Breaking News

ಬೆಳಗಾವಿ

ಗೋಕಾಕ ಅಭಿವೃದ್ದಿಗೆ 100 ಕೋಟಿ ಪ್ರಸ್ತಾವಣೆ, ಶೀಘ್ರ ಅನುದಾನ ಸಿಗುವ ನಿರೀಕ್ಷೆಯಿದೆ : ಸಚಿವ ರಮೇಶ ಜಾರಕಿಹೊಳಿ

ಗೋಕಾಕ: ತಾಲೂಕಿನ ವಿವಿಧ ಗ್ರಾಮಗಳಲ್ಲಿ ಸಿ.ಸಿ. ರಸ್ತೆ, ಚರಂಡಿ, ಪ್ರೀಕಾಸ್ಟ್ ಪೇವರ್ಸ್ ರಸ್ತೆ, ತೆರದ ಭಾಂವಿ, ಸಮುದಾಯ ಭವನ ಹಾಗೂ ಪಿಕ್-ಅಪ್ ನಿರ್ಮಾಣ ಕಾಮಗಾರಿಗಳನ್ನು ಆರಂಭಿಸಲಾಗಿದೆ ಎಂದು ಜಲಸಂಪನ್ಮೂಲ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ರಮೆಶ ಜಾರಕಿಹೊಳಿ ಮಾಹಿತಿ ನೀಡಿದ್ದಾರೆ. 2019-20ನೇ ಸಾಲಿನ ವಿಶೇಷ ಘಟಕ (ಎಸ್‍ಸಿಪಿ) ಹಾಗೂ ಗಿರಿಜನ ಉಪಯೋಜನೆ (ಟಿಎಸ್‍ಪಿ) ಯೋಜನೆಗಳ ಅಡಿ 30 ಕೋಟಿ ರೂ. ಮತ್ತು ಅದೇ ಅವಧಿಯ ಉಳಿಕೆ ಅನುದಾನದಲ್ಲಿ 31.05 ಕೋಟಿ …

Read More »

ಕೊರೋನಾ ದೃಢ ಗೋಕಾಕದಲ್ಲಿ ಎರಡು ಶಾಲೆಗಳು ಬಂದ್

  ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯಲ್ಲಿ ಮೂರು ಜನ ಶಿಕ್ಷಕರಿಗೆ ಕೊರಾನಾ ದೃಡವಾದ ಹಿನ್ನೆಲೆಯಲ್ಲಿ ಗೋಕಾಕ ತಾಲೂಕಿನ ಅದರಲ್ಲಿ ಶಾಲೆಗಳಾದ ಕನಸಗೇರಿ ಪ್ರಾಥಮಿಕ ಶಿಕ್ಷಕ ಹಾಗೂ ಹೀರೆನಂದಿ ಪ್ರೌಡಶಾಲೆಯ ಒರ್ವ ಶಿಕ್ಷಕನಿಗೆ ಕೊರಾನಾ ಪೊಸಿಟೀವ್ ದೃಡವಾದ ಹಿನ್ನೆಲೆ ಇಬ್ಬರು ಶಿಕ್ಷಕರು ಸೆಲ್ಪ್ ಹೋಮ್ ಕ್ವಾರೈಂಟೈನ್ ಆಗಿದ್ದು, ಈ ಗ್ರಾಮದ ಎರಡು ಶಾಲೆಗಳನ್ನು ಮೂರು ದಿನ ಬಂದ್ ಮಾಡಿ ಪ್ರಾರಂಭ ಮಾಡುವದಕ್ಕಿಂತ ಮುಂಚೆ ಸ್ಥಳಿಯ ಗ್ರಾಮ ಪಂಚಾಯತಿಯವರಿಂದ ಆ ಶಾಲೆಗಳಿಗೆ ಸಾನಿಟೈಜರ ಮಾಡಿಸಿ …

Read More »

ಮಹಾಲಿಂಗಪುರ ಪುರಸಭೆ ಸದಸ್ಯೆ ತಳ್ಳಾಟ ಪ್ರಕರಣ : ಶಾಸಕ ಸತೀಶ್ ಜಾರಕಿಹೊಳಿ ಹೇಳಿದ್ದೇನು ?

