Breaking News

ಬೆಳಗಾವಿ

ಮಹಾ ಸಿಎಂ ಉದ್ಧವ್ ಠಾಕ್ರೆ ಟ್ವೀಟ್ ಖಂಡಿಸಿ..ಬೆಳಗಾವಿಯಲ್ಲಿ ಉದ್ಧವ್ ಭಾವಚಿತ್ರಕ್ಕೆ ಚಪ್ಪಲಿ ಸೇವೆ..!

ಬೆಳಗಾವಿ ಮಹಾರಾಷ್ಟ್ರಕ್ಕೆ ಸೇರೋವರೆಗೂ ಹೋರಾಡೋಣ ಎಂದು ಮಹಾರಾಷ್ಟ್ರ ಸಿಎಂ ಉದ್ಧವ್ ಠಾಕ್ರೆ ವಿವಾದಾತ್ಮಕ ಟ್ವೀಟ್ ಮಾಡುವ ಮೂಲಕ ಕನ್ನಡಿಗರ ಕೆಂಗಣ್ಣಿಗೆ ಗುರಿಯಾಗಿದ್ದಾರೆ. ಅಲ್ಲದೇ ಉದ್ಧವ್ ಠಾಕ್ರೆ ಹೇಳಿಕೆ ಖಂಡಿಸಿ ರಾಜ್ಯಾಧ್ಯಂತ ವಿವಿಧ ಕನ್ನಡ ಸಂಘಟನೆಗಳು ಪ್ರತಿಭಟನೆಗೆ ಮುಂದಾಗಿವೆ. ಅದೇ ರೀತಿ ಬೆಳಗಾವಿಯಲ್ಲಿಯೂ ಕನ್ನಡಪರ ಸಂಘಟನೆಗಳು ಉದ್ಧವ್ ಠಾಕ್ರೆ ಭಾವಚಿತ್ರಕ್ಕೆ ಚಪ್ಪಲಿ ಸೇವೆ ಮಾಡಿ, ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿವೆ. ಗಡಿ ವಿಚಾರದಲ್ಲಿ ಉರಿಯುವ ಬೆಂಕಿಗೆ ತುಪ್ಪ ಸುರಿಯುವ ಕೆಲಸವನ್ನು ಮಹಾರಾಷ್ಟ್ರ …

Read More »

ಗಡಿ ವಿಚಾರದಲ್ಲಿ ಮಹಾ ಸಿಎಂ ಉದ್ಧವ್ ಉದ್ಧಟತನ ಪ್ರದರ್ಶನ..ಸಿಎಂ ಬಿಎಸ್‍ವೈ ಆಕ್ರೋಶ

ಮಹಾರಾಷ್ಟ್ರದ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರು ಮರಾಠಿ ಭಾಷೆ ಮತ್ತು ಸಂಸ್ಕøತಿ ಪ್ರಧಾನ ಪ್ರದೇಶಗಳನ್ನು ಮಹಾರಾಷ್ಟ್ರಕ್ಕೆ ಸೇರಿಸಿಕೊಳ್ಳುವ ಮಾತನಾಡಿರುವುದು ಅವರ ಉದ್ಧಟತನದ ಪ್ರದರ್ಶನವಾಗಿದೆ. ಇದು ಭಾರತೀಯ ಒಕ್ಕೂಟ ತತ್ವದ ವಿರುದ್ಧವಾದ ನಿಲುವು. ಮಹಾಜನ್ ವರದಿಯೇ ಅಂತಿಮ ಎಂಬುದು ಎಲ್ಲರೂ ಬಲ್ಲ ಸತ್ಯ ಎಂದು ಉದ್ಧವ್ ಠಾಕ್ರೆಗೆ ಸಿಎಂ ಬಿ.ಎಸ್.ಯಡಿಯೂರಪ್ಪ ತಿರುಗೇಟು ನೀಡಿದರು. ಮಹಾರಾಷ್ಟ್ರ ಸಿಎಂ ಉದ್ಧವ್ ಠಾಕ್ರೆ ಹೇಳಿಕೆಗೆ ಟ್ವೀಟ್ ಮೂಲಕ ತಕ್ಕ ಉತ್ತರ ನೀಡಿರುವ ಸಿಎಂ ಬಿಎಸ್‍ವೈ ಹೀಗಿರುವಾಗ …

