ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಸೋಂಕು ನಿಯಂತ್ರಣಕ್ಕೆ ರಾಜ್ಯ ಸರ್ಕಾರ ಕಠಿಣ ನಿಯಮ ಜಾರಿ ಮಾಡಿದ್ದು, ನಾಳೆಯಿಂದ 14 ದಿನಗಳ ಕಾಲ ರಾಜ್ಯದಲ್ಲಿ ಲಾಕ್ ಡೌನ್ ಮಾದರಿ ಬಂದ್ ಜಾರಿ ಮಾಡಿದೆ. ಸಚಿವ ಸಂಪುಟ ಸಭೆ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಿಎಂ ಯಡಿಯೂರಪ್ಪ, ಕೊರೊನಾ ಸೋಂಕು ನಿಯಂತ್ರಣಕ್ಕೆರಾಜ್ಯದಲ್ಲಿ ಮುಂದಿನ 2 ವಾರ ಬಿಗಿ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು. ಏನಿರುತ್ತೆ ಏನಿರಲ್ಲ ಇಲ್ಲಿದೆ ಮಾಹಿತಿ: * ನಾಳೆಯಿಂದ 14 ದಿನಗಳ ಕಾಲ …
Read More »ಇಂದು ಬೆಳಗ್ಗೆ 11 ಗಂಟೆಗೆ ಸಿಎಂ ಸಭೆ ಮುಂದಿನ 15 ದಿನ ರಾಜ್ಯಾದ್ಯಂತ ಲಾಕ್ ಡೌನ್ ಮಾಡುವ ಸಾಧ್ಯತೆ ?
ಬೆಂಗಳೂರು : ರಾಜ್ಯದಲ್ಲಿ ಕೊರೊನಾ ವೈರಸ್ ಸೋಂಕಿನ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಈಗಾಗಲೇ ನೈಟ್ ಕರ್ಪ್ಯೂ, ವೀಕೆಂಡ್ ಕರ್ಪ್ಯೂ ಜಾರಿಗೊಳಿಸಲಾಗಿದೆ. ಆದರೆ, ಇದೀಗ ಮುಂದಿನ 15 ರಾಜ್ಯಾದ್ಯಂತ ಲಾಕ್ ಡೌನ್ ಮಾಡುವ ಸಾಧ್ಯತೆ ಇದೆ ಎನ್ನಲಾಗಿದೆ. ಇಂದು ಬೆಳಗ್ಗೆ 11 ಗಂಟೆಗೆ ಸಿಎಂ ಬಿ.ಎಸ್. ಯಡಿಯೂರಪ್ಪ ನೇತೃತ್ವದಲ್ಲಿ ರಾಜ್ಯ ಸಚಿವ ಸಂಪುಟ ಸಭೆ ನಡೆಯಲಿದ್ದು, ರಾಜ್ಯ ಸರ್ಕಾರ ಮೂರು ಮಹತ್ವದ ತೀರ್ಮಾನಗಳನ್ನು ಕೈಗೊಳ್ಳಲಿದೆ. ರಾಜ್ಯದ …
Read More »ನಿಧನ ವಾರ್ತೆ ರಾಮಣ್ಣ ತೋಳಿನವರ ನಿಧನ
ಗೋಕಾಕ: ತಾಲೂಕಿನ ಮಾಲದಿನ್ನಿ ಗ್ರಾಮದ ನಿವಾಸಿ, ಉಪ್ಪಾರ ಸಮಾಜದ ತಾಲೂಕಾಧ್ಯಕ್ಷ ಹಾಗೂ ಜಿ.ಪಂ ಮಾಜಿ ಸದಸ್ಯ ರಾಮಣ್ಣ ಭೀಮಪ್ಪ ತೋಳಿನವರ(68) ರವಿವಾರ ನಿಧನ ಹೊಂದಿದರು. ಪತ್ನಿ, ಇಬ್ಬರು ಪುತ್ರರು, ಮೂವರು ಪುತ್ರಿಯರು ಅಪಾರ ಬಂಧು ಬಳಗವನ್ನು ಅಗಲಿದ್ದಾರೆ. ಸಂತಾಪ: ಗೋಕಾಕ ಹಾಗೂ ಮೂಡಲಗಿ ತಾಲೂಕಿನ ಉಪ್ಪಾರ ಸಮಾಜದ ಮುಖಂಡರು ರಾಮಣ್ಣ ಅವರ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ.
