆ ಹೇಳಿಕೆ ಬಿಡುಗಡೆ ಮಾಡಿರುವ ಅವರು, ಬೆಳಗಾವಿ ಜಿಲ್ಲೆಯೂ ಸೇರಿದಂತೆ ನೆರೆಯ ಮಹಾರಾಷ್ಟ್ರ ಹಾಗೂ ಗೋವಾ ರಾಜ್ಯಗಳಲ್ಲಿ ಧಾರಾಕಾರ ಮಳೆ ಸುರಿಯುತ್ತಿರುವುದರಿಂದ ನಮ್ಮ ಅವಳಿ ತಾಲೂಕಿನ …
Read More »ಕೆಲವು ಶಾಸಕರು ಮಂತ್ರಿಯಾಗಲೂ ಬೆಂಗಳೂರಿನಲ್ಲಿ ಠಿಖಾಣಿ ಹೂಡಿದ್ದಾರೆ.ಶಾಸಕ ಅಭಯ ಪಾಟೀಲ ಮಾತ್ರ ಬೆಳಗಿನ ಜಾವ ಕ್ಷೇತ್ರದಲ್ಲಿ ಸುತ್ತಾಡಿ ಜನರ ಸಮಸ್ಯೆಗಳನ್ನು ಆಲಿಸಿದ್ದಾರೆ.
ಬೆಳಗಾವಿ- ರಾಜ್ಯದಲ್ಲಿ ಧಾರಾಕಾರವಾಗಿ ಮಳೆ ಸುರಿಯುತ್ತಿದೆ.ಜನಜೀವನ ಅಸ್ತವ್ಯಸ್ತವಾಗಿದ್ದು ಜೊತೆಗೆ ರಾಜ್ಯದಲ್ಲಿ ಬಿರುಸಿನ ರಾಜಕೀಯ ಚಟುವಟಿಕೆಗಳು ನಡೆದಿವೆ. ಆದರೆ ಕೆಲವು ಶಾಸಕರು ಮಂತ್ರಿಯಾಗಲೂ ಬೆಂಗಳೂರಿನಲ್ಲಿ ಠಿಖಾಣಿ ಹೂಡಿದ್ದಾರೆ.ಶಾಸಕ ಅಭಯ ಪಾಟೀಲ ಮಾತ್ರ ಬೆಳಗಿನ ಜಾವ ಕ್ಷೇತ್ರದಲ್ಲಿ ಸುತ್ತಾಡಿ ಜನರ ಸಮಸ್ಯೆಗಳನ್ನು ಆಲಿಸಿದ್ದಾರೆ. ಇಂದು ಬೆಳಗಿನ ಜಾವ ಕೈಯಲ್ಲಿ ಛತ್ರಿ ಹಿಡಿದು ನಡೆದಾಡಿಕೊಂಡೇ ಕ್ಷೇತ್ರ ದರ್ಶನ ಮಾಡಿ, ಮಳೆಯಿಂದ ಆಗಿರುವ ಅನಾಹುತಗಳನ್ನು, ಸಮಸ್ಯೆಗಳನ್ನು ಖುದ್ದಾಗಿ ಪರಶೀಲಿಸಿ, ಜನರ ಸಮಸ್ಯೆಗಳನ್ನು ಆಲಿಸಿ,ಸಮಸ್ಯೆ ಗಳನ್ನು ಸ್ಥಳದಲ್ಲೇ …
Read More »ಬೆಳಗಾವಿ: ಕುಡಚಿ-ಉಗಾರ ಸೇತುವೆಯಲ್ಲಿ ಸಂಚಾರ ಬಂದ್
ಬೆಳಗಾವಿ: ರಾಯಬಾಗ ತಾಲ್ಲೂಕಿನಾದ್ಯಂತ ಶನಿವಾರವೂ ಜಿಟಿಜಿಟಿ ಮಳೆ ಮಳೆ ಮುಂದುವರೆದಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ. ನೆರೆಯ ಮಹಾರಾಷ್ಟ್ರದಲ್ಲಿ ವ್ಯಾಪಕ ಮಳೆ ಸುರಿಯುತ್ತಿರುವುದರಿಂದಾಗಿ ಕೃಷ್ಣಾ ನದಿಗೆ ಬರುತ್ತಿರುವ ನೀರಿನ ಪ್ರಮಾಣ ಹೆಚ್ಚಾಗಿರುವುದರಿಂದಾಗಿ, ರಾಯಬಾಗ ತಾಲ್ಲೂಕಿನ ಕುಡಚಿ-ಉಗಾರ ಸೇತುವೆ ಮುಳುಗಡೆಯಾಗಿದ್ದು, ನೆರೆಯ ಮಹಾರಾಷ್ಟ್ರ ರಾಜ್ಯದ ಸಂಪರ್ಕ ಕಡಿತಗೊಂಡಿದೆ. ಕುಡಚಿ ಸೇತುವೆ ಮೇಲೆ ಬೆಳಿಗ್ಗೆಯಿಂದಲೇ ವಾಹನ ಸಂಚಾರ ಸ್ಥಗಿತಗೊಳಿಸಲಾಗಿದೆ. ಇದರಿಂದಾಗಿ ರೈತರು, ವ್ಯಾಪಾರಿಗಳು, ಮೀರಜ್ ಆಸ್ಪತ್ರೆಗೆ ಹೋಗುವವರು ತೊಂದರೆ ಅನುಭವಿಸುವಂತಾಗಿದೆ. ಸತತವಾಗಿ ಮಳೆ ಸುರಿಯುತ್ತಿರುವುದರಿಂದ ಪ್ರಮುಖ …
