ಬೆಳಗಾವಿ: ಕೋವಿಡ್-19 ಹಿನ್ನೆಲೆಯಲ್ಲಿ ಈ ಬಾರಿ ಜನವರಿ 26 ರಂದು ಜಿಲ್ಲಾ ಕ್ರೀಡಾಂಗಣದಲ್ಲಿ ಸರಳವಾಗಿ ಮತ್ತು ಅರ್ಥಪೂರ್ಣವಾಗಿ ಸರ್ಕಾರದ ಮಾರ್ಗಸೂಚಿ ಪ್ರಕಾರ ಗಣರಾಜ್ಯೋತ್ಸವವನ್ನು ಆಚರಿಸಲಾಗುವುದು ಎಂದು ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ತಿಳಿಸಿದರು. ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ಬುಧವಾರ(ಜ.13) ನಡೆದ ಗಣರಾಜ್ಯೋತ್ಸವ ಪೂರ್ವಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಇದು ರಾಷ್ಟ್ರೀಯ ಹಬ್ಬವಾಗಿರುವುದರಿಂದ ಎಲ್ಲ ಸರ್ಕಾರಿ ಅಧಿಕಾರಿಗಳು ಮತ್ತು ಸಿಬ್ಬಂದಿ ಕಡ್ಡಾಯವಾಗಿ ಹಾಜರಿರಬೇಕು. ಪರೇಡ್ ಗೆ ಸಂಬಂಧಿಸಿದಂತೆ ಎಲ್ಲ ಸಿದ್ಧತೆಗಳನ್ನು ಮಾಡಿಕೊಳ್ಳಬೇಕು …
Read More »ಉಮೇಶ ಕತ್ತಿ ಸೇರಿ ಏಳು ಜನರಿಗೆ ಸಚಿವ ಭಾಗ್ಯ
ಬೆಳಗಾವಿ ಜಿಲ್ಲೆಯ ಪ್ರಭಾವಿ ನಾಯಕ ಉಮೇಶ ಕತ್ತಿ ಅವರಿಗೆ ಸಚಿವ ಸ್ಥಾನ ಒಲಿದು ಬಂದಿದೆ. ನೂತನ ಸಚಿವರ ಪಟ್ಟಿ ರಾಜಭವನ ತಲುಪಿದ್ದು, ಕತ್ತಿ ಅವರೊಂದಿಗೆ ಎಂಟಿಬಿ ನಾಗರಾಜ್, ಆರ್.ಶಂಕರ್, ಅರವಿಂದ ಲಿಂಬಾವಳಿ, ಎಸ್.ಅಂಗಾರ, ಮುರುಗೇಶ ನಿರಾಣಿ, ಸಿ.ಪಿ.ಯೋಗೇಶ್ವರ ಸಚಿವರಾಗುತ್ತಿದ್ದಾರೆ. ಇನ್ನೂ ಒಂದೆರಡು ಬದಲಾವಣೆ ನಿರೀಕ್ಷಿಸಲಾಗಿದೆ. ಬಿಜೆಪಿ ಸರ್ಕಾರದಲ್ಲಿ ನೂತನವಾಗಿ ಸಂಪುಟ ಸೇರುವ ಸಚಿವರ ಮಾಹಿತಿ. 1- ಉಮೇಶ ಕತ್ತಿ 2- ಎಂಟಿಬಿ ನಾಗರಾಜ 3- ಆರ್.ಶಂಕರ 4- ಎಸ್.ಅಂಗಾರ 5- …
Read More »ಸೆನ್ಸೆಕ್ಸ್, ನಿಫ್ಟಿ ಹೊಸ ಎತ್ತರದಲ್ಲಿ ದಿನದ ವಹಿವಾಟು ಅಂತ್ಯ
ಮುಂಬೈ: ಮುಂಬೈ ಷೇರು ವಿನಿಮಯ ಕೇಂದ್ರ(ಬಿಎಸ್‌ಇ) ಮತ್ತು ರಾಷ್ಟ್ರೀಯ ಷೇರು ವಿನಿಮಯ ಕೇಂದ್ರ(ಎನ್‌ಎಸ್‌ಇ)ಗಳ ಸಂವೇದಿ ಸೂಚ್ಯಂಕಗಳು ಸತತ ಮೂರನೇ ವಹಿವಾಟು ದಿನವಾದ ಮಂಗಳವಾರವೂ ಸಾರ್ವಕಾಲಿಕ ಗರಿಷ್ಠ ಮಟ್ಟದಲ್ಲಿ ದಿನದ ವಹಿವಾಟು ಅಂತ್ಯಗೊಳಿಸಿವೆ. ಸೆನ್ಸೆಕ್ಸ್ 