Breaking News

ಬೆಳಗಾವಿ

ಕರ್ನಾಟಕ ಕಾನೂನು ಬಾಹಿರವಾಗಿ ಯಾವುದೇ ಕೆಲಸವನ್ನು ಮಾಡಿಲ್ಲ. ಕರ್ನಾಟಕ ಸಿಎಂ, ಗೋವಾ ಸಿಎಂ ಮಾತುಕತೆ ಅವಶ್ಯಕತೆ ಇಲ್ಲ

ಬೆಳಗಾವಿ: ಮಹದಾಯಿ ವಿಚಾರದಲ್ಲಿ ಗೋವಾ ಸಿಎಂ ಪ್ರಮೋದ ಸಾವಂತ ಹೇಳಿಕೆ ವಿಚಾರವಾಗಿ ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಪ್ರತಿಕ್ರಿಯೆ ನೀಡಿದ್ದು, ಗೋವಾ ಸಿಎಂ ವಿರುದ್ಧ ಗರಂ ಆಗಿದ್ದಾರೆ. ನಗರದಲ್ಲಿ ಸೋಮವಾರ ಮಾಧ್ಯಮದವರೊಂದಿಗೆ ಮಾತನಾಡಿ, ಕರ್ನಾಟಕ ಕಾನೂನು ಬಾಹಿರವಾಗಿ ನೀರು ಪಡೆದಿದೆ ಎಂಬ ಆರೋಪ ಮಾಡುತ್ತಿದ್ದಾರೆ. ಅವರಿಗೆ ಬಹಿರಂಗ ಆಹ್ವಾನ ಕೋಡುತ್ತೇನೆ. ಕಳಸಾ ನಾಲಾಗೆ ನಿರ್ಮಾಣವಾಗಿರೋ ಗೋಡೆ ಮುಟ್ಟಿಲ್ಲ. ಒಂದು ವೇಳೆ ಅವರು ಮಾಡಿದ ಆರೋಪ ಸಾಬೀತು ಆದರೆ  ತಕ್ಷಣ ಸಚಿವ …

Read More »

ಕನ್ನಡ ಸಾಹಿತ್ಯ ಲೋಕಕ್ಕೆ ಮಹಿಳಾ ಸಾಹಿತಿಗಳ ಕೊಡುಗೆ ಅನುಪಮವಾಗಿದೆ ಎಂದು ವಿಶ್ರಾಂತ ಪ್ರೋ ಚಂದ್ರಶೇಖರ್ ಅಕ್ಕಿ ಹೇಳಿದರು

ಕನ್ನಡ ಸಾಹಿತ್ಯ ಲೋಕಕ್ಕೆ ಮಹಿಳಾ ಸಾಹಿತಿಗಳ ಕೊಡುಗೆ ಅನುಪಮವಾಗಿದೆ ಎಂದು ವಿಶ್ರಾಂತ ಪ್ರೋ ಚಂದ್ರಶೇಖರ್ ಅಕ್ಕಿ ಹೇಳಿದರು ರವಿವಾರದಂದು ನಗರದ ಬಸವ ತಸ್ಸಂಗ ಸಮಿತಿ ಸಭಾಂಗಣದಲ್ಲಿ ಭಾವಯಾನ ಮಹಿಳಾ ಸಾಹಿತ್ಯ ಸಾಂಸ್ಕೃತಿಕ ವೇದಿಕೆ ಮತ್ತು ಬಸವ ತಸ್ಸಂಗ ಸಮಿತಿಗಳ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಂಡ ಪುಸ್ತಕ ಲೋಕಾರ್ಪಣೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡುತ್ತಿದ್ದರು ಮಹಿಳಾ ಸಾಹಿತ್ಯ ಕ್ಷೇತ್ರ ಇಂದು ವಿಸ್ತಾರಗೊಂಡಿದೆ. ವೈಚಾರಿಕ ಮತ್ತು ವೈವಿಧ್ಯಮಯ ಸಾಹಿತ್ಯ ಓದುಗರನ್ನು ತಲುಪುವ ಮೂಲಕ ಅವರನ್ನು ಚಿಂತನಶೀಲರನ್ನಾಗಿಸಿ …

