Breaking News

ಬೆಳಗಾವಿ

ಪೊಲೀಸ್ ದಾಳಿಗೆ ಹೆದರಿ ನದಿಗೆ ಹಾರಿದ ಯುವಕರ ಮೃತದೇಹ ಪತ್ತೆ!!

ರಾಮದುರ್ಗ: ಜೂಟಾಟ ವೇಳೆ ಪೊಲೀಸರು ದಾಳಿ  ನಡೆಸಿದ ವೇಳೆ ಹೆದರಿ ಮಲಪ್ರಭಾ ನದಿಗೆ ಹಾರಿದ ಇಬ್ಬರ ಮೃತದೇಹ    ಪತ್ತೆಯಾಗಿವೆ. ಮಂಜು ಬಂಡಿವಡ್ಡರ್(30), ಸಮೀರ್ ಬಟಕುರ್ಕಿ(22) ಮೃತರು. ಮಲಪ್ರಭಾ ನದಿ ದಡದಲ್ಲಿ ಜೂಜಾಡುತ್ತಿದ್ದ ಯುವಕರ ಗುಂಪಿನ ಮೇಲೆ ರಾಮದುರ್ಗ ಪೊಲೀಸರು ದಾಳಿ ನಡೆಸಿದ್ದರು. ಈ ವೇಳೆ ಬಂಧನ ಭೀತಿಯಿಂದ ಆರು ಜನರು ಮಲಪ್ರಭಾ ನದಿಗೆ ಹಾರಿದ್ದರು. ಈ ವೇಳೆ ನಾಲ್ವರು ಈಜಿ ದಡ ಸೇರಿದ್ರೆ ಇಬ್ಬರು ಯುವಕರು ನಾಪತ್ತೆಯಾಗಿದ್ದರು. ಬೆಳಗ್ಗೆಯಿಂದ …

Read More »

ಈ ವರ್ಷದ ರಾಜ್ಯ ಬಜೆಟ್ ನಲ್ಲಿ ಬೆಳಗಾವಿ ರಿಂಗ್ ರಸ್ತೆಗೆ ಕನಿಷ್ಠ 190 ಕೋಟಿ ರೂ. ಮೀಸಲಿರಲಿದೆ: ಅಭಯ ಪಾಟೀಲ

ಬೆಳಗಾವಿ – ಈ ವರ್ಷದ ರಾಜ್ಯ ಬಜೆಟ್ ನಲ್ಲಿ ಬೆಳಗಾವಿ ರಿಂಗ್ ರಸ್ತೆಗೆ ಕನಿಷ್ಠ 190 ಕೋಟಿ ರೂ. ಮೀಸಲಿರಲಿದೆ ಎಂದು ಶಾಸಕ ಅಭಯ ಪಾಟೀಲ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಮಂಗಳವಾರ ಸಂಜೆ ಹಿಂದವಾಡಿಯ ಹಿಂದ್ ಸೋಶಿಯಲ್ ಕ್ಲಬ್ ನಲ್ಲಿ ಬೆಳಗಾವಿಯ ವಿವಿಧ ಸಂಘ ಸಂಸ್ಥೆಗಳ ಪ್ರತಿನಿಧಿಗಳ ಒಕ್ಕೂಟ (ಎಫ್ಒಎಬಿ) ಸಂಘಟಿಸಿದ್ದ ಸಭೆಯಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ರಿಂಗ್ ರಸ್ತೆ ಬಹಳ ವರ್ಷದಿಂದ ನನೆಗುದಿಗೆ ಬಿದ್ದಿದೆ. ಈ ಬಗ್ಗೆ ಸಾಕಷ್ಟು ಪ್ರಯತ್ನ …

Read More »

