ಗೋಕಾಕ : ಯಮಕನಮರಡಿ ಕ್ಷೇತ್ರದ ವಿವಿಧ ಗ್ರಾಮಗಳ ಯುವಕ ಮಂಡಳಗಳಿಗೆ ಯುವಸಬಲೀಕರಣ ಹಾಗೂ ಕ್ರೀಡಾ ಇಲಾಖೆಯಿಂದ ನೀಡಿದ ಕ್ರೀಡಾ ಸಾಮಗ್ರಿಗಳನ್ನು ಇಲ್ಲಿನ ಹಿಲ್ ಗಾರ್ಡನ್ ಕಚೇರಿಯಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ್ ಜಾರಕಿಹೊಳಿ ಇಂದು ವಿತರಿಸಿದರು. ಹುಕ್ಕೇರಿ ತಾಲ್ಲೂಕಿನ ಬಗರನಾಳ ಗ್ರಾಮದ ಗಜಾನನ ಯುವ ಮಂಡಳ, ಶಹಾಬಂದರದ ಮೆಹಬೂಬ ಸುಬಾನಿ ಯುವಕ ಮಂಡಳ, ಬೆಳಗಾವಿ ತಾಲ್ಲೂಕಿನ ಮುಚ್ಚಂಡಿ ಗ್ರಾಮದ ಅಮರಜ್ಯೋತಿ ಯುವಕ ಮಂಡಳಕ್ಕೆ ಕ್ರೀಡಾ ಸಾಮಗ್ರಿಗಳನ್ನು …
Read More »50ಕ್ರೀಡಾ ಪಟುಗಳಿಗೆ 22 ಸರಕಾರಿ ಶಾಲೆಗಳಿಗೆ ಕ್ರೀಡಾ ಸಾಮಗ್ರಿಗಳ ಕಿಟ್ ಗಳನ್ನು ಅಮರನಾಥ ಜಾರಕಿಹೊಳಿ ವಿತರಿಸಿದರು.
ಗೋಕಾಕ: ನಗರದ ಶಾಸಕರ ಕಾರ್ಯಲಯದ ಆವರಣದಲ್ಲಿ ಇಂದು ( ಸೋಮವಾರ) ಯುವ ಸಬಲಿಕರಣ ಮತ್ತು ಕ್ರೀಡಾ ಇಲಾಖೆಯಿಂದ SCP /TSP ಯೋಜನೆ ಅಡಿಯಲ್ಲಿ ರಾಜ್ಯ ವಲಯ ಕ್ರೀಡಾ ತರಬೇತಿಯಲ್ಲಿ ಭಾಗವಹಿಸಿದ 50ಕ್ರೀಡಾ ಪಟುಗಳಿಗೆ ಹಾಗೂ ಗೋಕಾಕ ಮತಕ್ಷೇತ್ರದ 22 ಸರಕಾರಿ ಶಾಲೆಗಳಿಗೆ ಕ್ರೀಡಾ ಸಾಮಗ್ರಿಗಳ ಕಿಟ್ ಗಳನ್ನು ಕೆಎಂಎಫ್ ನಿರ್ದೇಶಕ ಅಮರನಾಥ ಜಾರಕಿಹೊಳಿ ಅವರು ವಿತರಿಸಿದರು. ಈ ಸಂದರ್ಭದಲ್ಲಿ ಮಾಜಿ ಜಿ.ಪಂ ಟಿ , ಆರ್ ಕಾಗಲ …
Read More »ಬೆಳಗಾವಿ ಉಪಚುನಾವಣೆಗೆ 13.54 ಕೋಟಿ ರು. ಖರ್ಚು
ಬೆಳಗಾವಿ (ಜು.05): ಇತ್ತೀಚೆಗೆ ನಡೆದ ಬೆಳಗಾವಿ ಲೋಕಸಭಾ ಉಪಚುನಾವಣೆಗೆ ಸರ್ಕಾರದಿಂದ 13.54 ಕೋಟಿ ರು. ಖರ್ಚು ಆಗಿರುವುದು ಮಾಹಿತಿ ಹಕ್ಕಿನಿಂದ ಬಹಿರಂಗಗೊಂಡಿದೆ ಎಂದು ಮಾಹಿತಿ ಹಕ್ಕು ಹೋರಾಟಗಾರ ಭೀಮಪ್ಪ ಗಡಾದ ಅವರು ತಿಳಿಸಿದ್ದಾರೆ. ನಗರದಲ್ಲಿ ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಬೆಳಗಾವಿ ಲೋಕಸಭಾ ಉಪಚುನಾವಣೆಯಲ್ಲಿ ಸಾರ್ವಜನಿಕರ ತೆರಿಗೆ ಹಣವನ್ನು ಅಧಿಕಾರಿಗಳು ನೀರಿನಂತೆ ಪೋಲು ಮಾಡಿದ್ದಾರೆ ಎಂದು ಆರೋಪಿಸಿದರು. ಯಾವುದೇ ಜನಪ್ರತಿನಿಧಿ ಅವಧಿಗೆ ಮುನ್ನ ಪಕ್ಷಾಂತರ ಮಾಡುವ, ರಾಜೀನಾಮೆ ನೀಡಿದ ಮೇಲೆ …
