Breaking News

ಬೆಳಗಾವಿ

ಅನ್ನಭಾಗ್ಯ’ ಯೋಜನೆ ಫಲಾನುಭವಿಗಳಿಗೆ ಬಿಗ್ ಶಾಕ್: ಇಂದಿರಾ ಕ್ಯಾಂಟೀನ್ ಗೂ ಇಲ್ಲ ಅನುದಾನ

ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಮಂಡಿಸಿದ ಬಜೆಟ್ ನಲ್ಲಿ ಇಂದಿರಾ ಕ್ಯಾಂಟೀನ್ ಗಳ ನಿರ್ವಹಣೆಗೆ ಅನುದಾನ ನೀಡಿಲ್ಲ. ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಜಾರಿಗೆ ತಂದಿದ್ದ ‘ಅನ್ನಭಾಗ್ಯ’ ಯೋಜನೆಯಡಿ ಬಿಪಿಎಲ್ ಪಡಿತರ ಚೀಟಿದಾರರಿಗೆ ನೀಡುತ್ತಿದ್ದ 7 ಕೆಜಿ ಅಕ್ಕಿಯನ್ನು ಬಿಜೆಪಿ ಸರ್ಕಾರ 5 ಕೆಜಿಗೆ ಇಳಿಕೆ ಮಾಡಿದೆ. ಆದರೆ, ಸಿಎಂ ಯಡಿಯೂರಪ್ಪ ಮಂಡಿಸಿದ ಬಜೆಟ್ ನಲ್ಲಿ ಪಡಿತರ ಹೆಚ್ಚಳದ ಬಗ್ಗೆ ಪ್ರಸ್ತಾಪಿಸಿಲ್ಲ. ‘ಅನ್ನಭಾಗ್ಯ’ ಮತ್ತು ‘ಕ್ಷೀರ ಭಾಗ್ಯ’ …

Read More »

ಬೆಳಗಾವಿಯಲ್ಲಿ ಆತ್ಮನಿರ್ಭರ ಮಹಿಳೆ; ರೊಟ್ಟಿ ತಯಾರಿಸಿ 40 ಕುಟುಂಬಗಳಿಗೆ ಆಸರೆಯಾದ ಮಹಾದೇವಿ ಕಬ್ಬೂರು

ಬೆಳಗಾವಿ (ಮಾ. 7): ಗ್ರಾಮೀಣ ಭಾಗದಲ್ಲಿ ಹೆಣ್ಣು ಎಂದರೆ ಕೇವಲ ಅಡುಗೆ ಮಾಡೋದು ಮಕ್ಕಳು ಸಂಸಾರ ನೋಡಿಕೊಂಡು ಹೋಗುವವರೇ ಜಾಸ್ತಿ. ಆದರೆ, ಇಲ್ಲೋರ್ವ ಮಹಿಳೆ ತನ್ನ ಸಂಸಾರ ಜೊತೆಗೆ ಇತರೆ 40 ಜನರ ಸಂಸಾರಕ್ಕೂ ಆಸರೆಯಾಗಿದ್ದಾರೆ. ಅವರ ಒಂದೇ  ಒಂದು ಕೆಲಸ 40 ಕುಟುಂಬಗಳಿಗೆ ಆಸರೆಯಾಗಿದೆ. ಹಾಗಾದರೆ ಯಾರು ಆ ಮಹಿಳೆ? ಏನು ಆ ಕೆಲಸ ಅಂತೀರಾ? ಈ ಸ್ಟೋರಿ ಓದಿ… ‘ತೊಟ್ಟಿಲನ್ನು ತೂಗುವ ಕೈ ಜಗತ್ತನ್ನೇ ಆಳಬಲ್ಲದು’ ಎಂಬ …

Read More »

ಬೆಳಗಾವಿಯಲ್ಲಿ ಆರಂಭಗೊ0ಡಿದೆ ಪಾಲಿಕೆಯ ಕನ್ನಡ ಧ್ವಜ ತೆರವುಗೊಳಿಸುವಂತೆ ಎಂಇಎಸ ಪ್ರತಿಭಟನಾ ಮೆರವಣಿಗೆ..