ಹುಕ್ಕೇರಿ ನೂತನ ತಹಶೀಲ್ದಾರ್ ಡಿ.ಎಚ್. ಹೂಗಾರ ಅಧಿಕಾರ ಸ್ವೀಕಾರ

ಹುಕ್ಕೇರಿ: ತಾಲೂಕಿನ ನೂತನ ತಹಶೀಲ್ದಾರ ಆಗಿ ಡಿ.ಎಚ್. ಹೂಗಾರ ಅಧಿಕಾರ ಸ್ವೀಕರಿಸಿದರು. ಕೆಪಿಸಿಸಿ ಕಾರ್ಯಾಧ್ಯಕ್ಷ ಹಾಗೂ ಶಾಸಕ ಸತೀಶ ಜಾರಕಿಹೊಳಿ ಅವರು ನೂತನ ತಹಶೀಲ್ದಾರರನ್ನು ಸ್ವಾಗತಿಸಿ ಸನ್ಮಾನಿಸಿದರು. ಈ ಸಂದರ್ಭದಲ್ಲಿ ತಹಶೀಲ್ದಾರ್ ಹೂಗಾರ ಅವರು ಶಾಸಕ ಸತೀಶ ಜಾರಕಿಹೊಳಿ ಅವರನ್ನು ಸತ್ಕರಿಸಿದರು.

Read More »

ಪೊಲೀಸ್ ದಾಳಿಗೆ ಹೆದರಿ ಜೂಜಾಟದಲ್ಲಿ ತೊಡಗಿದ್ದ ಇಬ್ಬರು ನೀರು ಪಾಲು

ರಾಮದುರ್ಗ: ಯುವಕರ ಗುಂಪು ಜೂಜಾಟದಲ್ಲಿ ತೊಡಗಿದ್ದು, ಪೊಲೀಸ್ ದಾಳಿ ನಡೆಸಿದ್ದರಿಂದ ಇಬ್ಬರು ಮಲಪ್ರಭಾ ನದಿಗೆ ಹಾರಿದ ಘಟನೆ ನಡೆದಿದೆ. ನದಿಯ ಪಕ್ಕದ ಪೊದೆಯ ಬಳಿ ಗುಂಪು ಪೊಲೀಸರು ಬಂದಿದ್ದರಿಂದ ಹೆದರಿ ಓಡಿಹೋಗಿದ್ದಾರೆ. ಈ ವೇಳೆ ಇಬ್ಬರು ನದಿ ನೀರಿಗೆ ಹಾರಿದ್ದಾರೆ. ಅವರ ಪತ್ತೆಗಾಗಿ ಕಾರ್ಯಾಚರಣೆ ನಡೆದಿದೆ.ಪೊಲೀಸರು, ಅಗ್ನಿಶಾಮಕ ದಳದವರು ಹಾಗೂ ಈಜು ತಜ್ಞರು ಕಾರ್ಯಾಚರಣೆಯಲ್ಲಿ ತೊಡಗಿದ್ದಾರೆ. ಮಂಜುನಾಥ ಲಕ್ಷ್ಮಣ ಬಂಡಿವಡ್ಡರ (28) ಹಾಗೂ ಸಮೀರ ಮಹಮದಸಾಬ ಬಟಕುರ್ಕಿ (23) ನದಿಗೆ …

Read More »

