ಬೆಳಗಾವಿ : ಬೆಡ್ಗೆ ಒಬ್ಬ ಮಂತ್ರಿ, ಆಕ್ಸಿಜನ್‌ಗೆ ಒಬ್ಬ ಮಂತ್ರಿ, ಸ್ಮಶಾನಕ್ಕೆ ಒಬ್ಬ ಮಂತ್ರಿ ಮಾಡಿದರೂ ಕೋವಿಡ್ ನಿರ್ವಹಣೆಯಲ್ಲಿ ಕೇಂದ್ರ ಸರ್ಕಾರ ಮತ್ತು ರಾಜ್ಯ ಸರ್ಕಾರ ಎರಡೂ ವಿಫಲವಾಗಿವೆ ಎಂದು ಕಾಂಗ್ರೆಸ್ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಆರೋಪಿಸಿದರು. ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಬೆಳಗಾವಿ ಜಿಲ್ಲೆಯಲ್ಲಿ ನಿತ್ಯ 7 ಸಾವಿರ ಟೆಸ್ಟಿಂಗ್ ಮಾಡಿಸಿ ಅಂತಾ ಸರ್ಕಾರ ಹೇಳಿದೆ. ಆದರೆ ಬೆಳಗಾವಿಯಲ್ಲಿ ವೈದ್ಯರೇ ಇಲ್ಲ. ಪ್ರಾಥಮಿಕ ಆಸ್ಪತ್ರೆಗಳು ಸೋರುತ್ತಿವೆ. ಪ್ರಾಣ ಉಳಿಸಿಕೊಳ್ಳಲು …
Read More »ಸಾರ್ವಜನಿಕ ಜಾಗದಲ್ಲಿ ಅಕ್ರಮವಾಗಿ ಸಾರಾಯಿ ಮಾರಾಟ,66 ಲೀಟರ್ ಸಾರಾಯಿ ಹಾಗೂ 3,440ರೂಪಾಯಿ ಪೊಲಿಸರ ವಶಕ್ಕೆ
ಬೆಳಗಾವಿ: ಸಾರ್ವಜನಿಕ ಜಾಗದಲ್ಲಿ ಅಕ್ರಮವಾಗಿ ಸಾರಾಯಿ ಮಾರಾಟ ಮಾಡುತ್ತಿದ್ದ ವ್ಯಕ್ತಿಯೋರ್ವನನ್ನು ಬಂಧಿಸಿರುವ ಘಟನೆ ಬೆಳಗಾವಿಯ ಕಪಿಲೇಶ್ವರ್ ಮಂದಿರದ ಓವರ್ ಬ್ರಿಡ್ಜ್ ಕೆಳಗೆ ನಡೆದಿದೆ. ಮಾರ್ಕೆಟ್ ಠಾಣೆ ಪೊಲೀಸರು ಆರೋಪಿಯನ್ನು ಬಂಧಿಸಿದ್ದು, ಬಂಧಿತನಿಂದ ಸುಮಾರು 26,136 ರೂಪಾಯಿ ಮೌಲ್ಯದ 66 ಲೀಟರ್ ಸಾರಾಯಿ ಹಾಗೂ 3,440ರೂಪಾಯಿಯನ್ನು ಪೊಲಿಸರು ವಶಕ್ಕೆ ಪಡೆದುಕೊಂಡಿದ್ದಾರೆ ಎಂದು ಬೆಳಗಾವಿ ನಗರ ಡಿಸಿಪಿ ಡಾ.ವಿಕ್ರಮ್ ಆಮ್ಟೆ ತಿಳಿಸಿದ್ದಾರೆ.
