Breaking News

ಬೆಳಗಾವಿ

ಬೆಳಗಾವಿಯಲ್ಲಿ ಕೆಲಸ ನಿರ್ವಹಿಸುತ್ತಿರುವ 12 ಪತ್ರಕರ್ತರಿಗೆ ಕೊರೋನಾ ಪಾಸಿಟಿವ್

ಬೆಳಗಾವಿ – ಬೆಳಗಾವಿಯಲ್ಲಿ ಕೆಲಸ ನಿರ್ವಹಿಸುತ್ತಿರುವ 12 ಪತ್ರಕರ್ತರಿಗೆ ಕೊರೋನಾ ಪಾಸಿಟಿವ್ ದೃಢಪಟ್ಟಿದೆ. ಭಾನುವಾರ ನಡೆಯಲಿರುವ ಲೋಕಸಭಾ ಉಪಚುನಾವಣೆಯ ಮತ ಎಣಿಕೆ ಕೇಂದ್ರಕ್ಕೆ ತೆರಳಲು ಕೊರೋನಾ ನೆಗೆಟಿವ್ ಸರ್ಟಿಫಿಕೇಟ್ ಕಡ್ಡಾಯ ಎಂದು ನಿಯಮ ಮಾಡಿರುವ ಹಿನ್ನೆಲೆಯಲ್ಲಿ ಪತ್ರಕರ್ತರ ಕೊರೋನಾ ಟೆಸ್ಟ್ ಮಾಡಲಾಯಿತು. ಒಟ್ಟೂ 70 ಪತ್ರಕರ್ತರು ಟೆಸ್ಟ್ ಗೆ ಒಳಗಾಗಿದ್ದರು. ಅವರಲ್ಲಿ 12 ಜನರಿಗೆ ಪಾಸಿಟಿವ್ ಬಂದಿದೆ. ಅವರ ಪೈಕಿ 11 ಜನರಿಗೆ ಕೊರೋನಾದ ಯಾವುದೇ ಲಕ್ಷಣಗಳಿಲ್ಲ. ಈ ಎಲ್ಲ …

Read More »

ಕರ್ನಾಟಕದ ಬೆಳಗಾವಿ ಲೋಕಸಭಾ ಕ್ಷೇತ್ರ, ಮಸ್ಕಿ ಮತ್ತು ಬಸವಕಲ್ಯಾಣ ವಿಧಾನಸಭೆ ಉಪಚುನಾವಣೆ ಮತ ಎಣಿಕೆ ಕಾರ್ಯ ಕೂಡ ಆರಂಭವಾಗಿದೆ.

ಬೆಳಗಾವಿ – ದೇಶಾದ್ಯಂತ ನಡೆದ ವಿಧಾನಸಭೆ ಮತ್ತು ಲೋಕಸಭೆ ಉಪಚುನಾವಣೆಗಳ ಮತ ಎಣಿಕೆ ಕಾರ್ಯ ಬೆಳಗ್ಗೆ 8 ಗಂಟೆಗೆ ಅಧಿಕೃತವಾಗಿ ಆರಂಭವಾಗಿದೆ. ಮೊದಲು ಅಂಚೆ ಮತಗಳ ಎಣಿಕೆ ನಡೆಯಲಿದ್ದು, ನಂತರ ಇವಿಎಂ ತೆರೆಯಲಾಗುತ್ತದೆ. ಈ ಬಾರಿ ಕೋವಿಡ್ ಮಾರ್ಗಸೂಚಿ ಪಾಲಿಸಬೇಕಿರುವುದರಿಂದ ಪ್ರತಿಬಾರಿಯಷ್ಟು ವೇಗವಾಗಿ ಫಲಿತಾಂಶ ಸಿಗುವುದು ಕಷ್ಟ. ಪಶ್ಚಿಮ ಬಂಗಾಳ ಫಲಿತಾಂಶ ಎಲ್ಲಕ್ಕಿಂತ ಹೆಚ್ಚು ಕುತೂಹಲ ಮೂಡಿಸಿದ್ದು, ತಮಿಳುನಾಡು, ಕೇರಳ, ಆಸ್ಸಾಂ, ಪುದುಚೆರಿ ವಿಧಾನಸಭೆ ಚುನಾವಣೆ ಫಲಿತಾಂಶವೂ ಇಂದೇ ಪ್ರಕಟವಾಗಲಿದೆ. …

Read More »

