Breaking News

ಬೆಳಗಾವಿ

ಬೆಳಗಾವಿ ರವಿವಾರ ಪೇಠನಲ್ಲಿಲ್ಲ ಪೊಲೀಸರು…? ಟ್ರಾಫಿಕ್ ಕಿರಿಕಿರಿಗೆ ಬೇಸತ್ತ ಜನ

ಬೆಳಗಾವಿ: ವಾರದ ಸಂತೆಯ ದಿನವೇ ಪೊಲೀಸರಿಲ್ಲದೇ ಸಂಚಾರದಟ್ಟಣೆ ಹಿನ್ನೆಲೆ ಕಿರಿಕಿರಿ ಅನುಭವಿಸುವ ಪರಿಸ್ಥಿತಿ ನಿರ್ಮಾಣವಾಗಿದ್ದು, ಬೆಳಗಾವಿಗರಿಂದ ತೀವ್ರ ಅಸಮಾಧಾನ ವ್ಯಕ್ತವಾಗುತ್ತಿದೆ. ಈ ದೃಶ್ಯಗಳನ್ನು ನೋಡಿ ನೀವು ಇದು ಪಾರ್ಕಿಂಗ್ ಲೇಔಟ್ ಇರಬೇಕು ಅಂದುಕೊಂಡಿರಾ? ಅಲ್ಲ . ಇದು ಬೆಳಗಾವಿಯ ಪ್ರಮುಖ ಮಾರುಕಟ್ಟೆಯಲ್ಲಿ ಒಂದಾದ ರವಿವಾರಪೇಠನ ದೃಶ್ಯಗಳಿವು. ಇಲ್ಲಿ ಅನೇಕ ಸಗಟು ವ್ಯಾಪಾಸ್ಥರ ಅಂಗಡಿಗಳಿವೆ. ಅಲ್ಲದೇ ಇನ್ನುಳಿದ ವಸ್ತುಗಳನ್ನು ಖರೀದಿಸಲು ಜನ ಹೆಚ್ಚಿನ ಸಂಖ್ಯೆಯಲ್ಲಿ ಬರುತ್ತಾರೆ. ಪ್ರತಿದಿನವು ಭಾರಿ ವಾಹನಗಳು ಇಲ್ಲಿ …

Read More »

ಶ್ರೇಷ್ಠ ಫೌಂಡೇಶನ್ ವತಿಯಿಂದ ಅನ್ನಸಂತರ್ಪಣೆ ಕಾರ್ಯಕ್ರಮ.

ಶ್ರೇಷ್ಠ ಫೌಂಡೇಶನ್ ವತಿಯಿಂದ ಅನ್ನಸಂತರ್ಪಣೆ ಕಾರ್ಯಕ್ರಮ. ರಾಮದುರ್ಗ : ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಮಾರ್ಗದರ್ಶಕರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಅನ್ನದಾಸೋಹ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.   ಪ್ರತಿ ಶನಿವಾರ ಶ್ರೇಷ್ಠ ಫೌಂಡೇಶನ್ ವತಿಯಿಂದ ವಿವಿಧ ಕಡೆಗಳಲ್ಲಿ ಅನ್ನ ಸಂತರ್ಪಣೆ ಕಾರ್ಯಕ್ರಮವನ್ನು ಸಂತೋಷ ಜಾರಕಿಹೊಳಿ ಅವರು ಹಮ್ಮಿಕೊಂಡಿದ್ದು ಈ ಶನಿವಾರ ರಾಮದುರ್ಗ ತಾಲೂಕಿನ ಗೊಣಗನೂರ ಗ್ರಾಮದ ಶ್ರೀ ಹನುಮಾನ ಮಂದಿರದಲ್ಲಿ ಆವರಣದಲ್ಲಿ ಅನ್ನ ಸಂತರ್ಪಣೆ ಹಮ್ಮಿಕೊಂಡಿದ್ದರು.   ಸೌಭಾಗ್ಯ …

Read More »