ಬೆಳಗಾವಿ ಲೋಕಸಭೆ ಉಪಚುನಾವಣೆ: ಮತಗಟ್ಟೆಗಳ ತಯಾರಿ ನಡೆಸಿರುವ ಅಧಿಕಾರಿಗಳು

ಬೆಳಗಾವಿ: ಬೆಳಗಾವಿ ಲೋಕಸಭಾ ಕ್ಷೇತ್ರದ ಉಪ ಚುನಾವಣೆಗಾಗಿ ಮತಗಟ್ಟೆಗಳನ್ನು ತಯಾರಿಸುವ ಕಾರ್ಯವನ್ನು ಜಿಲ್ಲಾಡಳಿತ ಆರಂಭಿಸಿದೆ. ಚುನಾವಣಾ ದಿನಾಂಕ ಘೋಷಣೆಗೆ ಕ್ಷಣಗಣನೆ ಆರಂಭವಾಗಿದೆ ಎನ್ನಲಾಗುತ್ತಿದ್ದು, ಚುನಾವಣಾ ಆಯೋಗದ ಸೂಚನೆಯಂತೆ ಅಧಿಕಾರಿಗಳು, ವಿವಿಧ ಸರ್ಕಾರಿ ಶಾಲೆಗಳಿಗೆ ಭಾನುವಾರ ಭೇಟಿ ನೀಡಿ ಅಲ್ಲಿನ ಮೂಲ ಸೌಲಭ್ಯಗಳು ಮತ್ತು ಮತಗಟ್ಟೆಯಾಗಿ ಪರಿವರ್ತಿಸಲು ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಮಾಹಿತಿ ಸಂಗ್ರಹಿಸಿದರು. ಕ್ಷೇತ್ರವನ್ನು ಪ್ರತಿನಿಧಿಸುತ್ತಿದ್ದ ರೈಲ್ವೆ ಖಾತೆ ರಾಜ್ಯ ಸಚಿವರಾಗಿದ್ದ ಸುರೇಶ ಅಂಗಡಿ ಅವರು ಸೆ. 23ರಂದು ಕೋವಿಡ್‌ನಿಂದಾಗಿ …

Read More »

ವಾಲ್ಮೀಕಿ ಜಾತ್ರೆಯಲ್ಲಿ ಮೀಸಲಾತಿ ಹೆಚ್ಚಳ ಕುರಿತು ಚರ್ಚೆ : ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ

ಗೋಕಾಕ : ವಾಲ್ಮೀಕಿ ಸಮಾಜಕ್ಕೆ ಮೀಸಲಾತಿ ಹೆಚ್ಚಳ ಮಾಡಬೇಕು ಎಂಬ ಒತ್ತಾಯ ಹಲವು ವರ್ಷಗಳಿಂದಲೂ ಇದೆ. ಆ ವಿಷಯವಾಗಿ ವಾಲ್ಮೀಕಿ ಜಾತ್ರೆಯಲ್ಲಿ ಚರ್ಚೆ ನಡೆಯಲಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಹೇಳಿದರು. ಇಲ್ಲಿನ ಹಿಲ್ ಗಾರ್ಡನ್ ಕಚೇರಿಯಲ್ಲಿ ಮಾತನಾಡಿದ ಅವರು, ಪ್ರತಿ ವರ್ಷದಂತೆ ಈ ಬಾರಿಯೂ ಸಹ ದಾವಣಗೆರೆ ಜಿಲ್ಲೆ ಹರಿಹರ ತಾಲ್ಲೂಕು ರಾಜನಹಳ್ಳಿ ಗ್ರಾಮದಲ್ಲಿರುವ ವಾಲ್ಮೀಕಿ ಗುರುಪೀಠದಲ್ಲಿ ಫೆಬ್ರವರಿ 8 ಮತ್ತು 9 ರಂದು ಮಹರ್ಷಿ ವಾಲ್ಮೀಕಿ …

Read More »

ಲಕ್ಷ್ಮೀನ ಶಿಕ್ಷಣ ಸಂಸ್ಥೆಯಿಂದ ಕ್ರೀಡೋ ಸಂಸ್ಥೆಯ ಮಾರ್ಗದರ್ಶನದಲ್ಲಿ ಆರಂಭಗೊಂಡ ಆಂಗ್ಲ ಮಾಧ್ಯಮ ಶ್ರೀ ಲಕ್ಷ್ಮಣರಾವ ಜಾರಕಿಹೊಳಿ ಪ್ರೀ-ಪ್ರಾಯಮರಿ ಶಾಲೆಯ ಉದ್ಘಾಟನೆಯನ್ನು ಸುವರ್ಣಾ ಭೀಮಶಿ ಜಾರಕಿಹೊಳಿ ನೆರವೇರಿಸಿದರು.

  ಗೋಕಾಕ: ಮಕ್ಕಳಿಗೆ ಉಪಕರಣಗಳೊಂದಿಗೆ ಪ್ರಾಯೋಗಿಕವಾಗಿ ಕಲಿಸುವ ಕಲಿಕಾ ಕ್ರಮವು ಅತ್ಯಂತ ಪರಿಣಾಮಕಾರಿ ಆಗಿರುತ್ತದೆ ಎಂದು ಬೆಂಗಳೂಇನ ಕ್ರೀಡೋ ಸಂಸ್ಥೆಯ ಆಯೇಷಾ ಶೇಖ ಹೇಳಿದರು. ಶನಿವಾರ ನಗರದ ಲಕ್ಷ್ಮೀ ಎಜ್ಯುಕೇಶನ್ ಟ್ರಸ್ಟಿನಿಂದ ಕ್ರೀಡೋ ಸಂಸ್ಥೆಯ ಮಾರ್ಗದರ್ಶನದಲ್ಲಿ ಆರಂಭಗೊಂಡ ಆಂಗ್ಲ ಮಾಧ್ಯಮ ಶ್ರೀ ಲಕ್ಷ್ಮಣರಾವ ಜಾರಕಿಹೊಳಿ ಪ್ರೀ-ಪ್ರಾಯಮರಿ ಶಾಲೆಯ ಉದ್ಘಾಟನಾ ಕಾರ್ಯಕ್ರಮದಲ್ಲಿ ಅತಿಥಿಗಳಾಗಿ ಪಾಲ್ಗೊಂಡು ಮಾತನಾಡುತ್ತಿದ್ದ ಅವರು, ಇಂದಿನ ತಾಂತ್ರಿಕ ಯುಗದಲ್ಲಿ ಮಕ್ಕಳ ಬೌದ್ಧಿಕ ಮಟ್ಟವನ್ನು ಹೆಚ್ಚಿಸಲು ಅಧುನಿಕ ಕಲಿಕಾ ಕ್ರಮಗಳನ್ನು …

Read More »

ಯಾವುದೆ ಆಪತ್ತಿರಲಿ ತುರ್ತು ಸಂಖ್ಯೆ 112 ಕರೆ ಮಾಡುವುದು ನೆನಪಿರಲಿ : PSI ನಾಗರಾಜ ಖಿಲಾರೆ.

  ಗೋಕಾಕ : ಗೋಕಾಕ ತಾಲೂಕಿನ ಕೊಣ್ಣೂರಲ್ಲಿ ಶನಿವಾರ ಗೋಕಾಕ ಗ್ರಾಮೀಣ ಪೋಲಿಸ್ ಠಾಣೆಯ ಪಿ,ಎಸ್,ಆಯ್, ನಾಗರಾಜ ಖಿಲಾರೆಯವರು ಶ್ರೀಲಕ್ಷ್ಮಿ ದೇವಸ್ಥಾನದಲ್ಲಿ ಜನಸಂಪರ್ಕ ಸಭೆ ಮತ್ತು ಅಂಬೇಡ್ಕರ ನಗರದಲ್ಲಿರುವ ಶ್ರೀ ದುರ್ಗಾದೇವಿ ದೇವಸ್ಥಾನದಲ್ಲಿ ನಡೆದ ದಲಿತ ಸಬೆ ಮತ್ತು ಒಂದೆ ದೇಶ ಒಂದೆ ತುರ್ತು ಸಂಖ್ಯೆಯ ಅರಿವು ಮೂಡಿಸುವ ಕಾರ್ಯಕ್ರಮದಲ್ಲಿ ಸ್ಥಳಿಯರನ್ನು ಉದ್ದೇಶಿಸಿ ಮಾತನಾಡಿ ತಮ್ಮ ಸುತ್ತಮುತ್ತಲು  ಅಗ್ನಿ ದುರಂತ ಸಂಭವಿಸಿದ್ದಲ್ಲಿ,ಅಪಘಾತವಾಗಿದ್ದಲ್ಲಿ,ಅಪರಾಧವಾಗಿದ್ದಲ್ಲಿ ಹಾಗೂ ವಿನಾಕಾರಣ ಯಾರಾದರೂ ಅಣ್ಯ ವ್ಯಕ್ತಿಗಳು ಕುಡಿದು …