ಬೆಳಗಾವಿ ಮಹಾಪಾಲಿಕೆ ಎದುರಿನ ಕನ್ನಡ ಧ್ವಜವನ್ನ ತೆರವುಗೊಳಿಸಬೇಕೆಂದು ಒತ್ತಾಯಿಸಿ ಬೆಳಗಾವಿಯಲ್ಲಿ ಮಧ್ಯವರ್ತಿ ಮಹಾರಾಷ್ಟç ಏಕೀಕರಣ ಸಮೀತಿಯ ನೇತೃತ್ವದಲ್ಲಿ ಇಂದು ಬೃಹತ್ ಪ್ರತಿಭಟನಾ ರ‍್ಯಾಲಿಯನ್ನ ಹಮ್ಮಿಕೊಳ್ಳಲಾಗಿತ್ತು. ಸೋಮವಾರ ಧರ್ಮವೀರ ಸಂಭಾಜೀ ಮಹಾರಾಜರ ಪುತ್ಥಳಿಗೆ ಮಾಲಾರ್ಪಣೆ ಮಾಡಿ, ್ಲ ಮಧ್ಯವರ್ತಿ ಮಹಾರಾಷ್ಟç ಏಕೀಕರಣ ಸಮೀತಿಯ ನೇತೃತ್ವದಲ್ಲಿ ಮೆರವಣಿಗೆ ಆರಂಭಗೊAಡಿತು. ಈ ವೇಳೆ ಬೆಳಗಾವಿ ಮಹಾನಗರ ಪಾಲಿಕೆ ಮೇಲೆ ಭಗವಾ ಧ್ವಜವನ್ನ ಹಾರಿಸಲೇ ಬೇಕೆಂದು ಘೋಷಣೆಗಳನ್ನ ಕೂಗಿದರು. ಮಾಜಿ ಮಹಾಪೌರ ಸರೀತಾ ಪಾಟೀಲ ಅವರು …

Read More »

ಹಿಡಕಲ್ ಜಲಾಶಯದಿಂದ ನಾಳೆಯಿಂದ 15 ದಿನಗಳವರೆಗೆ 6.80 ಟಿಎಂಸಿ ನೀರು ಬಿಡುಗಡೆ : ಶಾಸಕ ಬಾಲಚಂದ್ರ ಜಾರಕಿಹೊಳಿ

ಗೋಕಾಕ : ಹಿಡಕಲ್ ಜಲಾಶಯದಿಂದ ನಾಳೆಯಿಂದ 15 ದಿನಗಳವರೆಗೆ ರೈತರ ಕೃಷಿ ಜಮೀನುಗಳಿಗೆ ನೀರು ಹಾಯಿಸಲು 6.80 ಟಿಎಂಸಿ ನೀರು ಬಿಡುಗಡೆ ಮಾಡಲಾಗಿದೆ ಎಂದು ಕೆಎಂಎಫ್ ಅಧ್ಯಕ್ಷ ಹಾಗೂ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ತಿಳಿಸಿದ್ದಾರೆ. ನಾಳೆ ಮಂಗಳವಾರ ಸಂಜೆ 6 ಗಂಟೆಗೆ ಹಿಡಕಲ್ ಜಲಾಶಯದಿಂದ ನೀರು ಬಿಡುಗಡೆಯಾಗಲಿದೆ ಎಂದು ಅವರು ಹೇಳಿದ್ದಾರೆ. ಘಟಪ್ರಭಾ ಎಡದಂಡೆ ಕಾಲುವೆಗೆ 2400 ಕ್ಯೂಸೆಕ್ಸ್, ಘಟಪ್ರಭಾ ಬಲದಂಡೆ ಕಾಲುವೆಗೆ 2000 ಕ್ಯೂಸೆಕ್ಸ್ ಮತ್ತು …

Read More »

