ಮಿತಿ ಮೀರುತ್ತಿರುವ ಕೊರೊನಾ ಸೋಂಕು ನಿಯಂತ್ರಣಕ್ಕೆ ಮತ್ತೆ ಲಾಕ್ ದೌನ್ ಜಾರಿಯಾಗುವ ಸಾಧ್ಯತೆ ಇದ್ದು, ಇಂದು ಸಂಜೆ ನಿರ್ಧಾರ ಪ್ರಕಟವಾಗಲಿದೆ. ಈ ಹಿನ್ನೆಲೆಯಲ್ಲಿ ಪ್ರತಿಕ್ರಿಯಿಸಿರುವ ಸಿಎಂ ಬಿ.ಎಸ್.ಯಡಿಯೂರಪ್ಪ, ಪ್ರಧಾನಿ ಸೂಚನೆಗೆ ಕಾಯುತ್ತಿರುವುದಾಗಿ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಡಿದ ಸಿಎಂ, ಕೋವಿಡ್ ನಿಯಂತ್ರಣಕ್ಕೆ ಪ್ರಧಾನಿ ಮೋದಿ ಏನು ನಿರ್ದೇಶನ ನೀಡುತ್ತಾರೆಯೋ ಅದನ್ನು ಪಾಲಿಸುವುದು ನಮ್ಮ ಜವಾಬ್ದಾರಿ. ಸುಪ್ರೀಂ ಕೋರ್ಟ್ ಸಲಹೆ ಸೇರಿದಂತೆ ಎಲ್ಲವನ್ನೂ ಇಂದು ನಡೆಯಲಿರುವ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ …
Read More »ಜನತೆ ನನಗೆ ಸೋತು ಗೆದ್ದಿರುವವರು ಎಂದು ಸರ್ಟಿಫಿಕೇಟ್ ನೀಡಿದ್ದಾರೆ: ಸತೀಶ್ ಜಾರಕಿಹೊಳಿ
ಬೆಳಗಾವಿ: ಬಿಜೆಪಿ ಅಭ್ಯರ್ಥಿ ಮಂಗಳಾ ಅಂಗಡಿ ಅವರಿಗೆ ಚುನಾವಣೆ ಆಯೋಗ ಗೆದ್ದಿರುವ ಸರ್ಟಿಫಿಕೇಟ್ ನೀಡಿರಬಹುದು. ಆದರೆ, ರಾಜ್ಯದ ಜನತೆ ನಮಗೆ ಸೋತು ಗೆದ್ದವರು ಎಂಬ ಸರ್ಟಿಫಿಕೇಟ್ ನೀಡಿದ್ದಾರೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಹಾಗೂ ಬೆಳಗಾವಿ ಲೋಕಸಭಾ ಚುನಾವಣೆಯ ಪರಾಜಿತ ಕಾಂಗ್ರೆಸ್ ಅಭ್ಯರ್ಥಿ ಸತೀಶ ಜಾರಕಿಹೊಳಿ ಹೇಳಿದರು. ನಗರದ ಕಾಂಗ್ರೆಸ್ ಸಭಾಭವನದಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಾವು ಸೋತಿದ್ದರೂ ತೀವ್ರ ಪೈಪೋಟಿ ಕೊಟ್ಟಿದ್ದೇವೆ. ಸ್ವತಃ ಬಿಜೆ ಪಿ ನಾಯಕರೆ ಇದನ್ನು …
Read More »ಜಿಲ್ಲಾ ಉಸ್ತುವಾರಿ ಸಚಿವರಾದ ಗೋವಿಂದ ಕಾರಜೋಳ ಅವರು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ
ಬೆಳಗಾವಿ : ಜಿಲ್ಲೆಯ ಸರ್ಕಾರಿ ಹಾಗೂ ಖಾಸಗಿ ಆಸ್ಪತ್ರೆಗಳಲ್ಲಿ ಕೋವಿಡ್ ಸೋಂಕಿತರ ಚಿಕಿತ್ಸೆಗೆ ಲಭ್ಯವಿರುವ ಬೆಡ್ ಗಳ ಮಾಹಿತಿಯನ್ನು ಪ್ರತಿದಿನ ವೆಬ್‌ಸೈಟ್ ಮೂಲಕ ಜನರಿಗೆ ನೀಡಬೇಕು; ಆಕ್ಸಿಜನ್, ರೆಮಿಡಿಸಿವಿರ್ ಮತ್ತಿತರ ಔಷಧೋಪಕರಣಗಳ ಕೊರತೆ ಉಂಟಾಗದಂತೆ ಎಲ್ಲಾ ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂದು ಉಪ ಮುಖ್ಯಮಂತ್ರಿ ಮಂತ್ರಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಗೋವಿಂದ ಕಾರಜೋಳ ಅವರು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ. ಜಿಲ್ಲೆಯಲ್ಲಿ ಕೋವಿಡ್ ನಿಯಂತ್ರಣ ಮತ್ತು ಅಗತ್ಯ ಚಿಕಿತ್ಸೆ …
Read More »ಕೊರೋನಾದಿಂದಾಗಿ 8 ದಿನದ ಅಂತರದಲ್ಲಿ ತಂದೆ, ತಾಯಿ, ಮಗ ಸಾವಿಗೀಡಾಗಿದ್ದಾರೆ.