Read More »

ಬೆಳಗಾವಿ ಒಂದಿಂಚೂ ಜಾಗ ಬಿಡುವ ಪ್ರಶ್ನೆ ಇಲ್ಲ: ಸಚಿವ ರಮೇಶ ಜಾರಕಿಹೊಳಿ ಮಹಾ ಸಿಎಂಗೆ ತಿರುಗೇಟು!!

ಬೆಳಗಾವಿ: ಗಡಿ ವಿಚಾರದಲ್ಲಿ ಮಹಾರಾಷ್ಟ್ರ ಸರ್ಕಾರ ಅನಗತ್ಯ ಗೊಂದಲ ಸೃಷ್ಟಿಸುವ ಕೆಲಸ ಮಾಡುತ್ತಿದೆ. ಬೆಳಗಾವಿ ಯಾವತ್ತಿದ್ದರೂ ಕರ್ನಾಟಕ ರಾಜ್ಯದ ಅವಿಭಾಜ್ಯ ಅಂಗ ಎಂದು ಜಲಸಂಪನ್ಮೂಲ ಸಚಿವ ರಮೇಶ ಜಾರಕಿಹೊಳಿ ಮಹಾರಾಷ್ಟ್ರ ಸಿಎಂಗೆ ತಿರುಗೇಟು ನೀಡಿದ್ದಾರೆ. ಮಹಾಜನ್ ವರದಿಯನ್ನು ಈಗಾಗಲೇ ಒಪ್ಪಿಕೊಂಡಾಗಿದೆ. ಮಹಾರಾಷ್ಟ್ರ ಸರ್ಕಾರವು ಗಡಿ ಭಾಗದ ಜನರಲ್ಲಿ ಅನಗತ್ಯ ಗೊಂದಲ ಸೃಷ್ಟಿಸುವ ಪ್ರಯತ್ನ ಮಾಡುವುದು ಸರಿಯಲ್ಲ. ಮಹಾರಾಷ್ಟ್ರ ಸರ್ಕಾರ ತನ್ನ ವೈಫಲ್ಯ ಮರೆಮಾಚಿಕೊಳ್ಳಲು ಗಡಿ ವಿಷಯ ಪ್ರಸ್ತಾಪಿಸಿ ಜನರ ಭಾವನೆ …

Read More »

ಕುಟುಂಬ ರಾಜಕಾರಣ, ಅಧಿಕಾರದ ವ್ಯಾಮೋಹ ಬಿಟ್ಟು ಪಕ್ಷಕ್ಕೆ ನಿಷ್ಠೆಯಿಂದ ಕೆಲಸ ಮಾಡಿ: ಅಮಿತ್ ಷಾ ಸೂಚನೆ..!

ಬೆಳಗಾವಿ(ಜ.17)- ಕುಟುಂಬ ರಾಜಕಾರಣ ಕಾರಣದಿಂದಲೇ ದೇಶದ ಜನ ಕಾಂಗ್ರೆಸ್ ತಿರಸ್ಕಾರ ಮಾಡಿದ್ದಾರೆ. ನಮ್ಮ ಪಕ್ಷದ ಸಚಿವರು, ಶಾಸಕರು ಇದಕ್ಕೆ ಯಾವುದೇ ಕಾರಣಕ್ಕೂ ಅವಕಾಶ ಕೊಡಬಾರದು. ಅಧಿಕಾರದ ವ್ಯಾಮೋಹ ಬಿಟ್ಟು ಪಕ್ಷದ ಕೆಲಸವನ್ನು ನಿಷ್ಠೆಯಿಂದ ಮಾಡಬೇಕು ಎಂದು ಕಾರ್ಯಕರ್ತರಿಗೆ ಇಂದು ಕೇಂದ್ರ ಗೃಹ ಸಚಿವ ಅಮಿತ್ ಷಾ (Amit Shah) ಸೂಚನೆ ನೀಡಿದ್ದಾರೆ. ಬೆಳಗಾವಿಯಲ್ಲಿ ಜನಸೇವಕ ಸಮಾರಂಭದ ಬಳಿಕ ಬೆಳಗಾವಿ ನಗರ, ಬೆಳಗಾವಿ ಗ್ರಾಮೀಣ ಹಾಗೂ ಚಿಕ್ಕೋಡಿ ಬಿಜೆಪಿ ಸಂಘಟನಾತ್ಮಕ ಜಿಲ್ಲೆ …