ಗೋಕಾಕ : ‘ಮಹಾಲಿಂಗಪೂರ ಪುರಸಭೆ ಸದಸ್ಯೆ ತಳ್ಳಾಟ ಪ್ರಕರಣದಲ್ಲಿ ಶಾಸಕ ಸಿದ್ದು ಸವದಿ ಸೇರಿ 31 ಜನರ ವಿರುದ್ಧ ಕೇಸ್ ದಾಖಲು ಬಗ್ಗೆ ಪ್ರತಿಕ್ರಿಯಿಸಿ, ಈ ಹಿಂದೆಯೇ ಪೊಲೀಸರು ಪ್ರಕರಣ ದಾಖಲಿಸಿಕೊಳ್ಳಬೇಕಿತ್ತು’ ಎಂದು ಅಭಿಪ್ರಾಯ ವ್ಯಕ್ತ ಪಡಿಸಿದ್ದಾರೆ. ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿ, ಈ ಹಿಂದೆಯೇ ಪೊಲೀಸರು ಪ್ರಕರಣ ದಾಖಲಿಸಿಕೊಳ್ಳಬೇಕಿತ್ತು. ಈ ವಿಚಾರವಾಗಿ ಕಾಂಗ್ರೆಸ್ ನಾಯಕರು ಮಹಾಲಿಂಗಪೂರದಲ್ಲಿ ಬೃಹತ್ ಪ್ರತಿಭಟನೆಯನ್ನು ನಡೆಸಿದ್ದೇವೆ. ಯಾರೇ ತಪ್ಪು ಮಾಡಿದರು ಸಹ ಕಾನೂನು ಕ್ರಮ ಕೈಗೊಂಡರೆ …

Read More »

ದೇಶದ ನಾಗರಿಕರು ಭಾವೈಕ್ಯತೆಯಿಂದ ಜೀವಿಸಿದರೆ ಮಾತ್ರ ದೇಶದ ಎಳ್ಗೆ ಸಾದ್ಯ : ವಿವೇಕ ಜತ್ತಿ

  ಗೋಕಾಕನ ನಗರದ ಕೆಪಿಸಿಸಿ ಕಾರ್ಯಾದಕ್ಷ ಸತೀಶ ಜಾರಕಿಹೋಳಿಯವರ ಗೋಕಾಕ ಗೃಹ ಕಚೇರಿ ಹಿಲ್ ಗಾರ್ಡನ್ ನಲ್ಲಿ ಗೋಕಾಕ ಬ್ಲಾಕ್ ಕಾಂಗ್ರೆಸ್ ಮೈನಾರಿಟಿ ಘಟಕದ ವತಿಯಿಂದ ಸಭೆಯನ್ನು ಹಮ್ಮಿಕೊಳ್ಳಲಾಗಿತ್ತು ಈ ಕಾರ್ಯಕ್ರಮದ ಅದ್ಯಕ್ಷತೆ ವಹಿಸಿದ್ದ ಕಾಂಗ್ರೆಸ್ ಮುಖಂಡರಾದ ವಿವೇಕ ಜತ್ತಿ ಮಾತನಾಡಿ ಕಾಂಗ್ರೆಸ್ ಮಾಡಿದ ಎಪ್ಪತ್ತು ವರ್ಷಗಳ ಸಾಧನೆಯನ್ನು ಬಿಡಿ ಬಿಡಿಯಾಗಿ ಬಿಡಿಸಿ ಹೇಳಿದರು ಹಾಗೂ ಈ ದೇಶದ ಎಲ್ಲಾ ನಾಗರಿಕರು ಭಾವೈಕ್ಯತೆಯಿಂದ ಜೀವಿಸಿದರೆ ಮಾತ್ರ ದೇಶದ ಎಳ್ಗೆ ಸಾದ್ಯ …