Read More »ಬೆಳಗಾವಿಯಲ್ಲಿ ಬರೋಬ್ಬರಿ 46 ಮಕ್ಕಳಲ್ಲಿ ಕೊರೊನಾ ಸೋಂಕು
ಬೆಳಗಾವಿ: ಜಿಲ್ಲೆಯಲ್ಲಿ ಕೊರೊನಾ ಅಟ್ಟಹಾಸ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಇದೀಗ ಮಕ್ಕಳಲ್ಲಿಯೂ ಮಹಾಮಾರಿ ಕಾಡುತ್ತಿದೆ. ಬೆಳಗಾವಿಯಲ್ಲಿ ಬರೋಬ್ಬರಿ 46 ಮಕ್ಕಳಲ್ಲಿ ಕೊರೊನಾ ಸೋಂಕು ದೃಢಪಟ್ಟಿದೆ. 18 ವರ್ಷದೊಳಗಿನ 46 ಮಕ್ಕಳು ಕೊರೊನಾ ಸೋಂಕಿನಿಂದ ಬಳಲುತ್ತಿದ್ದಾರೆ. ಮೇ 18ರಂದು 20 ಮಕ್ಕಳಲ್ಲಿ ಪಾಸಿಟಿವ್ ಬಂದಿದ್ದು, ಇದೀಗ ಎರಡೇ ದಿನದಲ್ಲಿ 46 ಮಕ್ಕಳಿಗೆ ಸೋಂಕು ಹರಡಿರುವುದು ಆತಂಕಕ್ಕೀಡುಮಾಡಿದೆ. ರಾಜ್ಯದಲ್ಲಿ ಚಿಕ್ಕ ಮಕ್ಕಳು ಕೂಡ ಕೊರೊನಾ ಸೋಂಕಿನಿಂದ ಬಳಲುತ್ತಿದ್ದು, ಕೊರೊನಾ 3ನೇ ಅಲೆ ಅಬ್ಬರ …
Read More »ಗೋಕಾಕ್ ತಾಲೂಕಿನ ಲೊಳಸರ ಗ್ರಾಮದಲ್ಲಿ ಆಟವಾಡುತ್ತಿದ್ದ ಮಗು ಚರಂಡಿಗೆ ಬಿದ್ದು ಮೃತಪಟ್ಟಿರುವ ಹೃದಯವಿದ್ರಾವಕ ಘಟನೆ
ಬೆಳಗಾವಿ: ಕೊರೊನಾ ಲಾಕ್ ಡೌನ್ ನಡುವೆ ಬೆಳಗಾವಿಯಲ್ಲಿ ದುರಂತವೊಂದು ಸಂಭವಿಸಿದೆ. ಮನೆಮುಂದೆ ಆಟವಾಡುತ್ತಿದ್ದ ಮಗು ಚರಂಡಿಗೆ ಬಿದ್ದು ಮೃತಪಟ್ಟಿರುವ ಹೃದಯವಿದ್ರಾವಕ ಘಟನೆ ಸಂಭವಿಸಿದೆ. ಗೋಕಾಕ್ ತಾಲೂಕಿನ ಲೊಳಸರ ಗ್ರಾಮದಲ್ಲಿ ಈ ದುರ್ಘಟನೆ ಸಂಭವಿಸಿದ್ದು, ಮನೆ ಮುಂದೆ ಇದ್ದ ಚಂಡಿಗೆ ಸಾದಿಕಾ ಸದ್ದಾಂ ಎಂಬ ಒಂದು ವರ್ಷದ ಮಗು ಬಿದ್ದು ಸಾವನ್ನಪ್ಪಿದೆ. ಚರಂಡಿ ನೀರು ಮನೆ ಮುಂದೆ ಕಟ್ಟಿಕೊಂಡಿದ್ದರೂ ಈ ಬಗ್ಗೆ ಮನೆಯವರಾಗಲಿ, ಸಂಬಂಧಪಟ್ಟವರಾಗಲಿ ಗಮನಹರಿಸಿಲ್ಲ. ಆಟವಾಡಲು ಹೋದ ಮಗು ಆಯತಪ್ಪಿ …
Read More »ಹದಗೆಟ್ಟು ಹೋದ ಬೆಳಗಾವಿ ಸರ್ಕಾರಿ ಆಸ್ಪತ್ರೆ ಪರಿಸ್ಥಿತಿ ಸ್ವತಃ B.S.Y. ಬಂದು ಪರಿಶೀಲನೆ….
