ಬೆಳಗಾವಿ – ಬೆಳಗಾವಿ ಲೋಕಸಭಾ ಕ್ಷೇತ್ರದ ಉಪಚುನಾವಣೆಗೆ ಸೋಮವಾರಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ನಾಮಪತ್ರ ಸಲ್ಲಿಸಲಿರುವ ಹಿನ್ನೆಲೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ ಭಾನುವಾರ ಬೆಳಗಾವಿಗೆ ಆಗಮಿಸಿದರು. ರಾಮಲಿಂಗಾರೆಡ್ಡಿ ಅವರ ಜೊತೆಗೆ ಆಗಮಿಸಿದ ಶಿವಕುಮಾರ ಅವರಿಗೆ ವಿಮಾನ ನಿಲ್ದಾಣದಲ್ಲಿ ಶಾಸಕಿ ಲಕ್ಷ್ಮಿ ಹೆಬ್ಬಾಳಕರ್ ಸೇರಿದಂತೆ ಕಾಂಗ್ರೆಸ್ ಮುಖಂಡರು, ಶಾಸಕರು ಅದ್ಧೂರಿಯಾಗಿ ಸ್ವಾಗತಕೋರಿದರು. ಸತೀಶ್ ಜಾರಕಿಹೊಳಿ ಅವರನ್ನು ಕಾಂಗ್ರೆಸ್ ನ ಎಲ್ಲ ಮುಖಂಡರೂ ಸೇರಿ ಒಮ್ಮತದಿಂದ ಅಭ್ಯರ್ಥಿಯನ್ನಾಗಿಸಿದ್ದೇವೆ. ಒಳ್ಳೆಯ …
Read More »ಸಿಡಿ ವಿಚಾರವಾಗಿ ನೋ ಕಮೇಂಟ್ಸ್ – ಉಮೇಶ್ ಕತ್ತಿ
ಬೆಳಗಾವಿ : ಬೆಳಗಾವಿಯಲ್ಲಿ ಸಚಿವ ಉಮೇಶ್ ಅವರು ಸುದ್ದಿಗಾರರೊಂದಿಗೆ ಮಾತನಾಡುವಾಗ ಸಿಡಿ ಕೇಸ್ ವಿಚಾರವಾಗಿ ಮಾತನಾಡಲು ನಿರಾಕರಿಸಿದ್ದಾರೆ. ಸಿಡಿ ವಿಚಾರವಾಗಿ ನೋ ಕಮೆಂಟ್ಸ್ ಎನ್ನುತ್ತಾ ಹೊರಟು ಹೋಗಿದ್ದಾರೆ. ಇದೇ ವೇಳೆ ಬೆಳಗಾವಿ ಲೋಕಸಭೆ ಉಪ ಚುನಾವಣೆ ಕುರಿತು ಮಾತನಾಡಿದ ಅವರು 3 ಬೈ ಎಲೆಕ್ಷನಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಮಾಡಲಾಗಿದೆ. ಉಪ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಗಳು ಗೆಲುವು ಸಾಧಿಸಲಿದ್ದಾರೆ. ಬೆಳಗಾವಿ ಲೋಕಸಭೆ ಉಪ ಚುನಾವಣೆಗೆ ಸುರೇಶ್ ಅಂಗಡಿ ಪತ್ನಿ ಮಂಗಲ …
Read More »ಬೆಳಗಾವಿಗೆ ಬಂದ ಯುವತಿಯ ಪೋಷಕರು; ಪೊಲೀಸ್ ಭದ್ರತೆ
ಬೆಳಗಾವಿ: ಗೋಕಾಕ ಬಿಜೆಪಿ ಶಾಸಕ ರಮೇಶ ಜಾರಕಿಹೊಳಿ ಅವರಿಗೆ ಸಂಬಂಧಿಸಿದ್ದು ಎನ್ನಲಾದ ಸಿ.ಡಿ.ಯಲ್ಲಿರುವ ಯುವತಿಯ ಪೋಷಕರನ್ನು ಎಸ್‌ಐಟಿ ತಂಡದವರು ಬೆಂಗಳೂರಿನಿಂದ ಬೆಳಗಾವಿಗೆ ಕರೆ ತಂದು ಇಲ್ಲಿನ ಎಪಿಎಂಸಿ ಠಾಣೆಗೆ ಭಾನುವಾರ ಮುಂಜಾನೆ ಹಸ್ತಾಂತರಿಸಿದರು. ಎಸ್‌ಐಟಿ ತಂಡದ ಎಸಿಪಿ ಪರಮೇಶ್ವರ್ ನೇತೃತ್ವದಲ್ಲಿ 16 ಎಸ್‌ಐಟಿ ಸಿಬ್ಬಂದಿಯ ತಂಡ ಎಪಿಎಂಸಿ ಪೊಲೀಸ್ ಠಾಣೆಗೆ ಬಂದು, ಸಂತ್ರಸ್ತೆಯ ಕುಟುಂಬದವರನ್ನು ತಲುಪಿಸಿದರು. ಬಳಿಕ ಪೊಲೀಸರಿಗೆ ಹಸ್ತಾಂತರಿಸಿತು. ಠಾಣೆಯ ಸಿಪಿಐ ದಿಲೀಪ್‌ಕುಮಾರ್ ಒಂದು ಗಂಟೆಗೂ ಹೆಚ್ಚು ಕಾಲ …
