ಚಿಕ್ಕೋಡಿ: ಕೊರೊನಾ ರಣಕೇಕೆ ಹಿನ್ನೆಲೆ ರಾಜ್ಯಾದ್ಯಂತ ಸಭೆ, ಮದುವೆ ಸಮಾರಂಭಗಳಿಗೆ ಸರ್ಕಾರ ಕಟ್ಟು ನಿಟ್ಟಿನ ನಿಯಮ ಜಾರಿಗೊಳಿಸಿದೆ. ಆದರೆ ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಸಂಕೇಶ್ವರ ಪಟ್ಟಣದಲ್ಲಿ ಕೋವಿಡ್ ನಿಯಮದ ನಡುವೆಯೂ ಅದ್ಧೂರಿ ಮದುವೆ ಆಯೋಜಿಸಿದ್ದ ವಧ ವರನ ಮೇಲೆ ಪ್ರಕರಣ ದಾಖಲಾಗಿದೆ. ಕೋವಿಡ್ ನಿಯಂತ್ರಣಕ್ಕೆ ಸರ್ಕಾರ ಜಾರಿಗೊಳಿಸುರುವ ಕೊರೊನಾ ಟಫ್ ರೂಲ್ಸ್ ಬ್ರೇಕ್ ಮಾಡಿ ಸಂಕೇಶ್ವರ ಪಟ್ಟಣದ ನೀಡಸೊಸಿ ರಸ್ತೆಯಲ್ಲಿರುವ ಮಿಲನ್ ಹಾಲ್ ದಲ್ಲಿ ಅದ್ಧೂರಿ ಮದುವೆ ಆಯೋಜನೆ …
Read More »ಸಂತೆಗೆ ಬರುವ ಗ್ರಾಹಕರ, ವ್ಯಾಪಾರಿಗಳ ಕೊವಿಡ್ ಟೆಸ್ಟ್
ಬೆಳಗಾವಿ: ರಾಜ್ಯದಲ್ಲಿ ಕೊರೊನಾ ಎರಡನೇ ಅಲೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಮಹಾರಾಷ್ಟ್ರದ ಗಡಿಗೆ ಹೊಂದಿಕೊಂಡಿರುವ ಜಿಲ್ಲೆಯ ಹುಕ್ಕೇರಿ ತಾಲೂಕಿನ ಸಂಕೇಶ್ವರ ಪಟ್ಟಣದಲ್ಲಿ ಪುರಸಭೆ ಅಧಿಕಾರಿಗಳು ಹೊಸ ಐಡಿಯಾ ಮಾಡಿದ್ದಾರೆ. ಸಂತೆಯಲ್ಲೇ ಕೋವಿಡ್ ಟೆಸ್ಟ್ ಮಾಡಲು ಪುರಸಭೆ ಹಾಗೂ ಆರೋಗ್ಯ ಇಲಾಖೆ ಅಧಿಕಾರಿಗಳು ಮುಂದಾಗಿದ್ದು, ಶುಕ್ರವಾರ ಸಂತೆಗೆ ಬರುವ ಗ್ರಾಹಕರು ಹಾಗೂ ವ್ಯಾಪಾರಿಗಳ ಕೊರೊನಾ ಪರೀಕ್ಷೆಯನ್ನು ಸ್ಥಳದಲ್ಲೇ ಮಾಡುತ್ತಿದ್ದಾರೆ. ವಾರದ ಸಂತೆ ಹಿನ್ನೆಲೆ ಸಂತೆಗೆ ನೂರಾರು ಜನ ಆಗಮಿಸುತ್ತಾರೆ, ಈ ಹಿನ್ನೆಲೆಯಲ್ಲಿ ಕಠಿಣ …
Read More »ರಾಜ್ಯದಲ್ಲಿ ಅಘೋಷಿತ ಲಾಕ್ ಡೌನ್: ಅಗತ್ಯ ವಸ್ತು, ಸೇವೆಗಳಿಗೆ ಮಾತ್ರ ಅವಕಾಶ