Read More »ಬೆಳಗಾವಿ : ದಾಂಪತ್ಯ ಜೀವಕ್ಕೆ ಕಾಲಿಟ್ಟ ಅಂಧ ಜೋಡಿ
ಬೆಳಗಾವಿ : ದೇವರ ಶಾಪಕ್ಕೆ ಗುರಿಯಾಗಿ ಹುಟ್ಟಿನಿಂದ ಅಂಧತ್ವದಲ್ಲೇ ಬದುಕು ಕಳೆಯುತ್ತಿದ್ದ ಅಂಧರಿಬ್ಬರು ಕೊರೊನಾ ನಿಯಮಾವಳಿಯಂತೆ ಸರಳ ಮದುವೆ ಮಾಡಿಕೊಂಡರು. ಇಲ್ಲಿನ ಹನುಮಾನ ನಗರದ ಭಕ್ತಿವಾಸ ಸಾಂಸ್ಕೃತಿಕ ಭವನದ ಕಾರ್ಯಾಲಯದಲ್ಲಿ ಉಷಾ ತಾಯಿ ಪೋತದಾರ್ ಫೌಂಡೇಶನ್‍ನ ಆಶ್ರಯದಲ್ಲಿ ಬೆಳಗಾವಿಯ ದೀಪಾ ಹಾಗೂ ಬೆಂಗಳೂರಿನ ರವಿ ಅಂಧ ಜೋಡಿಯ ಮಂಗಲ ಕಾರ್ಯ ನೆರವೇರಿತು. ಜಿಲ್ಲೆಯಲ್ಲಿ ಸಾಮಾಜಿಕ ಕಾರ್ಯಗಳ ಮೂಲಕ ಗುರುತಿಸಿಕೊಂಡಿರುವ ಬೆಳಗಾವಿಯ ಉಷಾ ಪೋತದಾರ್ ಫೌಂಡೇಶನ್ ಮುಖ್ಯಸ್ಥರು ಅಂಧ ಜೋಡಿಯ ಮದುವೆ …
Read More »50 ಲಕ್ಷ ರೂ. ವೆಚ್ಚದಲ್ಲಿ ಹೊಸ ಆಸ್ಪತ್ರೆ ನಿರ್ಮಾಣ : ಶಾಸಕ ಬಾಲಚಂದ್ರ ಜಾರಕಿಹೊಳಿ
ಮೂಡಲಗಿ : ಯಾದವಾಡ ಹಾಗೂ ಸುತ್ತಲಿನ ಗ್ರಾಮಗಳ ರೋಗಿಗಳ ಅನುಕೂಲಕ್ಕೋಸ್ಕರ ಯಾದವಾಡ ಪ್ರಾಥಮಿಕ ಆರೋಗ್ಯ ಕೇಂದ್ರದ ನೂತನ ಕಟ್ಟಡದ ಕಾಮಗಾರಿಯನ್ನು ಒಂದು ವಾರದೊಳಗೆ ಆರಂಭಿಸಲಾಗುವುದು. ಇದಕ್ಕಾಗಿ 50 ಲಕ್ಷ ರೂ.ಗಳನ್ನು ನೀಡುವುದಾಗಿ ಶಾಸಕ ಹಾಗೂ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ತಿಳಿಸಿದರು. ತಾಲೂಕಿನ ಯಾದವಾಡ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ರವಿವಾರದಂದು ಭೇಟಿ ನೀಡಿ ಆಸ್ಪತ್ರೆಯನ್ನು ಪರಿಶೀಲಿಸಿದ ಬಳಿಕ ಮಾತನಾಡಿದ ಅವರು, ಹೊಸ ಆಸ್ಪತ್ರೆ ನಿರ್ಮಾಣಕ್ಕೆ ಸರ್ಕಾರದಿಂದ …
Read More »ಸರ್ಕಾರಿ ಹೊಸ ಮಾಧ್ಯಮಿಕ ಶಾಲೆ ಕಟ್ಟಡ ಕಾಮಗಾರಿಗೆ ಚಾಲನೆ ನೀಡಿದ ಕೆ ಎಂ ಎಫ್ ನಿರ್ದೇಶಕರು ಅಮರನಾಥ ಜಾರಕಿಹೊಳಿ….
