Breaking News

ಬೆಳಗಾವಿ

ಜಾಮೀನು ಅರ್ಜಿ ಹಿಂಪಡೆದ ವಿನಯ್ ಕುಲ್ಕರ್ಣಿ

ಜಾಮೀನು ಅರ್ಜಿ ಹಿಂಪಡೆದ ವಿನಯ್ ಕುಲ್ಕರ್ಣಿ ಯೋಗೀಶ್ ಗೌಡ ಹತ್ಯೆ ಪ್ರಕರಣ; ಜೈಲುವಾಸದಲ್ಲಿರುವ ಮಾಜಿ ಸಚಿವ ಜಿಲ್ಲಾ ಪಂಚಾಯತ್ ಸದಸ್ಯ ಯೋಗೀಶ್ ಗೌಡ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ವಿನಯ್ ಕುಲ್ಕರ್ಣಿ ಜಾಮಿನು ಅರ್ಜಿಯನ್ನು ಹಿಂಪಡೆದಿದ್ದಾರೆ. ಯೋಗೀಶ್ ಗೌಡ ಹತ್ಯೆ ಪ್ರಕರಣದಲ್ಲಿ ಸಿಬಿಐ ನಿಂದ ಬಂಧಿಸಲ್ಪಟ್ಟಿರುವ ವಿನಯ್ ಕುಲ್ಕರ್ಣಿ ಬೆಳಗಾವಿ ಹಿಡಲಗಾ ಜೈಲಿನಲ್ಲಿದ್ದು, ಕೆಲ ದಿನಗಳ ಹಿಂದೆ ಬಿಡುಗಡೆ ಕೋರಿ ಧಾರವಾಡ 3ನೇ ಹೆಚ್ಚುವರಿ ನ್ಯಾಯಾಲಯಕ್ಕೆ ಜಾಮೀನು ಅರ್ಜಿ …

Read More »

ಸಹಕಾರಿ ಬ್ಯಾಂಕ್‍ಗಳ ಮೂಲಕ ರೈತರಿಗೆ ಹೆಚ್ಚು ಸಾಲ ವಿತರಣೆ: ಸಚಿವ ಎಸ್.ಟಿ.ಸೋಮಶೇಖರ್

ಬೆಳಗಾವಿ, ನ.18: ಪ್ರಸಕ್ತ ಸಾಲಿನಲ್ಲಿ ರಾಜ್ಯದ ಎಲ್ಲ ಡಿಸಿಸಿ ಬ್ಯಾಂಕ್‍ಗಳ ಮೂಲಕ ರೈತರಿಗೆ 15,300 ಕೋಟಿ ರೂಪಾಯಿ ಸಾಲವನ್ನು ನೀಡಲು ನಿರ್ಧರಿಸಲಾಗಿದೆ ಎಂದು ಸಹಕಾರ ಇಲಾಖೆಯ ಸಚಿವರಾದ ಎಸ್.ಟಿ.ಸೋಮಶೇಖರ್ ಹೇಳಿದ್ದಾರೆ. ಕರ್ನಾಟಕ ಸಹಕಾರ ಹಾಲು ಉತ್ಪಾದಕರ ಮಹಾಮಂಡಳದ ನೇತೃತ್ವದಲ್ಲಿ “ಕೋರೊನಾ ಸೋಂಕು-ಆತ್ಮ ನಿರ್ಭರ ಭಾರತ ಸಹಕಾರ ಸಂಸ್ಥೆಗಳ ಸಹಯೋಗದೊಂದಿಗೆ ಮಹಾಂತೇಶ ನಗರದಲ್ಲಿರುವ ಜಿಲ್ಲಾ ಹಾಲು ಒಕ್ಕೂಟದ ಡೇರಿ ಆವರಣದಲ್ಲಿ ಬುಧವಾರ ನಡೆದ 67ನೇ ಅಖಿಲ ಭಾರತ ಸಹಕಾರ ಸಪ್ತಾಹ ಸಮಾರಂಭವನ್ನು …

Read More »

