ಗೋಕಾಕ ತಾಲೂಕಿನಲ್ಲಿ ಕಳೆದ ಒಂದು ವಾರದ Covid 19 ಪಾಜಿಟಿವಿಟಿ ದರದ ಆಧಾರದ ಮೇಲೆ ಮತ್ತು ಸರ್ಕಾರದ ನಿರ್ದೇಶನದಂತೆ ದಿನಾಂಕ: 21.06.2021, ಬೆಳಿಗ್ಗೆ 6.00 ರಿಂದ 05.07.2021, ಬೆಳಿಗ್ಗೆ 5.00 ರ ವರೆಗೆ ನಿರ್ಬಂಧಗಳ ಸಡಿಲಿಕೆಗಳನ್ನು ನೀಡಲಾಗಿದೆ. • ಎಲ್ಲಾ ಅಂಗಡಿಗಳನ್ನು ಸಂಜೆ 5.00 ಗಂಟೆವರೆಗೆ ತೆರೆಯಲು ಅನುವು ಮಾಡಿಕೊಡಲಾಗಿದೆ. • ಎಸಿ. ಚಾಲನೆಗೊಳಿಸದೇ ಹೋಟೆಲ್, ಕ್ಲಬ್ಸ್, ರೆಸ್ಟೋರೆಂಟ್‌ಗಳಲ್ಲಿ (ಮದ್ಯಪಾನ ಹೊರತುಪಡಿಸಿ) ಕುಳಿತು ತಿನ್ನಲು ಸಂಜೆ 5.00 ಗಂಟೆವರೆಗೆ …
Read More »ಕೋವಿಡ್ ನಿಯಂತ್ರಣಕ್ಕೆ ತಮ್ಮ ಶಾಸಕರ ಪ್ರದೇಶಾಭಿವೃದ್ದಿ ನಿಧಿ ಸಂಪೂರ್ಣ ಬಳಕೆ-ಶಾಸಕ ಬಾಲಚಂದ್ರ ಜಾರಕಿಹೊಳಿ.
ಗೋಕಾಕ: ಕೊರೋನಾ ಒಂದು ಮತ್ತು ಎರಡನೇ ಅಲೆಯು ಮಾನವ ಸಂಕುಲನಕ್ಕೆ ಮಹಾಮಾರಿಯಾಗಿ ಕಾಡುತ್ತಿದ್ದು, ದೇವರ ದಯೆಯಿಂದ ಮೂರನೇ ಅಲೆ ಬರಬಾರದು. ಒಂದು ವೇಳೆ ಬಂದರೂ ಅದನ್ನು ಸಮರ್ಥವಾಗಿ ಎದುರಿಸಲಿಕ್ಕೆ ಎಲ್ಲರೂ ಸನ್ನದ್ಧರಾಗಬೇಕು. ತಮ್ಮ ಶಾಸಕರ ಪ್ರದೇಶಾಭಿವೃದ್ದಿ ನಿಧಿಯನ್ನು ಕೋವಿಡ್‍ಗೆ ವೆಚ್ಚ ಮಾಡಲಾಗುವುದೆಂದು ಶಾಸಕ ಹಾಗೂ ಕೆಎಮ್‍ಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಹೇಳಿದರು. ನಗರದ ಎನ್‍ಎಸ್‍ಎಫ್ ಅತಿಥಿ ಗೃಹದಲ್ಲಿ ತಮ್ಮ ಶಾಸಕರ ಪ್ರದೇಶಾಭಿವೃದ್ದಿ ನಿಧಿಯಡಿಯಲ್ಲಿ ಮೂಡಲಗಿ ತಾಲೂಕಿನ ಎಲ್ಲ …
Read More »ಕುಂದಾನಗರಿ ಬೆಳಗಾವಿಯಲ್ಲಿ ಶತಕದ ಗಡಿ ದಾಟಿದ ಪೆಟ್ರೋಲ್ ದರ!