ಗೋಕಾಕ ಜು 4 : ಶಾಸಕ ರಮೇಶ ಜಾರಕಿಹೊಳಿ ಅವರ ಪ್ರಯತ್ನದಿಂದ ಇಲ್ಲಿನ ಸರಕಾರಿ ಹೊಸ ಮಾಧ್ಯಮಿಕ ಶಾಲೆಗೆ ಆರ್ ಐ ಡಿ ಎಫ್ ಯೋಜನೆಯಡಿ 62.80 ಲಕ್ಷ ರೂ, ನ್ಯಾಯಾಂಗ ಇಲಾಖೆ ವತಿಯಿಂದ 15 ಲಕ್ಷ ರೂ ಹಾಗೂ ಕೆ ಆರ್ ಡಿ ಸಿ ಯೋಜನೆಯಡಿ 30 ಲಕ್ಷ ರೂ ಒಟ್ಟು ರೂ 1.7 ಕೋಟಿ ವೆಚ್ಚದಲ್ಲಿ ಮಂಜೂರಾದ 7 ಶಾಲಾ ಕೊಠಡಿ, 6 ಶೌಚಾಲಯಗಳಿಗೆ ಹಾಗೂ ಲೋಕೋಪಯೋಗಿ …
Read More »ಕಿರುಕುಳಕ್ಕೆ ಬೇಸತ್ತ ಮಹಿಳೆ ರಸ್ತೆ ಮಧ್ಯೆಯೇ ಕಾಮುಕನಿಗೆ ಚಪ್ಪಲಿಹಿಂದ ಹಿಗ್ಗಾಮುಗ್ಗಾ ಭಾರಿಸಿರುವ ಘಟನೆ
ಬೆಳಗಾವಿ: ಖಾಸಗಿ ಆಸ್ಪತ್ರೆಯಲ್ಲಿ ಕೆಲಸ ಮಾಡುತ್ತಿದ್ದ ಮಹಿಳೆಯನ್ನು ಹಲವು ತಿಂಗಳಿಂದ ವ್ಯಕ್ತಿಯೋರ್ವ ಹಿಂಬಾಲಿಸುತ್ತಾ ಚುಡಾಯಿಸುತ್ತಿದ್ದ. ಕಿರುಕುಳಕ್ಕೆ ಬೇಸತ್ತ ಮಹಿಳೆ ರಸ್ತೆ ಮಧ್ಯೆಯೇ ಕಾಮುಕನಿಗೆ ಚಪ್ಪಲಿಹಿಂದ ಹಿಗ್ಗಾಮುಗ್ಗಾ ಭಾರಿಸಿರುವ ಘಟನೆ ಬೆಳಗಾವಿ ನಗರದ ಎಸ್ ಪಿ ಕಚೇರಿ ಮುಂದಿನ ರಸ್ತೆಯಲ್ಲಿ ನಡೆದಿದೆ. ಗೋಪಾಲ್ ಗುರನ್ನವರ್ ಎಂಬಾತ ಮಹಿಳೆಯನ್ನು ಹಿಂಬಾಲಿಸುತ್ತಿದ್ದ. ಹಲವುಬಾರಿ ಎಚ್ಚರಿಕೆ ನೀಡಿದ್ದರೂ ಮತ್ತದೇ ಚಾಳಿ ಮುಂದುವರೆಸಿದ್ದ. ನೂಂದ ಮಹಿಳೆ ಹಾಗೂ ಆಕೆ ಪತಿ ಇಬ್ಬರೂ ಗುರನ್ನವರ್ ನನ್ನು ಹಿಡಿದು ಚಪ್ಪಲಿ …
Read More »ಜೀವಂತ ಹಾವನ್ನು ಕೊರಳಿಗೆ ಸುತ್ತಿಕೊಂಡ ಅಜ್ಜಾ..
ಬೆಳಗಾವಿ: ವ್ಯಕ್ತಿಯೊಬ್ಬ ಜೀವಂತ ಹಾವನ್ನು ಹಿಡಿದು ತನ್ನ ಕೊರಳಿಗೆ ಸುತ್ತಿಕೊಂಡು ಸೈಕಲ್ ಏರಿ ಹೋಗಿ ಅರಣ್ಯಕ್ಕೆ ಬಿಟ್ಟ ಘಟನೆ ಬೆಳಗಾವಿ ತಾಲೂಕಿನ ಹಂಗರಗಾ ಗ್ರಾಮದಲ್ಲಿ ನಡೆದಿದೆ. ಹಾವು ವ್ಯಕ್ತಿಯ ಮನೆಗೆ ಬಂದಿತ್ತು. ಹಾವನ್ನು ಹಿಡಿದು ಅದನ್ನು ತನ್ನ ಕೊರಳಿಗೆ ಸುತ್ತಿಕೊಂಡು ಸೈಕಲ್ ಏರಿ ತನ್ನ ಹೊಲದತ್ತ ತೆಗೆದುಕೊಂಡು ಹೋಗಿ ಬಿಟ್ಟಿದ್ದಾನೆ. ಈ ದೃಶ್ಯವನ್ನು ಸೆರೆಹಿಡಿದ ಗ್ರಾಮದ ಯುವಕರು ಸೋಶಿಯಲ್ ಮೀಡಿಯಾಗಳಲ್ಲಿ ಹರಿಬಿಟ್ಟಿದ್ದಾರೆ.