248 ಅಂಕ ಏರಿಕೆ ಕಂಡು ದಾಖಲೆಯ ಗರಿಷ್ಠ 49,517 ಕ್ಕೆ ತಲುಪಿದ್ದರೆ, ನಿಫ್ಟಿ 79 ಅಂಕ ಏರಿಕೆ ಕಂಡು 14,563 ಕ್ಕೆ ತಲುಪಿದೆ. ಆರಂಭಿಕ ವಹಿವಾಟಿನಲ್ಲಿ ಸೂಚ್ಯಂಕಗಳು ಇಳಿಕೆ ಕಂಡರೂ ನಂತರ ಬ್ಯಾಂಕಿಂಗ್ ಷೇರುಗಳ ಖರೀದಿ …
Read More »ಮಹೇಶ ಫೌಂಡೇಶನ್ ನೂತನ ವೆಬ್‌ಸೈಟ್ ಗೆ ಚಾಲನೆ ನೀಡಿದ ರಾಹುಲ್, ಪ್ರಿಯಾಂಕಾ ಜಾರಕಿಹೊಳಿ
ಬೆಳಗಾವಿ: ಮಹೇಶ ಫೌಂಡೇಶನ ಸಂಸ್ಥೆಯ ‘ಪ್ರಯತ್ನ’ ಎಂಬ ನೂತನ ವೆಬ್‌ಸೈಟ್ ಅನ್ನು ಸತೀಶ ಶುಗರ್ಸ್ ನಿರ್ದೇಶಕರಾದ ರಾಹುಲ್ ಹಾಗೂ ಪ್ರಿಯಾಂಕ್ ಜಾರಕಿಹೊಳಿ ಬಿಡುಗಡೆಗೊಳಿಸಿದರು. ಇಲ್ಲಿನ ಕಣಬರ್ಗಿ ಮಹೇಶ ಪೌಂಡೇಶನ ಕಚೇರಿಯಲ್ಲಿ ಮಂಗಳವಾರ ಹಮ್ಮಿಕೊಳ್ಳಲಾಗಿದ್ದ ರಾಷ್ಟ್ರೀಯ ಯುವ ದಿನಾಚರಣೆ, ಸ್ವಾಮಿ ವಿವೇಕಾನಂದ ಜಯಂತೋತ್ಸವ ಕಾರ್ಯಕ್ರಮದಲ್ಲಿ ಸಂಸ್ಥೆಯ ನೂತನ ವೆಬ್ ಸೈಟ್ ಗೆ ಚಾಲನೆ ನೀಡಿದರು. ಬಳಿಕ ಮಾತನಾಡಿದ ರಾಹುಲ್ ಜಾರಕಿಹೊಳಿ, ಸಮಾಜದ ಸೌಲಭ್ಯ ವಂಚಿತ ಸಮುದಾಯಗಳನ್ನು ಬೆಂಬಲಿಸುವ ಉದ್ದೇಶದಿಂದ …
Read More »ಬಳೋಬಾಳ : 27 ಲಕ್ಷ ರೂ. ವೆಚ್ಚದ ಪಶು ಚಿಕಿತ್ಸಾಲಯದ ನೂತನ ಕಟ್ಟಡಕ್ಕೆ ಗುದ್ದಲಿ ಪೂಜೆ ನೆರವೇರಿಸಿದ ನಾಗಪ್ಪ ಶೇಖರಗೋಳ
ಬಳೋಬಾಳ : 27 ಲಕ್ಷ ರೂ. ವೆಚ್ಚದ ಪಶು ಚಿಕಿತ್ಸಾಲಯದ ನೂತನ ಕಟ್ಟಡಕ್ಕೆ ಗುದ್ದಲಿ ಪೂಜೆ ನೆರವೇರಿಸಿದ ನಾಗಪ್ಪ ಶೇಖರಗೋಳ ಗೋಕಾಕ : ತಾಲೂಕಿನ ಬಳೋಬಾಳ ಗ್ರಾಮದಲ್ಲಿ ಪಶು ಚಿಕಿತ್ಸಾಲಯದ ನೂತನ ಕಟ್ಟಡಕ್ಕೆ ಸೋಮವಾರದಂದು ಅಡಿಗಲ್ಲು ಸಮಾರಂಭ ನೆರವೇರಿತು. ಶಾಸಕ ಹಾಗೂ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರ ಪ್ರಯತ್ನದಿಂದ ಬಳೋಬಾಳ ಪಶು ಚಿಕಿತ್ಸಾಲಯ ಹೊಸ ಕಟ್ಟಡಕ್ಕೆ 27 ಲಕ್ಷ ರೂ. ಅನುದಾನ ಬಿಡುಗಡೆಯಾಗಿದೆ. ಉತ್ತಮ ಗುಣಮಟ್ಟದ ಕಾಮಗಾರಿ ನಿಗದಿತ …
Read More »ಅದ್ಯಕ್ಷ,ಉಪಾದ್ಯಕ್ಷರ ಮೀಸಲಾತಿ ನಿಗದಿ ಮಾಡುವ ವೇಳಾಪಟ್ಟಿ
