ಬೆಳಗಾವಿ: ‘ಸರ್ಕಾರಿ ಮತ್ತು ಖಾಸಗಿ ಆಸ್ಪತ್ರೆಗಳಿಗೆ ರೆಮ್‌ಡಿಸಿವಿರ್ ಸಮರ್ಪಕ ಹಂಚಿಕೆ, ಲಭ್ಯವಿರುವ ಹಾಸಿಗೆಗಳ ನಿರ್ವಹಣೆಗೆ ಸಂಬಂಧಿಸಿದಂತೆ ಹಲವು ಸುತ್ತಿನ ಸಭೆಗಳನ್ನು ನಡೆಸಲಾಗಿದೆ. ವಿವಿಧ ಸಮಿತಿಗಳನ್ನು ರಚಿಸಲಾಗಿದೆ’ ಎಂದು ಜಿಲ್ಲಾಧಿಕಾರಿ ಡಾ.ಕೆ. ಹರೀಶ್ ಕುಮಾರ್ ತಿಳಿಸಿದರು. ಇಲ್ಲಿನ ಜಿಲ್ಲಾ ಪಂಚಾಯ್ತಿ ಸಭಾಂಗಣದಲ್ಲಿ ಜನಪ್ರತಿನಿಧಿಗಳು ನಡೆಸಿದ ಸಭೆಯಲ್ಲಿ ಮಾತನಾಡಿದ ಅವರು, ‘ಲಸಿಕಾಕರಣ ಚುರುಕುಗೊಳಿಸಲು ಕ್ರಮ ಕೈಗೊಂಡಿದ್ದು, ಮಾರ್ಗಸೂಚಿ ಪ್ರಕಾರ ಅಕ್ಟೋಬರ್ ವೇಳೆಗೆ ಸಂಪೂರ್ಣ ಲಸಿಕೆಗೆ ಆದ್ಯತೆ ನೀಡಲಾಗುತ್ತಿದೆ’ ಎಂದರು. ‘ಬಿಮ್ಸ್ ಆಸ್ಪತ್ರೆಯಲ್ಲಿ ಊಟ, …
Read More »ಕ್ಲಾಸ್ ಬಳಿಕ ಕ್ಷಮೆಯಾಚಿಸಿದ ಉಡಾಫೆ ಮಂತ್ರಿ ಉಮೇಶ್ ಕತ್ತಿ
ಬೆಂಗಳೂರು: ರೈತನ ಜೊತೆಗೆ ಬಾಯಿಗೆ ಬಂದಂತೆ ಮಾತನಾಡಿ ಟೀಕೆಗೆ ಗುರಿಯಾಗಿದ್ದ ಉಮೇಶ್ ಕತ್ತಿ ಈಗ ಕ್ಷಮೆಯಾಚಿಸಿದ್ದಾರೆ. ರೈತನ ಜೊತೆಗಿನ ಮಾತುಕತೆಯ ಆಡಿಯೋ ವೈರಲ್ ವಿಚಾರ ಸಂಬಂಧಿಸಿದಂತೆ ಮುಖ್ಯಮಂತ್ರಿ ಯಡಿಯೂರಪ್ಪನವರು ಕ್ಲಾಸ್ ತೆಗೆದುಕೊಂಡ ಬಳಿಕ ಇದೀಗ ಉಮೇಶ್ ಕತ್ತಿ ಅವರು ಹೇಳಿಕೆ ವಿಚಾರವಾಗಿ ಕ್ಷಮೆಯಾಚಿಸಿದ್ದಾರೆ. ಆಡಿಯೋ ವೈರಲ್ ಆಗುತ್ತಿದ್ದಂತೆ ಉಮೇಶ್ ಕತ್ತಿ ವಿರುದ್ಧ ಸಿಎಂ ಯಡಿಯೂರಪ್ಪ ಅಸಮಾಧಾನ ಹೊರಹಾಕಿದರು. ಉಮೇಶ್ ಕತ್ತಿ ಆಹಾರ ಮತ್ತು ನಾಗರೀಕ ಖಾತೆ ಸಚಿವರು, ರೈತನೊಬ್ಬ 5 …
Read More »ಭೀಮ್ಸ್ ನಿರ್ದೇಶಕ ಡಾ. ವಿನಯ್ ದಾಸ್ತಿಕೊಪ್ಪ ವಿರುದ್ಧ ಡಿಸಿಎಂ ಲಕ್ಷ್ಮಣ ಸವದಿ ಕೆಂಡಾಮಂಡಲ