ಅಜಿತ್ ಪವಾರ್ ಹೇಳಿಕೆ ಖಂಡಿಸಿ ರಾಜ್ಯದಾದ್ಯಂತ ಕನ್ನಡಪರ ಸಂಘಟನೆಗಳು ಪ್ರತಿಭಟನೆ

ಬೆಳಗಾವಿ, ನ.18- ರಾಜ್ಯ ಸರಕಾರ ಮರಾಠಿಗರ ಓಲೈಕೆಗಾಗಿ ಮರಾಠಾ ಅಭಿವೃದ್ಧಿ ಪ್ರಾಧಿಕಾರ ರಚನೆ ಮಾಡಿ 50 ಕೋಟಿ ರೂ. ಮೀಸಲಿಟ್ಟಿರುವ ಬೆನ್ನಲೆ ಕಾರವಾರ, ಬೆಳಗಾವಿ, ಖಾನಾಪುರ, ನಿಪ್ಪಾಣಿ ಮಹಾರಾಷ್ಟ್ರದ್ದು ಎಂದು ಮಹಾರಾಷ್ಟ್ರದ ಡಿಸಿಎಂ ಅಜಿತ್ ಪವಾರ್ ಹೇಳಿಕೆ ನೀಡಿರುವುದು ಕನ್ನಡಿಗರ ಆಕ್ರೋಶಕ್ಕೆ ಕಾರಣವಾಗಿದೆ. ಬೆಳಗಾವಿ, ನಿಪ್ಪಾಣಿ, ಕಾರವಾರ ಮಹಾರಾಷ್ಟ್ರದ ಒಂದು ಭಾಗ ಎಂದು ಬಾಳಾಸಾಹೇಬ್ ಠಾಕ್ರೆ ಅವರ ಕನಸಾಗಿತ್ತು. ಠಾಕ್ರೆ ಕನಸು ನನಸು ಮಾಡಲು ಪಣ ತೋಡಬೇಕು. ಈ ಭಾಗದಲ್ಲಿ …

Read More »

ಬೆಳಗಾವಿ ಕರ್ನಾಟಕದ ಅವಿಭಾಜ್ಯ ಅಂಗ: ಲಕ್ಷ್ಮಣಸವದಿ

ಬೆಂಗಳೂರು: ಬೆಳಗಾವಿ ಕರ್ನಾಟಕದ್ದು, ಸೂರ್ಯ-ಚಂದ್ರರಿರುವರೆಗೂ ಬೆಳಗಾವಿ ಕರ್ನಾಟಕದ ಅವಿಭಾಜ್ಯ ಅಂಗ ಎಂದು ಡಿಸಿಎಂ ಲಕ್ಷ್ಮಣಸವದಿ ಹೇಳಿದ್ದಾರೆ. ವಿಧಾನಸೌಧದಲ್ಲಿ ಮಾತನಾಡಿದ ಅವರು, ಮಹಾರಾಷ್ಟ್ರ ಡಿಸಿಎಂ ಅಜಿತ್ ಪವಾರ್ ಹೇಳಿಕೆ ಖಂಡನೀಯ. ಅನಗತ್ಯ ಗೊಂದಲವನ್ನುಂಟು ಮಾಡುವ ಉದ್ದೇಶದಿಂದ ಅವರು ಅಂತಹ ಹೇಳಿಕೆಗಳನ್ನು ನೀಡುತ್ತಿ ರಾಜ್ಯದ ಯಾವುದೇ ಭಾಗದ ಬಗ್ಗೆಯೂ ಕ್ಯಾತೆ ತೆಗೆಯುವ ಗತ್ಯವಿಲ್ಲ ಎಂದರು. ಮಹಾರಾಷ್ಟ್ರ ಡಿಸಿಎಂ ಅಜಿತ್ ಪವಾರ್ ನಿನ್ನೆ ಬೆಳಗಾವಿ, ನಿಪ್ಪಾಣಿ, ಕಾರವಾರ ನಮ್ಮದು. ಅಖಂಡ ಮಹಾರಾಷ್ಟ್ರಾ ಠಾಕ್ರೆ ಅವರ …

Read More »

ಕನ್ನಡಿಗರನ್ನು ಕೆಣಕುವ ಚಾಳಿಮಹಾರಾಷ್ಟ್ರದ ರಾಜಕಾರಣಿಗಳು ಮುಂದುವರಿಸಿದ್ದಾರೆ.