Read More »

ಬೆಳಗಾವಿ, ಚಿಕ್ಕೋಡಿಯಲ್ಲಿ 20ಕ್ಕೂ ಹೆಚ್ಚು ಶಿಕ್ಷಕರಿಗೆ ಕೊರೊನಾ ಸೋಂಕು ದೃಢ

ಬೆಳಗಾವಿ: ಶಾಲೆ-ಕಾಲೇಜು ಪುನರಾರಂಭದ ಬೆನ್ನಲ್ಲೇ ಬೆಳಗಾವಿ ಜಿಲ್ಲೆಯಲ್ಲಿ ಕೊರೊನಾ ಸೋಂಕು ಹೆಚ್ಚುತ್ತಿದ್ದು, ಬೆಳಗಾವಿ, ಚಿಕ್ಕೋಡಿಯಲ್ಲಿ 20ಕ್ಕೂ ಹೆಚ್ಚು ಶಿಕ್ಷಕರಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಬೆಳಗಾವಿ ಗ್ರಾಮೀಣ ಭಾಗದ 9, ಬೆಳಗಾವಿ ನಗರ ವಲಯದ 4 , ಕಿತ್ತೂರು 1, ರಾಮದುರ್ಗದಲ್ಲಿ 3 ಶಿಕ್ಷಕರಿಗೆ  ಸೇರಿದಂತೆ ಒಟ್ಟು 18 ಶಿಕ್ಷಕರಿಗೆ ಕೋವೀಡ್ ಸೊಂಕು  ದೃಢವಾಗಿದೆ. ಹುಕ್ಕೇರಿಯ 2 , ರಾಯಬಾಗದ 2 ಶಿಕ್ಷಕರಿಗೆ ಸೊಂಕು ತಗುಲಿದ್ದು ಒಟ್ಟಾರೆ ಬೆಳಗಾವಿ ಜಿಲ್ಲೆಯಲ್ಲಿ 20ಕ್ಕೂ ಹೆಚ್ಚು …

Read More »

ಹುಲಕುಂದ ಪಂಚಾಯ್ತಿ 13 ಸದಸ್ಯರು, 30ಕ್ಕೂ ಹೆಚ್ಚು ಬಿಜೆಪಿ ಮುಖಂಡರು ಕಾಂಗ್ರೆಸ್ ಸೇರ್ಪಡೆ

  ರಾಮದುರ್ಗ ತಾಲೂಕಿನ ಹುಲಕುಂದ ಗ್ರಾಮ ಪಂಚಾಯತಿಯ 14 ಸದಸ್ಯರ ಪೈಕಿ 13 ಸದಸ್ಯರು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ನೇತೃತ್ವದಲ್ಲಿ ಅಧಿಕೃತವಾಗಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು. ಹೌದು ಮಂಗಳವಾರ ಬೆಳಗಾವಿಯ ಕಾಂಗ್ರೆಸ್ ಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ರಾಮದುರ್ಗ ತಾಲೂಕಿನ ಹುಲಕುಂದ ಗ್ರಾಮ ಪಂಚಾಯತಿಯ 13 ಸದಸ್ಯರು ಹಾಗೂ 30ಕ್ಕೂ ಹೆಚ್ಚು ಬಿಜೆಪಿ ಮುಖಂಡರು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಅವರ ಸಮ್ಮುಖದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು. ಈ ವೇಳೆ …

Read More »