Read More »ಮನನೊಂದು ತಮ್ಮ ಹೊಲದಲ್ಲಿ ಬೆಂಕಿ ಹಚ್ಚಿಕೊಂಡು ವ್ಯಕ್ತಿಯೊರ್ವ ಆತ್ಮಹತ್ಯೆ.
ಬೆಳಗಾವಿ: : ಇತ್ತೀಚಿಗೆ ದ್ವಿಚಕ್ರ ವಾಹನದ ಅಪಘಾತದಲ್ಲಿ ಗಾಯಗೊಂಡು ತನ್ನ ಎರಡು ಕಾಲುಗಳಿಗೆ ಪೆಟ್ಟಾಗಿದ್ದಕ್ಕೆ ಮನನೊಂದು ತಮ್ಮ ಹೊಲದಲ್ಲಿ ಬೆಂಕಿ ಹಚ್ಚಿಕೊಂಡು ವ್ಯಕ್ತಿಯೊರ್ವ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಳಗಾವಿ ತಾಲೂಕಿನ ಹೊನಗಾ ಗ್ರಾಮದಲ್ಲಿ ಶನಿವಾರ ನಡೆದಿದೆ. ಬಾಳಾರಾಮ ಯಲ್ಲಪ್ಪಾ ಆನಂದಾಚೆ (52) ಮೃತ ವ್ಯಕ್ತಿ. ಶನಿವಾರ ಮದ್ಯಾಹ್ನ ತಮ್ಮ ಹೊಲಕ್ಕೆ ಹೋಗಿದ್ದ ಬಾಳಾರಾಮ ಯರು ಇಲ್ಲದ ಸಮಯದಲ್ಲಿ ಮೈಮೇಲೆ ಸೀಮೆ ಹಾಕಿಕೊಂಡು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಗಿ ಪತ್ನಿ ಕಾಕತಿ …
Read More »ಮಹಿಳೆ ಹಾಗೂ ಆಕೆಯ ಪತಿ ಕಾಮುಕನಿಗೆ ನಡುರಸ್ತೆಯಲ್ಲೇ ಚಪ್ಪಲಿ ಸೇವೆ ಮಾಡಿದ್ದಾರೆ.
ಬೆಳಗಾವಿ: ಖಾಸಗಿ ಆಸ್ಪತ್ರೆಯಲ್ಲಿ ಕೆಲಸ ಮುಗಿಸಿ ಮನೆಗೆ ವಾಪಸ್ ಹೋಗುವ ವೇಳೆಯಲ್ಲಿ ಕೆಲ ತಿಂಗಳಿಂದ ಹಿಂಬಾಲಿಸಿ ಚುಡಾಯಿಸುತ್ತಿದ್ದ ಕಾಮುಕನಿಗೆ ಮಹಿಳೆ ಚಪ್ಪಲಿ ಏಟು ನೀಡಿರುವ ಘಟನೆ ನಗರಸ ಎಸ್ಪಿ ಕಚೇರಿ ಮುಂದಿನ ರಸ್ತೆಯಲ್ಲಿ ಶನಿವಾರ ಸಂಜೆ ನಡೆದಿದೆ. ಗೋಪಾಲ ಗುರಣ್ಣವರ ಮಹಿಳೆಯಿಂದ ಚಪ್ಪಲಿ ಸೇವೆ ಮಾಡಿಸಿಕೊಂಡ ವ್ಯಕ್ತಿಗೆ ಹಲವು ಸಾರಿ ಎಚ್ಚರಿಕೆ ನೀಡಿದರೂ ಸಹ ತನ್ನ ಹಿಂಬಾಲಿಸುವುದು ನಿಲ್ಲಿಸಿಲ್ಲ. ಸಿಳ್ಳೆ ಹೊಡೆದು ಚುಡಾಯಿಸುತ್ತಿದ್ದನು. ಇಂದು ಮಹಿಳೆ ಹಾಗೂ ಆಕೆಯ …
Read More »