ಬೆಳಗಾವಿ – ಬೆಳಗಾವಿಯ ಜಿಲ್ಲಾ ಆಸ್ಪತ್ರೆ (ಬಿಮ್ಸ್) ಪರಿಸ್ಥಿತಿ ಎಲ್ಲಿಗೆ ಬಂದಿದೆ ಎಂದರೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಪರಿಸ್ಥಿತಿ ನೋಡುವುದಕ್ಕಾಗಿಯೇ ಸ್ವತಃ ಇಲ್ಲಿಗೆ ಆಗಮಿಸುತ್ತಿದ್ದಾರೆ. ಜಿಲ್ಲೆಯಲ್ಲಿ ಉಸ್ತುವಾರಿ ಸಚಿವರೂ ಸೇರಿ ಐವರು ಮಂತ್ರಿಗಳಿದ್ದಾರೆ. ಓರ್ವ ಉಪಮುಖ್ಯಮಂತ್ರಿ ಇದ್ದಾರೆ. ಸಂಸದರಿದ್ದಾರೆ. ಇವರೆಲ್ಲರೂ ಸೇರಿದಂತೆ 18 ಶಾಸಕರಿದ್ದಾರೆ. ದೆಹಲಿ ಪ್ರತಿನಿಧಿ, ಸರಕಾರದ ಮುಖ್ಯಸಚೇತಕ, ವಿಧಾನಸಭೆ ಉಪಸಭಾಧ್ಯಕ್ಷ, ವಿವಿಧ ನಿಗಮ ಮಂಡಳಿಗಳ ಅಧ್ಯಕ್ಷರು ಎಲ್ಲರೂ ಇದ್ದಾರೆ. ಆದರೆ ಯಾರಿಂದಲೂ ಬಿಮ್ಸ್ ನಿಯಂತ್ರಣ ಸಾಧ್ಯವಾಗಿಲ್ಲ. ಇಲ್ಲಿನ ಅಧಿಕಾರಿಗಳು …
Read More »ಕೊರೋನಾ 2ನೇ ಅಲೆಯು ಗ್ರಾಮೀಣ ಭಾಗದಲ್ಲಿ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ವಿಶ್ವ ಹಿಂದೂ ಪರಿಷತ್ ಹಾಗೂ ಭಜರಂಗ ದಳದ ಕಾರ್ಯಕರ್ತರಿಂದ ಪ್ರಾರಂಭಿಸಲಾದ ಉಚಿತ ಅಂಬ್ಯುಲೆನ್ಸ್ ಸೇವೆ
ಗೋಕಾಕ: ಕೊರೋನಾ 2ನೇ ಅಲೆಯು ಗ್ರಾಮೀಣ ಭಾಗದಲ್ಲಿ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ವಿಶ್ವ ಹಿಂದೂ ಪರಿಷತ್ ಹಾಗೂ ಭಜರಂಗ ದಳದ ಕಾರ್ಯಕರ್ತರಿಂದ ಪ್ರಾರಂಭಿಸಲಾದ ಅಂಬ್ಯುಲೆನ್ಸ್ ಉಚಿತ ಸೇವೆಗೆ ಆರ್‍ಎಸ್‍ಎಸ್‍ನ ಬೆಳಗಾವಿ ವಿಭಾಗ ಸಂಚಾಲಕ ಎಮ್.ಡಿ.ಚುನಮರಿ ಅವರು ಶನಿವಾರದಂದು ನಗರದ ಪಟಗುಂದಿ ಮಾರುತಿ ದೇವಸ್ಥಾನದ ಆವರಣದಲ್ಲಿ ಚಾಲನೆ ನೀಡಿದರು. ಭಜರಂಗದಳದ ಬೆಳಗಾವಿ ವಿಭಾಗೀಯ ಸಂಯೋಜಕ ಸದಾಶಿವ ಗುದಗಗೋಳ ಅವರು ಮಾತನಾಡಿ, ಜನತೆ ಧೈರ್ಯದಿಂದ ಈ ಕೊರೋನಾ ವೈರಸ್‍ನ್ನು ಎದುರಿಸಿ, ನಿಮ್ಮೊಂದಿಗೆ …