ಭಕ್ತಿಭಾವದಲ್ಲಿ ನಡೆದ ಕಂಗ್ರಾಳಿ ಬಿ.ಕೆ. ಗ್ರಾಮದೇವತೆ ಶ್ರೀ ಮಹಾಲಕ್ಷ್ಮೀಯ ಜನ್ಮೋತ್ಸವ ಕಂಗ್ರಾಳಿ ಬಿ.ಕೆ. ಗ್ರಾಮದೇವತೆ

ಶ್ರೀ ಮಹಾಲಕ್ಷ್ಮೀಯ ಜನ್ಮೋತ್ಸವ ಉತ್ಸಾಹದಲ್ಲಿ ನಡೆದ ಉಡಿ ತುಂಬುವ ಕಾರ್ಯಕ್ರಮ ವಿವಿಧ ಧಾರ್ಮಿಕ ಕಾರ್ಯಕ್ರಮ ಬೆಳಗಾವಿ ತಾಲೂಕಿನ ಕಂಗ್ರಾಳಿ ಬಿ.ಕೆ. ಗ್ರಾಮದೇವತೆ ಶ್ರೀ ಮಹಾಲಕ್ಷ್ಮೀಯ ಜನ್ಮೋತ್ಸವ ಕಾರ್ಯಕ್ರಮ ಅತ್ಯುತ್ಸಾಹದಲ್ಲಿ ನಡೆಯಿತು. ಇಂದು ಶುಕ್ರವಾರದಂದು ಬೆಳಗಾವಿ ತಾಲೂಕಿನ ಕಂಗ್ರಾಳಿ ಬಿ.ಕೆ. ಗ್ರಾಮದೇವತೆ ಶ್ರೀ ಮಹಾಲಕ್ಷ್ಮೀಯ ಜನ್ಮೋತ್ಸವ ಕಾರ್ಯಕ್ರಮ ಅತ್ಯುತ್ಸಾಹದಲ್ಲಿ ನಡೆಯಿತು. ಈ ನಿಮಿತ್ಯ ದೇವಿಯ ಉಡಿ ತುಂಬು ಕಾರ್ಯಕ್ರಮ ನಡೆಯಿತು. ಬೆಳಿಗ್ಗೆಯಿಂದಲೇ ಪೂಜೆ ಪುನಸ್ಕಾರಗಳು ಆರಂಭಗೊಂಡವು. ಗ್ರಾಮದಲ್ಲಿ ವಾದ್ಯಗಳ ಮೇಳದೊಂದಿಗೆ ಭಂಡಾರ …

Read More »

ವಿದ್ಯುತ್​ ದೀಪಗಳಿಂದ ಅಲಂಕಾರಗೊಂಡ ಸುತ್ತ-ಮುತ್ತ ಲೈಟಿಂಗ್ಸ್:

ಬೆಳಗಾವಿ: ನೂರು ವರ್ಷಗಳ ಹಿಂದೆ ಬೆಳಗಾವಿಯಲ್ಲಿ ನಡೆದ ಕಾಂಗ್ರೆಸ್ ಅಧಿವೇಶನದಲ್ಲಿ ಮುಖ್ಯ ದ್ವಾರಕ್ಕೆ ವಿದ್ಯುತ್ ದೀಪಾಲಂಕಾರ ಮಾಡಲಾಗಿತ್ತು.‌ ಈಗ ಶತಮಾನೋತ್ಸವಕ್ಕೆ ಬೆಳಕಿನ‌ ಸ್ವರ್ಗವೇ ಧರೆಗೆ ಇಳಿದಿದೆ.‌ ಈ ದೃಶ್ಯ ವೈಭವ ಕಣ್ತುಂಬಿಕೊಂಡು ಜನ‌ ಸಖತ್ ಎಂಜಾಯ್ ಮಾಡುತ್ತಿದ್ದಾರೆ. 1924 ಡಿ.26, 27ರಂದು ಬೆಳಗಾವಿ ಟಿಳಕವಾಡಿಯಲ್ಲಿ ಮಹಾತ್ಮ ಗಾಂಧೀಜಿ‌ ಅಧ್ಯಕ್ಷತೆಯಲ್ಲಿ 39ನೇ ಕಾಂಗ್ರೆಸ್ ಅಧಿವೇಶನ‌ ನಡೆದಿತ್ತು.‌ ಆ ವೇಳೆ ಕಾರ್ಯಕ್ರಮ ನಡೆಯುವ ಸ್ಥಳಕ್ಕೆ ವಿಜಯನಗರ ಸಾಮ್ರಾಜ್ಯ ಕುರುಹುವಿಗಾಗಿ “ವಿಜಯನಗರ” ಎಂದು ನಾಮಕರಣ ಮಾಡಲಾಗಿತ್ತು.‌ …

