Breaking News

ಬೆಳಗಾವಿ

ಯಡಿಯೂರಪ್ಪ ವಿರುದ್ಧ ಈಶ್ವರಪ್ಪ ಪತ್ರ ಬರೆದಿದ್ದು ಸರಿಯಲ್ಲ: ಜಗದೀಶ ಶೆಟ್ಟರ್

ಬೆಳಗಾವಿ: ‘ಸಚಿವ ಕೆ.ಎಸ್. ಈಶ್ವರಪ್ಪ ಅವರು ಮುಖ್ಯಮಂತ್ರಿ ವಿರುದ್ಧ ರಾಜ್ಯಪಾಲರಿಗೆ ಪತ್ರ ಬರೆದಿದ್ದು ಸರಿಯಲ್ಲ’ ಎಂದು ಕೈಗಾರಿಕಾ ಸಚಿವ ಜಗದೀಶ ಶೆಟ್ಟರ್ ಹೇಳಿದರು. ಇಲ್ಲಿ ಶುಕ್ರವಾರ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ‘ಬಹಿರಂಗವಾಗಿ ಪತ್ರ ಬರೆಯುವುದು, ಅದನ್ನು ರಾಜ್ಯಪಾಲರಿಗಾಗಲಿ ಅಥವಾ ಪಕ್ಷದ ಮೇಲಿನವರಿಗಾಗಲಿ ಕಳುಹಿಸುವಂಥದು ಆಗಬಾರದಿತ್ತು. ಏನಿದ್ದರೂ ಮುಖ್ಯಮಂತ್ರಿ ಜೊತೆಯೇ ಚರ್ಚಿಸಬೇಕಿತ್ತು. ಸಂಪುಟ ಸಭೆಯಲ್ಲಿ ಪ್ರಸ್ತಾಪಿಸಬೇಕಿತ್ತು. ಇದೆಲ್ಲವೂ ನಾಲ್ಕು ಗೋಡೆಗಳ ಒಳಗೆ ಆಗಬೇಕಾಗಿತ್ತು’ ಎಂದು ಪ್ರತಿಕ್ರಿಯಿಸಿದರು. ‘ನಾವೆಲ್ಲವೂ ಬಿ.ಎಸ್. ಯಡಿಯೂರಪ್ಪ ನಾಯಕತ್ವದಲ್ಲೇ …

Read More »

ರಸ್ತೆ ದಾಟುವಾಗ ಮಿನಿಲಾರಿ ಹಾಯ್ದು ಬಾಲಕ ಸಾವು

ಗೋಕಾಕ ಬ್ರೇಕಿಂಗ್ ರಸ್ತೆ ದಾಟುವಾಗ ಮಿನಿಲಾರಿ ಹಾಯ್ದು ಬಾಲಕ ಸಾವು ಗೋಕಾಕ ತಾಲೂಕಿನ ಕೊಣ್ಣೂರಲ್ಲಿ ನಡೆದ ಘಟನೆ ಸಿದ್ದಾರ್ಥ ಹಣಮಂತ ಮಲ್ಲನ್ನವರ (2) ಸಾವಿಗಿಡಾದ ಬಾಲಕ ಚಾಲಕ‌ನನ್ನು ವಶಕ್ಕೆ ಪಡೆದ ಪೋಲಿಸರು. ಮುಗಿಲು ಮುಟ್ಟಿದ ಕುಟುಂಬದ ಅಕ್ರಂದನ ಗೋಕಾಕ ಗ್ರಾಮೀಣ ಪೋಲಿಸ್ ಠಾಣೆಯ ವ್ಯಾಪ್ತಿಯಲ್ಲಿ ನಡೆದ ಘಟನೆ

Read More »

