Breaking News

ಬೆಳಗಾವಿ

ಬೆಳಗಾವಿ ವಿವಾಹಿತೆಯ ಜೀವ ತೆಗೆಯಿತು ಯುವಕನ ಆ ಒಂದು ವಾಟ್ಸ್​ಆಯಪ್​ ಸ್ಟೇಟಸ್​!

ಬೆಳಗಾವಿ: ವಿವಾಹಿತೆಯೊಬ್ಬಳನ್ನು ಪ್ರೀತಿಸುವುದಾಗಿ ತನ್ನ ಸ್ಟೇಟಸ್​ನಲ್ಲಿ ಯುವಕನೊಬ್ಬ ಬರೆದುಕೊಂಡಿದ್ದು, ಇದರಿಂದ ಹೆದರಿದ ಯುವತಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಸುತಗಟ್ಟಿ ಗ್ರಾಮದಲ್ಲಿ ನಡೆದಿದೆ. ಸುತಗಟ್ಟಿ ಗ್ರಾಮದ ಅಕ್ಷತಾ ಪೂಜಾರ್ (24) ಆತ್ಮಹತ್ಯೆ ಮಾಡಿಕೊಂಡ ಯುವತಿ. ಸುತಗಟ್ಟಿ ಗ್ರಾಮದ ಸಂತೋಷ ತನ್ನ ವಾಟ್ಸ್​ಆಯಪ್​ ಸ್ಟೇಟಸ್​ಗೆ ಅಕ್ಷತಾರ ಫೋಟೋ ಹಾಕಿಕೊಂಡು ಅದರಲ್ಲಿ ಮೆಸೇಜ್​ ಬರೆದಿದ್ದ. ಇದನ್ನು ನೋಡಿ ಗಾಬರಿಯಿಂದ ಯುವತಿ ವಿಷ ಕುಡಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಏಳು ತಿಂಗಳ …

Read More »

ಎಣ್ಣೆ ಬೇಕು ಎಣ್ಣೆ, ಬಾರ್ ಬಂದ್ ಮಾಡ್ಬೇಡಿ: ಬಿಜೆಪಿ ಮುಖಂಡನ ಪ್ರತಿಭಟನೆ

ಬೆಳಗಾವಿ/ಚಿಕ್ಕೋಡಿ: ಎಣ್ಣೆ ಬೇಕು ಎಣ್ಣೆ ಎಂದು ಬಿಜೆಪಿ ಮುಖಂಡ ಹಾಗೂ ಗ್ರಾಮ ಪಂಚಾಯತಿ ಸದಸ್ಯ ಚಿಕ್ಕೋಡಿಯಲ್ಲಿ ಪ್ರತಿಭಟನೆ ಮಾಡಿದ್ದಾರೆ. ಬೆಳಗಾವಿ ಜಿಲ್ಲೆ ಅಥಣಿ ತಾಲೂಕಿನ ಸಂಬರಗಿ ಗ್ರಾಮದಲ್ಲಿ ಬಾರ್ ಬಂದ್ ಮಾಡದಂತೆ ಮದ್ಯ ಪ್ರಿಯರ ಜೊತೆಗೆ ಗ್ರಾಮ ಪಂಚಾಯತಿ ಸದಸ್ಯ ಪ್ರತಿಭಟನೆ ನಡೆಸಿದ್ದಾರೆ. ಬಾರ್ ಎದುರೇ ಗುಂಪು ಕಟ್ಟಿಕೊಂಡು ಎಣ್ಣೆ ಬೇಕು ಎಣ್ಣೆ ಎಂದು ಪ್ರೊಟೆಸ್ಟ್ ಮಾಡಿದ್ದಾರೆ. ಸಂಬರಗಿ ಗ್ರಾಮ ಪಂಚಾಯತ ಸದಸ್ಯ ಅಶೋಕ್ ಭಾನುದಾಸೆ ಮಾನೆ ಹಾಗೂ ಕೆಲವು …

Read More »

ಶಿಕ್ಷಣ ಸಚಿವ ಸುರೇಶ್ ಕುಮಾರ್ ಪ್ರಬುದ್ಧರು, ಜೊತೆಗೆ ಉತ್ತಮ ವಾಗ್ಮಿಗಳಾಗಿದ್ದಾರೆ”: ಉಮೇಶ್ ಕತ್ತಿ