ಬೆಂಗಳೂರು: ರಾಜ್ಯದಲ್ಲಿ ಅಘೋಷಿತ ಲಾಕ್ ಡೌನ್ ಜಾರಿ ಮಾಡಲಾಗಿದೆ. ಮೇ 4 ರವರೆಗೆ ರಾಜ್ಯದಲ್ಲಿ ನೈಟ್ ಕರ್ಫ್ಯೂ ಮತ್ತು ವೀಕೆಂಡ್ ಕರ್ಫ್ಯೂ ಜಾರಿಗೊಳಿಸಿದ್ದ ಸರ್ಕಾರ ಜನತೆಗೆ ದಿಢೀರ್ ಶಾಕ್ ನೀಡಿದೆ. ಅಗತ್ಯ ವಸ್ತು, ಸೇವೆಗಳಿಗೆ ಮಾತ್ರ ಅವಕಾಶ ನೀಡಿದೆ. ಮೇ 4 ರ ವರೆಗೆ ವಾಣಿಜ್ಯ ಮಳಿಗೆ, ಅಂಗಡಿ ಮುಂಗಟ್ಟು ಬಂದ್ ಆಗಲಿವೆ. ವೀಕೆಂಡ್ ಕರ್ಫ್ಯೂ ಸಂದರ್ಭದಲ್ಲಿ ಮಾತ್ರ ಅಂಗಡಿ ಬಂದ್ ಮಾಡಬೇಕು ಎಂದುಕೊಂಡಿದ್ದವರಿಗೆ ಶಾಕ್ ನೀಡಿದೆ. ಅಗತ್ಯ ವಸ್ತುಗಳ …
Read More »ಬೆಳಗಾವಿ, ಗೋಕಾಕ ಸೇರಿ ಜಿಲ್ಲೆಯಾದ್ಯಂತ ಏಕಾಏಕಿ ಅಂಗಡಿಗಳು ಬಂದ್
ಬೆಳಗಾವಿ : ಜಿಲ್ಲೆಯಲ್ಲಿ ಅಗತ್ಯ ಸೇವೆ ಹೊರತು ಪಡೆಸಿ ಉಳಿದೆಲ್ಲ ಅಂಗಡಿ, ಮಳಿಗೆಗಳನ್ನು ಏಕಾಏಕಿ ಪೊಲೀಸರು ಇಂದು ಮಧ್ಯಾಹ್ನ ಬಂದ್ ಮಾಡಿಸಿದ್ದು, ವ್ಯಾಪಾರಿಗಳು, ಜನರು ಕಂಗಾಲಾಗಿದ್ದಾರೆ. ರಾಜ್ಯದಲ್ಲಿ ಕೊರೊನಾ ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ನಿನ್ನೆ ಸರ್ಕಾರ ಕೋವಿಡ್ ಮಾರ್ಗಸೂಚಿಯನ್ನು ಜಾರಿಗೊಳಿಸಿತ್ತು. ಆದರೆ ಇಂದು ಮಧ್ಯಾಹ್ನ ಮತ್ತೊಂದು ಪರಿಷ್ಕೃತ ಮಾರ್ಗಸೂಚಿಯನ್ನು ಬಿಡುಗಡೆ ಮಾಡಿದೆ. ಸರ್ಕಾರದ ಈ ನಿರ್ಧಾರದಿಂದ ಜನರು, ವ್ಯಾಪಾರಿಗಳು ಫುಲ್ ಶಾಕ್ ಆಗಿದ್ದಾರೆ. ಬೆಳಗಾವಿ ನಗರ, ಗೋಕಾಕ, ಘಟಪ್ರಬಾ ಸೇರಿದಂತೆ ಜಿಲ್ಲೆಯಾದ್ಯಂತ …
Read More »ಕೊರೋನಾ ಎರಡನೇ ಅಲೆಯ ನಿಯಂತ್ರಣಕ್ಕೆ ಅಧಿಕಾರಿಗಳು ಸಮರೋಪಾದಿಯಲ್ಲಿ ಕೆಲಸ ನಿರ್ವಹಿಸಿ : ಶಾಸಕ ಬಾಲಚಂದ್ರ ಜಾರಕಿಹೊಳಿ