ಸತೀಶ ಜಾರಕಿಹೊಳಿ 3 ದಶಕಗಳ ಸಾಧನೆ ನೋಡಿ ಮತ ಹಾಕಿ : ಶಾಸಕಿ ಲಕ್ಷ್ಮಿ ಹೆಬ್ಟಾಳಕರ

ಬೆಳಗಾವಿ: ಬೆಳಗಾವಿ ಲೋಕಸಭಾ ಉಪಚುನಾವಣೆಯ ಕಾಂಗ್ರೆಸ್‌ ಅಭ್ಯರ್ಥಿ ಸತೀಶ ಜಾರಕಿಹೊಳಿ ಪರ ಬೆಳಗಾವಿ ಗ್ರಾಮೀಣ ವಿಧಾನಸಭಾ ಕ್ಷೇತ್ರದ ವಿವಿಧ ಗ್ರಾಮಗಳಲ್ಲಿ ಶಾಸಕಿ ಲಕ್ಷ್ಮಿ ಹೆಬ್ಟಾಳಕರ ಮತ್ತು ಅಭ್ಯರ್ಥಿ ಸತೀಶ ಜಾರಕಿಹೊಳಿ ಪ್ರಚಾರ ನಡೆಸಿ ಮತ ಯಾಚಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಲಕ್ಷ್ಮೀ ಹೆಬ್ಟಾಳಕರ, ನಮ್ಮ ಅಭ್ಯರ್ಥಿ ಸತೀಶ ಜಾರಕಿಹೊಳಿ ಕಾಂಗ್ರೆಸ್‌ ಪಕ್ಷದ ದೊಡ್ಡ ಶಕ್ತಿ. ಕಳೆದ 30 ವರ್ಷಗಳಿಂದ ಹಲವಾರು ಅಭಿವೃದ್ಧಿ ಕಾರ್ಯಗಳು ಹಾಗೂ ಸಾಮಾಜಿಕ ಚಟುವಟಿಕೆಗಳ ಮೂಲಕ ಸಮಾಜದ …

Read More »

ಹಳೆಯ ದ್ವೇಷದ ಕಾರಣ ಯುವಕನಿಗೆ ಚಾಕು ಇರಿತ ಆಸ್ಪತ್ರೆಗೆ ದಾಖಲು

ಹಳೆಯ ದ್ವೇಷದ ಕಾರಣ ಯುವಕನಿಗೆ ಚಾಕು ಇರಿತ ಆಸ್ಪತ್ರೆಗೆ ದಾಖಲು ಹಳೆಯ ದ್ವೇಷದ ಕಾರಣ ಗೋಕಾಕದಲ್ಲಿ‌ ಯುವಕನೊರ್ವನಿಗೆ ಚಾಕು ಇರಿತದಿಂದ ಗಂಬೀರ ಗಾಯಗೊಂಡ ಕಾರಣ ಸಂಬಂದಿಕರು ಗೋಕಾಕ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದ್ದಾರೆ ವಿಶಾಲ ತಾಯಿ, ಸರೋಜಾ, ಮೇಸ್ತ್ರೀ ,23 ವರ್ಷದ, ಎಂಬ ಯುವಕನಿಗೆ ಗೋಕಾಕ ತಹಸಿಲ್ದಾರ ಕಚೇರಿಯ ಆವರಣದಲ್ಲಿ ಹಳೆಯ ದ್ವೇಷದ ಕಾರಣ 5-6 ಜನ ದುಷ್ಕರಮಿಗಳು ಚಾಕು ಹಾಕಿದ್ದರಿಂದ ಸ್ಥಳದಲ್ಲಿದ ಸಂಬಂದಿಕರು ತಕ್ಷಣ ಗೋಕಾಕ ಸರಕಾರಿ ಆಸ್ಪತ್ರೆಗೆ ದಾಖಲಿಸಿದ್ದಾರೆ

Read More »