Read More »

ಮನ್ನಿಕೇರಿ ಸಿದ್ಧ ಸಮಾಧಿ ಯೋಗದ ನೂತನ ಕಟ್ಟಡಕ್ಕೆ 6 ಲಕ್ಷ ರೂ. ದೇಣಿಗೆ : ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ

ಗೋಕಾಕ : ಯೋಗ ಹಾಗೂ ಪ್ರಾಣಾಯಾಮದಿಂದ ಮಾತ್ರ ಎಲ್ಲ ದೀರ್ಘ ವ್ಯಾದಿಗಳನ್ನು ಬೇರು ಸಮೇತ ತೆಗೆದು ಹಾಕಲು ಸಾಧ್ಯವಿದೆ. ಮನ್ನಿಕೇರಿಯಲ್ಲಿ ನಿರ್ಮಾಣ ಮಾಡಲು ಉದ್ಧೇಶಿಸಿರುವ ಸಿದ್ಧ ಸಮಾಧಿ ಯೋಗ ತರಬೇತಿ ಕೇಂದ್ರಕ್ಕೆ 6 ಲಕ್ಷ ರೂ.ಗಳನ್ನು ನೀಡುವುದಾಗಿ ಕರ್ನಾಟಕ ಹಾಲು ಮಹಾಮಂಡಳಿ ಅಧ್ಯಕ್ಷ ಮತ್ತು ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಹೇಳಿದರು. ತಾಲೂಕಿನ ಮನ್ನಿಕೇರಿ ಗ್ರಾಮದ ಹೊರವಲಯದಲ್ಲಿರುವ ಗುರುದೇವ ದತ್ತ ಯೋಗಾ ಫೌಂಡೇಷನ್ ಆಶ್ರಯದಲ್ಲಿ ಸಿದ್ಧ ಸಮಾಧಿ ಯೋಗ(ಎಸ್‍ಎಸ್‍ವಾಯ್) …

Read More »

ಬೆಳಗಾವಿ ನಗರದಲ್ಲಿ ಎರಡು ಕಡೆ ಸಿಐಡಿ ದಾಳಿ ಬೈಕ್, ಅಪಾರ ಪ್ರಮಾಣದ ಗಾಂಜಾ ಜಪ್ತು

ಬೆಳಗಾವಿ ನಗರದಲ್ಲಿ ಎರಡು ಕಡೆ ದಾಳಿ ನಡೆಸಿರುವ ಸಿಐಡಿ ಅಧಿಕಾರಿಗಳು ಇಬ್ಬರು ಆರೋಪಿಗಳನ್ನು ಬಂಧಿಸಿ ಎರಡು ಬೈಕ್ ಗಳನ್ನು ವಶಕ್ಕೆ ಪಡೆದು ಅಪಾರ ಪ್ರಮಾಣದ ಗಾಂಜಾ ಜಪ್ತು ಮಾಡಿದ್ದಾರೆ. ಸಿಐಡಿ ಬೆಳಗಾವಿ ಘಟಕದ ಪೊಲೀಸ್ ಇನ್ಸ್‌ಪೆಕ್ಟರ್ .ಎಸ್.ಕೆ.ಕುರಗೊಡಿ, ರವರಿಗೆ ಬಂದ ಮಾಹಿತಿ ಮೇರೆಗೆ ಬೆಳಗಾವಿ ನಗರದ ಮಾರ್ಕೆಟ್ ಪೊಲೀಸ್ ಠಾಣಾ ಸರಹದ್ದಿನ ಅಯೋಧ್ಯ ನಗರದಲ್ಲಿರುವ ಯು.ಕೆ.27 ಹೋಟೆಲ್ ಹತ್ತಿರ ಗಾಂಜಾ ಮಾರಾಟದಲ್ಲಿ ತೊಡಗಿದ್ದ ಆಕೀಬ್ ಜಾವೀದ್ ದುನಿಯಾರ್ ತಂದೆ ಜಾವೀದ್ …