ಬೆಳಗಾವಿ-ಭೀಮ್ಸ್ ನಿರ್ದೇಶಕ ಡಾ. ವಿನಯ್ ದಾಸ್ತಿಕೊಪ್ಪ ವಿರುದ್ಧ ಡಿಸಿಎಂ ಲಕ್ಷ್ಮಣ ಸವದಿ ಕೆಂಡಾಮಂಡಲವಾಗಿದ್ದು,ಡಾ. ವಿನಯ್ ದಾಸ್ತಿಕೊಪ್ಪ ಎಲ್ಲಿದ್ದಾರೆ? ಕರೆಸಿ ಇಲ್ಲಾವಾದರೆಅರೆಸ್ಟ್ ಮಾಡಿ ತಂದು ಇಲ್ಲಿ ಕೂಡ್ರಿಸಿ ಎಂದು ಸಭೆಯಲ್ಲಿಯೇ ಡಿಸಿಎಂ ಲಕ್ಷ್ಮಣ ಸವದಿ ಗುಡುಗಿದ್ದಾರೆ.ಬೆಳಗಾವಿ ಜಿಲ್ಲಾ ಪಂಚಾಯತಿ ಸಭಾಭವನದಲ್ಲಿ ನಡೆದ ಕೋವೀಡ್ ನಿರ್ವಹಣೆ ಪ್ರಗತಿ ಪರಶೀಲನಾ ಸಭೆಯಲ್ಲಿ, ಎಸ್ಪಿಗೆ ಸೂಚನೆ ನೀಡಿದ ಡಿಸಿಎಂ ಲಕ್ಷ್ಮಣ ಸವದಿ. ಭೀಮ್ಸ್ ನಿರ್ದೇಶಕ ದಾಸ್ತಕೊಪ್ಪ ವಿರುದ್ಧ ಗರಂ ಆದ್ರು. ಡಿಸಿಎಂ ಲಕ್ಷ್ಮಣ ಸವದಿ ಭೀಮ್ಸ್ …
Read More »ರೈತನಿಗೆ ನೀನು ಸತ್ತು ಹೋಗಿ ಬಿಡುವುದು ಒಳ್ಳೆಯದು ಎಂದ್ರಾ ಉಮೇಶ್ ಕತ್ತಿ? ಆಡಿಯೋ ವೈರಲ್
ಬೆಳಗಾವಿ: ರಾಜ್ಯ ಸರ್ಕಾರ ಪಡಿತರ ವಿತರಣೆಯಲ್ಲಿ 2 ಕೆ.ಜಿ. ಅಕ್ಕಿ ಕಡಿತಗೊಳಿಸಿರುವ ವಿಚಾರಕ್ಕೆ ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಉಮೇಶ್ ಕತ್ತಿ ರೈತ ಸಂಘದ ಕಾರ್ಯಕರ್ತರೊಂದಿಗೆ ಬೇಜವಾಬ್ದಾರಿ ಹೇಳಿಕೆ ನೀಡಿದ್ದಾರೆ ಎನ್ನಲಾದ ಆಡಿಯೋ ವೈರಲ್ ಆಗಿದೆ. ಸಚಿವರು ಮಾತನಾಡಿದ್ದರೆ ಎನ್ನಲಾದ ಆಡಿಯೋದಲ್ಲಿ ಗದಗ ಜಿಲ್ಲೆಯ ಕುರ್ತಕೋಟೆ ಗ್ರಾಮದ ನಿವಾಸಿ, ರೈತ ಸಂಘದ ಕಾರ್ಯಕರ್ತ ಈಶ್ವರ್ ಎಂಬುವರು ಪಡಿತರ ಕಡಿತ ಕುರಿತಂತೆ ಸಚಿವರಿಗೆ ಕರೆ ಮಾಡಿ ತರಾಟೆ ತೆಗೆದುಕೊಂಡಿದ್ದು, ಎರಡು …
Read More »ಮಲ್ಲಾಪೂರ ಪಿಜಿ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಕೋವಿಡ್ ಕೇರ್ ಸೆಂಟರ್ ಪ್ರಾರಂಭ. ಬಾಲಚಂದ್ರ ಜಾರಕಿಹೊಳಿ