ಜಾರಕಿಹೊಳಿ ಪರ ಅಬ್ಬರದ ಪ್ರಚಾರಕ್ಕಿಳಿದ ಶಾಸಕಿ ಲಕ್ಷ್ಮಿ ಹೆಬ್ಬಾಳಕರ್

ಬೆಳಗಾವಿ, ಏಪ್ರಿಲ್ 1: ಬೆಳಗಾವಿ ಗ್ರಾಮೀಣ ಮತ ಕ್ಷೇತ್ರದ ಉಚಗಾಂವ ಗ್ರಾಮದಲ್ಲಿ ಬೆಳಗಾವಿ ಲೋಕಸಭಾ ಉಪ ಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಸತೀಶ್ ಜಾರಕಿಹೊಳಿ ಅವರೊಂದಿಗೆ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ಪ್ರಚಾರ ನಡೆಸಿದರು. ಸತೀಶ್ ಜಾರಕಿಹೊಳಿ ಹಾಗೂ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಗ್ರಾಮಕ್ಕೆ ಆಗಮಿಸುತ್ತಿದ್ದಂತೆ ಸಾವಿರಾರು ಕಾರ್ಯಕರ್ತರು ವಾದ್ಯ-ಮೇಳಗಳನ್ನು ಬಾರಿಸುವ ಮೂಲಕ ಅದ್ಧೂರಿ ಸ್ವಾಗತ ಕೋರಿದರು. ಸತೀಶ್ ಅವರ ಪರ ಘೋಷಣೆಗಳನ್ನು ಕೂಗಿದರು. ಪ್ರಚಾರದ ಸಂದರ್ಭದಲ್ಲಿ ಸಾರ್ವಜನಿಕರನ್ನುದ್ದೇಶಿಸಿ ಮಾತನಾಡಿದ ಲಕ್ಷ್ಮಿ ಹೆಬ್ಬಾಳಕರ್, …

Read More »

ಕಾಂಗ್ರೆಸ್ ಅಭ್ಯರ್ಥಿ ಸತೀಶ ಜಾರಕಿಹೊಳಿ ಅವರೊಂದಿಗೆ ಶಾಸಕಿ ಲಕ್ಷ್ಮಿ ಹೆಬ್ಬಾಳಕರ್ ಬುಧವಾರ ಅಬ್ಬರದ ಪ್ರಚಾರ

ಬೆಳಗಾವಿ: ಬೆಳಗಾವಿ ಗ್ರಾಮೀಣ ಮತಕ್ಷೇತ್ರದ ಉಚಗಾಂವ ಗ್ರಾಮದಲ್ಲಿ ಬೆಳಗಾವಿ ಲೋಕಸಭಾ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಸತೀಶ ಜಾರಕಿಹೊಳಿ ಅವರೊಂದಿಗೆ ಶಾಸಕಿ ಲಕ್ಷ್ಮಿ ಹೆಬ್ಬಾಳಕರ್ ಬುಧವಾರ ಅಬ್ಬರದ ಪ್ರಚಾರ ನಡೆಸಿದರು. ಸತೀಶ ಹಾಗೂ ಲಕ್ಷ್ಮಿ ಅವರು ಗ್ರಾಮಕ್ಕೆ ಆಗಮಿಸುತ್ತಿದ್ದಂತೆ ಕಾರ್ಯಕರ್ತರು ವಾಧ್ಯಮೇಳಗಳನ್ನು ಬಾರಿಸುವ ಮೂಲಕ ಅದ್ಧೂರಿ ಸ್ವಾಗತ ಕೋರಿದರು. ಸತೀಶ ಅವರ ಪರ ಜೈಘೋಷಗಳನ್ನು ಕೂಗಿದರು. ಪ್ರಚಾರದ ಸಂದರ್ಭದಲ್ಲಿ ಸಾರ್ವಜನಿಕರನ್ನುದ್ದೇಶಿಸಿ ಮಾತನಾಡಿದ ಲಕ್ಷ್ಮಿ ಹೆಬ್ಬಾಳಕರ್, “ಸತೀಶ ಜಾರಕಿಹೊಳಿ ಅವರು ಕಾಂಗ್ರೆಸ್ ಪಕ್ಷದ …

Read More »