Read More »

ಸುವರ್ಣ ಸೌಧದ ಆವರಣದಲ್ಲಿನ “ವಿಜ್ಞಾನ ವನವನ್ನು” ಉದ್ಘಾಟಿಸಿದ ಸಿ.ಎಂ ಸಿದ್ದರಾಮಯ್ಯ

ಬೆಳಗಾವಿ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಬೆಳಗಾವಿ ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ಹಾಗೂ 15ನೇ ಹಣಕಾಸು ಯೋಜನೆಯಡಿಯಲ್ಲಿ ಬೆಳಗಾವಿಯ ಸುವರ್ಣ ವಿಧಾನ ಸೌಧದ ಆವರಣದಲ್ಲಿ ನಿರ್ಮಿಸಲಾಗಿರುವ ವಿಜ್ಞಾನ ವನವನ್ನು (Science Park) ಇಂದು ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯನವರು ಉದ್ಘಾಟಿಸಿದರು. ಇದೇ ವೇಳೆ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರ ಜೊತೆ ಸೇರಿ ನರೇಗಾ ಕಾರ್ಮಿಕರ ಕುಶಲೋಪರಿ ವಿಚಾರಿಸಿ, ಫೋಟೋ ತೆಗೆದುಕೊಂಡು ಖುಷಿ ಹಂಚಿಕೊಳ್ಳಲಾಯಿತು.

Read More »

ಶಾಸಕ ಟಿ.ಬಿ.ಜಯಚಂದ್ರ ಅವರಿಗೆ ಅತ್ಯುತ್ತಮ ಶಾಸಕ ಪ್ರಶಸ್ತಿ ಪ್ರದಾನ

ಬೆಳಗಾವಿ: ರಾಜ್ಯ ಸರ್ಕಾರ ದೆಹಲಿ ವಿಶೇಷ ಪ್ರತಿನಿಧಿ, ಮಾಜಿ ಸಚಿವ ಹಾಗೂ ಹಿರಿಯ ಶಾಸಕ ಟಿ.ಬಿ.ಜಯಚಂದ್ರ ಅವರಿಗೆ ಸುವರ್ಣಸೌಧದಲ್ಲಿ ಅತ್ಯುತ್ತಮ ಶಾಸಕ ಪ್ರಶಸ್ತಿ ಪ್ರದಾನ ಮಾಡಿ ಗೌರವಿಸಲಾಯಿತು. ವಿಧಾನಸಭೆಯಲ್ಲಿ ಸಭಾಧ್ಯಕ್ಷ ಯು.ಟಿ.ಖಾದರ್, ಮುಖ್ಯಮಂತ್ರಿ ಸಿದ್ದರಾಮಯ್ಯ, ವಿಧಾನಸಭೆ ವಿರೋಧಪಕ್ಷದ ನಾಯಕ ಆರ್.ಅಶೋಕ್, ಉಪಸಭಾಧ್ಯಕ್ಷ ರುದ್ರಪ್ಪ ಲಮಾಣಿ ಸೇರಿದಂತೆ ವಿವಿಧ ಗಣ್ಯರು ಟಿ.ಬಿ.ಜಯಚಂದ್ರ ಅವರಿಗೆ ಅತ್ಯುತ್ತಮ ಶಾಸಕ ಪ್ರಶಸ್ತಿ ಪ್ರದಾನ ಮಾಡಿದರು. ಶಾಸಕ ಜಯಚಂದ್ರ ಅವರ ಸಮಯಪಾಲನೆ ಹಾಗೂ ಶಿಸ್ತುಬದ್ದ ಕಾರ್ಯ ನಿರ್ವಹಣೆ, ಕಲಾಪದಲ್ಲಿ …