ಕೊರೊನಾ ಸ್ಫೋಟ, ಮುಂದಿನ 15 ದಿನ ಎಚ್ಚರ: ಕೊಡಗು ಜಿಲ್ಲಾ ವೈದ್ಯಾಧಿಕಾರಿ ಆತಂಕ

ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಕೋವಿಡ್-19 ಸೋಂಕಿನ ಖಚಿತ ಪ್ರಮಾಣ ಹೆಚ್ಚಾಗಿದೆ. ಹಾಗಾಗಿ ಮುಂದಿನ 15 ದಿನ ಜನರು ಎಚ್ಚರಿಕೆಯಿಂದ ಇರಬೇಕು ಎಂದು ಕೊಡಗು ಜಿಲ್ಲಾ ವೈದ್ಯಾಧಿಕಾರಿ ಮೋಹನ್ ಕುಮಾರ್ ಆತಂಕ ವ್ಯಕ್ತಪಡಿಸಿದ್ದಾರೆ. ಕೊರೊನಾ ಸ್ಫೋಟ ಸಾಧ್ಯತೆ: ಮುಂದಿನ ಹದಿನೈದು ದಿನ ಕೊಡಗಿಗೆ ಕಂಟಕ ಎದುರು ಅಗುತ್ತದೆ. ಕೊಡಗು ಜಿಲ್ಲೆಯಲ್ಲಿರುವ ಜನಸಂಖ್ಯೆ ಸುಮಾರು ಆರೂವರೆ ಲಕ್ಷ. ಆದ್ರೆ ಬೆಂಗಳೂರಿನಿಂದ ಬಂದಿರುವ ಜನರು ಹಳ್ಳಿ ಸೇರಿಕೊಂಡಿದ್ದಾರೆ. ಆದ್ದರಿಂದ ಜಿಲ್ಲೆಯಲ್ಲಿ ದಿನದಿಂದ ದಿನಕ್ಕೆ ಕೊರೊನಾ …

Read More »

ಮುಂದಿನ 24 ಘಂಟೆಯಲ್ಲಿ ಜಿಲ್ಲೆಯ ಸಂಪೂರ್ಣ ಕೋವಿಡ್ ವಿವರ ಮೊಬೈಲ್ ನಲ್ಲಿ – ಡಿಸಿ

ಬೆಳಗಾವಿ – ಬೆಳಗಾವಿ ಜಿಲ್ಲೆಯ ಕೊರೋನಾ ಸಂಬಂಧಿತ ಸಮಗ್ರ ಮಾಹಿತಿ ಈಗ ಒಂದೇ ಕಡೆ ಲಭ್ಯ. ಈವರೆಗೆ ಬೆಡ್ ಮಾಹಿತಿ ಸೇರಿದಂತೆ ಎಲ್ಲದಕ್ಕೂ ತಡಕಾಡಬೇಕಿತ್ತು. ಆದರೆ ಈಗ ನಿಮ್ಮ ಬೆರಳ ತುದಿಯಲ್ಲಿ ಎಲ್ಲ ಮಾಹಿತಿಗಳೂ ಲಭ್ಯವಾಗುವಂತೆ ಮಾಡಿದ್ದಾರೆ ಜಿಲ್ಲಾಧಿಕಾರಿ ಡಾ.ಹರೀಶ್ ಕುಮಾರ್. ಹರೀಶ್ ಕುಮಾರ ನಿನ್ನೆಯಷ್ಟೆ ಮಾಹಿತಿ ನೀಡಿದ್ದರು, 24 ಗಂಟೆಯಲ್ಲಿ ಎಲ್ಲ ಮಾಹಿತಿ ನಿಮ್ಮ ಮೊಬೈಲ್ ನಲ್ಲಿ ಸಿಗುವಂತೆ ಮಾಡಲಾಗುವುದು ಎಂದು ಟೆಸ್ಟಿಂಗ್ ಇನ್ಫಾರ್ಮೇಶನ್, ಆಸ್ಪತ್ರೆ ಮತ್ತು ಬೆಡ್ …

Read More »

ನಾಳೆ ಬೆಳಗಾವಿ ಲೋಕಸಭಾ ಉಪಚುನಾವಣೆ ಫಲಿತಾಂಶ : ಮತ ಎಣಿಕೆ ಕೇಂದ್ರಕ್ಕೆ ಬರುವವರಿಗೆ ‘ಕೊರೋನಾ ನೆಗೆಟಿವ್’ ವರದಿ ಕಡ್ಡಾಯ

ಬೆಳಗಾವಿ : ರಾಜ್ಯದಲ್ಲಿ ಕೊರೊನಾ ವೈರಸ್ ಸೋಂಕಿನ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿದ್ದು, ಈ ನಡುವೆ ಮೇ. 2 ಕ್ಕೆ ಬೆಳಗಾ ಲೋಕಸಭೆ ಉಪಚುನಾವಣೆಯ ಮತ ಎಣಿಕೆ ನಡೆಯಲಿದ್ದು, ಮತ ಎಣಿಕೆ ಕೇಂದ್ರ ಬರುವವರಿಗೆ ಕೋವಿಡ್ ನೆಗೆಟಿವ್ ವರದಿ ಕಡ್ಡಾಯ ಮಾಡಲಾಗಿದೆ. ಮೇ. 2 ರಂದು ಮತ ಎಣಿಕೆ ಕೇಂದ್ರಕ್ಕೆ ಬರುವವರಿಗೆ ಆರ್ ಟಿ ಪಿಸಿಆರ್ ಪರೀಕ್ಷಾ ವರದಿ ಕಡ್ಡಾಯ ಮಾಡಿ ಜಿಲ್ಲಾ ಚುನಾವಣಾಧಿಕಾರಿ ಆದೇಶ ಹೊರಡಿಸಿದ್ದಾರೆ.ಕೊರೊನಾ ಮಾರ್ಗಸೂಚಿಯ ಪ್ರಕಾರ …