Read More »

ಬೆಳಗಾವಿಗೆ ನಾಳೆ ಗೃಹ ಸಚಿವ ಬಸವರಾಜ ಬೊಮ್ಮಾಯಿ ಭೇಟಿ

ಬೆಳಗಾವಿ : ರಾಜ್ಯ ಗೃಹ ಸಚಿವ ಹಾಗೂ ಹಾವೇರಿ ಜಿಲ್ಲೆ ಉಸ್ತುವಾರಿ ಸಚಿವ ಬಸವರಾಜ ಬೊಮ್ಮಾಯಿ ಅವರು ನ.30ರಂದು ಬೆಳಗಾವಿಗೆ ಆಗಮಿಸಲಿದ್ದಾರೆ. ಮೂರು ದಿನಗಳ ಕಾಲ ಧಾರವಾಡ, ಗದಗ, ಹಾವೇರಿ, ಬೆಳಗಾವಿ ಪ್ರವಾಸ ಕೈಗೊಂಡಿರುವ ಸಚಿವರು ನಾಳೆ ಬೆಳಗಾವಿಗೆ ರಾತ್ರಿ 10 ಗಂಟೆಗೆ ಆಗಮಿಸಿ ವಾಸ್ತವ್ಯ ಮಾಡಲಿದ್ದಾರೆ. ಡಿಸೆಂಬರ್ 1 ರಂದು ಬೆಳಿಗ್ಗೆ 9 ಗಂಟೆಗೆ ಕೆಎಸ್ ಆರ್ ಪಿ 6ನೇ ತಂಡದ ಪ್ರಶಿಕ್ಷಣಾರ್ಥಿಗಳ ನಿರ್ಗಮನ ಪಥ ಸಂಚಲನ ಕಾರ್ಯಕ್ರಮ, …

Read More »

ಬೆಳಗಾವಿ ವಿಭಜನೆಗೆ ತಾಂತ್ರಿಕ ತೊಂದರೆ : ಡಿಸಿಎಂ ಲಕ್ಷ್ಮಣ ಸವದಿ

ಬಳ್ಳಾರಿ : ಕಾಂಗ್ರೆಸ್, ಜೆಡಿಎಸ್ ಪಕ್ಷದ 17 ಜನರು ಬಿಜೆಪಿ ಪಕ್ಷಕ್ಕೆ ಬಂದ ಕಾರಣದಿಂದ ರಾಜ್ಯದಲ್ಲಿ ನಮ್ಮ ಸರ್ಕಾರ ಬಂದಿದೆ. ಅವರ ಬಗ್ಗೆ ಗೌರವವಿದೆ ಎಂದು ಡಿಸಿಎಂ ಲಕ್ಷ್ಮಣ ಸವದಿ ಹೇಳಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕರ್ನಾಟಕದಲ್ಲಿ ಬಿಜೆಪಿ ಸರ್ಕಾರ ಬರಲು 17 ಜನರು ಕಾರಣ. ಕೆಲವೇ ದಿನಗಳಲ್ಲಿ ಸಚಿವ ಸಂಪುಟ ವಿಸ್ತರಣೆಯಾಗಲಿದೆ. ಯಾರಿಗೆ ಸಚಿವ ಸ್ಥಾನ ನೀಡಬೇಕು ಎಂಬುವುದು ಪಕ್ಷ ತೀರ್ಮಾನ ಮಾಡುತ್ತದೆ. ಸಿಎಂ ಬಿ.ಎಸ್.ಯಡಿಯೂರಪ್ಪ ಫೈನಲ್ …

Read More »