Read More »

ರೈತ ಬಾಂಧವರು ಮನಸ್ಪೂರ್ತಿಯಾಗಿ ಶ್ರೀ ಸಂತೋಷ್ ಜಾರಕಿಹೊಳಿ ಅವರಿಗೆ ಸನ್ಮಾನಿಸಿದರು ….

ಗೋಕಾಕ: ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಸುಮಾರು ದಿನಗಳಿಂದ ಚರ್ಚೆ ಯಲ್ಲಿ ಇದ್ದ ಈ ಶುಗರ್ ಫ್ಯಾಕ್ಟರಿ .. ಇದರ ಬಗ್ಗೆ ನಾವು ಹೇಳುವುದಕ್ಕಿಂತ ಜನ ಹೇಳೋದು ಕೇಳಿದ್ರೆ ಬಹುಶ ಈ ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಚೇರ್ಮನ್ ಸಂತೋಷ್ ಜಾರಕಿಹೊಳಿ ಅವರಿಗೆ ಸಂತೋಷ್ ಜಾರಕಿಹೊಳಿ ಅವರಿಗೆ ಖುಷಿ ಆಗಬಹುದು. ಒಂದು ಈ ಕಾರ್ಖಾನೆ ರಾಜ್ಯದಲ್ಲಿಯೇ ಮಾದರಿ ಯಾಕೆ ಗೊತ್ತಾ ಪ್ರಥಮ್ ವಾಗಿ ಅನ್ನದಾತರಿಗೆ ಬರಬೇಕಾದ ಬಿಲ್ಲನ್ನು ಕೊಟ್ಟು ಮಾದರಿ ಯಾಗಿದೆ. ಇನ್ನು …

Read More »

ಬಿಪಿಎಲ್‌ ಕಾರ್ಡ್‌ಗೆ ಆನ್‌ಲೈನ್ ಮೂಲಕ ಅರ್ಜಿ: ಉಮೇಶ ಕತ್ತಿ

ಬಿಪಿಎಲ್‌ ಕಾರ್ಡ್‌ ಪಡೆಯಲು ಆನ್‌ಲೈನ್ ಮೂಲಕವೇ ಅರ್ಜಿ ಸಲ್ಲಿಸಬೇಕು ಎಂದು ಆಹಾರ ಸಚಿವ ಉಮೇಶ ಕತ್ತಿ ತಿಳಿಸಿದರು. ಗ್ರಾಮ ಪಂಚಾಯಿತಿ ಚುನಾವಣೆ ಸಂದರ್ಭದಲ್ಲಿ ಆನ್‌ಲೈನ್‌ ಮೂಲಕ ಅರ್ಜಿಗಳನ್ನು ಸಲ್ಲಿಸುವುದಕ್ಕೆ ತಡೆ ನೀಡಲಾಗಿತ್ತು. ಈಗ ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಒಂದು ವೇಳೆ ಸರ್ವರ್‌ನಲ್ಲಿ ಯಾವುದೇ ಸಮಸ್ಯೆ ಇದ್ದರೆ ಇದೇ 15 ರೊಳಗೆ ಸರಿಪಡಿಸಿ ಬಿಪಿಎಲ್‌ ಕಾರ್ಡ್‌ ವಿತರಿಸಲಾಗುವುದು ಎಂದು ಸಚಿವರು ಭರವಸೆ ನೀಡಿದರು.

Read More »