ಜನಪರ-ರೈತಪರ ಬಜೆಟ್ : ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಸ್ವಾಗತ

  ಗೋಕಾಕ : 8ನೇ ಬಾರಿಗೆ ಬಜೆಟ್ ಮಂಡಿಸಿರುವ ಮುಖ್ಯಮಂತ್ರಿ, ನೇಗಿಲಯೋಗಿ ಬಿ.ಎಸ್. ಯಡಿಯೂರಪ್ಪ ಅವರು ರಾಜ್ಯದ ಸರ್ವತೋಮುಖ ಏಳ್ಗೆ ಸೇರಿದಂತೆ ಎಲ್ಲ ಕ್ಷೇತ್ರಗಳಿಗೂ ವಿಶೇಷ ಆದ್ಯತೆ ನೀಡುವ ಮೂಲಕ ಸರ್ವರಿಗೂ ಸಮಪಾಲು ನೀಡಿದ್ದಾರೆಂದು ಕೆಎಂಎಫ್ ಅಧ್ಯಕ್ಷ ಮತ್ತು ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಹರ್ಷ ವ್ಯಕ್ತಪಡಿಸಿದರು. ಸೋಮವಾರದಂದು 2021-22 ನೇ ಸಾಲಿನ ರಾಜ್ಯ ಸರ್ಕಾರದ ಆಯವ್ಯಯ ಪತ್ರವನ್ನು ಮಾರ್ಚ್ 8 ರ ವಿಶ್ವ ಮಹಿಳಾ ದಿನಾಚರಣೆಯಂದು ಮಂಡಿಸಿರುವ ಮುಖ್ಯಮಂತ್ರಿಗಳು …

Read More »

ಪಾಲಿಕೆ ಎದುರು ಭಗವಾ ಧ್ವಜ ಹಾರಿಸಲು ಯತ್ನ,ಎಂಈಎಸ್ ಕಾರ್ಯಕರ್ತೆಯರ ವಶಕ್ಕೆ

ಬೆಳಗಾವಿ- ಮಹಾನಗರ ಪಾಲಿಕೆಯ ಎದರು ಭಗವಾ ಧ್ವಜ ಹಾರಿಸಲು ಯತ್ನಿಸಿದ ಐವರು ಮಹಿಳಾ ಕಾರ್ಯಕರ್ತೆಯರನ್ನು ಪೋಲೀಸರು ವಶಕ್ಕೆ ಪಡೆದಿದಿದ್ದಾರೆ.     ಬೆಳಗಾವಿ ಮಹಾನಗರ ಪಾಲಿಕೆಯ ಎದರು ಕನ್ನಡಿಗರು ಕನ್ನಡ ಧ್ವಜ ಹಾರಿಸಿದ್ದನ್ನು ವಿರೋಧಿಸಿ,ಎಂಈಎಸ್ ಮತ್ತು ಶಿವಸೇನೆ ಕಾರ್ಯಕರ್ತರು ಬೆಳಗಾವಿಯ ಕಾಲೇಜು ರಸ್ತೆಯಲ್ಲಿ ಪ್ರತಿಭಟನಾ ರ್ಯಾಲಿ ನಡೆಸುತ್ತಿರುವಾಗ,ಇನ್ನೊಂದೆಡೆ ಮಹಿಳಾ ಕಾರ್ಯಕರ್ತೆಯರು ಪಾಲಿಕೆ ಎದರು ಭಗವಾ ಧ್ವಜ ಹಾರಿಸುವ ವಿಫಲ ಯತ್ನ ನಡೆಸಿದ್ದಾರೆ. ಸುಮಾರು ಐದು ಜನ ಮಹಿಳಾ ಕಾರ್ಯಕರ್ತೆ ಯರು …

Read More »

