ಬೆಳಗಾವಿ: ಬೆಳಗಾವಿಯಲ್ಲಿ ಕೊರೊನಾ ಆರ್ಭಟದ ನಡುವೆ ಇದೀಗ ಬ್ಲ್ಯಾಕ್ ಫಂಗಸ್ ಹಾಗೂ ವೈಟ್ ಫಂಗಸ್ ಸೋಂಕಿತರ ಸಂಖ್ಯೆ ಹೆಚ್ಚುತ್ತಿದೆ. ಕಳೆದ 15 ದಿನಗಳಲ್ಲಿ ಜಿಲ್ಲೆಯಲ್ಲಿ 9 ಜನರಲ್ಲಿ ಬ್ಲ್ಯಾಕ್ ಫಂಗಸ್ ಪತ್ತೆಯಾಗಿದ್ದರೆ, ಇಬ್ಬರಲ್ಲಿ ವೈ ಫಂಗಸ್ ಪತ್ತೆಯಾಗಿದೆ ಎಂದು ಜಿಲ್ಲಾ ಆರೋಗ್ಯಾಧಿಕಾರಿ ಡಾ.ಶಶಿಕಾಂತ ಮುನ್ಯಾಳ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಡಾ.ಶಶಿಕಾಂತ, ಜಿಲ್ಲೆಯಲ್ಲಿ ಕೊರೊನಾ ಸೋಂಕಿನಿಂದ ಗುಣಮುಖರಾಗುತ್ತಿರುವ 9 ಸೋಂಕಿತರಲ್ಲಿ ಬ್ಲ್ಯಾಕ್ ಫಂಗಸ್ ಪತ್ತೆಯಾಗಿದ್ದು, ವೈಟ್ ಫಂಗಸ್ ಪತ್ತೆಯಾದ ಇಬ್ಬರೂ ಸಾವನ್ನಪ್ಪಿದ್ದಾರೆ. …
Read More »ಉಪಚುನಾವಣೆಯಲ್ಲಿ ಕರ್ತವ್ಯ ನಿರ್ವಹಿಸಿದ್ದ ಶ್ರೀದೇವಿ ಹುದಲಿ ಸರಕಾರಿ ಶಾಲೆಯಶಿಕ್ಷಕಿ ಕೋವಿಡ್ ಗೆ ಬಲಿ
ಬೆಳಗಾವಿ: ಬೆಳಗಾವಿಯಲ್ಲಿ ಕೋವಿಡ್ ಅಟ್ಟಹಾಸಕ್ಕೆ ಮತ್ತೋರ್ವ ಶಿಕ್ಷಕಿ ಬಲಿಯಾಗಿದ್ದಾರೆ. ಹುದಲಿ ಸರಕಾರಿ ಪ್ರೌಢಶಾಲೆಯ ಶಿಕ್ಷಕಿ ಕೋವಿಡ್ ನಿಂದ ಮೃತಪಟ್ಟಿದ್ದಾರೆ. ಮೃತ ಶಿಕ್ಷಕಿ 32 ವರ್ಷದ ಶ್ರೀದೇವಿ ಹುಕ್ಕೇರಿ ಎಂದು ತಿಳಿದುಬಂದಿದೆ. ಹುದಲಿ ಸರಕಾರಿ ಶಾಲೆಯ ಕನ್ನಡ ಭಾಷೆ ಶಿಕ್ಷಕಿಯಾಗಿ ಕೆಲಸಮಾಡುತ್ತಿದ್ದ ಶ್ರೀದೇವಿಯವರು, ರಾಜ್ಯ ಸಂಪನ್ಮೂಲ ವ್ಯಕ್ತಿಯಾಗಿ, ಬರಹಗಾರರಾಗಿಯೂ ಕಾರ್ಯ ನಿರ್ವಹಿಸುತ್ತಿದ್ದರು. ಉಪಚುನಾವಣೆಯಲ್ಲಿ ಕರ್ತವ್ಯ ನಿರ್ವಹಿಸಿದ್ದ ಶ್ರೀದೇವಿ ಅವರು ಕೆಲದಿನಗಳಿಂದ ಕೊರೊನಾ ಸೋಂಕಿನಿಂದ ಬಳಲುತ್ತಿದ್ದರು. ಚಿಕಿತ್ಸೆ ಫಲಕಾರಿಯಾಗದೇ ತಡರಾತ್ರಿ ಕೊನೆಯುಸಿರೆಳೆದಿದ್ದಾರೆ. …