Read More »

ಓಡಾಟ ನಡೆಸುತ್ತಿದ್ದವರ ಮೇಲೆ ಪೊಲೀಸರ ಲಾಠಿಚಾರ್ಜ್ ವಾಹನಗಳ ಸೀಜ್

ಬೆಳಗಾವಿ; ಕೊರೊನಾ ಸೋಂಕು ನಿಯಂತ್ರಣಕ್ಕೆ ರಾಜ್ಯ ಸರ್ಕಾರ 14 ದಿನಗಳ ಕಾಲ ಲಾಕ್ ಡೌನ್ ಮಾದರಿಯ ಕರ್ಫ್ಯೂ ಜಾರಿಗೆ ತಂದಿದೆ. ಕರ್ಫ್ಯೂ ಜಾರಿಯಲ್ಲಿದ್ದರೂ ಜನರು ಮಾತ್ರ ನಿಯಮಗಳನ್ನು ಉಲ್ಲಂಘನೆ ಮಾಡಿ ಬೇಕಾಬಿಟ್ಟಿ ಓಡಾಟ ನಡೆಸುತ್ತಿದ್ದಾರೆ. ಸರ್ಕಾರ ಜಾರಿಗೆ ತಂದಿರುವ ಬಿಗಿ ಕ್ರಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು. ಇದು ಆಯಾ ಜಿಲ್ಲಾಡಳಿತದ ಜವಾಬ್ದಾರಿ ಎಂದು ನಿನ್ನೆಯಷ್ಟೇ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಜಿಲ್ಲಾಧಿಕಾರಿಗಳಿಗೆ ಪೊಲೀಸ್ ಅಧಿಕಾರಿಗಳಿಗೆ ಸೂಚನೆ ನೀಡಿದ್ದರು. ಆದಾಗ್ಯೂ ಕೂಡ ಜಿಲ್ಲಾಡಳಿತವಾಗಲಿ, ಪೊಲೀಸರಾಗಲಿ ಎಚ್ಚೆತ್ತುಕೊಂಡಂತಿಲ್ಲ. …

Read More »

ಬೆಳಗಾವಿಯ ಸದಾಶಿವ ನಗರದ ಸ್ಮಶಾನದಲ್ಲಿ ಏಕಕಾಲಕ್ಕೆ 11 ಜನ ಶವಸಂಸ್ಕಾರ

ಬೆಳಗಾವಿ-ಮಹಾಮಾರಿ ಕೊರೊನಾ ಅಟ್ಟಹಾಸ ಬೆಳಗಾವಿಯಲ್ಲಿ ಮುಂದುರೆದಿದ್ದು ಕೋವೀಡ್ ಮರಣ ಮೃದಂಗ ಮುಂದುರೆದಿದೆ,ಬೆಳಗಾವಿಯ ಸದಾಶಿವ ನಗರದ ಸ್ಮಶಾನದಲ್ಲಿ ಏಕಕಾಲಕ್ಕೆ 11 ಜನ ಶವಸಂಸ್ಕಾರ ಮಾಡಲಾಗಿದೆ. ಬೆಳಗಾವಿ ಜಿಲ್ಲೆಯಲ್ಲಿ ಬೆಳಗ್ಗೆಯಿಂದ ಈವರೆಗೂ 11 ಜನರು ಮೃತಪಟ್ಟಿದ್ದು, ಈ ಹನ್ನೊಂದು ಶವಗಳನ್ನುಕೋವಿಡ್ ನಿಯಮಾವಳಿ ಪ್ರಕಾರ ಅಂತ್ಯಕ್ರಿಯೆ ಮಾಡಲಾಗಿದೆ.ಸದಾಶಿವನಗರ ಸ್ಮಶಾನದಲ್ಲಿ ಇಂದು ಒಂದೇ ದಿನ 11 ಜನರ ಅಂತ್ಯಕ್ರಿಯೆ ನಡೆದಿದೆ. ಸದಾಶಿವ ನಗರ ಸ್ಮಶಾನದ ಬಳಿ ನಿಯೋಜಿತ ಮಹಾನಗರ ಪಾಲಿಕೆ ಸಿಬ್ಬಂದಿಯಿಂದ ಬೆಚ್ಚಿ ಬೀಳಿಸುವ ಮಾಹಿತಿ …