ಚಿಕ್ಕೋಡಿ: ಶಿಕ್ಷಣ ಸಚಿವ ಸುರೇಶ್ ಕುಮಾರ್ ಪ್ರಬುದ್ಧರು, ಜೊತೆಗೆ ಉತ್ತಮ ವಾಗ್ಮಿಗಳಾಗಿದ್ದಾರೆ ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರನ್ನು ಆಹಾರ ಹಾಗೂ ನಾಗರಿಕ ಪೂರೈಕೆ ಸಚಿವ ಉಮೇಶ್ ಕತ್ತಿ ಅವರು ಚಿಕ್ಕೋಡಿಯಲ್ಲಿ ಹಾಡಿಹೊಗಳಿದ್ದಾರೆ. ಇಂದು ನಡೆದ ಎಸ್‍ಎಸ್‍ಎಲ್‍ಸಿ ಪರೀಕ್ಷಾ ಕೇಂದ್ರಗಳಿಗೆ ಸಚಿವ ಉಮೇಶ್ ಕತ್ತಿ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಬಳಿಕ ಮಾತನಾಡಿದ ಅವರು, ಶಿಕ್ಷಣ ಸಚಿವರು ಜವಾಬ್ದಾರಿಯುತ ಮಂತ್ರಿಯಾಗಿದ್ದಾರೆ. ಉತ್ತಮ ರೀತಿಯಿಂದ ವಿದ್ಯಾರ್ಥಿಗಳಿಗೆ ಯಾವುದೇ ತೊಂದರೆ …

Read More »

ಬೆಳಗಾವಿಯಲ್ಲಿ ಸ್ಮಾರ್ಟ್ ಸಿಟಿ ಯೋಜನೆಯ ಕಾಮಗಾರಿ ಅವೈಜ್ಞಾನಿಕ: ಸತೀಶ ಜಾರಕಿಹೊಳಿ

ಬೆಳಗಾವಿ: ಮುಖ್ಯಮಂತ್ರಿ ಹುದ್ದೆಯಿಂದ ಒಬ್ಬರು ಕೆಳಗಿಳಿಯುತ್ತಾರೆ; ಮತ್ತೊಬ್ಬರು ಆ ಹುದ್ದೆಗೇರುತ್ತಾರೆ. ಆದರೆ, ಕೆಳಗಿಳಿಯುವವರಿಂದ ಯಾವ ವಾಣಿ (ಸಂದೇಶ) ಹೊರಬರುತ್ತದೆ ಎಂದು ಕಾಯುತ್ತಿದ್ದೇವೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಹೇಳಿದರು. ನಗರದ ಕಾಂಗ್ರೆಸ್ ಭವನದಲ್ಲಿ ಪತ್ರಕರ್ತರೊಂದಿಗೆ ಸೋಮವಾರ ಮಾತನಾಡಿದ ಅವರು, ಮುಖ್ಯಮಂತ್ರಿ ಬದಲಾವಣೆಯಿಂದ ಕಾಂಗ್ರೆಸ್‌ಗೆ ಯಾವ ಲಾಭವೂ ಇಲ್ಲ; ನಷ್ಟವೂ ಇಲ್ಲ. ಮುಖ್ಯಮಂತ್ರಿ ಬದಲಾದರೂ ಸರ್ಕಾರ ಅವರದ್ದೇ ಇರುತ್ತದೆ. ನಾವು ಪಕ್ಷ ಸಂಘಟನೆಯಲ್ಲಿ ತೊಡಗಿಸಿಕೊಂಡಿದ್ದೇವೆ ಎಂದರು. ಮಧ್ಯಂತರ ಚುನಾವಣೆ ಬಂದರೂ …

Read More »

ನೂತನ ಶಾಲಾ ಕೊಠಡಿಗಳ ಅಡಿಗಲ್ಲು ಕಾರ್ಯಕ್ರಮಕ್ಕೆ ಭೂಮಿ ಪೂಜೆ

ಘಟಪ್ರಭಾ: ಸಮೀಪದ ಕೊಟಬಾಗಿ ಗ್ರಾಮದ ಸರಕಾರಿ ಕನ್ನಡ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನೂತನ ಕೊಠಡಿಯನ್ನು ಬಿಡಿಸಿಸಿ ಬ್ಯಾಂಕ ಅಧ್ಯಕ್ಷ ರಮೇಶ ಕತ್ತಿ ಉದ್ಘಾಟಿಸಿದರು. ಎರಡು ನೂತನ ಶಾಲಾ ಕೊಠಡಿ ನಿರ್ಮಾಣಕ್ಕೆ ಅಡಿಗಲ್ಲು ಕಾರ್ಯಕ್ರಮಕ್ಕೆ ಎಸ್‍ಡಿಎಂಸಿ ಅಧ್ಯಕ್ಷ ರಾಜಕುಮಾರ ಪಾಟೀಲ ಭೂಮಿ ಪೂಜೆ ನೆರವೇರಿಸಿದರು.ಈ ಸಂದರ್ಭದಲ್ಲಿ ಬಿಇಒ ಮೋಹನ ದಂಡಿನ, ಬಿಸಿಯೂಟ ಸಹ ನಿರ್ದೇಶಕ ಹಿರೇಮಠ, ಸಿಆರ್‍ಪಿಗಳಾದ ವಿ.ಎಸ್.ರಜಪೂತ, ಪ್ರಧಾನ ಗುರು ಎಸ್.ಬಿ.ಹೊಳೆಪ್ಪಗೋಳ ಸೇರಿದಂತೆ ಎಸ್ ಡಿಎಂಸಿ ಸದಸ್ಯರು,ಶಿಕ್ಷಣ ಪ್ರೇಮಿಗಳು ಹಾಗೂ …