ಬೆಳಗಾವಿ: ಒಂದೂವರೆ ತಿಂಗಳ ಕಾಲ ಲಾಕ್ ಡೌನ್ ಗ್ರಹವಾಸ ಅನುಭವಿಸಿ ಇನ್ನೇನು ಅನ್ ಲಾಕ್ ಆಗಿ ವಾಹನ ತೆಗೆದುಕೊಂಡು ಹೊರ ಬರಬೇಕೆಂಬ ಖುಷಿಯಲ್ಲಿದ್ದ ಜನರಿಗೆ ಪೆಟ್ರೋಲ್ ದರ ಶಾಕ್ ನೀಡಿದ್ದು, ರವಿವಾರ ಕುಂದಾನಗರಿ ಬೆಳಗಾವಿಯಲ್ಲಿ ಪೆಟ್ರೋಲ್ ದರ ಶತಕದ ಗಡಿ ದಾಟಿದೆ. ದಿನದಿಂದ ದಿನಕ್ಕೆ ಏರುತ್ತಿರುವ ತೈಲ ಬೆಲೆ ಏರಿಕೆಯಿಂದ ಹೈರಾಣಾಗಿರುವ ಜನರಿಗೆ ರವಿವಾರ ಬೆಳಗ್ಗೆ 7:00 ಗಂಟೆಗೆ ಬೆಳಗಾವಿಯಲ್ಲಿ ಪ್ರಕಟವಾದ ಪೆಟ್ರೋಲ್ ದರ ಪಟ್ಟಿಯಲ್ಲಿ ನೂರರ ಗಡಿ ದಾಟಿದೆ. …
Read More »ಅಪ್ಪಂದಿರ ದಿನವೇ ದುರಂತ: ತನ್ನ ಇಬ್ಬರು ಮುದ್ದು ಮಕ್ಕಳೊಂದಿಗೆ ಆತ್ಮಹತ್ಯೆಗೆ ಶರಣಾದ ತಂದೆ.!
ಚಿಕ್ಕೋಡಿ: ಪತ್ನಿ ಸಾವಿನಿಂದ ಮನನೊಂದಿದ್ದ ಪತಿ ತನ್ನ ಇಬ್ಬರು ಹೆಣ್ಣುಮಕ್ಕಳ ಜೊತೆ ಆತ್ಮಹತ್ಯೆ ಮಾಡಿಕೊಂಡಿರುವ ಹೃದಯವಿದ್ರಾವಕ ಘಟನೆ ಚಿಕ್ಕೋಡಿ ತಾಲೂಕಿನ ಪೊಗತ್ಯಾನಟ್ಟಿ ಗ್ರಾಮದಲ್ಲಿ ರವಿವಾರ ಬೆಳಗಿನ ಜಾವ ನಡೆದಿದೆ. ಕಾಡಪ್ಪ ಪ್ರದಾನಿ ರಂಗಾಪಪುರೆ(48), ಹೆಣ್ಣುಮಕ್ಕಳಾದ ಕೀರ್ತಿ(18) ಹಾಗೂ ಸ್ಪೂರ್ತಿ (16) ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ವಾರದ ಹಿಂದೆ ಚೆನ್ನವ್ವ ರಂಗಾಪುರೆ ಸಾವನ್ನಪ್ಪಿದ್ದರು. ಪತ್ನಿ ಸಾವಿನಿಂದ ಮನನೊಂದು ಪತಿ ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ಪೊಲೀಸ್ ಮೂಲಗಳಿಂದ ತಿಳಿದು ಬಂದಿದೆ. …
Read More »ಮಾರ್ಕಾಂಡೇಯ ನದಿ ನೀರುಪಾಲಾಗಿದ್ದ ರೈತ ಶವವಾಗಿ ಪತ್ತೆ