ಮಹಾರಾಷ್ಟ್ರ ಮೂಲದ ಕಾರಿನಲ್ಲಿ ಹಣ ಘಟಪ್ರಭಾ ಚೆಕ್ ಪೋಸ್ಟ್ ನಲ್ಲಿ 42.71 ಲಕ್ಷ ನಗದು ವಶ

ಬೆಳಗಾವಿ: ಸಮರ್ಪಕ ದಾಖಲೆಗಳಿಲ್ಲದೇ ಕಾರಿನಲ್ಲಿ ಸಾಗಿಸುತ್ತಿದ್ದ 42.71 ಲಕ್ಷ ರೂಪಾಯಿ ನಗದು ಹಣವನ್ನು ಘಟಪ್ರಭಾ ಬಳಿಯ ಚೆಕ್ ಪೋಸ್ಟ್ ನಲ್ಲಿ ಬುಧವಾರ(ಮಾ.31) ವಶಪಡಿಸಿಕೊಳ್ಳಲಾಗಿದೆ. ಉಪ ಚುನಾವಣೆ ಹಿನ್ನೆಲೆಯಲ್ಲಿ ಘಟಪ್ರಭಾ ಬಳಿ ಸ್ಥಾಪಿಸಲಾಗಿರುವ ಚೆಕ್ ಪೋಸ್ಟ್ ನಲ್ಲಿ ಚುನಾವಣಾ ಕಾರ್ಯನಿರತ ಎಸ್.ಎಸ್.ಟಿ. ತಂಡವು ಮಹಾರಾಷ್ಟ್ರ ಮೂಲದ ಕಾರು ತಪಾಸಣೆ ನಡೆಸಿದಾಗ ನಗದು ಹಣ ಪತ್ತೆಯಾಗಿದೆ. ಮಂಗಸೂಳಿ ಮಾರ್ಗವಾಗಿ ಯರಗಟ್ಟಿ ಕಡೆಗೆ ಹೊರಟಿದ್ದ ಕಾರಿನಲ್ಲಿ ಈ ಹಣ ಪತ್ತೆಯಾಗಿದ್ದು, ಸೂಕ್ತ ದಾಖಲಾತಿಗಳು ಇಲ್ಲದಿರುವುದರಿಂದ …

Read More »

ಸಿದ್ದುಗೆ ಇನ್ನೂ ಮೆಚ್ಯುರಿಟಿ ಬಂದಿಲ್ಲ: ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಲೇವಡಿ

ಬೆಳಗಾವಿ: ನಿಜವಾಗಿ ಸೈಡ್‌ ಆಯಕ್ಟರ್‌ ಯಾರು ಎಂಬುದು ಸಿದ್ದರಾಮಯ್ಯಗೆ ಚೆನ್ನಾಗಿ ಗೊತ್ತಿದೆ. ಅವರಿಗೆ 60 ವರ್ಷ ಮೇಲ್ಪಟ್ಟಾಗಿದ್ದರೂ ಈಗಲೂ ರಾಹುಲ್‌ ಗಾಂಧಿ ಮುಂದೆ ಕೈ ಕಟ್ಟಿ ನಿಲ್ಲುತ್ತಾರೆ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಲೇವಡಿ ಮಾಡಿದರು. ಬೆಳಗಾವಿ ವಿಮಾನ ನಿಲ್ದಾಣದಲ್ಲಿ ಮಂಗಳವಾರ ಸುದ್ದಿಗಾರರ ಜತೆ ಮಾತನಾಡಿ, ಕಾಂಗ್ರೆಸ್‌ನಲ್ಲಿ ಎಂತಹ ವ್ಯವಸ್ಥೆ ಇದೆ ಎಂಬುದು ಎಲ್ಲರಿಗೂ ಗೊತ್ತಿದೆ. ಸಿದ್ದರಾಮಯ್ಯಗೆ ಇನ್ನೂ ಮೆಚ್ಯುರಿಟಿ ಬಂದಿಲ್ಲ. ಅವರು ಈಗಲೂ ತಮಗಿಂತ ಕಿರಿಯರಾದ, ಏನೂ …

Read More »