Read More »

50 ಲಕ್ಷ ರೂ. ವೆಚ್ಚದಲ್ಲಿ ಸ್ವಂತ ಕಟ್ಟಡ ಹೊಂದುತ್ತಿರುವುದು ಪ್ರಶಂಸನೀಯ ಶಾಸಕ ಬಾಲಚಂದ್ರ ಜಾರಕಿಹೊಳಿ

  ಮೂಡಲಗಿ : ಶತಮಾನೋತ್ಸವ ಆಚರಿಸಿರುವ ಕಲ್ಲೋಳಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘವು ಈ ಭಾಗದಲ್ಲಿ ರೈತರಿಗೆ ಸಿಗಬೇಕಿರುವ ಎಲ್ಲ ಸವಲತ್ತುಗಳನ್ನು ನೀಡುತ್ತ ಬರುತ್ತಿದೆ. ಈ ಹಿಂದೆ 8 ಕೋಟಿ ರೂ.ಗಳಷ್ಟಿದ್ದ ಪತ್ತನ್ನು 15 ಕೋಟಿ ರೂ.ಗಳವರೆಗೆ ಹೆಚ್ಚಿಸಿ ರೈತರಿಗೆ ಶೂನ್ಯ ಬಡ್ಡಿದರದಲ್ಲಿ ಸಾಲ ವಿತರಿಸಿದೆ ಎಂದು ಶಾಸಕ ಹಾಗೂ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಹೇಳಿದರು. ಶನಿವಾರದಂದು ಕಲ್ಲೋಳಿ ಪಿಕೆಪಿಎಸ್‍ಗೆ ಭೇಟಿ ನೀಡಿ ಮಾತನಾಡಿದ ಅವರು, ರೈತರ …

Read More »

ಒಂದೇ ಶ್ವಾನದಿಂದ 2 ಗಂಟೆ ಅವಧಿಯಲ್ಲಿ 15 ಜನರ ಮೇಲೆ ದಾಳಿ.. ಬೆಚ್ಚಿಬಿದ್ದ ಜನರು

ಬೆಳಗಾವಿ: ಒಂದೇ ನಾಯಿಯಿಂದ 15 ಜನರ ಮೇಲೆ ದಾಳಿ ನಡೆದಿರೋ ಘಟನೆ ಸವದತ್ತಿ ತಾಲೂಕಿನ ಮೂರು ಗ್ರಾಮಗಳಲ್ಲಿ ನಡೆದಿದೆ. ಎರಡು ಗಂಟೆ ಅವಧಿಯಲ್ಲಿ ಮೂರು ಗ್ರಾಮಗಳ 15ಜನರ ಮೇಲೆ ದಾಳಿ ನಡೆದಿದೆ. ಯರಝರವಿ, ಮಳಗಲಿ, ಹೊಸೂರ ಗ್ರಾಮಗಳಲ್ಲಿ ಹುಚ್ಚುನಾಯಿಯ ದಾಳಿ ನಡೆದಿದ್ದು.. ಮಲ್ಲವ್ವ, ಬಾಳಯ್ಯ, ಲಲಿತಾ, ಮಲ್ಲಯ್ಯ, ಸಿದ್ಧಪ್ಪ, ಸವಿತಾ ಎಂಬುವವರಿಗೆ ನಾಚಿ ಕಚ್ಚಿದೆ. ಗಾಯಗೊಂಡವರಿಗೆ ಯರಗಟ್ಟಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗ್ತಿದೆ. ಹುಚ್ಚು ನಾಯಿಯ ದಾಳಿಯಿಂದ ಗ್ರಾಮಸ್ಥರು …

Read More »