ಮಾಜಿ ಶಾಸಕ ಬಸವಂತರೆಡ್ಡಿ ನಿಧನ: ಸಂತಾಪ ವ್ಯಕ್ತಪಡಿಸಿದ ಸಚಿವ ರಮೇಶ್ ಜಾರಕಿಹೊಳಿ

  ಭಾರತೀಯ ಜನತಾ ಪಾರ್ಟಿಯ ಹಿರಿಯ ನಾಯಕರೂ, ಮಾಜಿ ಶಾಸಕರೂ ಆದ ಬಸವಂತ ರೆಡ್ಡಿ ಪಾಟೀಲ್ ಮೋತಕದಲ್ಲಿ ಅವರ ನಿಧನಕ್ಕೆ ಜಲಸಂಪನ್ಮೂಲ ಸಚಿವರಾದ ಶ್ರೀ ರಮೇಶ್ ಜಾರಕಿಹೊಳಿ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. 1989 ಮತ್ತು 1994 ರಲ್ಲಿ ಕಲಬುರಗಿ ಜಿಲ್ಲೆಯ ಸೇಡಂ ಕ್ಷೇತ್ರದಿಂದ ಶಾಸಕರಾಗಿ ಆಯ್ಕೆಯಾಗಿ ಜನಾನುರಾಗಿ ಕೆಲಸಗಳನ್ನು ಮಾಡಿದ್ದ ಬಸವಂತರೆಡ್ಡಿ ಅವರು ಪ್ರಗತಿಪರ ಶಾಸಕರಾಗಿ ನಮಗೆಲ್ಲಾ ಮಾದರಿಯಾಗಿದ್ದರು ಎಂದು ಸ್ಮರಿಸುವ ಸಚಿವ ಜಾರಿಕಿಹೊಳಿ, ಯಾದಗೀರ್ ಮತ್ತು ಕಲಬುರಗಿ …

Read More »

ನಾಲ್ವರು ಸಾಧಕರಿಗೆ ಗಳಗನಾಥ ಸಾಹಿತ್ಯ ನಾ.ಶ್ರೀ.ರಾಜಪುರೋಹಿತ ಸಂಶೋಧಕ ಪ್ರಶಸ್ತಿ ಪ್ರದಾನ

  ಬೆಳಗಾವಿಯ ಬಸವರಾಜ ಕಟ್ಟೀಮನಿ ಸಭಾಂಗಣದಲ್ಲಿ ಮಂಗಳವಾರ ನಡೆದ ಸಮಾರಂಭದಲ್ಲಿ ಸಾಹಿತಿ ಡಾ.ಬಾಳಾಸಾಹೇಬ ಲೋಕಾಪುರ ಮತ್ತು ಹಂಪಿ ಕನ್ನಡ ವಿಶ್ವವಿದ್ಯಾಲಯದ ಪ್ರಾಧ್ಯಾಪಕ ಡಾ.ವೆಂಕಟಗಿರಿ ದಳವಾಯಿ ಅವರಿಗೆ ಗಳಗನಾಥ ಸಾಹಿತ್ಯ ಪ್ರಶಸ್ತಿ, ಸಾಹಿತಿ ಡಾ.ಹನುಮಾಕ್ಷಿ ಗೋಗಿ ಹಾಗೂ ನಿವೃತ್ತ ಪ್ರಾಚಾರ್ಯ ಡಾ.ಸ್ಮಿತಾ ಸುರೇಬಾನಕರ ಅವರಿಗೆ ನಾ.ಶ್ರೀ.ರಾಜಪುರೋಹಿತ ಪ್ರಶಸ್ತಿ ಪ್ರದಾನ ಮಾಡಲಾಯಿತು. 2019ನೇ ಸಾಲಿನ ಗಳಗನಾಥ ಸಾಹಿತ್ಯ ಹಾಗೂ ನಾ.ಶ್ರೀ.ರಾಜಪುರೋಹಿತ ಸಂಶೋಧಕ ಪ್ರಶಸ್ತಿ ಪ್ರದಾನ ಸಮಾರಂಭ ಬಸವರಾಜ ಕಟ್ಟೀಮನಿ ಸಭಾಂಗಣದಲ್ಲಿ ಮಂಗಳವಾರ ನಡೆಯಿತು. …

Read More »