ಗೋಕಾಕ : ತಾಲೂಕಿನ ಎಲ್ಲ ಅಧಿಕಾರಿಗಳು ಪರಸ್ಪರ ಸಮನ್ವಯತೆಯಿಂದ ಕಾರ್ಯನಿರ್ವಹಿಸಿದಲ್ಲಿ ಕೊರೋನಾ ಎರಡನೇ ಅಲೆಯನ್ನು ನಿಯಂತ್ರಿಸಲು ಸಾಧ್ಯ ಎಂದು ಕೆಎಂಎಫ್ ಅಧ್ಯಕ್ಷ ಹಾಗೂ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಅಧಿಕಾರಿಗಳಿಗೆ ಸೂಚಿಸಿದರು. ಮಲ್ಲಾಪೂರ ಪಿಜಿ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ನೂತನವಾಗಿ ಕೋವಿಡ್ ಕೇರ್ ಸೆಂಟರ್ ಪ್ರಾರಂಭಿಸಿದ ಅಧಿಕಾರಿಗಳನ್ನುದ್ಧೇಶಿಸಿ ದೂರವಾಣಿಯಲ್ಲಿ ಮಾತನಾಡಿದರು. ಮಲ್ಲಾಪೂರ ಪಿಜಿ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಪ್ರಾರಂಭಿಸಿರುವ ಕೋವಿಡ್ ಕೇರ್ ಸೆಂಟರ್ ಸಕಲ ಸೌಲಭ್ಯಗಳನ್ನೊಳಗೊಂಡ …
Read More »14 ದಿನ ಲಾಕ್ ಡೌನ್ ಹಿನ್ನೆಲೆ..ಗೋಕಾಕನಲ್ಲಿ ಮಧ್ಯಾಹ್ನವೇ ಅಂಗಡಿ-ಮುಂಗಟ್ಟು ಬಂದ್
ಸರಕಾರದ ಕೊರಾನಾ ಹೊಸ ಮಾರ್ಗಸೂಚಿ ಬೆನ್ನಲ್ಲೆ ಗೋಕಾಕದಲ್ಲಿ ಅಂಗಡಿ ಮುಗ್ಗಟುಗಳನ್ನು ಬಂದ್ ಮಾಡಿಸಲು ಮುಂದಾದ ಪೋಲಿಸ್ ಮತ್ತು ನಗರಸಭೆ ಅಧಿಕಾರಿಗಳು. ಹೌದು ಕೊರಾನಾ2ಅಲೆಯು ತನ್ನ ಅಟ್ಟಹಾಸವನ್ನು ದಿನದಿನಕ್ಕೂ ಸಾವು ಪಡೆಯಯತ್ತಿರುವುದು ಒಂದು ಕಡೆಯಾದರೆ ಇನ್ನೊಂದು ಕಡೆ ಸಾರ್ವಜನಿಕರು ಕೊರಾನಾ ಬಗ್ಗೆ ನಿರ್ಲಕ್ಷ ವಹಿಸುತ್ತಿರುವುದು ಇನ್ನೊಂದು ಕಡೆ, ಹೇಗಾದರೂ ಮಾಡಿ ಕೊರಾನಾದಿಂದ ಸರಕಾರ ಸಾರ್ವಜನಿಕರನ್ನು ರಕ್ಷಿಸಲು ಹೊಸ ಮಾರ್ಗಸೂಚಿ ಸಂಜೆಯಿಂದ ಅನ್ವಯವಾಗಲೆಂದು ಬಿಡುಗಡೆ ಮಾಡಿತ್ತು, ಆದರೆ ಗೋಕಾಕ ನಗರದಲ್ಲಿ ಇವತ್ತು ಸಂಜೆ …
Read More »ವಿಶೇಷ ಪ್ಯಾಕೇಜ್ ಇಲ್ಲದೇ ಲಾಕ್‍ಡೌನ್ – ಸರ್ಕಾರದ ನಿಲುವೇನು? ಕೆಲವು ದುಡಿಯುವ ವರ್ಗಗಳಿಗೆ ದೊಡ್ಡ ಪ್ರಮಾಣದಲ್ಲಿಯೇ ಆರ್ಥಿಕ ಹೊಡೆತ ಬೀಳಲಿದೆ