Read More »ಅನುಮತಿ ಇಲ್ಲದೆ ವಿವಾಹ ಆಯೋಜನೆ- 25 ಸಾವಿರ ದಂಡ
ಚಿಕ್ಕೋಡಿ/ಬೆಳಗಾವಿ: ಅನುಮತಿ ಪಡೆಯದೇ ಸರ್ಕಾರದ ಮಾರ್ಗಸೂಚಿ ಉಲ್ಲಂಘಿಸಿ ಮದುವೆ ಸಮಾರಂಭದ ಆಯೋಜಿಸಿದ್ದಕ್ಕೆ ಗ್ರಾಮ ಪಂಚಾಯಿತಿ ಅಧಿಕಾರಿಗಳು ದಾಳಿ ನಡೆಸಿ ಕುಟಂಬಕ್ಕೆ 25 ಸಾವಿರ ರೂ. ದಂಡ ವಿಧಿಸಿರುವ ಘಟನೆ ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಕಮತನೂರು ಗ್ರಾಮದಲ್ಲಿ ನಡೆದಿದೆ. ಕಮತನೂರು ಗ್ರಾಮದ ವರ ಕಾಶಿನಾಥ ಕಾಡಿ ಹಾಗೂ ಅವರಗೋಳ ಗ್ರಾಮದ ವಧು ಕಾಂಚನಾ ಬಾಳಾಜಿ ಅವರ ಮದುವೆಯನ್ನು ಶುಕ್ರವಾರ ಕಮತನೂರು ಗ್ರಾಮದಲ್ಲಿ ಆಯೋಜಿಸಲಾಗಿತ್ತು. ಆದರೆ ಗ್ರಾಮ ಪಂಚಾಯಿತಿಯಿಂದ ಅನುಮತಿ ಪಡೆದಿರಲಿಲ್ಲ. …
Read More »ಕೊರೋನಾ ಸೋಂಕಿತರಿಗೆ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರಿಂದ ಔಷಧ ಕಿಟ್ ವಿತರಣೆ
ಮೂಡಲಗಿ: ಕೊರೋನಾ ಎರಡನೇ ಅಲೆಗೆ ಬ್ರೇಕ್ ನೀಡಲು ಸಂಕಲ್ಪ ತೊಟ್ಟಿರುವ ಕಹಾಮ ಅಧ್ಯಕ್ಷ ಮತ್ತು ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಗೋಕಾಕ್ ಹಾಗೂ ಮೂಡಲಗಿ ತಾಲ್ಲೂಕಿನ ಸೋಂಕಿತರಿಗೆ ಔಷಧೀಯ ಕಿಟ್ ಗಳನ್ನು ವಿತರಿಸಲಾಯಿತು. ಪಟ್ಟಣದ ಸಮುದಾಯ ಆರೋಗ್ಯ ಕೇಂದ್ರದ ಕೊವಿಡ್ ಕಾಳಜಿ ಕೇಂದ್ರದಲ್ಲಿ ಶನಿವಾರ ನಡೆದ ಸರಳ ಕಾರ್ಯಕ್ರಮದಲ್ಲಿ ಶಾಸಕರ ಪರವಾಗಿ ಅವರ ಆಪ್ತ ಸಹಾಯಕ ನಾಗಪ್ಪ ಶೇಖರಗೋಳ ಅವರು ವೈದ್ಯಾಧಿಕಾರಿಗಳಿಗೆ ಹಸ್ತಾಂತರಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಗೋಕಾಕ್ …
Read More »ಬೆಳಗಾವಿ: ಸಂಪೂರ್ಣ ಲಾಕ್‌ಡೌನ್: ಜನರಿಂದ ಉತ್ತಮ ಸ್ಪಂದನೆ
ಬೆಳಗಾವಿ: ಕೊರೊನಾ ಸೋಂಕಿನ ಸರಪಳಿ ತುಂಡರಿಸುವ ಉದ್ದೇಶದಿಂದ ಜಿಲ್ಲಾಡಳಿತ ಘೋಷಿಸಿರುವ ಸಂಪೂರ್ಣ ಲಾಕ್‌ಡೌನ್‌ಗೆ ಮೊದಲ ದಿನವಾದ ಶನಿವಾರ ನಗರವೂ ಸೇರಿದಂತೆ ಜಿಲ್ಲೆಯಾದ್ಯಂತ ಉತ್ತಮ ಸ್ಪಂದನೆ ವ್ಯಕ್ತವಾಯಿತು. ಶನಿವಾರ ಬೆಳಿಗ್ಗೆ 6ರಿಂದ ಸೋಮವಾರ ಬೆಳಿಗ್ಗೆ 6ರವರೆಗೆ ಸಂಪೂರ್ಣ ಲಾಕ್‌ಡೌನ್ ಘೋಷಿಸಿ ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ ಆದೇಶ ಹೊರಡಿಸಿದ್ದಾರೆ. ಅದರಂತೆ ಪೊಲೀಸರು ಅನುಷ್ಠಾನಕ್ಕೆ ಕ್ರಮ ಕೈಗೊಂಡರು. ಬ್ಯಾರಿಕೇಡ್‌ಗಳನ್ನು ಹೆಚ್ಚಿಸಿ ಸಂಚಾರ ನಿರ್ಬಂಧಿಸಿದರು. ಬಹುತೇಕರು ಮನೆಗಳಲ್ಲೇ ಉಳಿದು ಸಹಕರಿಸಿದ್ದರಿಂದ ಜಿಲ್ಲೆಯು ಸ್ತಬ್ಧವಾಗಿತ್ತು. ಆಸ್ಪತ್ರೆಗಳಿಗೆ, ಮೆಡಿಕಲ್ …
Read More »ಬೆಳಗಾವಿಯಲ್ಲಿ ಬೆಳ್ಳಂಬೆಳಗ್ಗೆ ಹಿರಿಯ ಅಧಿಕಾರಿಗಳೇ ಕಾರ್ಯಾಚರಣೆಗಿಳಿದಿದ್ದಾರೆ.
ಬೆಳಗಾವಿ: ಕೊರೊನಾ ಸೋಂಕು ನಿಯಂತ್ರಣಕ್ಕೆ ರಾಜ್ಯಾದ್ಯಂತ ಲಾಕ್ ಡೌನ್ ವಿಸ್ತರಣೆಯಾಗಿದ್ದು, ಇಂದಿನಿಂದಲೇ ಕಠಿಣ ರೂಲ್ಸ್ ಗಳು ಜಾರಿಗೆ ಬಂದಿವೆ. ಕಟ್ಟುನಿಟ್ಟಿನ ಲಾಕ್ ಡೌನ್ ಗೆ ಸಿಎಂ ಯಡಿಯೂರಪ್ಪ ಸೂಚಿಸಿದ ಬೆನ್ನಲ್ಲೇ ಫೀಲ್ಡಿಗಿಳಿದ ಪೊಲೀಸರು ಅನಗತ್ಯವಾಗಿ ಓಡಾಡುವವರ ವಿರುದ್ಧ ಕ್ರಮ ಕೈಗೊಳ್ಳುತ್ತಿದ್ದಾರೆ. ಬೆಳಗಾವಿಯಲ್ಲಿ ಇಂದು ಬೆಳಗ್ಗೆ 6 ಗಂಟೆಯಿಂದಲೇ ಸಂಪೂರ್ಣ ಲಾಕ್ ಡೌನ್ ಜಾರಿಯಾಗಿದ್ದು, ಹಾಲು, ಔಷಧ ಹೊರತುಪಡಿಸಿ ಬೇರೆ ಯಾವುದಕ್ಕೂ ಅವಕಾಸ ನೀಡಲಾಗಿಲ್ಲ. ಆಸ್ಪತ್ರೆಗೆ ತೆರಳುವವರು ಮಾತ್ರ ರಸ್ತೆಗೆ ಇಳಿಯಲು …