ಸಾಮಾಜಿಕ ಜಾಲತಾಣಗಳಲ್ಲಿ ಬೇಕಾ ಬಿಟ್ಟಿ ಪೋಸ್ಟ್ ಮಾಡುವ ಮುನ್ನ ಹುಷಾರ: ಬೆಳಗಾವಿ ಪೊಲೀಸ್

ಸಾಮಾಜಿಕ ಜಾಲತಾಣಗಳಲ್ಲಿ ಬೇಕಾ ಬಿಟ್ಟಿ ಪೋಸ್ಟ್ ಮಾಡುವ ಮುನ್ನ ಹುಷಾರಾಗಿರಿ. ಮನಬಂದಂತೆ ಪೋಸ್ಟ್ ಮಾಡಿದರೆ, ಬಂದಿದ್ದನ್ನೆಲ್ಲ ಫಾರ್ವರ್ಡ್ ಮಾಡಿದರೆ ಕಂಬಿ ಹಿಂದೆ ಹೋಗಬೇಕಾದೀತು. ಬೆಳಗಾವಿ ಪೊಲೀಸ್ ಇಲಾಖೆ ಎಲ್ಲ ಸಾಮಾಜಿಕ ಜಾಲತಾಣಗಳ ಮೇಲೆ ಕಣ್ಣಿಟ್ಟಿದೆ. ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಹಾಕುವಾಗ ಎಚ್ಚರಿಕೆಯಿಂದಿರಿ ಎಂದು ಪೊಲೀಸ್ ಇಲಾಖೆ ಎಚ್ಚರಿಕೆ ನೀಡಿದೆ.

Read More »

ನೆರೆ ಸಂತ್ರಸ್ತರನ್ನು ಏಕಾಏಕಿಯಾಗಿ ವಸತಿ ಗೃಹದಿಂದ ಕಳುಹಿಸಿದ್ದಾರೆ.

ಬೆಳಗಾವಿ: ಜಿಲ್ಲೆಯ ರಾಮದುರ್ಗ ತಾಲೂಕಿನ ತಹಶೀಲ್ದಾರ್ ನೆರೆ ಸಂತ್ರಸ್ತರನ್ನು ಏಕಾಏಕಿಯಾಗಿ ವಸತಿ ಗೃಹದಿಂದ ಕಳುಹಿಸಿದ್ದಾರೆ. ರಾಮದುರ್ಗ ತಾಲೂಕು ಆಡಳಿತ ನಿರ್ಲಕ್ಷ್ಯ ತೋರಿದ್ದು, ಜನರ ಬದುಕು ಬೀದಿಗೆ ಬಂದಂತಾಗಿದೆ. 2019ರಲ್ಲಿ ನೆರೆಯಿಂದ ರಾಮದುರ್ಗ ತಾಲೂಕಿನ ಹಿರೇಹಂಪಿಹೋಳಿ ಗ್ರಾಮ ಮುಳುಗಡೆಯಾಗಿತ್ತು. ಅಲ್ಲಿದ್ದ ಗ್ರಾಮಸ್ಥರು ತಮ್ಮ ತಮ್ಮ ಮನೆಗಳನ್ನು ಕಳೆದುಕೊಂಡಿದ್ದರು. ಆಗ ಸುರೇಬಾನ ಗ್ರಾಮದಲ್ಲಿ ಹೊಸದಾಗಿ ನಿರ್ಮಿಸಿದ್ದ ವಸತಿ ಗೃಹದಲ್ಲಿ ನೆರೆ ಸಂತ್ರಸ್ತರಿಗೆ ಜಿಲ್ಲಾಡಳಿತ ತಾತ್ಕಾಲಿಕ ವ್ಯವಸ್ಥೆ ಮಾಡಿತ್ತು. ತಗಡಿನ ಶೆಡ್ ನಿರ್ಮಿಸಿ ಕೊಡುವವರೆಗೆ …

Read More »

ಹಳ್ಳೂರ ಗ್ರಾಮದಲ್ಲಿ 1.76 ಕೋಟಿ ರೂ. ವೆಚ್ಚದ ಜೆಜೆಎಂ ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸಿದ ಬಾಲಚಂದ್ರ ಜಾರಕಿಹೊಳಿ

  ಮೂಡಲಗಿ : ದೇಶದ ಪ್ರತಿ ಮನೆ ಮನೆಗೆ ನಳಗಳ ಮೂಲಕ ಕುಡಿಯುವ ನೀರಿನ ಯೋಜನೆಯನ್ನು ರೂಪಿಸಿರುವ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಕೃತಜ್ಞತೆ ಸಲ್ಲಿಸಿದ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು, ಕುಡಿಯುವ ನೀರಿನ ಯೋಜನೆಯನ್ನು ಎಲ್ಲರೂ ಸದ್ಬಳಕೆ ಮಾಡಿಕೊಳ್ಳುವಂತೆ ಕೋರಿಕೊಂಡರು. ಶನಿವಾರದಂದು ತಾಲೂಕಿನ ಹಳ್ಳೂರ ಗ್ರಾಮದಲ್ಲಿ ಜರುಗಿದ 1.76 ಕೋಟಿ ರೂ. ವೆಚ್ಚದ ಜೆಜೆಎಂ ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸಿ ಮಾತನಾಡಿದ ಅವರು, ಹಳ್ಳೂರ ಗ್ರಾಮದ ಪ್ರತಿಯೊಂದು ಮನೆಗಳಿಗೆ …

Read More »