Read More »

ಹೈಕಮಾಂಡ್​ ಎಚ್ಚರಿಕೆ ಕೊಟ್ಟರೂ ಕ್ಯಾರೇ ಎನ್ನದ ಯತ್ನಾಳ್ ಟೀಂ

ಬೆಳಗಾವಿ, (ಡಿಸೆಂಬರ್ 17): ಕರ್ನಾಟಕ ಬಿಜೆಪಿಯಲ್ಲಿನ ಬಣ ರಾಜಕೀಯ ಮುಂದುವರಿದಿದೆ. ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ವಿರುದ್ಧ ಬಸನಗೌಡ ಪಾಟೀಲ್ ಯತ್ನಾಳ್ ಟೀಂ ಸೈಲೆಂಟ್​, ವೈಲೆಂಟ್​ ಆಟ ಆಡುತ್ತಲೇ ಇದೆ. ಹೈಕಮಾಂಡ್​ ಎಚ್ಚರಿಕೆ ಕೊಟ್ಟರೂ ಕ್ಯಾರೇ ಎನ್ನದ ಯತ್ನಾಳ್ ಟೀಂ, ತಮ್ಮ ಬಣ ರಾಜಕೀಯ ಮುಂದುವರಿಸಿದೆ. .ಬಿಜೆಪಿ ರೆಬೆಲ್ ಟೀಮ್ ಮತ್ತೆ ಬೆಳಗಾವಿಯಲ್ಲಿ ಒಟ್ಟಿಗೆ ಕಾಣಿಸಿಕೊಂಡಿದ್ದು, ವಕ್ಫ್ ವಿರುದ್ಧ 2ನೇ ಹಂತದ ಹೋರಾಟದ ಬಗ್ಗೆ ಮಹತ್ವ ಚರ್ಚೆ ನಡೆಸಿದೆ. ಈ ಬಗ್ಗೆ …

Read More »

ಬಾಲ ಭವನ ನಿರ್ಮಾಣ ನನ್ನ ಕನಸು:ಲಕ್ಷ್ಮಿ ಹೆಬ್ಬಾಳ್ಕರ್

ಬೆಳಗಾವಿ: ”ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಕಾನೂನು ಚೌಕಟ್ಟಿನಲ್ಲಿ ಹೋರಾಟ ಮಾಡುವುದು ಎಲ್ಲರ ಹಕ್ಕು. ಆದರೆ, ಪಂಚಮಸಾಲಿ ಮೀಸಲಾತಿ ಹೋರಾಟವು ಬೇರೆ ಪಕ್ಷ ಅಥವಾ ಪ್ರಚೋದಿತ ಜನರಿಂದ ಹೋರಾಟ ಆಗಬಾರದು ಎಂಬುದೇ ನನ್ನ ಆಸೆ” ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಮಂಗಳವಾರ ನಗರದ ಜಿಲ್ಲಾ ಬಾಲಭವನ ನಿರ್ಮಾಣ ಕಟ್ಟಡ ಕಾಮಗಾರಿಗೆ ಚಾಲನೆ ನೀಡಿದ ನಂತರ ಮಾಧ್ಯಮಗಳ ಜೊತೆ ಮಾತನಾಡುತ್ತಾ, ”ಕಾನೂನನ್ನು ಯಾರೂ ಕೈಗೆ ತೆಗೆದುಕೊಳ್ಳಬಾರದು, …

Read More »