ಬೆಳಗಾವಿ- ಬೆಳಗಾವಿ ಜಿಲ್ಲೆಯ 14 ತಾಲ್ಲೂಕುಗಳ ಎಲ್ಲ ಗ್ರಾಮ ಪಂಚಾಯತಿ ಅದ್ಯಕ್ಷ,ಉಪಾದ್ಯಕ್ಷರ ಮೀಸಲಾತಿ ನಿಗದಿ ಮಾಡುವ ವೇಳಾಪಟ್ಟಿಯನ್ನು ಬೆಳಗಾವಿ ಜಿಲ್ಲಾಧಿಕಾರಿಗಳು ಪ್ರಕಟಿಸಿದ್ದಾರೆ. ಬೆಳಗಾವಿ ಜಿಲ್ಲೆಯ 14 ತಾಲ್ಲೂಕುಗಳ ತಹಶೀಲ್ದಾರರು ಕೂಡಲೇ ತಾಲ್ಲೂಕಾ ಕೇಂದ್ರಗಳಲ್ಲಿ ಮೀಸಲಾತಿ ನಿಗದಿ ಮಾಡಲು ಸ್ಥಳ ನಿಗದಿ ಮಾಡಿ,ಎಲ್ಲ ಸಿದ್ಧತೆಗಳನ್ನು ಮಾಡಿಕೊಳ್ಳುವಂತೆ ಸೂಚನೆ ನೀಡಿದ್ದಾರೆ. ಯಾವ ದಿನಾಂಕದಂದು ಯಾವ ತಾಲ್ಲೂಕಿನ ಗ್ರಾಮ ಪಂಚಾಯತಿಗಳ ಅದ್ಯಕ್ಷ ಉಪಾಧ್ಯಕ್ಷ ಸ್ಥಾನಗಳಿಗೆ,ಮೀಸಲಾತಿ ನಿಗದಿಮಾಡವ ವೇಳಾಪಟ್ಟಿಯನ್ನು ಜಿಲ್ಲಾಧಿಕಾರಿಗಳು ಹೊರಡೊಸಿದ್ದು,ಈ ಸಂಧರ್ಭದಲ್ಲಿ ಕಡ್ಡಾಯವಾಗಿ ಕೋವೀಡ್ …
Read More »ಬೆಳಗಾವಿ : ಕೃಷಿ ಕಾಯ್ದೆ ವಿರೋಧಿಸಿ ಪ್ರತಿಭಟನೆ
ಬೆಳಗಾವಿ: ಕೇಂದ್ರ ಸರ್ಕಾರದ ನೂತನ ಕೃಷಿ ಕಾಯ್ದೆಗಳನ್ನು ಹಿಂಪಡೆಯವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಪದಾಧಿಕಾರಿಗಳು ಸೋಮವಾರ ಪ್ರತಿಭಟನೆ ನಡೆಸಿದರು. ಇಲ್ಲಿನ ಜಿಲ್ಲಾಧಿಕಾರಿ ಕಚೇರಿ ಎದುರು ಸೇರಿದ ರೈತರು ಕೇಂದ್ರ ಸರ್ಕಾರದ ವಿರುದ್ದ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಬಳಿಕ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು. ಕೇಂದ್ರ ಸರ್ಕಾರ ಜಾರಿಗೆ ತರುತ್ತಿರುವ ನೂತನ ಕೃಷಿ ಕಾಯ್ದೆ ಗಳು ರೈತರಿಗೆ ಮಾರಕವಾಗಿವೆ. ಎಪಿಎಂಸಿ ಕಾಯ್ದೆ ತಿದ್ದುಪಡಿಯಿಂದ …
Read More »ಬೆಳಗಾವಿ ಕೋಟೆ ಕೆರೆಯಲ್ಲಿ ಅಪರಿಚಿತ ಶವ ಪತ್ತೆ
ಬೆಳಗಾವಿ : ಇಲ್ಲಿನ ಕೋಟೆ ಕೆರೆಯಲ್ಲಿ ಅಪರಿಚಿತ ವ್ಯಕ್ತಿಯ ಶವ ಇಂದು ಮಧ್ಯಾಹ್ನ ಪತ್ತೆಯಾಗಿದ್ದು, ಅಲ್ಲಿಗೆ ಬರುವ ವಾಯು ವಿಹಾರಿಗಳಿಗೆ ಆತಂಕ ಮನೆ ಮಾಡಿದೆ. ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಮಾರ್ಕೇಟ್ ಠಾಣೆ ಪೊಲೀಸರು ಭೇಟಿ ನೀಡಿ, ಶವವನ್ನು ಕೆರೆಯಿಂದ ಹೊರಗೆ ತೆಗೆಯಲಾಗಿದೆ. ಹೆಚ್ಚಿನ ಮಾಹಿತಿ ತಿಳಿದು ಬಂದಿಲ್ಲ. ತನಿಖೆಯ ಬಳಿಕವೇ ಸತ್ಯ ತಿಳಿಯಬೇಕಾಗಿದೆ. ಮಾರ್ಕೆಟ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