Read More »ರಮೇಶ್ ಜಾರಕಿಹೊಳಿ ಬೆಂಬಲಿಗರಿಂದ ಡಿಕೆಶಿ ಶವಯಾತ್ರೆ
ಗೋಕಾಕ : ಸಿಡಿ ಪ್ರಕರಣದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರ ಕೈವಾಡವಿದೆ ಎಂದು ರಮೇಶ್ ಆರೋಪಿಸಿದ ಹಿನ್ನೆಲೆಯಲ್ಲಿ ರಾಜೀನಾಮೆ ನೀಡುವಂತೆ ಆಗ್ರಹಿಸಿ ಬಿಜೆಪಿ ಕಾರ್ಯಕರ್ತರು ಇಲ್ಲಿನ ಬಸವೇಶ್ವರ ವೃತ್ತದಲ್ಲಿ ಭಾನುವಾರ ಬೃಹತ್ ಪ್ರತಿಭಟನೆ ನಡೆಸಿದರು. ಇಲ್ಲಿನ ಗೋಕಾಕ ಸಂಗೊಳ್ಳಿ ರಾಯಣ್ಣ ವೃತ್ತದಿಂದ ಬಸವೇಶ್ವರ ವೃತ್ತದವರೆಗೆ ಮೆರವಣಿಗೆ ನಡೆಸಿ, ಡಿ.ಕೆ. ಶಿವಕುಮಾರ್ ಅವರ ಅಣುಕು ಶವ ಯಾತ್ರೆ ನಡೆಸಿ, ಕೈಯಲ್ಲಿ ಖಳನಾಯಕ ಡಿ.ಕೆ.ಶಿಗೆ ಶ್ರದ್ಧಾಂಜಲಿ ಎಂಬ ಬ್ಯಾನರ್ ಹಿಡಿದು ಆಕ್ರೋಶ ವ್ಯಕ್ತ …
Read More »ಡಿಕೆಎಸ್ ವಿರುದ್ಧದ ಆರೋಪದ ಗಂಭೀರ ತನಿಖೆ ನಡೆಸಬೇಕು- ಪ್ರಹ್ಲಾದ್ ಜೋಶಿ
ಬೆಳಗಾವಿ: ಕೆಪಿಸಿಸಿ ಅಧ್ಯಕ್ಷ ಡಿ. ಕೆ. ಶಿವಕುಮಾರ್ ವಿರುದ್ಧ ಸಿಡಿ ಪ್ರಕರಣದ ಸಂತ್ರಸ್ತೆಯ ಯುವತಿಯ ಪೋಷಕರು ಮಾಡಿರುವ ಆರೋಪಕ್ಕೆ ಸಂಬಂಧಿಸಿದಂತೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಪ್ರತಿಕ್ರಿಯೆ ನೀಡಿದ್ದಾರೆ. ಬೆಳಗಾವಿಯಲ್ಲಿ ಪ್ರತಿಕ್ರಿಯೆ ನೀಡಿದ ಅವರು.. ಯುವತಿಯ ಪೋಷಕರು ಡಿ.ಕೆ. ಶಿವಕುಮಾರ್ ಮೇಲೆ ಮಾಡಿರುವ ಆರೋಪ ವಿಚಾರ ಗಂಭೀರದುದ್ದು. ಈಗಾಗಲೇ ಸಿಡಿ ವಿಚಾರವಾಗಿ ರಾಜ್ಯ ಸರ್ಕಾರದ ತನಿಖಾ ಸಂಸ್ಥೆಗಳಿಗೆ ಸಂಪೂರ್ಣವಾಗಿ ಅಧಿಕಾರ ನೀಡಲಾಗಿದೆ. ಎಸ್ ಐ ಟಿ ಡಿ.ಕೆ. ಶಿವಕುಮಾರ್ ವಿರುದ್ಧ …
Read More »ಕ್ಷೇತ್ರ ಮರಳಿ ಪಡೆಯಲು ಅವಕಾಶ: ಸತೀಶ ಜಾರಕಿಹೊಳಿ
ಬೆಳಗಾವಿ: ‘ಇಪ್ಪತ್ತು ವರ್ಷಗಳ ಹಿಂದೆ ಕಳೆದುಕೊಂಡ ಬೆಳಗಾವಿ ಲೋಕಸಭಾ ಕ್ಷೇತ್ರವನ್ನು ಕಾಂಗ್ರೆಸ್ ಮರಳಿ ಪಡೆಯುವುದಕ್ಕೆ ಈ ಉಪ ಚುನಾವಣೆ ಮೂಲಕ ಒಳ್ಳೆಯ ಅವಕಾಶ ಬಂದಿದೆ’ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ, ಕಾಂಗ್ರೆಸ್ ಅಭ್ಯರ್ಥಿ ಸತೀಶ ಜಾರಕಿಹೊಳಿ ಹೇಳಿದರು. ಇಲ್ಲಿನ ಕಾಂಗ್ರೆಸ್ ಭವನದಲ್ಲಿ ಶುಕ್ರವಾರ ಮಾಧ್ಯಮದೊಂದಿಗೆ ಮಾತನಾಡಿದ ಅವರು, ‘ಸ್ಪರ್ಧಿಸಲು ಆಸಕ್ತಿ ಇಲ್ಲವೆಂದು ಹೇಳುವುದಕ್ಕೆ ನಾನು ದೆಹಲಿಗೆ ಹೋಗಿರಲಿಲ್ಲ. ಬೇರೆ ಬೇರೆ ವಿಚಾರಗಳನ್ನು ಹೇಳಲು ತೆರಳಿದ್ದೆ. ನಾನೇ ಸ್ಪರ್ಧಿಸಬೇಕು ಎನ್ನುವುದು ಪಕ್ಷದ ನಿರ್ಧಾರ. …
Read More »ಸುರೇಶ್ ಅಂಗಡಿ ಸಾವನ್ನು ಅರಗಿಸಿಕೊಳ್ಳಲು ಈಗಲೂ ಕಷ್ಟಪಡುತ್ತಿರುವ ಅವರ ಪತ್ನಿ ಮಂಗಳಾ ಅಂಗಡಿ
ಬೆಳಗಾವಿ: ಸುರೇಶ್ ಅಂಗಡಿ ಸಾವನ್ನು ಅರಗಿಸಿಕೊಳ್ಳಲು ಈಗಲೂ ಕಷ್ಟಪಡುತ್ತಿರುವ ಅವರ ಪತ್ನಿ ಮಂಗಳಾ ಅಂಗಡಿ ಅವರು ಈಗ ಬೆಳಗಾವಿ ಲೋಕಸಭಾ ಉಪಚುನಾವಣೆಯ ಬಿಜೆಪಿ ಅಭ್ಯರ್ಥಿ. ಪತಿ ಇಲ್ಲದ ಚುನಾವಣೆಯನ್ನು ನಿರೀಕ್ಷಿಸಿರಲಿಲ್ಲ ಎನ್ನುವ ಅವರು, ಸುರೇಶ್ ಅಂಗಡಿ 20 ವರ್ಷಗಳ ಕಾಲ ಮಾಡಿದ ಜನಸೇವೆ, ಜನಪರ ಕಾರ್ಯಕ್ರಮಗಳಿಂದಲೇ ತನಗೆ ಸ್ಪರ್ಧಿಸುವ ಅವಕಾಶ ಸಿಕ್ಕಿದೆ. ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರ ಆಶೀರ್ವಾದವೇ ಶ್ರೀರಕ್ಷೆ ಎಂದುಜತೆ ಮಾತನಾಡುತ್ತಾ ಹೇಳಿಕೊಂಡಿದ್ದಾರೆ. – ಸುರೇಶ್ ಅಂಗಡಿ ಅವರಿಲ್ಲದ …
Read More »ಡಿ.ಕೆ.ಶಿವಕುಮಾರ್ ಬೆಳಗಾವಿಗೆ ಬರೋದು ಬೇಡ ಎನ್ನುತ್ತಿರುವ ಸತೀಶ್ ಜಾರಕಿಹೊಳಿ ಬೆಂಬಲಿಗರು;
ಬೆಳಗಾವಿ: ಇಲ್ಲಿನ ಲೋಕಸಭಾ ಕ್ಷೇತ್ರಕ್ಕೆ ಏಪ್ರಿಲ್ 17ರಂದು ವಿಧಾನ ಸಭಾ ಚುನಾವಣೆ ಘೋಷಣೆಯಾಗಿದ್ದು, ಬಿಜೆಪಿಯಿಂದ ಮಾಜಿ ಸಚಿವ ಸುರೇಶ್ ಅಂಗಡಿ ಪತ್ನಿ ಮಂಗಳಾ ಅವರಿಗೆ ಟಿಕೆಟ್ ಪಕ್ಕಾ ಆಗಿದೆ. ಹಾಗೇ ಕಾಂಗ್ರೆಸ್ನಿಂದ ಸತೀಶ್ ಜಾರಕಿಹೊಳಿ ಸ್ಪರ್ಧೆಗೆ ಇಳಿದಿದ್ದಾರೆ. ಆದರೆ ಈ ಉಪಚುನಾವಣೆಯ ಮೇಲೆ ರಮೇಶ್ ಜಾರಕಿಹೊಳಿ ಸೆಕ್ಸ್ ಸಿಡಿ ಪ್ರಕರಣದ ಕರಿನೆರಳು ಬಿದ್ದಿದೆ. ಸಿಡಿಗೆ ಸಂಬಂಧಪಟ್ಟಂತೆ ನಿನ್ನೆಯವರೆಗೂ ರಮೇಶ್ ಜಾರಕಿಹೊಳಿಯವರ ಹೆಸರಷ್ಟೇ ಪ್ರಮುಖವಾಗಿ ಕೇಳುತ್ತಿತ್ತು. ಆದರೆ ನಿನ್ನೆಯಿಂದ ಕೆಪಿಸಿಸಿ ಅಧ್ಯಕ್ಷ …
Read More »ಮಹಾರಾಷ್ಟ್ರದಲ್ಲಿ ಕೊರೊನಾ ಸೋಂಕು ಹೆಚ್ಚಳ : ಬೆಳಗಾವಿ ಗಡಿ ರಸ್ತೆಗಳು ಬಂದ್!