ಬೆಳಗಾವಿ: ಪದೇ, ಪದೇ ಬೆಳಗಾವಿ ಗಡಿ ವಿವಾದದ ಕ್ಯಾತೆ ತೆಗೆದು ಜನರ ಮಧ್ಯೆ ಭಾಷಾ ವೈಷ್ಯಮದ ಬೀಜ ಬಿತ್ತಿ ಕನ್ನಡಿಗರನ್ನು ಕೆಣಕುವ ಚಾಳಿಯನ್ನು ಮಹಾರಾಷ್ಟ್ರದ ರಾಜಕಾರಣಿಗಳು ಮುಂದುವರಿಸಿದ್ದಾರೆ. ಬೆಳಗಾವಿ, ನಿಪ್ಪಾಣಿ ಬೀದರ್, ಬಾಲ್ಕೀ, ಮಹಾರಾಷ್ಟ್ರಕ್ಕೆ ಸೇರಿಸುವುದು ಬಾಳಾಸಾಹೇಬ್ ಠಾಖ್ರೆ ಅವರ ಕನಸಾಗಿತ್ತು, ಮಹಾರಾಷ್ಟ್ರ ಸರ್ಕಾರ ಬಾಳಾಸಾಹೇಬ್ ಅವರ ಕನಸನ್ನು ನನಸು ಮಾಡುತ್ತದೆ ಎಂದು ಡಿಸಿಎಂ, ಎನ್‍ಸಿಪಿ ಅಜೀತ್ ಪವಾರ್ ಹೇಳಿಕೆ ನೀಡುವ ಮೂಲಕ ನಿನ್ನೆ ಮತ್ತೆ ಗಡಿ ಕ್ಯಾತೆ ತೆಗೆದಿದ್ದಾರೆ. …

Read More »

ಅನುದಾನ ಬಳಸದೆ ವಾಪಸ್ : ಕ್ರಮಕ್ಕೆ ಶಿಫಾರಸ್ಸು

ಬೆಳಗಾವಿ: ‘2019-20ನೇ ಸಾಲಿನಲ್ಲಿ ಬಿಡುಗಡೆಯಾದ ಅನುದಾನ ಬಳಸದೆ ವಾಪಸ್ ಆಗಲು ಕಾರಣರಾದ ಅಧಿಕಾರಿಗಳ ಕುರಿತು ತನಿಖಾ ಸಮಿತಿಯು ವರದಿ ನೀಡಿದೆ. ಅದನ್ನು ಕೂಲಂಕುಷವಾಗಿ ಪರಿಶೀಲಿಸಿ ಸದಸ್ಯರ ಒಮ್ಮತದ ಅಭಿಪ್ರಾಯದಂತೆ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುವಂತೆ ಸರ್ಕಾರಕ್ಕೆ ಕಳುಹಿಸಲಾಗುವುದು’ ಎಂದು ಜಿಲ್ಲಾ ಪಂಚಾಯಿತಿ ಸಿಇಒ ದರ್ಶನ್ ಎಚ್.ವಿ. ತಿಳಿಸಿದರು. ಸಾಮಾನ್ಯ ಸಭೆಯಲ್ಲಿ ವಿಷಯ ಪ್ರಸ್ತಾಪಿಸಿದ ಸದಸ್ಯ ರಮೇಶ ದೇಶಪಾಂಡೆ, ‘ನಿಗದಿತ ದಿನಕ್ಕಿಂತ ತಡವಾಗಿ ಬಿಲ್ ಸಲ್ಲಿಸಲಾಗಿದೆ. ಜೊತೆಗೆ ತಾಂತ್ರಿಕ ನೆಪವೊಡ್ಡಿ ಬಿಲ್ ಪಾಸ್ …

Read More »

ಡಿಸಿಸಿ ಬ್ಯಾಂಕಿನಿಂದ ರೈತರ ಆರ್ಥಿಕಾಭಿವೃದ್ಧಿಗೆ ಹೊಸ ಯೋಜನೆಗಳು ಅನುಷ್ಠಾನಗೊಳ್ಳಲಿ : ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಬಿಡಿಸಿಸಿ ಬ್ಯಾಂಕ್ ನೂತನ ಅಧ್ಯಕ್ಷ ರಮೇಶ ಕತ್ತಿ ಅವರು ಬಾಲಚಂದ್ರ ಜಾರಕಿಹೊಳಿ ಅವರ ನಿವಾಸಕ್ಕೆ ಭೇಟಿ ನೀಡಿ ಅಭಿನಂದನೆ ಸಲ್ಲಿಕೆ