ಮಹಾರಾಷ್ಟ್ರದ ಕೋಲ್ಹಾಪುರ ಮಹಾಲಕ್ಷ್ಮೀ ದೇವಾಲಯಕ್ಕೆ ರಮೇಶ್ ಜಾರಕಿಹೊಳಿ ಭೇಟಿ

ಬೆಳಗಾವಿ: ಸಿಡಿ ಲೇಡಿ ನ್ಯಾಯಾಧೀಶರ ಮುಂದೆ ಹೇಳಿಕೆ ನೀಡಿದ ಬೆನ್ನಲ್ಲೇ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಟೆಂಪಲ್ ರನ್ ಶುರು ಮಾಡಿದ್ದು, ಮಹಾರಾಷ್ಟ್ರದ ಕೋಲ್ಹಾಪುರದ ಮಹಾಲಕ್ಷ್ಮೀ ದೇವಾಲಯಕ್ಕೆ ಭೇಟಿ ನೀಡಿ, ಪೂಜೆ ಸಲ್ಲಿಸಿದ್ದಾರೆ. ಸಂತ್ರಸ್ತ ಯುವತಿ ಇಂದು ನ್ಯಾಯಾಧೀಶರ ಮುಂದೆ ಹಾಜರಾಗಿ ತಮ್ಮ ಹೇಳಿಕೆಯನ್ನು ದಾಖಲಿಸಿದ್ದು, ಇದರಿಂದಾಗಿ ಮಾಜಿ ಸಚಿವ ರಮೇಶ್ ಜಾರಕಿಹೊಳಿಗೆ ಬಂಧನ ಭೀತಿ ಎದುರಾಗಿದೆ. ಹೀಗಾಗಿ ಮಹಾರಾಷ್ಟ್ರಕ್ಕೆ ಪ್ರಯಾಣ ಬೆಳೆಸಿದ್ದು, ಕೊಲ್ಹಾಪುರದ ಮಹಾಲಕ್ಷ್ಮೀ ದೇವಾಸ್ಥಾನಕ್ಕೆ ಭೇಟಿ ನೀಡಿದ್ದಾರೆ. …

Read More »

ಮನೆ ಇಲ್ಲದವರಿಗೆ ಸಿಎಂ ಯಡಿಯೂರಪ್ಪ ಗುಡ್ ನ್ಯೂಸ್: ಸಂತ್ರಸ್ತರೆಲ್ಲರಿಗೂ ಸೂರು ಒದಗಿಸುವ ಭರವಸೆ

ಬೆಳಗಾವಿ: ರಾಜ್ಯದಲ್ಲಿ ಅತಿವೃಷ್ಟಿಯಿಂದ ಸಂತ್ರಸ್ತರಾದವರಿಗೆ ಮನೆ ನಿರ್ಮಿಸಿಕೊಡಲಾಗುವುದು. ಯಾರಿಗೆ ಅನುದಾನ ದೊರೆತಿಲ್ಲವೋ ಅವರೆಲ್ಲರಿಗೂ ಅನುದಾನ ಬಿಡುಗಡೆ ಮಾಡಲಾಗುವುದು. ಸರ್ಕಾರದ ಬೊಕ್ಕಸಕ್ಕೆ ತೊಂದರೆಯಾದರೂ ಚಿಂತೆಯಿಲ್ಲ. ಅತಿವೃಷ್ಟಿ ಸಂತ್ರಸ್ತರಿಗೆ ಸೂರು ನಿರ್ಮಿಸಿಕೊಡಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ. ಬೆಳಗಾವಿಯ ಗಾಂಧಿಭವನದಲ್ಲಿ ಬಿಜೆಪಿ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು, ಬೆಳಗಾವಿ ಮಾತ್ರವಲ್ಲದೆ, ರಾಜ್ಯದಲ್ಲಿ ಅತಿವೃಷ್ಟಿಯಿಂದ ಸಂತ್ರಸ್ತರಾದ ಎಲ್ಲರಿಗೂ ಮನೆ ನಿರ್ಮಿಸಿಕೊಡಲಾಗುವುದು ಎಂದು ತಿಳಿಸಿದ್ದಾರೆ. ದಿ. ಸುರೇಶ್ ಅಂಗಡಿ ಬೆಳಗಾವಿಯಲ್ಲಿ ಪಕ್ಷವನ್ನು ಕಟ್ಟಿ ಮಾದರಿ …

Read More »