ಗೋಕಾಕ : ಗೋಕಾಕ ಹಾಗೂ ಮೂಡಲಗಿ ತಾಲೂಕುಗಳಲ್ಲಿ ಮಹಾಮಾರಿ ಕೊರೋನಾ ನಿಯಂತ್ರಿಸಲು ಅಧಿಕಾರಿಗಳು ಸಕಲ ಸಿದ್ಧತೆಯೊಂದಿಗೆ ಸಮರೋಪಾದಿಯಲ್ಲಿ ಕಾರ್ಯಪ್ರವೃತ್ತರಾಗಬೇಕೆಂದು ಶಾಸಕ ಹಾಗೂ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅಧಿಕಾರಿಗಳಿಗೆ ಸೂಚನೆ ನೀಡಿದರು. ಗುರುವಾರದಂದು ನಗರದ ಪ್ರವಾಸಿ ಮಂದಿರದಲ್ಲಿ ಗೋಕಾಕ ಹಾಗೂ ಮೂಡಲಗಿ ತಾಲೂಕಾ ಮಟ್ಟದ ಅಧಿಕಾರಿಗಳೊಂದಿಗೆ ಸಭೆ ನಡೆಸಿ, ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಕೊರೋನಾ ಎರಡನೇ ಅಲೆಯನ್ನು ನಿಯಂತ್ರಿಸಿ, ಮುಂದಾಗುವ ಅನಾಹುತಗಳನ್ನು ತಪ್ಪಿಸುವಂತೆ ತಿಳಿಸಿದರು. ಇದುವರೆಗೆ ಗೋಕಾಕ ತಾಲೂಕಿನಲ್ಲಿ 79 …
Read More »ರೈತರಿಗೆ ಸೂಕ್ತ ಪರಿಹಾರ ವಿತರಣೆ ಮಾಡದ ಹಿನ್ನೆಲೆಯಲ್ಲಿ ಬೆಳಗಾವಿ ಎಸಿ ಕಚೇರಿ ಜಪ್ತಿ ಮಾಡುವಂತೆ ನ್ಯಾಯಾಲಯದ ಆದೇಶ
ಬೆಳಗಾವಿ: ಭೂಸ್ವಾಧೀನ ಪ್ರಕರಣಕ್ಕೆ ಸಂಬಂಧಿಸಿದಂತೆ ರೈತರಿಗೆ ಸೂಕ್ತ ಪರಿಹಾರ ವಿತರಣೆ ಮಾಡದ ಹಿನ್ನೆಲೆಯಲ್ಲಿ ಬೆಳಗಾವಿ ಎಸಿ ಕಚೇರಿ ಜಪ್ತಿ ಮಾಡುವಂತೆ ನ್ಯಾಯಾಲಯ ಆದೇಶ ನೀಡಿದೆ. ಸಾಂಬ್ರಾ ವಿಮಾನ ನಿಲ್ದಾಣ ಭೂ ಸ್ವಾಧೀನಕ್ಕೆ ಸಂಬಂಧಿಸಿದಂತೆ ರೈತರಿಗೆ ಪರಿಹಾರ ವಿತರಣೆ ಮಾಡಿಲ್ಲ ಎಂದು ಹತ್ತು ರೈತರು ಕೋರ್ಟ್ ಮೆಟ್ಟಿಲೇರಿದ್ದರು. ನಮಗೆ ನೀಡಬೇಕಿದ್ದ 5.5 ಕೋಟಿ ಪರಿಹಾರವನ್ನು ನೀಡದೇ ರೈತರಿಗೆ ವಂಚಿಸಲಾಗಿದೆ ಎಂದು ಆರೋಪಿಸಿದ್ದರು. ರೈತರ ಅರ್ಜಿ ವಿಚಾರಣೆ ನಡೆಸಿದ 4ನೇ ಹೆಚ್ಚುವರಿ ನ್ಯಾಯಾಲಯ …
Read More »ಕೋವಿಡ್ ಸಂಕಷ್ಟದಲ್ಲಿದ್ದರೂ ಸರ್ಕಾರ ಪ್ರಧಾನಿ ಮೋದಿಯ ಪ್ರಚಾರದಲ್ಲಿ ನಿರತವಾಗಿದೆ :H.D.K.
ಕರೋನಾ ವಿಚಾರ ಹಿನ್ನಲೆ, ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ರಾಜ್ಯ ಹಾಗು ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ವೈರಸ್ ಹೊಡೆತಕ್ಕೆ ರಾಷ್ಟ್ರವೇ ತತ್ತರಿಸಿದೆ. ಜನ ಚಿಕಿತ್ಸೆ ಸಿಗದೆ ಪರದಾಡುತ್ತಿದ್ದಾರೆ. ಇಂಥ ಸೂತಕದ ಸಂದರ್ಭದಲ್ಲಿ ರಾಜ್ಯ ಸರ್ಕಾರ ಕೋಟ್ಯಂತರ ರೂಪಾಯಿ ಹಣ ಖರ್ಚು ಮಾಡಿ ಎಲ್ಲ ಪತ್ರಿಕೆಗಳ ಮುಖಪುಟದಲ್ಲಿ ಪ್ರಧಾನಿ ನಗುಮೊಗದ ಜಾಹೀರಾತೊಂದನ್ನು ನೀಡಿದೆ. ಈ ಮೂಲಕ ಜನರ ನೋವನ್ನು ಗೇಲಿ ಮಾಡಿದೆ. ಇದು ನಿಜಕ್ಕೂ ಆತ್ಮಸಾಕ್ಷಿಯ ನಡೆಯಲ್ಲ ಎಂದು …
Read More »ರಾಜ್ಯ ಸರ್ಕಾರದಿಂದ ‘ನೈಟ್ ಅಂಡ್ ವೀಕ್ ಎಂಡ್ ಕರ್ಪ್ಯೂ’ ಪರಿಷ್ಕೃತ ಮಾರ್ಗಸೂಚಿ ರಿಲೀಸ್ : ಯಾವುದಕ್ಕೆ ಅನುಮತಿ.? ಯಾವುದಕ್ಕೆ ಇಲ್ಲ.? ಇಲ್ಲಿದೆ ಮಾಹಿತಿ
ಬೆಂಗಳೂರು : ರಾಜ್ಯ ಸರ್ಕಾರ ನಿನ್ನೆ ಬಿಡುಗಡೆ ಮಾಡಿರುವಂತ ಕೊರೋನಾ ನೈಟ್ ಕಪ್ಯೂ ಹಾಗೂ ವೀಕ್ ಎಂಡ್ ಕರ್ಪ್ಯೂ ಜಾರಿಗೊಳಿಸಿದೆ. ಈ ಮೊದಲು ಅಗತ್ಯ ವಸ್ತು ಸೇವೆ ಜೊತೆಗೆ, ಇತರೆ ಶಾಪ್ ಗಳಿಗು ತೆರೆಯಲು ಅನುಮತಿ ನೀಡಿತ್ತು. ಆದ್ರೇ.. ಇಂದು ದಿಢೀರ್ ಶಾಕ್ ನೀಡುವಂತೆ ಪರಿಷ್ಕೃತ ಹೊಸ ಮಾರ್ಗಸೂಚಿ ಪ್ರಕಟಿಸಿದೆ. ಈ ಮಾರ್ಗಸೂಚಿಯಂತೆ, ಈಗ ಅಗತ್ಯಸೇವೆ ಒದಗಿಸುವಂತ ಶಾಪ್ ಹೊರತಾಗಿ ಎಲ್ಲಾ ಶಾಪ್ ಬಂದ್ ಮಾಡುವಂತೆ ಸೂಚಿಸಿದೆ. ಈ ಕುರಿತಂತೆ …
Read More »ಇನ್ನು ಕೆಲವೇ ಹೊತ್ತಿನಲ್ಲಿಹೊಸ ಮಾರ್ಗಸೂಚಿ ಬಿಡುಗಡೆ