ಗೋಕಾಕ : ಶತಮಾನೋತ್ಸವದ ಹೊಸ್ತಿಲಿನಲ್ಲಿರುವ ಬಿಡಿಸಿಸಿ ಬ್ಯಾಂಕಿನಿಂದ ರೈತರಿಗೆ ಹೆಚ್ಚಿನ ಪ್ರಮಾಣದಲ್ಲಿ ಸಾಲ ಸೌಲಭ್ಯಗಳನ್ನು ಕಲ್ಪಿಸಿಕೊಡಲು ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಕೆಎಂಎಫ್ ಅಧ್ಯಕ್ಷ ಮತ್ತು ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಬಿಡಿಸಿಸಿ ಬ್ಯಾಂಕಿನ ನೂತನ ಆಡಳಿತ ಮಂಡಳಿಗೆ ಸಲಹೆ ಮಾಡಿದರು. ಪ್ರತಿಷ್ಠಿತ ಬೆಳಗಾವಿ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ನೂತನ ಅಧ್ಯಕ್ಷರಾದ ಬಳಿಕ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ಗೋಕಾಕ ನಿವಾಸಕ್ಕೆ ಭೇಟಿ ಮಾಡಿ ಅಭಿನಂದನೆ ಸಲ್ಲಿಸಿ, ಸತ್ಕಾರ ಮಾಡಿದ …

Read More »

ಮರಾಠ ಅಭಿವೃಧಿ ಪ್ರಾಧಿಕಾರ ರಚನೆ ವಿಚಾರಕ್ಕೆ ಸಂಬಂಧಿಸಿದಂತೆ ರಾಜ್ಯ ಸರಕಾರದ ವಿರುದ್ಧ ರಾಜ್ಯಾದ್ಯಂತ ತೀವ್ರ ವಿರೋಧ ಸಿಎಂ ಮನೆ ಮುಂದೆ ಪ್ರತಿಭಟನೆ ಮಾಡುವುದಾಗಿ ಕರವೇ ಕಾರ್ಯಕರ್ತರು ಎಚ್ಚರಿಕೆ

ಬೆಳಗಾವಿ; ಸರ್ಕಾರದಿಂದ ಮರಾಠ ಅಭಿವೃಧಿ ಪ್ರಾಧಿಕಾರ ರಚನೆ ವಿಚಾರಕ್ಕೆ ಸಂಬಂಧಿಸಿದಂತೆ ರಾಜ್ಯ ಸರಕಾರದ ವಿರುದ್ಧ ರಾಜ್ಯಾದ್ಯಂತ ತೀವ್ರ ವಿರೋಧ ವ್ಯಕ್ತವಾಗುತ್ತಿದ್ದು, ಬೆಳಗಾವಿಯ ಚನ್ನಮ್ಮ ವೃತ್ತದಲ್ಲಿ ಸರಕಾರದ ವಿರುದ್ಧ ಕರವೇ ಕಾರ್ಯಕರ್ತರು ಸಿಎಂ ಯಡಿಯೂರಪ್ಪ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿ ಪ್ರತಿಭಟನೆ ನಡೆಸಿದರು. ಮರಾಠಿ ಪ್ರಾಧಿಕಾರ ರಚನೆಯಿಂದ ಕನ್ನಡಿಗರಿಗೆ ಅನ್ಯಾಯ ಮಾಡಲಾಗುತ್ತಿದೆ. ಹೀಗಾಗಿ ಈ ಕೂಡಲೇ ಯಡಿಯೂರಪ್ಪ ಈ ಆದೇಶವನ್ನು ಹಿಂಪಡೆಯಬೇಕು. ಆದೇಶ ಹಿಂಪಡೆಯದಿದ್ದರೆ ಸಿಎಂ ಮನೆ ಮುಂದೆ ಪ್ರತಿಭಟನೆ ಮಾಡುವುದಾಗಿ …

Read More »

30 ಹಾಸಿಗೆಗಳ ತಾಯಿ ಮಕ್ಕಳ ‘ಸ್ಮಾರ್ಟ್’ ಆಸ್ಪತ್ರೆಯನ್ನು ಶಾಸಕ ಅನಿಲ್ ಬೆನಕೆ ಮಂಗಳವಾರ ಉದ್ಘಾಟಿಸಿದರು.