Read More »

ಅವರ ಮನವೊಲಿಕೆಗೆ ಮುಂದಾದ ಪೊಲೀಸರ ಮಾತು ಕೇಳದೆ ರೈತರು ಪ್ರತಿಭಟನೆ ಮುಂದುವರೆಸಿದ್ದರು. ಬಳಿಕ ಮಾರ್ಕೆಟ್ ಠಾಣೆಯ ಪೊಲೀಸರು ರೈತರನ್ನು ವಶಕ್ಕೆ ಪಡೆದಿದ್ದಾರೆ.

ಬೆಳಗಾವಿ, ಜ.17- ನಗರದಲ್ಲಿ ಆಯೋಜಿಸಲಾಗಿದ್ದ ಜನಸೇವಕ ಸಮಾವೇಶಕ್ಕೆ ಆಗಮಿಸಿದ ಕೇಂದ್ರ ಗೃಹ ಸಚಿವ ಅಮಿತ್ ಷಾ ವಿರುದ್ಧ ಬೆಳಗ್ಗೆಯಿಂದ ಪ್ರತಿಭಟನೆ ನಡೆಸುತ್ತಿದ್ದ ರೈತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಕೃಷಿ ಕಾಯ್ದೆ ತಿದ್ದುಪಡಿ ಮಸೂದೆ ಖಂಡಿಸಿ ಪ್ರತಿಭಟಿಸುತ್ತಿರುವ ರೈತರನ್ನು ಪರಿಗಣಿಸದ ಅಮಿತ್ ಶಾ ಅವರ ಬೆಳಗಾವಿ ಆಗಮನವನ್ನು ವಿರೋಧಿಸಿ ರೈತರು ಬೆಳಿಗ್ಗೆ ನಗರದ ಚನ್ನಮ್ಮ ವೃತ್ತದಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಅರೆ ಬೆತ್ತಲೆ ಉರುಳು ಸೇವೆ ಮಾಡಿ …

Read More »

ಕಾನೂನು ಉಲ್ಲಂಘನೆ ಬಿಜೆಪಿಗೆ ಹೊಸದಲ್ಲ: ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ

*ಹೆಚ್ಚಿನ ಸುದ್ದಿಗಾಗಿ ಲಕ್ಷ್ಮಿ ನ್ಯೂಸ್ ಚಾನಲ್ ಅನ್ನ subscribe ಹಾಗೂ ಕ್ಷಣ ಕ್ಷಣದ ಸುದ್ದಿಗಳಿಗಾಗಿ ಲಕ್ಷ್ಮಿ ನ್ಯೂಸ್ ವೆಬ್ ಸೈಟ್ ಫಾಲೋ ಮಾಡಿ*?? *ಸುದ್ದಿ ಮತ್ತು ಜಾಹೀರಾತುಗಳಿಗೆ ಸಂಪರ್ಕಿಸಿರಿ*: *8123967576* *Laxmi News*     ಬೆಳಗಾವಿ : ಬಿಜೆಪಿಯ ಕೇಂದ್ರ ಹಾಗೂ ರಾಜ್ಯ ಸರ್ಕಾರ ಅಧಿಕಾರ ದುರುಪಯೋಗ ಪಡೆಸಿಕೊಂಡು ಬೆಳಗಾವಿಯಲ್ಲಿ’ ಜನಸೇವಕ ಸಮಾವೇಶ’ ಹಮ್ಮಿಕೊಂಡಿದ್ದು, ಕಾನೂನು ಉಲ್ಲಂಘನೆ ಮಾಡುವುದೇ ಅವರ ಕೆಲಸವಾಗಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ್ …