Read More »ಅಂದಾಜು 2.5 ಕೋಟಿಯ ಚಿನ್ನದ ಕಹಾನಿಗೆ ಬೀಗ್ ಟ್ವಿಸ್ಟ್ : ಉತ್ತರ ವಲಯ ಐಜಿಪಿ ರಾಘವೇಂದ್ರ ಸುಹಾಸ ಕುಡಾ ಹಠಾತ್ ವರ್ಗಾವಣೆ
ಬೆಳಗಾವಿ: ಅಂದಾಜು 2.5 ಕೋಟಿಯ ಚಿನ್ನದ ಕಹಾನಿಗೆ ಬೀಗ್ ಟ್ವಿಸ್ಟ್ : ಉತ್ತರ ವಲಯ ಐಜಿಪಿ ರಾಘವೇಂದ್ರ ಸುಹಾಸ ಕುಡಾ ಹಠಾತ್ ವರ್ಗಾವಣೆ ನಿನ್ನೆಯಷ್ಠೇ ರಾಜ್ಯವನ್ನು ಬೆಚ್ಚಿಬಿಳಿಸಿದ್ದ ಚಿನ್ನ ಕದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಗುರುವಾರ ರಾತ್ರಿಯೇ ಸರಕಾರ ಮೂವರು ಪೊಲೀಸ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿತ್ತು. ಕಾರಿನಲ್ಲಿದ್ದ ಚಿನ್ನದ ಕದ್ದ ಕಿರಣ ಎಂಬಾತನು ಉತ್ತರ ವಲಯದ ಐಜಿಪಿ ರಾಘವೇಂದ್ರ ಸುಹಾಸ ಅವರ ಆಪ್ತ ಎಂಬ ಮಾತುಗಳು …
Read More »ಬೀದಿ ಬೀದಿಯಲ್ಲಿ ನಿಮಗೆ ಕಲ್ಲು ಹೊಡೀತಾರೆ ಹುಷಾರ್ ಎಂದು ಲಕ್ಷ್ಮಿ ಹೆಬ್ಬಾಳಕರ್ ಹೇಳಿದ್ಯಾರಿಗೆ ಗೊತ್ತಾ..?
ಬೆಳಗಾವಿ : ಆರೋಗ್ಯ ಸಚಿವ ಡಾ. ಕೆ.ಸುಧಾಕರ್ ಅವರು ಕೊರೊನಾ ಮೃತರ ಲೆಕ್ಕವನ್ನು ರಾಜ್ಯದ ಜನರಿಗೆ ತಪ್ಪಾಗಿ ನೀಡುತ್ತಿದ್ದಾರೆ. ಇದೇ ಲೆಕ್ಕವನ್ನು ಚಿಕ್ಕಬಳ್ಳಾಪುರ ಜನರ ಎದುರಿಗೆ ಹೇಳಿದರೆ ಅಲ್ಲಿನ ಜನ ಸಚಿವರನ್ನು ಪೊರಕೆಯಿಂದ ಹೊಡೆಯುತ್ತಾರೆ ಎಂದು ಕೆಪಿಸಿಸಿ ವಕ್ತಾರೆ ಹಾಗೂ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ಆಕ್ರೋಶ ವ್ಯಕ್ತಪಡಿಸಿದರು. ಬೆಳಗಾವಿಯಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾತಾನಾಡಿದ ಅವರು, ಚಿಕ್ಕಬಳ್ಳಾಪುರಕ್ಕೆ ಹೋಗಿ ಡಾ. ಕೆ.ಸುಧಾಕರ್ ಕೋವಿಡ್ ಸಾವಿನ ಲೆಕ್ಕ ಹೇಳಲಿ. ಚಿಕ್ಕಬಳ್ಳಾಪುರ ಜನ ಅವರನ್ನು …