ಬೆಳಗಾವಿಯಲ್ಲಿ ನ.30ರಂದು ಮಹತ್ವದ ಸಭೆ ನಡೆಸಲಿರುವ ರಮೇಶ್ ಜಾರಕಿಹೊಳಿ

ಬೆಳಗಾವಿ : ಜಿಲ್ಲಾ ಉಸ್ತುವಾರಿ ಸಚಿವ ರಮೇಶ್ ಜಾರಕಿಹೊಳಿ ಅವರು ಸೋಮವಾರ ಜಲಸಂಪನ್ಮೂಲ ಮತ್ತು ಅರಣ್ಯ ಇಲಾಖೆಯ ಹಿರಿಯ ಅಧಿಕಾರಿಗಳೊಂದಿಗೆ ಮಹತ್ವರ ಸಭೆ ನಡೆಸಲಿದ್ದಾರೆ. ಕಳಸಾ ಬಂಡೂರ, ಗಟ್ಟಿ ಬಸವಣ್ಣ ಕುಡಿಯುವ ನೀರಿನ ಯೋಜನೆಗಳ ಅನುಷ್ಠಾನ ಸೇರಿ ಇತರೆ ಯೋಜನೆಗಳ ಕುರಿತು ಅಧಿಕಾರಿಗಳೊಂದಿಗೆ ಚರ್ಚಿಸಲು ಉನ್ನತ ಮಟ್ಟದ ಸಭೆ ಹಮ್ಮಿಕೊಂಡಿದ್ದಾರೆ. ಬೆಳಗಾವಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ಮಧ್ಯಾಹ್ನ 12 ಗಂಟೆಗೆ ಸಭೆ ನಡೆಯಲಿದ್ದು, ಸಭೆಯಲ್ಲಿ ಜಿಲ್ಲಾಧಿಕಾರಿ, ಜಲಸಂಪನ್ಮೂಲ ಮತ್ತು ಅರಣ್ಯ ಇಲಾಖೆಯ …

Read More »

ವಾ.ಕ.ರ.ಸಾ.ಸಂಸ್ಥೆಯ ಮೂಡಲಗಿ ಬಸ್ ಘಟಕ ನಿರ್ಮಾಣಕ್ಕೆ ಮೂರು ಎಕರೆ ನಿವೇಶನವನ್ನು ನೀಡಲಾಗುವುದು: ಬಾಲಚಂದ್ರ ಜಾರಕಿಹೊಳಿ

ಮೂಡಲಗಿ: ಮೂಡಲಗಿ ಹೊಸ ತಾಲೂಕಾಗಿ ಕಾರ್ಯನಿರ್ವಹಿಸುತ್ತಿರುವುದರಿಂದ ಅಗತ್ಯವಿರುವ ಎಲ್ಲ ಸರ್ಕಾರಿ ಕಚೇರಿಗಳನ್ನು ಪ್ರಾರಂಭಿಸಲಾಗುವುದು. ಅಲ್ಲದೆ ವಾ.ಕ.ರ.ಸಾ.ಸಂಸ್ಥೆಯ ಮೂಡಲಗಿ ಬಸ್ ಘಟಕ ನಿರ್ಮಾಣಕ್ಕೆ ಮೂರು ಎಕರೆ ನಿವೇಶನವನ್ನು ನೀಡಲಾಗುವುದು ಎಂದು ಶಾಸಕ ಮತ್ತು ಕೆಎಮ್‍ಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಹೇಳಿದರು. ತಾಲೂಕಿನ ಕುಲಗೋಡ ಗ್ರಾಮದಲ್ಲಿ ಪ್ರಾದೇಶಿಕ ಹಿಂದುಳಿದ ಪ್ರದೇಶಾಭಿವೃದ್ದಿ ಇಲಾಖೆಯಿಂದ (ನಂಜುಂಡಪ್ಪ ಆಯೋಗ) 95 ಲಕ್ಷ ರೂ.ಗಳ ವೆಚ್ಚದಲ್ಲಿ ನೂತನವಾಗಿ ನಿರ್ಮಿಸಿದ ಬಸ್ ನಿಲ್ದಾಣವನ್ನು ಉದ್ಘಾಟಿಸಿ ಮಾತನಾಡಿದ ಅವರು, ಮೂಡಲಗಿ …

Read More »

ರಮೇಶ್ ಜಾರಕಿಹೊಳಿ ಅವರ ಮನೆಯಲ್ಲಿ ರಾಜಕೀಯ ಚಟುವಟಿಕೆಗಳು ನಡೆದಿದ್ದರಿಂದಲೇ ಬಿಜೆಪಿ ಸರ್ಕಾರ ಅಸ್ತಿತ್ವಕ್ಕೆ ಬಂದಿದೆ.: ಈಶ್ವರಪ್ಪ