ಬೆಂಗಳೂರು – ಲಾಕ್ ಡೌನ್ ಮಾದರಿಯಲ್ಲಿ ಪರಿಷ್ಕೃತ ಮಾರ್ಗಸೂಚಿ ಪ್ರಕಟಿಸಿರುವ ರಾಜ್ಯಸರಕಾರದ ನಡೆಯಿಂದ ಉಂಟಾಗಿರುವ ಗೊಂದಲಕ್ಕೆ ಸ್ಪಷ್ಟನೆ ನೀಡಿ ಮತ್ತು ಕೆಲವು ಮಾರ್ಪಾಡು ಮಾಡಿ ಹೊಸ ಮಾರ್ಗಸೂಚಿ ಪ್ರಕಟಿಸಲು ಸರಕಾರ ನಿರ್ಧರಿಸಿದೆ. ಇನ್ನು ಕೆಲವೇ ಹೊತ್ತಿನಲ್ಲಿ ಹೊಸ ಪರಿಷ್ಕೃತ ಮಾರ್ಗಸೂಚಿ ಪ್ರಕಟವಾಗಲಿದೆ. ನಿನ್ನೆ ಸಂಜೆ ಪ್ರಕಟಿಸಿರುವ ಮಾರ್ಗಸೂಚಿ ಇಂದು ಬೆಳಗ್ಗೆ ಜಾರಿಯಾಗುವ ವೇಳೆಗೆ ಭಾರಿ ಗೊಂದಲಕ್ಕೆ ಕಾರಣವಾಗಿತ್ತು. ಅದು ಸಾರ್ವಜನಿಕರಿಗೆ ಸರಿಯಾಗಿ ತಲುಪಿರಲಿಲ್ಲ. ಏಕಾ ಏಕಿ ಪೊಲೀಸರು ಬಂದು ಅಂಗಡಿ …
Read More »ವಹಿವಾಟಿಗೆ ಮರಳಿದ ವ್ಯಾಪಾರಿಗಳಿಗೆ ಇಂದು ಮಧ್ಯಾಹ್ನ ಶಾಕೀಂಗ್ ಆದೇಶ ಎದುರಾಗಿದೆ,ಮದ್ಯಾಹ್ನ 1 ಗಂಟೆಯಿಂದಲೇ ಪೋಲೀಸರು ಅಂಗಡಿಗಳನ್ನು ಬಂದ್ ಮಾಡಿಸುತ್ತಿದ್ದಾರೆ.
ಬೆಳಗಾವಿ-ನೈಟ್ ಕರ್ಫ್ಯು ಮುಗಿಸಿ ಇವತ್ತು ಬೆಳಿಗ್ಗೆಯಿಂದ ವ್ಯಾಪಾರ ವಹಿವಾಟಿಗೆ ಮರಳಿದ ವ್ಯಾಪಾರಿಗಳಿಗೆ ಇಂದು ಮಧ್ಯಾಹ್ನ ಶಾಕೀಂಗ್ ಆದೇಶ ಎದುರಾಗಿದೆ,ಮದ್ಯಾಹ್ನ 1 ಗಂಟೆಯಿಂದಲೇ ಪೋಲೀಸರು ಅಂಗಡಿಗಳನ್ನು ಬಂದ್ ಮಾಡಿಸುತ್ತಿದ್ದಾರೆ. ಕರ್ನಾಟಕದಲ್ಲಿ ಕೊರೋನಾ ವ್ಯಾಪಕವಾಗಿ ಹರಡುತ್ತಿರುವ ಹಿನ್ನಲೆಯಲ್ಲಿ ಸರ್ಕಾರ ತುರ್ತು ಆದೇಶ ಹೊರಡಿಸಿ ಅಗತ್ಯವಸ್ತುಗಳ ಅಂಗಡಿಗಳನ್ನು ಹೊರತುಪಡಿಸಿ ಉಳಿದ ಎಲ್ಲ ಅಂಗಡಿಗಳನ್ನು ಬಂದ್ ಮಾಡಿಸುವಂತೆ ಸೂಚನೆ ನೀಡಿದ ಹಿನ್ನಲೆಯಲ್ಲಿ ಪೋಲೀಸ್ ವಾಹನಗಳ ಸೈರನ್ ಸದ್ದು ಬೆಳಗಾವಿ ಮಾರುಕಟ್ಟೆಯನ್ನು ಸ್ತಭ್ದಗೊಳಿಸಿದೆ. ಬೆಳಗಾವಿಯ ಖಡೇಬಝಾರ್,ಮಾರುತಿಗಲ್ಲಿ,ಗಣಪತಿ ಬೀದಿ …
Read More »