ಸುವರ್ಣಸೌಧದಲ್ಲಿ ಬಾಪೂಜಿ ಜೀವನ ಚರಿತ್ರೆಯ ಅಪರೂಪದ ಫೋಟೋಗಳ ಪ್ರದರ್ಶನ

ಬೆಳಗಾವಿ: ಕುಂದಾನಗರಿ ಈಗ ಕಾಂಗ್ರೆಸ್ ಅಧಿವೇಶನದ ಶತಮಾನೋತ್ಸವಕ್ಕೆ ಸಜ್ಜಾಗುತ್ತಿದೆ. ಇದರ ನಡುವೆ ಚಳಿಗಾಲದ ಅಧಿವೇಶನ ನಡೆಯುತ್ತಿರುವ ಸುವರ್ಣ ವಿಧಾನಸೌಧದಲ್ಲಿ ಮಹಾತ್ಮ ಗಾಂಧೀಜಿ ಅವರ ಇಡೀ ಜೀವನ ಸಾರುವ ಚಿತ್ರಗಳ ಪ್ರದರ್ಶನ ಆಯೋಜಿಸಲಾಗಿದೆ. ಕಲಾಪ ವೀಕ್ಷಣೆಗೆ ಸುವರ್ಣ ಸೌಧಕ್ಕೆ ಬರುತ್ತಿರುವ ವಿದ್ಯಾರ್ಥಿಗಳು, ಸಾರ್ವಜನಿಕರು ಮಹಾತ್ಮ ಗಾಂಧೀಜಿ ಅವರ ಚಿತ್ರಗಳನ್ನೂ ಕಂಡು ಇತಿಹಾಸವನ್ನು ಮೆಲುಕು ಹಾಕುತ್ತಿದ್ದಾರೆ. ಬೆಳಗಾವಿಯಲ್ಲಿ 1924ರ ಡಿ.26, 27ರಂದು ನಡೆದ ಕಾಂಗ್ರೆಸ್ ಅಧಿವೇಶನ ಮಹಾತ್ಮ ಗಾಂಧೀಜಿ ಅಧ್ಯಕ್ಷತೆ ವಹಿಸಿದ್ದ ಏಕೈಕ ಅಧಿವೇಶನ. …

Read More »

ಮೂರು ತಿಂಗಳ ಹಿಂದಷ್ಟೇ ಮದುವೆಯಾಗಿದ್ದ ಮಹಿಳೆ ನೇಣಿಗೆ ಶರಣಾ

ಚಿಕ್ಕೋಡಿ: ಮೂರು ತಿಂಗಳ ಹಿಂದಷ್ಟೇ ಮದುವೆಯಾಗಿದ್ದ ಮಹಿಳೆ ನೇಣಿಗೆ ಶರಣಾಗಿರುವ ಘಟನೆ ಬೆಳಗಾವಿ (Belagavi) ಜಿಲ್ಲೆಯ ರಾಯಬಾಗ (Raibag) ತಾಲೂಕಿನ ನಿಡಗುಂದಿ (Nidagundi) ಗ್ರಾಮದಲ್ಲಿ ನಡೆದಿದೆ. ರಮ್ಯಾಶ್ರೀ ಬಸವರಾಜ ಹಂಪನ್ನವರ (25) ಮೃತ ಮಹಿಳೆ. ಅನಾರೋಗ್ಯದ ಸಮಸ್ಯೆಯಿಂದ ಮಹಿಳೆ ನೇಣಿಗೆ ಶರಣಾಗಿರುವ ಶಂಕೆ ವ್ಯಕ್ತವಾಗಿದೆ. ರಮ್ಯಾಶ್ರೀ ಕಳೆದ ನಾಲ್ಕು ವರ್ಷದ ಹಿಂದೆ ಬೇರೆ ಮದುವೆ ಆಗಿ ಪತಿಯಿಂದ ಬೇರ್ಪಟ್ಟಿದ್ದಳು. ಬಳಿಕ ಮೂರು ತಿಂಗಳ ಹಿಂದೆ ನಿಡಗುಂದಿ ಗ್ರಾಮದ ಬಸವರಾಜ ಹಂಪನ್ನವರ …

Read More »