ಬೆಳಗಾವಿ: ಸ್ಮಾರ್ಟ್ ಸಿಟಿ ಯೋಜನೆಯಡಿ ಶ್ರೀನಗರದ ವಂಟಮುರಿ ಕಾಲನಿಯಲ್ಲಿ ನಿರ್ಮಿಸಲಾಗಿರುವ 30 ಹಾಸಿಗೆಗಳ ತಾಯಿ ಮಕ್ಕಳ ‘ಸ್ಮಾರ್ಟ್’ ಆಸ್ಪತ್ರೆಯನ್ನು ಶಾಸಕ ಅನಿಲ್ ಬೆನಕೆ ಮಂಗಳವಾರ ಉದ್ಘಾಟಿಸಿದರು. ಈ ಸಂದರ್ಭ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇಲ್ಲಿನ ಶ್ರೀನಗರದ ಡಬಲ್ ರಸ್ತೆಯಲ್ಲಿರುವ ವಂಟಮುರಿ ಪ್ರಾಥಮಿಕ ಆರೋಗ್ಯ ಕೇಂದ್ರದ ಆವರಣದಲ್ಲಿ 2.75 ಕೋಟಿ ರೂಪಾಯಿ ವೆಚ್ಚದಲ್ಲಿ ಸುಸಜ್ಜಿತ ಆಸ್ಪತ್ರೆಯನ್ನು ನಿರ್ಮಿಸಲಾಗಿದ್ದು, ಇದರಿಂದ ಸ್ಥಳೀಯ ಜನರಿಗೆ ಉತ್ತಮ ವೈದ್ಯಕೀಯ ಸೇವೆ ಲಭಿಸಲಿದೆ ಎಂದು ತಿಳಿಸಿದರು. ಸ್ಮಾರ್ಟ್ …

Read More »

ಸಂಗೊಳ್ಳಿ ರಾಯಣ್ಣನ ತಲೆಮೇಲೆ ಕಾಲಿಟ್ಟ ವ್ಯಕ್ತಿಯೊಬ್ಬ ಮತ್ತೊಂದು ಅವಾಂತರ ಸೃಷ್ಟಿಸಿದ್ದಾನೆ.

ಬೆಳಗಾವಿ: ಇತ್ತೀಚೆಗೆ ಪೀರಣವಾಡಿಯಲ್ಲಿ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಪ್ರತಿಮೆ ಸ್ಥಾಪನೆ ಕುರಿತ ಹೋರಾಟ, ವಿವಾದ ಮರೆಯುವ ಮುನ್ನವೇ ವ್ಯಕ್ತಿಯೊಬ್ಬ ಮತ್ತೊಂದು ಅವಾಂತರ ಸೃಷ್ಟಿಸಿದ್ದಾನೆ. ಪೀರಣವಾಡಿಯಲ್ಲಿ ಪುನರ್ ನಿರ್ಮಾಣಗೊಂಡಿರುವ ವೀರ ಸಂಗೊಳ್ಳಿ ರಾಯಣ್ಣ ಪ್ರತಿಮೆ ತಲೆ ಮೇಲೆ ವ್ಯಕ್ತಿಯೊಬ್ಬ ನಿಂತು ಹೊಸ ವಿವಾದ ಸೃಷ್ಟಿಸಿದ್ದಾನೆ. ಈ ವಿಡಿಯೋ ಇದೀಗ ಭಾರೀ ವೈರಲ್ ಆಗಿದ್ದು, ರಾಜ್ಯಾದ್ಯಂತ ಆಕ್ರೋಶಕ್ಕೆ ಕಾರಣವಾಗಿದೆ.         ವ್ಯಕ್ತಿ ಉದ್ದೇಶಪೂರ್ವಕವಾಗಿ ಈ ಕೃತ್ಯವೆಸಗಿದ್ದಾನೋ ಅಥವಾ ಮಾನಸಿಕ …

Read More »