ಬೆಳಗಾವಿ : ಮಹಾರಾಷ್ಟ್ರದಲ್ಲಿ ದಿನದಿಂದ ದಿನಕ್ಕೆ ಕೊರೊನಾ ವೈರಸ್ ಸೋಂಕಿನ ಅಬ್ಬರ ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಗಡಿ ಜಿಲ್ಲೆ ಬೆಳಗಾವಿಯ ಚಿಕ್ಕೋಡಿ ತಾಲೂಕಿನ ಗ್ರಾಮಗಳಿಂದ ನೆರೆ ರಾಜ್ಯ ಮಹಾರಾಷ್ಟ್ರಕ್ಕೆ ಸಂಪರ್ಕ ಕಲ್ಪಿಸುವ ರಸ್ತೆಗಳನ್ನು ಬಂದ್ ಮಾಡಿಸಲಾಗುತ್ತಿದೆ. ಮಹಾರಾಷ್ಟ್ರದಲ್ಲಿ ಕೊರೊನಾ ವೈರಸ್ ಸೋಂಕಿನ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಮಹಾರಾಷ್ಟ್ರಕ್ಕೆ ಗಡಿಜಿಲ್ಲೆಯ ಗ್ರಾಮಗಳಿಂದ ಜನರು ಮಹಾರಾಷ್ಟ್ರಕ್ಕೆ ಹೋಗುತ್ತಿದ್ದಾರೆ. ಹೀಗಾಗಿ ಇದನ್ನು ತಪ್ಪಿಸಲು ಚಿಕ್ಕೋಡಿ ಹಾಗೂ ಅಥಣಿ ತಾಲೂಕಿನ ಅಧಿಕಾರಿಗಳೇ ರಸ್ತೆ ಬಂದ್ ಮಾಡಿಸಿದ್ದಾರೆ. …
Read More »ವೈರಲ್ ಆಡಿಯೋ, ಎಫ್‌ಐಆರ್‌ಗೆ ಹೆದರಲ್ಲ ಎಂದ ರಮೇಶ್ ಜಾರಕಿಹೊಳಿ
ಬೆಂಗಳೂರು, ಮಾರ್ಚ್ 26: ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣಕ್ಕೆ ಪೂರಕವಾಗಿ ಇಂದು ಆಡಿಯೋ ಸಂಭಾಷಣೆಯೊಂದು ಹೊರ ಬಂದಿದೆ. ಸಿಡಿಯಲ್ಲಿರುವ ಯುವತಿ ತಮ್ಮ ವಕೀಲ ಜಗದೀಶ್ ಕುಮಾರ್ ಮೂಲಕ ಪೊಲೀಸರಿಗೆ ಲಿಖಿತ ದೂರು ಸಲ್ಲಿಸಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ರಮೇಶ್ ಜಾರಕಿಹೊಳಿ ವಿರುದ್ಧ ಎಫ್‌ಐಆರ್ ಹಾಕಿದ್ದಾರೆ. ಈ ಪ್ರಕರಣದ ಎಲ್ಲಾ ಬೆಳವಣಿಗೆ ಬಗ್ಗೆ ಮೂರು ಬಾರಿ ಮಾಧ್ಯಮಗಳ ಮುಂದೆ ಬಂದ ರಮೇಶ್ ಅವರು ಸಂಜೆ ವೇಳೆಗೆ ಆಡಿಯೋ ಹಾಗೂ …
Read More »