Read More »ಬೆಳಗಾವಿಯ ಮುಂದಿನ ಪಾಲಿಕೆ ಮೇಯರ್ ಬಿಜೆಪಿಯವರಾಗಿರ್ತಾರೆ: ಸಚಿವ ಭೈರತಿ ಬಸವರಾಜ್
ಬೆಳಗಾವಿ: ಮುಂದಿನ ದಿನಗಳಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಬೆಳಗಾವಿ ಮಹಾನಗರ ಪಾಲಿಕೆಯ ಮೇಯರ್ ಮಾಡುತ್ತೇನೆ ಎಂದು ನಗರಾಭಿವೃದ್ದಿ ಸಚಿವ ಭೈರತಿ ಬಸವರಾಜ್ ಹೇಳಿದ್ದಾರೆ. ನಗರದಲ್ಲಿ ಇಂದು ಸ್ಮಾರ್ಟ್ ಸಿಟಿ ಕಾಮಗಾರಿಗಳ ಪರಿಶೀಲನೆ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಪಾಲಿಕೆ ಚುನಾವಣೆಯಲ್ಲಿ ಬಿಜೆಪಿಯಿಂದ ಅಭ್ಯರ್ಥಿಗಳನ್ನು ಕಣಕ್ಕಿಳಿಸಿ ಗೆಲ್ಲಿಸಿಕೊಂಡು ಬರುತ್ತೇವೆ ಎಂದರು. ಸಂಕ್ರಾತಿ ಬಳಿಕ ಸಂಪುಟ ವಿಸ್ತರಣೆ ಮಾಡುವುದಾಗಿ ಸಿಎಂ ಹೇಳಿದ್ದಾರೆ. ಸಂಪುಟ ವಿಸ್ತರಣೆ ಸಿಎಂ ಯಡಿಯೂರಪ್ಪ ಅವರ ವಿವೇಚನೆಗೆ ಬಿಟ್ಟದ್ದು, ಈ ಬಗ್ಗೆ …
Read More »ಗೋಕಾಕ ಅಭಿವೃದ್ದಿಗೆ 100 ಕೋಟಿ ಪ್ರಸ್ತಾವಣೆ, ಶೀಘ್ರ ಅನುದಾನ ಸಿಗುವ ನಿರೀಕ್ಷೆಯಿದೆ : ಸಚಿವ ರಮೇಶ ಜಾರಕಿಹೊಳಿ
ಗೋಕಾಕ: ತಾಲೂಕಿನ ವಿವಿಧ ಗ್ರಾಮಗಳಲ್ಲಿ ಸಿ.ಸಿ. ರಸ್ತೆ, ಚರಂಡಿ, ಪ್ರೀಕಾಸ್ಟ್ ಪೇವರ್ಸ್ ರಸ್ತೆ, ತೆರದ ಭಾಂವಿ, ಸಮುದಾಯ ಭವನ ಹಾಗೂ ಪಿಕ್-ಅಪ್ ನಿರ್ಮಾಣ ಕಾಮಗಾರಿಗಳನ್ನು ಆರಂಭಿಸಲಾಗಿದೆ ಎಂದು ಜಲಸಂಪನ್ಮೂಲ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ರಮೆಶ ಜಾರಕಿಹೊಳಿ ಮಾಹಿತಿ ನೀಡಿದ್ದಾರೆ. 2019-20ನೇ ಸಾಲಿನ ವಿಶೇಷ ಘಟಕ (ಎಸ್‍ಸಿಪಿ) ಹಾಗೂ ಗಿರಿಜನ ಉಪಯೋಜನೆ (ಟಿಎಸ್‍ಪಿ) ಯೋಜನೆಗಳ ಅಡಿ 30 ಕೋಟಿ ರೂ. ಮತ್ತು ಅದೇ ಅವಧಿಯ ಉಳಿಕೆ ಅನುದಾನದಲ್ಲಿ 31.05 ಕೋಟಿ …
Read More »