ಬೆಂಗಳೂರು: ಯಾವುದೇ ವಿಶೇಷ ಪ್ಯಾಕೇಜ್ ಘೋಷಣೆ ಮಾಡದೇ ರಾಜ್ಯದಲ್ಲಿ ಸರ್ಕಾರ 16 ದಿನ ಲಾಕ್‍ಡೌನ್ ಮಾಡಿದೆ. ಕೊರೊನಾ ನಿಯಂತ್ರಣಕ್ಕಾಗಿ ಸರ್ಕಾರಕ್ಕೆ ಲಾಕ್‍ಡೌನ್ ಅನಿವಾರ್ಯವಾಗಿತ್ತು. ಆದ್ರೆ ಆರ್ಥಿಕ ಹೊಡೆತಕ್ಕೆ ಸಿಲುಕುವ ವಲಯಗಳಿಗೆ ಸರ್ಕಾರ ಯಾವುದೇ ಪ್ಯಾಕೇಜ್ ಘೋಷಣೆ ಮಾಡಿಲ್ಲ. 16 ದಿನದ ಜನತಾ ಲಾಕ್‍ಡೌನ್ ನಲ್ಲಿ ಕೆಲವು ದುಡಿಯುವ ವರ್ಗಗಳಿಗೆ ದೊಡ್ಡ ಪ್ರಮಾಣದಲ್ಲಿಯೇ ಆರ್ಥಿಕ ಹೊಡೆತ ಬೀಳಲಿದೆ. ಕಳೆದ ವರ್ಷದ ಲಾಕ್‍ಡೌನ್ ನಿಂದ ಚೇತರಿಸಿಕೊಳ್ಳುವಷ್ಟರಲ್ಲಿ ಮತ್ತೊಂದು ಲಾಕ್‍ಡೌನ್ ಘೋಷಣೆಯಾಗಿದೆ. ಗಾರ್ಮೆಂಟ್ಸ್ ಉದ್ಯೋಗಿಗಳು, …
Read More »14 ದಿನಗಳ ಕಾಲ ಏನಿರುತ್ತೆ ಏನಿರಲ್ಲ ಇಲ್ಲಿದೆ ಮಾಹಿತಿ:
ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಸೋಂಕು ನಿಯಂತ್ರಣಕ್ಕೆ ರಾಜ್ಯ ಸರ್ಕಾರ ಕಠಿಣ ನಿಯಮ ಜಾರಿ ಮಾಡಿದ್ದು, ನಾಳೆಯಿಂದ 14 ದಿನಗಳ ಕಾಲ ರಾಜ್ಯದಲ್ಲಿ ಲಾಕ್ ಡೌನ್ ಮಾದರಿ ಬಂದ್ ಜಾರಿ ಮಾಡಿದೆ. ಸಚಿವ ಸಂಪುಟ ಸಭೆ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಿಎಂ ಯಡಿಯೂರಪ್ಪ, ಕೊರೊನಾ ಸೋಂಕು ನಿಯಂತ್ರಣಕ್ಕೆರಾಜ್ಯದಲ್ಲಿ ಮುಂದಿನ 2 ವಾರ ಬಿಗಿ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು. ಏನಿರುತ್ತೆ ಏನಿರಲ್ಲ ಇಲ್ಲಿದೆ ಮಾಹಿತಿ: * ನಾಳೆಯಿಂದ 14 ದಿನಗಳ ಕಾಲ …
Read More »ಇಂದು ಬೆಳಗ್ಗೆ 11 ಗಂಟೆಗೆ ಸಿಎಂ ಸಭೆ ಮುಂದಿನ 15 ದಿನ ರಾಜ್ಯಾದ್ಯಂತ ಲಾಕ್ ಡೌನ್ ಮಾಡುವ ಸಾಧ್ಯತೆ ?