Read More »

ವಿಕಲಚೇತನರು ದೇವರ ಮಕ್ಕಳಿದ್ದಂತೆ,

ಷೇತ್ರದ ವಿಕಲಚೇತನರ ವಿಶೇಷ ಕಾಳಜಿಯಡಿ ಹಾಗೂ ಅವರ ಸುಗಮ ಸಂಚಾರ ಮತ್ತು ಇತರ ಸ್ಥಳಗಳಿಗೆ ಸರಾಗವಾಗಿ ಸಾಗಿ ಹೋಗುವ ಹಿತದೃಷ್ಟಿಯಿಂದ ” ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ” ಇಲಾಖೆಯಡಿ 2018-19 ಹಾಗೂ 2019-20 ರ ಸಾಲಿನ ಅರ್ಜಿಗಳನ್ನು ಪರಿಗಣಿಸಿ ಅದರಂತೆ ಬಿಡುಗಡೆಗೊಂಡ ಯಂತ್ರಚಾಲಿತ ದ್ವಿಚಕ್ರ ವಾಹನಗಳನ್ನು ಕ್ಷೇತ್ರದ ಒಟ್ಟು ಹದಿನೈದು ಜನ ಫಲಾನಭವಿಗಳಿಗೆ ಹಸ್ತಾಂತರಿಸಿ ಅವರ ಮುಖದಲ್ಲಿ ಮಂದಹಾಸವನ್ನು ಮೂಡಿಸಿ ತಕ್ಕಮಟ್ಟಿಗೆ ಆಸರೆಯ ಬದುಕನ್ನು ಕಟ್ಟಿಕೊಟ್ಟಿದ್ದೇನೆ. ವಿಕಲಚೇತನರು …

Read More »

ಗೋಕಾಕ: ಕೋವಿಡ್ ಲಸಿಕೆ ಕೇಂದ್ರಕ್ಕೆ ಚಾಲನೆ ನೀಡಿದ ಸಚಿವ ರಮೇಶ ಜಾರಕಿಹೊಳಿ

ಗೋಕಾಕ: ಇಲ್ಲಿನ ತಾಲೂಕು ಆಸ್ಪತ್ರೆ ಆವರಣದಲ್ಲಿ ಶನಿವಾರ ಜಲಸಂಪನ್ಮೂಲ ಸಚಿವ ರಮೇಶ ಜಾರಕಿಹೊಳಿ ಅವರು ಕೋವಿಡ್ ಲಸಿಕಾ ಕೇಂದ್ರಕ್ಕೆ ಚಾಲನೆ ನೀಡಿದರು. ಕೋವಿಡ್ ಸೋಂಕಿನಿಂದ ಇಡೀ ವಿಶ್ವವೇ ತತ್ತರಿಸಿ ಹೋಗಿದೆ. ಜನ ಸಾಮಾನ್ಯರು ತುಂಬ ಸಂಕಷ್ಟಕ್ಕೀಡಾಗಿದ್ದರು. ಕೋವಿಡ್ ಕಾಲದಲ್ಲಿ ವೈದ್ಯರು, ಆಶಾ ಕಾರ್ಯಕರ್ತರ ಕೊಡುಗೆ ಅಪಾರವಾಗಿದೆ. ನಿರಂತರ ಶ್ರಮವಹಿಸಿ ವಿಜ್ಞಾನಿಗಳು ಕೋವಿಶಿಲ್ಡ್ ಲಸಿಕೆ ತಯಾರಿಸಿದ್ದು, ದೇಶ್ಯಾದ್ಯಂತ ಲಸಿಕೆ ವಿತರಣೆಗೆ ಚಾಲನೆ ನೀಡಲಾಗಿದೆ. ಈ ಯೋಜನೆ ಯಶಸ್ವುಯಾಗಲಿ ಎಂದು ಹಾರೈಸಿದರು. ಈ …

Read More »