Read More »ದೇಶೀಯ ಲಸಿಕೆ ಕೋವ್ಯಾಕ್ಸಿನ್ ದರ ನಿಗದಿ
ಹೈದರಾಬಾದ್: ದೇಶಾದ್ಯಂತ ಕೊರೊನಾ 2ನೇ ಅಲೆ ತಾಂಡವಾಡುತ್ತಿದ್ದು, ಹತೋಟಿಗೆ ತರಲು ಸರ್ಕಾರಗಳು ಇನ್ನಿಲ್ಲದ ಪ್ರಯತ್ನ ನಡೆಸಿವೆ. ಇದರ ಭಾಗವಾಗಿ ಮೇ ತಿಂಗಳಿನಿಂದ 18 ವರ್ಷ ಮೇಲ್ಪಟ್ಟ ಎಲ್ಲರಿಗೂ ಕೊರೊನಾ ಲಸಿಕೆ ನೀಡಲು ಅನುಮತಿ ನೀಡಲಾಗಿದೆ. ಹೀಗಿರುವಾಗಲೇ ದೇಶೀಯ ಕೊರೊನಾ ಲಸಿಕೆ ಕೋವ್ಯಾಕ್ಸಿನ್‍ಗೆ ದರ ನಿಗದಿಪಡಿಸಲಾಗಿದ್ದು, ಸರ್ಕಾರಿ ಆಸ್ಪತ್ರೆಗಳಲ್ಲಿ ಪ್ರತಿ ಡೋಸ್‍ಗೆ 600 ರೂ. ಹಾಗೂ ಖಾಸಗಿ ಆಸ್ಪತ್ರೆಗಳಲ್ಲಿ 1,200 ರೂ. ದರ ನಿಗದಿಪಡಿಸಲಾಗಿದೆ. ಈ ಕುರಿತು ಹೈದರಾಬಾದ್ ಮೂಲದ ಕೋವ್ಯಾಕ್ಸಿನ್ …
Read More »ಬೆಳಗಾವಿ ಜಿಲ್ಲೆಯಲ್ಲಿ ಮತ್ತೆ ಒಂದೇ ದಿನ ಕೊರೋನಾ ಸೋಂಕಿತರ ಸಂಖ್ಯೆ 300ರ ಗಡಿ ದಾಟಿದೆ. ಶನಿವಾರ ಒಟ್ಟೂ 313 ಜನರಿಗೆ ಸೋಂಕು ದೃಢ
ಬೆಳಗಾವಿ – ಬೆಳಗಾವಿ ಜಿಲ್ಲೆಯಲ್ಲಿ ಮತ್ತೆ ಒಂದೇ ದಿನ ಕೊರೋನಾ ಸೋಂಕಿತರ ಸಂಖ್ಯೆ 300ರ ಗಡಿ ದಾಟಿದೆ. ಶನಿವಾರ ಒಟ್ಟೂ 313 ಜನರಿಗೆ ಸೋಂಕು ದೃಢಪಟ್ಟಿದೆ. ಇದರಿಂದಾಗಿ 2ನೇ ಅಲೆಯಲ್ಲಿ 2ನೇ ಬಾರಿಗೆ ಮುನ್ನೂರರ ಗಡಿ ದಾಟಿದಂತಾಗಿದೆ. ಬೆಳಗಾವಿ ತಾಲೂಕಿನಲ್ಲಿ 104, ಅಥಣಿ 21, ಬೈಲಹೊಂಗಲ 8, ಚಿಕ್ಕೋಡಿ 9, ಗೋಕಾಕ 39, ಹುಕ್ಕೋರಿ 10, ಖಾನಾಪುರ 25, ರಾಮದುರ್ಗ 19, ರಾಯಬಾಗ 41, ಸವದತ್ತಿ 16 ಹಾಗೂ ಇತರೆ …
Read More »ಬೆಳಗಾವಿಯಲ್ಲಿ ಉಸ್ತುವಾರಿ ಸಚಿವರಿಲ್ಲದೇ ಕೋವಿಡ್ ತಡೆಗೆ ಹಿನ್ನಡೆ ಆತಂಕ
ಬೆಳಗಾವಿ: ಕೋವಿಡ್ ಸೋಂಕಿನಿಂದ ತೀವ್ರ ಆತಂಕದಲ್ಲಿರುವ ಗಡಿ ಜಿಲ್ಲೆ ಬೆಳಗಾವಿಯಲ್ಲಿ ಸೂಕ್ತ ಮತ್ತು ಕಠಿಣ ನಿರ್ಧಾರ ತೆಗೆದುಕೊಳ್ಳಲು ಯಾವುದೇ ಉಸ್ತುವಾರಿ ಸಚಿವರಿಲ್ಲದೇ ಇರುವದು ಸಾರ್ವಜನಿಕರಲ್ಲಿ ಗೊಂದಲದ ಜೊತೆಗೆ ಚಿಂತೆ ಉಂಟುಮಾಡಿದೆ. ರಾಜ್ಯದಲ್ಲಿ ಕೊರೊನಾ ಉಲ್ಬಣವಾಗುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವರು ಸೇರಿದಂತೆ ಎಲ್ಲ ಸಚಿವರು ತಕ್ಷಣದಿಂದಲೇ ಜಿಲ್ಲೆಯಲ್ಲಿ ಸೋಂಕಿತರ ನೋವಿಗೆ ಸ್ಪಂದಿಸಿ ಪರಿಶೀಲಿಸುವಂತೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಸೂಚಿಸಿದ್ದರು. ಆದರೆ ಜಿಲ್ಲೆಯಲ್ಲಿ ಯಾವುದೇ ಉಸ್ತುವಾರಿ ಸಚಿವರಿಲ್ಲದೆ ಅಧಿಕಾರಿಗಳು ಪ್ರತಿಯೊಂದೂ …
Read More »ಸರ್ಕಾರಿ ನೌಕರರಿಗೆ ಮಾಸ್ಕ್ ಕಡ್ಡಾಯ : ಡಿಸಿ
ಚಿಕ್ಕೋಡಿ : ಕೊರೊನಾ ಎರಡನೆ ಅಲೆ ನಿಯಂತ್ರಿಸುವ ನಿಟ್ಟಿನಲ್ಲಿ ಸರ್ಕಾರಿ ನೌಕರರು ಕಡ್ಡಾಯವಾಗಿ ಮಾಸ್ಕ್ ಹಾಕಬೇಕು. ಇಲ್ಲದೇ ಹೋದರೆ ಅಂಥವರ ಮೇಲೆ ಸೂಕ್ತ ಕ್ರಮ ಕೈಗೊಳ್ಳಲಾಗುತ್ತದೆ. ಇಂದಿನಿಂದಲೇ ಎಲ್ಲ ಸರ್ಕಾರಿ ನೌಕರರು ಮಾಸ್ಕ್ ಧರಿಸುವಂತೆ ಆದೇಶ ಹೊರಡಿಸಲಾಗುತ್ತದೆ ಎಂದು ಜಿಲ್ಲಾ ಧಿಕಾರಿ ಡಾ| ಕೆ.ಹರೀಶ ಕುಮಾರ ಹೇಳಿದರು. ಪಟ್ಟಣದ ಮಿನಿವಿಧಾನಸೌಧದಲ್ಲಿ ಚಿಕ್ಕೋಡಿ ಉಪವಿಭಾಗದ ಅಧಿಕಾರಿಗಳ ಸಭೆ ನಡೆಸಿದ ಬಳಿಕ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು. ಕೊರೊನಾ ಎರಡನೆ ಅಲೆಯಿಂದ ಬೆಳಗಾವಿ ಜಿಲ್ಲೆಯಲ್ಲಿ ಸೋಂಕಿತರ …
Read More »ಕೊರೊನಾ ನಿರ್ವಹಣೆ ವಿಷಯದಲ್ಲಿ ರಾಜ್ಯ ಸರ್ಕಾರಕ್ಕೆ ಇಚ್ಛಾಶಕ್ತಿ ಇಲ್ಲ: ಸತೀಶ ಜಾರಕಿಹೊಳಿ
ಬೆಳಗಾವಿ: ‘ಕೊರೊನಾ ನಿರ್ವಹಣೆ ವಿಷಯದಲ್ಲಿ ರಾಜ್ಯ ಸರ್ಕಾರಕ್ಕೆ ಇಚ್ಛಾಶಕ್ತಿ ಇಲ್ಲ; ಸೂಕ್ತ ಯೋಜನೆಯೂ ಇಲ್ಲ’ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಟೀಕಿಸಿದರು. ಇಲ್ಲಿ ಶುಕ್ರವಾರ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ‘ಕೊರೊನಾ 2ನೇ ಅಲೆ ಹರಡುವ ಬಗ್ಗೆ ತಜ್ಞರು ಹಿಂದೆಯೇ ತಿಳಿಸಿದ್ದರು. ಹೀಗಾಗಿ, ಸರ್ಕಾರ ಆಸ್ಪತ್ರೆಗಳ ತಯಾರಿ, ಹಾಸಿಗೆಗಳು, ವೈದ್ಯಕೀಯ ಆಕ್ಸಿಜನ್ ಸಿಲಿಂಡರ್ ಹಾಗೂ ಔಷಧಿಗಳ ಸಂಗ್ರಹಣೆ ಸೇರಿ ಅಗತ್ಯ ವ್ಯವಸ್ಥೆ ಮತ್ತು ಸಿದ್ಧತೆಗಳನ್ನು ಮಾಡಿಕೊಳ್ಳಬೇಕಿತ್ತು. ಸರ್ಕಾರದ ನಿರ್ಲಕ್ಷ್ಯದಿಂದ ಈಗ …
Read More »ರೈಲು ಪ್ರಯಾಣಿಕರೇ ಗಮನಿಸಿ : ‘ವೇಟಿಂಗ್ ಲಿಸ್ಟ್’ ಪ್ರಯಾಣಿಕರಿಗೆ ಅವಕಾಶವಿಲ್ಲ
ಬೆಂಗಳೂರು : ದೇಶಾದ್ಯಂತ ಕೊರೋನಾ ಸೋಂಕಿನ 2ನೇ ಅಲೆಯ ಅರ್ಭಟ ಜೋರಾಗಿದೆ. ಈ ಸಂದರ್ಭದಲ್ಲಿ ಕೊರೋನಾ ನಿಯಂತ್ರಣಕ್ಕಾಗಿ ಕೇಂದ್ರ, ರಾಜ್ಯ ಸರ್ಕಾರಗಳು ಹಲವು ಕ್ರಮಗಳನ್ನು ಕೈಗೊಂಡಿವೆ. ರಾಜ್ಯದಲ್ಲೂ ಕೊರೋನಾ ನಿಯಂತ್ರಣಕ್ಕಾಗಿ ನೈಟ್ ಅಂಡ್ ವೀಕ್ ಎಂಡ್ ಕರ್ಪ್ಯೂ ಜಾರಿಗೊಳಿಸಲಾಗಿದೆ. ಇಂತಹ ಸಂದರ್ಭದಲ್ಲಿ ರೈಲ್ವೆ ಇಲಾಖೆ ಕೂಡ ಕೊರೋನಾ ನಿಯಂತ್ರಣಕ್ಕೆ ಶಿಸ್ತು ಕ್ರಮ ಕೈಗೊಂಡಿದ್ದು, ಅಂತರ್ ರಾಜ್ಯ ರೈಲುಗಳ ವೇಟಿಂಗ್ ಲೀಸ್ಟ್ ಟಿಕೇಟ್ ಹೊಂದಿರುವ ಪ್ರಯಾಣಿಕರಿಗೆ ರೈಲು ಹತ್ತೋದಕ್ಕೆ ನಿರ್ಬಂಧ ವಿಧಿಸಲಾಗಿದೆ. …
Read More »ವಿದ್ಯಾರ್ಥಿಗಳಿಗೆ ಪರೀಕ್ಷೆ ಪೂರ್ವ ತಯಾರಿಗಾಗಿ ಪುಸ್ತಕ ವಿತರಣೆ
ಚಿಕ್ಕೋಡಿ ಲೋಕಸಭಾ ವ್ಯಾಪ್ತಿಯ ಹುಕ್ಕೇರಿಯಲ್ಲಿ, ಜೊಲ್ಲೆ ಉದ್ಯೋಗ ಸಮೂಹ ಸಂಸ್ಥೆಯ ವತಿಯಿಂದ ಪ್ರೌಢಶಾಲೆಯ 10ನೇ ತರಗತಿ ವಿದ್ಯಾರ್ಥಿಗಳಿಗೆ ಉಚಿತ ಪುಸ್ತಕಗಳನ್ನು, ಸಚಿವರಾದ ಶ್ರೀ ಉಮೇಶ ಕತ್ತಿ ಜಿ, ಊರಿನ ಹಿರಿಯರು, ಗಣ್ಯರು ಹಾಗೂ ಅಧಿಕಾರಿಗಳು ಜೊತೆಗೂಡಿ ವಿತರಿಸಿದರು. ಕನ್ನಡ ಹಾಗೂ ಆಂಗ್ಲ ಮಾಧ್ಯಮದ ವಿದ್ಯಾರ್ಥಿಗಳಿಗೆ ಪರೀಕ್ಷೆಗೆ ತಯಾರಿ ನಡೆಸಲು ಅನುಕೂಲವಾಗುವ ನಿಟ್ಟಿನಲ್ಲಿ 10 ತರಗತಿಯ ಎಲ್ಲಾ ಅಂಶಗಳನ್ನು ಈ ಪುಸ್ತಕದಲ್ಲಿ ಮುದ್ರಿಸಲಾಗಿದೆ. ಶೈಕ್ಷಣಿಕ ಜಿಲ್ಲೆಯ ಪರಿಣಿತ ಶಿಕ್ಷಕರ ಸಹಕಾರದಲ್ಲಿ ಈ …
Read More »