ಬೆಳಗಾವಿ: ಭಾರಿ ಮಳೆಯಿಂದ ಕಾಕತಿ ಬಳಿ ಮಾರ್ಕಾಂಡೇಯ ನದಿ ನೀರುಪಾಲಾಗಿದ್ದ ರೈತ ಶವವಾಗಿ ಪತ್ತೆಯಾಗಿದ್ದು, ಎರಡು ದಿನಗಳ ಬಳಿಕ ದರ್ಗಾ ಸೇತುವೆ ಬಳಿ ಮೃತದೇಹ ಪತ್ತೆಯಾಗಿದೆ. ಎರಡು ದಿನಗಳ ಹಿಂದೆ ಮಾರ್ಕಾಂಡೇಯ ನದಿಗೆ ಕಾಕತಿ ಬಳಿ ನಿರ್ಮಿಸಿದ್ದ ಸೇತುವೆ ಬಳಿ ಕಾಲು ತೊಳೆಯಲೆಂದು ಹೋಗಿದ್ದ ರೈತ ಸಿದ್ರಾಯಿ ದೊಡ್ಡರಾಮ ಸುತಗಟ್ಟಿ ನೀರಿನ ರಭಸಕ್ಕೆ ನದಿ ನೀರಿನಲ್ಲಿ ಕೊಚ್ಚಿ ಹೋಗಿದ್ದರು. ರೈತನಿಗಾಗಿ ಎರಡು ದಿನಗಳಿಂದ ಎನ್ ಡಿ ಆರ್ ಎಫ್ ತಂಡ …
Read More »ಕೋವಿಡ್ ನಿಂದ ತಂದೆ-ತಾಯಿ ಕಳೆದುಕೊಂಡ ಮಕ್ಕಳಿಗೆ ಬೆಂಬಲ ನೀಡುವ ಕಾರ್ಯಕ್ರಮ
ಬೆಳಗಾವಿ: ಕೋವಿಡ್ ಸೋಂಕಿನಿಂದ ಪೋಷಕರನ್ನು ಕಳೆದುಕೊಂಡ ಮಕ್ಕಳು ಅವರು ಎದುರಿಸುತ್ತಿರುವ ಸಂಕಷ್ಟದ ಪರಿಸ್ಥಿತಿಯಿಂದ ಹೊರಬಂದು ಅವರು ಮೊದಲಿನಂತೆ ಸಾಮಾನ್ಯ ಜೀವನ ನಡೆಸಲು ಅನುವಾಗುವಂತೆ ಅವರಿಗೆ ಭಾವನಾತ್ಮಕ, ಸಾಮಾಜಿಕ ಮತ್ತು ಶೈಕ್ಷಣಿಕ, ಆರ್ಥಿಕ ಬೆಂಬಲ ನೀಡಲು ಬಾಲಹಿತೈಷಿ ಕಾರ್ಯಕ್ರಮದಡಿ ಮಾರ್ಗದರ್ಶಕರಾಗಿ ಕಾರ್ಯನಿರ್ವಹಿಸಲು ಆಸಕ್ತ ಅಭ್ಯರ್ಥಿಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಮಕ್ಕಳಿಗೆ ಸಾಮಾಜಿಕ ಆರ್ಥಿಕ ಶೈಕ್ಷಣಿಕ ಎಲ್ಲಾ ರೀತಿಯ ಬೆಂಬಲಗಳನ್ನು ನೀಡಲು ಮುಂದೆ ಬರುವ ವ್ಯಕ್ತಿಗಳು ಬಾಲಹಿತೈಷಿ ಯೋಜನೆಯಡಿ ಮಾರ್ಗದರ್ಶಕರಾಗಿ ಕಾರ್ಯದರ್ಶಿ ಕರು ಎಂದು …
Read More »ಸೋಮವಾರದಿಂದ ಬಸ್ ಸಂಚಾರ ಆರಂಭ, ಹೋಟೆಲ್ ಸೇರಿ ಎಲ್ಲಾ ಅಂಗಡಿ ಓಪನ್