Read More »ಪಿಪಿಇ ಉಡುಪು ಧರಿಸಿ ಕೋವಿಡ್ ವಾರ್ಡ್‌ಗೆ ಹೋಗಿದ್ದ ಲಕ್ಷ್ಮಣ ಸವದಿ ಅಸಮಾಧಾನ
ಬೆಳಗಾವಿ: ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ ಅವರು ಇಲ್ಲಿನ ಜಿಲ್ಲಾಸ್ಪತ್ರೆ (ಬಿಮ್ಸ್)ಗೆ ಶನಿವಾರ ಭೇಟಿ ನೀಡಿ ಪರಿಶೀಲಿಸಿದರು. ಪಿಪಿಇ ಉಡುಪು ಧರಿಸಿ ಕೋವಿಡ್ ವಾರ್ಡ್‌ಗೆ ಹೋಗಿದ್ದ ಅವರು ಅಲ್ಲಿನ ಅವ್ಯವಸ್ಥೆ ಕಂಡು ಅಧಿಕಾರಿಗಳ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದರು. ಆಸ್ಪತ್ರೆಯಲ್ಲಿ ಶುಚಿತ್ವ ಇಲ್ಲದಿರುವುದನ್ನು ಕಂಡು ಬಿಮ್ಸ್ ನಿರ್ದೇಶಕ ಡಾ.ವಿನಯ್ ದಾಸ್ತಿಕೊಪ್ಪ ಹಾಗೂ ಅಧಿಕಾರಿಗಳನ್ನು ತೀವ್ರ ತರಾಟೆಗೆ ತೆಗೆದುಕೊಂಡರು. ‘ಕೂಡಲೇ ವ್ಯವಸ್ಥೆ ಸರಿಪಡಿಸಬೇಕು. ಶುಚಿತ್ವ ಕಾಪಾಡಿಕೊಳ್ಳಬೇಕು. ಸೋಂಕಿತರಿಗೆ ಪೌಷ್ಟಿಕ ಆಹಾರ ನೀಡಬೇಕು’ ಎಂದು …
Read More »ಕೋವಿಡ್ ನಿಯಮಗಳನ್ನು ಉಲ್ಲಂಘಿಸಿದ ಹಿನ್ನೆಲೆಯಲ್ಲಿ ತಪ್ಪಿತಸ್ಥರಿಂದ ಒಟ್ಟಾರೆ 45,29,250 ರೂ. ದಂಡ ಸಂಗ್ರಹ: M.G..ಹಿರೇಮಠ
ಬೆಳಗಾವಿ : ಜಿಲ್ಲೆಯಲ್ಲಿ ಕೋವಿಡ್ ನಿಯಮಗಳನ್ನು ಉಲ್ಲಂಘಿಸಿದ ಹಿನ್ನೆಲೆಯಲ್ಲಿ ತಪ್ಪಿತಸ್ಥರಿಂದ ಒಟ್ಟಾರೆ 45,29,250 ರೂ. ದಂಡ ಸಂಗ್ರಹಿಸಲಾಗಿದೆ ಎಂದು ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ಅವರು ತಿಳಿಸಿದ್ದಾರೆ. ಈ ಕುರಿತು ಪ್ರಕಟಣೆ ನೀಡಿರುವ ಅವರು, ಮಾಸ್ಕ್ ಹಾಗೂ ಸಾಮಾಜಿಕ ಅಂತರ ಕಾಯ್ದುಕೊಳ್ಳದಿರುವ ಕುರಿತು 36,352 ಪ್ರಕರಣಗಳು, ರಾಷ್ಟ್ರೀಯ ವಿಪತ್ತು ನಿರ್ವಹಣಾ ಕಾಯ್ದೆ 2005 ರಡಿಯಲ್ಲಿ 240 ಪ್ರಕರಣಗಳು ಮತ್ತು ಕರ್ನಾಟಕ ಸಾಂಕ್ರಾಮಿಕ ರೋಗಗಳ ಕಾಯ್ದೆ 2020 ಅಡಿಯಲ್ಲಿ 117 ಪ್ರಕರಣಗಳು ದಾಖಲಿಸಲಾಗಿದೆ ಎಂದು …