ಬೆಳಗಾವಿ: ರಮೇಶ್ ಜಾರಕಿಹೊಳಿ ಅವರ ಮನೆಯಲ್ಲಿ ರಾಜಕೀಯ ಚಟುವಟಿಕೆಗಳು ನಡೆದಿದ್ದರಿಂದಲೇ ಬಿಜೆಪಿ ಸರ್ಕಾರ ಅಸ್ತಿತ್ವಕ್ಕೆ ಬಂದಿದೆ. ಅವರನ್ನು ನಂಬಿದವರಿಗೆ ಮಂತ್ರಿ ಸ್ಥಾನ ಕೊಡಿಸಲು ಲಾಭಿ ಮಾಡುವುದರಲ್ಲಿ ರಮೇಶ್ ಜಾರಕಿಹೊಳಿ ಅವರ ತಪ್ಪಿಲ್ಲ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಈಶ್ವರಪ್ಪ ಹೇಳಿದ್ದಾರೆ. ಬೆಳಗಾವಿಯ ಸರ್ಕಿಟ್ ಹೌಸ್‍ನಲ್ಲಿ ಸುದ್ದಿಗಾರರ ಜೊತೆಗೆ ಮಾತನಾಡಿದ ಅವರು, ಯೋಗೇಶ್ವರ್ ಗೆ ಮಂತ್ರಿ ಸ್ಥಾನ ನಡೆಸಲು ಅವರು ಪ್ರಯತ್ನ ಮಾಡುವದರಲ್ಲಿ ತಪ್ಪಿಲ್ಲ, ಕೆಲವು ಶಾಸಕರು ಬಿಜೆಪಿಗೆ ಬಂದು ಸರ್ಕಾರ ರಚನೆಗೆ …

Read More »

ಬೆಳಗಾವಿ: ಕುರುಬ ಸಮುದಾಯದವರಿಗೆ ಟಿಕೆಟ್ ನೀಡಲು ಒತ್ತಾಯ

ಬೆಳಗಾವಿ: ಬೆಳಗಾವಿ ಲೋಕಸಭೆ ಕ್ಷೇತ್ರದಲ್ಲಿ 2ನೇ ಅತೀ ದೊಡ್ಡ ಮತದಾರರಾಗಿ ಕುರುಬ ಸಮುದಾಯದವರಿದ್ದಾರೆ. ಹೀಗಾಗಿ ಈ ಬಾರಿಯ ಬೆಳಗಾವಿ ಲೋಕಸಭೆಯ ಟಿಕೆಟ್ ಕುರುಬ ಸಮುದಾಯದವರಿಗೆ ನೀಡಬೇಕು ಎಂದು ಕುರುಬ ಸಮುದಾಯದ ಮುಖಂಡ ರಾಜೇಂದ್ರ ಸಣ್ಣಕ್ಕಿ ಒತ್ತಾಯಿಸಿದ್ದಾರೆ. ಬೆಳಗಾವಿಯಲ್ಲಿ ಕುರುಬ ಸಮುದಾಯವನ್ನು ಎಸ್ಟಿಗೆ ಸೇರಿಸುವ ಸಂಬಂಧ ನಡೆದ ಸಭೆಯಲ್ಲಿ ಭಾಗವಹಿಸಲು ಆಗಮಿಸಿದ್ದ ವೇಳೆ ಮಾಧ್ಯಮಗಳ ಜೊತೆ ಅವರು ಮಾತನಾಡಿದರು. ಸಣ್ಣಕ್ಕಿ ಬೆಳಗಾವಿ ಲೋಕಸಭೆ ಕ್ಷೇತ್ರದಲ್ಲಿ ನಮ್ಮ ಸಮಾಜದ ಎರಡೂವರೆ ಲಕ್ಷ ಮತದಾರರಿದ್ದಾರೆ. …

Read More »