ಬೆಳಗಾವಿ – ಕೊರೋನಾದಿಂದಾಗಿ 8 ದಿನದ ಅಂತರದಲ್ಲಿ ತಂದೆ, ತಾಯಿ, ಮಗ ಸಾವಿಗೀಡಾಗಿದ್ದಾರೆ. ಬೆಳಗಾವಿಯ ಬಾಕ್ಸೈಟ್ ರಸ್ತೆಯ ವಿದ್ಯಾನಗರದ ನಿವಾಸಿಗಳಾದ ಪಾರ್ವತಿ ಕೃಷ್ಣಾ ತೇರಗಾಂವ( 76), ನಿವೃತ್ತ ಉಪ ನೊಂದನಾಧಿಕಾರಿ ಕೃಷ್ಣಾ ಭೀಮಪ್ಪ ತೇರಗಾಂವ (80) ಮತ್ತು ಪ್ರಶಾಂತ ಕೃಷ್ಣಾ ತೇರಗಾಂವ್ (49) ಮೃತರಾದವರು.ಪಾರ್ವತಿ ಏ.24ರಂದು, ಕೃಷ್ಣಾ ಏ. 29ರಂದು ಹಾಗೂ ಪ್ರಶಾಂತ ಮೇ 3ರಂದು ಮೃತರಾದರು. ಕೃಷ್ಣಾ ಹಾಗೂ ಪ್ರಶಾಂತ ಸಬ್ ರಜಿಸ್ಟ್ರಾರ್ ಕಚೇರಿ ಕನ್ಸಲ್ಟಂಟ್ ಆಗಿ ಕೆಲಸ …
Read More »ಮೇ.12 ರ ಬೆಳಿಗ್ಗೆ 6 ಗಂಟೆಯವರೆಗೆ ನಿಷೇಧಾಜ್ಞೆಯನ್ನು ಮುಂದುವರೆಸಿ, ಜಿಲ್ಲಾಧಿಕಾರಿ ಡಾ.ಕೆ. ಹರೀಶ್ ಕುಮಾರ್ ಆದೇಶ
ಬೆಳಗಾವಿ: ಕೋವಿಡ್-19 ಸಾಂಕ್ರಾಮಿಕ ರೋಗದ ಹರಡುವಿಕೆಯನ್ನು ತಡೆಗಟ್ಟಲು ಮುಂಜಾಗೃತಾ ಕ್ರಮವಾಗಿ ಮೇ.12 ರ ಬೆಳಿಗ್ಗೆ 6 ಗಂಟೆಯವರೆಗೆ ನಿಷೇಧಾಜ್ಞೆಯನ್ನು ಮುಂದುವರೆಸಿ, ಜಿಲ್ಲಾಧಿಕಾರಿ ಡಾ.ಕೆ. ಹರೀಶ್ ಕುಮಾರ್ ಆದೇಶ ಹೊರಡಿಸಿದ್ದಾರೆ. ಜಿಲ್ಲೆಯಲ್ಲಿ ಕೋರೊನಾ ವೈರಸ್ ಸೋಂಕು ಹರಡದಂತೆ ಸಾರ್ವಜನಿಕರ ಆರೋಗ್ಯ ಹಾಗೂ ಕಾನೂನು ಸುವ್ಯವಸ್ಥೆ ಕಾಪಾಡುವ ಹಿತದೃಷ್ಟಿಯಿಂದ ಏಪ್ರಿಲ್ 21ರ ರಾತ್ರಿ 9 ಗಂಟೆಯಿಂದ ಮೇ.4 ರ ಬೆಳಿಗ್ಗೆ 6 ಗಂಟೆಯವರೆಗೆ ನಿಷೇಧಾಜ್ಞೆಯನ್ನು ಹೊರಡಿಸಲಾಗಿತ್ತು. ಆದರೆ, ಕೊವಿಡ್ ಪ್ರಕರಣಗಳಲ್ಲಿ ಪ್ರತಿದಿನ ಹೆಚ್ಚಳ …
Read More »ಬೆಳಗಾವಿ ಲೋಕಸಭಾ ಉಪಚುನಾವಣೆಯಲ್ಲಿ ಬಿಜೆಪಿ ಗೆದ್ದು ಸೋತಿದೆ, ಕಾಂಗ್ರೆಸ್ ಸೋತು ಗೆದ್ದಿದೆ.