ಬೆಂಗಳೂರು: ಕಳೆದ ಒಂದು ವಾರದಲ್ಲಿ 16 ಜಿಲ್ಲೆಗಳಲ್ಲಿ ಶೇಕಡ 5 ಕ್ಕಿಂತ ಕಡಿಮೆ ಪಾಸಿಟಿವಿಟಿ ದರ ಇದ್ದು, 13 ಜಿಲ್ಲೆಗಳಲ್ಲಿ ಶೇ.5-10 % ಇದ್ದು, ಮೈಸೂರಿನಲ್ಲಿ ಶೇ 10 ಕ್ಕಿಂತ ಹೆಚ್ಚು ಪಾಸಿಟಿವಿಟಿ ದರ ಇದೆ ಎಂದು ಸಿಎಂ ಬಿ.ಎಸ್. ಯಡಿಯೂರಪ್ಪ ತಿಳಿಸಿದ್ದಾರೆ. ಈ ಪಾಸಿಟಿವಿಟಿ ದರದ ಆಧಾರದ ಮೇಲೆ ನಿರ್ಬಂಧಗಳ ಸಡಿಲಿಕೆಗಳನ್ನು ತಾಂತ್ರಿಕ ಸಲಹಾ ಸಮಿತಿಯ ಸಲಹೆಯ ಮೇರೆಗೆ ಸಂಪುಟ ಸಹೋದ್ಯೋಗಿಗಳೊಂದಿಗೆ ಚರ್ಚಿಸಿ ಈ ಕೆಳಕಂಡಂತೆ ತೀರ್ಮಾನಿಸಲಾಗಿದೆ. ಶೇ …
Read More »ಜೂನ್ 21ರಿಂದ 16 ಜಿಲ್ಲೆಗಳಲ್ಲಿ ಅನ್ ಲಾಕ್,ಬೆಳಿಗ್ಗೆ 6ಗಂಟೆಯಿಂದ ಸಂಜೆ 5ಗಂಟೆಯವರೆಗೆ ಅಗತ್ಯವಸ್ತುಗಳ ಖರೀದಿಗೆ ಹಾಗೂ ಅಂಗಡಿ ಮುಂಗಟ್ಟುಗಳನ್ನು ತೆರೆಯಲು ಅವಕಾಶ
ಬೆಂಗಳೂರು: ಜೂನ್ 21ರಿಂದ 16 ಜಿಲ್ಲೆಗಳಲ್ಲಿ ಅನ್ ಲಾಕ್ 2.0 ಜಾರಿಗೊಳಿಸುತ್ತಿರುವುದಾಗಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಘೋಷಿಸಿದ್ದಾರೆ. ಕೋವಿಡ್ ಉಸ್ತುವಾರಿ ಸಚಿವರು ಹಾಗೂ ಅಧಿಕಾರಿಗಳ ಸಭೆ ಬಳಿಕ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಸಿಎಂ ಬಿ.ಎಸ್.ಯಡಿಯೂರಪ್ಪ, ಶೇ.5ಕ್ಕಿಂತ ಕಡಿಮೆ ಪಾಸಿಟಿವಿಟಿ ರೇಟ್ ಇರುವ 16 ಜಿಲ್ಲೆಗಳಲ್ಲಿ ಸೋಮವಾರದಿಂದ ಲಾಕ್ ಡೌನ್ ಸಡಿಲಿಕೆ ಮಾಡಲಾಗುತ್ತಿದ್ದು, 13 ಜಿಲ್ಲೆಗಳಲ್ಲಿ ಲಾಕ್ ಡೌನ್ ಮುಂದುವರೆಸುತ್ತಿರುವುದಾಗಿ ತಿಳಿಸಿದರು. ಬೆಳಗಾವಿ, ಉತ್ತರ ಕನ್ನಡ, ಬೆಂಗಳೂರು ನಗರ, ಕೊಪ್ಪಳ, ಚಿಕ್ಕಬಳ್ಳಾಪುರ, ರಾಯಚೂರು, ಬಾಗಲಕೋಟೆ, …
Read More »ಸರ್ಕಾರ ಕೈ ಬಿಟ್ಟರೂ,,,ತನ್ನ ಕುಲ ಭಾಂದವರ ಕೈ ಹಿಡಿದ ಸಹೋದರರು..!!