ಬಿಲ್ಲವರ ಸಮಾಜದ ವಾರ್ಷಿಕೋತ್ಸವ, ಪ್ರತಿಭಾ ಪುರಸ್ಕಾರ ಸಮಾರಂಭ …

ಬೆಳಗಾವಿ: ಬಡಮಕ್ಕಳಿಗೆ ಹಾಗೂ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಗುರುತಿಸಿ ಅವರಿಗೆ ಸನ್ಮಾನ ಹಾಗೂ ಉನ್ನತ ಮಟ್ಟಕ್ಕೆ ಪ್ರೋತ್ಸಾಹ ನೀಡುತ್ತಿರುವ ಬಿಲ್ಲವರ ಸಮಾಜದ ಕಾರ್ಯ ಮೆಚ್ಚುಂವತದ್ದು, ಮಕ್ಕಳಿಗೆ ಶಿಕ್ಷಣ ಪ್ರಮುಖವಾಗಿದೆ. ಏಕಾಗ್ರತೆಯಿಂದ ಓದಿನತ್ತ ಗಮನ ಹರಿಸಿ ಸಮಾಜಮುಖಿ ಕಾರ್ಯಗಳನ್ನು ಮಾಡಬೇಕೆಂದು ಧಾರವಾಡ ೨ ನೇ ಜಿಲ್ಲಾ ಸತ್ರ ನ್ಯಾಯಾಧೀಶೆ ಪಂಚಾಕ್ಷರಿ ಎಮ್.ಸುವರ್ಣ ಹೇಳಿದರು. ಇಲ್ಲಿನ ಶಹಾಪುರ ವಿಜಯಲಕ್ಷ್ಮಿ ಸಭಾ ಭವನದಲ್ಲಿ ರವಿವಾರ ೭ ರಂದು ಬಿಲ್ಲವರ ಅಸೋಸಿಯೇಶನ್ ಸಂಘದಿಂದ ಆಯೋಜಿಸಿದ ಬಿಲ್ಲವರ ಸಂಘದ …

Read More »

12 ಮಹಿಳೆಯರಿಗೆ ಸಾವಿತ್ರಿಬಾಯಿ ಫುಲೆ ಪ್ರಶಸ್ತಿಗಳನ್ನು ನೀಡಿ ಶ್ಲಾಘಿಸಿದ ನಿಯತಿ ಫೌಂಡೇಶನ್‌ನ ಸಂಸ್ಥಾಪಕ ಅಧ್ಯಕ್ಷೆ ಡಾ. ಸೋನಾಲಿ ಸರ್ನೋಬತ್

ನಿಯತಿ ಫೌಂಡೇಶನ್ ವಿವಿಧ ಕ್ಷೇತ್ರಗಳಲ್ಲಿ ಸಮಾಜಕ್ಕೆ ನೀಡಿದ ಅತ್ಯುತ್ತಮ ಕೊಡುಗೆಗಾಗಿ 12 ಮಹಿಳೆಯರಿಗೆ ಸಾವಿತ್ರಿಬಾಯಿ ಫುಲೆ ಪ್ರಶಸ್ತಿಗಳನ್ನು ನೀಡಿತು. ಈಫಾ ಹೊಟೆಲ್ ಸಭಾಂಗಣದಲ್ಲಿ ಭಾನುವಾರ ಕಾರ್ಯಕ್ರಮ ನಡೆಯಿತು. ಅರ್ಚನಾ ಸಂಗೀತ ವಿದ್ಯಾಲಯದ ವಿದ್ಯಾರ್ಥಿಗಳು ಜಾನಪದ ನೃತ್ಯ ‘ಮುಲಗಿ ಜಲಿ ಹೋ’ ಪ್ರದರ್ಶಿಸುವುದರೊಂದಿಗೆ ಕಾರ್ಯಕ್ರಮ ಪ್ರಾರಂಭವಾಯಿತು. ಪ್ರಸಿದ್ಧ ಉದ್ಯಮಿ ಶ್ರೀಮತಿ ರೋಹಿಣಿ ಗೋಗ್ಟೆ ಮತ್ತು ಜಿ ಜಿ ಚಿಟ್ನಿಸ್ ಶಾಲೆಯ ಪ್ರಾಂಶುಪಾಲರಾದ ಶ್ರೀಮತಿ ನವೀನಾ ಶೆಟ್ಟಿಗಾರ್ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು. ನಿಯತಿ …