ಬೆಂಗಳೂರು : ರಾಜ್ಯದಲ್ಲಿ ಕೊರೊನಾ ವೈರಸ್ ಸೋಂಕಿನ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಈಗಾಗಲೇ ನೈಟ್ ಕರ್ಪ್ಯೂ, ವೀಕೆಂಡ್ ಕರ್ಪ್ಯೂ ಜಾರಿಗೊಳಿಸಲಾಗಿದೆ. ಆದರೆ, ಇದೀಗ ಮುಂದಿನ 15 ರಾಜ್ಯಾದ್ಯಂತ ಲಾಕ್ ಡೌನ್ ಮಾಡುವ ಸಾಧ್ಯತೆ ಇದೆ ಎನ್ನಲಾಗಿದೆ. ಇಂದು ಬೆಳಗ್ಗೆ 11 ಗಂಟೆಗೆ ಸಿಎಂ ಬಿ.ಎಸ್. ಯಡಿಯೂರಪ್ಪ ನೇತೃತ್ವದಲ್ಲಿ ರಾಜ್ಯ ಸಚಿವ ಸಂಪುಟ ಸಭೆ ನಡೆಯಲಿದ್ದು, ರಾಜ್ಯ ಸರ್ಕಾರ ಮೂರು ಮಹತ್ವದ ತೀರ್ಮಾನಗಳನ್ನು ಕೈಗೊಳ್ಳಲಿದೆ. ರಾಜ್ಯದ …
Read More »ನಿಧನ ವಾರ್ತೆ ರಾಮಣ್ಣ ತೋಳಿನವರ ನಿಧನ
ಗೋಕಾಕ: ತಾಲೂಕಿನ ಮಾಲದಿನ್ನಿ ಗ್ರಾಮದ ನಿವಾಸಿ, ಉಪ್ಪಾರ ಸಮಾಜದ ತಾಲೂಕಾಧ್ಯಕ್ಷ ಹಾಗೂ ಜಿ.ಪಂ ಮಾಜಿ ಸದಸ್ಯ ರಾಮಣ್ಣ ಭೀಮಪ್ಪ ತೋಳಿನವರ(68) ರವಿವಾರ ನಿಧನ ಹೊಂದಿದರು. ಪತ್ನಿ, ಇಬ್ಬರು ಪುತ್ರರು, ಮೂವರು ಪುತ್ರಿಯರು ಅಪಾರ ಬಂಧು ಬಳಗವನ್ನು ಅಗಲಿದ್ದಾರೆ. ಸಂತಾಪ: ಗೋಕಾಕ ಹಾಗೂ ಮೂಡಲಗಿ ತಾಲೂಕಿನ ಉಪ್ಪಾರ ಸಮಾಜದ ಮುಖಂಡರು ರಾಮಣ್ಣ ಅವರ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ.
Read More »