ಬೆಳಗಾವಿ – ಬೆಳಗಾವಿ ಲೋಕಸಭಾ ಉಪಚುನಾವಣೆಯಲ್ಲಿ ಬಿಜೆಪಿ ಗೆದ್ದು ಸೋತಿದೆ, ಕಾಂಗ್ರೆಸ್ ಸೋತು ಗೆದ್ದಿದೆ. ಫಲಿತಾಂಶ ಬಿಜೆಪಿ ಆತ್ಮಾವಲೋಕನ ಮಾಡುವಂತೆ ಮಾಡಿದೆ. ಜನರು ಬಿಜೆಪಿಯನ್ನು ಸ್ಪಷ್ಟವಾಗಿ ತಿರಸ್ಕರಿಸಿದ್ದಾರೆ. ಕೇವಲ ಅನುಕಂಪದ ಮತಗಳಿಂದ ಮಂಗಲಾ ಅಂಗಡಿ ಗೆದ್ದಿದ್ದಾರೆ. ಇದೇ ವೇಳೆ ಕಾಂಗ್ರೆಸ್ ಮತ್ತೆ ಬೆಳಗಾವಿ ಲೋಕಸಭಾ ಕ್ಷೇತ್ರದಲ್ಲಿ ಬಲಿಷ್ಠವಾಗಿದೆ. ಗೋಕಾಕ ಮತ್ತು ಬೆಳಗಾವಿ ದಕ್ಷಿಣ ವಿಧಾನಸಭಾ ಕ್ಷೇತ್ರಗಳನ್ನು ಹೊರತುಪಡಿಸಿದರೆ ಎಲ್ಲ ವಿಧಾನಸಭಾ ಕ್ಷೇತ್ರಗಳಲ್ಲೂ ಕಾಂಗ್ರೆಸ್ ಮೇಲುಗೈ ಸಾಧಿಸಿದೆ. ಬಿಜೆಪಿ ಶಾಸಕರೇ ಇರುವ …
Read More »ಬೆಳಗಾವಿಯಲ್ಲಿ ಬದಲಾದ ಚಿತ್ರಣ ; ಮಂಗಳಾ ಅಂಗಡಿಗೆ ಹಿನ್ನಡೆ, ಜಾರಕಿಹೊಳಿಗೆ ಮುನ್ನಡೆ
ಬೆಳಗಾವಿ: ಬೆಳಗಾವಿ ಲೋಕಸಭಾ ಕ್ಷೇತ್ರದ ಉಪ ಚುನಾವಣೆ ಮತ ಎಣಿಕೆ ಪ್ರಗತಿಯಲ್ಲಿದ್ದು, ಎಂಟು ವಿಧಾನಸಭಾ ಕ್ಷೇತ್ರಗಳ ಪೈಕಿ ಆರರಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸತೀಶ ಜಾರಕಿಹೊಳಿ ಮುನ್ನಡೆ ಗಳಿಸಿದ್ದಾರೆ. ಎರಡರಲ್ಲಿ ಮಾತ್ರ ಬಿಜೆಪಿ ಅಭ್ಯರ್ಥಿ ಮಂಗಲಾ ಅಂಗಡಿ ಮುನ್ನಡೆ ಕಾಯ್ದುಕೊಂಡಿದ್ದಾರೆ. ಅವರು ಬೆಳಗಾವಿ ದಕ್ಷಿಣ ಹಾಗೂ ಗೋಕಾಕ ವಿಧಾನಸಭಾ ಕ್ಷೇತ್ರಗಳಲ್ಲಿ ಮಾತ್ರ ಮುಂದಿದ್ದಾರೆ. ಉಳಿದಂತೆ ಅರಭಾವಿ, ಬೆಳಗಾವಿ ಉತ್ತರ, ಬೆಳಗಾವಿ ಗ್ರಾಮೀಣ, ಬೈಲಹೊಂಗಲ, ಸವದತ್ತಿ- ಯಲ್ಲಮ್ಮ ಹಾಗೂ ರಾಮದುರ್ಗದಲ್ಲಿ ಕಾಂಗ್ರೆಸ್ ಮುನ್ನಡೆ …
Read More »30 ಸಾವಿರ ಮತಗಳ ಅಂತರದಿಂದ ಗೆಲುವು ಸಾಧಿಸುತ್ತಾರೆ ಅಂತ ಸತೀಶ್ ಜಾರಕಿಹೊಳಿ ಅವರು ಸಿದ್ದರಾಮಯ್ಯ ಅವರಿಗೆ ಫೋನ್ ಕಾಲ್..