Read More »

ಕ್ರೀಡಾ ಮನೋಭಾವದಿಂದ ಈ ಕ್ರೀಡಾಕೂಟದಲ್ಲಿ ಪಾಲ್ಗೋಳಿ : ಜಾವೇದ ಇನಾಮದಾರ

ಗೋಕಾಕ:ಕ್ರೀಡಾ ಮನೋಭಾವದಿಂದ ಈ ಕ್ರೀಡಾಕೂಟದಲ್ಲಿ ಪಾಲ್ಗೋಳಿ : ಜಾವೇದ ಇನಾಮದಾರ ಸೋಲು ಗೆಲುವಿಗೆ ಮಹತ್ವ ನೀಡದೆ ಕ್ರೀಡಾ ಮನೋಭಾವದಿಂದ ಈ ಕ್ರೀಡಾಕೂಟದಲ್ಲಿ ಪಾಲ್ಗೋಳುವಂತೆ ಡಿ.ವಾಯ್.ಎಸ್.ಪಿ ಜಾವೇದ ಇನಾಮದಾರ ಹೇಳಿದರು ರವಿವಾರದಂದು ನಗರದ ಕೆಎಲ್ಇ ಶಾಲಾ ಆವರಣದಲ್ಲಿ ಜೆಸಿಐ ಸಂಸ್ಥೆಯವರು ಮಹಿಳಾ ದಿನಾಚರಣೆ ಅಂಗವಾಗಿ ಆಯೋಜಿಸಿದ್ದ ಕ್ರಿಕೆಟ್ ಪಂದ್ಯಾವಳಿಯನ್ನು ಉದ್ಘಾಟಿಸಿ ಮಾತನಾಡುತ್ತಿದ್ದರು. ಮಹಿಳೆಯರು ಇಂದು ಮನೆಗೆ ಸಿಮಿತವಾಗದೆ ಎಲ್ಲ ಕ್ಷೇತ್ರಗಳಲೂ ಮಾದರಿಯಾಗಿ ಕಾರ್ಯನಿರ್ವಸುತ್ತಿದ್ದಾರೆ. ಇಂತಹ ವೇದಿಕೆಗಳ ಸದುಪಯೋಗದಿಂದ ತಮ್ಮಲ್ಲಿಯ ಪ್ರತಿಭೆ ಹಾಗೂ …

Read More »

ಉಡುಪಿ ಪೇಜಾವರ ಮಠದಲ್ಲಿ ಬೆಂಕಿ ಅವಘಡ

ಉಡುಪಿ : ಉಡುಪಿಯ ಪೇಜಾವರ ಮಠದಲ್ಲಿ ಎಸಿಯ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದಾಗಿ ಬೆಂಕಿ ಅವಘಡ ಸಂಭವಿಸಿದ್ದು, ಈ ಸಂದರ್ಭದಲ್ಲಿ ಯಾವುದೇ ಹಾನಿ ಆಗಿಲ್ಲ ಎಂದು ತಿಳಿದು ಬಂದಿದೆ. ಈ ಅಗ್ನಿ ಅನಾಹುತ ವೇಳೆ ಪೇಜಾವರ ಶ್ರೀಗಳು ಮಠದಲ್ಲಿರಲಿಲ್ಲ . ಅಷ್ಟೇ ಅಲ್ಲದೆ, ಅವಘಡದಿಂದ ಮಠದ ಪೀಠೋಪಕರಣಗಳಿಗೆ ಹಾನಿಯಾಗಿಲ್ಲ ಎಂದೂ ತಿಳಿದುಬಂದಿದೆ . ವಿಷಯ ತಿಳಿದ ಕೂಡಲೇ ಸ್ಥಳಕ್ಕೆ ದೌಡಾಯಿಸಿದ ಉಡುಪಿ ಅಗ್ನಿಶಾಮಕದಳ ಸಿಬ್ಬಂದಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.

Read More »