ಬೆಳಗಾವಿ : ಕೋವಿಡ್ ಮಹಾಮಾರಿಗೆ ಹೆದರಿ ಜನರು ತಮ್ಮ ಮನೆಗಳಿಂದ ಹೊರಗೆ ಬರಲು ಹಿಂದೆ ಮುಂದೆ ನೋಡುತ್ತಿರುವ ಈಗಿನ ಪರಿಸ್ಥಿತಿಯಲ್ಲಿ ಮೇದಾರ ಸಮಾಜದ ಹಿತೈಸಿಗಳಾದ ನಾಗೇಶ ಹಾಗೂ ಅರ್ಜುನ ಕಡೋಲಿ ಸಹೋದರರು ಕೊರೋನಾಗೂ ಹೆದರದೆ ತಮ್ಮ ಕಾಲಿಗೆ ಚಕ್ರ ಕಟ್ಟಿಕೊಂಡ ಹಾಗೆ ಓಡಾಡಿ ಬಡತನದ ಅಲೆಗೆ ಸಿಲುಕಿ ಸಂಕಷ್ಟ ಅನುಭವಿಸುತ್ತಿರುವ ಕುಟುಂಬಗಳಿಗೆ ಆಹಾರ ಧಾನ್ಯ ಕಿಟ್ ಗಳನ್ನು ವಿತರಿಸುತ್ತಿದ್ದಾರೆ.ಕಳೆದ ಕೆಲ ದಿನಗಳಿಂದ ಬೆಳಗಾವಿ ಜಿಲ್ಲೆಯ ವಿವಿಧ ಊರುಗಳಿಗೆ ಭೇಟಿ ನೀಡಿ …
Read More »ನೆರೆ ಪ್ರವಾಹ ಸಂಬಂಧ ಪೂರ್ವಭಾವಿಯಾಗಿ ಅಧಿಕಾರಿಗಳ ಸಭೆ ನಡೆಸಿದ ಶಾಸಕ ಬಾಲಚಂದ್ರ ಜಾರಕಿಹೊಳಿ.
ಗೋಕಾಕ : ನೆರೆಯ ಮಹಾರಾಷ್ಟ್ರ ಹಾಗೂ ಕಳೆದ ಒಂದು ವಾರದಿಂದ ವ್ಯಾಪಕವಾಗಿ ಮಳೆ ಸುರಿಯುತ್ತಿದೆ. ಪ್ರಸಕ್ತ ಸ್ಥಿತಿಯಲ್ಲಿ ಪ್ರವಾಹ ಭೀತಿ ಎದುರಾಗಿಲ್ಲ. ಆದರೂ ನದಿ ತೀರದ ಗ್ರಾಮಗಳ ಜನರ ಸುರಕ್ಷತೆಗಾಗಿ ಮುಂಜಾಗ್ರತೆ ಕ್ರಮಗಳನ್ನು ಕೈಗೊಳ್ಳುವಂತೆ ಅರಭಾವಿ ಶಾಸಕ ಮತ್ತು ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ಶುಕ್ರವಾರ ಸಂಜೆ ತಮ್ಮ ಗೃಹ ಕಛೇರಿಯಲ್ಲಿ ನೆರೆ ಪ್ರವಾಹ ಸಂಬಂಧ ನಡೆದ ಅಧಿಕಾರಿಗಳ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ …
Read More »