ಸತೀಶ್ ಜಾರಕಿಹೊಳಿಗೆ ಕರೆ ಮಾಡಿದ ಸಿದ್ದರಾಮಯ್ಯ ಏನಯ್ಯ ಟೆನ್ಶನ್ ಕೊಡ್ತಿದಿಯ ಅಂದರಂತೆ, ಏನಿಲ್ಲ ಸರ್ ಮೂವತ್ತು ಸಾವಿರ ಮತಗಳ ಅಂತರದಿಂದ ಗೆಲ್ಲುತ್ತೇನೆ ಅಂದ ಸತೀಶ್ ಜಾರಕಿಹೊಳಿ ಬೆಳಗಾವಿ ಲೋಕಸಭಾ ಚುನಾವಣೆ ಕ್ಷಣ ಕ್ಷಣಕ್ಕೂ ಹೊಸ ತಿರುವು ಮೂಡಿಸುತ್ತಿದೆ ಇಲ್ಲಿಯವರೆಗೂ 64 ರೌಂಡ ಮತದಾನ ಮುಗಡಿದ್ದು ಇನ್ನು ಕೆಲವು ಸುತ್ತುಗಳು ಬಾಕಿ ಇವೆ 30 ಸಾವಿರ ಮತಗಳ ಅಂತರದಿಂದ ಗೆಲುವು ಸಾಧಿಸುತ್ತಾರೆ ಅಂತ ಸತೀಶ್ ಜಾರಕಿಹೊಳಿ ಅವರು ಸಿದ್ದರಾಮಯ್ಯ ಅವರಿಗೆ ಫೋನ್ …
Read More »32ನೇ ಸುತ್ತಿನಲ್ಲಿ ಬಿಜೆಪಿ 11883 ಮತಗಳಿಂದ ಮುನ್ನಡೆ
ಬೆಳಗಾವಿ – ಬೆಳಗಾವಿ ಲೋಕಸಭಾ ಕ್ಷೇತ್ರದಲ್ಲಿ 32ನೇ ಸುತ್ತಿನಲ್ಲಿ ಬಿಜೆಪಿ 11883 ಮತಗಳಿಂದ ಮುನ್ನಡೆ ಸಾಧಿಸಿದೆ. ಬಿಜೆಪಿ 165362, ಕಾಂಗ್ರೆಸ್ 153479 ಮತ ಪಡೆದಿದೆ.
Read More »ಬೆಳಗಾವಿ ಲೋಕಸಭೆ ಫಲಿತಾಂಶ,ಮೊದಲ 7 ಸುತ್ತಿನವರೆಗೆ ಕಾಂಗ್ರೆಸ್ ಮುನ್ನಡೆ ಸಾಧಿಸಿತ್ತು.
ಬೆಳಗಾವಿ – ಬೆಳಗಾವಿ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ 12441 ಮತಗಳಿಂದ ಮುನ್ನಡೆ ಸಾಧಿಸಿದೆ. ಬಿಜೆಪಿ 142686, ಕಾಂಗ್ರೆಸ್ 130245 ಮತ ಪಡೆದಿದೆ.
Read More »