Read More »ಮಾಜಿ ಕೇಂದ್ರ ಸಚಿವ ಬಾಬಗೌಡ ಪಾಟೀಲ್ ನಿಧನಕ್ಕೆ, ಸಿಎಂ ಬಿಎಸ್ ವೈ ಸೇರಿದಂತೆ ಗಣ್ಯರಿಂದ ಸಂತಾಪ
ಬೆಂಗಳೂರು: ಮಾಜಿ ಕೇಂದ್ರ ಸಚಿವ ಬಾಬಗೌಡ ಪಾಟೀಲ್ ಅವರ ನಿಧನಕ್ಕೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸೇರಿದಂತೆ ಹಲವು ಗಣ್ಯರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ರೈತ ಹೋರಾಟದಲ್ಲಿ ಮುಂಚೂಣಿಯಲ್ಲಿದ್ದ ಅವರು ಏಕಕಾಲಕ್ಕೆ ಎರಡು ವಿಧಾನಸಭಾ ಕ್ಷೇತ್ರದಿಂದ ಆಯ್ಕೆಯಾಗಿದ್ದ ಅಪರೂಪದ ನಾಯಕ. ಕರ್ನಾಟಕ ರಾಜ್ಯ ರೈತ ಸಂಘದ ಸಂಸ್ಥಾಪಕರಲ್ಲಿ ಒಬ್ಬರಾಗಿದ್ದ ಅವರು ಸದಾ ರೈತಪರ ಚಿಂತನೆಯಲ್ಲಿ ತೊಡಗಿಕೊಂಡು ರೈತರ ಕಲ್ಯಾಣಕ್ಕೆ ಶ್ರಮಿಸಿದರು. ಬೆಳಗಾವಿ ಲೋಕಸಭಾ ಕ್ಷೇತ್ರದಿಂದ ಆಯ್ಕೆಯಾಗಿ ಅಟಲ್ ಬಿಹಾರಿ ವಾಜಪೇಯಿ ಅವರ ಸಚಿವ …
Read More »ಕಾಗವಾಡ ತಾಲೂಕಿನ ಉಗಾರ ಖುರ್ದ ಗ್ರಾಮದೇವತೆ ಶ್ರೀ ಲಕ್ಷ್ಮೀದೇವಿ ಜಾತ್ರೆ ರದ್ದು
ಬೆಳಗಾವಿ: ಕಾಗವಾಡ ತಾಲೂಕಿನ ಉಗಾರ ಖುರ್ದ ಗ್ರಾಮದೇವತೆ ಶ್ರೀ ಲಕ್ಷ್ಮೀದೇವಿ ಜಾತ್ರೆ ರದ್ದುಪಡಿಸಲಾಗಿದೆ ಎಂದು ಪುರಸಭೆ ವತಿಯಿಂದ ಆದೇಶಿಸಲಾಗಿದೆ. ಜಿಲ್ಲೆಯಲ್ಲಿ ಕೊರೊನಾ ರಣಕೇಕೆಯಿಂದ ಧಾರ್ಮಿಕ ಕೇಂದ್ರಗಳು, ದೇವಸ್ಥಾನಕ್ಕೆ ಸಾರ್ವಜನಿಕ ಪ್ರವೇಶಕ್ಕೆ ನಿರ್ಬಂಧಿಸಲಾಗಿದೆ ಎಂದು ಆದೇಶಿಸಲಾಗಿದೆ. ಈ ಕುರಿತು ಮಾತನಾಡಿದ ಕಾಗವಾಡ ತಹಶೀಲ್ದಾರ ಪ್ರಮೀಳಾ ದೇಶಪಾಂಡೆ ಜಿಲ್ಲೆಯಲ್ಲಿ ಕೊರೊನಾ ಆರ್ಭಟ ಜೋರಾಗಿದೆ. ಸರಕಾರದ ಆದೇಶದಂತೆ ಜಾತ್ರೆಗಳ ಆಚರಣೆಗೆ ಯಾವುದೇ ಅನುಮತಿ ನೀಡಲಾಗುವುದಿಲ್ಲ. ಈ ಕೊವಿಡ್ ಸಮಯ ಹಾಗೂ ಲಾಕಡೌನ್ ನಿಯಮ ಉಲ್ಲಂಘಿಸಿ …
Read More »