Read More »

ಕೋವಿಡ್ ಎರಡನೇ ಅಲೆ ನಿಯಂತ್ರಿಸಲು ಎಲ್ಲ ಇಲಾಖೆಗಳ ಸಮನ್ವಯತೆ ಅಗತ್ಯ ಬಾಲಚಂದ್ರ ಜಾರಕಿಹೊಳಿ, ಅಧ್ಯಕ್ಷರು, ಕೆಎಂಎಫ್

ಕೋವಿಡ್ ಎರಡನೇ ಅಲೆ ಗೋಕಾಕ : ಸರ್ಕಾರ ನೀಡಿದ ಮಾರ್ಗದರ್ಶನಗಳನ್ನು ಕಟ್ಟುನಿಟ್ಟಾಗಿ ಆಚರಣೆ ತರುವುದರೊಂದಿಗೆ ಮಹಾಮಾರಿ ಕೊರೋನಾ ವೈರಸ್‍ನ ಎರಡನೇ ಅಲೆಯನ್ನು ನಿಯಂತ್ರಿಸಲು ಎಲ್ಲ ಇಲಾಖೆಯವರು ಒಗ್ಗಟ್ಟಿನಿಂದ ಶ್ರಮಿಸುವಂತೆ ಉಪವಿಭಾಗಾಧಿಕಾರಿ ಶಶಿಧರ ಬಗಲಿ ಹೇಳಿದರು. ಶುಕ್ರವಾರದಂದು ನಗರದ ಹೊರವಲಯದ ಪ್ರಿಯದರ್ಶಿನಿ ಸಮುದಾಯ ಭವನದಲ್ಲಿ ಗೋಕಾಕ ಮತ್ತು ಮೂಡಲಗಿ ತಾಲೂಕುಗಳ ವಿವಿಧ ಇಲಾಖೆಗಳ ಮುಖ್ಯಸ್ಥರ ಕೋವಿಡ್ ನಿಯಂತ್ರಣ ಸಭೆಯಲ್ಲಿ ಪಾಲ್ಗೊಂಡು ಅವರು ಮಾತನಾಡುತ್ತಿದ್ದರು. ಜೀವ ಮತ್ತು ಜೀವನಕ್ಕೆ ಮಹತ್ವ ನೀಡಿ ಸರ್ಕಾರ …

Read More »

ಸಮಾಜಕ್ಕೆ ಮಾರಕವಾಗಿರುವ  6000 ಕೆ.ಜಿ. ತಂಬಾಕು ಉತ್ಪನ್ನಗಳನ್ನು ವಶಕ್ಕೆ: ಅಶೋಕ ತೇಲಿ 

ಬೆಳಗಾವಿ : ಬೆಳಗಾವಿ ಉಪವಿಭಾಗಾಧಿಕಾರಿ ಅಶೋಕ ತೇಲಿ ಇಂದು ಖಾನಾಪುರದಲ್ಲಿ ನಡೆಸಿದ ಕಾರ್ಯಾಚರಣೆಯಲ್ಲಿ 6,000 ಕೆಜಿ  ಅಕ್ರಮ ತಂಬಾಕು ವಶಕ್ಕೆ ಪಡೆಯಲಾಗಿದೆ.  ಖಾನಾಪುರದ ಅಂಗಡಿಯಲ್ಲಿ ಮಾರಾಟಕ್ಕೆ ಇಟ್ಟಿರುವ ಸಮಾಜಕ್ಕೆ ಮಾರಕವಾಗಿರುವ  6000 ಕೆ.ಜಿ. ತಂಬಾಕು ಉತ್ಪನ್ನಗಳನ್ನು ವಶಪಡಿಸಿಕೊಂಡಿದ್ದಾರೆ. ಮೂರು ಸಾವಿರ ಕೆಜಿ ಬಿಡಿ ತಂಬಾಕು ವಶಪಡಿಸಿಕೊಂಡಿದ್ದು, ಇದರಲ್ಲಿ ಲೇಬಲ್, ಪ್ಯಾಕಿಂಗ್ ಇರಲಿಲ್ಲ. ಇನ್ನೂ ಮೂರು ಸಾವಿರ ಕೆಜಿ ಅಕ್ರಮ ತಂಬಾಕನ್ನು ವಶಕ್ಕೆ ಪಡೆಯಲಾಗಿದೆ. ಜೊತೆಗೆ ಎಪ್ಪತ್ತು ಕೆಜಿ ಪ್ಲಾಸ್ಟಿಕ್ ವಶ ಪಡಿಸಿಕೊಳ್ಳಲಾಗಿದೆ. …

Read More »