Read More »ಕೋವಿಡ್ ವಾರ್ಡ್ ನ ಸ್ಥಿತಿ ಕಂಡು ಇದೇನು ಆಸ್ಪತ್ರೆಯೇ, ದನದ ಕೊಟ್ಟಿಗೆ ಇದಕ್ಕಿಂತ ಚೆನ್ನಾಗಿರುತ್ತದೆ ಎಂದು ಬಿಮ್ಸ್ ನಿರ್ದೇಶಕ ವಿನಯ್ ಜಾಸ್ತಿಕೊಪ್ಪಗೆ ಅವರನ್ನು ತರಾಟೆಗೆ ತೆಗೆದುಕೊಂಡ ಲಕ್ಷ್ಮಣ ಸವದಿ
ಬೆಳಗಾವಿ: ಬಿಮ್ಸ್ ಆಸ್ಪತ್ರೆ ಅವ್ಯವಸ್ಥೆಗಳ ಆಗರವಾಗಿದೆ, ಕೋವಿಡ್ ಸೋಂಕಿತರಿಗೆ ಸರಿಯಾಗಿ ಚಿಕಿತ್ಸೆ ಸಿಗುತ್ತಿಲ್ಲ ಎಂಬ ಮಾಧ್ಯಮಗಳ ವರದಿ ನಂತರ ಆಸ್ಪತ್ರೆಗೆ ಶನಿವಾರ ಬೆಳಗ್ಗೆ ಭೇಟಿ ನೀಡಿದ ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ ಆಸ್ಪತ್ರೆಯ ಅವ್ಯವಸ್ಥೆ ಕಂಡು ಹೌಹಾರಿದರು. ಕೋವಿಡ್ ವಾರ್ಡ್ ನ ಸ್ಥಿತಿ ಕಂಡು ಇದೇನು ಆಸ್ಪತ್ರೆಯೇ, ದನದ ಕೊಟ್ಟಿಗೆ ಇದಕ್ಕಿಂತ ಚೆನ್ನಾಗಿರುತ್ತದೆ ಎಂದು ಬಿಮ್ಸ್ ನಿರ್ದೇಶಕ ವಿನಯ್ ಜಾಸ್ತಿಕೊಪ್ಪಗೆ ಅವರನ್ನು ತರಾಟೆಗೆ ತೆಗೆದುಕೊಂಡರು ಎಂದು ತಿಳಿದುಬಂದಿದೆ. ಇಂದು ಬೆಳಗ್ಗೆ …
Read More »ಕೋವಿಡ್ ಸೋಂಕಿತ ವೃದ್ಧ ದಂಪತಿಯನ್ನು ಅಪಾರ್ಟ್ ಮೆಂಟ್ ನಿಂದ ಹೊರದಬ್ಬಿದ ಅಮಾನುಷ ಕೃತ್ಯ ಬೆಳಗಾವಿಯಲ್ಲಿ ನಡೆದಿದೆ.
ಬೆಳಗಾವಿ: ಕೋವಿಡ್ ಸೋಂಕಿತ ವೃದ್ಧ ದಂಪತಿಯನ್ನು ಅಪಾರ್ಟ್ ಮೆಂಟ್ ನಿಂದ ಹೊರದಬ್ಬಿದ ಅಮಾನುಷ ಕೃತ್ಯ ಬೆಳಗಾವಿಯಲ್ಲಿ ನಡೆದಿದೆ. ಆಹಾರ, ಆಶ್ರಯವಿಲ್ಲದೆ ಬೀದಿ ಬದಿಯಲ್ಲಿದ್ದ ವೃದ್ಧ ದಂಪತಿಯನ್ನು ಕೊನೆಗೆ ಕೆಲವು ಸಾಮಾಜಿಕ ಕಾರ್ಯಕರ್ತರು ರಕ್ಷಿಸಿ ಆಸ್ಪತ್ರೆಗೆ ಸೇರಿಸಿದ ಘಟನೆ ನಡೆದಿದೆ. ಮಹದೇವ ದೇವನ್(70 ವ) ಮತ್ತು ಅವರ ಪತ್ನಿ 65 ವರ್ಷದ ಶಾಂತ ಹಿಂಡ್ವಾಡಿ ಅಪಾರ್ಟ್ ಮೆಂಟ್ ಕಾಂಪ್ಲೆಕ್ಸ್ ನ ಕ್ವಾರ್ಟರ್ಸ್ ನಲ್ಲಿ ವಾಸಿಸುತ್ತಿದ್ದರು. ಅಲ್ಲಿ ಮಹದೇವ್ ವಾಚ್ ಮೆನ್ ಆಗಿ …
Read More »