ಬೆಳಗಾವಿ ಜಿಲ್ಲೆಯ 12 ಶಿಕ್ಷಕರಿಗೆ ಕೋವಿಡ್ ದೃಢ: ಪಾಲಕರು, ಪೋಷಕರಲ್ಲಿ ಶುರುವಾಯ್ತು ಆತಂಕ

  ರಾಜ್ಯದಲ್ಲಿ ಸರ್ಕಾರ ಮುಂಜಾಗ್ರತೆ ಕ್ರಮಗಳ ಜೊತೆಗೆ ಶಿಕ್ಷಣ ಸಂಸ್ಥೆಗಳನ್ನು ತೆರೆಯಲು ಅನುಮತಿ ನೀಡಿದೆ. ಹಲವು ಜಿಲ್ಲೆಗಳಲ್ಲಿ ಶಿಕ್ಷಕರಿಗೆ ಕೊರೊನಾ ವೈರಸ್ ಪಾಸಿಟಿವ್ ಬಂದಿದೆ. ಬೆಳಗಾವಿ ಜಿಲ್ಲೆಯಲ್ಲಿ 12 ಶಿಕ್ಷಕರಿಗೆ ಕೊರೊನಾ ವೈರಸ್ ಸೋಂಕು ದೃಢಪಟ್ಟಿದೆ. ವಿದ್ಯಾರ್ಥಿಗಳು, ಪೆÇೀಷಕರಲ್ಲಿ ಆತಂಕ ಶುರುವಾಗಿದೆ. ರಾಜ್ಯದಲ್ಲಿ 10 ಮತ್ತು 12ನೇ ತರಗತಿ ಸೇರಿ ಉನ್ನತ ಹಂತದ ತರಗತಿಗಳನ್ನು ಆರಂಭಿಸಲು ಸರ್ಕಾರ ಅನುಮತಿ ನೀಡಿದೆ. ಶಿಕ್ಷಣ ಸಂಸ್ಥೆಗಳಿಗೆ ಹಾಜರಾಗುವ ಶಿಕ್ಷಕರು ಮತ್ತು ವಿದ್ಯಾರ್ಥಿಗಳಿಗೆ ಕೋವಿಡ್ …

Read More »

ಬೆಳಗಾವಿ ಜಿಲ್ಲೆಯ 22 ಜನ ಶಿಕ್ಷಕರಿಗೆ ಕೋವಿಡ್ ಸೋಂಕು ದೃಢ !

ಬೆಳಗಾವಿ :  ಸರ್ಕಾರ ಶಾಲೆ, ಕಾಲೇಜುಗಳನ್ನು ಆರಂಭವಾಗಿರುವ ಬೆನ್ನಲ್ಲೆ  ಬೆಳಗಾವಿ ಜಿಲ್ಲೆಯಲ್ಲಿ ಒಟ್ಟು 22 ಜನ ಶಿಕ್ಷಕರಿಗೆ ಕೋವಿಡ್ ಸೋಂಕು ತಗುಲಿದ್ದು, ಪೋಷಕರಲ್ಲಿ ಆತಂಕ ಮತ್ತೆ ಮನೆ ಮಾಡಿದೆ. ಕೋವಿಡ್ ಸೋಂಕು ಕಡಿಮೆಯಾಗಿ ಸ್ವಲ್ಪ ಮಟ್ಟಿಗೆ ಎಲ್ಲವೂ ಸಹಜ ಸ್ಥಿತಿಯತ್ತ ಬರುತ್ತಿವೆ. ಜನವರಿ 1 ರಿಂದ ಸರ್ಕಾರ ಶಾಲೆ, ಕಾಲೇಜು ಆರಂಭಕ್ಕೆ ಗ್ರಿನ್ ಸಿಗ್ನಲ್ ನೀಡಿದೆ. ಆದರೆ ಬೆಳಗಾವಿ ಜಿಲ್ಲೆಯಲ್ಲಿ ಶಿಕ್ಷಕರಿಗೆ ಸೋಂಕು ತಲುಲಿದೆ. ಬೆಳಗಾವಿ ಗ್ರಾಮೀಣ ಭಾಗದ 10, ಬೆಳಗಾವಿ …

Read More »