Read More »ಬೆಳಗಾವಿ: ಕೃಷ್ಣೆಗೆ 1.56 ಲಕ್ಷ ಕ್ಯುಸೆಕ್ ನೀರು, ಪ್ರವಾಹ ಭೀತಿ ಹೆಚ್ಚಳ
ಬೆಳಗಾವಿ: ನೆರೆಯ ಮಹಾರಾಷ್ಟ್ರದ ಕೊಂಕಣ ಪ್ರದೇಶ ಮತ್ತು ಜಿಲ್ಲೆಯ ಚಿಕ್ಕೋಡಿ ತಾಲ್ಲೂಕಿನ ನದಿ ಜಲಾನಯನ ಪ್ರದೇಶದಲ್ಲಿ ವರುಣನ ಆರ್ಭಟ ಮುಂದುವರಿದಿದ್ದು, ಕೃಷ್ಣಾ ನದಿಗೆ 1.56 ಲಕ್ಷ ಕ್ಯುಸೆಕ್ ನೀರು ಹರಿದು ಬರುತ್ತಿದೆ. ಇದರೊಂದಿಗೆ ತೀರದಲ್ಲಿ ಪ್ರವಾಹ ಭೀತಿಯೂ ಹೆಚ್ಚಾಗ ತೊಡಗಿದೆ. ಚಿಕ್ಕೋಡಿ ತಾಲ್ಲೂಕಿನಲ್ಲಿ ದೂಧಗಂಗಾ ನದಿಗೆ ಅಡ್ಡಲಾಗಿ ನಿರ್ಮಿಸಿರುವ ಸದಲಗಾ-ಬೋರಗಾಂವ ಸೇತುವೆ ಮುಳುಗಡೆಯಾಗಿದೆ. ಕೊಯ್ನಾ ಜಲಾಶಯದಿಂದ ಹೊರಬಿಡಲಾದ 10ಸಾವಿರ ಕ್ಯುಸೆಕ್, ದೂಧ್‌ಗಂಗಾ ನದಿಯಿಂದ 34,320 ಕ್ಯುಸೆಕ್ ಮತ್ತುಮಹಾರಾಷ್ಟ್ರದ ರಾಜಾಪುರ ಬ್ಯಾರೇಜ್‌ನಿಂದ …
Read More »ಬೆಳಗಾವಿ ಜಿಲ್ಲೆಯಲ್ಲಿ ಭಾರೀ ಮಳೆ; ವಾಘವಾಡೆ ಬಳಿ ಹಳ್ಳದಲ್ಲಿ ಕೊಚ್ಚಿ ಹೋಗುತ್ತಿದ್ದ ಯುವಕನ ರಕ್ಷಣೆ
ಬೆಳಗಾವಿ: ಜಿಲ್ಲೆಯ ಖಾನಾಪುರ ತಾಲೂಕಿನ ವಾಘವಾಡೆ ಬಳಿ ಏಕಾಏಕಿ ಹಳ್ಳದಲ್ಲಿ ನೀರಿನ ಹರಿವು ಹೆಚ್ಚಳವಾಗಿದ್ದ ಹಿನ್ನೆಲೆಯಲ್ಲಿ, ಗದ್ದೆಯಲ್ಲಿ ಕೆಲಸ ಮಾಡುತ್ತಿದ್ದ ಯುವಕ ಹಳ್ಳದ ನೀರಿನಲ್ಲಿ ಸಿಲುಕಿ ಕೊಚ್ಚಿ ಹೋಗುತ್ತಿದ್ದ. ಈ ವೇಳೆ ಹಗ್ಗ ಎಸೆದು ಯುವಕನನ್ನು ಗ್ರಾಮಸ್ಥರು ರಕ್ಷಣೆ ಮಾಡಿದ್ದು, ಈ ದೃಶ್ಯ ಮೊಬೈಲ್‌ನಲ್ಲಿ ಸೆರೆಯಾಗಿದೆ. ನಂದಗಡ ಡ್ಯಾಂಗೆ ಹರಿದು ಬರುತ್ತಿರುವ ನೀರು ಖಾನಾಪುರ ತಾಲೂಕಿನ ನಂದಗಡ ಗ್ರಾಮದಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ದುರ್ಗಾಡಿ ಬೆಟ್ಟ ಪ್ರದೇಶದಿಂದ ಧಾರಾಕಾರವಾಗಿ ಮಳೆ ನೀರು …
Read More »