ಸಚಿವರಾದ ಶ್ರೀ ರಮೇಶ ಜಾರಕಿಹೊಳಿ ಅವರಿಂದ ರಾಮಮಂದಿರ ನಿಧಿ ಸಮರ್ಪಣಾ ಅಭಿಯಾನಕ್ಕೆ ಚಾಲನೆ

  ರಾಮಮಂದಿರ ತೀರ್ಥಕ್ಷೇತ್ರ ಟ್ರಸ್ಟ್ ಇದರ ವತಿಯಿಂದ ಅಯೋಧ್ಯೆಯಲ್ಲಿ ನಿರ್ಮಾಣವಾಗುತ್ತಿರುವ ಪ್ರಭು ಶ್ರೀ ರಾಮಚಂದ್ರನ ಭವ್ಯ ಮಂದಿರ.ನಿಧಿ ಸಮರ್ಪಣಾ ಅಭಿಯಾನವನ್ನು ಗೋಕಾಕ ನಗರದ ವಾರ್ಡಗಳಿಗೆ ಇಂದು ಅಧಿಕೃತವಾಗಿ ಸಚಿವರಾದ ಶ್ರೀ ರಮೇಶ ಜಾರಕಿಹೊಳಿಯವರು ಗೋಕಾಕ ಜಾತ್ರಾ ಕಮಿಟಿ ವತಿಯಿಂದ 1ಲಕ್ಷರೂ ದೇಣಿಗೆ ನೀಡಿ ಅಭಿಯಾನಕ್ಕೆ ಚಾಲನೆ ನೀಡಿದರು ಕಾರ್ಯಕ್ರಮದ ದಿವ್ಯ ಸಾನಿಧ್ಯವನ್ನು ಶೂನ್ಯ ಸಂಪಾದ ಮಠದ ಶ್ರೀ ಮುರುಘರಾಜೇಂದ್ರ ಸ್ವಾಮೀಜಿ ವಹಿಸಿದ್ದರು ಮುಖ್ಯ ಅತಿಥಿಗಳಾಗಿ ಮಾನ್ಯ ವಿಭಾಗ ಸಂಘ ಚಾಲಕರಾದ …

Read More »

ನಾಳೆಯಿಂದ ಕೋವಿಡ್ ಲಸಿಕೆ ಹಂಚಿಕೆ: ಗೋಕಾಕನಲ್ಲಿ 45 ಕೇಂದ್ರ ಆರಂಭ

ಗೋಕಾಕ: ನಾಳೆಯಿಂದ ತಾಲೂಕಿನಾದ್ಯಂತ ಕೋವಿಡ್ ಲಸಿಕಾ ಕೇಂದ್ರ ಆರಂಭವಾಗಲಿದೆ ಎಂದು ತಾಲೂಕು ಆರೋಗ್ಯಾಧಿಕಾರಿ ಡಾ. ರವೀಂದ್ರ ಅಂಟಿನ ಹೇಳಿದರು. ನಗರದಲ್ಲಿ ಇಂದು ತಾಲೂಕು ಮುಖ್ಯವೈದ್ಯಾಧಿಕಾರಿಗಳಾದ ಡಾ. ರವೀಂದ್ರ ಅಂಟಿನ, ಡಾ. ಮುತ್ತಪ್ಪ ಕೊಬ್ಬದ ಜಂಟಿ ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಿದರು. ತಾಲೂಕಿನಾದ್ಯಂತ ಸುಮಾರು 45 ಕಡೆ ಕೋವಿಡ್ ಲಸಿಕಾ ಕೇಂದ್ರ ಆರಂಭಿಸಲಾಗಿದೆ. ವೈದ್ಯರು, ಆಶಾ ಕಾರ್ಯಕರ್ತರು ಹಾಗೂ ಅಂಗನವಾಡಿ ಸಿಬ್ಬಂದಿ ಬಳಕೆ ಮಾಡಿಕೊಂಡು ಪ್ರತಿಯೊಬ್ಬರಿಗೂ ಲಸಿಕೆ ವಿತರಿಸುವ ಕೆಲಸ ಮಾಡಲಾಗುತ್ತದೆ …

Read More »